ಮಂಕುತಿಮ್ಮನ ಕಗ್ಗ ಬದುಕಿಗೆ ದಾರಿದೀಪ:ಕೆ ರಘುರಾಮ್ ವಾಜಪಾಯಿ

ಮೈಸೂರು: ಡಿವಿಜಿಯವರ
ಮೇರು ಕೃತಿಗಳಲ್ಲೊಂದಾದ ಮಂಕುತಿಮ್ಮನ ಕಗ್ಗವು ಆಧುನಿಕ ಭಗವದ್ಗೀತೆಯೆಂದೇ ಜನಪ್ರಿಯವಾಗಿದ್ದು, ಅದರಲ್ಲಿರುವ ಪ್ರತಿಯೊಂದು ಮುಕ್ತಕಗಳೂ ಬದುಕಿಗೆ ದಾರಿದೀಪದಂತಿವೆ ಎಂದು ಹಿರಿಯ ಸಮಾಜ ಸೇವಕರಾದ ಕೆ ರಘುರಾಮ್ ವಾಜಪೇಯಿ ಹೇಳಿದರು.

ನಗರದ ವಿದ್ಯಾರಣ್ಯಪುರಂನಲ್ಲಿರುವ ರಾಮಲಿಂಗೇಶ್ವರ ದೇವಸ್ಥಾನದ ಬಳಿಯ ಉದ್ಯಾನವನದಲ್ಲಿ ಅಪೂರ್ವಸ್ನೇಹ ಬಳಗದ ವತಿಯಿಂದ ಮಂಕುತಿಮ್ಮನ ಕಗ್ಗ ಕಾವ್ಯದಿಂದ ಲೋಕ ವಿಕ್ಯಾತರಾದ ಕನ್ನಡದ ಆಧುನಿಕ ಸರ್ವಜ್ಞ ಡಿ ವಿ ಗುಂಡಪ್ಪ (
ದೇವನಹಳ್ಳಿ ವೆಂಕಟರಮಣಯ್ಯ ಗುಂಡಪ್ಪ) 138 ನೇ ಜನ್ಮದಿನಾಚರಣೆ ಪ್ರಯುಕ್ತ ವಿವಿಧ ಜಾತಿಯ ಗಿಡಗಳನ್ನು ನೆಟ್ಟು ನೀರು ಹಾಕಿ ಮಾತನಾಡಿದರು.

ಡಿ.ವಿ.ಗುಂಡಪ್ಪನವರು ಮಹಾನ್ ದಾರ್ಶನಿಕರಾಗಿದ್ದರು, ಕವಿ, ಸಾಹಿತಿ, ಪತ್ರಕರ್ತರಾಗಿ ಅವರ ಕೊಡುಗೆಗಳು ಅಪಾರವಾದುದು, ಮಂಕುತಿಮ್ಮನ ಕಗ್ಗವಂತೂ ಅತ್ಯಂತ ಜನಪ್ರಿಯ ಕೃತಿಯಾಗಿದ್ದು, ಇಂದಿಗೂ ಎಲ್ಲೆಲ್ಲೂ ಅದರ ಮುಕ್ತಕಗಳು ಕೇಳಿಬರುತ್ತಿವೆ, ಬದುಕಿಗೆ ಸ್ಫೂರ್ತಿ ತುಂಬುವ ಕಗ್ಗವನ್ನು ಮತ್ತಷ್ಟು ಪ್ರಚಾರ ಮಾಡಬೇಕು ಎಂದು ಸಲಹೆ ನೀಡಿದರು.

ನಗರ ಪಾಲಿಕೆ ಮಾಜಿ ಸದಸ್ಯ ಮಾ ವಿ ರಾಮ್ ಪ್ರಸಾದ್ ಮಾತನಾಡಿ,ಮಂಕುತಿಮ್ಮನ ಕಗ್ಗ ಕೃತಿಯ ಮೂಲಕ ಜೀವನದ ಮೌಲ್ಯಗಳನ್ನು ಸಾರಿದ ಡಿ‌ವಿಜಿಯವರು, ಕನ್ನಡ ಸಾಹಿತ್ಯಕ್ಕೆ ನೀಡಿದ ಕೊಡುಗೆಗಳು ಅವಿಸ್ಮರಣೀಯ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಕೆ ಆರ್ ಬ್ಯಾಂಕ್ ಅಧ್ಯಕ್ಷ ಬಸವರಾಜ್ ಬಸಪ್ಪ, ಅಪೂರ್ವ ಸ್ನೇಹ ಬಳಗದ ಅಧ್ಯಕ್ಷರಾದ ಅಪೂರ್ವ ಸುರೇಶ್, ಜಗದೀಶ್, ಕಾ ಪು ರಾಜಣ್ಣ , ಕೆಎಂಪಿಕೆ ಟ್ರಸ್ಟ್ ಅಧ್ಯಕ್ಷ ವಿಕ್ರಮ ಅಯ್ಯಂಗಾರ್, ನಿರೂಪಕ ಅಜಯ್ ಶಾಸ್ತ್ರಿ, ಮಿರ್ಲೆ ಪನೀಶ್, ಜತ್ತಿ ಪ್ರಸಾದ್, ಶಿವಲಿಂಗ ಸ್ವಾಮಿ, ಪುಟ್ಟಣ್ಣ, ಮಹಾನ್ ಶ್ರೇಯಸ್, ಶಿವು, ಪ್ರಕಾಶ್, ನಿವೃತ್ತ ಶಿಕ್ಷಕರಾದ ಮಹಾದೇವಸ್ವಾಮಿ ಮತ್ತಿತರರು ಪಾಲ್ಗೊಂಡಿದ್ದರು.

ಮಂಕುತಿಮ್ಮನ ಕಗ್ಗ ಬದುಕಿಗೆ ದಾರಿದೀಪ:ಕೆ ರಘುರಾಮ್ ವಾಜಪಾಯಿ Read More

ದೀಪ ಬೆಳಗಿಸಿ ಹಬ್ಬ ಆಚರಿಸಿ: ಮಾ ವಿ ರಾಮ್ ಪ್ರಸಾದ್ ಕರೆ

ಮೈಸೂರು: ಅಪೂರ್ವ ಸ್ನೇಹ ಬಳಗದ ವತಿಯಿಂದ ನಗರದ ಚಾಮುಂಡಿಪುರಂನಲ್ಲಿ ಮನೆ ಮನೆಗೆ ತೆರಳಿ ಹಣತೆ ವಿತರಿಸಿ ಪಟಾಕಿಯಿಂದ ಆಗುವ ಅನಾಹುತಗಳ ಬಗ್ಗೆ ಅರಿವು ಮೂಡಿಸುವ ಮೂಲಕ ದೀಪಾವಳಿ ಆಚರಣೆ ಮಾಡಲಾಯಿತು.

ಈ ವೇಳೆ ಮಾತನಾಡಿದ ನಗರ ಪಾಲಿಕೆ ಮಾಜಿ ಸದಸ್ಯ ಮಾ ವಿ ರಾಮ್ ಪ್ರಸಾದ್
ದೀಪಾವಳಿ ಹಬ್ಬವನ್ನು ದೀಪಗಳನ್ನು ಬೆಳಗಿಸುವ ಮೂಲಕ ಮಾಲಿನ್ಯ ರಹಿತವಾಗಿ ಆಚರಿಸೋಣ ಎಂದು ಮನವಿ ಮಾಡಿದರು.

ಪಟಾಕಿ ಸಿಡಿಸುವುದರಿಂದ ವಾಯು ಮಾಲಿನ್ಯ ಮತ್ತು ಶಬ್ದ ಮಾಲಿನ್ಯ ಉಂಟಾಗುತ್ತದೆ. ಪಟಾಕಿಯಿಂದ ಉಂಟಾಗುವ ತ್ಯಾಜ್ಯವನ್ನು ವಿಲೇವಾರಿ ಮಾಡುವುದು ಪೌರಕಾರ್ಮಿಕರಿಗೆ ದೊಡ್ಡ ಸವಾಲು ಎಂದು ಹೇಳಿದರು.

ಪಟಾಕಿ ಸಿಡಿಸುವ ಬದಲು ರಂಗೋಲಿ ಹಾಕಿ ದೀಪ ಬೆಳಗುವ ಮೂಲಕ ದೀಪಾವಳಿ ಆಚರಿಸಿದಲ್ಲಿ ಪ್ರಾಣಿ ಸಂಕುಲಕ್ಕೆ ಮತ್ತು ಸಾರ್ವಜನಿಕರ ಆರೋಗ್ಯಕ್ಕೆ ಯಾವುದೇ ಹಾನಿ ಇರುವುದಿಲ್ಲ. ಯುವಪೀಳಿಗೆ ಹಸಿರು ದೀಪಾವಳಿ ಆಚರಿಸುವ ಪಣ ತೊಡಬೇಕು ಎಂದು ಅವರು ಕರೆ ನೀಡಿದರು.

ಈ ಸಂದರ್ಭದಲ್ಲಿ ಕೆ ಆರ್ ಬ್ಯಾಂಕ್ ಅಧ್ಯಕ್ಷ ಬಸವರಾಜ ಬಸಪ್ಪ, ನಿರ್ದೇಶಕರಾದ ಎಚ್ ವಿ ಭಾಸ್ಕರ್ ,ಅಪೂರ್ವ ಸ್ನೇಹ ಬಳಗದ ಅಧ್ಯಕ್ಷರಾದ ಅಪೂರ್ವ ಸುರೇಶ್, ಮಹಾನ್ ಶ್ರೇಯಸ್, ಆನಂದ್, ಆದರ್ಶ್, ಜಯರಾಮ್, ಮೈ ಲಾ ವಿಜಯ್ ಕುಮಾರ್, ರಕ್ಷಿತ್, ದೂರ ರಾಜಣ್ಣ, ಸಿದ್ದಲಿಂಗ ಸ್ವಾಮಿ, ಮತ್ತಿತರರು ಹಾಜರಿದ್ದರು.

ದೀಪ ಬೆಳಗಿಸಿ ಹಬ್ಬ ಆಚರಿಸಿ: ಮಾ ವಿ ರಾಮ್ ಪ್ರಸಾದ್ ಕರೆ Read More

ಒಂದು ದೇಶ ಒಂದು ಚುನಾವಣೆ ಸ್ವಾಗತಿಸಿ ಶಾಲಾ ಮಕ್ಕಳಿಗೆ ಪುಸ್ತಕ, ಸಿಹಿ ವಿತರಣೆ

ಮೈಸೂರು: ಒಂದು ದೇಶ ಒಂದು ಚುನಾವಣೆ ಕೇಂದ್ರ ಸರ್ಕಾರದ ನಿರ್ಧಾರ ಸ್ವಾಗತಿಸಿ ಮತ್ತು ಪ್ರಧಾನಿ ಮೋದಿ ಅವರ ಹುಟ್ಟು ಹಬ್ಬ ಅಂಗವಾಗಿ ಅಕ್ಕನ ಬಳಗ ಶಾಲೆಯಲ್ಲಿ ಅಪೂರ್ವ ಸ್ನೇಹ ಬಳಗದವರು
ಮಕ್ಕಳಿಗೆ ಪುಸ್ತಕ ಹಾಗೂ ಸಿಹಿ ವಿತರಿಸಿ ಸಂಭ್ರಮಿಸಿದರು.

ಈ ವೇಳೆ ಮೈಸೂರು ನಗರ ಬಿಜೆಪಿ ಉಪಾಧ್ಯಕ್ಷ ಜೋಗಿ ಮಂಜು ಮಾತನಾಡಿ ಭಾರತೀಯ ಚುನಾವಣಾ ವ್ಯವಸ್ಥೆ ಸುಧಾರಣೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಐತಿಹಾಸಿಕ ಹೆಜ್ಜೆ ಇರಿಸಿದ್ದಾರೆ ಎಂದು ಹೇಳಿದರು.

ನಗರಪಾಲಿಕೆ ಮಾಜಿ ಸದಸ್ಯ ಎಂ ಡಿ ಪಾರ್ಥಸಾರಥಿ ಮಾತನಾಡಿ ನರೇಂದ್ರ ಮೋದಿ ದೇಶ ಕಂಡ ಅತ್ಯಂತ ಶ್ರೇಷ್ಠ ಪ್ರಧಾನಿ, ಅವರ ನಾಯಕತ್ವದಲ್ಲಿ ಭಾರತ ವಿಶ್ವದಲ್ಲೇ ಅತ್ಯಂತ ಬಲಿಷ್ಠ ರಾಷ್ಟ್ರವಾಗಿ ಹೊರಹೊಮ್ಮಿದೆ ಎಂದು ತಿಳಿಸಿದರು.

ಜೀವದಾರ ರಕ್ತ ನಿಧಿ ಕೇಂದ್ರದ ನಿರ್ದೇಶಕ ಗಿರೀಶ್ ಮಾತನಾಡಿ ಬಿಜೆಪಿ ಆಡಳಿತದಲ್ಲಿ ದೇಶ ಅಭಿವೃದ್ಧಿ ಪಥದಲ್ಲಿ ಸಾಗುತ್ತಿದೆ, ಕೋಮು ಗಲಭೆಗಳು, ನಾಗರಿಕರಿಗೆ ತೊಂದರೆ ಆಗು ವಂತಹ ಘಟನೆಗಳು, ಉಗ್ರಗಾಮಿ ಚಟುವ ಟಿಕೆಗಳಿಗೆ ಕಡಿವಾಣ ಹಾಕಲಾಗಿದೆ. ಹಾಗಾಗಿಯೇ ದೇಶದ ಜನತೆ ಅವರನ್ನು 3ನೇ ಬಾರಿಗೆ ಪ್ರಧಾನಿಯನ್ನಾಗಿ ಮಾಡಿದ್ದಾರೆ ಎಂದು ನುಡಿದರು.

ಅಪೂರ್ವ ಸ್ನೇಹ ಬಳಗದ ಅಧ್ಯಕ್ಷರಾದ ಅಪೂರ್ವ ಸುರೇಶ್, ಚಕ್ರಪಾಣಿ, ಸುಚೇಂದ್ರ, ಕೃಷ್ಣೆಗೌಡ, ಶಾಲೆಯ ಮುಖ್ಯ ಶಿಕ್ಷಕರಾದ ಸುಗುಣಾವತಿ, ಆನಂದ್, ರಾಕೇಶ್ ಮತ್ತಿತರರು ಭಾಗವಹಿಸಿದ್ದರು.

ಒಂದು ದೇಶ ಒಂದು ಚುನಾವಣೆ ಸ್ವಾಗತಿಸಿ ಶಾಲಾ ಮಕ್ಕಳಿಗೆ ಪುಸ್ತಕ, ಸಿಹಿ ವಿತರಣೆ Read More