ಜಾರಿ ನಿರ್ದೇಶನಾಲಯದ ದಾಳಿಗೆ ರಾಜಕೀಯ ಕಾರಣ ಅಲ್ಲ:ಅಶೋಕ್

ಬೆಂಗಳೂರು: ಜಾರಿ ನಿರ್ದೇಶನಾಲಯದ ದಾಳಿಗೆ ರಾಜಕೀಯ ಕಾರಣ ಅಲ್ಲ,3-4 ಸಾವಿರ ಕೋಟಿ ರೂ. ಅಕ್ರಮ ನಡೆದಿದೆ ಎಂದು ಹೇಳಿದ್ದೇ ಕಾಂಗ್ರೆಸ್‌ನವರು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಡಾ ಕಚೇರಿ ಮೇಲೆ ಜಾರಿ ನಿರ್ದೇಶನಾಲಯ ದಾಳಿ ಮಾಡಿದೆ. ಸಿಎಂ ಸಿದ್ದರಾಮಯ್ಯ ಅವರದ್ದೂ ಸೇರಿದಂತೆ ಸುಮಾರು 1,200 ಕ್ಕೂ ಅಧಿಕ ನಿವೇಶನಗಳ ಹಗರಣ ನಡೆದಿದೆ ಎಂಬ ದೂರು ಬಂದಿದ್ದರಿಂದ ದಾಳಿ ಮಾಡಲಾಗಿದೆ ಎಂದು ತಿಳಿಸಿದರು.

3-4 ಸಾವಿರ ಕೋಟಿ ರೂ. ಹಗರಣ ನಡೆದಿದೆ ಎಂದು ಮುಡಾ ಅಧ್ಯಕ್ಷರಾಗಿದ್ದ, ಕಾಂಗ್ರೆಸ್‌ನವರೇ ಆದ ಮರಿಗೌಡ ಪತ್ರದಲ್ಲಿ ತಿಳಿಸಿದ್ದರು. ಅದಾದ ಬಳಿಕ ಸ್ನೇಹಮಯಿ ಕೃಷ್ಣ ಇಡಿಗೆ ದೂರು ನೀಡಿದ್ದಾರೆ. ಇದರಲ್ಲಿ ರಾಜಕೀಯದ ಪ್ರಶ್ನೆ ಉದ್ಭವವೇ ಆಗುವುದಿಲ್ಲ. ಇದರಲ್ಲಿ ಬಿಜೆಪಿ ಅಥವಾ ಕೇಂದ್ರ ಸರ್ಕಾರದ ಪಾತ್ರವೇ ಇಲ್ಲ ಎಂದು ತಿಳಿಸಿದರು.

ಇದನ್ನು ರಾಜಕೀಯವಾಗಿ ನೋಡಬಾರದು, ನಿವೇಶನಗಳು ವಾಪಸ್‌ ಸಿಕ್ಕರೆ ಹಾಗೂ ಹಣ ಸಿಕ್ಕರೆ ರಾಜ್ಯ ಸರ್ಕಾರಕ್ಕೆ ಲಾಭವಾಗುತ್ತದೆ. ಸರ್ಕಾರದಲ್ಲಿ ಖಜಾನೆ ಖಾಲಿಯಾಗಿ ಸಂಬಳ ಕೊಡಲಾಗದ ಪರಿಸ್ಥಿತಿ ಇದೆ. ಇಂತಹ ಸ್ಥಿತಿಯಲ್ಲಿ ಖಜಾನೆಗೆ ಹಣ ಬಂದರೆ ಒಳ್ಳೆಯದು. ಇದನ್ನು ಕಾಂಗ್ರೆಸ್‌ನವರು ಸ್ವಾಗತಿಸಬೇಕು. ಇದನ್ನು ರಾಜಕಾರಣ ಎನ್ನಲು ಬಿಜೆಪಿ ನಾಯಕರೇನೂ ದೂರು ನೀಡಿಲ್ಲವಲ್ಲಾ ಎಂದು ಅಶೋಕ್ ಹೇಳಿದರು.

ಅಕ್ರಮ ಹಣ ವರ್ಗಾವಣೆಯಾಗಿಲ್ಲ ಎಂದಾದರೆ 3-4 ಸಾವಿರ ಕೋಟಿ ರೂ. ಹಣದ ಅಕ್ರಮ ನಡೆದಿರುವುದು ಹೇಗೆ ನಿವೇಶನ ಮಂಜೂರಾಗಿದೆ ಎಂದಮೇಲೆ ಅದರ ಹಣ ಯಾರಿಗಾದರೂ ಸಿಕ್ಕೇ ಸಿಕ್ಕಿರುತ್ತದೆ. ಅದಕ್ಕೆ ನಗದಿನಲ್ಲಿ ಹಣ ನೀಡಲಾಗಿರುತ್ತದೆ. ಅಂತಹ ನಗದು ಕಪ್ಪು ಹಣವೇ ಆಗಿರುತ್ತದೆ. ಇಡಿ ಬಗ್ಗೆ ಪ್ರಶ್ನೆ ಮಾಡುವವರು ಕೋರ್ಟ್‌ನಲ್ಲಿ ಪ್ರಶ್ನೆ ಮಾಡಬಹುದಿತ್ತು, ಆದರೆ ಸಿಎಂ ಸಿದ್ದರಾಮಯ್ಯನವರು ಕೋರ್ಟ್‌ಗೆ ಹೋಗಲೇ ಇಲ್ಲ ಎಂದು ಅಶೋಕ್ ತಿಳಿಸಿದರು.

ಜಾರಿ ನಿರ್ದೇಶನಾಲಯದ ದಾಳಿಗೆ ರಾಜಕೀಯ ಕಾರಣ ಅಲ್ಲ:ಅಶೋಕ್ Read More

ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಊಹಾಪೋಹಗಳ ಅಗತ್ಯವಿಲ್ಲ-ಸಿದ್ದು

ರಾಯಚೂರು: ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಊಹಾಪೋಹಗಳು ಅಗತ್ಯವಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಟಾಂಗ್ ನೀಡಿದ್ದಾರೆ.

ರಾಯಚೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಊಹಾಪೋಹಗಳ ಅಗತ್ಯವಿಲ್ಲ, ವಿರೋಧಪಕ್ಷಗಳು ನನ್ನ ಮೇಲೆ ಸುಳ್ಳು ಆರೋಪಗಳನ್ನು ಮಾಡಿ ರಾಜಿನಾಮೆ ಬೇಡಿದರೆ, ರಾಜಿನಾಮೆ ಕೊಡಲು ಸಾಧ್ಯವಿಲ್ಲ ಎಂದು ಕಡಕ್ಕಾಗಿ ಹೇಳಿದರು.

ರಾಜ್ಯದ ಕಾಂಗ್ರೆಸ್ ನಾಯಕರು ವರಿಷ್ಠರೊಂದಿಗೆ ಚರ್ಚೆ ಮಾಡುವುದು ಸಹಜ
ವಿರೋದ ಪಕ್ಷಗಳು ಸುಳ್ಳು ಆರೋಪಗಳನ್ನು ಮಾಡಿದರೆ, ವಸ್ತುಸ್ಥಿತಿಯನ್ನು ಜನರ ಮುಂದಿಡುವ ಕೆಲಸ ಮಾಡುತ್ತೇವೆ ಎಂದು ಸಿದ್ದು ತಿರುಗೇಟು ನೀಡಿದರು.

ಜಾತಿಗಣತಿಗೆ ಸಂಬಂಧಿಸಿದಂತೆ ಒಳಮೀಸಲಾತಿ ಬಗ್ಗೆ ಸುಪ್ರೀಂ ಕೋರ್ಟ್ ನಲ್ಲಿ ಆದೇಶವಾಗಿದ್ದು, ಒಳ ಮೀಸಲಾತಿ ಬಗ್ಗೆ ಸರ್ಕಾರಕ್ಕೆ ವಿರೋಧವಿಲ್ಲ,ಆದರೆ ಅದರ ಬಗ್ಗೆಯೂ ವರಿಷ್ಠರು ಹಾಗೂ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸುತ್ತೇನೆ ಎಂದು ಹೇಳಿದರು

ಜಾತಿ ಗಣತಿ ವರದಿಯನ್ನು ಈಗಾಗಲೇ ಸ್ವೀಕರಿಸಲಾಗಿದ್ದು, ಈ ಬಗ್ಗೆ ಸಚಿವ ಸಂಪುಟ ಸಭೇಯಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು. ವರದಿಯಲ್ಲಿ ಸಣ್ಣ ಪುಟ್ಟ ದೋಷಗಳಿದ್ದರೆ ಅದನ್ನು ಸರಿಪಡಿಸುವ ಬಗ್ಗೆಯೂ ಪರಿಶೀಲಿಸಲಾಗುವುದು ಎಂದು ಹೇಳಿದರು.

ವಿರೋಧಪಕ್ಷದ ನಾಯಕ ಆರ್ ಅಶೋಕ್ ಅವರ ಮೇಲೆ ಎಫ್ ಐ ಆರ್ ಆಗಿರುವುದರಿಂದ ನಾನು ರಾಜಿನಾಮೆ ನೀಡಲು ಸಿದ್ದ, ಸಿಎಂ ಅವರೂ ರಾಜಿನಾಮೆ ನೀಡಲಿ ಎಂದು ಹೇಳಿದ್ದಾರಲ್ಲಾ ಎಂಬ ಪ್ರಶ್ನೆಗೆ ಜಮೀನು ಖರೀದಿ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರು ಮೊದಲು ರಾಜಿನಾಮೆ ನೀಡಲಿ ಎಂದು ಸಿಎಂ ಹೇಳಿದರು.

ತುಂಗಭದ್ರಾ ಜಲಾಶಯ ಹಾಗೂ ನವಲೆ ಜಲಾಶಯದ ಬಗ್ಗೆ ಶಾಶ್ವತ ಪರಿಹಾರ ಒದಗಿಸುವ ಕುರಿತು ಕೇಳುದ ಪ್ರಶ್ನೆಗೆ ಜಲಾಶಯದಲ್ಲಿ 133 ಟಿಎಂಸಿ ನೀರು ಸಂಗ್ರಹ ಸಾಮರ್ಥ್ಯವಿದ್ದು, ಪ್ರಸ್ತುತ 102 ಟಿಎಂಸಿ ನೀರು ಸಂಗ್ರಹವಿದೆ. ಸುಮಾರು 30 ಟಿಎಂಸಿ ನೀರಿಗೆ ಆಗುವಷ್ಟು ಹೂಳು ತುಂಬಿರುವುದರಿಂದ ಕೆಳಭಾಗದ ರೈತರಿಗೆ ನೀರು ಬಿಡಲು ಸಾಧ್ಯವಾಗುತ್ತಿಲ್ಲ. 19 ನೇ ಗೇಟ್ ದುರಸ್ತಿಯನ್ನು ಐದು ದಿನಗಳೊಳಗೆ ಮಾಡಿ ಬಾಗಿನ ಅರ್ಪಿಸಲಾಗಿದೆ. ಕೆಳಭಾಗದ ರೈತರಿಗೆ ನೀರು ಒದಗಿಸಲು ಅನುಕೂಲವಾಗುವ ಕ್ರಮವನ್ನು ತೆಗೆದುಕೊಳ್ಳಲಾಗುವುದು ಎಂದು ಸಿದ್ದರಾಮಯ್ಯ ಭರವಸೆ ನೀಡಿದರು.

ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಊಹಾಪೋಹಗಳ ಅಗತ್ಯವಿಲ್ಲ-ಸಿದ್ದು Read More

ಸಿಎಂ ತಪ್ಪು ಒಪ್ಪಿಕೊಂಡಂತಾಗಿದೆ:ಅಶೋಕ್

ಬೆಂಗಳೂರು: ಮೂಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ನಾನು ತಪ್ಪೇ ಮಾಡಿಲ್ಲ ಎನ್ನುತ್ತಿದ್ದವರು ಈಗ ತಮ್ಮ ತಪ್ಪನ್ನ ಒಪ್ಪಿಕೊಂಡು ಸತ್ಯಕ್ಕೆ ಶರಣಾಗಿರುವುದು ನಮ್ಮ ಹೋರಾಟದ ಹಾದಿಯಲ್ಲಿ ಸಿಕ್ಕಿರುವ ಮತ್ತೊಂದು ಜಯ ಎಂದು ಪ್ರತಿಪಕ್ಷದ ನಾಯಕ‌ ಆರ. ಅಶೋಕ್ ಹೇಳಿದ್ದಾರೆ.

ಕಾನೂನಿನ ಕುಣಿಕೆ ಬಿಗಿಯಾಗುತ್ತಿದ್ದಂತೆ
ಅವರು ತಮ್ಮ ಪತ್ನಿ ಹೆಸರಿನಲ್ಲಿ ಪಡೆದಿದ್ದ 14 ಸೈಟುಗಳನ್ನ ಹಿಂತಿರುಗಿಸುವ ನಿರ್ಧಾರ ಮಾಡಿದ್ದು, ನಾನು ತಪ್ಪೇ ಮಾಡಿಲ್ಲ ಎನ್ನುತ್ತಿದ್ದವರು ಈಗ ತಮ್ಮ ತಪ್ಪನ್ನ ಒಪ್ಪಿಕೊಂಡಂತಾಗಿದೆ ಎಂದು ಅಶೋಕ್ ‌ಟ್ವೀಟ್ ಮಾಡಿದ್ದಾರೆ

ಆದರೆ ಕದ್ದ ಮಾಲನ್ನು ಹಿಂತಿರುಗಿಸಿದ ಕೂಡಲೇ ಕಳ್ಳ ನಿರಪರಾಧಿ ಆಗಿಬಿಡುತ್ತಾನೆಯೇ ಕದ್ದ ಮಾಲನ್ನು ವಾಪಸ್ಸು ಕೊಟ್ಟ ತಕ್ಷಣ ಕಳ್ಳತನ ಮಾಫಿ ಆಗಿಬಿಡುತ್ತದೆಯೇ

ಕೆಟ್ಟ ಮೇಲೆ ಬುದ್ಧಿ ಬಂತು ಎಂಬಂತೆ ಈಗಲಾದರೂ ಸಿದ್ದರಾಮಯ್ಯನವರಿಗೆ ತಮ್ಮ ತಪ್ಪಿನ ಅರಿವಾಯಿತಲ್ಲ ಎನ್ನುವುದು ಸಮಾಧಾನಕರ ವಿಷಯ ಎಂದು ಹೇಳಿದ್ದಾರೆ.

ಆದರೆ ಅಡಿಕೆಗೆ ಹೋದ ಮಾನ, ಆನೆ ಕೊಟ್ಟರೂ ಬರುವುದಿಲ್ಲ ಸಿಎಂ ಸಿದ್ದರಾಮಯ್ಯನವರೇ. ತಾವು ತನಿಖೆ ಎದುರಿಸಲೇ ಬೇಕು. ನಿಷ್ಪಕ್ಷಪಾತ ಮತ್ತು ಪಾರದರ್ಶಕ ತನಿಖೆಗಾಗಿ ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಡಲೇ ಬೇಕು. ಅಲ್ಲಿಯವರೆಗೂ ನಮ್ಮ ಹೋರಾಟ ನಿರಂತರವಾಗಿ ಮುಂದುವರೆಯುತ್ತದೆ ಎಂದು ಅಶೋಕ್ ತಿಳಿಸಿದ್ದಾರೆ.

ಸಿಎಂ ತಪ್ಪು ಒಪ್ಪಿಕೊಂಡಂತಾಗಿದೆ:ಅಶೋಕ್ Read More

ವಿಚಾರಣೆ ನಡೆಸುವ ಮೊದಲೇ ತಪ್ಪಿತಸ್ಥರಿಗೆ ಕ್ಲೀನ್‌ ಚಿಟ್‌ :‌ ಅಶೋಕ್ ಕಿಡಿ

ಬೆಂಗಳೂರು: ನಾಗಮಂಗಲದಲ್ಲಿ ವಿಚಾರಣೆ ನಡೆಸುವ ಮೊದಲೇ ರಾಜ್ಯ ಸರ್ಕಾರ ತಪ್ಪಿತಸ್ಥರಿಗೆ ಕ್ಲೀನ್‌ ಚಿಟ್‌ ಕೊಡಲು ಹೊರಟಿದೆ‌ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆರೋಪಿಸಿದ್ದಾರೆ.

ಮೊದಲು ತನಿಖೆ ನಡೆಸಿ, ನಂತರ ತಪ್ಪಿತಸ್ಥರು ಯಾರೆಂದು ತೀರ್ಮಾನಿಸಲಿ ಎಂದು ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ. ವಿಧಾನಸೌಧದಲ್ಲಿ ಪಾಕ್‌ ಜಿಂದಾಬಾದ್‌ ಕೂಗಿದಾಗ ಹಾಗೆ ಆಗಿಯೇ ಇಲ್ಲ ಎಂದಿದ್ದರು, ಬಾಂಬ್‌ ಸ್ಫೋಟವಾದಾಗಲೂ ಅದು ವ್ಯಾಪಾರದ ಜಗಳ ಎಂದು ಹೇಳಿದ್ದರು. ಕುಕ್ಕರ್‌ ಬಾಂಬ್‌ ಸ್ಫೋಟದ ಬಗ್ಗೆಯೂ ಇದೇ ರೀತಿ ಹೇಳಿದ್ದರು. ನಾಗಮಂಗಲದಲ್ಲಿ ಪಾಕಿಸ್ತಾನಕ್ಕೆ ಜೈಕಾರ ಹಾಕಿರುವುದರ ಬಗ್ಗೆ ಮೊದಲು ಪರಿಶೀಲಿಸಲಿ,ಇದನ್ನೂ ಹಾಗೆಯೇ ಬಿಡಬೇಡಿ ಎಂದು ತಿಳಿಸಿದರು.

ವಿದೇಶಕ್ಕೆ ಹೋದ ರಾಹುಲ್‌ ಗಾಂಧಿ, ಭಾರತದ ವಿರುದ್ಧ ಮಾತಾಡುವುದರ ಜೊತೆಗೆ ಮೀಸಲಾತಿ ತೆಗೆದುಹಾಕುವ ಬಗ್ಗೆ ಹೇಳಿದ್ದಾರೆ. ಕಾಂಗ್ರೆಸ್‌ ಆಡಳಿತ ಇರುವ ಕಡೆಗಳಲ್ಲಿ ಮುಸ್ಲಿಂ ಮೂಲಭೂತವಾದಿಗಳಿಗೆ ಹಬ್ಬದ ವಾತಾವರಣ ಇರುತ್ತದೆ. ಸವಾಲು ಹಾಕುವವರನ್ನು ಜೈಲಿಗೆ ಹಾಕುವ ಬದಲು ಪೊಲೀಸರು ಅವರನ್ನು ಕರೆದು ಕಾಫಿ ಕೊಟ್ಟಿದ್ದಾರೆ ಎಂದು ಕಿಡಿಕಾರಿದರು.

ಒಕ್ಕಲಿಗ ಸಮುದಾಯದ ಸರ್ವೋಚ್ಛ ನಾಯಕ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರ ಗೌರವ ಹಾಳು ಮಾಡಲು ಕಾಂಗ್ರೆಸ್‌ ನಾಯಕರು ಯತ್ನಿಸಿದ್ದಾರೆ. ಒಕ್ಕಲಿಗರ ಮೇಲೆ ಅಷ್ಟು ಒಲವಿದ್ದರೆ ಸಿದ್ದರಾಮಯ್ಯನವರನ್ನು ಸಿಎಂ ಸ್ಥಾನದಿಂದ ತೆಗೆದು ಒಕ್ಕಲಿಗರನ್ನೇ ಮುಖ್ಯಮಂತ್ರಿ ಮಾಡಲಿ ಎಂದು ಅಶೋಕ್ ಸವಾಲು ಹಾಕಿದರು.

ಜನಪ್ರಿಯ ನಾಯಕ, ವಿಶ್ವನಾಯಕ ನರೇಂದ್ರ ಮೋದಿಯವರ ಜನ್ಮದಿನ ಪ್ರಯುಕ್ತ ಬಿಜೆಪಿ ಕಾರ್ಯಕರ್ತರು ಸೇವೆ ಮಾಡುತ್ತಿದ್ದಾರೆ. 25,000 ಕಾರ್ಯಕರ್ತರು 58,000 ಬೂತ್‌ಗಳಲ್ಲಿ ರಕ್ತದಾನ ಮಾಡುತ್ತಿದ್ದಾರೆ ಎಂದು ತಿಳಿಸಿದರು.

ವಿಚಾರಣೆ ನಡೆಸುವ ಮೊದಲೇ ತಪ್ಪಿತಸ್ಥರಿಗೆ ಕ್ಲೀನ್‌ ಚಿಟ್‌ :‌ ಅಶೋಕ್ ಕಿಡಿ Read More

ಹಗರಣಗಳಿಂದಾಗಿ ಕೋಮಾ ಸ್ಥಿತಿಗೆ ಹೋಗಿದೆ‌ ಸರ್ಕಾರ-ಅಶೋಕ್ ಟೀಕೆ

ಬೆಂಗಳೂರು: ಕಾಂಗ್ರೆಸ್‌ ಸರ್ಕಾರ ಹಗರಣಗಳಿಂದಾಗಿ ಕೋಮಾ ಸ್ಥಿತಿಗೆ ಹೋಗಿದ್ದು, ಅಭಿವೃದ್ಧಿ ಕಾರ್ಯಗಳೇ ನಡೆಯುತ್ತಿಲ್ಲ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಆರೋಪಿಸಿದರು.

ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಿದ್ದರೆ, ಅಭಿವೃದ್ಧಿ ಕಾರ್ಯಗಳಿಗೆ ಇಷ್ಟು ತೊಡಕಾಗುತ್ತಿರಲಿಲ್ಲ ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಉತ್ತರ ಕರ್ನಾಟಕ ಭಾಗದಲ್ಲಿ ಪ್ರವಾಹ ಉಂಟಾಗಿದ್ದು, ಅದಕ್ಕೆ ಪ್ರತ್ಯೇಕ ಪರಿಹಾರ ನೀಡಲು ಸರ್ಕಾರ ಮುಂದಾಗಿಲ್ಲ. ಮಳೆಯಿಂದಾಗಿ ಎಲ್ಲ ಕಡೆ ರಸ್ತೆಗಳು ಹದಗೆಟ್ಟಿವೆ. ರಸ್ತೆಗಳಲ್ಲಿ ಸುಲಲಿತವಾಗಿ ಓಡಾಡುವ ಗ್ಯಾರಂಟಿಯನ್ನು ಸರ್ಕಾರ ನೀಡಬೇಕಿತ್ತು, ಹಗರಣಗಳಿಂದಾಗಿ ಸರ್ಕಾರ ಕೋಮಾ ಸ್ಥಿತಿಗೆ ಹೋಗಿದ್ದು, ಎಲ್ಲರೂ ಮುಖ್ಯಮಂತ್ರಿ ಕುರ್ಚಿಗೆ ಟವೆಲ್‌ ಹಾಕಿದ್ದಾರೆ ಎಂದು ಟೀಕಿಸಿದರು.

ಬೆಂಗಳೂರಿನಲ್ಲಿ ಕಮಿಶನ್‌ ಆಸೆಗಾಗಿ ಗುತ್ತಿಗೆದಾರರಿಗೆ ಕೊಡಬೇಕಿರುವ 1,500 ಕೋಟಿ ರೂ.ತಡೆಹಿಡಿದಿದ್ದು, ಗುತ್ತಿಗೆದಾರರು ಪ್ರತಿಭಟನೆ ಮಾಡುತ್ತಿದ್ದಾರೆ. ರಸ್ತೆಗಳಲ್ಲಿ ಗುಂಡಿ ಬಿದ್ದಿದ್ದು, ವಾಹನ ಸವಾರರು ಪರದಾಡುತ್ತಿದ್ದಾರೆ. ಎಲ್ಲೆಡೆ ಕಸದ ರಾಶಿ ಬಿದ್ದಿದೆ. ಇದು ಕಾಸಿಲ್ಲದ ಬ್ರ್ಯಾಂಡ್‌ ಬೆಂಗಳೂರಾಗಿದೆ ಎಂದು ವ್ಯಂಗ್ಯ ವಾಡಿದರು ಅಶೋಕ್.

ಹಗರಣಗಳಿಂದಾಗಿ ಕೋಮಾ ಸ್ಥಿತಿಗೆ ಹೋಗಿದೆ‌ ಸರ್ಕಾರ-ಅಶೋಕ್ ಟೀಕೆ

ಬೆಂಗಳೂರು: ಕಾಂಗ್ರೆಸ್‌ ಸರ್ಕಾರ ಹಗರಣಗಳಿಂದಾಗಿ ಕೋಮಾ ಸ್ಥಿತಿಗೆ ಹೋಗಿದ್ದು, ಅಭಿವೃದ್ಧಿ ಕಾರ್ಯಗಳೇ ನಡೆಯುತ್ತಿಲ್ಲ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಆರೋಪಿಸಿದರು.

ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಿದ್ದರೆ, ಅಭಿವೃದ್ಧಿ ಕಾರ್ಯಗಳಿಗೆ ಇಷ್ಟು ತೊಡಕಾಗುತ್ತಿರಲಿಲ್ಲ ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಉತ್ತರ ಕರ್ನಾಟಕ ಭಾಗದಲ್ಲಿ ಪ್ರವಾಹ ಉಂಟಾಗಿದ್ದು, ಅದಕ್ಕೆ ಪ್ರತ್ಯೇಕ ಪರಿಹಾರ ನೀಡಲು ಸರ್ಕಾರ ಮುಂದಾಗಿಲ್ಲ. ಮಳೆಯಿಂದಾಗಿ ಎಲ್ಲ ಕಡೆ ರಸ್ತೆಗಳು ಹದಗೆಟ್ಟಿವೆ. ರಸ್ತೆಗಳಲ್ಲಿ ಸುಲಲಿತವಾಗಿ ಓಡಾಡುವ ಗ್ಯಾರಂಟಿಯನ್ನು ಸರ್ಕಾರ ನೀಡಬೇಕಿತ್ತು, ಹಗರಣಗಳಿಂದಾಗಿ ಸರ್ಕಾರ ಕೋಮಾ ಸ್ಥಿತಿಗೆ ಹೋಗಿದ್ದು, ಎಲ್ಲರೂ ಮುಖ್ಯಮಂತ್ರಿ ಕುರ್ಚಿಗೆ ಟವೆಲ್‌ ಹಾಕಿದ್ದಾರೆ ಎಂದು ಟೀಕಿಸಿದರು.

ಬೆಂಗಳೂರಿನಲ್ಲಿ ಕಮಿಶನ್‌ ಆಸೆಗಾಗಿ ಗುತ್ತಿಗೆದಾರರಿಗೆ ಕೊಡಬೇಕಿರುವ 1,500 ಕೋಟಿ ರೂ.ತಡೆಹಿಡಿದಿದ್ದು, ಗುತ್ತಿಗೆದಾರರು ಪ್ರತಿಭಟನೆ ಮಾಡುತ್ತಿದ್ದಾರೆ. ರಸ್ತೆಗಳಲ್ಲಿ ಗುಂಡಿ ಬಿದ್ದಿದ್ದು, ವಾಹನ ಸವಾರರು ಪರದಾಡುತ್ತಿದ್ದಾರೆ. ಎಲ್ಲೆಡೆ ಕಸದ ರಾಶಿ ಬಿದ್ದಿದೆ. ಇದು ಕಾಸಿಲ್ಲದ ಬ್ರ್ಯಾಂಡ್‌ ಬೆಂಗಳೂರಾಗಿದೆ ಎಂದು ವ್ಯಂಗ್ಯ ವಾಡಿದರು ಅಶೋಕ್.

ಹಗರಣಗಳಿಂದಾಗಿ ಕೋಮಾ ಸ್ಥಿತಿಗೆ ಹೋಗಿದೆ‌ ಸರ್ಕಾರ-ಅಶೋಕ್ ಟೀಕೆ Read More

ಸರ್ಕಾರ ರಾಜ್ಯಪಾಲರ ಮೇಲೆ ಸಲ್ಲದ ಆರೋಪ ಮಾಡಿ ಜನರ ದಿಕ್ಕು ತಪ್ಪಿಸಿದೆ:ಅಶೋಕ್

ಬೆಂಗಳೂರು:ಭ್ರಷ್ಟಾಚಾರದ ಸುಳಿಯಲ್ಲಿ ಸಿಲುಕಿ ಮುಜುಗರ ಅನುಭವಿಸುತ್ತಿರುವ ರಾಜ್ಯ ಸರ್ಕಾರ ರಾಜ್ಯಪಾಲರ ಮೇಲೆ ಇಲ್ಲಸಲ್ಲದ ಆರೋಪ ಮಾಡಿ ಜನರ ದಿಕ್ಕು ತಪ್ಪಿಸಲು ಹೊರಟಿದೆ ಇದು ಖಂಡನೀಯ ಮತ್ತು ಅಕ್ಷಮ್ಯ ಅಪರಾಧ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಹೇಳಿದ್ದಾರೆ.

ಸರ್ಕಾರದ ಸರಣಿ ಭ್ರಷ್ಟಾಚಾರ ಬಯಲಾದಾಗಿನಿಂದ ಮುಖ್ಯಮಂತ್ರಿಗಳು, ಉಪಮುಖ್ಯಮಂತ್ರಿಗಳು, ಸಚಿವರು, ಶಾಸಕರು, ಹಲವಾರು ಕಾಂಗ್ರೆಸ್ ನಾಯಕರು ಸಂವಿಧಾನಿಕ ಹುದ್ದೆ ಎಂಬುದನ್ನೂ ಮರೆತು ರಾಜ್ಯಪಾಲರನ್ನ ಅವಾಚ್ಯ ಶಬ್ಧಗಳಿಂದ ನಿಂದಿಸುವುದು, ಬಾಂಗ್ಲಾದೇಶದ ರೀತಿ ದಾಳಿ ಮಾಡುವ ಬೆದರಿಕೆ ಒಡ್ಡುವುದು ಎಷ್ಟು ಸರಿ ಎಂದು ಕಿಡಿಕಾರಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅಶೋಕ್, ರಾಜ್ಯಪಾಲರ ವಿರುದ್ಧ ನ್ಯಾಯಾಲಯದಲ್ಲಿ ಆರೋಪ ಹೊರಿಸುವುದು, ಬಿಜೆಪಿ ಏಜೆಂಟ್ ಎಂದು ಛೇಡಿಸುವುದು, ಹೀಗೆ ಸರ್ಕಾರ ರಾಜ್ಯಪಾಲರಿಗೆ ಅಗೌರವ ತೋರುತಲೇ ಬಂದಿದೆ ಎಂದು ಆರೋಪಿಸಿದ್ದಾರೆ.

ರಾಜಭವನದಲ್ಲಿ ಯಾವುದೇ ಪ್ರಾಸಿಕ್ಯೂಷನ್ ಅನುಮತಿ ಮನವಿ ಬಾಕಿ ಇಲ್ಲ ಎಂದು ರಾಜ್ಯಪಾಲರು ಸ್ಪಷ್ಟನೆ ನೀಡಿದ್ದಾರೆ,ಆದರೆ ಮುಖ್ಯಮಂತ್ರಿಗಳ ವಿರುದ್ಧ ಮಾತ್ರ ಪ್ರಾಸಿಕ್ಯೂಷನ್ ಅನುಮತಿ ನೀಡಿ ರಾಜ್ಯಪಾಲರು ಪಕ್ಷಪಾತ ಮಾಡುತ್ತಿದ್ದಾರೆ ಎಂಬ ಕಾಂಗ್ರೆಸ್ ಪಕ್ಷದ ಆರೋಪ ಹಸಿ ಸುಳ್ಳು ಎಂಬುದು ಸಾಬೀತಾಗಿದೆ ಎಂದು ಅಶೋಕ್‌ ತಿಳಿಸಿದ್ದಾರೆ.

ಸರ್ಕಾರ ರಾಜ್ಯಪಾಲರ ಮೇಲೆ ಸಲ್ಲದ ಆರೋಪ ಮಾಡಿ ಜನರ ದಿಕ್ಕು ತಪ್ಪಿಸಿದೆ:ಅಶೋಕ್ Read More