ರಕ್ತದಾನಿ ಮಂಜು ಅವರಿಗೆ ವೃಕ್ಷ ಮಾತೆ ಸಾಲು ಮರದ ತಿಮ್ಮಕ್ಕ ರಾಜ್ಯ ಪ್ರಶಸ್ತಿ

Spread the love

ಮೈಸೂರು: ಸಂಘಟನೆ ಮತ್ತು ಸಮಾಜ ಸೇವಾ ಕ್ಷೇತ್ರದಲ್ಲಿ ಅತ್ಯುತ್ತಮ ಸಾಧನೆ ಮಾಡಿರುವುದನ್ನು ಪರಿಗಣಿಸಿ ರಕ್ತದಾನಿ ಮಂಜು ಅವರಿಗೆ ಕಾವ್ಯಶ್ರೀ ಚಾರಿಟಬಲ್ ಟ್ರಸ್ಟ್ ಬೆಂಗಳೂರು ವತಿಯಿಂದ ವೃಕ್ಷ ಮಾತೆ ಸಾಲು ಮರದ ತಿಮ್ಮಕ್ಕ ರಾಜ್ಯ ಪ್ರಶಸ್ತಿ ನೀಡಲಾಗುತ್ತಿದೆ.

ಕಾವ್ಯಶ್ರೀ ಚಾರಿಟಬಲ್ ಟ್ರಸ್ಟ್ ವತಿಯಿಂದ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಸಹಕಾರದಲ್ಲಿ ಮೈಸೂರಿನಲ್ಲಿ ಅಕ್ಟೋಬರ್ 19 ರಂದು ಮೈಸೂರಿನ ವಿಜಯನಗರದಲ್ಲಿರುವ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಕನ್ನಡ ಭವನ ಸಭಾಂಗಣದಲ್ಲಿ ನಡೆಯಲಿರುವ ದ್ವಿತೀಯ ಕನ್ನಡ ಸಾಹಿತ್ಯ ಸಮ್ಮೇಳನ ಕಾರ್ಯ ಕ್ರಮದಲ್ಲಿ ವೃಕ್ಷ ಮಾತೆ ಸಾಲು ಮರದ ತಿಮ್ಮಕ್ಕ ರಾಜ್ಯ ಪ್ರಶಸ್ತಿಯನ್ನು ರಕ್ತದಾನಿ ಮಂಜು ಅವರಿಗೆ ನೀಡಿ ಗೌರವಿಸಲಾಗುತ್ತದೆ.