ಮೈಸೂರು: ಮೈಸೂರಿನ ಕುಕ್ಕರಹಳ್ಳಿ ಕೆರೆಯಲ್ಲಿ ಅರಿವು ಸಂಸ್ಥೆ ಹಾಗೂ ಸುಯೋಗ ಆಸ್ಪತ್ರೆ ಸಹಯೋಗದಲ್ಲಿ ವಿಶ್ವ ಆರೋಗ್ಯ ದಿನದ ಅಂಗವಾಗಿ ಆರೋಗ್ಯಕ್ಕೆ ಜೊತೆಗೂಡಿ ವಿಜ್ಞಾನದೊಂದಿಗೆ ನಿಲ್ಲಿ ಘೋಷವಾಕ್ಯದೊಂದಿಗೆ ವಾಯುಹಾರಿಗಳಿಗೆ ಜಾಗೃತಿ ಮೂಡಿಸಲಾಯಿತು.
ನಂತರ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಸ್ವತಹ ತಾವೇ ಆರೋಗ್ಯ ತಪಾಸಣೆ ಮಾಡಿಸುವ ಮೂಲಕ ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ನಾರಾಯಣಗೌಡ ಉದ್ಘಾಟಿಸಿದರು.
ಈ ವೇಳೆ ಮಾತನಾಡಿದ ಅವರು,
ಶ್ರಮದಿಂದ ಬದುಕು ಕಟ್ಟಿಕೊಂಡಿರುವವರು ಸಮಾಜದ ಬಗ್ಗೆ ಕಾಳಜಿ ಹೊಂದಿದ್ದು, ಇಂತಹ ಉಚಿತ ಆರೋಗ್ಯ ಕಾರ್ಯಕ್ರಮಗಳನ್ನು ಆಯೋಜಿಸುವುದು ಅವರ ಸಾಮಾಜಿಕ ಬದ್ಧತೆಯನ್ನು ಸೂಚಿಸುತ್ತದೆ ಎಂದು ಹೇಳಿದರು.
ಆರೋಗ್ಯವಾಗಿದ್ದರೆ ಸುಖವಾಗಿ ಬಾಳಬಹುದು,ಇಲ್ಲವಾದರೆ ದುಡಿದ ಹಣವೆಲ್ಲ ಆಸ್ಪತ್ರೆಗೆ ಖರ್ಚು ಮಾಡಬೇಕಾಗುತ್ತದೆ ಆದ್ದರಿಂದ ರೋಗದ ಲಕ್ಷಣ ಕಾಣುವ ಮುನ್ನವೇ ಆರೋಗ್ಯ ತಪಾಸಣೆ ಮಾಡಿಸಿಕೊಂಡು ವೈದ್ಯರು ನೀಡುವ ಸಲಹೆಯನ್ನು ಪಾಲಿಸಬೇಕು ಎಂದು ನಾರಾಯಣಗೌಡ ತಿಳಿಹೇಳಿದರು.
ವೈದ್ಯರಾದ ಡಾ ಎಸ್ ಪಿ ಯೋಗಣ್ಣ ಅವರು ಮಾತನಾಡಿ, ಜಾಗತಿಕವಾಗಿ ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸಲು ಪ್ರತಿವರ್ಷ ಏಪ್ರಿಲ್ 7 ರಂದು ವಿಶ್ವ ಆರೋಗ್ಯ ದಿನ ವನ್ನು ವಿಶ್ವ ಆರೋಗ್ಯ ಸಂಸ್ಥೆಯಿಂದ ಆಚರಿಸಲಾಗುತ್ತದೆ ಎಂದು ಮಾಹುತಿ ನೀಡಿದರು.
1948ರಲ್ಲಿ ನಡೆದ ಮೊದಲ ವಿಶ್ವ ಆರೋಗ್ಯ ಸಭೆಯಲ್ಲಿ ಏಪ್ರಿಲ್ 7ನ್ನು ವಿಶ್ವ ಆರೋಗ್ಯ ದಿನವಾಗಿ ಆಚರಿಸಲು ನಿರ್ಧರಿಸಲಾಯಿತು. 1950ರಿಂದ ವಿಶ್ವ ಆರೋಗ್ಯ ದಿನ ಆಚರಿಸಲಾಗುತ್ತಿದೆ ಎಂದು ವಿವರಿಸಿದರು.
ಸದೃಢ ಕರ್ನಾಟಕವನ್ನು ಕಟ್ಟುವ ಹಾದಿಯಲ್ಲಿ ಪ್ರತಿಯೊಬ್ಬ ನಾಗರಿಕನ ಆರೋಗ್ಯ ಕಾಳಜಿಯೂ ಮುಖ್ಯ,
ರೋಗ ಬಂದ ಮೇಲೆ ಚಿಕಿತ್ಸೆ ಪಡೆಯುವ ಬದಲು, ರೋಗ ಬರದಂತೆ ಮುನ್ನೆಚ್ಚರಿಕೆ ವಹಿಸುವ ಸಮಾಜ ನಮ್ಮದಾಗಲಿ. ವಿಜ್ಞಾನದ ಹಾದಿಯಲ್ಲಿ ನಡೆಯುತ್ತಾ, ಆರೋಗ್ಯವಂತ ಸಮಾಜ ನಿರ್ಮಿಸಲು ನಾವೆಲ್ಲರೂ ಕೈಜೋಡಿಸೋಣ ಎಂದು ಡಾ.ಯೋಗಣ್ಣ ಕರೆ ನೀಡಿದರು.
200ಕ್ಕೂ ಹೆಚ್ಚು ವಾಯು ವಿಹಾರಿಗಳು ಆರೋಗ್ಯ ತಪಾಸಣೆಯನ್ನು ಸದ್ಬಳಕೆ ಮಾಡಿಕೊಂಡರು.
ನಗರ ಪಾಲಿಕೆ ಮಾಜಿ ಸದಸ್ಯರಾದ ಪ್ರಶಾಂತ್ ಗೌಡ,ಕೆ ಎಮ್ ಪಿ ಕೆ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷರಾದ ವಿಕ್ರಂ ಅಯ್ಯಂಗಾರ್,ಜಿ ರಾಘವೇಂದ್ರ ,ನಿರೂಪಕ ಅಜಯ್ ಶಾಸ್ತ್ರಿ ,ಅರಿವು ಸಂಸ್ಥೆ ಅಧ್ಯಕ್ಷರಾದ ಶ್ರೀಕಾಂತ ಕಶ್ಯಪ್,ಶೇಖರ್,ಯೋಗೇಶ್ ನಾಯ್ಡು, ಪ್ರಶಾಂತ್,ಅಪೂರ್ವ ಸುರೇಶ್ ,ದೂರರಾಜಣ್ಣ, ಜತ್ತಿ ಪ್ರಸಾದ್,
ಮತ್ತಿತರರು ಹಾಜರಿದ್ದರು.
