ರೇವ್ ಪಾರ್ಟಿ: ಇನ್ಸ್ ಪೆಕ್ಟರ್ ಅಮಾನತು

ಮೈಸೂರು: ಮೈಸೂರು ಹೊರವಲಯದಲ್ಲಿ ಅನುಮತಿ ಇಲ್ಲದೆ ನಡೆಯುತ್ತಿದ್ದ ರೇವ್ ಪಾರ್ಟಿ ಮೇಲೆ ದಾಳಿ ಮಾಡಿದ್ದ ಸಬ್ ಇನ್ಸ್ಪೆಕ್ಟರ್ ಅಮಾನತುಗೊಂಡಿದ್ದಾರೆ.

ದಾಳಿ ವೇಳೆ ಸಬ್ ಇನ್ಸ್ಪೆಕ್ಟರ್ ಮಂಜುನಾಥ್ ನಾಯಕ್ ಮೇಲೆ ಹಲ್ಲೆ ನಡೆಸಿ ಕೆಲ ಯುವಕರು ಪರಾರಿಯಾಗಿದ್ದರು.

ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಇನ್ಸ್ಪ್ಪೆಕ್ಟರ್ ಮುಂಜುನಾಥ್ ನಾಯಕ್ ಅವರನ್ನು ಕರ್ತವ್ಯ ಲೋಪ ಆರೋಪದ ಮೇಲೆ ಅಮಾನತು ಮಾಡಿ ಎಸ್ಪಿ ವಿಷ್ಣುವರ್ಧನ್ ಆದೇಶ ಹೊರಡಿಸಿದ್ದಾರೆ.

ಮೈಸೂರಿನ ಮೀನಾಕ್ಷಿಪುರ ಸಮೀಪ ಕೆ ಆರ್ ಎಸ್ ಹಿನ್ನೀರಿನಲ್ಲಿ ಶನಿವಾರ ರಾತ್ರಿ ರೇವ್ ಪಾರ್ಟಿ ನಡೆದಿತ್ತು.ಎಎಸ್ಪಿ ನಾಗೇಂದ್ರ ನೇತೃತ್ವದಲ್ಲಿ ದಾಳಿ ನಡೆಸಿ ಯುವಕ ಯುವತಿಯರನ್ನ ವಶಕ್ಕೆ ಪಡೆಯಲಾಗಿತ್ತು.

ಒಟ್ಟು 64 ಜನರ ಮೇಲೆ ಎಫ್ಐಆರ್ ದಾಖಲಾಗಿದ್ದು, ಐದು ಆಯೋಜಕರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ, ಉಳಿದವರಿಗೆ ನೋಟಿಸ್ ನೀಡಲಾಗಿದೆ.