ಮೈಸೂರು: ಕಾರು ಮತ್ತು ಬೈಕ್ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಟಿ ನರಸೀಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಮೈಸೂರು-ಟಿ ನರಸೀಪುರ ಮುಖ್ಯ ರಸ್ತೆ, ಕೆಂಪಯ್ಯನಹುಂಡಿ ಬಳಿ ಈ ಅಪಘಾತ ನಡೆದಿದೆ.
ಮೂರ್ತಿ (55)ಎಂಬುವರು ಮೃತಪಟ್ಟ ದುರ್ದೈವಿ.ಬೈಕ್ ಹಿಂಬದಿ ಕುಳಿತಿದ್ದ ಯುವತಿ ಮಂಜುಳಾ ಎಂಬವರು ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಈ ಸಂಬಂಧ ಟಿ.ನರಸೀಪುರ ಪೊಲೀಸರು ಪ್ರಕರಣ ದಾಖಲಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.
