ಮೈಸೂರು: ಸ್ವಾಮಿ ವಿವೇಕಾನಂದರು ಜಗತ್ತೇ ಒಂದು ಕುಟುಂಬ ಎಂಬ ಸಂದೇಶವನ್ನು ನೀಡಿ ವಿಶ್ವ ಶಾಂತಿಯ ಕಲ್ಪನೆಯನ್ನು ನೀಡಿದ ಮಹಾನ್ ವ್ಯಕ್ತಿ ಎಂದು ಜೆಡಿಎಸ್ ಕಾರ್ಯಾಧ್ಯಕ್ಷ ಎಸ್ ಪ್ರಕಾಶ್ ಪ್ರಿಯದರ್ಶನ್ ಹೇಳಿದರು.
ಸರಸ್ವತಿಪುರಂನಲ್ಲಿರುವ ಮಹಾಬೋಧಿ ವಿದ್ಯಾರ್ಥಿ ನಿಲಯದ
ವಿದ್ಯಾರ್ಥಿಗಳಿಗೆ ಎಸ್ ಪ್ರಕಾಶ್ ಪಿಯದರ್ಶನ್ ಸ್ನೇಹ ಬಳಗದ ವತಿಯಿಂದ ಹಣ್ಣು ಹಂಪಲು ಹಾಗೂ ದಿನಸಿ ಸಾಮಗ್ರಿಗಳನ್ನು ವಿತರಿಸಿ
ಸ್ವಾಮಿ ವಿವೇಕಾನಂದ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಿದ ವೇಳೆ ಅವರು ಮಾತನಾಡಿದರು.

ಸ್ವಾಮಿ ವಿವೇಕಾನಂದರು ಭಾರತ ದೇಶದ ಯುವ ಜನಾಂಗಕ್ಕೆ ಮತ್ತು ದೇಶದ ಜನರಿಗೆ ಪ್ರೇರಣಾದಾಯಕ ವ್ಯಕ್ತಿ. ಕೇವಲ 39 ವರ್ಷ ಬದುಕಿದ ವಿವೇಕಾನಂದರು ಭಾರತದ ಎಲ್ಲಾ ಕ್ಷೇತ್ರಗಳಿಗೂ ಅನ್ವಯ ಆಗುವ ರೀತಿಯ ಸಂದೇಶವನ್ನ ನೀಡಿದ್ದಾರೆ
ಎಂದು ಹೇಳಿದರು.

ಈ ಸಂದರ್ಭದಲ್ಲಿ ಮಹಾಬೋಧಿ ನಿಲಯ ಪಾಲಕ ವಿವೇಕ್, ಪತ್ರಿಕಾ ವಿತರಕರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಹೋಮದೇವ್ , ಸುಬ್ರಮಣಿ,ವೀರಭದ್ರ ಸ್ವಾಮಿ, ಮಹದೇವ್,ಮಹೇಶ್, ಎಸ್ ಪಿ ಅಕ್ಷಯ್ ಪ್ರಿಯಾದರ್ಶನ್, ಹರ್ಷಿತ್ ಎಸ್ ನಾಗೇಶ್ ಮತ್ತಿತರರು ಹಾಜರಿದ್ದರು.