ಬೆಂಗಳೂರು: ನೂತನ ಮುಖ್ಯ ಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ರಾಜ್ಯ ಸರ್ಕಾರದ ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ಡಾ ಯತೀಂದ್ರ ಸಿದ್ದರಾಮಯ್ಯ ಅವರನ್ನು ಕುರುಬ ಸಮುದಾಯದ ಮುಖಂಡರು ಅಭಿನಂದಿಸಿದರು.
ಡಾ ಯತೀಂದ್ರ ಸಿದ್ದರಾಮಯ್ಯ ಅವರನ್ನು ಬೆಂಗಳೂರಿನಲ್ಲಿ ಕರ್ನಾಟಕ ಪ್ರದೇಶ ಕುರುಬರ ಸಂಘದ ಮಾಜಿ ಅಧ್ಯಕ್ಷರಾದ ಬಿ ಸುಬ್ರಹ್ಮಣ್ಯ ಅವರು ಭೇಟಿ ಮಾಡಿ ಆತ್ಮೀಯವಾಗಿ ಅಭಿನಂದಿಸಿದರು.
ಈ ವೇಳೆ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ಬೀರಿಹುಂಡಿ ಬಸವಣ್ಣ, ಎಚ್ ಡಿ ಕೋಟೆ ತಾಲೂಕು ಕುರುಬರ ಸಂಘದ ಅಧ್ಯಕ್ಷರಾದ ಮೊಳೆಯೂರು ಆನಂದ್ ಮತ್ತಿ ತರರು ಹಾಜರಿದ್ದರು.
