ಅಪರಿಚಿತ ವಾಹನ ಡಿಕ್ಕಿ:ಕೆರೆಗೆ ಗೂಡ್ಸ್ ಆಟೋ ಉರುಳಿ ಎಳನೀರು ವ್ಯಾಪಾರಿ ಸಾವು

ಹುಣಸೂರು: ಅಪರಿಚಿತ ವಾಹನ ಹಿಂದಿನಿಂದ ಗೂಡ್ಸ್ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕೆರೆಗೆ ಉರುಳಿ ಎಳನೀರು ವ್ಯಾಪಾರಿ ಮೃತಪಟ್ಟಿರುವ ಘಟನೆ ಹುಣಸೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮಂಗಳವಾರ ಸಂಜೆ ನಡೆದಿದೆ.

ಹುಣಸೂರು ಗ್ರಾಮಾಂತರ ವ್ಯಾಪ್ತಿಯ ಎಳನೀರು ವ್ಯಾಪಾರಿ ರಾಜು ಮೃತಪಟ್ಟ ದುರ್ದೈವಿ.

ವಿಷಯ ತಿಳಿಯುತ್ತಿದ್ದಂತೆ ಹುಣಸೂರು ಪಟ್ಟಣ ಠಾಣೆ ಸರ್ಕಲ್ ಇನ್ಸ್ಪೆಕ್ಟರ್ ಸಂತೋಷ್ ಕಶ್ಯಪ್ ಮತ್ತು ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಪರಿಶೀಲಿಸಿದರು.

ಸ್ಥಳಕ್ಕೆ ಮಾಜಿ ಶಾಸಕ ಮಂಜುನಾಥ್ ಮತ್ತು ಉದ್ದೂರು ತಾಲೂಕು ಪಂಚಾಯಿತಿ‌ ಮಾಜಿ ಉಪಾಧ್ಯಕ್ಷ ಪ್ರೇಮೇಗೌಡ ಹಾಗೂ ಕರ್ನಾಟಕ ಪ್ರಜಾ ಪಾರ್ಟಿ ರೈತ ಪರ್ವ ಹುಣಸೂರು ತಾಲೂಕು ಅಧ್ಯಕ್ಷ ಚೆಲುವರಾಜು ಸೇರಿದಂತೆ ಅನೇಕ ಮುಖಂಡರು ಧಾವಿಸಿ ಕೆರೆಯಿಂದ ಮೃತ ರಾಜು ದೇಹವನ್ನು ಹೊರತೆಗೆದು ಆಸ್ಪತ್ರೆಗೆ ಸಾಗಿಸಲು ಪೊಲೀಸರಿಗೆ ನೆರವಾದರು.

ಹುಣಸೂರು ಸರ್ಕಾರಿ ಆಸ್ಪತ್ರೆಯಲ್ಲಿ ವ್ಯಾಪಾರಿಯ ಮೃತದೇವನ್ನು ಇರಿಸಲಾಗಿದ್ದು ಕುಟುಂಬಸ್ಥರು ಧಾವಿಸಿದರು.
ಅವರ ದುಃಖದ ಕಟ್ಟೆ ಒಡೆದಿತ್ತು.

ತಡೆಗೋಡೆ ನಿರ್ಮಿಸಲು ಚೆಲುವರಾಜು ಆಗ್ರಹ:
ಮೈಸೂರು-ಮಡಿಕೇರಿ ಹೆದ್ದಾರಿ ಹುಣಸೂರು ಸಮೀಪ ಕೆರೆ ರಸ್ತೆಗೆ ಹೊಂದಿಕೊಂಡಿದೆ. ಇದಕ್ಕೆ ಯಾವುದೇ ತಡೆಗೋಡೆಇಲ್ಲ. ಹಾಗಾಗಿ ಇಲ್ಲಿ ಪದೇ ಪದೇ ಅಪಘಾತಗಳು ನಡೆಯುತ್ತಲೇ ಇರುತ್ತವೆ. ನಾವು ಬಹಳ ವರ್ಷಗಳಿಂದ ತಾಲೂಕು ಆಡಳಿತವನ್ನು ಒತ್ತಾಯಿಸುತ್ತಲೇ ಬಂದಿದ್ದೇವೆ. ಸರ್ಕಾರದ ಗಮನಕ್ಕೂ ತಂದಿದ್ದೇವೆ ಆದರೂ ಏನೂ ಪ್ರಯೋಜನವಾಗಿಲ್ಲ ಎಂದು ಕರ್ನಾಟಕ ಪ್ರಜಾ ಪಾರ್ಟಿ ರೈತ ಪರ್ವ ಹುಣಸೂರು ತಾಲೂಕು ಅಧ್ಯಕ್ಷ ಚೆಲುವರಾಜು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೂಡಲೇ ಹುಣಸೂರಿನ ಶಾಸಕರ ಈ ದೊಡ್ಡ ಕೆರೆಗೆ ತಡೆಗೋಡೆ ನಿರ್ಮಿಸಲೇಬೇಕೆಂದು ಮತ್ತು ಮುಂದೆ ಆಗುವ ಅನಾಹುತಗಳನ್ನು ತಪ್ಪಿಸಬೇಕೆಂದು ಚೆಲುವರಾಜು ಆಗ್ರಹಿಸಿದ್ದಾರೆ.

ಅಪರಿಚಿತ ವಾಹನ ಡಿಕ್ಕಿ:ಕೆರೆಗೆ ಗೂಡ್ಸ್ ಆಟೋ ಉರುಳಿ ಎಳನೀರು ವ್ಯಾಪಾರಿ ಸಾವು Read More

ಕಲಬುರಗಿ ಅಪಘಾತದಲ್ಲಿ ಗಾಯಗೊಂಡಿದ್ದ ಮತ್ತೊಬ್ಬ ನಿಧನ

ಕಲಬುರಗಿ: ಮಂಗಳವಾರ ಸಂಜೆ ಜೇವರ್ಗಿ ಬಳಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ ನಾಲ್ಕಕ್ಕೆ ಏರಿಕೆಯಾಗಿದೆ.

ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಮತ್ತೊಬ್ಬರು ಚಿಕಿತ್ಸೆ ಫಲಕಾರಿಯಾಗದೇ ಇಂದು ಮೃತಪಟ್ಟಿದ್ದಾರೆ.

ಮಂಗಳವಾರ ಸಂಜೆ ನಡೆದ ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ ಬೀಳಗಿ, ಸಹೋದರ ಶಂಕರ ಬೀಳಗಿ ಹಾಗೂ ಮತ್ತೊಬ್ಬ ಸೋದರ ಸಂಬಂಧಿ ಮೃತಪಟ್ಟಿದ್ದರು.

ಮತ್ತೊಬ್ಬರು‌ ಮಹಾಂತೇಷ ಅವರ ಸ್ನೇಹಿತ ಈರಣ್ಣ ಶಿರಸಂಗಿ ಗಂಭೀರವಾಗಿ
ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.ಬುಧವಾರ ಬೆಳಿಗ್ಗೆ ಅವರು ಕೂಡಾ ಮೃತಪಟ್ಟಿದ್ದು ಅಪಘಾತದಲ್ಲಿ ನಾಲ್ವರು ಮೃತಪಟ್ಟಂತಾಗಿದೆ.

ಕಲಬುರಗಿ ಅಪಘಾತದಲ್ಲಿ ಗಾಯಗೊಂಡಿದ್ದ ಮತ್ತೊಬ್ಬ ನಿಧನ Read More

ಅಪಘಾತ: ಬೆಸ್ಕಾಂ ಎಮ್‌ ಡಿ ಮಹಾಂತೇಶ್ ಬೀಳಗಿ ಸೇರಿ ಮೂವರು ನಿಧನ

ಕಲಬುರಗಿ: ಕಲಬುರಗಿ ಯ ಜೇವರ್ಗಿ ಬಳಿ ನಡೆದ ರಸ್ತೆ ಅಪಘಾತದಲ್ಲಿ
ಬೆಸ್ಕಾಂ ಎಮ್‌ಡಿ ಮಹಾಂತೇಶ್ ಬೀಳಗಿ ಸೇರಿದಂತೆ ಮೂವರು ಮೃತಪಟ್ಟಿದ್ದಾರೆ.

ವಿಜಯಪುರದಿಂದ ಕಲಬುರಗಿಗೆ ಸಂಬಂಧಿಕರ ಮದುವೆ ಕಾರ್ಯಕ್ಕೆ ತೆರಳುತ್ತಿದ್ದಾಗ ಜೇವರ್ಗಿ ತಾಲೂಕಿನ ಗೌನಹಳ್ಳಿ ಬಳಿ ‍ಬೀಳಗಿ ಅವರ ಇನ್ನೋವಾ ಕಾರು ಮರಕ್ಕೆ ಅಪ್ಪಳಿಸಿದೆ.

ಅಪಘಾತದಲ್ಲಿ ಸ್ಥಳದಲ್ಲೇ ಇಬ್ಬರು ಮೃತಪಟ್ಟಿದ್ದಾರೆ. ಗಂಭೀರ ಗಾಯಗೊಂಡಿದ್ದ ಮಹಾಂತೇಶ್ ಬೀಳಗಿ ಅವರನ್ನು ಆಸ್ಪತ್ರೆಗೆ ಕರೆತರುವಷ್ಟರಲ್ಲಿ ಮೃತಪಟ್ಟಿದ್ದರು.

ಆಸ್ಪತ್ರೆಗೆ ಎಸ್‌ಪಿ ಅಡ್ಡೂರು ಶ್ರೀನಿವಾಸುಲು, ಡಿಎಚ್‌ಒ ಶರಣಬಸಪ್ಪ ಕ್ಯಾತನಾಳ್ ಸೇರಿ ಹಲವು ಅಧಿಕಾರಿಗಳು ಭೇಟಿ ನೀಡಿದ್ದಾರೆ.

ಕರ್ನಾಟಕ ರಾಜ್ಯ ಖನಿಜ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಮಹಾಂತೇಶ್ ಬೀಳಗಿ ಅವರಿಗೆ 51 ವರ್ಷ. ಅವರು ಹಲವು ಜಿಲ್ಲೆಗಳಲ್ಲಿ ಜಿಲ್ಲಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದಾರೆ.

ಅಪಘಾತ: ಬೆಸ್ಕಾಂ ಎಮ್‌ ಡಿ ಮಹಾಂತೇಶ್ ಬೀಳಗಿ ಸೇರಿ ಮೂವರು ನಿಧನ Read More

ಬಂಟ್ವಾಳದ ಬಿ ಸಿ ರೋಡ್ ವೃತ್ತದ ಬಳಿ ಅಪಘಾತ:ಮೂವರ ದುರ್ಮರಣ

ಮಂಗಳೂರು: ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಬಂಟ್ವಾಳ ತಾಲ್ಲೂಕಿನ ಬಿ ಸಿ ರೋಡ್ ವೃತ್ತದ ಬಳಿ ಶನಿವಾರ ಭೀಕರ ಅಪಘಾತ ಸಂಭವಿಸಿ ಮೂವರು ಮೃತಪಟ್ಟಿದ್ದಾರೆ.

ಬೆಂಗಳೂರಿನಿಂದ ಒಂಬತ್ತು ಮಂದಿ ಇನೋವಾ ಕಾರಿನಲ್ಲಿ ಉಡುಪಿಯ ಶ್ರೀ ಕೃಷ್ಣ ಮಠಕ್ಕೆ ಹೋಗುತ್ತಿದ್ದರು.

ಕಾರು ಬಂಟ್ವಾಳದ ಬಿ.ಸಿ. ರಸ್ತೆ ತಲುಪಿದಾಗ ಚಾಲಕನ ನಿಯಂತ್ರಣ ತಪ್ಪಿ ನಾರಾಯಣ ಗುರು ವೃತ್ತಕ್ಕೆ ಡಿಕ್ಕಿ ಹೊಡೆದಿದೆ.

ರವಿ (64), ನಂಜಮ್ಮ (75) ರಮ್ಯಾ (23) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸುಶೀಲಾ, ಕೀರ್ತಿ ಕುಮಾರ್, ಕಿರಣ್, ಬಿಂದು, ಪ್ರಶಾಂತ್ ಮತ್ತು ಚಾಲಕ ಸುಬ್ರಹ್ಮಣ್ಯ ತೀವ್ರ ಗಾಯಗೊಂಡಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಬಂಟ್ವಾಳದ ಬಿ ಸಿ ರೋಡ್ ವೃತ್ತದ ಬಳಿ ಅಪಘಾತ:ಮೂವರ ದುರ್ಮರಣ Read More

ಕಾರಿಗೆ ಕ್ಯಾಂಟರ್ ಡಿಕ್ಕಿ: ಡ್ಯಾನ್ಸರ್ ಸುಧೀಂದ್ರಸ್ಥಳದಲ್ಲೇ ಸಾವು

ಬೆಂಗಳೂರು: ಬೆಂಗಳೂರಿನ‌ ನೆಲಮಂಗಲ ತಾಲೂಕಿನ ಪೆಮ್ಮನಹಳ್ಳಿ ಬಳಿ ರಸ್ತೆ ಬದಿ ನಿಂತಿದ್ದ ಕಾರಿಗೆ ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ ಡ್ಯಾನ್ಸರ್ ಸುಧೀಂದ್ರ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ರಸ್ತೆಯಲ್ಲಿ ಕೆಟ್ಟು ನಿಂತ ಕಾರನ್ನು ಸುಧೀಂದ್ರ ಪರಿಶೀಲನೆ ಮಾಡುತ್ತಿದ್ದಾಗ ವೇಗವಾಗಿ ಬಂದ ಕ್ಯಾಂಟರ್ ಡಿಕ್ಕಿ ಹೊಡೆದಿದೆ.

ಸುದ್ದಿ ತಿಳಿದ ಕೂಡಲೇ ದಾಬಸ್ ಪೇಟೆ ಪೊಲೀಸರು ಸ್ಥಳಕ್ಕೆ‌ ಧಾವಿಸಿ ಪರಿಶೀಲಿಸಿ ಸುಧೀಂದ್ರ ಅವರ ಮೃತ ದೇಹವನ್ನು ಆಸ್ಪತ್ರೆಗೆ ಸಾಗಿಸಿ ಮುಂದಿನ ಕ್ರಮ ಕೈಗೊಂಡರು.

ಸುಧೀಂದ್ರ ಸೋಮವಾರವಷ್ಟೇ ಹೊಸ ಮಾರುತಿ ಸುಜುಕಿ ಎಕೋ ಕಾರು ಡೆಲಿವರಿ ಪಡೆದಿದ್ದರು. ರಸ್ತೆ ಮಧ್ಯೆ ಕಾರು ಕೆಟ್ಟು ನಿಂತಿದ್ದರಿಂದ ಪರೀಕ್ಷಿಸಲು ಕಾರಿನಿಂದ ಕೆಳಗಿಳಿದು ನೋಡುತ್ತಿದ್ದಾಗ ಕ್ಯಾಂಟರ್ ಲಾರಿ ಡಿಕ್ಕಿ ಹೊಡೆದಿದೆ.

ನೆಲಮಂಗಲ ತಾಲೂಕಿನ ತ್ಯಾಮಗೊಂಡ್ಲು ನಿವಾಸಿ ಸುಧೀಂದ್ರ ವಿವಿಧ ರಿಯಾಲಿಟಿ ಶೋಗಳಲ್ಲಿ ಭಾಗಿಯಾಗಿದ್ದರು. ಅಲ್ಲದೇ ಡಾಬಸ್ ಪೇಟೆಯಲ್ಲಿ ಡ್ಯಾನ್ಸ್ ಕ್ಲಾಸ್ ನಡೆಸುತ್ತಾ ನೂರಾರು ಯುವಕ, ಯುವತಿಯರಿಗೆ, ಮಕ್ಕಳಿಗೆ ನೃತ್ಯ ತರಬೇತಿ ನೀಡುತ್ತಿದ್ದರು.

ಕಾರಿಗೆ ಕ್ಯಾಂಟರ್ ಡಿಕ್ಕಿ: ಡ್ಯಾನ್ಸರ್ ಸುಧೀಂದ್ರಸ್ಥಳದಲ್ಲೇ ಸಾವು Read More

ಹೈದರಾಬಾದ್-ಬಿಜಾಪುರ ಹೆದ್ದಾರಿಯಲ್ಲಿ ಭೀಕರ ಅಪಘಾತ: 24 ಸಾವು

ಹೈದರಾಬಾದ್: ಹೈದರಾಬಾದ್-ಬಿಜಾಪುರ ಹೆದ್ದಾರಿಯಲ್ಲಿ ಬಸ್‌ ಹಾಗೂ ಟ್ರಕ್‌ ನಡುವೆ ಭೀಕರ ಅಪಘಾತ ಸಂಭವಿಸಿದ್ದು, 24 ಮಂದಿ ದಾರುಣವಾಗಿ ಮೃತಪಟ್ಟಿದ್ದಾರೆ.

ತೆಲಂಗಾಣದ ಜಿಲ್ಲೆಯ ಚೆವೆಲ್ಲಾ ಬಳಿಯ ಮಿರ್ಜಗುಡದಲ್ಲಿ ಹೈದರಾಬಾದ್-ಬಿಜಾಪುರ ಹೆದ್ದಾರಿಯಲ್ಲಿ ಆರ್‌ಟಿಸಿ ಬಸ್ ಹಾಗೂ ಟ್ರಕ್ ಲಾರಿ ನಡುವೆ ಅಪಘಾತ ಸಂಭವಿಸಿದೆ.

ಪರಿಣಾಮ ಬಸ್‌ನಲ್ಲಿ 24 ಮಂದಿ ಸಾವನ್ನಪ್ಪಿದ್ದು, 25 ಜನ ಗಾಯಗೊಂಡಿದ್ದಾರೆ

ಜಲ್ಲಿಕಲ್ಲು ತುಂಬಿದ್ದ ಟ್ರಕ್ ಎದುರಿನಿಂದ ಬರುತ್ತಿದ್ದ ಆರ್‌ಟಿಸಿ ಬಸ್‌ಗೆ ಡಿಕ್ಕಿ ಹೊಡೆದಿದೆ. ಟ್ರಕ್ ಚಾಲಕ ಅತೀ ವೇಗವಾಗು ಚಾಲನೆ ಮಾಡಿರುವುದೇ ಈ ಅಪಘಾತಕ್ಕೆ ಕಾರಣ ಎಂದು ಪ್ರಾಥಮಿಕ ವರದಿಗಳಿಂದ ತಿಳಿದುಬಂದಿದೆ.

ಅಪಘಾತ ನಡೆದ ಸ್ಥಳದ ಬಳಿ ಅಪಾಯಕಾರಿ ತಿರುವು ಇದ್ದು, ಇದೇ ಪ್ರದೇಶದಲ್ಲಿ ಅತಿ ವೇಗದಲ್ಲಿ ಬಂದ ಲಾರಿ ಬಸ್‌ಗೆ ಡಿಕ್ಕಿ ಹೊಡೆದಿದೆ.

ಅಪಘಾತದಲ್ಲಿ ಬಸ್ ಪ್ರಯಾಣಿಕರು, ಬಸ್ ಮತ್ತು ಟಿಪ್ಪರ್ ಚಾಲಕರು ಮೃತಪಟ್ಟಿದ್ದಾರೆ.

ಒಂದು ವರ್ಷದ ಮಗು ಸೇರಿದಂತೆ 11 ಮಹಿಳೆಯರು ಮತ್ತು 9 ಪುರುಷರು ಸಾವನ್ನಪ್ಪಿದ್ದಾರೆ, 24 ಜನರು ಗಾಯಗೊಂಡಿದ್ದು 5 ಜನರ ಸ್ಥಿತಿ ಗಂಭೀರವಾಗಿತ್ತು,ಅವರಲ್ಲಿ ನಾಲ್ಕು ಮಂದಿ‌‌ ಚೆವೆಲ್ಲಾ ಸರ್ಕಾರಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಘಟನೆಗೆ ಪ್ರಧಾನಿ ನರೇಂದ್ರ ಮೋದಿಯವರು ಸಂತಾಪ ಸೂಚಿಸಿದ್ದಾರೆ,ಅಲ್ಲದೆ ಮೃತರ ಕುಟಂಬಕ್ಕೆ ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ 2 ಲಕ್ಷ ರೂಪಾಯಿ ಹಾಗೂ ಗಾಯಾಳುಗಳಿಗೆ 50,000 ರೂಪಾಯಿ ಪರಿಹಾರ ನೀಡುವುದಾಗಿ ಘೋಷಣೆ ಮಾಡಿದ್ದಾರೆ.

ಹೈದರಾಬಾದ್-ಬಿಜಾಪುರ ಹೆದ್ದಾರಿಯಲ್ಲಿ ಭೀಕರ ಅಪಘಾತ: 24 ಸಾವು Read More

ಚಾ.ಬೆಟ್ಟದಲ್ಲಿ ಅಪಘಾತ;ಗಾಯಾಳುಗಳಿಗೆ 1 ಲಕ್ಷ ರು ಚಿಕಿತ್ಸಾ ವೆಚ್ಚ ನೀಡಿ-ತೇಜಸ್ವಿ

ಮೈಸೂರು: ಚಾಮುಂಡಿ ಬೆಟ್ಟದಲ್ಲಿ ಕೆಎಸ್ ಆರ್ ಟಿಸಿ ಬಸ್ ಅಪಘಾತದಲ್ಲಿ ಗಾಯಗೊಂಡವರಿಗೆ ಒಂದು ಲಕ್ಷ ರೂ ಚಿಕಿತ್ಸಾ ವೆಚ್ಚ ನೀಡಬೇಕೆಂದು ಸರ್ಕಾರವನ್ನು ಕನ್ನಡ ಚಳವಳಿಗಾರ ತೇಜಸ್ವಿ ನಾಗಲಿಂಗಸ್ವಾಮಿ ಆಗ್ರಹಿಸಿದ್ದಾರೆ.

ಬಸ್ ಚಾಲಕನ ನಿರ್ಲಕ್ಷ್ಯದಿಂದ ಕಾರು, ವಿದ್ಯುತ್ ಕಂಬಗಳಿಗೆ ಡಿಕ್ಕಿಯಾಗಿ ಪ್ರಯಾಣಿಕರಿಗೆ ಗಾಯಗಳಾಗಿರುವುದು ಬೇಸರದ ಸಂಗತಿ ಎಂದು ತಿಳಿಸಿದ್ದಾರೆ.

ಅದೃಷ್ಟವಶಾತ್, ಈ ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಮತ್ತು ಗಂಭೀರ ಅನಾಹುತ ಸಂಭವಿಸುವುದು ಕೂದಲೆಳೆಯ ಅಂತರದಲ್ಲಿ ತಪ್ಪಿದೆ ಎಂದು ತಿಳಿಸಿದ್ದಾರೆ_

ಈ ಅಪಘಾತಕ್ಕೆ ಸಾರಿಗೆ ಬಸ್ ಚಾಲಕನ ನಿರ್ಲಕ್ಷ್ಯವೇ ಕಾರಣ ಎಂದು ತೇಜಸ್ವಿ ಆರೋಪಿಸಿದ್ದಾರೆ.

ಚಾಲಕನ ಮೇಲೆ ಈಗಾಗಲೇ ಸಂಚಾರಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ, ಆದರೆ ಈ ಪ್ರಕರಣವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿ ಕೂಡಲೇ ಚಾಲಕನ ವಿರುದ್ಧ ಕ್ರಮ ತೆಗೆದುಕೊಳ್ಳಬೇಕೆಂದು ತೇಜಸ್ವಿ ಒತ್ತಾಯಿಸಿದ್ದಾರೆ.

ಈ ಘಟನೆಯಿಂದ ಕಾರುಗಳಿಗೆ ಸಣ್ಣಪುಟ್ಟ ಹಾನಿಯಾಗಿದ್ದು, ವಿದ್ಯುತ್ ಕಂಬಗಳು ಒಡೆದಿವೆ. ಸ್ಥಳಕ್ಕೆ ತಕ್ಷಣವೇ ಆಗಮಿಸಿದ ಪೊಲೀಸರು ಮತ್ತು ಸ್ಥಳೀಯರ ಸಹಾಯದಿಂದ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರುವಲ್ಲಿ ಯಶಸ್ವಿಯಾಗಿದ್ದಾರೆ ಗಾಯಗೊಂಡವರಿಗೆ ಸ್ಥಳದಲ್ಲೇ ಪ್ರಥಮ ಚಿಕಿತ್ಸೆ ನೀಡಲಾಗಿದೆ,
ಆದರೆ ಕೆಲವು ಪ್ರಯಾಣಿಕರಿಗೆ ಮೂಗೇಟು ಬಿದ್ದಿದ್ದು ಮೂಳೆ ಮುರಿತ ಉಂಟಾಗಿದೆ ಎಂದು ಅವರು ತಿಳಿಸಿದ್ದಾರೆ.

ಹೆಚ್ಚು ಗಾಯಗೊಂಡವರನ್ನು ಗುರುತಿಸಿ ಒಂದು ಲಕ್ಷ ರೂ ಚಿಕಿತ್ಸಾ ವೆಚ್ಚವನ್ನು ನೀಡುವಂತೆ ತೇಜಸ್ವಿ ನಾಗಲಿಂಗ ಸ್ವಾಮಿ ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ.

ಚಾ.ಬೆಟ್ಟದಲ್ಲಿ ಅಪಘಾತ;ಗಾಯಾಳುಗಳಿಗೆ 1 ಲಕ್ಷ ರು ಚಿಕಿತ್ಸಾ ವೆಚ್ಚ ನೀಡಿ-ತೇಜಸ್ವಿ Read More

ಬಸ್ಸಿನ ಹಿಂಬದಿ ಚಕ್ರಕ್ಕೆ ಸಿಲುಕಿ ಬೈಕ್ ಸವಾರ ಸಾ*ವು

(ವರದಿ: ರಾಮಸಮುದ್ರ ಎಸ್.ವೀರಭದ್ರಸ್ವಾಮಿ)

ಚಾಮರಾಜನಗರ: ಬಸ್ಸಿನ ಹಿಂಬದಿ ಚಕ್ರಕ್ಕೆ ಬೈಕ್ ಸವಾರ ಸಿಲುಕಿ ಸಾವನ್ನಪ್ಪಿರುವ ಘಟನೆ ನಗರದ ಸರ್ಕಾರಿ ಬಸ್ ನಿಲ್ದಾಣ ಬಳಿ ನಡೆದಿದೆ.

ಕಾಡಹಳ್ಳಿಯ ಮಲ್ಲಪ್ಪ ಎಂಬುವವರ ಮಗ ಶಿವ ಮಲ್ಲಪ್ಪ ಮೃತ ದುರ್ದೈವಿ.

ಸರ್ಕಾರಿ ಬಸ್ ನಿಲ್ದಾಣ ಸಮೀಪ ಇರುವ ಮಸೀದಿ ಮುಂಭಾಗ ಬಸ್ ನಿಲ್ದಾಣದಿಂದ ಬರುತ್ತಿದ್ದ ಬಸ್ಸಿಗೆ ಬೈಕ್ ಸವಾರ ಹಿಂಬದಿಯ ಚಕ್ರಕ್ಕೆ ಸಿಲುಕಿ ಸ್ಥಳದಲ್ಲಿ ಸಾವನ್ನಪ್ಪಿದ್ದಾನೆ ಎಂದು ಪ್ರತ್ಯಕ್ಷ ದರ್ಶಿಗಳು ತಿಳಿಸಿದ್ದಾರೆ.

ಮೃತದೇಹವನ್ನ ಸಿಮ್ಸ್ ಆಸ್ಪತ್ರೆಗೆ ಸಾಗಿಸಲಾಗಿದೆ.

ಸ್ಥಳಕ್ಕೆ ಸಂಚಾರಿ ಠಾಣೆ ಪೊಲೀಸರು ಭೇಟಿ ನೀಡಿ ದೂರು ದಾಖಲು ಮಾಡಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

ಬಸ್ಸಿನ ಹಿಂಬದಿ ಚಕ್ರಕ್ಕೆ ಸಿಲುಕಿ ಬೈಕ್ ಸವಾರ ಸಾ*ವು Read More

ಸರಣಿ‌ ಅಪಘಾತ:ಬಾಲಕ ಸಾವು; ಮೂವರು ಸಹೋದರರು ಗಂಭೀರ

ಚಾಮರಾಜನಗರ: ಲಾರಿ, ಕಾರು, ದ್ವಿಚಕ್ರ ವಾಹನದ ನಡುವೆ ಸರಣಿ ಅಪಘಾತ ಸಂಭವಿಸಿದ್ದು,ಒಬ್ಬರು ಮೃತಪಟ್ಟರೆ ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ನಗರದಲ್ಲಿ ನಡೆದಿದೆ.

ಚಾಮರಾಜನಗರದ ಗಾಳಿಪುರ ಬೈಪಾಸ್ ನಲ್ಲಿ ಲಾರಿ, ಕಾರು, ದ್ವಿಚಕ್ರವಾಹನದ ನಡುವೆ ಭೀಕರ ಅಪಘಾತ ಸಂಭವಿಸಿದೆ. ದ್ವಿಚಕ್ರ ವಾಹನದಲ್ಲಿದ್ದ 10 ವರ್ಷದ ಮೆರಾನ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಟಿವಿಎಸ್ ಎಕ್ಸ್ ಎಲ್ ನಲ್ಲಿ ನಾಲ್ವರು ಅಪ್ರಾಪ್ತ ಸಹೋದರರು ತೆರಳುತ್ತಿದ್ದರು.
ನಿಯಂತ್ರಣ ತಪ್ಪಿ ಲಾರಿಗೆ ಟಿವಿಎಸ್ ಎಕ್ ಎಲ್ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಮೆರಾನ್ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

ಸಹೋದರರಾದ ಆದಾನ್ ಪಾಷ, ಫೈಸಲ್, ರಿಯಾಜ್ ಸ್ಥಿತಿ ಗಂಭೀರವಾಗಿದೆ. ಅವರನ್ನು ಚಾಮರಾಜನಗರ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಆಸ್ಪತ್ರೆಗೆ ರವಾನಿಸಲಾಗಿದೆ.

ಸರಣಿ‌ ಅಪಘಾತ:ಬಾಲಕ ಸಾವು; ಮೂವರು ಸಹೋದರರು ಗಂಭೀರ Read More

ಬೈಕ್ ಗೆ ಲಾರು ಡಿಕ್ಕಿ ಸವಾರ ದುರ್ಮರಣ

ಬೆಳಗಾವಿ: ಹಿಂದಿನಿಂದ ಬಂದ ಲಾರಿಯೊಂದು ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಮೃತಪಟ್ಟ ಘಟನೆ ನಗರದಲ್ಲಿ ನಡೆದಿದೆ.

ನಗರದ ಗೋವಾವೆಸ್ ಸಮೀಪ ಸಿಗ್ನಲ್ ಬಳಿ ತಡರಾತ್ರಿ ಅಪಘಾತ ಸಂಭವಿಸಿದೆ.

ಖಾನಾಪುರ ತಾಲೂಕಿನ ಕಾಪೋಲಿ ಗ್ರಾಮದ ಸುನಿಲ್ ದಿಲೀಪ್ ದೇಸಾಯಿ (42)ಮೃತಪಟ್ಟ ದುರ್ದೈವಿ.

ಸುನಿಲ್ ದೇಸಾಯಿ ತಮ್ಮ ಬೈಕ್ ನಲ್ಲಿ ಆರ್‌ಪಿಡಿ ಕಾಲೇಜು ರಸ್ತೆಯಿಂದ ಗೋವಾವೇಸ್ ಕಡೆಗೆ ತೆರಳುತ್ತಿದ್ದಾಗ ಹಿಂದಿನಿಂದ ಲಾರಿ ಬೈಕಿಗೆ ಡಿಕ್ಕಿ ಹೊಡೆದಿದೆ.

ದಕ್ಷಿಣ ಸಂಚಾರ ಪೊಲೀಸರು ಹಾಗೂ ಟಿಳಕವಾಡಿ ಪೊಲೀಸರು ಆಗಮಿಸಿ ಪರಿಶೀಲಿಸಿ, ಲಾರಿ ಚಾಲಕನ‌ ವಿರುದ್ಧ ಪ್ರಕರಣ ದಾಖಲಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

ಬೈಕ್ ಗೆ ಲಾರು ಡಿಕ್ಕಿ ಸವಾರ ದುರ್ಮರಣ Read More