ರಷ್ಯಾ, ಉಕ್ರೇನಿಯನ್ ನಾಯಕರ ವಿರುದ್ಧ ಟ್ರಂಪ್ ಟೀಕೆ

ಅಮೇರಿಕ: ಯುದ್ಧ ಕೊನೆಗೊಳಿಸಲು ಕದನ ವಿರಾಮವನ್ನು ರೂಪಿಸಲು ರಷ್ಯಾ ಮತ್ತು ಉಕ್ರೇನಿಯನ್ ನಾಯಕರು ಹೆಣಗಾಡುತ್ತಿದ್ದರೆ‌ ಇತ್ತ ಅಮೇರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಮತ್ತು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಇಬ್ಬರನ್ನೂ ಟೀಕಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಟ್ರಂಪ್, ಕದನ ವಿರಾಮ ವಿಚಾರದಲ್ಲಿ ನಾವು ಸಾಕಷ್ಟು ಪ್ರಗತಿ ಸಾಧಿಸುತ್ತಿದ್ದೇವೆ ಇಬ್ಬರ ನಡುವೆ ಅಗಾಧ ದ್ವೇಷವಿದೆ ಪುಟಿನ್ ಝೆಲೆನ್ಸ್ಕಿಯ ವಿಶ್ವಾಸಾರ್ಹತೆಯನ್ನು ಪ್ರಶ್ನಿಸಿದ್ದಕ್ಕೆ ಅವರು ಕೋಪಗೊಂಡಿದ್ದಾರೆ ಎಂದು ಹೇಳಿದ್ದಾರೆ.

ಅಂತೆಯೇ ಈಗಾಗಲೇ ತೀವ್ರ ಆರ್ಥಿಕ ನಿರ್ಬಂಧಗಳನ್ನು ಎದುರಿಸುತ್ತಿರುವ ರಷ್ಯಾದ ಮೇಲೆ ಹೊಸ ನಿರ್ಬಂಧಗಳನ್ನು ಸೇರಿಸುವುದನ್ನು ಮತ್ತು ಅದರ ತೈಲ ರಫ್ತನ್ನು ದುರ್ಬಲಗೊಳಿಸಲು ಸುಂಕಗಳನ್ನು ಬಳಸುವುದನ್ನು ಪರಿಗಣಿಸುವುದಾಗಿ ಟ್ರಂಪ್ ಹೇಳಿದರು.

ಶಾಂತಿ ಒಪ್ಪಂದಕ್ಕೆ ಸಹಿ ಹಾಕಲು ಝೆಲೆನ್ಸ್ಕಿ ಕಾನೂನು ಬದ್ಧತೆಯನ್ನು ಹೊಂದಿಲ್ಲ ಎಂದು ರಷ್ಯಾ ಅಧ್ಯಕ್ಷ ಪುಟಿನ್ ತಕರಾರು ತೆಗೆದಿದ್ದಾರೆ. ಅಲ್ಲದೆ ಉಕ್ರೇನ್‌ಗೆ ಬಾಹ್ಯ ಆಡಳಿತದ ಅಗತ್ಯವಿದೆ ಎಂದು ಮತ್ತೆ ಪುನರುಚ್ಚರಿಸಿದ್ದಾರೆ.

ರಷ್ಯಾ, ಉಕ್ರೇನಿಯನ್ ನಾಯಕರ ವಿರುದ್ಧ ಟ್ರಂಪ್ ಟೀಕೆ Read More

ಅಮೆರಿಕದಲ್ಲಿ ವಿಮಾನ ಪತನ

ವಾಷಿಂಗ್ಟನ್: ಅಮೆರಿಕದಲ್ಲಿ ಮತ್ತೊಂದು ವಿಮಾನ ಅಪಘಾತ ಸಂಭವಿಸಿದ್ದು, ವಿಮಾನವೊಂದು ಜನವಸತಿ ಕಟ್ಟಡಕ್ಕೆ ಅಪ್ಪಳಿಸಿದ ಪರಿಣಾಮ ವಿಮಾನದಲ್ಲಿದ್ದ ಎಲ್ಲಾ ಪ್ರಯಾಣಿಕರು ಸಾವನ್ನಪ್ಪಿದ್ದಾರೆ.

ಅಮೆರಿಕದ ಅಯೋವಾದಿಂದ ಮಿನ್ನೇಸೋಟಕ್ಕೆ ತೆರಳುತ್ತಿದ್ದ ಸಣ್ಣ ವಿಮಾನವೊಂದು ಮಿನ್ನಿಯಾಪೋಲಿಸ್ ಉಪನಗರದಲ್ಲಿರುವ ಕಟ್ಟಡಕ್ಕೆ ಡಿಕ್ಕಿ ಹೊಡೆದು ಬೆಂಕಿ ಹೊತ್ತಿಕೊಂಡು ಸ್ಪೋಟವಾಗಿದೆ.

ಇದರಿಂದಾಗಿ ವಿಮಾನದಲ್ಲಿದ್ದ ಎಲ್ಲ ಪ್ರಯಾಣಿಕರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.

ವಿಮಾನವು ಡಿಕ್ಕಿ ಹೊಡೆದ ಕಾರಣ ಕಟ್ಟಡಕ್ಕೆ ಬಹಳ ಹಾನಿಯಾಗಿದೆ. ಅದೃಷ್ಟವಶಾತ ಮನೆಯಲ್ಲಿದ್ದವರಿಗೆ ಯಾವುದೇ ತೊಂದರೆಯಾಗಿಲ್ಲ ಎಂದು ತಿಳಿದುಬಂದಿದೆ.

ಸಿಂಗಲ್ ಎಂಜಿನ್ ಹೊಂದಿರುವ ವಿಮಾನದಲ್ಲಿ ಎಷ್ಟು ಜನರಿದ್ದರು ಎಂಬುದು ಗೊತಗತಾಗಿಲ್ಲ ಆದರೆ ಇದ್ದವರು ಯಾರೂ ಬದುಕುಳಿದಿಲ್ಲ ಎಂದು ವರದಿಯಾಗಿದೆ.

ಫೆಡರಲ್ ಏವಿಯೇಷನ್ ​​ಅಡ್ಮಿನಿಸ್ಟ್ರೇಷನ್ (FAA) ಪ್ರಕಾರ, ವಿಮಾನವು ಡೆಸ್ ಮೊಯಿನ್ಸ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಮತ್ತೊಂದು ಮಿನ್ನಿಯಾಪೋಲಿಸ್ ಉಪನಗರದಲ್ಲಿರುವ ಅನೋಕಾ ಕೌಂಟಿ-ಬ್ಲೇನ್ ವಿಮಾನ ನಿಲ್ದಾಣಕ್ಕೆ ತೆರಳಿತ್ತು. ಮಾರ್ಗಮಧ್ಯೆ ವಿಮಾನ ತಾಂತ್ರಿಕ ಸಮಸ್ಯೆಯಿಂದಾಗಿ ಜನವಸತಿ ಕಟ್ಟಡಕ್ಕೆ ಢಿಕ್ಕಿಯಾಗಿದೆ.

ಅಮೆರಿಕದಲ್ಲಿ ವಿಮಾನ ಪತನ Read More

ಸುನಿತಾ ವಿಲಿಯಮ್ಸ್ ಗೆ‌ ಹೆಚ್ಚುವರಿ ವೇತನ-ಟ್ರಂಪ್

ವಾಷಿಂಗ್ಟನ್: 8 ದಿನಗಳ ಅಧ್ಯಯನಕ್ಕಾಗಿ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ತೆರಳಿ ಹೆಚ್ಚುವರಿಯಾಗಿ 278 ದಿನಗಳು ಅಲ್ಲೇ ಉಳಿದಿದ್ದ ಸುನೀತಾ ವಿಲಿಯಮ್ಸ್ ಹಾಗೂ ಬುಚ್ ವಿಲ್ಮೋರ್ ಅವರಿಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಮ್ಮ ಸ್ವಂತ ಹಣದಿಂದ ಹೆಚ್ಚುವರಿ ವೇತನ ನೀಡುವುದಾಗಿ ತಿಳಿಸಿದ್ದಾರೆ.

ಹೆಚ್ಚುವರಿ ಸಂಬಳದ ಬಗ್ಗೆ ಯಾರೂ ನನ್ನ ಬಳಿ ಬಂದು ಕೇಳಿಕೊಂಡಿಲ್ಲ. ಒಂದು ವೇಳೆ ಅದರ ಅವಶ್ಯಕತೆ ಇದ್ದಲ್ಲಿ ನನ್ನ ಸ್ವಂತ ಹಣದಿಂದಲೇ ಅವರಿಗೆ ಸಂಬಳ ನೀಡುತ್ತೇನೆ ಎಂದು ಹೇಳಿದ್ದಾರೆ ‌

ಬೇರೆ ಖಾಸಗಿ ವಲಯಗಳಂತೆ ನಾಸಾದ ಗಗನಯಾತ್ರಿಗಳಿಗೆ ಹೆಚ್ಚುವರಿ ಕೆಲಸಕ್ಕೆ ಹೆಚ್ಚು ಸಂಬಳ ಸಿಗುವುದಿಲ್ಲ,ಬದಲಿಗೆ ಅಮೆರಿಕದ ಫೆಡರಲ್(ಸರ್ಕಾರಿ) ಉದ್ಯೋಗಿಗಳಂತೆ ಅವರಿಗೆ ಸೌಲಭ್ಯಗಳು ದೊರೆಯುತ್ತವೆ.

ಸುನಿತಾ ವಿಲಿಯಮ್ಸ್ ಗೆ‌ ಹೆಚ್ಚುವರಿ ವೇತನ-ಟ್ರಂಪ್ Read More

ಲಕ್ಷಾಂತರ ವಲಸಿಗರ ಕಾನೂನುಬದ್ಧ ರಕ್ಷಣೆ ರದ್ದು:ಟ್ರಂಪ್‌

ವಾಷಿಂಗ್ಟನ್: ಲಕ್ಷಾಂತರ ವಲಸಿಗರ ಕಾನೂನುಬದ್ಧ ರಕ್ಷಣೆಯನ್ನು ರದ್ದುಗೊಳಿಸುವುದಾಗಿ ಅಮೆರಿಕ ಹೇಳಿದ್ದು, ಅವರಿಗೆ ದೇಶ ತೊರೆಯಲು ವಾರಗಳ ಕಾಲಾವಕಾಶ ನೀಡಿದೆ.

ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅಮೆರಿಕದ ಇತಿಹಾಸದಲ್ಲಿಯೇ ಅತಿದೊಡ್ಡ ಗಡಿಪಾರು ಅಭಿಯಾನವನ್ನು ಕೈಗೊಳ್ಳುವುದಾಗಿ ಅದರಲ್ಲೂ ಲ್ಯಾಟಿನ್ ಅಮೆರಿಕನ್ ರಾಷ್ಟ್ರಗಳಿಂದ ಅಕ್ರಮ ವಲಸೆ ತಡೆಯುವುದಾಗಿ ಪ್ರತಿಜ್ಞೆ ಮಾಡಿದ್ದಾರೆ.

ಅಕ್ಟೋಬರ್ 2022ರ ನಂತರ ಅಮೆರಿಕ್ಕೆ ಬಂದಿರುವ ಕ್ಯೂಬಾ, ಹೈಟಿ, ನಿಕರಾಗುವಾ ಮತ್ತು ವೆನೆಜುವೆಲಾ ಸೇರಿದಂತೆ ನಾಲ್ಕು ದೇಶಗಳ ಸುಮಾರು 5,32,000 ಜನರಿಗೆ ಅನ್ವಯಿಸುತ್ತದೆ ಎಂದು ಹೋಮ್‌ಲ್ಯಾಂಡ್ ಸೆಕ್ಯುರಿಟಿ ಕಾರ್ಯದರ್ಶಿ ಕ್ರಿಸ್ಟಿ ನೋಯೆಮ್ ಅವರು ಹೇಳಿದ್ದಾರೆ.

ಈ ನಾಲ್ಕು ದೇಶದ ಲಕ್ಷಾಂತರ ನಾಗರಿಕರು ಏಪ್ರಿಲ್ 24ರಂದು ಅಥವಾ ಫೆಡರಲ್ ರಿಜಿಸ್ಟರ್‌ನಲ್ಲಿ ನೋಟಿಸ್ ಪ್ರಕಟವಾದ 30 ದಿನಗಳಲ್ಲಿ ಅಮೆರಿಕದಲ್ಲಿ ಉಳಿಯುವ ತಮ್ಮ ಕಾನೂನು ರಕ್ಷಣೆಯನ್ನು ಕಳೆದುಕೊಳ್ಳಲಿದ್ದಾರೆ ಎಂದು ತಿಳಿಸಿದ್ದಾರೆ.

ಲಕ್ಷಾಂತರ ವಲಸಿಗರ ಕಾನೂನುಬದ್ಧ ರಕ್ಷಣೆ ರದ್ದು:ಟ್ರಂಪ್‌ Read More

ಭಾರತ ಮೂಲದ ನಾಲ್ವರು ಸಾಧಕಿಯರಿಗೆ ಗೌರವ

ನ್ಯೂಯಾರ್ಕ್: ಕಾನ್ಸುಲೇಟ್ ಜನರಲ್ ಆಫ್ ಇಂಡಿಯಾ ಹಾಗೂ ಫೆಡರೇಶನ್ ಆಫ್ ಇಂಡಿಯನ್ ಅಸೋಸಿಯೇಷನ್‌ (ಎಫ್‌ಐಎ), ವಿಶ್ವ ಮಹಿಳಾ ದಿನದ ಪ್ರಯುಕ್ತ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಭಾರತ ಮೂಲದ ನಾಲ್ವರು ಸಾಧಕಿಯರನ್ನು ಸನ್ಮಾನಿಸಿ ಗೌರವಿಸಿದೆ.

ಜೆಪಿ ಮಾರ್ಗನ್ ಕಂಪನಿಯ ಸಲಹೆ, ವಿಲೀನ ಹಾಗೂ ಸ್ವಾಧೀನ ಕುರಿತ ಜಾಗತಿಕ ಮುಖ್ಯಸ್ಥೆ ಅನು ಅಯ್ಯಂಗಾರ್, ಎ-ಸೀರಿಸ್ ಮ್ಯಾನೇಜ್‌ಮೆಂಟ್ ಮತ್ತು ಇನ್ವೆಸ್ಟ್‌ಮೆಂಟ್ ಸಿಇಒ ಅಂಜುಲಾ ಆಚಾರ್ಯ, ಎಲ್‌ಡಿಪಿ ವೆಂಚರ್ಸ್‌ ಸಂಸ್ಥಾಪಕಿ ವೆಂಡಿ ಡೈಮಂಡ್ ಮತ್ತು ಸಿಎನ್‌ಬಿಸಿಯ ನಿರೂಪಕಿ ಸೀಮಾ ಮೋದಿ ಅವರನ್ನು ಗೌರವಿಸಲಾಯಿತು.

ಕಾರ್ಯಕ್ರಮದಲ್ಲಿ ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಅನ್ನಪೂರ್ಣ ದೇವಿ ಅವರು ಮುಖ್ಯ ಅತಿಥಿಯಾಗಿದ್ದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಅನ್ನಪೂರ್ಣ ದೇವಿ ಅವರು, ‘ಭಾರತ-ಅಮೆರಿಕ ದ್ವಿಪಕ್ಷೀಯ ಸಂಬಂಧವನ್ನು ಬಲಪಡಿಸುವಲ್ಲಿ ಉಭಯ ದೇಶಗಳ ಮಹಿಳೆಯರು ಮುಂಚೂಣಿ ಪಾತ್ರ ವಹಿಸಿದ್ದಾರೆ’ ಎಂದು ಹೇಳಿದರು.

ಭಾರತ ಮೂಲದ ನಾಲ್ವರು ಸಾಧಕಿಯರಿಗೆ ಗೌರವ Read More

ಸುನಿತಾ ವಿಲಿಯಮ್ಸ್, ಬುಚ್ ಮಾ.19ಕ್ಕೆ ಭೂಮಿಗೆ ವಾಪಸಾಗುವ ಸಾಧ್ಯತೆ

ಫ್ಲಾರಿಡಾ (ಅಮೆರಿಕ): ಕಳೆದ ಒಂಬತ್ತು ತಿಂಗಳಿನಿಂದ ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ ಸಿಲುಕಿಕೊಂಡಿರುವ ಗಗನಯಾನಿಗಳಾದ ಸುನಿತಾ ವಿಲಿಯಮ್ಸ್ ಹಾಗೂ ಬುಚ್ ವಿಲ್ನೋರ್ ಅವರು ಮಾರ್ಚ್ 19ರಂದು ಭೂಮಿಗೆ ವಾಪಸಾಗುವ ಸಾಧ್ಯತೆಯಿದೆ.

10 ಮಿಷನ್‌ ಅನ್ನು ಶುಕ್ರವಾರ ಯಶಸ್ವಿಯಾಗಿ ಉಡಾವಣ ಮಾಡಲಾಯಿತು. ‘ಕ್ರೂ ಡ್ರಾಗನ್’ ಹೆಸರಿನ ಗಗನನೌಕೆಯನ್ನು ಹೊತ್ತುಕೊಂಡ ಸ್ಪೇಸ್‌ಎಕ್ಸ್‌ನ ‘ಫಾಲ್ಕನ್ 9’ ರಾಕೆಟ್ ಇಲ್ಲಿನ ಕೆನಡಿ ಸ್ಪೇಸ್ ಸೆಂಟರ್‌ನಿಂದ ಸ್ಥಳೀಯ ಕಾಲಮಾನ ಶುಕ್ರವಾರ ರಾತ್ರಿ 7.03ಕ್ಕೆ ನಭಕ್ಕೆ ಚಿಮ್ಮಿತು.

ಈ ಗಗನನೌಕೆಯಲ್ಲಿ ನಾಲ್ವರು ಗಗನಯಾನಿಗಳು ಐಎಸ್‌ಎಸ್‌ಗೆ ಪ್ರಯಾಣಿಸಿದ್ದಾರೆ.

ಗಗನನೌಕೆಯು ಮರಳುವಾಗ ಸುನಿತಾ ಮತ್ತು ವಿಲ್ನೋರ್ ಅಲ್ಲದೆ, ಐಎಸ್‌ಎಸ್‌ನಲ್ಲಿರುವ ನಿಕ್ ಹೇಗ್ ಮತ್ತು ಅಲೆಕ್ಸಾಂಡರ್ ಗೊರ್ಬನೊವ್ ಅವರನ್ನೂ ಕರೆತರಲಿದೆ.

ಸುನಿತಾ ವಿಲಿಯಮ್ಸ್ ಮತ್ತು ಬುಚ್ ವಿಲ್ಮೋರ್ ಕಳೆದ ಒಂಬತ್ತು ತಿಂಗಳಿನಿಂದ ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ ಸಿಲುಕಿಕೊಂಡಿದ್ದಾರೆ. ಬೋಯಿಂಗ್‌ನ ಸ್ಟಾರ್‌ಲೈನರ್ ಬಾಹ್ಯಾಕಾಶ ನೌಕೆ ಮೂಲಕ ಕೇವಲ ಎಂಟು ದಿನಗಳಿಗಾಗಿ ಬಾಹ್ಯಾಕಾಶ ಕೇಂದ್ರಕ್ಕೆ ಹೋಗಿದ್ದರು. ಆದರೆ ಸ್ಟಾರ್‌ಲೈನರ್‌ನಲ್ಲಿನ ತಾಂತ್ರಿಕ ದೋಷ ಕಾಣಿಸಿಕೊಂಡ ಪರಿಣಾಮ ಇನ್ನೂ ಹಿಂತಿರುಗಲು ಸಾಧ್ಯವಾಗಲಿಲ್ಲ.

ಎಲ್ಲವೂ ಅಂದ್ಕೊಂಡಂತೆ ನಡೆದರೆ ಸುನಿತಾ ವಿಲಿಯಮ್ಸ್, ವಿಲ್ಮೋರ್ ಮಾರ್ಚ್​ನಲ್ಲೇ ಭೂಮಿ ಮೇಲೆ ಇರುತ್ತಾರೆ.

ಸುನಿತಾ ವಿಲಿಯಮ್ಸ್, ಬುಚ್ ಮಾ.19ಕ್ಕೆ ಭೂಮಿಗೆ ವಾಪಸಾಗುವ ಸಾಧ್ಯತೆ Read More

ವಿಮಾನ ಪತನ: 60 ಪ್ರಯಾಣಿಕರು ಸಾವು

ವಾಷಿಂಗ್ಟನ್: ಅಮೆರಿಕಾದ ವಾಷಿಂಗ್ ಟನ್ ಡಿಸಿ ಏರ್ ಪೋರ್ಟ್ ಸಮೀಪ ಹೆಲಿಕಾಫ್ಟರ್ ಗೆ ವಿಮಾನ ಡಿಕ್ಕಿ ಹೊಡೆದು ನಂತರ ನದಿಗೆ ಬಿದ್ದು 60 ಪ್ರಯಾಣಿಕರು ಸಾವನ್ನಪ್ಪಿದ್ದಾರೆ.

ಅಮೆರಿಕನ್ ಏರ್ ಲೈನ್ಸ್ ಫ್ಲೈಟ್ 5342 ಡಿಸಿ ವಿಮನ ನಿಲ್ದಾಣದ ಬಳಿ ಬ್ಲ್ಯಾಕ್ ಹಾಕ್ ಹೆಲಿಕಾಪ್ಟರ್ ಗೆ ಡಿಕ್ಕಿ ಹೊಡೆದು ನಂತರ ನದಿಗೆ ಉರುಳಿ ಈ ದುರಂತ ಸಂಭವಿಸಿದೆ.

ವಾಷಿಂಗ್ಟನ್ ಡಿಸಿಯಲ್ಲಿ ವಿಮಾನ ಪತನಗೊಂಡು ಪೋಟೋಮ್ಯಾಕ್ ನದಿಗೆ ಬಿದ್ದಿದೆ. ರೊನಾಲ್ಡೋ ರೇಗನ್ ವಾಷಿಂಗ್ಟನ್ ವಿಮನ ನಿಲ್ದಾಣದ ಬಳಿ ಈ ದುರತ ಸಂಭವಿಸಿದೆ.

ಇದುವರೆಗೆ ನದಿಯಲ್ಲಿ 18 ಶವಗಳು ಪತ್ತೆಯಾಗಿದ್ದು,ವಿಮಾನದಲ್ಲಿ 60 ಮಂದಿ ಪ್ರಯಾಣಿಸುತ್ತಿದ್ದರು ಎಂದು ತಿಳಿದು ಬಂದಿದೆ.

ವಿಮಾನ ಪತನ: 60 ಪ್ರಯಾಣಿಕರು ಸಾವು Read More

ಅಮೆರಿಕದ 47ನೇ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್ ಅಧಿಕಾರ ಸ್ವೀಕಾರ

ವಾಶಿಂಗ್ಟನ್: ಡೊನಾಲ್ಡ್ ಟ್ರಂಪ್ ಅಮೆರಿಕದ 47ನೇ ಅಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ವೆಸ್ಟ್ ಲಾನ್‌ನಲ್ಲಿರುವ ಬೃಹತ್ ವೇದಿಕೆಯಲ್ಲಿ ನೂತನ ಅಧ್ಯಕ್ಷರ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮ ನಡೆಯಿತು.

ಜೆಡಿ ವ್ಯಾನ್ಸ್ ಉಪಾಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕರಿಸಿದರು.

ಚುನಾವಣಾ ಪ್ರಚಾರದ ವೇಳೆ ಡೊನಾಲ್ಡ್ ಟ್ರಂಪ್ ಗುಂಡಿನ ದಾಳಿಯಿಂದ ಅದೃಷ್ಟವಶಾತ್ ಪಾರಾಗಿದ್ದರು. ಇದು ಅಮೆರಿಕ ರಾಜಕೀಯದ ಚಿತ್ರಣವನ್ನೇ ಬದಲಾಯಿಸಿತು. ಕಮಲಾ ಹ್ಯಾರಿಸ್‌ರನ್ನು ಮಣಿಸಿದ ಡೊನಾಲ್ಡ್ ಟ್ರಂಪ್ ಎರಡನೇ ಬಾರಿಗೆ ಅಮೆರಿಕದ ಅಧ್ಯಕ್ಷಾರಿ ಆಯ್ಕೆಯಾದರು.

ಯುಎಸ್‌ನಲ್ಲಿ ಅಕ್ರಮವಾಗಿ ನೆಲೆಸಿರುವ ವಲಸಿಗರನ್ನು ಗಡೀಪಾರು ಮಾಡುವುದಾಗಿ ಟ್ರಂಪ್ ಪ್ರತಿಜ್ಞೆ ಮಾಡಿದ್ದಾರೆ.

ರಾಜಕೀಯ ಶತ್ರುಗಳ ವಿರುದ್ಧ ಪ್ರತಿಕಾರ ತೀರಿಸುವ ಮತ್ತು ಜಗತ್ತಿನಲ್ಲಿ ಮತ್ತೆ ಅಮೆರಿಕದ ಪ್ರಾಮುಖ್ಯತೆಯನ್ನು ಹೆಚ್ಚಿಸುತ್ತೇನೆ ಎಂಬ ಭರವಸೆ ನೀಡಿದ್ದ ಟ್ರಂಪ್, ಸೋಮವಾರ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಿದ್ದಾರೆ, ಇದೀಗ ಇಡೀ ವಿಶ್ವವೇ ಅಮೆರಿಕದತ್ತ ನೋಡುತ್ತಿದೆ.

ಅಮೆರಿಕ ಅಧ್ಯಕ್ಷರಾಗಿ 78 ವರ್ಷದ ಡೊನಾಲ್ಡ್‌ ಟ್ರಂಪ್‌ ಅವರ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಭಾರತದಿಂದ ಸಚಿವ ಎಸ್‌. ಜೈಶಂಕರ್, ಉದ್ಯಮಿಗಳಾದ ಮುಕೇಶ್ ಅಂಬಾನಿ ಮತ್ತು ನೀತಾ ಅಂಬಾನಿ ಕೂಡ ಭಾಗಿಯಾಗಿದ್ದಾರೆ. ವಿಶ್ವದ ಮೂವರು ಶ್ರೀಮಂತ ವ್ಯಕ್ತಿಗಳಾದ ಎಲಾನ್ ಮಸ್ಕ್, ಜೆಫ್ ಬೆಜೋಸ್ ಮತ್ತು ಮಾರ್ಕ್ ಜುಕರ್‌ಬರ್ಗ್ ಕೂಡ ಟ್ರಂಪ್ ಅವರ ಪದಗ್ರಹಣ ಸಮಾರಂಭದಲ್ಲಿ ಭಾಗವಹಿಸಿದ್ದಾರೆ.

ಅಮೆರಿಕದ 47ನೇ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್ ಅಧಿಕಾರ ಸ್ವೀಕಾರ Read More

ತಬಲಾ ಮಾಂತ್ರಿಕ ಜಾಕಿರ್ ಹುಸೇನ್ ವಿಧಿವಶ

ನವದೆಹಲಿ: ವಿಶ್ವವಿಖ್ಯಾತ ತಬಲಾ ವಾದಕ ಜಾಕಿರ್ ಹುಸೇನ್ ಅವರು ಭಾನುವಾರ ಅಮೆರಿಕದಲ್ಲಿ ನಿಧನರಾಗಿದ್ದಾರೆ.

ಅವರಿಗೆ‌ 73 ವರ್ಷಗಳಾಗಿತ್ತು.
ಹೃದಯ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಇಂದು ಸಂಜೆ ಕೊನೆಯುಸಿರೆಳೆದಿದ್ದಾರೆ.

ಭಾರತ ಸೇರಿದಂತೆ ವಿದೇಶಗಳಲ್ಲಿ ಅವರು ಪ್ರಸಿದ್ದರಾಗಿದ್ದರು. ಹಲವಾರು ಹಾಲಿವುಡ್ ಚಿತ್ರಗಳಲ್ಲಿ ಕಾರ್ಯ ನಿರ್ವಹಿಸಿದ್ದರು.

ಸದ್ಯ ಅವರ ನಿಧನಕ್ಕೆ ಅನೇಕರು ಸಂತಾಪ ಸೂಚಿಸಿದ್ದಾರೆ.

ಜಾಕಿರ್ ಹುಸೇನ್ ಅವರಿಗೆ ಕಳೆದ ಎರಡು ವಾರಗಳಿಂದ ಹೃದಯ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದರು, ಹಾಗಾಗಿ ಅಮೆರಿಕದ ಸ್ಯಾನ್ ಫ್ರಾನ್ಸಿಸ್ಕೋ ಆಸ್ಪತ್ರೆಯೊಂದಕ್ಕೆ ದಾಖಲಿಸಲಾಗಿತ್ತು.

ಆದರೆ ಭಾನುವಾರ ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ. ಜಾಕಿರ್ ಹುಸೇನ್ ನಿಧನಕ್ಕೆ ಹಲವು ಗಣ್ಯರು ಕಂಬನಿ ಮಿಡಿದಿದ್ದಾರೆ.

ಭಾರತದ ಅತ್ಯಂತ ಪ್ರಸಿದ್ಧ ಶಾಸ್ತ್ರೀಯ ಸಂಗೀತಗಾರರಲ್ಲಿ ಒಬ್ಬರಾಗಿರುವ ಜಾಕಿರ್ ಹುಸೇನ್​, ಪ್ರಸಿದ್ಧ ತಬಲಾ ವಾದಕ ಅಲ್ಲಾ ರಖಾರವರ ಹಿರಿಯ ಪುತ್ರ. ಮಾರ್ಚ್ 9, 1951 ರಂದು ಮುಂಬೈನಲ್ಲಿ ಜನಿಸಿದ ಜಾಕಿರ್ ಹುಸೇನ್, ಚಿಕ್ಕ ವಯಸ್ಸಿನಿಂದಲೂ ಸಂಗೀತದ ವಾತಾವರಣದಲ್ಲಿ ಬೆಳೆದವರು. ಅವರ ತಂದೆಯ ಕಟ್ಟುನಿಟ್ಟಿನ ಮಾರ್ಗದರ್ಶನದಲ್ಲಿ ಜಾಕಿರ್ ಹುಸೇನ್​​ ಅಸಾಧಾರಣ ಪ್ರತಿಭೆಯಾಗಿ ಹೊರಹೊಮ್ಮಿದರು.

ಜಾಕಿರ್ ಹುಸೇನ್ ಅವರಿಗೆ 5 ಗ್ರ್ಯಾಮಿ ಪ್ರಶಸ್ತಿಗೆ ಭಾಜನರಾಗಿದ್ದರು. 1988ರಲ್ಲಿ ಪದ್ಮಶ್ರೀ ಪ್ರಶಸ್ತಿ, 2002ರಲ್ಲಿ ಪದ್ಮಭೂಷಣ ಮತ್ತು 2023ರಲ್ಲಿ ಪದ್ಮವಿಭೂಷಣ ಪ್ರಶಸ್ತಿಯ ಗರಿಗಳು ಮುಡಿಗೇರಿದ್ದವು.

ಪ್ರಧಾನಿ ಮೋದಿ,ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ, ಕರ್ನಾಟಕ
ಸಿಎಂ ಸಿದ್ದರಾಮಯ್ಯ ಸೇರಿದಂತೆ ಅನೇಕರು ಜಾಕಿರ್ ಹುಸೇನ್ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

ತಬಲಾ ಮಾಂತ್ರಿಕ ಜಾಕಿರ್ ಹುಸೇನ್ ವಿಧಿವಶ Read More

ಟ್ರಂಪ್ ಗೆ 2ನೇ ಬಾರಿ ಅಮೆರಿಕ ಅಧ್ಯಕ್ಷ ಪಟ್ಟ

ವಾಷಿಂಗ್ಟನ್: ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಇನ್ನೂ ಅಧಿಕೃತವಾಗಿ ಗೆದ್ದವರು ಯಾರು ಎಂದು ಘೋಷಿಸಿಲ್ಲ,ಆದರೂ ಬಹುತೇಕ ಫಲಿತಾಂಶ ನಿರ್ಧಾರವಾಗಿರುವುದರಿಂದ ರಿಪಬ್ಲಿಕನ್ ಅಧ್ಯಕ್ಷೀಯ ಅಭ್ಯರ್ಥಿ ಡೊನಾಲ್ಡ್ ಟ್ರಂಪ್ ಗೆಲುವಿನ ನಗೆ ಬೀರಿದ್ದಾರೆ

ಫಲಿತಾಂಶದ ಬಗ್ಗೆ ಮಾತನಾಡಿರುವ ಡೊನಾಲ್ಡ್ ಟ್ರಂಪ್ ಇದು ಹಿಂದೆಂದೂ ಯಾರೂ ನೋಡದ ಚಳವಳಿ. ನಾನೂ, ಇದು ಸಾರ್ವಕಾಲಿಕ ಶ್ರೇಷ್ಠ ರಾಜಕೀಯ ಚಳವಳಿ ಎಂದು ನಾನು ನಂಬುತ್ತೇನೆ ಎಂದಿದ್ದಾರೆ.

ಈ ದೇಶದ ಜನತೆಯ ಜೊತೆ ನಾನು ಯಾವತ್ತಿಗೂ ಇರುತ್ತೇನೆ. ನಾವು ನಮ್ಮ ಗಡಿಗಳನ್ನು ಸರಿಪಡಿಸಲು ಹೊರಟಿದ್ದೇವೆ, ನಮ್ಮ ದೇಶದ ವಿಚಾರಗಳನ್ನು ಸರಿಪಡಿಸಬೇಕಿದೆ. ನಾವು ಇಂದು ಇತಿಹಾಸವನ್ನು ನಿರ್ಮಿಸಿದ್ದೇವೆ, ಯಾರೂ ಯೋಚಿಸದ ಅಡೆತಡೆಗಳನ್ನು ನಾವು ಜಯಿಸಿದ್ದೇವೆ. ನಾವು ಹೆಚ್ಚಿನದನ್ನು ಸಾಧಿಸಿದ್ದು, ರಾಜಕೀಯ ಗೆಲುವಾಗಿದೆ ಎಂದು ಬಣ್ಣಿಸಿದ್ದಾರೆ.

ಶ್ವೇತಭವನವನ್ನು ಗೆಲ್ಲಲು ಅಗತ್ಯವಿರುವ 270 ಚುನಾವಣಾ ಮತಗಳಲ್ಲಿ ಟ್ರಂಪ್ 267 ಎಲೆಕ್ಟೊರಲ್ ಮತಗಳನ್ನು ಈಗಾಗಲೇ ಗೆದ್ದಿದ್ದಾರೆ. ಇದೊಂದು ದೊಡ್ಡ ಕೆಲಸ. ಇದು ಪ್ರಪಂಚದ ಅತ್ಯಂತ ಪ್ರಮುಖ ಕೆಲಸ.. ನಾನು ನಿಮಗೆ ಕೊಟ್ಟ ಮಾತನ್ನು ಉಳಿಸಿಕೊಳ್ಳುತ್ತೇನೆ, ಅದನ್ನು ಯಾರಿಂದಲೂ ತಡೆಯಲು ಸಾಧ್ಯವಿಲ್ಲ ಎಂದು ಟ್ರಂಪ್ ಭರವಸೆ ನೀಡಿದ್ದಾರೆ.

ಚುನಾವಣಾ ಪ್ರಚಾರ ವೇಳೆ ಡೊನಾಲ್ಡ್ ಟ್ರಂಪ್ ಮೇಲೆ ಸಾಕಷ್ಟು ಬಾರಿ ಹತ್ಯೆಯತ್ನ ನಡೆದಿತ್ತು, ಕೂದಲೆಳೆ ಅಂತರದಲ್ಲಿ ಅವರು ಬಚಾವಾಗಿದ್ದರು. ಅದನ್ನು ಸಹ ಇಂದಿನ ಭಾಷಣದಲ್ಲಿ ಟ್ರಂಪ್ ಪ್ರಸ್ತಾಪಿಸಿದರು. ದೇವರು ಒಂದು ಕಾರಣಕ್ಕಾಗಿ ನನ್ನ ಜೀವವನ್ನು ಉಳಿಸಿದನು. ಆ ಕಾರಣವು ನಮ್ಮ ದೇಶವನ್ನು ಉಳಿಸಲು ಮತ್ತು ಅಮೇರಿಕಾವನ್ನು ಶ್ರೇಷ್ಠತೆಗೆ ಮರುಸ್ಥಾಪಿಸಲು, ನಾವು ಒಟ್ಟಾಗಿ ಆ ಮಿಷನ್ ನ್ನು ಪೂರೈಸಲಿದ್ದೇವೆ ಎಂದು ಹೇಳಿದರು.

78 ವರ್ಷ ವಯಸ್ಸಿನ ಡೊನಾಲ್ಡ್ ಟ್ರಂಪ್ ಶ್ವೇತಭವನಕ್ಕೆ ಚುನಾಯಿತರಾದ ಅತ್ಯಂತ ಹಿರಿಯ ಅಧ್ಯಕ್ಷರಾಗಲಿದ್ದಾರೆ. ಅಧ್ಯಕ್ಷ ಜೋ ಬಿಡೆನ್ ಅವರು ಈ ಹಿಂದೆ 77 ನೇ ವಯಸ್ಸಿನಲ್ಲಿ ಚುನಾಯಿತರಾದ ಅತ್ಯಂತ ಹಳೆಯ ಅಧ್ಯಕ್ಷರಾಗಿದ್ದರು.

ಟ್ರಂಪ್ ಗೆ 2ನೇ ಬಾರಿ ಅಮೆರಿಕ ಅಧ್ಯಕ್ಷ ಪಟ್ಟ Read More