ಬಲೂಚಿಸ್ತಾನ್: ಪಾಕಿಸ್ತಾನದ ಬಲೂಚಿಸ್ತಾನ್ ಪ್ರಾಂತ್ಯದ ಕ್ವೆಟ್ಟಾ ರೈಲ್ವೆ ನಿಲ್ದಾಣದಲ್ಲಿ ಸಂಭವಿಸಿದ ಭೀಕರ ಆತ್ಮಾಹುತಿ ಬಾಂಬ್ ಸ್ಫೋಟದಲ್ಲಿ ಸುಮಾರು 24 ಮಂದಿ ಮೃತಪಟ್ಟಿದ್ದು,100ಕ್ಕೂ ಹೆಚ್ಚು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಚಮನ್ ಫಾಟಕ್ ಸಮೀಪ ಕ್ಯಾಂಟ್ ಕಡೆಗೆ ತೆರಳುತ್ತಿದ್ದ ಪ್ರಯಾಣಿಕರ ರೈಲನ್ನು ಗುರಿಯಾಗಿಸಿಕೊಂಡು ವಾಹನದರಿಂದ ಆತ್ಮಾಹುತಿ ದಾಳಿ ನಡೆಸಲಾಗಿದೆ.
ಸ್ಫೋಟದ ಗೊಂಡ ಕೂಡಲೇ ರೈಲು ಬೋಗಿಗಳು ಹಳಿ ತಪ್ಪಿ, ಭಾರೀ ಬೆಂಕಿ ಕಾಣಿಸಿದೆ,ಜತೆಗೆ ದಟ್ಟ ಹೊಗೆ ಆವರಿಸಿಕೊಂಡಿದ್ದು, ರಕ್ಷಣಾ ಕಾರ್ಯಕ್ಕೆ ತಡೆಯಾಯಿತು.
ಆಂಬುಲೆನ್ಸ್ಗಳು ಮತ್ತು ಭದ್ರತಾ ಪಡೆಗಳು ತಕ್ಷಣ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯದಲ್ಲಿ ತೊಡಗಿದವು. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗಳಿಗೆ ದಾಖಲಿಸಲಾಗಿದ್ದು, ಹಲವರ ಸ್ಥಿತಿ ಗಂಭೀರವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಬಲೂಚಿಸ್ತಾನದಲ್ಲಿ ಪಾಕಿಸ್ತಾನ ಭದ್ರತಾ ಪಡೆಗಳಿಂದ ಭಾರೀ ನಷ್ಟ ಅನುಭವಿಸಿದ ನಂತರ ಬಿಎಲ್ಎ ಉಗ್ರರು ಈ ಕೃತ್ಯ ಎಸಗಿದ್ದಾರೆ ಎಂದು ಹೇಳಲಾಗಿದೆ.
