ಪಟಾಕಿ ಕಾರ್ಖಾನೆಯಲ್ಲಿ ಬೆಂಕಿ ಅವಘಡ-6 ಮಂದಿ ದುರ್ಮರಣ

ಆಂಧ್ರಪ್ರದೇಶ: ಆಂದ್ರ ಪ್ರದೇಶದ ಪೂರ್ವ ಗೋದಾವರಿಯ ಪಟಾಕಿ ಕಾರ್ಖಾನೆಯಲ್ಲಿ ಭಾರಿ ಬೆಂಕಿ ಅವಘಡ ಸಂಭವಿಸಿ 6 ಮಂದಿ ಮೃತಪಟ್ಟಿದ್ದಾರೆ.

ರಾಯವರಂ ಮಂಡಲದ ಕೊಮಾರಿಪಲೇಂ ಗ್ರಾಮದಲ್ಲಿರುವ ಲಕ್ಷ್ಮಿ ಗಣಪತಿ ಪಟಾಕಿ ಘಟಕದಲ್ಲಿ ಈ ಘಟನೆ ಸಂಭವಿಸಿದೆ.

ಬುಧವಾರ ಮಧ್ಯಾಹ್ನ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಆರು ಜನರು ಸಾವನ್ನಪ್ಪಿದ್ದು, ಎಂಟು ಜನರು ತೀವ್ರವಾಗಿ ಗಾಯಗೊಂಡಿದ್ದಾರೆ,ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ‌

ಪಟಾಕಿ ಉತ್ಪಾದನೆಯಲ್ಲಿ ಬಳಸುವ ಹೆಚ್ಚು ದಹಿಸುವ ರಾಸಾಯನಿಕಗಳಿಂದಾಗಿ ಬೆಂಕಿ ವೇಗವಾಗಿ ಹರಡಿದೆ.

ಸ್ಥಳೀಯ ನಿವಾಸಿಗಳು ಅಧಿಕಾರಿಗಳಿಗೆ ಮಾಹಿತಿ ನೀಡಿದ ಕೂಡಲೇ ಅಗ್ನಿಶಾಮಕ ದಳ ಸ್ಥಳಕ್ಕೆ ಧಾವಿಸಿ ಬೆಂಕಿ ಆರಿಸಿದ್ದಾರೆ.

ಪೊಲೀಸ್, ಕಂದಾಯ ಅಧಿಕಾರಿಗಳು, ತುರ್ತು ಸಿಬ್ಬಂದಿ ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಗಳ ಮೇಲ್ವಿಚಾರಣೆ ನಡೆಸುತ್ತಿದ್ದಾರೆ.

ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಘಟನೆಯ ಬಗ್ಗೆ ಅಧಿಕಾರಿಗಳೊಂದಿಗೆ ಮಾತನಾಡಿ, ಸಾವಿನ ಬಗ್ಗೆ ದುಃಖ ವ್ಯಕ್ತಪಡಿಸಿ, ಅಧಿಕಾರಿಗಳಿಗೆ ಖುದ್ದಾಗಿ ಸ್ಥಳಕ್ಕೆ ಭೇಟಿ ನೀಡಿ ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಗಳಲ್ಲಿ ಭಾಗವಹಿಸುವಂತೆ ಸೂಚಿಸಿದರು.

ಪಟಾಕಿ ಕಾರ್ಖಾನೆಯಲ್ಲಿ ಬೆಂಕಿ ಅವಘಡ-6 ಮಂದಿ ದುರ್ಮರಣ Read More

ಹಣ್ಣು ಮಾರಾಟಕ್ಕೆ ಬಂದಿದ್ದ ಮಹಿಳೆ ಮೇಲೆ ಅತ್ಯಾಚಾರ:ಇಬ್ಬರು ಪೊಲೀಸ್ ಅರೆಸ್ಟ್

ತಿರುವಣ್ಣಾಮಲೈ: ಹಣ್ಣು ಮಾರಾಟ ಮಾಡಲು ಬಂದಿದ್ದ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ್ದ ತಮಿಳುನಾಡಿನ ಇಬ್ಬರು ಪೊಲೀಸರನ್ನು ಬಂಧಿಸಲಾಗಿದೆ.

ಆಂಧ್ರಪ್ರದೇಶದ 25 ವರ್ಷದ ಮಹಿಳೆ ಹಣ್ಣುಗಳನ್ನು ಮಾರಾಟ ಮಾಡುವ ಸಲುವಾಗಿ ತಮಿಳುನಾಡಿನ ತಿರುವಣ್ಣಾಮಲೈಗೆ ಬಂದಿದ್ದಳು.

ಸಂತ್ರಸ್ತೆ ಮತ್ತು ಆಕೆಯ ತಾಯಿ ತಿರುವಣ್ಣಾಮಲೈಗೆ ಬಂದಿದ್ದು, ತಡರಾತ್ರಿ ಮನೆಗೆ ಮರಳಲು ಇಬ್ಬರೂ ರಸ್ತೆ ಬದಿ ನಿಂತಿದ್ದಾಗ ಗಸ್ತಿನಲ್ಲಿದ್ದ ಕಾನ್ಸ್ ಟೇಬಲ್ ಗಳಾದ ಡಿ. ಸುರೇಶ್ ರಾಜ್ ಮತ್ತು ಪಿ. ಸುಂದರ್ ತಮ್ಮ ವಾಹನ ನಿಲ್ಲಿಸಿ ಅವರನ್ನು ವಿಚಾರಿಸಿದ್ದಾರೆ.

ಅನಂತರ ಮಹಿಳೆಯರನ್ನು ಬಲವಂತವಾಗಿ ಏಕಾಂತ ಸ್ಥಳಕ್ಕೆ ಕರೆದೊಯ್ದಿದ್ದಾರೆ. ಅಲ್ಲಿ ತಮ್ಮ ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಸಂತ್ರಸ್ತೆಯ ತಾಯಿ ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.

ಯುವತಿಯ ಮೇಲೆ ಅತ್ಯಾಚಾರ ಎಸಗಿದ ಇಬ್ಬರು ಪೊಲೀಸರನ್ನು ಬಂಧಿಸಿ ಹುದ್ದೆಯಿಂದ ಅಮಾನತುಗೊಳಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ರಕ್ಷಕರಾದ ಪೊಲೀಸರೇ ಈ ಕೃತ್ಯ ಎಸಗಿರುವುದು ನಿಜಕ್ಕೂ ಹೇಯ ಪೊಲೀಸ್ ಇಲಾಖೆಗೇ ಕಪ್ಪು ಮಸಿ‌ ಬಳಿದಂತಾಗಿದೆ.

ಹಣ್ಣು ಮಾರಾಟಕ್ಕೆ ಬಂದಿದ್ದ ಮಹಿಳೆ ಮೇಲೆ ಅತ್ಯಾಚಾರ:ಇಬ್ಬರು ಪೊಲೀಸ್ ಅರೆಸ್ಟ್ Read More

ಜಗನ್ ಮೋಹನ್ ರೆಡ್ಡಿಯವರನ್ನ ಬಂಧಿಸಲಿ:ಈಶ್ವರಪ್ಪ

ವಿಜಯಪುರ: ಜಗನ್ ಮೋಹನ್ ರೆಡ್ಡಿ ಅವರು ಸಿಎಂ ಆದ ನಂತರ ಇಡೀ ಪ್ರಪಂಚಕ್ಕೆ ಮಾಡಿದ್ದು ಮೋಸ,ಅವರನ್ನು ಬಂಧಿಸುವ ಕೆಲಸವಾಗಬೇಕು ಎಂದು ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಆಗ್ರಹಿಸಿದ್ದಾರೆ.

ವಿಜಯಪುರದಲ್ಲಿ ಮಾಧ್ಯಮದೊಂದಿಗೆ
ತಿರುಪತಿ ಲಡ್ಡುವಿನಲ್ಲಿ ಪ್ರಾಣಿಕೊಬ್ಬು ಬಳಕೆ ವಿಚಾರಕ್ಕೆ ಪ್ರತಿಕ್ರಿಯಿಸಿ, ವಿದೇಶಿ ಕ್ರಿಸ್ಚಿಯನ್ ಮಷಿನರಿಗಳಿಂದ ಈ ತರಹ ನಡೆದಿದೆ. ಹಿಂದುತ್ವ ಪ್ರತಿಪಾದಕರಿಗೆ, ಹಿಂದೂಗಳ ಶ್ರದ್ಧೆಗೆ ಭಂಗ ತರುವ ಕೆಲಸ ಮಾಡಿದ್ದಾರೆ. ಈಗಲೂ ನಾವು ಮಾಡಿಲ್ಲ ಎಂದು ಹೇಳುತ್ತಾರೆ. ಲ್ಯಾಬ್ ರಿಪೋರ್ಟ್ ಬಗ್ಗೆ ಇವರಿಗೆ ನಂಬಿಕೆ ಇಲ್ಲವಾ ಎಂದು ಪ್ರಶ್ನಿಸಿದರು.

ನಮ್ಮ ಶ್ರದ್ಧೆ ಹಾಗೂ ಶ್ರದ್ಧಾಕೇಂದ್ರಕ್ಕೆ ಅಪಮಾನ ಮಾಡುವವರಿಗೆ ತಕ್ಕ ಶಿಕ್ಷೆ ಆಗಬೇಕು, ಇದರಲ್ಲಿ ವಿದೇಶಿ ಸಂಚಿದೆ, ಈ ಪ್ರಕರಣ ಸಿಬಿಐಗೆ ತನಿಖೆಗೆ ಕೊಡಬೇಕು ಎಂದು ಒತ್ತಾಯಿಸಿದರು.

ದೇವರ ದಯೆಯಿಂದ ಇಡೀ ದೇಶದ ಎಲ್ಲ ಪಕ್ಷದ ನಾಯಕರು ಇದನ್ನು ಖಂಡಿಸಿದ್ದಾರೆ. ಇದು ಯಾವುದೇ ಕಾರಣಕ್ಕೂ ಸಹಿಸಲು ಸಾಧ್ಯವಿಲ್ಲ, ತಿರುಪತಿ ತಿಮ್ಮಪ್ಪನ ಬಗ್ಗೆ ಇರುವ ಶ್ರದ್ಧೆಯಿಂದ ಎಲ್ಲರೂ ಇದನ್ನು ಖಂಡಿಸಿದ್ದಾರೆ ಎಂದು ಈಶ್ವರಪ್ಪ ತಿಳಿಸಿದರು.

ಜಗನ್ ಮೋಹನ್ ರೆಡ್ಡಿಯವರನ್ನ ಬಂಧಿಸಲಿ:ಈಶ್ವರಪ್ಪ Read More

ವೈಎಸ್‌ಆರ್ ಸರ್ಕಾರದಲ್ಲಿ ತಿರುಪತಿ ಲಡ್ಡು ತಯಾರಿಸಲು ಪ್ರಾಣಿ ಕೊಬ್ಬು ಬಳಕೆ:ನಾಯ್ಡು

ಅಮರಾವತಿ: ಹಿಂದಿನ ವೈಎಸ್‌ಆರ್ ಕಾಂಗ್ರೆಸ್ ಸರ್ಕಾರದಲ್ಲಿ ತಿರುಪತಿ ಲಡ್ಡು ತಯಾರಿಸಲು ಪ್ರಾಣಿಗಳ ಕೊಬ್ಬನ್ನು ಬಳಸಲಾಗುತ್ತಿತ್ತು ಎಂದು ಆಂಧ್ರಪ್ರದೇಶ ಹಾಲಿ ಸಿಎಂ ಚಂದ್ರಬಾಬು ನಾಯ್ಡು ಗಂಭೀರ ಆರೋಪ ಮಾಡಿದ್ದಾರೆ.

ಜಗನ್ ಮೋಹನ್ ರೆಡ್ಡಿ ಸರ್ಕಾರದ ಅವಧಿಯಲ್ಲಿ ತಿರುಪತಿಯ ಶ್ರೀ ವೆಂಕಟೇಶ್ವರ ದೇವಸ್ಥಾನವು ಪ್ರಸಾದವಾಗಿ ನೀಡುವ ಲಡ್ಡುಗಳನ್ನು ತಯಾರಿಸಲು ಪ್ರಾಣಿಗಳ ಕೊಬ್ಬನ್ನು ಬಳಸಲಾಗುತ್ತಿತ್ತು ಎಂದು ಹೇಳಿ ಎಲ್ಲರ ಗಮನ ಸೆಳೆದಿದ್ದಾರೆ.

ಕಳೆದ 5 ವರ್ಷಗಳಲ್ಲಿ ವೈಎಸ್‌ಆರ್ ಕಾಂಗ್ರೆಸ್ ಪಕ್ಷದ ನಾಯಕರು ತಿರುಮಲದ ಪಾವಿತ್ರ್ಯತೆಯನ್ನು ಹಾಳು ಮಾಡಿದ್ದಾರೆ. ಅವರು ಅನ್ನದಾನ ಗುಣಮಟ್ಟದಲ್ಲಿ ರಾಜಿ ಮಾಡಿಕೊಂಡಿದ್ದಾರೆ. ಪವಿತ್ರ ತಿರುಮಲ ಲಡ್ಡುವನ್ನು ತುಪ್ಪದ ಬದಲು ಪ್ರಾಣಿಗಳ ಕೊಬ್ಬನ್ನು ಬಳಸಿ ಕಲುಷಿತಗೊಳಿಸಿದ್ದಾರೆ ಚಂದ್ರಬಾಬು ನಾಯ್ಡು ಕಿಡಿಕಾರಿದ್ದಾರೆ.

ಆದರೆ, ಸಿಎಂ ನಾಯ್ಡು ಆರೋಪವನ್ನು ಮಾಜಿ ಸಿಎಂ ವೈಎಸ್ ಜಗನ್ ಮೋಹನ್ ರೆಡ್ಡಿ ನೇತೃತ್ವದ ಪಕ್ಷವು ತಳ್ಳಿಹಾಕಿದೆ,ಅಲ್ಲದೆ ಇದು ದುರುದ್ದೇಶಪೂರಿತವಾಗಿದೆ ಎಂದು ಟೀಕಿಸಿದೆ.

ಚಂದ್ರಬಾಬು ನಾಯ್ಡು ಅವರು ತಿರುಮಲದ ಪಾವಿತ್ರ್ಯತೆ ಮತ್ತು ಕೋಟ್ಯಂತರ ಹಿಂದೂಗಳ ನಂಬಿಕೆಯನ್ನು ತೀವ್ರವಾಗಿ ಹಾಳು ಮಾಡಿದ್ದಾರೆ. ತಿರುಮಲ ಪ್ರಸಾದದ ಬಗ್ಗೆ ಅವರ ಹೇಳಿಕೆಗಳು ಅತ್ಯಂತ ದುರುದ್ದೇಶಪೂರಿತವಾಗಿವೆ ಎಂದು ರಾಜ್ಯಸಭಾ ಸಂಸದ ವೈವಿ ಸುಬ್ಬಾ ರೆಡ್ಡಿ ಕೂಡಾ ಖಂಡಿಸಿದ್ದಾರೆ.

ರಾಜಕೀಯ ಲಾಭಕ್ಕಾಗಿ ಚಂದ್ರಬಾಬು ನಾಯ್ಡು ಯಾವ ಮಟ್ಟಕ್ಕೂ ಇಳಿಯುತ್ತಾರೆ ಎಂಬುದು ಮತ್ತೆ ಸಾಬೀತಾಗಿದೆ. ಭಕ್ತರ ನಂಬಿಕೆ ಗಟ್ಟಿಗೊಳಿಸಲು ನಾನು ಕುಟುಂಬ ಸಮೇತ ತಿರುಮಲ ಪ್ರಸಾದದ ವಿಚಾರವಾಗಿ ಪರಮಾತ್ಮನ ಮುಂದೆ ಪ್ರಮಾಣ ವಚನ ಸ್ವೀಕರಿಸಲು ಸಿದ್ಧ. ಚಂದ್ರಬಾಬು ನಾಯ್ಡು ತಮ್ಮ ಕುಟುಂಬದೊಂದಿಗೆ ಅದೇ ರೀತಿ ಮಾಡಲು ಸಿದ್ಧರಿದ್ದಾರೆಯೇ ಎಂದು ಸುಬ್ಬಾ ರೆಡ್ಡಿ ಸವಾಲು ಕೂಡಾ ಹಾಕಿದ್ದಾರೆ.

ಈ ಸವಾಲಿಗೆ ಸಿಎಂ ಚಂದ್ರಬಾಬು ನಾಯ್ಡು ಏನು ಹೇಳುವರೊ ಕಾದುನೋಡಬೇಕಿದೆ.

ವೈಎಸ್‌ಆರ್ ಸರ್ಕಾರದಲ್ಲಿ ತಿರುಪತಿ ಲಡ್ಡು ತಯಾರಿಸಲು ಪ್ರಾಣಿ ಕೊಬ್ಬು ಬಳಕೆ:ನಾಯ್ಡು Read More

ಕೊರಿಯೋಗ್ರಾಫರ್‌ ಜಾನಿ ಮಾಸ್ಟರ್ ಜಾನಿ ಮಾಸ್ಟರ್‌ ಅರೆಸ್ಟ್

ಹೈದರಾಬಾದ್: ತೆಲುಗು, ತಮಿಳು ಚಿತ್ರರಂಗದಲ್ಲಿ ಹೆಸರು ಮಾಡಿರುವ ಜಾನಿ ಮಾಸ್ಟರ್ ಜಾನಿ ಮಾಸ್ಟರ್‌ನನ್ನು ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಪೊಲೀಸರು ಬಂಧಿಸಿದ್ದಾರೆ.

ಸಹ ಕೊರಿಯೋಗ್ರಾಫರ್‌ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಮೇಲೆ ಜಾನಿ ಮಾಸ್ಟರ್‌ನನ್ನು ಹೈದರಾಬಾದ್ ಪೊಲೀಸರು ಬಂಧಿಸಿದ್ದಾರೆ.

ಜಾನಿ ಮಾಸ್ಟರ್ ಲೈಂಗಿಕ ಕಿರುಕುಳ ನೀಡುತ್ತಿದ್ದಾರೆ ಎಂದು ಅವರ ಜೊತೆ ಕೆಲಸ ಮಾಡುತ್ತಿದ್ದ ಯುವತಿಯೊಬ್ಬರು ರಾಯದುರ್ಗ ಪೊಲೀಸ್‌ ಠಾಣೆಗೆ ದೂರು ನೀಡಿದ್ದರು.

ಆತ ತನ್ನ ಮೇಲೆ ಅತ್ಯಾಚಾರ ಎಸಗಿ, ಬೆದರಿಕೆ ಹಾಕಿ ದೈಹಿಕ ಹಲ್ಲೆ ನಡೆಸಿದ್ದಾನೆ ಎಂದು ಯುವತಿ ದೂರಿನಲ್ಲಿ ತಿಳಿಸಿದ್ದರು.

ದೂರಿನ ಆಧಾರದ ಮೇಲೆ ಎಫ್‌ಐಆರ್‌ ದಾಖಲಿಸಿಕೊಂಡ ಪೊಲೀಸರು ಈಗ ಜಾನಿ ಮಾಸ್ಟರ್‌ ನನ್ನು ಬಂಧಿಸಿದ್ದಾರೆ. ಈಗ ಈ ಪ್ರಕರಣವನ್ನು ನರಸಿಂಗಿ ಪೊಲೀಸ್‌ ಠಾಣೆಗೆ ವರ್ಗಾಯಿಸಲಾಗಿದೆ.

ಧಿ ಡ್ಯಾನ್ಸ್‌ ಶೋ ಮೂಲಕ ಪರಿಚಯವಾದ ಜಾನಿ ಮಾಸ್ಟರ್‌ ಈಗ ಟಾಲಿವುಡ್‌ನಲ್ಲಿ ಸ್ಟಾರ್ ಕೊರಿಯೋಗ್ರಾಫರ್ ಆಗಿ ಹೆಸರು ಮಾಡಿದ್ದಾರೆ.

ಟಾಲಿವುಡ್‌ ಮಾತ್ರವಲ್ಲದೇ ಕನ್ನಡ, ತಮಿಳು, ಮಲಯಾಳಂ, ಹಿಂದಿ ಸಿನಿಮಾಗಳಿಗೂ ಅವರು ಕೊರಿಯೋಗ್ರಫಿ ಮಾಡಿದ್ದಾರೆ. ಆದರೆ ಅವರ ಮೇಲಿನ ಆರೋಪ,ಬಂಧನ ತೆಲುಗು ಸಿನಿ ರಂಗದಲ್ಲಿ ಸಂಚಲನ ಮೂಡಿಸಿದೆ.

ಕೊರಿಯೋಗ್ರಾಫರ್‌ ಜಾನಿ ಮಾಸ್ಟರ್ ಜಾನಿ ಮಾಸ್ಟರ್‌ ಅರೆಸ್ಟ್ Read More

ಸ್ವಪಕ್ಷದ ನಾಯಕಿ ಮೇಲೆ ಲೈಂಗಿಕ ದೌರ್ಜನ್ಯ: ಶಾಸಕ ಸಸ್ಪೆಂಡ್

ಆಂದ್ರಪ್ರದೇಶ: ತಮ್ಮದೇ ಪಕ್ಷದ ನಾಯಕಿಯ ಮೇಲೆ ಲೈಂಗಿಕ ದೌರ್ಜನ್ಯ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಆಂಧ್ರಪ್ರದೇಶದ ಶಾಸಕ ಕೊನೇಟಿ ಆದಿಮೂಲಂ ಅವರನ್ನು ಅಮಾನತು ಗೊಳಿಸಲಾಗಿದೆ.

ತಮ್ಮದೇ ಪಕ್ಷದ ಸಹೋದ್ಯೋಗಿ ಮೇಲೆ ಲೈಂಗಿಕ ದೌರ್ಜನ್ಯ ಎಸಗುತ್ತಿರುವ ವೀಡಿಯೊ ವೈರಲ್ ಆದ ಬೆನ್ನಲ್ಲೇ ಆದಿಮೂಲಂ ಮೇಲೆ ಪಕ್ಷ ಶಿಸ್ತಿನ ಕ್ರಮ ತೆಗೆದುಕೊಂಡಿದೆ.

ಕಳೆದ ಜುಲೈನಲ್ಲಿ ತಿರುಪತಿಯ ಹೋಟೆಲ್‌ನಲ್ಲಿ ತನ್ನ ಮೇಲೆ ಮೂರು ಬಾರಿ ಶಾಸಕ ಲೈಂಗಿಕ ದೌರ್ಜನ್ಯ ಎಸಗಿದ್ದಾಗಿ ಮಹಿಳೆ ಆರೋಪಿಸಿದ್ದಾರೆ.

ಕೃತ್ಯ ಬಹಿರಂಗಪಡಿಸಿದರೆ ನನ್ನ ಮತ್ತು ನನ್ನ ಕುಟುಂಬದವರನ್ನು ಕೊಲ್ಲುತ್ತೇನೆ ಎಂದು ಬೆದರಿಕೆ ಕೂಡಾ ಹಾಕಿದ್ದ ಎಂದು ಸಂತ್ರಸ್ತೆ ದೂರಿದ್ದಾಳೆ.

ಪ್ರಕರಣ ವೈರಲ್ ಆಗುತ್ತಿದ್ದಂತೆ ರಾಜಕೀಯ ಆರೋಪ, ಪ್ರತ್ಯಾರೋಪಗಳು ಪ್ರಾರಂಭವಾಗಿವೆ.ಆದರೆ ಈವರೆಗೆ ಎಫ್ಐಆರ್ ದಾಖಲಾಗಿಲ್ಲ ಮುಂದೆ ಏನು ಎಂಬುದನ್ನು ಕಾದು ನೋಡಬೇಕಿದೆ.

ಸ್ವಪಕ್ಷದ ನಾಯಕಿ ಮೇಲೆ ಲೈಂಗಿಕ ದೌರ್ಜನ್ಯ: ಶಾಸಕ ಸಸ್ಪೆಂಡ್ Read More