ಮೈಸೂರು: ಪ್ರತಿಭಾ ಪುರಸ್ಕಾರಗಳು ವಿದ್ಯಾರ್ಥಿಗಳ ಜವಾಬ್ದಾರಿ ಯನ್ನು ಮತ್ತಷ್ಟು ಹೆಚ್ಚಿಸುತ್ತವೆ ಮತ್ತು ಇತರೆ ವಿದ್ಯಾರ್ಥಿಗಳಿಗೆ ಪ್ರೇರಣೆಯಾಗುತ್ತದೆ ಎಂದು ಶ್ರೀ ರಾಮಕೃಷ್ಣ ವಿದ್ಯಾ ಶಾಲೆಯ ನಿವೃತ್ತ ಪ್ರಾಂಶುಪಾಲರಾದ ಎಸ್ ಬಾಲಾಜಿ ತಿಳಿಸಿದರು.
ಶ್ರೀ ಕೃಷ್ಣ ಮಿತ್ರ ಮಂಡಳಿ ಮತ್ತು ಶ್ರೀ ಕೃಷ್ಣ ಟ್ರಸ್ಟ್ ವತಿಯಿಂದ ಸರಸ್ವತಿಪುರಂನಲ್ಲಿರುವ ಶ್ರೀ ಕೃಷ್ಣಧಾಮ ಆವರಣದಲ್ಲಿ ಹಮ್ಮಿಕೊಂಡಿದ್ದ ಎಸ್ ಎಸ್ ಎಲ್ ಸಿ ಮತ್ತು ಪಿಯುಸಿಯಲ್ಲಿ ಅತ್ಯಧಿಕ ಅಂಕಗಳನ್ನು ಗಳಿಸಿರುವ 100 ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಪ್ರದಾನ ಸಮಾರಂಭದಲ್ಲಿ ವಿದ್ಯಾರ್ಥಿಗಳನ್ನ ಸನ್ಮಾನಿಸಿ ಪ್ರತಿಭಾ ಪುರಸ್ಕಾರ ವಿತರಿಸಿ ಅವರು ಮಾತನಾಡಿದರು.
ಪ್ರತಿಯೊಂದು ಮಕ್ಕಳಲ್ಲೂ ಒಂದೊಂದು ಪ್ರತಿಭೆ ಇರುತ್ತದೆ. ಮಕ್ಕಳಲ್ಲಿರುವ ಪ್ರತಿಭೆಯನ್ನು ಪೋಷಕರು ಹಾಗೂ ಶಿಕ್ಷಕರು ಗುರುತಿಸಿ ಪ್ರೋತ್ಸಾಹಿಸಬೇಕು. ಆಗ ಇನ್ನಷ್ಟು ಸಾಧನೆ ಮಾಡಲು ಸಹಕಾರಿಯಾಗಲಿದೆ. ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳ ಜೀವನದ ಪ್ರಮುಖ ತಿರುವಿನ ಘಟ್ಟ. ಇಲ್ಲಿ ಯಶಸ್ಸು ಸಾಧಿಸಿದರೆ ಮುಂದೆ ಸುಲಭವಾಗಿ ಗುರಿ ಮುಟ್ಟಬಹುದು ಎಂದು ತಿಳಿಹೇಳಿದರು.
ಶ್ರೀ ಕೃಷ್ಣ ಮಿತ್ರ ಮಂಡಳಿ ಅಧ್ಯಕ್ಷರಾದ ಶ್ರೀವತ್ಸರಾವ್,ಶ್ರೀ ಕೃಷ್ಣ ಟ್ರಸ್ಟ್ ಉಪಾಧ್ಯಕ್ಷರಾದ ರವಿ ಶಾಸ್ತ್ರಿ ಮತ್ತು ಪಿ ಎಸ್ ಶೇಖರ್, ಶ್ರೀಕೃಷ್ಣ ಮಿತ್ರ ಮಂಡಳಿಯ ಉಪಾಧ್ಯಕ್ಷರಾದ ವಾಸುದೇವರಾವ್,ಗೌರವ ಕಾರ್ಯದರ್ಶಿ ರಾಘವೇಂದ್ರ ರಾವ್,ಶ್ರೀ ಕೃಷ್ಣ ಟ್ರಸ್ಟ್ ಗೌರವ ಕಾರ್ಯದರ್ಶಿ ಕೆ ವಿ ಶ್ರೀಧರ್,ಖಜಾಂಚಿ ಸುರೇಶ್ ರಾವ್ ಮತ್ತಿತರರು ಹಾಜರಿದ್ದರು.
