ಪತ್ನಿ, ಮೂರು ವರ್ಷದ ಮಗುವನ್ನು ಕೊಂ*ದು ಪರಾರಿಯಾದ ಪತಿ

ಅಯೋಧ್ಯೆ: ವ್ಯಕ್ತಿಯೊಬ್ಬ ಪತ್ನಿ ಹಾಗೂ ಮೂರು ವರ್ಷದ ಮಗುವನ್ನು ಕೊಂದು ಪರಾರಿಯಾಗಿರುವ ಘಟನೆ ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ನಡೆದಿದೆ.

ಮಹಿಳೆ ಮತ್ತು ಆಕೆಯ ಮೂರು ವರ್ಷದ ಮಗು ಶವವಾಗಿ ಪತ್ತೆಯಾಗಿದ್ದಾರೆ.

ಶಹಜನ್ ಖಂಡಕರ್ ಎಂಬಾತ ಈ ಕೃತ್ಯ ಎಸಗಿ ಓಡಿಹೋಗಿದ್ದಾನೆ.

ವಿಷಯ ತಿಳಿಯುತ್ತಿದ್ದಂತೆ ಪೊಲೀಸರು ಧಾವಿಸಿ ತನಿಖೆ ಮಾಡುತ್ತಿದ್ದಾರೆ.

ಬಚ್ರಾ ಸುಲ್ತಾನ್‌ಪುರ ಪ್ರದೇಶದಲ್ಲಿ ಈ ಘಟನೆ ಸಂಭವಿಸಿದ್ದು,
ಗುವಾಹಟಿಯ ಸುಮಾರು 40 ಕುಟುಂಬಗಳು ತಾತ್ಕಾಲಿಕ ಮನೆಗಳಲ್ಲಿ ವಾಸಿಸುತ್ತಿದ್ದು, ತ್ಯಾಜ್ಯ ಸಂಗ್ರಹಿಸುವ ಕೆಲಸ ಮಾಡುತ್ತಾರೆ.

ಆರೋಪಿಯು ನಿನ್ನೆ ರಾತ್ರಿ 35 ವರ್ಷದ ಪತ್ನಿ ಮತ್ತು ಮಗನನ್ನು ಕೊಂದು ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಇವರು ಅಸ್ಸಾಮ್ ಮೂಲದವರು ಇಲ್ಲಿ ಅನಧಿಕೃತವಾಗಿ ವಾಸ ಮಾಡುತ್ತಿದ್ದಾರೆಂದು ಸ್ಥಳೀಯರು ತಿಳಿಸಿದ್ದಾರೆ.

ಕೊಲೆಗೂ ಮೊದಲು ಮೊದಲನೆ ಮಗನನ್ನು ಹೊರಗೆ ಮಲಗಲು ಹೇಳಿದ್ದಾನೆ, ನಂತರ,ಪತ್ನಿಯ ಮುಖಕ್ಕೆ ಹರಿತವಾದ ವಸ್ತುವನ್ನು ಬಳಸಿ ಹಲ್ಲೆ ನಡೆಸಿದ್ದಾನೆ. ನಂತರ ಕಿರಿಯ ಮಗುವನ್ನು ಕೊಂದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಹಿರಿಯ ಮಗ ಮರುದಿನ ಬೆಳಗ್ಗೆ ಗುಡಿಸಲು ಒಳಗೆ ಹೋದಾಗ ತಾಯಿ ಹಾಗೂ ತಮ್ಮ ಬರ್ಬರವಾಗಿ ಹತ್ಯೆಯಾಗಿರುವುದನ್ನು ಕಂಡು ಅಕ್ಕಪಕ್ಕದವರನ್ನು ಕೂಗಿದ್ದಾನೆ.

ತಕ್ಷಣ ಅಕ್ಕಪಕ್ಕದ ಮನೆಯರು ಬಂದು ಕೂಡಲೇ ಪೊಲೀಸರಿಗೆ ಕರೆ ಮಾಡಿದ್ದಾರೆ. ಪ್ರದೇಶವನ್ನು ಪರೀಕ್ಷಿಸಲು ವಿಧಿವಿಜ್ಞಾನ ತಂಡವನ್ನು ಕರೆತಂದು ಶವಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.

ಪತ್ನಿ, ಮೂರು ವರ್ಷದ ಮಗುವನ್ನು ಕೊಂ*ದು ಪರಾರಿಯಾದ ಪತಿ Read More

ರಾಮಲಲ್ಲಾನ ಹಣೆಯ ಮೇಲೆ ಮೂಡಿದ ಸೂರ್ಯ ಕಿರಣ:ಭಕ್ತಗಣ ಖುಷ್

ಅಯೋಧ್ಯೆ,ಏ.6: ಅಯೋಧ್ಯೆ ರಾಮಮಂದಿರದಲ್ಲಿ ರಾಮನವಮಿ ಸಂಭ್ರಮ ಮನೆ ಮಾಡಿದೆ.ಈ ಶುಭ ಸಂದರ್ಭದಲ್ಲಿ ರಾಮಲಲ್ಲಾನ ಹಣೆಯ ಮೇಲೆ ಸೂರ್ಯ ಕಿರಣ ಮೂಡಿದ್ದು ಭಕ್ತರ ಖುಷಿಗೆ ಪಾರವೇ ಇಲ್ಲದಂತಾಗಿದೆ.

ಸೂರ್ಯನ ಕಿರಣ ನೇರವಾಗಿ ರಾಮಲಲ್ಲಾ ಹಣೆಯ ಮೇಲೆ ಬಿದ್ದ ದಿವ್ಯ ದೃಶ್ಯ ಕಂಡುಬಂದಿತು.ಸರಿಯಾಗಿ ಮಧ್ಯಾಹ್ನ 12 ಗಂಟೆಗೆ ರಾಮಲಲ್ಲಾ ವಿಗ್ರಹದ ಹಣೆಯ ಮೇಲೆ ಬಿದ್ದ ಸೂರ್ಯನ ಕಿರಣ, ದಿವ್ಯ ತಿಲಕ ಇಟ್ಟಂತೆ ಭಾಸವಾಗುತ್ತಿದೆ

ಸೂರ್ಯ ಕಿರಣವು ದೇವರ ಹಣೆಯನ್ನು ಬೆಳಗಿಸಿ, ಆಚರಣೆಗಳಿಗೆ ಆಧ್ಯಾತ್ಮಿಕ ಹೊಳಪನ್ನು ನೀಡಿತು.ಭಕ್ತರು ಸಂಭ್ರಮದಿಂದ ಇದನ್ನು ಕಣ್ತುಂಬಿಕೊಂಡು ಪುನೀತರಾದರು.

ದೇಶಾದ್ಯಂತ ರಾಮನವಮಿಯನ್ನು ಅತ್ಯಂತ ವೈಭವದಿಂದ ಆಚರಿಸಲಾಗುತ್ತಿದೆ. ಇದು ವಿಷ್ಣುವಿನ ಏಳನೇ ಅವತಾರವಾದ ಭಗವಾನ್ ರಾಮನ ಜನ್ಮ ವಾರ್ಷಿಕೋತ್ಸವದ ದಿನ.

ಜನರು ದೇವಾಲಯಗಳಿಗೆ ತೆರಳಿ ಶ್ರೀರಾಮನಿಗೆ ವಿಶೇಷ ಪೂಜೆ ಸಲ್ಲಿಸುತ್ತಿದ್ದಾರೆ. ಅಲ್ಲಲ್ಲಿ ಭಜನೆಗಳು, ಮೆರವಣಿಗೆಗಳು ಮತ್ತು ಜಪಗಳು ನಡೆಯುತ್ತಿವೆ. ದೃಕ್ ಪಂಚಾಂಗದ ಪ್ರಕಾರ, ಭಗವಾನ್ ರಾಮನು ಚೈತ್ರ ಮಾಸದ ಶುಕ್ಲ ಪಕ್ಷದ ನವಮಿ ತಿಥಿಯಂದು ಜನಿಸಿದ್ದ.

ರಾಮನವಮಿ ಹಿನ್ನೆಲೆಯಲ್ಲಿ ಅಯೋಧ್ಯೆ ರಾಮಮಂದಿರವು ಹೂವು, ದೀಪಾಲಂಕಾರದಿಂದ ಕಂಗೊಳಿಸುತ್ತಿದೆ. ಲಕ್ಷಾಂತರ ಭಕ್ತರು ರಾಮಮಂದಿರಕ್ಕೆ ತೆರಳಿ ಬಾಲರಾಮನ ದರ್ಶನ ಪಡೆಯುತ್ತಿದ್ದಾರೆ.

ರಾಮಲಲ್ಲಾನ ಹಣೆಯ ಮೇಲೆ ಮೂಡಿದ ಸೂರ್ಯ ಕಿರಣ:ಭಕ್ತಗಣ ಖುಷ್ Read More

ಲಡ್ಡು ಪ್ರಸಾದಕ್ಕೆ ಪ್ರಾಣಿಯ ಕೊಬ್ಬು ಬಳಕೆ:ವಿಶ್ವ ಪ್ರಸನ್ನ ಶ್ರೀ ಖಂಡನೆ

ಅಯೋಧ್ಯೆ: ಲಡ್ಡು ಪ್ರಸಾದವನ್ನ ಕಲಬೆರಕೆ ತುಪ್ಪ ಹಾಗೂ ಪ್ರಾಣಿಯ ಕೊಬ್ಬಿನ ಮಿಶ್ರಣದಿಂದ ತಯಾರಿಸಿದ್ದಾರೆ ಇದು ಮಹಾ ಅಪಚಾರ ಉಡುಪಿ ಪೇಜಾವರ ಮಠದ ವಿಶ್ವ ಪ್ರಸನ್ನ ಸ್ವಾಮೀಜಿ ಬೇಸರ ಪಟ್ಟಿದ್ದಾರೆ.

ಅಯೋಧ್ಯೆಯಲ್ಲಿ ತಿರುಪತಿ ಲಡ್ಡು ವಿವಾದದ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪ್ರಸಾದದಲ್ಲಿ ಮೀನಿನ ಎಣ್ಣೆ, ಹಂದಿಯ ಕೊಬ್ಬು, ಹಸುವಿನ ಕೊಬ್ಬು ಬಳಸಿದ್ದಾರೆ, ಇದು ಹಿಂದೂ ಸಮಾಜಕ್ಕೆ ಬಗೆದಿರುವ ದೊಡ್ಡ ಅಪಚಾರ ಜತೆಗೆ ಇದು ದೇವರಿಗೂ ಬಗೆದಿರುವ ಅಪಚಾರ. ಸರ್ಕಾರವೇ ಈ ಕೃತ್ಯ ನಡೆಸಿದೆ ಎಂದು ಖಂಡಿಸಿದರು.

ತಿರುಪತಿಯ ಶ್ರೀನಿವಾಸ ದೇವರು, ಗೋವಿನ ರಕ್ಷಣೆಗೆ ಅವತರಿಸಿದವ,ಅಂತಹ ಶ್ರೀನಿವಾಸ ದೇವರಿಗೆ ಹಸುವಿನ ಕೊಬ್ಬಿನ ಪ್ರಸಾದ ನೀಡಿದ್ದೀರಿ. ಇದು ಬಹುದೊಡ್ಡ ಅಪರಾಧ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಹಿಂದೂಗಳ ಧಾರ್ಮಿಕ ಶ್ರದ್ಧೆಯ ಮೇಲಿನ ಹಲ್ಲೆ ಇದಾಗಿದೆ, ಉಪಯೋಗಕ್ಕೆ ಅನರ್ಹವಾದ ತುಪ್ಪವನ್ನು ದೇವಾಲಯಕ್ಕೆ ಬಳಸಿದ್ದಾರೆ ಇಂತಹ ತುಪ್ಪ ತಯಾರಿಸುವ ಅಡ್ಡಗಳನ್ನು ಕಂಡುಹಿಡಿದು ತನಿಖೆ ನಡೆಸುವುದು ಸರ್ಕಾರದ ಕರ್ತವ್ಯ ಎಂದು ಹೇಳಿದರು.

ಧಾರ್ಮಿಕ ಶ್ರದ್ಧಾ ಕೇಂದ್ರಗಳು, ಸರ್ಕಾರದ ಹಿಡಿತದಲ್ಲಿ ಇರಬಾರದು,ಇವು ಹಿಂದೂ ಸಮಾಜದ ಕೈಯಲ್ಲಿರಬೇಕು, ಸರ್ವೋಚ್ಚ ನ್ಯಾಯಾಲಯದ ತೀರ್ಪು ಹೀಗೆಯೇ ಹೇಳಿದೆ. ತಡ ಮಾಡದೆ ಸರ್ಕಾರದ ಸ್ವಾಧೀನದಿಂದ ದೇಗುಲ ಮುಕ್ತಗೊಳಿಸಿ, ಹಿಂದೂಗಳ ಸಂಸ್ಥೆಗೆ ತಿರುಪತಿ ದೇವಾಲಯದ ಆಡಳಿತ ನೀಡಿ ಎಂದು ವಿಶ್ವಪ್ರಸನ್ನ ಶ್ರೀ ಆಗ್ರಹಿಸಿದರು.

ಲಡ್ಡು ಪ್ರಸಾದಕ್ಕೆ ಪ್ರಾಣಿಯ ಕೊಬ್ಬು ಬಳಕೆ:ವಿಶ್ವ ಪ್ರಸನ್ನ ಶ್ರೀ ಖಂಡನೆ Read More