ಬಿಬಿಎಂಪಿ ಅರಣ್ಯಾಧಿಕಾರಿಗಳ ಅಮಾನತಿಗೆ ಆಪ್ ಆಗ್ರಹ

ಬೆಂಗಳೂರು: ಬೆಂಗಳೂರಿನಲ್ಲಿ ಮರಗಳು ಬಿದ್ದು ಸಾವು,ನೋವು ಉಂಟಾಗುವುದು ಹೆಚ್ಚುತ್ತಲೇ ಇದ್ದು,ಇದಕ್ಕೆ ಬಿಬಿಎಂಪಿ ಅರಣ್ಯಾಧಿಕಾರಿಗಳೆ ಹೊಣೆ ಎಂದು ಆಮ್ ಆದ್ಮಿ ಪಾರ್ಟಿ ಆಕ್ರೋಶ ವ್ಯಕ್ತಪಡಿಸಿದೆ.

ಮರ ಬಿದ್ದು ಅನಾಹುತವಾಗುವ ಮೊದಲೇ ಎಚ್ಚೆತ್ತುಕೊಂಡು‌ ಒಣಗಿದ ಹಾಗೂ ಶಿಥಿಲವಾದ ಮರಗಳನ್ನು ಕತ್ತರಿಸಬೇಕಿತ್ತು.ಹಾಗೆ ಮಾಡದೆ ಜನರ ಪ್ರಾಣದ ಜತೆ ಚೆಲ್ಲಾಟವಾಡುವ ಅರಣ್ಯಾಧಿಕಾರಿಗಳನ್ನು ತಕ್ಷಣ ಅಮಾನತು ಪಡಿಸಬೇಕೆಂದು ಆಪ್ ಕಾರ್ಯಾಧ್ಯಕ್ಷ ಸೀತಾರಾಮ್ ಗುಂಡಪ್ಪ ಒತ್ತಾಯಿಸಿದರು.

ನಿನ್ನೆ ಬೆಂಗಳೂರಿನ ಶ್ರೀನಗರದಲ್ಲಿ ಮರದ ಕೊಂಬೆ ಬಿದ್ದು ಮಾರಣಾಂತಿಕವಾಗಿ ಗಾಯಗೊಂಡಿರುವ ಯುವಕ ಅಕ್ಷಯ್ ಅವರನ್ನು ಜಯನಗರದ ಅಪೋಲೋ ಆಸ್ಪತ್ರೆಯಲ್ಲಿ ಆಮ್ ಆದ್ಮಿ ಪಕ್ಷದ ಕಾರ್ಯಕರ್ತರೊಂದಿಗೆ ಭೇಟಿ ಆರೋಗ್ಯ ವಿಚಾರಿಸಿದ ನಂತರ ಸೀತಾರಾಮ್ ಗುಂಡಪ್ಪ ಸುದ್ದಿಗಾರರೊಂದಿಗೆ ಮಾತನಾಡಿದರು.

ಈ ದುರ್ಘಟನೆಗೆ ಕಾರಣವಾಗಿರುವ ಬಿಬಿಎಂಪಿಯ ಅರಣ್ಯ ವಿಭಾಗದ ಉನ್ನತ ಅಧಿಕಾರಿಗಳನ್ನು ಕೂಡಲೇ ಅಮಾನತು ಮಾಡಬೇಕೆಂದು ಸರ್ಕಾರವನ್ನು ಆಗ್ರಹಿಸಿದರು.

ನಮ್ಮ ಪಕ್ಷದ ಕಾರ್ಯಕರ್ತರು ಹಲವು ಬಾರಿ ಹಳೆಯ ಮರಗಳು ಹಾಗೂ ಕೊಂಬೆಗಳನ್ನು ತೆಗೆಯುವಂತೆ ದೂರು ನೀಡುತ್ತಲೇ ಬಂದಿದ್ದಾರೆ. ಆದರೆ ಯಾವುದೇ ರೀತಿಯ ಮುನ್ನೆಚ್ಚರಿಕೆ ಕ್ರಮವನ್ನು ತೆಗೆದುಕೊಳ್ಳಲು ಬಿಬಿಎಂಪಿಯ ಅರಣ್ಯ ವಲಯದ ಅಧಿಕಾರಿಗಳು ಮುಂದಾಗುತ್ತಿಲ್ಲ ಎಂದು ಗಂಭೀರ ಆರೋಪ ಮಾಡಿದರು.

ಈ ಅಧಿಕಾರಿಗಳ ಬೇಜವಾಬ್ದಾರಿ ಹಾಗೂ ನಿರ್ಲಕ್ಷ್ಯದಿಂದ ಅಕ್ಷಯ್ ನಂತಹ ಹಕವಾರು ನಾಗರಿಕರ ಪ್ರಾಣಕ್ಕೆ ಸಂಚಕಾರ ಬಂದಿದೆ ಎಂದು ಸೀತಾರಾಮ್ ಗುಂಡಪ್ಪ ಆತಂಕ ವ್ಯಕ್ತಪಡಿಸಿದರು.

ಇಂತಹ ಅನೇಕ ದುರ್ಘಟನೆಗಳು ಪದೇಪದೇ ಸಂಭವಿಸಿದ್ದರೂ ಸಹ ಎಚ್ಚೆತ್ತುಕೊಳ್ಳುವಲ್ಲಿ ಅಧಿಕಾರಯ ವಿಫಲರಾಗುತ್ತಿದ್ದಾರೆ,
ಸರ್ಕಾರ ಅಧಿಕಾರಿಗಳ
ಉತ್ತರದಾಯಿತ್ವವನ್ನು ಪ್ರಶ್ನಿಸುವ ತಾಕತ್ತು ಹೊಂದಿದ್ದಲ್ಲಿ ಕೂಡಲೇ ಈ ವಿಭಾಗದ ಉನ್ನತ ಅಧಿಕಾರಿಗಳನ್ನು ಅಮಾನತು ಮಾಡಿ ಕ್ರಿಮಿನಲ್ ಮೊಕದ್ದಮೆಯನ್ನು ಹೂಡಿ ಕಠಿಣ ಕ್ರಮ ತೆಗೆದುಕೊಳ್ಳಬೇಕೆಂದು ಸೀತಾರಾಮ್ ಗುಂಡಪ್ಪ ಆಗ್ರಹಿಸಿದರು.

ಪಕ್ಷದ ಮುಖಂಡರುಗಳಾದ ಸರವಣ, ಇರ್ತಾದ್, ವೀಣಾ ಸರಾವ್, ಮಣಿಕಂಠ ಸೇರಿದಂತೆ ಅನೇಕ ಮುಖಂಡರುಗಳು ಆಕ್ರೋಶ ವ್ಯಕ್ತಪಡಿಸಿದರು.

ಬಿಬಿಎಂಪಿ ಅರಣ್ಯಾಧಿಕಾರಿಗಳ ಅಮಾನತಿಗೆ ಆಪ್ ಆಗ್ರಹ Read More

ಸಿಎಂ,ಡಿಸಿಎಂ, ಗೃಹ ಸಚಿವರ ರಾಜೀನಾಮೆಗೆ ಸೀತಾರಾಮ್ ಗುಂಡಪ್ಪ ಆಗ್ರಹ

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದ ಕಾಲ್ತುಳಿತ ಪ್ರಕರಣದಲ್ಲಿ ಅಮಾಯಕ 11 ಜನ ಅಭಿಮಾನಿಗಳ ಮರಣದ ಹೊಣೆ ಹೊತ್ತು ಸಿಎಂ,ಡಿಸಿಎಂ, ಗೃಹ ಸಚಿವರು ರಾಜೀನಾಮೆ ನೀಡಬೇಕೆಂದು ಆಮ್ ಆದ್ಮಿ ಪಕ್ಷ ಆಗ್ರಹಿಸಿದೆ.

ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನ ವನದಲ್ಲಿ
ಆಮ್ ಆದ್ಮಿ ಪಕ್ಷದಿಂದ‌ ಸರ್ಕಾರದ ‌ವಿರುದ್ಧ ಪ್ರತಿಭಟನೆ ನಡೆಸಿ ಸಿಎಂ,ಡಿಸಿಎಂ, ಗೃಹ ಸಚಿವರ ರಾಜೀನಾಮೆಗೆ‌ ಒತ್ತಾಯಿಸಲಾಯಿತು.

ಈ ವೇಳೆ‌ಆಮ್ ಆದ್ಮಿ ಪಕ್ಷದ ಕಾರ್ಯಾಧ್ಯಕ್ಷ ಸೀತಾರಾಮ್ ಗುಂಡಪ್ಪ ಅವರು ಮಾತನಾಡಿ, ರಾಜ್ಯ ಕಾಂಗ್ರೆಸ್ ಸರ್ಕಾರದ ನಾಚಿಕೆಗೇಡಿನ, ಬಂಡತನದ ನಡೆಯಿಂದಾಗಿ 11 ಮಂದಿ ಅಮಾಯಕ ಅಭಿಮಾನಿಗಳು ಜೀವ ಕಳೆದುಕೊಂಡಿದ್ದಾರೆ ಎಂದು ಕಿಡಿಕಾರಿದರು.

ಸರ್ಕಾರ ತನ್ನ ತಪ್ಪನ್ನು ಮುಚ್ಚಿಕೊಳ್ಳಲು ನಿಸ್ಸಹಾಯಕ ಪೊಲೀಸ್ ಅಧಿಕಾರಿಗಳು ಹಾಗೂ ಕೆಲ ಕಂಪನಿಯ ನೌಕರರುಗಳನ್ನು ಬಂಧಿಸಿ ಪ್ರಕರಣವನ್ನು ಮುಚ್ಚಿ ಹಾಕುವ ಕುತಂತ್ರ ನಡೆಸುತ್ತಿದೆ,ಅಮಾಯಕರ ಈ ಸಾವು ಸರ್ಕಾರಿ ಪ್ರಾಯೋಜಿತ ಕಗ್ಗೊಲೆ ಎಂಬಂತೆ ಮೇಲ್ನೋಟಕ್ಕೆ ಕಾಣುತ್ತಿದೆ ಎಂದು ಹೇಳಿದರು.

ಕೂಡಲೇ ಮುಖ್ಯಮಂತ್ರಿಗಳು, ಉಪಮುಖ್ಯಮಂತ್ರಿ ಹಾಗೂ ಗೃಹ ಸಚಿವರು ರಾಜೀನಾಮೆ ನೀಡಿ ತೊಲಗಬೇಕೆಂದು ಸೀತಾರಾಮ್ ಗುಂಡಪ್ಪ ಆಗ್ರಹಿಸಿದರು.

ಈಗಾಗಲೇ ಆಮ್ ಆದ್ಮಿ ಪಕ್ಷದ ಕಾನೂನು ಘಟಕವು ರಾಜ್ಯ ಉಚ್ಚ ನ್ಯಾಯಾಲಯದಲ್ಲಿ ಪ್ರಕರಣವನ್ನು ದಾಖಲಿಸಿದ ಪರಿಣಾಮವಾಗಿ ನ್ಯಾಯಾಲಯದಿಂದ ತಪ್ಪಿಸಿಕೊಳ್ಳಲು ಹಾಗೂ ಪ್ರಕರಣದಿಂದ ನುಣಿಚಿಕೊಳ್ಳಲು ಮುಖ್ಯಮಂತ್ರಿಗಳು ಹಾಗೂ ಉಪಮುಖ್ಯಮಂತ್ರಿಗಳು ಅಂದಾಜುಂದಿ ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದಾರೆ ಎಂದು ‌ಟೀಕಿಸಿದರು.

ಜನರು ಸೂಕ್ಷ್ಮ ಕಣ್ಣುಗಳಿಂದ ಎಲ್ಲವನ್ನು ಗಮನಿಸುತ್ತಿದ್ದಾರೆ ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುತ್ತಾರೆ ಎಂದು ಸೀತಾರಾಮ್ ಗುಂಡಪ್ಪ ಎಚ್ಚರಿಸಿದರು.

ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬೆಂಗಳೂರು ನಗರ ಅಧ್ಯಕ್ಷ ಡಾ. ಸತೀಶ್ ಮಾತನಾಡಿ ನಮ್ಮ ಪಕ್ಷ ತಪ್ಪಿತಸ್ಥರಾಗಿರುವ ಮುಖ್ಯಮಂತ್ರಿ, ಉಪಮುಖ್ಯಮಂತ್ರಿಗಳು ರಾಜೀನಾಮೆ ನೀಡುವ ತನಕ ಸುದೀರ್ಘ ಹೋರಾಟವನ್ನು ನಡೆಸಲಿದೆ ಎಂದು ತಿಳಿಸಿದರು.

ಪ್ರತಿಭಟನೆಯಲ್ಲಿ ಮುಖಂಡರುಗಳಾದ ಜಗದೀಶ್ ಚಂದ್ರ, ಗೋಪಾಲ್, ಡಾ.ಯಲ್ಲಪ್ಪ, ಅನಿಲ್ ನಾಚಪ್ಪ ,ಶಶಿಧರ್ ಆರಾಧ್ಯ ,ಸರವಣನ್,ಬಸವರಾಜ್ ಮೋಹನ್ ರಾಜ್, ಅಶೋಕ್ ಮೃತ್ಯುಂಜಯ ,ಜಗದೀಶ್ ಬಾಬು,
ಭಾನು ಪ್ರಿಯಾ ,ಪುಷ್ಪಾ ಕೇಶವ್,
ಶರಣ್ಯ ,ಎಡ್ವರ್ಡ್,ಅನಿಲ್ ಕುಮಾರ್ ,ನವೀನ್ ಅಯ್ಯರ್,
ಅಣ್ಣಾ ನಾಯಕ್,ಪುಟ್ಟಣ್ಣ ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.

ಸಿಎಂ,ಡಿಸಿಎಂ, ಗೃಹ ಸಚಿವರ ರಾಜೀನಾಮೆಗೆ ಸೀತಾರಾಮ್ ಗುಂಡಪ್ಪ ಆಗ್ರಹ Read More

ಸುಗ್ರೀವಾಜ್ಞೆ ನಂತರವೂ ಮೈಕ್ರೋ ಫೈನಾನ್ಸ್ ಹಾವಳಿ ತಪ್ಪಿಲ್ಲ: ಸೀತಾರಾಮ್ ಗುಂಡಪ್ಪ

ಬೆಂಗಳೂರು: ರಾಜ್ಯ ಸರ್ಕಾರ ಹೊರಡಿಸಿದ ಸುಗ್ರೀವಾಜ್ಞೆ ನಂತರವೂ ಸಹ ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಮೈಕ್ರೋ ಫೈನಾನ್ಸ್ ಕಂಪನಿಗಳ ಹಾವಳಿ ಮುಂದುವರಿದಿದೆ ಎಂದು ಆಮ್ ಆದ್ಮಿ ಪಕ್ಷದ ಕಾರ್ಯಾಧ್ಯಕ್ಷ ಸೀತಾರಾಮ್ ಗುಂಡಪ್ಪ ಆತಂಕ ವ್ಯಕ್ತಪಡಿಸಿದರು.

ಪಟ್ಟಣದ ಪ್ರವಾಸಿ ಮಂದಿರದಲ್ಲಿ ಫೈನಾನ್ಸ್ ಕಂಪನಿಗಳ ಹಾವಳಿಗಳಿಂದ ತತ್ತರಿಸಿರುವ ರೈತರ ಸಭೆಯಲ್ಲಿ ಭಾಗವಹಿಸಿದ್ದ ಅನೇಕ ರೈತರುಗಳು, ಮಹಿಳೆಯರು ಆಮ್ ಆದ್ಮಿ ಪಕ್ಷದ ಮುಖಂಡರ ಬಳಿ ತಮ್ಮ ಸಮಸ್ಯೆಗಳನ್ನುಅವಲತ್ತುಕೊಂಡರು.
ಅವರೆಲ್ಲರ ಸಮಸ್ಯೆ ಆಲಿಸಿದ ಸೀತಾರಾಮ್ ಗುಂಡಪ್ಪ ಮಾತನಾಡಿದರು‌.

ಮುಖ್ಯಮಂತ್ರಿಗಳಿಗೆ ತನ್ನ ಮಾಂಗಲ್ಯ ಸೂತ್ರವನ್ನು ಕಳುಹಿಸಿದ್ದ ರೈತ ಮಹಿಳೆ ಶೈಲಮ್ಮ ಹಾದರಹಳ್ಳಿ ಮಾತನಾಡಿ, ಇನ್ನೂ ಸಹ ಧರ್ಮಸ್ಥಳ ಸಹಕಾರಿ ಸಂಘ, ಮುತ್ತೂಟ್ ಫೈನಾನ್ಸ್, ಬೆಲ್ ಸ್ಟಾರ್, ಬಜಾಜ್ ಫೈನಾನ್ಸ್ ಇನ್ನಿತರ ಕಂಪನಿಗಳು ಪ್ರತಿ ದಿವ ಹಳ್ಳಿ ಹಳ್ಳಿಗಳಲ್ಲಿ ರೈತರಿಗೆ ನೋಟಿಸ್ ನೀಡುವ ಮೂಲಕ ಒತ್ತಡ ಹಾಗೂ ಬೆದರಿಕೆಯನ್ನು ಒಡ್ಡುತ್ತಿದ್ದಾರೆ ಎಂದು ಆರೋಪಿಸಿದರು.

ಕೂಡಲೇ ಮುಖ್ಯಮಂತ್ರಿಗಳು, ಗೃಹ ಸಚಿವರು ಇತ್ತ ಕಡೆ ಗಮನಹರಿಸಿ ಪೊಲೀಸ್ ಇಲಾಖೆ ಅಧಿಕಾರಿಗಳಿಗೆ ಕಠಿಣ ಎಚ್ಚರಿಕೆಯನ್ನು ನೀಡಿ ಈ ದುರುಳ ಫೈನಾನ್ಸ್ ಕಂಪನಿಗಳ ಮಾಲೀಕರುಗಳ ವಿರುದ್ಧ ಕೇಸನ್ನು ದಾಖಲಿಸಿ ಬಂಧಿಸಿ ಕಠಿಣ ಕ್ರಮ ತೆಗೆದುಕೊಳ್ಳಬೇಕೆಂದು ಸೀತಾರಾಮ ಗುಂಡಪ್ಪ ಒತ್ತಾಯಿಸಿದರು.

ಆಮ್ ಆದ್ಮಿ ಪಕ್ಷವು ನೊಂದ ಈ ರೈತರ ಪರ ಹಗಲಿರುಳು ಇರುತ್ತೇವೆ ಹಾಗೂ ಯಾವುದೇ ಕಾರಣಕ್ಕೂ ಯಾವ ಒತ್ತಡಕ್ಕೂ ಬೆದರಿಕೆಗಳಿಗೂ ಮಣಿಯಬಾರದು ಹಾಗೂ ಆತ್ಮಹತ್ಯೆಯ ದಾರಿಗೆ ಹೋಗಬಾರದೆಂದು ಮನವರಿಕೆ ಮಾಡಿದರು.

ಸಭೆಯಲ್ಲಿ ರಾಜ್ಯ ಉತ್ತರಭಾಗದ ಸಂಘಟನಾ ಕಾರ್ಯದರ್ಶಿ ಅರ್ಜುನ್ ಹಲಗೆ ಗೌಡರ, ಜಿಲ್ಲಾ ಅಧ್ಯಕ್ಷ ಹನುಮಂತಪ್ಪ ಕಬ್ಬಾರ್, ಎಂ, ಎನ್, ನಾಯಕ್, ರಾಜು ಅಂಗಡಿ, ಮಂಜುನಾಥ್ ಸಂಬೋಜಿ ಇನ್ನಿತರ ಸ್ಥಳೀಯ ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.

ಸುಗ್ರೀವಾಜ್ಞೆ ನಂತರವೂ ಮೈಕ್ರೋ ಫೈನಾನ್ಸ್ ಹಾವಳಿ ತಪ್ಪಿಲ್ಲ: ಸೀತಾರಾಮ್ ಗುಂಡಪ್ಪ Read More

ನೈತಿಕತೆ ಇದ್ದರೆ ಸೋಮಶೇಖರ್ ರಾಜೀನಾಮೆ ನೀಡಲಿ: ಆಪ್ ಅಗ್ರಹ

ಬೆಂಗಳೂರು: ಬಿಜೆಪಿಯಿಂದ ಉಚ್ಛಾಟಿತವಾಗಿರುವ ಎಸ್. ಟಿ. ಸೋಮಶೇಖರ್ ಅವರು ನೈತಿಕತೆ ಇದ್ದರೆ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲಿ ಎಂದು ಆಪ್ ಒತ್ತಾಯಿಸಿದೆ.

ಸೋಮಶೇಖರ್ ಅವರನ್ನು ಬಿಜೆಪಿಯಿಂದ ಉಚ್ಚಾಟಿಸಲಾಗಿದೆ.ಅವರ ವಿರುದ್ಧದ ಕ್ರಮ ಬಹಳ ಹಿಂದೆಯೇ ಆಗಬೇಕಾಗಿತ್ತು. ಏಕೆಂದರೆ ಒಬ್ಬ ಅಭ್ಯರ್ಥಿ ಬಿಜೆಪಿ ಚಿನ್ಹೆಯಿಂದ ಸ್ಪರ್ಧಿಸಿ ಬಿಜೆಪಿ ಕಾರ್ಯಕರ್ತರನ್ನು ಬಳಸಿಕೊಂಡು ಬಿಜೆಪಿಯ ತತ್ವ ಸಿದ್ಧಾಂತಕ್ಕೆ ಬದ್ಧನಾಗಿರುವುದಾಗಿ ಹೇಳಿ ಮತದಾರರನ್ನು ಓಲೈಸಿ ಮತಗಳನ್ನು ಪಡೆದು ಗೆದ್ದ ನಂತರ ಬದಲಾಗಿದ್ದು ಎಷ್ಟು ಸರಿ ಎಂದು ಆಮ್ ಆದ್ಮಿ ಪಕ್ಷದ ಯಶವಂತಪುರ ವಿಧಾನಸಭಾ ಕ್ಷೇತ್ರದ ನಿಕಟಪೂರ್ವ ಅಭ್ಯರ್ಥಿ ಶಶಿಧರ್ ಆರಾಧ್ಯ ಪ್ರಶ್ನಿಸಿದ್ದಾರೆ.

ಊಸರವಳ್ಳಿ ತನ್ನ ಬಣ್ಣವನ್ನು ಬದಲಾಯಿಸುವಂತೆ ಬಿಜೆಪಿಯ ಶಾಸಕನಾಗಿದ್ದರೂ ಸೋಮಶೇಖರ್ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿ ಕಾಂಗ್ರೆಸ್ ಪಕ್ಷದ ಕಾರ್ಯಕ್ರಮಗಳಿಗೆ ಹಾಜರಾಗಿ ತಮ್ಮನ್ನು ಗೆಲ್ಲಿಸಿದ ಕಾರ್ಯಕರ್ತರನ್ನು ಕಡೆಗಣಿಸಿದ್ದಕ್ಕೆ, ತಾವು ಮಾಡಿದ ಭ್ರಷ್ಟಾಚಾರಕ್ಕೆ ಅವರಿಗೆ ಇಂದು ತಕ್ಕ ಉತ್ತರ ದೊರಕಿದೆ ಎಂದು ಶಶಿಧರ್ ಆರಾಧ್ಯ ತಿಳಿಸಿದರು

ಸೋಮಶೇಖರ್ ಅಭಿವೃದ್ಧಿ ಹೆಸರಿನಲ್ಲಿ ಯಶವಂತಪುರ ವಿಧಾನಸಭಾ ಕ್ಷೇತ್ರವನ್ನು ಕಸವಂತಪುರ ಕ್ಷೇತ್ರ ಮಾಡಿದ್ದಲ್ಲದೆ ಕ್ಷೇತ್ರದಲ್ಲಿ ಅತಿ ಹೆಚ್ಚು ಭ್ರಷ್ಟಾಚಾರ ಮಾಡುವವರನ್ನು ಸಾಕಿ ಸಲಹಿ ಅವರ ಪೋಷಣೆಗೆ ನಿಂತಿರುವುದು ಜಗತ್ ಜಾಹಿರಾಗಿದೆ ಎಂದು ಹೇಳಿದರು.

ತಮ್ಮನ್ನು ಪ್ರಶ್ನಿಸುವವರ ವಿರುದ್ಧ ನಾನಾ ರೀತಿಯ ಕೇಸು ಗಳನ್ನು ಹಾಕಿಸಿ ಅವರನ್ನು ಹತ್ತಿಕ್ಕುವ ಕೆಲಸವನ್ನು ಮಾಡುತ್ತಿದ್ದಾರೆ. ಇವರಿಗೆ ನಿಜವಾದ ನೈತಿಕತೆ ಇದ್ದಲ್ಲಿ ಅವರು ಈ ಕೂಡಲೇ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಜನರ ಮುಂದೆ ಬಂದು ಮತ್ತೊಮ್ಮೆ ಚುನಾವಣೆ ಎದುರಿಸಿ ತೋರಿಸಲಿ ಎಂದು ಸವಾಲು ಹಾಕಿದರು.

ಚುನಾವಣೆಗೆ ನಿಂತರೆ ನಿಮ್ಮ ನಿಜವಾದ ಬಣ್ಣ ಬಯಲಾಗುತ್ತದೆ. ಜನ ನಿಮ್ಮನ್ನು ತಿರಸ್ಕರಿಸಲು ಸಿದ್ಧರಿದ್ದಾರೆ ಇನ್ನು ಮುಂದೆ ನೀವು ಯಾವುದೇ ಕಾರಣಕ್ಕೂ ಶಾಸಕರಾಗಲು ಜನ ಒಪ್ಪುವುದಿಲ್ಲ ನೀವು ಎಲ್ಲ ರೀತಿಯಲ್ಲೂ ಈ ಕ್ಷೇತ್ರವನ್ನು ನಿರ್ಲಕ್ಷಿಸಿದ್ದೀರಿ.

ಬಿಡಿಎ, ಗ್ರೇಟರ್ ಬೆಂಗಳೂರು ಹೆಸರಿನಲ್ಲಿ ರೈತರನ್ನು ಹೆದರಿಸಿ ಬೆದರಿಸಿ ಲೂಟಿ ಮಾಡಲು ಹೊರಟಿರುತ್ತೀರಿ. ಈ ಕ್ಷೇತ್ರದ ಜನರ ಕಷ್ಟಗಳಿಗೆ ಮತ್ತು ಅವರ ಜೊತೆ ಸದಾ ನಿಲ್ಲಲು ಆಮ್ ಆದ್ಮಿ ಪಾರ್ಟಿ ಹೋರಾಟ ನಿರಂತರವಾಗಿ ಮುಂದುವರಿಯುತ್ತದೆ ಎಂದು ಶಶಿಧರ್ ಆರಾಧ್ಯ ಕಟುವಾಗಿ ಹೇಳಿದರು.

ನೈತಿಕತೆ ಇದ್ದರೆ ಸೋಮಶೇಖರ್ ರಾಜೀನಾಮೆ ನೀಡಲಿ: ಆಪ್ ಅಗ್ರಹ Read More

ಶಾಂತಿನಗರ ಕ್ಷೇತ್ರದಲ್ಲಿ ಆಪ್ ನಿಂದ ಬೆಲೆ ಏರಿಕೆ ಅಭಿಯಾನ

ಬೆಂಗಳೂರು: ಆಮ್ ಆದ್ಮಿ ಪಕ್ಷದಿಂದ ಕೇಂದ್ರ ಬಿಜೆಪಿ ಮತ್ತು ರಾಜ್ಯದ ಕಾಂಗ್ರೆಸ್ ಸರ್ಕಾರದ ಬೆಲೆ ಏರಿಕೆ ವಿರೋಧಿಸಿ ನಡೆಯುತ್ತಿರುವ ತುಘಲಕ್ ತೆರಿಗೆ ದರೋಡೆ ಅಭಿಯಾನ ಇಂದು ಶಾಂತಿನಗರ ವಿಧಾನಸಭಾ ಕ್ಷೇತ್ರದಲ್ಲಿ ನಡೆಯಿತು.

ಪಕ್ಷದ ಕಾರ್ಯಾಧ್ಯಕ್ಷ ಸೀತಾರಾಮ್ ಗುಂಡಪ್ಪ ಹಾಗೂ ಬೆಂಗಳೂರು ನಗರ ಮಾಧ್ಯಮ ಉಸ್ತುವಾರಿ ಅನಿಲ್ ನಾಚಪ್ಪ ನೇತೃತ್ವದಲ್ಲಿ ನಡೆದ ಅಭಿಯಾನವು ಬ್ರಿಗೇಡ್ ರಸ್ತೆ, ನೀಲಸಂದ್ರ, ವನ್ನಾರ್ ಪೇಟೆ, ಎಲ್.ಅರ್.ನಗರ, ದೊಮ್ಮಲೂರು ಮತ್ತಿತರ ಜನನಿಬಿಡ ಪ್ರದೇಶಗಳಲ್ಲಿ ಅಭಿಯಾನವನ್ನು ನಡೆಸಲಾಯಿತು.

ಗ್ಯಾಸ್ ಸಿಲಿಂಡರುಗಳು,ಡಿಕೆಶಿ ಟ್ಯಾಕ್ಸ್,ಸಿದ್ದಣ್ಣ ಟ್ಯಾಕ್ಸ್ ಮುಂತಾದ ಘೋಷಣೆಗಳುಳ್ಳ‌ ಭಿತ್ತಿಪತ್ರಗಳನ್ನು ಕಾರ್ಯ ಕಾರ್ಯಕರ್ತರು ಪ್ರದರ್ಶಿಸಿದರು.

ಮತ್ತೆ ಕೆಲವರು ಡಿ.ಕೆ.ಶಿವಕುಮಾರ್,ಸಿದ್ದರಾಮಯ್ಯ‌ಹಾಗೂ ನರೇಂದ್ರ ಮೋದಿ ಅವರುಗಳ ಮುಖವಾಡ ಧರಿಸಿ ಅಣಕು ಪ್ರದರ್ಶನ ಮಾಡಿದರು.

ಕ್ಷೇತ್ರದ ಸಾವಿರಾರು ಕಾರ್ಯಕರ್ತರುಗಳಿಗೆ ಬೆಲೆ ಏರಿಕೆ ಕರಪತ್ರವನ್ನು ನೀಡುವ ಮೂಲಕ ಪಕ್ಷದ ಜನಾಂದೋಲನದಲ್ಲಿ ಸಕ್ರಿಯಗೊಳ್ಳಬೇಕೆಂದು ಪಕ್ಷದ ಕಾರ್ಯಾಧ್ಯಕ್ಷ ಸೀತಾರಾಮ್ ಗುಂಡಪ್ಪ ಮನವಿ ಮಾಡಿದರು.

ಜನಸಾಮಾನ್ಯರ ಧ್ವನಿಯಾಗಿ ಆಮ್ ಆದ್ಮಿ ಪಕ್ಷ ಎಂದಿಗೂ ಹೋರಾಡುತ್ತದೆ. ನೀಚ ಸರ್ಕಾರಗಳು ಬೆಲೆ ಇಳಿಸುವ ತನಕ ನಮ್ಮ ಹೋರಾಟ ಮುಂದುವರೆಯುತ್ತದೆ ಎಂದು ಅನಿಲ್ ನಾಚಪ್ಪ ತಿಳಿಸಿದರು.

ಅಭಿಯಾನದಲ್ಲಿ ಮಹಿಳಾ ಘಟಕದ ಅಧ್ಯಕ್ಷೆ ವೀಣಾ ಸರಾವ್, ಶಿವಕುಮಾರ್ ನಾಯ್ಡು, ಸರವಣ ಸೇರಿದಂತೆ ಮತ್ತಿತರ ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.

ಶಾಂತಿನಗರ ಕ್ಷೇತ್ರದಲ್ಲಿ ಆಪ್ ನಿಂದ ಬೆಲೆ ಏರಿಕೆ ಅಭಿಯಾನ Read More

ಬೆಲೆ ಏರಿಕೆ ಖಂಡಿಸಿ ಬಿಜೆಪಿ, ಕಾಂಗ್ರೆಸ್ ವಿರುದ್ಧ ಎಎಪಿ ಕರಪತ್ರ ಅಭಿಯಾನ

ಬೆಂಗಳೂರು: ನಿರಂತರ‌ ಬೆಲೆ‌ ಏರಿಸುತ್ತಿರುವ ಕಾಂಗ್ರೆಸ್ ಮತ್ತು ಬಿಜೆಪಿ ಸರ್ಕಾರಗಳ ವಿರುದ್ಧ ಆಮ್ ಆದ್ಮಿ ಪಕ್ಷದ ವತಿಯಿಂದ
ಕರಪತ್ರ ಅಭಿಯಾನ ಹಮ್ಮಿಕೊಳ್ಳಲಾಯಿತು.

ಬೆಂಗಳೂರಿನ ಕೆಂಗೇರಿ ವಿಧಾನಸಭಾ ಕ್ಷೇತ್ರದಲ್ಲಿ ಇಂದು ಆಪ್ ಕಾರ್ಯಕರ್ತರು ಬೆಲೆ ಏರಿಕೆಗೆ ಕಾರಣವಾಗಿರುವ ಕಾಂಗ್ರೆಸ್, ಬಿಜೆಪಿ ಸರ್ಕಾರಗಳ ವಿರುದ್ಧ
ತುಘಲಕ್ ಮಾದರಿ ದರೋಡೆ ಎಂಬ ಘೋಶ‌ ವಾಕ್ಯ ದಡಿ ಕರಪತ್ರ ಹಂಚುವ ಮೂಲಕ ಅಭಿಯಾನವನ್ನು ನಡೆಸಿದರು.

ಪಕ್ಷದ ಕಾರ್ಯಾಧ್ಯಕ್ಷ ಸೀತಾರಾಮ್ ಗುಂಡಪ್ಪ ಹಾಗೂ ಯಶವಂತಪುರ ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ಶಶಿಧರ್ ಆರಾಧ್ಯ ಅವರ ನೇತೃತ್ವದಲ್ಲಿ ಅಭಿಯಾನ ಹಮ್ಮಿಕೊಳ್ಳಲಾಯಿತು.

ಈ ವೇಳೆ ನೂರಾರು ಮಂದಿ ನಾಗರಿಕರು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಬೆಲೆ ಏರಿಕೆ ನೀತಿ ವಿರುದ್ಧ ಕಿಡಿಕಾರಿದರು.

ಮುಂದಿನ ದಿನಗಳಲ್ಲಿ ನಾಗರೀಕರು ಬೀದಿಗಿಳಿದು ಹೋರಾಟ ಮಾಡುವ ಪರಿಸ್ಥಿತಿ ಬರುತ್ತದೆ ಎಂದು ಸೀತಾರಾಮ್ ಗುಂಡಪ್ಪ ಎಚ್ಚರಿಸಿದರು.

Lಅಭಿಯಾನದಲ್ಲಿ ಪಕ್ಷದ ಬೆಂಗಳೂರು ಪ್ರಧಾನ ಕಾರ್ಯದರ್ಶಿ ಜಗದೀಶ್ ಚಂದ್ರ, ಪ್ರಸನ್ನ ದೇವಗರೆ ,ವಿಶ್ವನಾಥ್ , ಮುನೇಶ್ ಆನೇಕಲ್, ಜೋಶ್ವ ಸರವಣ ಜಯನಗರ, ಉಮೇಶ್ ಯಾದವ, ದೇವರ ಸಂ ದಾಸರಹಳ್ಳಿ, ನಿರಂಜನ್ ಆಗರ, ಗೌರಿ, ಪುಟ್ಟಣ್ಣ , ಯುವ ಘಟಕದ ಅಧ್ಯಕ್ಷರು
ಪ್ರಸನ್ನ ಕೆಂಗೇರಿ ಹಾಗೂ ಸ್ಥಳೀಯ ಕಾರ್ಯಕರ್ತರು ಭಾಗವಹಿಸಿದ್ದರು.

ಬೆಲೆ ಏರಿಕೆ ಖಂಡಿಸಿ ಬಿಜೆಪಿ, ಕಾಂಗ್ರೆಸ್ ವಿರುದ್ಧ ಎಎಪಿ ಕರಪತ್ರ ಅಭಿಯಾನ Read More

ಆಪ್ ರಾಜ್ಯ ಕಾರ್ಯಾಧ್ಯಕ್ಷರಾಗಿ ಸೀತಾರಾಮ್ ಗುಂಡಪ್ಪ ನೇಮಕ

ಬೆಂಗಳೂರು: ಆಮ್ ಆದ್ಮಿ ಪಕ್ಷದ ಕರ್ನಾಟಕ ರಾಜ್ಯ ಕಾರ್ಯಾಧ್ಯಕ್ಷರಾಗಿ ಪಕ್ಷದ ಹಿರಿಯ ನಾಯಕ ಸೀತಾರಾಮ್ ಗುಂಡಪ್ಪ ನೇಮಕಗೊಂಡಿದ್ದಾರೆ.

ಸೀತಾರಾಮ್ ಗುಂಡಪ್ಪ ನವರು
ಡೆಕ್ಕನ್ ಹೆರಾಲ್ಡ್ , ಹಿಂದುಸ್ತಾನ್ ಟೈಮ್ಸ್ ಮುಂತಾದ ಇಂಗ್ಲಿಷ್ ಪತ್ರಿಕೆಗಳಲ್ಲಿ ಖ್ಯಾತ ಪತ್ರಕರ್ತರಾಗಿದ್ದ ಗುಂಡಪ್ಪನವರ ಸುಪುತ್ರರಾಗಿದ್ದಾರೆ.

ವಿಜ್ಞಾನ ಕ್ಷೇತ್ರದಲ್ಲಿ ಸ್ನಾತಕೋತ್ತರ ಪದವಿ ಹೊಂದಿ ಮುಂಬೈ ವಿಶ್ವವಿದ್ಯಾನಿಲಯದ ಎಂಬಿಎ ಪದವಿ ಪಡೆದಿದ್ದಾರೆ.

ಸೌದಿ ಅರೇಬಿಯಾ , ದುಬೈ , ಅಬುದಾಬಿ, ಇರಾಕ್, ಕಜಿಕಿಸ್ತಾನ್ ಮುಂತಾದ ಸೌದಿ ರಾಷ್ಟ್ರಗಳ ತೈಲ ಹಾಗೂ ಸ್ವಾಭಾವಿಕ ಅನಿಲ ಕಂಪನಿಗಳಲ್ಲಿ ಅನೇಕ ವರ್ಷಗಳ ಕಾಲ ಇಂಜಿನಿಯರಾಗಿ ಸೇವೆ ಸಲ್ಲಿಸಿದ್ದಾರೆ.

ಭಾರತದ ರಾಜಕೀಯ ಕ್ಷೇತ್ರದಲ್ಲಿ ಭ್ರಷ್ಟಾಚಾರವನ್ನು ಸಂಪೂರ್ಣ ಅಳಿಸಿ ಹಾಕಬೇಕೆಂಬ ದಿಶೆಯಲ್ಲಿ ಲೋಕಪಾಲ್ ಹೋರಾಟಕ್ಕಾಗಿ ನಡೆದ ಭ್ರಷ್ಟಾಚಾರ ವಿರುದ್ಧ ಭಾರತ ಜನಾಂದೋಲನದಲ್ಲಿ ಸಕ್ರಿಯವಾಗಿ ಭಾಗವಹಿಸಿ ಆಮ್ ಆದ್ಮಿ ಪಕ್ಷದ ಸಂಸ್ಥಾಪಕ ಸದಸ್ಯರಾಗಿರುವ ಸೀತಾರಾಮ್ ಗುಂಡಪ್ಪನವರು ಪಕ್ಷದ ಅನೇಕ ಪ್ರಮುಖ ಹುದ್ದೆಗಳನ್ನು ನಿಭಾಯಿಸಿದ್ದಾರೆ.

2018 ರಲ್ಲಿ ಬಸವನಗುಡಿ ವಿಧಾನಸಭಾ ಕ್ಷೇತ್ರದಲ್ಲಿ ಹಾಗೂ 2023ರಲ್ಲಿ ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಸ್ಪರ್ಧೆ ಮಾಡಿದ್ದ ಸೀತಾರಾಮ್ ಪಕ್ಷ ಸಂಘಟನೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ.

ಇವರ ನೇಮಕವನ್ನು ಕರ್ನಾಟಕ ರಾಜ್ಯ ಉಸ್ತುವಾರಿ ದಿಲೀಪ್ ಪಾಂಡೆ ಹಾಗೂ ರಾಜ್ಯಾಧ್ಯಕ್ಷ ಡಾ. ಮುಖ್ಯಮಂತ್ರಿ ಚಂದ್ರು ಇಂದು ಘೋಷಿಸಿದರು.

ಆಪ್ ರಾಜ್ಯ ಕಾರ್ಯಾಧ್ಯಕ್ಷರಾಗಿ ಸೀತಾರಾಮ್ ಗುಂಡಪ್ಪ ನೇಮಕ Read More

ಹನಿ ಟ್ರ್ಯಾಪ್ ಹಿಂದಿರುವ ಮಂತ್ರಿ ಪತ್ತೆಯಾಗಲಿ: ಸೀತಾರಾಮ್ ಗುಂಡಪ್ಪ

ಬೆಂಗಳೂರು: ವಿಧಾನಸಭೆಯಲ್ಲಿ ನಿನ್ನೆ ಹಿರಿಯ ಸಚಿವ ಕೆ. ಎನ್. ರಾಜಣ್ಣ ತಮ್ಮ ಮೇಲೆ ಹನಿ ಟ್ರ್ಯಾಪ್ ಮಾಡುವ ಸಂಚು ನಡೆಯುತ್ತಿದೆ ಎಂದು ಆರೋಪಿಸಿದ್ದು,ಇದರ ಹಿಂದಿರುವ ಪ್ರಮುಖ ಮಂತ್ರಿ ಯಾರೆಂದು ಪತ್ತೆಯಾಗಬೇಕೆಂದು ಆಮ್ ಆದ್ಮಿ ಪಕ್ಷದ ರಾಜ್ಯ ಕಾರ್ಯಾಧ್ಯಕ್ಷ ಸೀತಾರಾಮ್ ಗುಂಡಪ್ಪ ಒತ್ತಾಯಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು,
ಇದೇ ರೀತಿ 48 ರಾಜಕೀಯ ವ್ಯಕ್ತಿಗಳ ವಿರುದ್ಧ ಷಡ್ಯಂತ್ರ ರಚಿಸುತ್ತಿದ್ದಾರೆ ಎಂದು ವಿಧಾನಸಭೆಯಲ್ಲಿ ಪ್ರಮುಖ ಮಂತ್ರಿ ಒಬ್ಬರ ವಿರುದ್ಧ ಆರೋಪ ಮಾಡಿದ್ದಾರೆ. ಬಿಜೆಪಿಯ ಪ್ರಮುಖ ಶಾಸಕ ಬಸವರಾಜ ಪಾಟೀಲ್ ಯತ್ನಾಳ್, ಮುನಿರತ್ನಂ ಸೇರಿದಂತೆ ಅನೇಕ ಶಾಸಕರುಗಳು ಚರ್ಚಿಸಿದ್ದಾರೆ. ಇಂತಹ ಗಂಭೀರ ಆರೋಪದ ಹಿಂದಿರುವ ಪ್ರಮುಖ ಮಂತ್ರಿ ಯಾರೆಂಬುದನ್ನು ಕೂಡಲೇ ಸರ್ಕಾರ ಸೂಕ್ತ ಪ್ರಾಧಿಕಾರಗಳಿಂದ ಪತ್ತೆ ಹಚ್ಚಿ ಕಠಿಣ ಶಿಕ್ಷೆಗೆ ಒಳಪಡಿಸಬೇಕೆಂದು ಸೀತಾರಾಮ್ ಗುಂಡಪ್ಪ ಅಗ್ರಹಿಸಿದರು.

ತನ್ನ ರಾಜಕೀಯ ಉದ್ದೇಶಕ್ಕಾಗಿ ಇತರರನ್ನು ಬಲಿಕೊಡುವಂತಹ ಕೆಟ್ಟ ಪ್ರವೃತ್ತಿ ರಾಜ್ಯದಲ್ಲಿ ಅನೇಕ ವರ್ಷಗಳಿಂದ ಮುಂದುವರಿಯುತ್ತಲೇ ಇದೆ. ಈಗಲಾದರೂ ಈ ಅನಿಷ್ಠ ರಾಜಕೀಯ ಷಡ್ಯಂತ್ರಗಳನ್ನು ಬಲಿ ಹಾಕಲು ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡಲೇ ಕ್ರಮ ತೆಗೆದುಕೊಳ್ಳಬೇಕು ಎಂದು ಹೇಳಿದರು.

ಹೈಕೋರ್ಟ್ ಅಥವಾ ಸುಪ್ರೀಂ ಕೋರ್ಟಿನ ಹಾಲಿ ನ್ಯಾಯಾಧೀಶರುಗಳ ಆಯೋಗವನ್ನು ರಚನೆ ಮಾಡಿ ಈ ಷಡ್ಯಂತ್ರ ಗಳ ಹಿಂದಿರುವ ಪ್ರಮುಖ ಮಂತ್ರಿ ಹಾಗೂ ಕಿಂಗ್ ಪಿನ್ ಯಾರೆಂಬುದನ್ನು ಪತ್ತೆ ಹಚ್ಚಿ ಜನತೆಗೆ ತಿಳಿಯುವಂತೆ ಮಾಡಬೇಕು ಮತ್ತು ಇವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕೆಂದು ಸೀತಾರಾಮ್ ಗುಂಡಪ್ಪ ಅಗ್ರಹಿಸಿದರು.

ವಿಧಾನಸಭೆಯಲ್ಲಿ ಬಜೆಟ್ ಮೇಲಿನ ಚರ್ಚೆ ವೇಳೆ ಸಂಪೂರ್ಣವಾಗಿ ಸರ್ಕಾರದ ಬೆಲೆ ಏರಿಕೆ ನೀತಿ ಹಾಗೂ ವೈಫಲ್ಯ ಗಳು ಬಟಾ ಬಯಲಾಗಿದೆ. ಜನತೆಯ ಮುಂದೆ ತಮ್ಮ ವೈಫಲ್ಯಗಳನ್ನು ಮುಚ್ಚಿಕೊಳ್ಳಲು ಸದನದ ಕಡೆಯ ದಿವಸ ಈ ರೀತಿಯ ಬಾಂಬ್ ಹಾಕಿ ಜನತೆಯ ಗಮನವನ್ನು ಬೇರೆಡೆಗೆ ಸೆಳೆಯುವ ದುರುದ್ದೇಶವೂ ಕೂಡಿರಬಹುದು ಎಂದು ಸೀತಾರಾಮ್ ಗುಂಡಪ್ಪ ಅನುಮಾನ ವ್ಯಕ್ತಪಡಿಸಿದರು.

ಹನಿ ಟ್ರ್ಯಾಪ್ ಹಿಂದಿರುವ ಮಂತ್ರಿ ಪತ್ತೆಯಾಗಲಿ: ಸೀತಾರಾಮ್ ಗುಂಡಪ್ಪ Read More

ಕನ್ನಡಿಗರಿಗೆ ಆದ್ಯತೆ ನೀಡದ ನಮ್ಮ ಮೆಟ್ರೋ ವಿರುದ್ಧ ಪ್ರತಿಭಟನೆ: ಮುಖ್ಯಮಂತ್ರಿ ಚಂದ್ರು

ಬೆಂಗಳೂರು: ಕನ್ನಡಿಗರಿಗೆ ಆದ್ಯತೆ ನೀಡದ ನಮ್ಮ ಮೆಟ್ರೋ ಅಧಿಕಾರಿಗಳ ವಿರುದ್ಧ ಪ್ರತಿಭಟನೆ ಅನಿವಾರ್ಯ ವಾಗಿದೆ ಎಂದು ಮುಖ್ಯಮಂತ್ರಿ ಚಂದ್ರು ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಎಚ್ಚರಿಸಿದ್ದಾರೆ.

ಮಾಧ್ಯಮ ಹೇಳಿಕೆ ನೀಡಿರುವ ಅವರು,
ಬಿ ಎಂ ಆರ್ ಸಿ ಎಲ್ ಸಂಸ್ಥೆಯು ಇತ್ತೀಚಿಗೆ ಲೋಕೋ ಪೈಲೆಟ್ ಗಳ ನೇಮಕಾತಿಯಲ್ಲಿ 3 ವರ್ಷಗಳ ಅನುಭವದ ಷರತ್ತುಗಳು ವಿಧಿಸಿರುವುದು ಸಂಪೂರ್ಣ ಕನ್ನಡಿಗರನ್ನು ಹೊರಗಿಡುವ ಹುನ್ನಾರವೇ ಹೊರತು ಬೇರೇನೂ ಅಲ್ಲ, ಅನ್ಯ ರಾಜ್ಯಗಳ ಮೆಟ್ರೋಗಳಲ್ಲಿ ಕೆಲಸ ಮಾಡುತ್ತಿರುವ ಬೇರೆ ಭಾಷಿಕರನ್ನು ಚಾಲಕ ಹುದ್ದೆಗಳಿಗೆ ತುಂಬುವುದೇ ಇವರ ಷಡ್ಯಂತ್ರ ಎಂದು ಕಿಡಿಕಾರಿದ್ದಾರೆ.

ಈಗಾಗಲೇ ಸಂಸ್ಥೆಯಲ್ಲಿ ಉನ್ನತ ಹುದ್ದೆಗಳೆಲ್ಲವೂ ಅನ್ಯ ಭಾಷಿಕರ ಪಾಲಾಗಿದ್ದು ಅವರುಗಳ ಇಚ್ಛಾನುಸಾರವೇ ನೇಮಕಾತಿಗಳು ನಡೆಯುತ್ತಿರುವುದು ಕನ್ನಡಿಗರಿಗೆ ಆಗುತ್ತಿರುವ ಅನ್ಯಾಯ. ಕನ್ನಡದ ನೆಲ, ಜಲ, ತೆರಿಗೆ ಎಲ್ಲವನ್ನು ಬಳಸಿಕೊಳ್ಳುತ್ತಿರುವ ಸಂಸ್ಥೆಯು ಕನ್ನಡಿಗರ ನೇಮಕಾತಿ ವಿಚಾರದಲ್ಲಿ ಅನವಶ್ಯಕ ಗೊಂದಲಗಳನ್ನು ಸೃಷ್ಟಿಸುತ್ತಿದೆ, ಕೂಡಲೇ ಸರ್ಕಾರ ಇಂತಹ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕಮ ತೆಗೆದುಕೊಳ್ಳಬೇಕು ಎಂದು ಡಾ. ಮುಖ್ಯಮಂತ್ರಿ ಚಂದ್ರು ಆಗ್ರಹಿಸಿದ್ದಾರೆ.

ಅಲ್ಲದೆ ಮೆಟ್ರೋ ಉನ್ನತ ಅಧಿಕಾರಿಗಳು ಅನವಶ್ಯಕವಾಗಿ ಅಧ್ಯಯನದ ಹೆಸರಿನಲ್ಲಿ ವಿದೇಶ ಪ್ರವಾಸಗಳನ್ನು ಕೈಗೊಂಡು ಮೋಜಿನ ಜೀವನ ನಡೆಸುತ್ತಿದ್ದಾರೆ. ಸಂಸ್ಥೆಯಲ್ಲಿ ಅನವಶ್ಯಕ ದುಬಾರಿ ಖರ್ಚುಗಳನ್ನು ಮಾಡುವ ಮೂಲಕ ನಷ್ಟವನ್ನು ತೋರಿಸುತ್ತಿದ್ದಾರೆ. ಸಂಸ್ಥೆಯು ಕನ್ನಡ ನೌಕರರ ಯೂನಿಯನ್ ಜೊತೆ ಯಾವುದೇ ಚರ್ಚೆಗಳನ್ನು ಮಾಡದೆ ಕನ್ನಡ ವಿರೋಧಿ ಧೋರಣೆಯನ್ನು ಮುಂದುವರಿಸುತ್ತಲೇ ಬರುತ್ತಿದ್ದಾರೆ ಇವುಗಳೆಲ್ಲವೂ ತಕ್ಷಣ ನಿಲ್ಲಬೇಕು ಎಂದು ಎಚ್ಚರಿಸಿದ್ದಾರೆ.

ಈಗಾಗಲೇ ಸಮಾಜದ ಎಲ್ಲ ವರ್ಗಗಳ ತೀವ್ರ ವಿರೋಧಗಳ ನಡುವೆಯೂ ಸಹ ಮೆಟ್ರೋ ಟಿಕೆಟ್ ಬೆಲೆಯನ್ನು ಏರಿಸಲಾಗಿದೆ,ಮೆಟ್ರೋ ಅಧಿಕಾರಿಗಳ ಬಂಡತನ ಎಲ್ಲೆ ಮೀರಿದೆ, ಕನ್ನಡಿಗರ ಅಸ್ಮಿತೆಯ ವಿಷಯದಲ್ಲಿ ಸರ್ಕಾರ ಮಧ್ಯಪ್ರವೇಶ ಮಾಡಲೇಬೇಕಾಗಿದೆ.
ಇಂತಹ ಕನ್ನಡ ವಿರೋಧಿ ನೇಮಕಾತಿ ಅಧಿಸೂಚನೆಯನ್ನು ಕೂಡಲೇ ಹಿಂಪಡೆದುಕೊಳ್ಳಬೇಕು,ಅದಕ್ಕಾಗಿ 15 ದಿನಗಳ ಗಡುವನ್ನು ನೀಡುತ್ತಿದ್ದೇವೆ. ಇಲ್ಲದಿದ್ದಲ್ಲಿ ಮೆಟ್ರೋ ಸಂಸ್ಥೆಯ ವಿರುದ್ಧ ತೀವ್ರ ಪ್ರತಿಭಟನೆಗೆ ಇಳಿಯಬೇಕಾಗುತ್ತದೆ ಎಂದು ಮುಖ್ಯಮಂತ್ರಿ ಚಂದ್ರು ಎಚ್ಚರಿಸಿದ್ದಾರೆ.

ಕನ್ನಡಿಗರಿಗೆ ಆದ್ಯತೆ ನೀಡದ ನಮ್ಮ ಮೆಟ್ರೋ ವಿರುದ್ಧ ಪ್ರತಿಭಟನೆ: ಮುಖ್ಯಮಂತ್ರಿ ಚಂದ್ರು Read More

ನಗರಾಭಿವೃದ್ಧಿ ಇಲಾಖೆಯಲ್ಲಿನ ಭ್ರಷ್ಟಾಚಾರ ತಡೆಗಟ್ಟಲು ಸಿಎಂಗೆ ಆಪ್ ಪತ್ರ

ಬೆಂಗಳೂರು: ಖಾಸಗಿ ಬಡಾವಣೆಗಳ ನಿರ್ಮಾಣಕ್ಕಾಗಿ ನಗರಾಭಿವೃದ್ಧಿ ಸಚಿವರ ಒಪ್ಪಿಗೆ ಪಡೆಯಬೇಕೆಂಬ ನೂತನ ಆದೇಶ ವ್ಯಾಪಕ ಭ್ರಷ್ಟಾಚಾರಕ್ಕೆ ನಾಂದಿ ಮಾಡಿಕೊಡುತ್ತದೆ ಎಂದು ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಡಾ. ಮುಖ್ಯಮಂತ್ರಿ ಚಂದ್ರು ಆತಂಕ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಪತ್ರ ಬರೆದು ಎಚ್ಚರಿಸಿದ್ದಾರೆ.

ರಾಜ್ಯದ ಅನೇಕ ನಗರ, ಪಟ್ಟಣಗಳಲ್ಲಿ ಈಗಾಗಲೇ ಖಾಸಗಿ ಸಂಸ್ಥೆಗಳಿಂದ ಸುಸಜ್ಜಿತವಾದ ಬಡಾವಣೆಗಳು ನಿರ್ಮಾಣವಾಗಿ ಜನತೆಗೆ ಕೈಗೆಟುಕುವ ಬೆಲೆಯಲ್ಲಿ ಸೂರನ್ನು ನಿರ್ಮಿಸಿಕೊಳ್ಳಲು ಸಾಧ್ಯವಾಗುತ್ತಿದೆ.

ಇದುವರೆಗೂ1961 ರ ಆರ್.ಡಿ.ಪಿ.ಅರ್ ಕಾಯ್ದೆಯ ಪ್ರಕಾರ ನಗರಾಭಿವೃದ್ಧಿ ಪ್ರಾಧಿಕಾರಗಳು ಆಯಾ ಖಾಸಗಿ ನಿವೇಶನಗಳ ನೀಲಿ ನಕಾಶೆಯನ್ನು ತಯಾರಿಸಿ ಅನುಮತಿಯನ್ನು ನೀಡಿ ಖಾಸಗಿ ಬಡಾವಣೆಗಳನ್ನು ನಿರ್ಮಿಸಲು ಸಾಧ್ಯವಾಗುತ್ತಿತ್ತು.

ಆದರೆ ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ತಮ್ಮ ಇತ್ತೀಚಿನ ಸಭೆಯಲ್ಲಿ ರಾಜ್ಯದಲ್ಲಿ ಯಾವುದೇ ಖಾಸಗಿ ಬಡಾವಣೆಗಳ ನಿರ್ಮಾಣಕ್ಕಾಗಿ ಅಂತಿಮ ಅನುಮತಿಯನ್ನು ಸಚಿವಾಲಯದ ಮೂಲಕವೇ ಆಗಬೇಕೆಂದು ಕಾಯ್ದೆಗೆ ತಿದ್ದುಪಡಿ ತರಲು ಕಾರ್ಯದರ್ಶಿಗಳಿಗೆ ಸೂಚಿಸಿದ್ದಾರೆ.

ಮಂತ್ರಿಗಳ ಈ ನಡೆ ಸಂಪೂರ್ಣವಾಗಿ ಅಧಿಕಾರ ವಿಕೇಂದ್ರೀಕರಣದ ಸಂವಿಧಾನದ ಮೂಲ ಆಶಯಕ್ಕೆ ಕೊಡಲಿ ಪೆಟ್ಟು ಬೀಳುವಂತಿದೆ ಎಂದು ಚಂದ್ರು ಸಿಎಂಗೆ ಬರೆದಿರುವ ಪತ್ರದಲ್ಲಿ ತಿಳಿದ್ದಾರೆ.

ನಗರಾಭಿವೃದ್ಧಿ ಸಚಿವಾಲಯದಿಂದ ನೇರವಾಗಿ ಭ್ರಷ್ಟಾಚಾರ ಮಾಡುವ ಉದ್ದೇಶದಿಂದಲೇ ಈ ರೀತಿಯ ತಿದ್ದುಪಡಿಯನ್ನು ಮಾಡಲು ಹೊರಟಿರುವುದು ಸ್ಪಷ್ಟವಾಗಿ ಮೇಲ್ನೋಟಕ್ಕೆ ಗೋಚರಿಸುತ್ತದೆ. ಈ ತಿದ್ದುಪಡಿಯು
ನಗರ/ ಪಟ್ಟಣ ಯೋಜನಾ ಪ್ರಾಧಿಕಾರಗಳ
ಸ್ವಾಯತ್ತತೆಗೆ ಧಕ್ಕೆ ತರುವಂತಿದೆ ಎಂದು ಪತ್ರದಲ್ಲಿ ಮುಖ್ಯ ಮಂತ್ರಿಗಳ ಗಮನ ಸೆಳೆದಿದ್ದಾರೆ.

ತಕ್ಷಣವೇ ತಾವು ಮಧ್ಯಪ್ರವೇಶ ಮಾಡಿ ನಿಮ್ಮ ನಗರಾಭಿವೃದ್ದಿ ಮಂತ್ರಿಯವರ ಕಾಯ್ದೆಯ ತಿದ್ದುಪಡಿಯ ಯೋಚನೆಯನ್ನು ತಕ್ಷಣವೇ ನಿಲ್ಲಿಸಬೇಕು ಎಂದು ಮುಖ್ಯ ಮಂತ್ರಿ ಚಂದ್ರು ಆಗ್ರಹಿಸಿದ್ದಾರೆ.

ಈ ಮೂಲಕ ಮುಂದಾಗಬಹುದಾದ ವ್ಯಾಪಕ ಭ್ರಷ್ಟಾಚಾರವನ್ನು ತಡೆಗಟ್ಟಬೇಕು ಮತ್ತು ವಿಕೇಂದ್ರೀಕರಣದ ಪರಿಕಲ್ಪನೆಯ ಮಹತ್ವವನ್ನು ಎತ್ತಿ ಹಿಡಿಯಬೇಕು ಎಂದು ಮುಖ್ಯಮಂತ್ರಿ ಚಂದ್ರು ತಮ್ಮ ಪತ್ರದಲ್ಲಿ ಒತ್ತಾಯಿಸಿದ್ದಾರೆ.

ನಗರಾಭಿವೃದ್ಧಿ ಇಲಾಖೆಯಲ್ಲಿನ ಭ್ರಷ್ಟಾಚಾರ ತಡೆಗಟ್ಟಲು ಸಿಎಂಗೆ ಆಪ್ ಪತ್ರ Read More