ಮೈಸೂರಿಗೆ ಆಗಮಿಸಿದ ಸ್ಪೀಕರ್ ಯು ಟಿ ಖಾದರ್ ಅವರಿಗೆ ಆತ್ಮೀಯ ಸ್ವಾಗತ ಕೋರಿದ ಕಾಂಗ್ರೆಸ್ ನಾಯಕರು

Spread the love

ಮೈಸೂರು: ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಮೈಸೂರಿಗೆ ಆಗಮಿಸಿದ್ದ ವಿಧಾನ ಸಭಾಧ್ಯಕ್ಷ ಯು ಟಿ ಖಾದರ್ ಅವರನ್ನು ಸ್ಥಳೀಯ ಕಾಂಗ್ರೆಸ್ ಮುಖಂಡರು ಆತ್ಮೀಯವಾಗಿ ಸ್ವಾಗತಿಸಿ ಬರಮಾಡಿಕೊಂಡರು.

ಗುರುವಾರ ಜಿಲ್ಲಾ ಪತ್ರಕರ್ತರ ಭವನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಜೀವಮಾನದ ಸಾಧನೆಯ ಕುರಿತಾದ ಭಾಗ್ಯವಿಧಾತ ಪುಸ್ತಕ ಬಿಡುಗಡೆ ಸಮಾರಂಭ ಹಮ್ಮಿಕೊಳ್ಳಲಾಗಿತ್ತು.

ಈ ಪುಸ್ತಕ ಬಿಡುಗಡೆ ಸಮಾರಂಭಕ್ಕೆ ಯು ಟಿ ಖಾದರ್ ಆಗಮಿಸಿದ್ದರು.ಅವರನ್ನು ಚಾಮುಂಡೇಶ್ವರಿ ಕ್ಷೇತ್ರದ ಕೆಪಿಸಿಸಿ ಸದಸ್ಯ ನಜರ್ ಬಾದ್ ನಟರಾಜ್, ಮೈಸೂರು ಜಿಲ್ಲಾ ಗ್ರಾಮಂತರ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಾ. ವಿಜಯಕುಮಾರ್, ಹಿಂದುಳಿದ ವರ್ಗದ ಅಧ್ಯಕ್ಷ ಎನ್ ಆರ್ ನಾಗೇಶ್, ಉಪಾಧ್ಯಕ್ಷ ರಮೇಶ್ ರಾಮಪ್ಪ ಆತ್ಮೀಯವಾಗಿ ಸ್ವಾಗತಿಸಿದರು.