ಡಿಕೆಶಿ ದುರ್ವತ್ರನೆಯಿಂದ ಬೆಂಗಳೂರು ಐಟಿ ಸಿಟಿ ಪಟ್ಟ ಕಳೆದುಕೊಳ್ಳಲಿದೆ:ಆಪ್ ಆರೋಪ

ಬೆಂಗಳೂರು: ಡಿಕೆಶಿ ದುರ್ವತ್ರನೆಯಿಂದ ಬೆಂಗಳೂರು ನಗರ ಐಟಿ ಸಿಟಿ ಪಟ್ಟ ಕಳೆದುಕೊಳ್ಳಲಿದೆ ಎಂದು ‌ಆಮ್ ಆದ್ಮಿ ಪಕ್ಷ ಆರೋಪಿಸಿದೆ.

ಬಯೋಕಾನ್ ಮುಖ್ಯಸ್ಥೆ ಕಿರಣ್ ಮಜುಂದಾರ್ ಬಗ್ಗೆ ಡಿ.ಕೆ. ಶಿವಕುಮಾರ್ ವಾಗ್ದಾಳಿಯ ಬಗ್ಗೆ ಆಮ್ ಆದ್ಮ ಪಕ್ಷದ ಕಾರ್ಯಾಧ್ಯಕ್ಷ ಸೀತಾರಾಮ್ ಗುಂಡಪ್ಪ ಮಾತನಾಡಿದ್ದು, ಬೆಂಗಳೂರು ಸಿಲಿಕಾನ್ ನಗರ ವೆಂದು ಖ್ಯಾತಿಗೊಳ್ಳಲು ಇಲ್ಲಿನ ಐಟಿ ಉದ್ಯಮಿಗಳ ಕೊಡುಗೆ ಸಾಕಷ್ಟು ಮಟ್ಟದಲ್ಲಿದೆ ಎಂದು ಹೇಳಿದರು.

ದೇಶಕ್ಕೆ ಎರಡನೇ ಅತಿ ದೊಡ್ಡ ತೆರಿಗೆಯನ್ನು ನೀಡುವ ಹಾಗೂ ದೇಶದ ಆರ್ಥಿಕ ಇಂಜಿನ್ ಎಂಬ ಹೆಗ್ಗಳಿಕೆಗೆ ಪಾತ್ರವಾಗಲು ಐಟಿ ಉದ್ಯಮಗಳು, ಇಲ್ಲಿನ ಉದ್ಯೋಗಿಗಳು ಹಾಗೂ ಅವರಿಗೆ ಪೂರಕವಾಗಿ ಸೇವೆಯನ್ನು ಸಲ್ಲಿಸುತ್ತಿರುವ ಅನೇಕ ಕಂಪನಿಗಳು ಪ್ರಮುಖ ಕಾರಣವಾಗಿವೆ.

ಈ ಕನಿಷ್ಠ ಜ್ಞಾನ ಇಲ್ಲದ ಬೆಂಗಳೂರು ನಗರಾಭಿವೃದ್ಧಿಯ ಹೊಣೆಯನ್ನು ಹೊತ್ತಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರ ಇತ್ತೀಚಿನ ದುರ್ವತ್ರನಕಾರಿ ಹೇಳಿಕೆಗಳಿಂದಾಗಿ ಏಷ್ಯಾದ ಅತಿ ದೊಡ್ಡ ಹೂಡಿಕೆಯಾದ ಗೂಗಲ್ ಸಂಸ್ಥೆಯ ಕೃತಕ ಬುದ್ಧಿಮತ್ತೆಯ ಡೇಟಾ ಮೈನಿಂಗ್ ಕೇಂದ್ರವು ವಿಶಾಖಪಟ್ಟಣದ ಪಾಲಾಗಿದೆ. ಈ ರೀತಿಯ ನಡೆಯಿಂದಾಗಿ ಬೆಂಗಳೂರಿನ ಸಮಗ್ರ ಅಭಿವೃದ್ಧಿ ಕುಂಠಿತಗೊಳ್ಳುವುದು ನಿಸ್ಸಂದೇಹ ಕಳವಳ ವ್ಯಕ್ತಪಡಿಸಿದರು.

ಬೆಂಗಳೂರಿನ ಮೂಲಭೂತ ಸೌಕರ್ಯದ ನೆಪದಲ್ಲಿ ಸಾವಿರಾರು ಕೋಟಿ ರೂ.ಗಳನ್ನು ಕೊಳ್ಳೆಹೊಡೆಯುವ ಮಾರ್ಗಗಳನ್ನು ಹುಡುಕಿಕೊಂಡಿದ್ದಾರೆ. ಇತ್ತೀಚೆಗೆ ಬಿಜೆಪಿ ಸರ್ಕಾರದ 40% ಕಮಿಷನ್ ಆರೋಪ ಮಾಡಿಕೊಂಡೆ ಬಂದ ಕಾಂಗ್ರೆಸ್ ಪಕ್ಷವು ಸಹ ಯಾವುದೇ ತನಿಖೆಯನ್ನು ನಡೆಸಿ, ತಪ್ಪಿತಸ್ಥರಿಗೆ ಶಿಕ್ಷೆಯನ್ನು ನೀಡುವುದನ್ನು ಬಿಟ್ಟು ತಾವೇ 60% ಕಮಿಷನ್ ದಂಧೆಗೆ ಇಳಿದಿರುವುದೇ ಇಷ್ಟೆಲ್ಲ ಅನಾಹುತಕ್ಕೆ ಕಾರಣ ಎಂದು ಆರೋಪಿಸಿದರು.

ಇಂತಹ ಸಂದರ್ಭದಲ್ಲಿ ಡಿಕೆಶಿ ಯ ದುರಹಂಕಾರಿ ಹೇಳಿಕೆಗಳು ಇಲ್ಲಿನ ಐಟಿ ಉದ್ಯಮಿಗಳು ಬೆಂಗಳೂರನ್ನು ಬಿಡುವಂತೆ ಪ್ರಚೋದಿಸುತ್ತದೆ. ಉದ್ಯಮಿಗಳಿಗೆ ಪೂರಕವಾದಂತಹ ಉತ್ತಮ ರಸ್ತೆ, ನೀರು, ಒಳಚರಂಡಿ, ಸಂಚಾರ ವ್ಯವಸ್ಥೆಯಂತಹ ಕನಿಷ್ಠ ಸೌಲಭ್ಯಗಳನ್ನು ಕಲ್ಪಿಸುವುದನ್ನು ಬಿಟ್ಟು ಪ್ರತಿದಿನವೂ ಈ ರೀತಿಯ ಅಹಂಕಾರದ ಮಾತುಗಳನ್ನು ಬೆಂಗಳೂರಿಗರು ಸಹಿಸಲು ಸಾಧ್ಯವಿಲ್ಲ, ಮುಖ್ಯಮಂತ್ರಿಗಳು ಡಿಕೆಶಿ ಹೇಳಿಕೆಗಳಿಗೆ ಕಡಿವಾಣ ಹಾಕಬೇಕು ಎಂದು ಸೀತಾರಾಮ್ ಗುಂಡಪ್ಪ ಅಗ್ರಹಿಸಿದರು.

ಡಿಕೆಶಿ ದುರ್ವತ್ರನೆಯಿಂದ ಬೆಂಗಳೂರು ಐಟಿ ಸಿಟಿ ಪಟ್ಟ ಕಳೆದುಕೊಳ್ಳಲಿದೆ:ಆಪ್ ಆರೋಪ Read More

ಡಿಕೆಶಿ ದುರ್ವರ್ತನೆ; ಬೆಂಗಳೂರು ಐಟಿ ಸಿಟಿ ಪಟ್ಟ ಕಳೆದುಕೊಳ್ಳಲಿದೆ-ಎಎಪಿ‌ ಕಳವಳ

ಬೆಂಗಳೂರು: ಉಪ ಮುಖ್ಯ ಮಂತ್ರಿ‌ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆದ ಡಿ.ಕೆ.ಶಿವಕುಮಾರ್ ಅವರ ದುರ್ವರ್ತನೆಯಿಂದ ಬೆಂಗಳೂರು ನಗರ ಐಟಿ ಸಿಟಿ ಪಟ್ಟ ಕಳೆದುಕೊಳ್ಳಲಿದೆ ಎಂದು ಎಎಪಿ ಆರೋಪಿಸಿದೆ.

ಬಯೋಕಾನ್ ಮುಖ್ಯಸ್ಥೆ ಕಿರಣ್ ಮಜುಂದಾರ್ ಬಗ್ಗೆ ಡಿ.ಕೆ. ಶಿವಕುಮಾರ್ ವಾಗ್ದಾಳಿ ಕುರಿತು ಆಮ್ ಆದ್ಮಿ ಪಕ್ಷದ ಕಾರ್ಯಾಧ್ಯಕ್ಷ ಸೀತಾರಾಮ್ ಗುಂಡಪ್ಪ ಪ್ರತಿಕ್ರಿಯಿಸಿದ್ದು,ಬೆಂಗಳೂರು ಸಿಲಿಕಾನ್ ನಗರ ವೆಂದು ಖ್ಯಾತಿಗೊಳ್ಳಲು ಇಲ್ಲಿನ ಐಟಿ ಉದ್ಯಮಿಗಳ ಕೊಡುಗೆ ಸಾಕಷ್ಟು ಮಟ್ಟದಲ್ಲಿದೆ ಎಂದು ಹೇಳಿದರು.

ದೇಶಕ್ಕೆ ಎರಡನೇ ಅತಿ ದೊಡ್ಡ ತೆರಿಗೆಯನ್ನು ನೀಡುವ ಹಾಗೂ ದೇಶದ ಆರ್ಥಿಕ ಇಂಜಿನ್ ಎಂಬ ಹೆಗ್ಗಳಿಕೆಗೆ ಪಾತ್ರವಾಗಲು ಐಟಿ ಉದ್ಯಮಗಳು, ಇಲ್ಲಿನ ಉದ್ಯೋಗಿಗಳು ಹಾಗೂ ಅವರಿಗೆ ಪೂರಕವಾಗಿ ಸೇವೆಯನ್ನು ಸಲ್ಲಿಸುತ್ತಿರುವ ಅನೇಕ ಕಂಪನಿಗಳು ಪ್ರಮುಖ ಕಾರಣವಾಗಿವೆ ಎಂದು ತಿಳಿಸಿದರು.

ಈ ಬಗ್ಗೆ ಕನಿಷ್ಠ ಜ್ಞಾನವು ಇಲ್ಲದ ಬೆಂಗಳೂರು ನಗರಾಭಿವೃದ್ಧಿಯ ಹೊಣೆಯನ್ನು ಹೊತ್ತಿರುವ ಡಿ.ಕೆ. ಶಿವಕುಮಾರ್ ಅವರ ಇತ್ತೀಚಿನ ದುರ್ವರ್ತನಕಾರಿ ಹೇಳಿಕೆಗಳಿಂದಾಗಿ ಏಷ್ಯಾದ ಅತಿ ದೊಡ್ಡ ಹೂಡಿಕೆಯಾದ ಗೂಗಲ್ ಸಂಸ್ಥೆಯ ಕೃತಕ ಬುದ್ಧಿಮತ್ತೆಯ ಡೇಟಾ ಮೈನಿಂಗ್ ಕೇಂದ್ರವು ವಿಶಾಖಪಟ್ಟಣದ ಪಾಲಾಗಿದೆ.ಅವರ ಈ ರೀತಿಯ ನಡೆಯಿಂದಾಗಿ ಬೆಂಗಳೂರಿನ ಸಮಗ್ರ ಅಭಿವೃದ್ಧಿ ಕುಂಠಿತಗೊಳ್ಳುವುದು ನಿಸ್ಸಂದೇಹ ಎಂದು ಆತಂಕ ವ್ಯಕ್ತಪಡಿಸಿದರು.

ಕಳೆದ ಎರಡು ದಶಕಗಳಿಂದ ಆಳಿರುವ ಮೂರೂ ಪಕ್ಷಗಳು ಬೆಂಗಳೂರಿಗರಿಗೆ ಕನಿಷ್ಠ ಮೂಲ ಸೌಕರ್ಯಗಳನ್ನು ನೀಡಲು ವಿಫಲವಾಗಿವೆ ಎಂದು ಸೀತಾರಾಮ್ ಗುಂಡಪ್ಪ ಗಂಭೀರ ಆರೋಪ ಮಾಡಿದರು.

ಬೆಂಗಳೂರಿನ ಮೂಲಭೂತ ಸೌಕರ್ಯದ ನೆಪದಲ್ಲಿ ಸಾವಿರಾರು ಕೋಟಿ ರೂ.ಗಳನ್ನು ಕೊಳ್ಳೆಹೊಡೆಯುವ ಮಾರ್ಗಗಳನ್ನು ಕಾಂಗ್ರೆಸ್ ನವರು ಹುಡುಕಿಕೊಂಡಿದ್ದಾರೆ. ಇತ್ತೀಚೆಗೆ ಬಿಜೆಪಿ ಸರ್ಕಾರದ 40% ಕಮಿಷನ್ ಆರೋಪ ಮಾಡಿಕೊಂಡೆ ಬಂದ ಕಾಂಗ್ರೆಸ್ ಪಕ್ಷ ಸಹ ಯಾವುದೇ ತನಿಖೆಯನ್ನು ನಡೆಸಿ, ತಪ್ಪಿತಸ್ಥರಿಗೆ ಶಿಕ್ಷೆಯನ್ನು ನೀಡುವುದನ್ನು ಬಿಟ್ಟು ತಾವೇ 60% ಕಮಿಷನ್ ದಂಧೆಗೆ ಇಳಿದಿರುವುದೇ ಇಷ್ಟೆಲ್ಲ ಅನಾಹುತಕ್ಕೆ ಕಾರಣಗಳಾಗಿವೆ ಎಂದು ದೂರಿದರು.

ಡಿಕೆಶಿಯವರ ದುರಹಂಕಾರದ ಹೇಳಿಕೆಗಳು ಇಲ್ಲಿನ ಐಟಿ ಉದ್ಯಮಿಗಳು ಬೆಂಗಳೂರನ್ನು ಬಿಡುವಂತೆ ಪ್ರಚೋದಿಸುತ್ತದೆ. ಉದ್ಯಮಿಗಳಿಗೆ ಪೂರಕವಾದ ಉತ್ತಮ ರಸ್ತೆ , ನೀರು, ಒಳಚರಂಡಿ, ಸಂಚಾರ ವ್ಯವಸ್ಥೆಯಂತಹ ಕನಿಷ್ಠ ಸೌಲಭ್ಯಗಳನ್ನು ಕಲ್ಪಿಸುವುದನ್ನು ಬಿಟ್ಟು ಪ್ರತಿದಿನವೂ ಈ ರೀತಿಯ ಅಹಂಕಾರದ ಮಾತುಗಳನ್ನು ಬೆಂಗಳೂರಿಗರು ಸಹಿಸಲು ಸಾಧ್ಯವಿಲ್ಲ ಎಂದು ಎಚ್ಚರಿಸಿದರು.

ಈಗಾಗಲೇ ಅಂತರಾಷ್ಟ್ರೀಯ ಮಟ್ಟದಲ್ಲಿ ಭಾರತೀಯ ಅದರಲ್ಲೂ ಕನ್ನಡಿಗ ಐಟಿ ಉದ್ಯೋಗಿಗಳಿಗೆ ಆತಂಕದ ಪರಿಸ್ಥಿತಿ ಇದೆ. ಇಂಥ ಸೂಕ್ಷ್ಮಗಳನ್ನು ಅರಿತು ಮುಖ್ಯಮಂತ್ರಿಗಳು ಡಿಕೆಶಿಯವರ ಹೇಳಿಕೆಗಳಿಗೆ ಕಡಿವಾಣ ಹಾಕಬೇಕು ಎಂದು ಸೀತಾರಾಮ್ ಗುಂಡಪ್ಪ ಅಗ್ರಹಿಸಿದರು.

ಡಿಕೆಶಿ ದುರ್ವರ್ತನೆ; ಬೆಂಗಳೂರು ಐಟಿ ಸಿಟಿ ಪಟ್ಟ ಕಳೆದುಕೊಳ್ಳಲಿದೆ-ಎಎಪಿ‌ ಕಳವಳ Read More

ಬಿಬಿಎಂಪಿ ಕಚೇರಿಗಳು ಖಾಲಿ;ಸಾರ್ವಜನಿಕ ರಿಗೆ‌ ತೊಂದರೆ-ಆಪ್‌ ಆಕ್ರೋಶ

ಬೆಂಗಳೂರು: ಸಮೀಕ್ಷೆಯ ನೆಪದಲ್ಲಿ ಎಲ್ಲಾ ಸಿಬ್ಬಂದಿ ಹೊರಗೆ ಹೋಗುತ್ತಿದ್ದು ಬಿಬಿಎಂಪಿ ಕಚೇರಿಗಳು ಖಾಲಿಯಾಗಿ ಸಾರ್ವಜನಿಕ ಕೆಲಸಗಳು ಸಂಪೂರ್ಣ ಅಸ್ತವ್ಯಸ್ತವಾಗಿವೆ ಎಂದು ಆಮ್ ಆದ್ಮಿ ಪಕ್ಷ ಗಂಭೀರ ಆರೋಪ ಮಾಡಿದೆ.

ಕಳೆದ 15 ದಿನಗಳಿಂದ ಸರ್ಕಾರ ನಡೆಸುತ್ತಿರುವ ಜಾತಿ ಸಮೀಕ್ಷೆ ನೆಪದಲ್ಲಿ ಬೆಂಗಳೂರಿನ ಎಲ್ಲಾ ನಗರ ಪಾಲಿಕೆ ಕಚೇರಿಗಳಿಗೆ ಸಿಬ್ಬಂದಿಗಳು ಕೆಲಸಕ್ಕೆ ಬರುತ್ತಿಲ್ಲ,ಹಾಗಾಗಿ ಕಚೇರಿಗಳು ಸಂಪೂರ್ಣ ಬಣಗುಡುತ್ತಿವೆ. ಸಾರ್ವಜನಿಕರು ತಮ್ಮ ಕೆಲಸ ಕಾರ್ಯಗಳಿಗೆ ಅಲೆದಾಡುವಂತಾಗಿದೆ ಕೂಡಲೇ ಮುಖ್ಯ ಆಯುಕ್ತರು ಇತ್ತ ಗಮನಹರಿಸಿ ಸಾರ್ವಜನಿಕ ಕೆಲಸಗಳು ಮುಂದುವರಿಯುವಂತೆ ಕ್ರಮ ತೆಗೆದುಕೊಳ್ಳಬೇಕೆಂದು ಆಮ್ ಆದ್ಮಿ ಪಕ್ಷ ಆಗ್ರಹಿಸಿದೆ.

ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ನಗರಪಾಲಿಕೆ ಕಚೇರಿಯಲ್ಲಿ ಪಕ್ಷದ ಮುಖಂಡ ಅಣ್ಣ ನಾಯಕ್ ಫ್ಯಾಕ್ಟ್ ಚೆಕ್ ಮಾಡಿ ವಿಡಿಯೋ ಕೂಡಾ ಮಾಡುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ.

ಸಮೀಕ್ಷೆಗಾಗಿ ಶಿಕ್ಷಣ ಇಲಾಖೆಯ ಸಿಬ್ಬಂದಿಯನ್ನು ಸರ್ಕಾರ ನೇಮಿಸಿದೆ,ಆದರೆ ಬಿಬಿಎಂಪಿ ಸಿಬ್ಬಂದಿ ಕಳೆದ ಹಲವು ದಿನಗಳಿಂದ ಕಚೇರಿಗೆ ಬಾರದೆ ಗೈರು ಹಾಜರಾಗಿ ಸಾರ್ವಜನಿಕ ಕೆಲಸ ಕಾರ್ಯಗಳಿಗೆ ಭಂಗ ಉಂಟು ಮಾಡುತ್ತಿದ್ದಾರೆ ಎಂದು ಅಣ್ಣ ನಾಯಕ್ ದೂರಿದ್ದಾರೆ.

ಕೂಡಲೇ ಜಿಬಿಎ ಮುಖ್ಯ ಆಯುಕ್ತರು ಹಾಗೂ ನಗರ ಪಾಲಿಕೆ ಆಯುಕ್ತರು ತಮ್ಮ ಸಿಬ್ಬಂದಿಗಳಿಗೆ ಎಚ್ಚರಿಕೆ ನೀಡಿ ಕಚೇರಿಗಳಿಗೆ ಹಾಜರಾಗುವಂತೆ ಸೂಚಿಸಬೇಕು, ಹಾಗೂ ಸಿಬ್ಬಂದಿಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳ ಬೇಕೆಂದು ಆಗ್ರಹಿಸಿದ್ದಾರೆ.

ಬಿಬಿಎಂಪಿ ಕಚೇರಿಗಳು ಖಾಲಿ;ಸಾರ್ವಜನಿಕ ರಿಗೆ‌ ತೊಂದರೆ-ಆಪ್‌ ಆಕ್ರೋಶ Read More

ಶುದ್ಧ ಕುಡಿವ ನೀರಿನ ಬೆಲೆ ಹೆಚ್ಚಳಕ್ಕೆ ಎಎಪಿ ತೀವ್ರ ವಿರೋಧ

ಬೆಂಗಳೂರು: ಬಡವರಿಗೆ, ಮಧ್ಯಮ ವರ್ಗದವರಿಗೆ ಶುದ್ಧ ಕುಡಿಯುವ ನೀರನ್ನು ಪೂರೈಸುವ ಘಟಕಗಳನ್ನು ಇತ್ತೀಚೆಗೆ ತನ್ನ ಸುಪರ್ದಿಗೆ ತೆಗೆದುಕೊಂಡಿರುವ ಜಲ ಮಂಡಳಿಯು ಏಕಾಏಕಿ ನೀರಿನ ದರ ಏರಿಸಿರುವುದಕ್ಕೆ‌ ಆಪ್ ಅಸಮಾಧಾನ ‌ವ್ಯಕ್ತಪಡಿಸಿದೆ.

20 ಲೀಟರ್ ಕುಡಿಯುವ ನೀರಿಗೆ 10 ರೂ. ಗಳಷ್ಟು ಬೆಲೆ ಹೆಚ್ಚಿಸಿರುವುದನ್ನು ಆಮ್ ಆದ್ಮಿ ಪಕ್ಷ ತೀವ್ರವಾಗಿ ವಿರೋಧಿಸುತ್ತದೆ. ಇದು ಬಡವರ ಹಾಗೂ ಜನ ವಿರೋಧಿ ಕೃತ್ಯವೆಂದು ಆಮ್ ಆದ್ಮಿ ಪಕ್ಷದ ಬೆಂಗಳೂರು ನಗರ ಘಟಕದ ಅಧ್ಯಕ್ಷ ಡಾ. ಸತೀಶ್ ಕುಮಾರ್ ಆಕ್ರೋಶ ವ್ಯಕ್ತಪಡಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಬಿಎಂಪಿಯ ಅವಧಿಯಲ್ಲಿ ಆರ್ ಒ ಘಟಕಗಳ ವಿದ್ಯುತ್ ಬಾಕಿ ಇದ್ದ ಬಿಲ್ಲನ್ನು ಸಹ ಜಲಮಂಡಳಿಯು ಕಟ್ಟುತ್ತಿಲ್ಲ. ಆದರೆ ಕೇವಲ ಗುತ್ತಿಗೆದಾರರಿಗೆ ಅನುಕೂಲ ಮಾಡಿಕೊಡುವ ರೀತಿಯ ಜಲ ಮಂಡಳಿಯ ಈ ಬೆಲೆ ಏರಿಕೆ ಕ್ರಮವನ್ನು ಸಹಿಸಲು ಸಾಧ್ಯವಿಲ್ಲ ಎಂದು ಕಿಡಿಕಾರಿದರು.

ಪ್ರತಿಯೊಬ್ಬ ಪ್ರಜೆಗೂ ಶುದ್ಧ ಕುಡಿಯುವ ನೀರನ್ನು ಪೂರೈಸ ಬೇಕಾಗಿರುವುದು ಆಳುವ ಸರ್ಕಾರಗಳ ಸಾಂವಿಧಾನಿಕ ಜವಾಬ್ದಾರಿಯಾಗಿದೆ. ಈಗ ಜಲ ಮಂಡಳಿಯು ಪ್ರಜೆಗಳ ಸಾಂವಿಧಾನಿಕ ಹಕ್ಕನ್ನು ಕಸಿದುಕೊಳ್ಳುವ ಪ್ರಕ್ರಿಯೆಯಲ್ಲಿ ತೊಡಗಿರುವುದು ಸರಿಯಲ್ಲ ಎಂದು ಹೇಳಿದರು

ಕೂಡಲೇ ಜಿಬಿಎ ಮುಖ್ಯಸ್ಥರಾಗಿರುವ ಮುಖ್ಯಮಂತ್ರಿಗಳು ಮಧ್ಯಪ್ರವೇಶಿಸಿ ಜಲಮಂಡಳಿಯ ಬೆಲೆ ಏರಿಕೆ ಕ್ರಮವನ್ನು ತಡೆಯಬೇಕು. ಶುದ್ಧ ಕುಡಿಯುವ ನೀರಿನ ಪೂರೈಕೆಯಲ್ಲಿ ಜಲಮಂಡಳಿಯ ವ್ಯಾಪಾರಿ ಬುದ್ಧಿಯನ್ನು ತಪ್ಪಿಸಬೇಕು ಎಂದು ಡಾ. ಸತೀಶ್ ಕುಮಾರ್ ಅಗ್ರಹಿಸಿದರು.

ಶುದ್ಧ ಕುಡಿವ ನೀರಿನ ಬೆಲೆ ಹೆಚ್ಚಳಕ್ಕೆ ಎಎಪಿ ತೀವ್ರ ವಿರೋಧ Read More

ಸ್ಥಳೀಯ ಸಂಸ್ಥೆಗಳ ಚುನಾವಣೆ: ಬ್ಯಾಲೆಟ್ ಪೇಪರ್ ಬಳಕೆಗೆ ಆಪ್ ಸ್ವಾಗತ

ಬೆಂಗಳೂರು: ಸ್ಥಳೀಯ ಸಂಸ್ಥೆ ಚುನಾವಣೆಗಳನ್ನು ಬ್ಯಾಲೆಟ್ ಪೇಪರ್ ಗಳ ಮೂಲಕ ನಡೆಸುವ ಕರ್ನಾಟಕ ರಾಜ್ಯ ಸರ್ಕಾರದ ಕ್ರಮವನ್ನು ಆಮ್ ಆದ್ವಿ ಪಕ್ಷ ಸ್ವಾಗತಿಸಿದೆ.

ಇತ್ತೀಚೆಗೆ ಅನೇಕ ರಾಜ್ಯಗಳಲ್ಲಿ ನಡೆದ ಸಾರ್ವತ್ರಿಕ ಚುನಾವಣೆಗಳಲ್ಲಿ ಮತ ಕಳ್ಳತನ ಆಗಿದೆ ಎಂಬ ಸಾಕ್ಷ್ಯಸಮೇತದ ಇಂಡಿಯಾ ಒಕ್ಕೂಟದ ನಾಯಕರುಗಳ ಗುರುತರ ಆರೋಪಗಳಿಗೆ ಯಾವುದೇ ಪ್ರತಿಕ್ರಿಯೆಯನ್ನು ನೀಡದ ಪ್ರಧಾನಿಗಳ ನಡೆ ಒಂದು ಕಡೆ,ಮತ್ತೊಂದು ಕಡೆ ಆರೋಪಿತ ಸ್ಥಾನದ ಕೇಂದ್ರ ಚುನಾವಣಾ ಆಯೋಗವು ಸೂಕ್ತ ಸ್ಪಷ್ಟೀಕರಣಗಳನ್ನು ಹಾಗೂ ಸಮಜಾಯಿಶಿ ಗಳನ್ನು ನೀಡದೆ, ಆರೋಪ ಮಾಡಿದ್ದ ನಾಯಕರುಗಳ ವಿರುದ್ಧವೇ ರಾಜಕೀಯ ಪ್ರತಿಕ್ರಿಯೆಗಳನ್ನು ನೀಡಿ ಮುಚ್ಚಿ ಹಾಕುವ ಯಂತ್ರಗಾರಿಕೆಯಲ್ಲಿ ತೊಡಗಿತ್ತು ಎಂದು ಆಪ್ ಹೇಳಿದೆ.

ಇವರ ನಡೆಯಿಂದಾಗಿ ಕೇಂದ್ರ ಚುನಾವಣಾ ಆಯೋಗಕ್ಕೆ ಹಾಗೂ ಕೇಂದ್ರ ಸರ್ಕಾರಕ್ಕೆ ಆಮೂಲಾಗ್ರ ಸುಧಾರಣಾ ಕ್ರಮಗಳನ್ನು ಕೈಗೊಳ್ಳುವ ಇಚ್ಛೆ ಇಲ್ಲದಿರುವುದು ದೇಶದ ಜನತೆಗೆ ಸ್ಪಷ್ಟವಾಗಿ ಗೊತ್ತಾಗುತ್ತಿದೆ.

ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಸರ್ಕಾರವು ಬ್ಯಾಲೆಟ್ ಪೇಪರ್ ಬಳಕೆಯ ನಿರ್ಧಾರ ಕೈಗೊಂಡಿರುವುದು ಅತ್ಯಂತ ಸ್ವಾಗತರ್ಹ ಕ್ರಮ ಎಂದು ಆಮ್ ಆದ್ಮಿ ಪಕ್ಷದ ರಾಜ್ಯ ಮಾಧ್ಯಮ ಸಂಚಾಲಕ ಜಗದೀಶ್ ವಿ. ಸದಂ ಇಂದಿಲ್ಲಿ ಪ್ರತಿಕ್ರಿಯಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಕಳೆದ ದೆಹಲಿ ರಾಜ್ಯ ವಿಧಾನಸಭೆಯ ಚುನಾವಣೆಯಲ್ಲೂ ಸಹ ಆಮ್ ಆದ್ಮಿ ಪಕ್ಷವು ಪ್ರತಿಯೊಂದು ವಿಧಾನಸಭಾ ಕ್ಷೇತ್ರಗಳಲ್ಲಿಯೂ ಸಾವಿರಾರು ಮತದಾರರುಗಳನ್ನು ಕೈ ಬಿಟ್ಟಿದ್ದ ಸಂದರ್ಭದಲ್ಲಿ ಅನೇಕ ಹಂತಗಳಲ್ಲಿ ಹೋರಾಟಗಳನ್ನು ನಡೆಸಿತ್ತು ಎಂದು ಹೇಳಿದರು ‌

ಮತ ಪಟ್ಟಿಯಿಂದ ಕೈ ಬಿಟ್ಟಿದ್ದ ಸಾವಿರಾರು ಮತದಾರರುಗಳ ಬೃಹತ್ ರ್‍ಯಾಲಿಗಳನ್ನು ನಡೆಸಿ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದ್ದರು ಸಹ ಯಾವುದೇ ಕ್ರಮ ತೆಗೆದುಕೊಳ್ಳದ ಕೇಂದ್ರ ಚುನಾವಣಾ ಆಯೋಗವು ಇಂತಹ ಅನೇಕ ಅಕ್ರಮ ಮತದಾನ ಪ್ರಕ್ರಿಯೆಗಳಲ್ಲಿ ಗೊತ್ತಿದ್ದರೂ ಸಹ ಕಣ್ಮುಚ್ಚಿ ಕುಳಿತುಕೊಂಡಿತ್ತು ಎಂದು ದೂರಿದರು.

ದೇಶದ ಸಾಂವಿಧಾನಿಕ ಹಾಗೂ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಈ ರೀತಿಯ ಮತ ಕಳ್ಳತನ ಮಾಡಿ ಅಧಿಕಾರ ಪಡೆದುಕೊಳ್ಳುವ ಪ್ರಬಲರ ಹುನ್ನಾರ ತಪ್ಪಬೇಕಾದರೆ ಬ್ಯಾಲೆಟ್ ಪೇಪರ್ ಅವಶ್ಯಕತೆ ಅತ್ಯಂತ ಜರೂರಾಗಿದೆ ಎಂದು ಹೇಳಿದರು.

ಪಕ್ಷವು ಎಲ್ಲ ಸ್ತರ ಗಳಲ್ಲಿಯೂ ರಾಜ್ಯ ಸರ್ಕಾರದ ನಿರ್ಧಾರವನ್ನು ಸ್ವಾಗತಿಸುತ್ತದೆ. ಭಾರತೀಯ ಜನತಾ ಪಕ್ಷಕ್ಕೆ ಮತ ಕಳ್ಳತನ ತಡೆಗಟ್ಟುವ ಮನಸ್ಸಿದ್ದಲ್ಲಿ ಬಿಜೆಪಿ ಅಧಿಕಾರ ಹೊಂದಿರುವ ಇನ್ನಿತರ ರಾಜ್ಯಗಳಲ್ಲಿಯೂ ಸಹ ಇದೇ ರೀತಿಯ ನಿರ್ಧಾರಗಳನ್ನು ತೆಗೆದುಕೊಳ್ಳಬೇಕೆಂದು ಜಗದೀಶ್ ವಿ. ಸದಂ ಸವಾಲು ಹಾಕಿದರು.

ಸ್ಥಳೀಯ ಸಂಸ್ಥೆಗಳ ಚುನಾವಣೆ: ಬ್ಯಾಲೆಟ್ ಪೇಪರ್ ಬಳಕೆಗೆ ಆಪ್ ಸ್ವಾಗತ Read More

ವಿಧಾನಪರಿಷತ್ ನಲ್ಲಿ ಅಲೆಮಾರಿ ಜನಾಂಗಕ್ಕೆ ಪ್ರಾತಿನಿಧ್ಯ ನೀಡಲು ಆಪ್ ಆಗ್ರಹ

ಬೆಂಗಳೂರು, ಸೆಪ್ಟೆಂಬರ್.1:
ಕರ್ನಾಟಕ ವಿಧಾನ ಪರಿಷತ್ ನಲ್ಲಿ ತೆರವಾಗಿರುವ ನಾಲ್ಕು ನಾಮನಿರ್ದೇಶನ ಸ್ಥಾನಗಳಲ್ಲಿ ಅಲೆಮಾರಿ ಜನಾಂಗಕ್ಕೆ ರಾಜಕೀಯ ಪ್ರಾತಿನಿಧ್ಯ ನೀಡಬೇಕೆಂದು
ಆಮ್ ಆದ್ಮಿ ಪಕ್ಷ ಆಗ್ರಹಿಸಿದೆ.

ಎಐಸಿಸಿ ಅಧಿನಾಯಕ ರಾಹುಲ್ ಗಾಂಧಿ ಅವರಿಗೆ ಪತ್ರ ಬರೆಯುವ ಮೂಲಕ ಅಲೆಮಾರಿ ಜನಾಂಗಕ್ಕೆ ರಾಜಕೀಯ ಪ್ರಾತಿನಿಧ್ಯ ನೀಡಬೇಕೆಂದು ಒತ್ತಾಯಿಸಲಾಗಿದೆ ಎಂದು ಪಕ್ಷದ ಕಾರ್ಯಾಧ್ಯಕ್ಷ ಸೀತಾರಾಮ್ ಗುಂಡಪ್ಪ ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರ ಜಾರಿಗೆ ತಂದಿರುವ ಇತ್ತೀಚಿನ ಒಳ ಮೀಸಲಾತಿಯಲ್ಲಿ ಅಲೆಮಾರಿ ಜನಾಂಗಕ್ಕೆ ಸಾಕಷ್ಟು ಅನ್ಯಾಯವಾಗಿದೆ ಎಂಬ ಕೂಗು ಎಲ್ಲೆಡೆ ಕಂಡುಬರುತ್ತಿದೆ.ಈಗಾಗಲೇ ಪ್ರತಿಭಟನೆಗಳೂ ನಡೆದಿದೆ. ನಮ್ಮ ಪಕ್ಷವೂ ಸಹ ಪ್ರತಿಭಟನೆಗಳಲ್ಲಿ ಸಾಕಷ್ಟು ಬಾರಿ ಭಾಗವಹಿಸಿ ಅವರ ಹಕ್ಕೊತ್ತಾಯ ಗಳಿಗೆ ಸಂಪೂರ್ಣ ಬೆಂಬಲವನ್ನು ಸೂಚಿಸಿದೆ ಎಂದು ಹೇಳಿದರು.

ಒಳ ಮೀಸಲಾತಿಯಲ್ಲಿ ಅಲೆಮಾರಿ ಜನಾಂಗಗಳಿಗೆ ಅನ್ಯಾಯ ಸರಿಪಡಿಸುವ ದಿಶೆಯಲ್ಲಿ ನಾಮನಿರ್ದೇಶನ ವಾಗುವ ವಿಧಾನಪರಿಷತ್ ಸ್ಥಾನಗಳಲ್ಲಿ ಈ ಜನಾಂಗಕ್ಕೆ ರಾಜಕೀಯ ಪ್ರಾತಿನಿಧ್ಯ ನೀಡಿ ಮೇಲೆತ್ತುವ ಕೆಲಸ ಆಗಬೇಕು.

ಸಮಬಾಳು ಸಮಪಾಲು ಎಂದು ಸದಾ ಪ್ರತಿಪಾದಿಸುವ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕೂಡಲೇ ಇತ್ತ ಕಡೆ ಗಮನಹರಿಸಬೇಕೆಂಬ ಒತ್ತಡವನ್ನು ಎಲ್ಲರೂ ಹಾಕಬೇಕಿದೆ ಎಂದು ಸೀತಾರಾಮ ಗುಂಡಪ್ಪ ಒತ್ತಾಯಿಸಿದರು.

ವಿಧಾನಪರಿಷತ್ ನಲ್ಲಿ ಅಲೆಮಾರಿ ಜನಾಂಗಕ್ಕೆ ಪ್ರಾತಿನಿಧ್ಯ ನೀಡಲು ಆಪ್ ಆಗ್ರಹ Read More

ಲೇಖಕಿಗೆ ಅಪಮಾನ ಬಿಜೆಪಿಗರ ವಿರುದ್ಧ ಕ್ರಮ ಆಗಲಿ: ಸೀತಾರಾಮ್ ಗುಂಡಪ್ಪ

ಮೈಸೂರು: ಈ ಬಾರಿಯ ಮೈಸೂರು ದಸರಾ ಉದ್ಘಾಟನೆಗೆ ಸರ್ಕಾರದಿಂದ ಆಹ್ವಾನ ನೀಡಿರುವ ಕನ್ನಡದ ಹೆಸರಾಂತ ಲೇಖಕಿ ಹಾಗೂ ಅಂತರರಾಷ್ಟ್ರೀಯ ಬೂಕರ್ ಪ್ರಶಸ್ತಿಗೆ ಭಾಜನರಾಗಿರುವ ಭಾನು ಮುಷ್ತಾಕ್ ಅವರಿಗೆ ಅಪಮಾನ ಮಾಡುವುದು ಸರಿಯಲ್ಲ ಎಂದು ಆಮ್ ಆದ್ಮಿ ಪಕ್ಷ ಹೇಳಿದೆ.

ಅಪಮಾನ ‌ಆಗುವ ರೀತಿ ಹಾಗೂ ಸಮಾಜದಲ್ಲಿ ಅಶಾಂತಿ, ಶಾಂತಿಭಂಗ ಆಗಲು ಪ್ರಚೋದನೆ ನೀಡುತ್ತಿರುವ ಬಿಜೆಪಿ ನಾಯಕರ ವಿರುದ್ಧ ಕೂಡಲೇ ಸರ್ಕಾರ ಕ್ರಮ ಕೈಗೊಳ್ಳಬೇಕೆಂದು ಆಮ್ ಆದ್ಮಿ ಪಕ್ಷದ ಕಾರ್ಯಾಧ್ಯಕ್ಷ ಸೀತಾರಾಮ್ ಗುಂಡಪ್ಪ ಆಗ್ರಹಿಸಿದ್ದಾರೆ.

ಭಾನು ಮುಷ್ತಾಕ್ ಅವರ ರಾಷ್ಟ್ರಪ್ರೇಮ ಹಾಗೂ ಕನ್ನಡ ಪ್ರೀತಿಯನ್ನೇ ಕೇವಲ ಧರ್ಮದ ಆಧಾರದಲ್ಲಿ ಪ್ರಶ್ನಿಸುತ್ತಿರುವ ಬಿಜೆಪಿಗರ ನಡೆ ಅವರ ಹೀನ ಮನಸ್ಥಿತಿಯನ್ನು ಎತ್ತಿ ತೋರಿಸುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸಮಸ್ತ ಆರೂವರೆ ಕೋಟಿ ಕನ್ನಡಿಗರೆಲ್ಲರು ಎಂದಿಗೂ ಸಹ ಭಾನು ಮುಷ್ತಾಕ್ ಅವರನ್ನು ಧರ್ಮದ ಆಧಾರದಲ್ಲಿ ನೋಡಿಲ್ಲ, ಮೈಸೂರಿನ ದಸರಾ ಹಬ್ಬದ ಉದ್ಘಾಟನೆಯನ್ನು ಭಾನು ಮುಷ್ತಾಕರಿಂದ ಮಾಡಿಸುತ್ತಿರುವುದು ಎಲ್ಲ ಕನ್ನಡಿಗರಿಗೂ ಹೆಮ್ಮೆಯ ವಿಷಯ ಹಾಗೂ ನಾವು ನೀಡುತ್ತಿರುವ ಗೌರವ ಎಂದು ತಿಳಿಸಿದ್ದಾರೆ.

ಬಾನು ಅವರು ತಮ್ಮ ಕನ್ನಡದ ಬರಹಗಳಿಂದ ಭಾಷೆಗೆ ಹಿರಿಮೆ ಮತ್ತು ಗರಿಮೆಯನ್ನು ತಂದು ಕೊಟ್ಟಿರುವಂತಹ ಶ್ರೇಯಸ್ಸು ಅವರಿಗಿದೆ. ಕೆಲ ಬಿಜೆಪಿಯ ಡೋಂಗಿ ನಾಯಕರ ಈ ರೀತಿಯ ಹೇಳಿಕೆಗಳು ಎಲ್ಲ ಕನ್ನಡಿಗರಿಗೂ ಮಾಡುತ್ತಿರುವ ಅಪಮಾನ. ಕೆಲಸ ಕಾರ್ಯವಿಲ್ಲದ ಕೋಮುವಾದಿ ನಾಯಕರುಗಳು ಕೂಡಲೇ ಸಮಾಜದ ಕ್ಷಮೆ ಯಾಚಿಸಬೇಕು ಎಂದು ಸೀತಾರಾಮ್ ಗುಂಡಪ್ಪ ಆಗ್ರಹಿಸಿದ್ದಾರೆ.

ಲೇಖಕಿಗೆ ಅಪಮಾನ ಬಿಜೆಪಿಗರ ವಿರುದ್ಧ ಕ್ರಮ ಆಗಲಿ: ಸೀತಾರಾಮ್ ಗುಂಡಪ್ಪ Read More

ಒಳ ಮೀಸಲಿಗೆ ಸಚಿವ ಸಂಪುಟ ಒಪ್ಪಿಗೆ ಸ್ವಾಗತಾರ್ಹ: ಮುಖ್ಯಮಂತ್ರಿ ಚಂದ್ರು

ಬೆಂಗಳೂರು: ಪರಿಶಿಷ್ಟ ಜಾತಿ ಹಾಗೂ ಪಂಗಡಗಳಿಗೆ ಒಳ ಮೀಸಲಾತಿ ಕಲ್ಪಿಸಬೇಕು ಎಂಬ ಎಡಗೈ ಪಂಗಡದವರ 35 ವರ್ಷಗಳ ಹೋರಾಟಕ್ಕೆ ಕಡೆಗೂ ಜಯ ಸಿಕ್ಕಿದ್ದು ಸ್ವಾಗತಾರ್ಹ ಎಂದು ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಡಾ. ಮುಖ್ಯಮಂತ್ರಿ ಚಂದ್ರು ಹೇಳಿದ್ದಾರೆ.

ಇದಕ್ಕೆ ಮಂತ್ರಿಮಂಡಲ ಒಪ್ಪಿಗೆ ನೀಡಿರುವುದು ಸ್ವಾಗತದ ಸಂಗತಿ ಎಂದು ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು,
ಈ ಮೂಲಕ ಎಲ್ಲಾ ಹೋರಾಟಗಾರರಿಗೂ ಪಕ್ಷದ ವತಿಯಿಂದ ಅಭಿನಂದನೆಗಳನ್ನು ಸಲ್ಲಿಸುತ್ತೇವೆ ಎಂದು ಹೆಳಿದರು.

ಸದಾಶಿವ ವರದಿ ಆಯೋಗವನ್ನು ಯಥಾವತ್ತಾಗಿ ಅಳವಡಿಸದ ಕಾರಣ ಅಲೆಮಾರಿ ಹಾಗೂ ಇನ್ನಿತರ ಧ್ವನಿ ಇಲ್ಲದ ಸಣ್ಣ ಸಣ್ಣ ಜಾತಿಗಳಿಗೆ ಒಳ ಮೀಸಲಾತಿಯ ಲಾಭ ದಕ್ಕುವುದಿಲ್ಲವೆಂಬ ಭಾವನೆ ಇದೆ,
ಮುಂಬರುವ ದಿನಗಳಲ್ಲಿ ಬಾಕಿ ಇರುವ ಎಲ್ಲ ನೇಮಕಾತಿಗಳು, ಮುಂಬಡ್ತಿಗಳು ವೇಗದಲ್ಲಿ ಆಗಬೇಕು ಎಂದು ಒತ್ತಾಯಿಸಿದರು.

ಪರಿಶಿಷ್ಟ ಜಾತಿ ಹಾಗೂ ಪಂಗಡಗಳು ಸಾಮಾಜಿಕವಾಗಿ ಆರ್ಥಿಕವಾಗಿ ಹಾಗೂ ಶೈಕ್ಷಣಿಕವಾಗಿ ಸಬಲೀಕರಣ ಗೊಳ್ಳಲು ಸರ್ಕಾರವು ಪರಿಶಿಷ್ಟರಿಗೆ ಮೀಸಲಿಟ್ಟಿರುವ ಹಣವನ್ನು ಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರದಲ್ಲಿ ಆಮೂಲಾಗ್ರವಾಗಿ ಬದಲಾವಣೆ ತರಲು ಬಳಸಬೇಕು ಎಂದು ಮುಖ್ಯಮಂತ್ರಿ ಚಂದ್ರು ಸಲಹೆ ನೀಡಿದರು.

ಈ ಸಮಾಜದ ಮಕ್ಕಳಿಗೆ ವಿಶ್ವ ಗುಣಮಟ್ಟದ ಆಧುನಿಕ ಸರ್ಕಾರಿ ಶಿಕ್ಷಣ ವ್ಯವಸ್ಥೆಯನ್ನು ಕಲ್ಪಿಸುವಂತಹ ಯೋಜನೆಗಳು ಜಾರಿಯಾಗಬೇಕು ಎಂದು ಅವರು ತಿಳಿಸಿದರು.

ಒಳ ಮೀಸಲಿಗೆ ಸಚಿವ ಸಂಪುಟ ಒಪ್ಪಿಗೆ ಸ್ವಾಗತಾರ್ಹ: ಮುಖ್ಯಮಂತ್ರಿ ಚಂದ್ರು Read More

ಮತ ಕಳವಿನ ಬಗ್ಗೆ ಸುಪ್ರೀಂ ಕೋರ್ಟ್ ನ್ಯಾಯಾಧೀಶರ ಆಯೋಗ ರಚಿಸಿ ತನಿಖೆ ಮಾಡಿ:ಆಪ್

ಬೆಂಗಳೂರು: ಮತ ಕಳವಿನ ಬಗ್ಗೆ ಕೂಡಲೇ ಸರ್ವೋಚ್ಚ ನ್ಯಾಯಾಲಯದ ಹಾಲಿ ನ್ಯಾಯಾಧೀಶರಿಂದ ನ್ಯಾಯಾಂಗ ಆಯೋಗ ರಚಿಸಿ ತನಿಖೆ ನಡೆಸಬೇಕೆಂದು ಆಮ್ ಆದ್ಮಿ ಪಕ್ಷ ಆಗ್ರಹಿಸಿದೆ.

ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಇತ್ತೀಚಿನ ವರ್ಷಗಳಲ್ಲಿ ನಡೆದಿರುವ ಮತಕಳವಿನ ಆರೋಪದ ಬಗ್ಗೆ ಚುನಾವಣಾ ಆಯೋಗವು ರಾಷ್ಟ್ರದ ಜನತೆಗೆ ನಿರಾಧಾರ ಎಂದು ನಿರೂಪಿಸುವ ಕ್ರಮಗಳನ್ನು ತೆಗೆದುಕೊಳ್ಳದೆ ರಾಜಕೀಯ ನಾಯಕರುಗಳ ರೀತಿಯಲ್ಲಿ ಪ್ರತ್ಯಾರೋಪವನ್ನು ಮಾಡುತ್ತಿರುವುದು ಅಸಂವಿಧಾನಿಕ ಕ್ರಮ ಎಂದು ಆಮ್ ಆದ್ಮಿ ಪಕ್ಷದ ಸಂಘಟನಾ ಕಾರ್ಯದರ್ಶಿ ಅಶೋಕ್ ಮೃತ್ಯುಂಜಯ ಎಕ್ಸ್ ಖಾತೆಯಲ್ಲಿ ಒತ್ತಾಯಿಸಿದ್ದಾರೆ.

ಕೂಡಲೇ ಕೇಂದ್ರ ಸರ್ಕಾರವು ಸರ್ವೋಚ್ಚ ನ್ಯಾಯಾಲಯದ ಹಾಲಿ ನ್ಯಾಯಾಧೀಶರುಗಳ ಆಯೋಗವನ್ನು ರಚಿಸಿ ಸಮಗ್ರ ತನಿಖೆಯನ್ನು ನಡೆಸಬೇಕು ಎಂದು ಅಶೋಕ್ ಮೃತ್ಯುಂಜಯ ಒತ್ತಾಯಿಸಿದ್ದಾರೆ.

ಇತ್ತೀಚಿನ ವರ್ಷಗಳಲ್ಲಿ ನ್ಯಾಯ ಸಮ್ಮತವಾದ ಚುನಾವಣೆಗಳನ್ನು ನಡೆಸಲಾಗದೆ ಸಂಪೂರ್ಣ ವೈಫಲ್ಯ ಹೊಂದಿರುವ ಕೇಂದ್ರ ಚುನಾವಣಾ ಆಯೋಗವು ತನ್ನ ತಪ್ಪನ್ನು ಮರೆಮಾಚಲು ಈ ರೀತಿ ರಾಜಕೀಯ ಪ್ರೇರಿತ ಸುದ್ದಿಗೋಷ್ಠಿಗಳನ್ನು ಮಾಡುವುದು ಎಷ್ಟರಮಟ್ಟಿಗೆ ಸರಿ ಎಂದು ಅವರು ಪ್ರಶ್ನಿಸಿದ್ದಾರೆ.

ಮುಂಬರುವ ದಿನಗಳಲ್ಲಿ ರಾಷ್ಟ್ರದ ಯುವ ಪೀಳಿಗೆ ರಾಷ್ಟ್ರದ ಸಂವಿಧಾನ ಹಾಗೂ ಮತದಾನ ಪ್ರಕ್ರಿಯೆಗಳಲ್ಲಿಯೇ ನಂಬಿಕೆಯನ್ನು ಕಳೆದುಕೊಳ್ಳುವ ಮುಂಚೆ ಎಲ್ಲರೂ ಎಚ್ಚೆತ್ತುಕೊಂಡು ಎಚ್ಚರಿಕೆಯ ನಡೆಯನ್ನು ಪ್ರದರ್ಶಿಸಬೇಕಾಗಿದೆ.

ರಾಷ್ಟ್ರದಲ್ಲಿ ಪ್ರಜಾಪ್ರಭುತ್ವವನ್ನು ಉಳಿಸುವ ಮಹತ್ವದ ಜವಾಬ್ದಾರಿ ಎಲ್ಲರ ಮೇಲು ಇದೆ. ಈ ರೀತಿಯ ರಾಜಕೀಯ ಆರೋಪ ಪ್ರತ್ಯಾರೋಪಗಳನ್ನು ಮಾಡುವುದು ಸರಿಯಲ್ಲ ಎಂದು ಅಶೋಕ್ ಮೃತ್ಯುಂಜಯ ಅಭಿಪ್ರಾಯ ಪಟ್ಟಿದ್ದಾರೆ.

ಮತ ಕಳವಿನ ಬಗ್ಗೆ ಸುಪ್ರೀಂ ಕೋರ್ಟ್ ನ್ಯಾಯಾಧೀಶರ ಆಯೋಗ ರಚಿಸಿ ತನಿಖೆ ಮಾಡಿ:ಆಪ್ Read More

ಸಂಜೆ ನ್ಯಾಯಾಲಯಗಳ ಸ್ಥಾಪನೆಗೆಎಎಪಿ ವಿರೋಧ

ಬೆಂಗಳೂರು: ಕೇಂದ್ರ ಸರ್ಕಾರವು ನ್ಯಾಯಾಲಯ ಕಲಾಪಗಳನ್ನು ಸಂಜೆ 5 ರಿಂದ 9 ರ ತನಕ ವಿಸ್ತರಿಸಿ ಸಂಜೆ ನ್ಯಾಯಾಲಯಗಳನ್ನು ಸ್ಥಾಪಿಸುವುದಕ್ಕೆ ಆಮ್ ಆದ್ಮಿ ಪಾರ್ಟಿ ವಿರೋಧಿಸಿದೆ‌.

ಸಂಜೆ ನ್ಯಾಯಾಲಯಗಳನ್ನು ಸ್ಥಾಪಿಸುವುದು
ಸಂಪೂರ್ಣ ವೈಜ್ಞಾನಿಕ ಹಾಗೂ ವಕೀಲರ ವೃತ್ತಿಪರತೆಗೆ ಮಾಡುತ್ತಿರುವ ದ್ರೋಹ, ಯಾವುದೇ ಕಾರಣಕ್ಕೂ ಸಂಜೆ ನ್ಯಾಯಾಲಯಗಳನ್ನು ಮಾಡಲು ಬಿಡುವುದಿಲ್ಲ ಎಂದು ಆಮ್ ಆದ್ಮಿ ಪಕ್ಷದ ಕಾನೂನು ವಿಭಾಗದ ಮುಖ್ಯಸ್ಥ ಲಕ್ಷ್ಮಿಕಾಂತರಾವ್ ಸರ್ಕಾರಕ್ಕೆ ಎಚ್ಚರಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಈ ಎಚ್ಚರಿಕೆ ನೀಡಿದ ಅವರು,1999 ರಲ್ಲಿ ಅಂದಿನ ಬಿಜೆಪಿ ಸರ್ಕಾರದ ಕಾನೂನು ಸಚಿವರಾಗಿದ್ದ ರಾಮ್ ಜೇಠ್ಮಲಾನಿ ಇದೇ ರೀತಿಯ ಪ್ರಸ್ತಾಪವನ್ನು ತಂದಿದ್ದರು. ಅಂದು ವಕೀಲರುಗಳ ಪ್ರತಿಭಟನೆಯಿಂದ ಈ ನಿರ್ಣಯವನ್ನು ಹಿಂಪಡೆಯಲಾಗಿತ್ತು ಎಂದು ತಿಳಿಸಿದರು.

ಈಗ ಮತ್ತೆ ಸಂಜೆ ನ್ಯಾಯಾಲಯಗಳನ್ನು ಮರು ಸ್ಥಾಪಿಸ ಹೊರಟಿರುವುದು ನಿಜಕ್ಕೂ ಖಂಡನೀಯ,ಇದು ಸಂವಿಧಾನದ 22 ನೆ ವಿಧಿಯ ಸಂಪೂರ್ಣ ಉಲ್ಲಂಘನೆ ಆಗುತ್ತದೆ ಎಂದು ಹೇಳಿದರು.

ನ್ಯಾಯಾಲಯಗಳು ಎಂದಿಗೂ ನ್ಯಾಯ ದೇಗುಲಗಳೆ ಹೊರತು ಉತ್ಪಾದಿಸುವ ಕಾರ್ಖಾನೆಗಳಲ್ಲ, ಕಕ್ಷಿದಾರರು ತಮ್ಮ ವಕೀಲರುಗಳನ್ನು ನೇಮಿಸಿಕೊಳ್ಳಲು ಸಾಧ್ಯವೇ ಆಗದಂತಹ ವಾತಾವರಣ ನಿರ್ಮಾಣವಾಗುತ್ತದೆ ಎಂದು ಲಕ್ಷ್ಮಿಕಾಂತರಾವ್ ತಿಳಿಸಿದರು.

ಸಂಜೆಯ ಮೇಲೆ ವಕೀಲರು ತಮ್ಮ ಕಕ್ಷಿದಾರರ ಅಹವಾಲು ಗಳನ್ನು ಆಲಿಸಲು,ಚರ್ಚಿಸಲು, ನಿರ್ಧಾರ ತೆಗೆದುಕೊಳ್ಳಲು ಹಾಗೂ ಮರು ದಿವಸದ ಕೇಸ್ ಫೈಲ್ ಗಳನ್ನು ತಯಾರು ಮಾಡಿಕೊಳ್ಳಲು ಸಮಯ ಬೇಕಾಗುತ್ತದೆ. ಕುಟುಂಬಗಳೊಂದಿಗೆ ಸಮಯವನ್ನು ನೀಡಲು ಸಾಧ್ಯವಾಗದಂತಹ ಪರಿಸ್ಥಿತಿ ಈಗಾಗಲೇ ಇರುವಾಗ ಇಂತಹ ಅವೈಜ್ಞಾನಿಕ ನಿರ್ಧಾರ ಸಹಿಸಲು ಸಾಧ್ಯವಿಲ್ಲ ಎಂದು ಅಸನಾಧಾನ ವ್ಯಕ್ತಪಡಿಸಿದರು.

ಸರ್ಕಾರಗಳಿಗೆ ನಿಜವಾಗಲೂ ಕೇಸುಗಳನ್ನು ಶೀಘ್ರ ವಿಲೇವಾರಿ ಮಾಡಬೇಕಾದ ಮನಸ್ಸಿದ್ದಲ್ಲಿ ಕೂಡಲೇ ಖಾಲಿ ಇರುವ ನ್ಯಾಯಾಂಗ ಅಧಿಕಾರಿಗಳನ್ನು ಹಾಗೂ ಸಿಬ್ಬಂದಿಗಳನ್ನು ನೇಮಕ ಮಾಡಿಕೊಳ್ಳಬೇಕು, ನಿವೃತ್ತ ನ್ಯಾಯಾಧೀಶರು, ಟೈಪಿಸ್ಟ್ ಗಳು ಹಾಗೂ ಸ್ಟೆನೋಗ್ರಾಫರ್ ಗಳನ್ನು ನ್ಯಾಯಾಂಗಗಳ ಕಲಾಪಗಳಲ್ಲಿ ನೆರವು ನೀಡಲು ಬಳಸಿಕೊಳ್ಳಬೇಕು ಹೀಗಾದಲ್ಲಿ ಮಾತ್ರ ಮೊಕದ್ದಮೆಗಳ ಶೀಘ್ರ ವಿಲೇವಾರಿಯಾಗಲು ಸಾಧ್ಯ,ಅದು ಬಿಟ್ಟು ಕೇಂದ್ರ ಸರ್ಕಾರ ಇಂತಹ ವ್ಯತಿರಿಕ್ತ ನಿರ್ಧಾರಗಳನ್ನು ತೆಗೆದುಕೊಳ್ಳುವುದನ್ನು ರಾಜ್ಯ ಸರ್ಕಾರವು ಯಾವುದೇ ಕಾರಣಕ್ಕೂ ಒಪ್ಪಬಾರದು ಎಂದು ಲಕ್ಷ್ಮಿಕಾಂತ್ ರಾವ್ ಎಚ್ಚರಿಸಿದರು.

ಸುದ್ದಿಗೋಷ್ಠಿಯಲ್ಲಿ ಪಕ್ಷದ ಕಾನೂನು ವಿಭಾಗದ ವಕೀಲ ಹಾಗೂ ರಾಜ್ಯ ಉಪಾಧ್ಯಕ್ಷ ನಂಜಪ್ಪ ಕಾಳೇಗೌಡ, ಯುವ ಘಟಕದ ರಾಜ್ಯಾಧ್ಯಕ್ಷ ಲೋಹಿತ್ ಹನುಮಾಪುರ ಉಪಸ್ಥಿತರಿದ್ದರು.

ಸಂಜೆ ನ್ಯಾಯಾಲಯಗಳ ಸ್ಥಾಪನೆಗೆಎಎಪಿ ವಿರೋಧ Read More