ಎ ಐ ಐ ಎಸ್ ಹೆಚ್ ಸಂಸ್ಥೆಗೆ ವರುಣ ಕ್ಷೇತ್ರದಲ್ಲಿ 10 ಎಕರೆ ಜಾಗ-ಸಿ.ಎಂ

ಮೈಸೂರು ಸೆ 1: ಮಗು ಹೊಟ್ಟೆಯಲ್ಲಿರುವಾಗಲೇ ವಾಕ್ ಮತ್ತು ಶ್ರವಣ ಸಮಸ್ಯೆ ಪತ್ತೆ ಹಚ್ಚಲು ಸಾಧ್ಯವಾಗಿರುವುದು ನಿಜಕ್ಕೂ ದೊಡ್ಡ ಸಾಧನೆ,ಅದಕ್ಕಾಗಿ ಮೈಸೂರಿನ ವಾಕ್ ಮತ್ತು ಶ್ರವಣ ಸಂಸ್ಥೆ ಅಭಿನಂದನಾರ್ಹ ಎಂದು ಸಿಎಂ ಸಿದ್ದರಾಮಯ್ಯ ನುಡಿದರು.

ಅಖಿಲ ಭಾರತ ವಾಕ್-ಶ್ರವಣ ಸಂಸ್ಥೆ ಮೈಸೂರು ವತಿಯಿಂದ ಆಯೋಜಿಸಿದ್ದ
ಅಖಿಲ ಭಾರತ ವಾಕ್-ಶ್ರವಣ ಸಂಸ್ಥೆಯ
ವಜ್ರ ಮಹೋತ್ಸವ ಕಾರ್ಯಕ್ರಮದಲ್ಲಿ ಸಿಎಂ ಮಾತನಾಡಿದರು.

ಈ ಕ್ಷೇತ್ರದಲ್ಲಿ ಇನ್ನಷ್ಟು ಸಾಧನೆ ಮತ್ತು ಪ್ರಗತಿ ಕಾಣಬೇಕಾಗಿದೆ. ಇದಕ್ಕಾಗಿ ನಮ್ಮ‌ ಸರ್ಕಾರ ಈಗಾಗಲೇ ವರುಣ ಕ್ಷೇತ್ರದಲ್ಲಿ 10 ಎಕರೆ ಜಾಗ ಒದಗಿಸಿದೆ. ಇಷ್ಟಲ್ಲದೆ ಅಗತ್ಯ ಇರುವ ಎಲ್ಲಾ ನೆರವನ್ನೂ ಒದಗಿಸಲು ನಾವು ಸಿದ್ದರಿದ್ದೇವೆ ಎಂದು ಭರವಸೆ ನೀಡಿದರು.

ಅಖಿಲ ಭಾರತ ವಾಕ್ ಮತ್ತು ಶ್ರವಣ ಸಂಸ್ಥೆಯು ವಾಕ್ ಮತ್ತು ಶ್ರವಣ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಕೆಲಸ ಮಾಡುತ್ತಿರುವ ಏಷ್ಯಾದ ಅತ್ಯುತ್ತಮ ಸಂಸ್ಥೆಗಳಲ್ಲೊಂದಾಗಿರುವುದು ನಮ್ಮ ಜಿಲ್ಲೆಯ ಮತ್ತು ರಾಜ್ಯದ ಹೆಮ್ಮೆ.
ಧ್ವನಿಯಿಲ್ಲದವರಿಗೆ ಧ್ವನಿಯಾಗಿರುವ, ಕಿವಿ ಕೇಳದೆ ಮೌನವಾಗಿರುವವರಿಗೆ ಮಾತಿನ ಚೈತನ್ಯ ತುಂಬಿರುವ ಇಂಥ ಸಂಸ್ಥೆಯು ಮೈಸೂರಿನಲ್ಲಿರುವುದು ಹಾಗೂ ವಜ್ರ ಮಹೋತ್ಸವವನ್ನು ಆಚರಿಸಿಕೊಳ್ಳುತ್ತಿರುವುದು ನಮ್ಮೆಲ್ಲರಿಗೂ ಹೆಮ್ಮೆಯ ಸಂಗತಿಯಾಗಿದೆ ಎಂದು ಖುಷಿ ವ್ಯಕ್ತಪಡಿಸಿದರು.

1966ರಲ್ಲಿ ಮೈಸೂರಿನಲ್ಲಿ ಸ್ಥಾಪನೆಯಾದ ಈ ಸಂಸ್ಥೆಯು ವಾಕ್ ಮತ್ತು ಶ್ರವಣ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಮಾನವ ಸಂಪನ್ಮೂಲ ಅಭಿವೃದ್ಧಿ, ಸಂಶೋಧನೆ, ಚಿಕಿತ್ಸೆ, ಪುನರ್ವಸತಿ ಮತ್ತು ಶೈಕ್ಷಣಿಕ ಕ್ಷೇತ್ರದಲ್ಲೂ ಸೇವೆ ಒದಗಿಸುತ್ತಿರುವ ಮಹತ್ವದ ರಾಷ್ಟ್ರೀಯ ಸಂಸ್ಥೆಯಾಗಿದೆ ಎಂದು ಹೇಳಿದರು.

ನಮ್ಮ ರಾಜ್ಯ ಸರ್ಕಾರದ ಪ್ರಾಯೋಜಿತ ಕಾಕ್ಲಿಯರ್ ಇಂಪ್ಲಾಂಟ್ ಕಾರ್ಯಕ್ರಮವಾದ ‘ಶ್ರವಣ ಸಂಜೀವಿನಿ’ ಯೋಜನೆಗೆ 2024-25ರ ಬಜೆಟ್ಟಿನಲ್ಲಿ ಆರ್ಥಿಕವಾಗಿ ದುರ್ಬಲ ವರ್ಗದ ಮಕ್ಕಳಿಗೆ ದುಬಾರಿ ಕಾಕ್ಲಿಯರ್ ಇಂಪ್ಲಾಂಟ್ ಶಸ್ತ್ರಚಿಕಿತ್ಸೆಗಳನ್ನು ಉಚಿತವಾಗಿ ಒದಗಿಸಲು 32 ಕೋಟಿ ರೂ ಮೀಸಲಿಟ್ಟಿದೆ ಎಂದು ಸಿಎಂ ಮಾಹಿತಿ ನೀಡಿದರು.

ಮಗು ಭ್ರೂಣಾವಸ್ಥೆಯಲ್ಲಿರುವಾಗಲೇ ಅದರ ಸಂವಹನದ ಸಮಸ್ಯೆಗಳನ್ನು ಪತ್ತೆ ಹಚ್ಚುವ ತಂತ್ರಜ್ಞಾನ ಗಳಿಸಲು ನಮಗೆ ಸಾಧ್ಯವಾಗಿರುವುದು ಇಂತಹ ಪ್ರೀಮಿಯರ್ ಸಂಸ್ಥೆಗಳಿಂದಾಗಿ, ಸಮಸ್ಯೆಯನ್ನು ಗುರುತಿಸಿ ಚಿಕಿತ್ಸೆ ನೀಡುವ ಬಗ್ಗೆ ಸಮಾಜದಲ್ಲಿ ಜಾಗೃತಿ ಮೂಡಿಸುವ ಮಹತ್ತರ ಕೆಲಸವನ್ನು ಈ ಸಂಸ್ಥೆಯು ಮಾಡುತ್ತಿದೆ. ವಜ್ರ ಮಹೋತ್ಸವದ ಈ ಸಂದರ್ಭದಲ್ಲಿ ಈ ಸಂಸ್ಥೆಯಲ್ಲಿದ್ದುಕೊಂಡು ಸ್ವಸ್ಥ ಸಮಾಜದ ಏಳಿಗೆಗಾಗಿ ದುಡಿದ-ದುಡಿಯುತ್ತಿರುವ ತಜ್ಞರು, ಪ್ರಾಧ್ಯಾಪಕರು, ಸಹಾಯಕರು, ವಿದ್ಯಾರ್ಥಿಗಳು ಸೇರಿದಂತೆ ಎಲ್ಲರನ್ನೂ ಕೃತಜ್ಞತೆಯಿಂದ ಸ್ಮರಿಸುತ್ತೇನೆ ಎಂದು ಹೇಳಿದರು.

60 ವರ್ಷಗಳ ಸುದೀರ್ಘ ಇತಿಹಾಸವುಳ್ಳ ಈ ಸಂಸ್ಥೆಯು ಇನ್ನಷ್ಟು ಎತ್ತರಕ್ಕೆ ಬೆಳೆಯಲಿ, ವಾಕ್ ಮತ್ತು ಶ್ರವಣದೋಷದ ಸಮಸ್ಯೆಗಳು ಶಾಶ್ವತವಾಗಿ ಬಾರದಂತೆ ತಡೆಯಲು ಅಗತ್ಯವಿರುವ ಎಲ್ಲ ಸಂಶೋಧನೆಗಳನ್ನು ಕೈಗೊಂಡು ಜಗತ್ತಿಗೆ ಬೆಳಕು ನೀಡಲಿ ಎಂದು ಸಿದ್ದರಾಮಯ್ಯ ಹಾರೈಸಿದರು.

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಕಾರ್ಯಕ್ರಮ ಉದ್ಘಾಟಿಸಿದರು.
ರಾಜ್ಯಪಾಲ ಥೇವರ್ ಚಂದ್ ಗೆಹ್ಲೋಟ್, ಕೇಂದ್ರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ರಾಜ್ಯ ಖಾತೆ ಸಚಿವೆ ಅನುಪ್ರಿಯಾ ಪಟೇಲ್, ರಾಜ್ಯ ಸರ್ಕಾರದ ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್, ಸಂಸದರಾದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಉಪಸ್ಥಿತರಿದ್ದರು.

ಎ ಐ ಐ ಎಸ್ ಹೆಚ್ ಸಂಸ್ಥೆಗೆ ವರುಣ ಕ್ಷೇತ್ರದಲ್ಲಿ 10 ಎಕರೆ ಜಾಗ-ಸಿ.ಎಂ Read More

ಎ ಐ ಐ ಎಸ್ ಹೆಚ್ ನ ಆರೋಗ್ಯ ಸೇವಾ ಕಾರ್ಯ ‌ಅನನ್ಯ: ಮುರ್ಮು ಶ್ಲಾಘನೆ

ಮೈಸೂರು,ಸೆ.1: ಕಿವುಡು ಮತ್ತು ಮೂಕರ ಆರೋಗ್ಯ ಚಿಕಿತ್ಸೆ, ಶಿಕ್ಷಣ, ವೈದ್ಯಕೀಯ ಮತ್ತು ಸಂಶೋಧನೆ ಕಾರ್ಯದಲ್ಲಿ ಅನನ್ಯ ಸೇವೆ ಸಲ್ಲಿಸುತ್ತಿರುವ ಮೈಸೂರಿನ ವಾಕ್ ಮತ್ತು ಶ್ರವಣ ಸಂಸ್ಥೆಯು ಇಡೀ ದೇಶದ ಹೆಮ್ಮೆ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಬಣ್ಣಿಸಿದರು.

ಮಾನಸ ಗಂಗೊತ್ರಿಯಲ್ಲಿರುವ ಭಾರತೀಯ ವಾಕ್ ಮತ್ತು ಶ್ರವಣ ಸಂಸ್ಥೆಯ ವಜ್ರಮಹೋತ್ಸವ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಇಂದೊಂದು ಐತಿಹಾಸಿಕ ಸಂದರ್ಭ.
1965 ರಲ್ಲಿ ಪ್ರಾರಂಭವಾದ ಈ ಸಂಸ್ಥೆ ಕಳೆದ 6 ದಶಕಗಳಲ್ಲಿ ಸಂವಹನ ಅಸಮರ್ಥತೆ ಪರಿಹಾರಕ್ಕಾಗಿ ತಜ್ಞ ಮಾನವ ಸಂಪನ್ಮೂಲಗಳ ಸಹಾಯದಿಂದ ಅಪ್ರತಿಮ ಸೇವೆ ಸಲ್ಲಿಸುತ್ತಿದೆ ಎಂದು ಹೇಳಿದರು.

ಎಲ್ಲಾ ವಯೋಮಾನದವರಿಗೂ ಬಹುಮುಖಿ ಚಿಕಿತ್ಸೆ ಮೂಲಕ ಸೇವೆ ಒದಗಿಸುತ್ತಿರುವುದು ಅಭಿನಂದನೀಯ. ಸಮುದಾಯ ಸೇವಾ ಕೇಂದ್ರಗಳು, ಟೆಲಿ ಸರ್ವೆಕ್ಷಣೆ ಇನ್ನಿತರ ಸೇವೆಗಳ ಮೂಲಕ ದೇಶದಾದ್ಯಂತ ಜನತೆಗೆ ನೆರವಾಗುತ್ತಿದೆ ಎಂದು ದ್ರೌಪದಿ ಮರ್ಮು ಅವರು‌ ಶ್ಲಾಘಿಸಿದರು.

ಹಲವು ವರ್ಷಗಳಿಂದ
ಈ ಸಂಸ್ಥೆಯ ನಾಯಕತ್ವವನ್ನು ಮಹಿಳೆಯರು ವಹಿಸಿರುವುದು ವಿಶೇಷವಾಗಿದೆ.ಈಗಿನ ನಿರ್ದೇಶಕಿ ಡಾ. ಪುಷ್ಪಲತಾ ಎಸ್ ಅವರು ನೀಡುತ್ತಿರುವ ಸೇವೆ ಪ್ರಶಂಸನೀಯ. ಈ ಸಂಸ್ಥೆ ಮಹಿಳಾ ನೇತೃತ್ವದ ಅಭಿವೃದ್ಧಿಗೆ ಒಂದು ಉತ್ತಮ ಉದಾಹರಣೆಯಾಗಿದೆ ಎಂದು ಹೇಳಿದರು.

ಎಐ ಐ ಎಸ್ ಹೆಚ್ ಸಂಸ್ಥೆ ಪ್ರಾರಂಭಕ್ಕೆ ಮೈಸೂರು ಮಹಾರಾಜ ಶ್ರೀ ಜಯಚಾಮರಾಜೇಂದ್ರ ಒಡೆಯರ್ ಭೂಮಿ ದಾನ ಮಾಡಿರುವುದು ಸ್ಮರಣೀಯ ಇಂದು ಅವರ ಕುಟುಂಬದ ಯದಯವೀರ್ ಒಡೆಯರ್ ಅವರು ಉಪಸ್ಥಿತರಿರುವುದು ಖುಷಿ ತಂದಿದೆ ಎಂದು ತಿಳಿಸಿದರು.

ಇತರೆ ಸಮಸ್ಯೆಗಳಂತೆ ವಾಕ್ ಮತ್ತು ಶ್ರವಣ ಸಂಬಂಧಿತ ತೊಂದರೆಗಳಲ್ಲಿ ಕೂಡ ಪ್ರಾಥಮಿಕ ಹಂತದಲ್ಲಿಯೇ ಲಕ್ಷಣಗಳನ್ನು ಗುರುತಿಸುವುದು ಮತ್ತು ಚಿಕಿತ್ಸೆ ನೀಡಲು ತಜ್ಞರ ಅವಶ್ಯಕತೆ ಇದೆ ಅವರು ರಾಷ್ಟ್ರಪತಿಗಳು ಅಭಿಪ್ರಾಯ ‌ಪಟ್ಟರು.

ಈ ಸಂಸ್ಥೆಯ ಮೂಲಕ ಸ್ಥಾಪಿಸಲ್ಪಟ್ಟ Inclusive Therapy Park ದೇಶದ ಮೊದಲ ಮಾದರಿಯಾಗಿದ್ದು, ಮಕ್ಕಳಿಗಾಗಿ ವಿನ್ಯಾಸಗೊಳಿಸಲಾಗಿದೆ. ಇದು ಸಂವಹನ ಅಸಮರ್ಥತೆ ಯಿಂದ ಬಳಲುತ್ತಿರುವವರಿಗೆ ಉಪಯುಕ್ತವಾಗಿದೆ ಎಂದು ಮುರ್ಮು ತಿಳಿಸಿದರು.

ಇಂದಿನ ತಂತ್ರಜ್ಞಾನ ಯುಗದಲ್ಲಿ, ವಾಕ್ ಮತ್ತು ಶ್ರವಣ ತೊಂದರೆಗಳನ್ನು ನಿವಾರಿಸಲು ಅತ್ಯಾಧುನಿಕ ತಂತ್ರಜ್ಞಾನ ಬಹಳ ಮುಖ್ಯ.ಇವುಗಳ ಬಳಕೆಯಿಂದ ಸಾಮಾನ್ಯ ಜನರು ಶ್ರವಣ ಸಹಾಯಕ ಸಾಧನಗಳು ಮತ್ತು ಸಾಧನೋಪಕರಣಗಳನ್ನು ಸುಲಭವಾಗಿ ಪಡೆಯಬಹುದು ಎಂದು ಅವರು ಅಭಿಪ್ರಾಯ ಪಟ್ಟರು.

Cochlear Implants ಗಳಂತಹ ಸಾಧನಗಳು ಈಗ ಲಭ್ಯವಾಗುತ್ತಿವೆ. ಇಂತಹ ಸಾಧನಗಳ ತಯಾರಿಕೆಯಲ್ಲಿ ಸ್ವಾವಲಂಬಿ ಆಗಲು ಆಯುಶ್ ಸಂಸ್ಥೆಗಳು ಪ್ರಮುಖ ಪಾತ್ರವಹಿಸಬೇಕು ಸಂಶೋಧನೆ ಮತ್ತು ಆವಿಷ್ಕಾರಗಳ ಮೂಲಕ ದೇಶವನ್ನು ಆತ್ಮನಿರ್ಭರವಾಗಿಸಲು ಸಹಕಾರಿಯಾಗಬೇಕು ಎಂದು ಮುರ್ಮು ಕರೆ ನೀಡಿದರು.

ಎ ಐ ಐ ಎಸ್ ಹೆಚ್ ನ ಆರೋಗ್ಯ ಸೇವಾ ಕಾರ್ಯ ‌ಅನನ್ಯ: ಮುರ್ಮು ಶ್ಲಾಘನೆ Read More