ಮೈಸೂರು: ಜಿಲ್ಲಾ ಮಟ್ಟದ ಸ್ಪರ್ಧೆಯಲ್ಲಿ ನಂಜನಗೂಡು ತಾಲೂಕಿನ ಜೆ.ಎಸ್.ಎಸ್ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ( ಕಲಾ) ವಿದ್ಯಾರ್ಥಿನಿ ಶಾಲಿನಿ ರಾಜ್ಯಮಟ್ಟದ ಭಾಷಣ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಧಾರವಾಡದ ಬಾಲ ವಿಕಾಸ ಅಕಾಡಮಿ ವತಿಯಿಂದ ರಾಜ್ಯಮಟ್ಟದ ಜವಹಾರ್ ಲಾಲ್ ನೆಹರು ಚಿಂತನೆಗಳು ಎಂಬ ವಿಷಯವಾಗಿ ಜಿಲ್ಲಾ ಮಟ್ಟದ ಭಾಷಣ ಸ್ಪರ್ಧೆಯನ್ನು ಮೈಸೂರಿನ ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ವತಿಯಿಂದ ಬಾಲಕಿಯರ ಸರ್ಕಾರಿ ಪದವಿ ಕಾಲೇಜಿನಲ್ಲಿ ಏರ್ಪಡಿಸಲಾಗಿತ್ತು.
ತಾಲೂಕು ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದ ವಿಜೇತರು ಈ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು.
ಈ ಜಿಲ್ಲಾ ಮಟ್ಟದ ಸ್ಪರ್ಧೆಯಲ್ಲಿ ನಂಜನಗೂಡು ತಾಲೂಕಿನ ಜೆ.ಎಸ್.ಎಸ್ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ( ಕಲಾ) ವಿದ್ಯಾರ್ಥಿನಿ ಶಾಲಿನಿ ಅವರು ರಾಜ್ಯಮಟ್ಟದ ಭಾಷಣ ಸ್ಪರ್ಧೆಗೆ ಆಯ್ಕೆಯಾಗಿದ್ದು ಕಾಲೇಜಿಗೆ ಕೀರ್ತಿ ತಂದಿದ್ದಾರೆ.
