ಮೈಸೂರು: ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥರ 55ನೇ ವರ್ಧಂತ್ಯುತ್ಸವ ಅಂಗವಾಗಿ ಮೈಸೂರಿನಲ್ಲಿ ಭಕ್ತರು ಸಿಹಿ ವಿತರಿಸಿದರು.
ನಗರದ ನಾರಾಯಣ ಶಾಸ್ತ್ರಿ ರಸ್ತೆಯಲ್ಲಿರುವ ಸುಬ್ಬರಾಯನ ಕೆರೆಯ ರಾಘವೇಂದ್ರ ಸ್ವಾಮಿ ಮಠದಲ್ಲಿ ಭಕ್ತಾದಿಗಳಿಗೆ ಸಿಹಿ ವಿತರಿಸಲಾಯಿತು.
ಈ ಸಂದರ್ಭದಲ್ಲಿ ಕೆಪಿಸಿಸಿ ಸದಸ್ಯರಾದ ನಜರ್ಬಾದ್ ನಟರಾಜ್, ರಾಮಚಂದ್ರ, ಶ್ರೀ ಕನಕ ಪತ್ತಿನ ಸಹಕಾರಿ ಸಂಘದ ನಿರ್ದೇಶಕ ರವಿಚಂದ್ರ, ಎಸ್ ಎನ್ ರಾಜೇಶ್, ರಾಕೇಶ್, ಹರೀಶ್ ನಾಯ್ಡು, ದುರ್ಗಾ ಪ್ರಸಾದ್, ಲೋಕೇಶ್ ಮತ್ತಿತರರು ಹಾಜರಿದ್ದರು.
