ಮೈಸೂರು: ಕರ್ನಾಟಕದ ನೂತನ ರಾಜ್ಯಪಾಲರಾದ ಡಾ. ಸುಧಾ ಯಾದವ್ ಅವರು ರಾಜ್ಯಪಾಲರಾಗಿ ಅಧಿಕಾರ ವಹಿಸಿಕೊಂಡ ಬಳಿಕ ಮೊದಲ ಬಾರಿಗೆ ಚಾಮುಂಡಿ ಬೆಟ್ಟದ ಪವಿತ್ರ ಶ್ರೀ ಚಾಮುಂಡೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿದರು.
ಈ ವೇಳೆ ರಾಜ್ಯಪಾಲರು ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ, ನಾಡ ಅಧಿದೇವತೆ ಚಾಮುಂಡೇಶ್ವರಿ ದೇವಿಯ ಆಶೀರ್ವಾದ ಪಡೆದರು.
ದೇವಸ್ಥಾನದ ಪ್ರಧಾನ ಅರ್ಚಕರಾದ ಶಶಿಶೇಖರ ದೀಕ್ಷಿತ್ ಅವರು ಸುಧಾ ಯಾದವ್ ಅವರಿಗೆ ತೀರ್ಥ ಪ್ರಸಾದ ವಿತರಿಸಿ ಆಶೀರ್ವದಿಸಿ ದರು.
