ಮೈಸೂರು: ಬೆಳಕಿನ ಹಬ್ಬ ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಮೈಸೂರಿನಿಂದ ಜೈಪುರಕ್ಕೆ ಹೆಚ್ಚುವರಿ ರೈಲು ಸಂಚಾರಕ್ಕೆ ಅವಕಾಶ ಮಾಡಿಕೊಡಬೇಕೆಂಬ ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಮನವಿಗೆ ರೈಲ್ವೆ ಇಲಾಖೆ
ಸ್ಪಂದಿಸಿದೆ
ದೀಪಾವಳಿ ಹಬ್ಬದ ಸಮಯದಲ್ಲಿ ಜನದಟ್ಟಣೆಯನ್ನು ತಪ್ಪಿಸಲು ಹಾಗೂ ಮೈಸೂರಿನಿಂದ ಜೈಪುರಕ್ಕೆ ತೆರಳುವವರ ಸಂಖ್ಯೆ ಹೆಚ್ಚಾಗಿರುವುದರಿಂದ ತಾತ್ಕಾಲಿಕವಾಗಿ ಹೊಸ ರೈಲು ಪರಿಚಯಿಸಲು ರೈಲ್ವೆ ಇಲಾಖೆ ಕ್ರಮ ಕೈಗೊಂಡಿದೆ.
ಈ ಕುರಿತು ಮಾಧ್ಯಮ ಪ್ರಕಟಣೆಯಲ್ಲಿ ಸಂಸದ ಯದುವೀರ್, ಮೈಸೂರಿನಿಂದ ರಾಜಸ್ತಾನದ ಜೈಪುರಕ್ಕೆ ತೆರಳುವವರ ಸಂಖ್ಯೆ ಹೆಚ್ಚಾಗಿದೆ. ಜನದಟ್ಟಣೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಹೆಚ್ಚುವರಿ ರೈಲು ಸಂಚಾರಕ್ಕೆ ಅವಕಾಶ ಕಲ್ಪಿಸಬೇಕೆಂದು ಮನವಿ ಸಲ್ಲಿಸಲಾಗಿತ್ತು. ಇದಕ್ಕೆ ಸ್ಪಂದಿಸಿರುವ ರೈಲ್ವೆ ಇಲಾಖೆಯು ಹಬ್ಬದ ಸಂದರ್ಭದಲ್ಲಿ ತಾತ್ಕಾಲಿಕವಾಗಿ ಹೆಚ್ಚುವರಿ ರೈಲು ಸಂಚಾರಕ್ಕೆ ಕ್ರಮ ಕೈಗೊಂಡಿದೆ ಎಂದು ಹೇಳಿದ್ದಾರೆ.
ರಾಜಸ್ತಾನದ ಜನರು ಹಾಗೂ ಇತರರು ಈ ಸೌಲಭ್ಯವನ್ನು ಸದುಪಯೋಗ ಪಡಿಸಿಕೊಳ್ಳಬಹುದು ಎಂದು ಯದುವೀರ್ ಒಡೆಯರ್ ಮನವಿ ಮಾಡಿದ್ದಾರೆ.