ಮೈಸೂರು: ಮಯೂರ ಕನ್ನಡ ಯುವಕರ ಬಳಗದ ವತಿಯಿಂದ ಚಾಮರಾಜ ಜೋಡಿ ರಸ್ತೆಯಲ್ಲಿರುವ ವರನಟ ಡಾಕ್ಟರ್ ರಾಜಕುಮಾರ್ ಪ್ರತಿಮೆಗೆ ವಿಶೇಷ ಪೂಜೆ ಸಲ್ಲಿಸಲಾಯಿತು.
ನಂತರ ಸಿಹಿ ವಿತರಿಸಿ ಡಾಕ್ಟರ್ ರಾಜ್ ಕುಮಾರ್ ಹುಟ್ಟು ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಮಯೂರ ಕನ್ನಡ ಯುವಕರ ಬಳಗದ ಅಧ್ಯಕ್ಷ ಜಿ ರಾಘವೇಂದ್ರ,ಕಿಶೋರ್ ಕುಮಾರ್, ಕೆಪಿಸಿಸಿ ಸದಸ್ಯರಾದ ನಜರ್ಬಾದ್ ನಟರಾಜ್,ಕರ್ನಾಟಕ ಹಿತರಕ್ಷಣಾ ವೇದಿಕೆ ಅಧ್ಯಕ್ಷರಾದ ವಿನಯ್ ಕುಮಾರ್, ಎಸ್ ಎನ್ ರಾಜೇಶ್,ಮಂಜುನಾಥ್ ನಾಯಕ್, ಲಕ್ಷ್ಮಣ್, ಸನ್ನು, ಸಂತೋಷ್, ಹರೀಶ್ ನಾಯ್ಡು, ಕಿರಣ್, ಶೇಖರ್, ಚಂದ್ರು, ನಾಗರಾಜು ಮತ್ತಿತರರು ಹಾಜರಿದ್ದರು.
