ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ.ವೈ.ವಿಜಯೇಂದ್ರ ಅವರಿಗೆ ಹುಟ್ಟುಹಬ್ಬದ ಸಂಭ್ರಮ.
ಹಾಗಾಗಿ ಗುರುವಾರ ಬೆಂಗಳೂರಿನ ದವಳಗಿರಿ ನಿವಾಸದಲ್ಲಿ ಬಿ.ವೈ.ವಿಜಯೇಂದ್ರ ಅವರ ಹುಟ್ಟುಹಬ್ಬಕ್ಕಾಗಿ ಮೈಸೂರು ಮಹಾನಗರ ಪಾಲಿಕೆ ಮಾಜಿ ಸದಸ್ಯರಾದ ಜಗದೀಶ್ ಮತ್ತಿತರರು ಶಾಲು ಹೊದಿಸಿ, ಹಾರ ಹಾಕಿ ಶುಭ ಹಾರಿಸಿದರು.
ಶಿವಮೊಗ್ಗ: ಒಂದು ವಾರದ ನಂತರ ಎಲ್ಲವೂ ಸರಿಯಾಗಲಿದೆ, ನಾನು ಮತ್ತೆ ರಾಜ್ಯಾಧ್ಯಕ್ಷನಾಗಿ ಪಕ್ಷ ಬಲಪಡಿಸುತ್ತೇನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದರು.
ಶಿವಮೊಗ್ಗದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಬಿಜೆಪಿಯಲ್ಲಿ ಆಂತರಿಕ ಪ್ರಜಾಪ್ರಭುತ್ವದ ವ್ಯವಸ್ಥೆ ಇದೆ. ಯಾವುದೇ ರಾಜಕೀಯ ಪಕ್ಷದಲ್ಲಿ ಈ ವ್ಯವಸ್ಥೆಯಿಲ್ಲ, ಮಂಡಲ ಮಟ್ಟದಿಂದ ಹಿಡಿದು ಜಿಲ್ಲಾ ಮಟ್ಟ, ರಾಜ್ಯಾಧ್ಯಕ್ಷರ ಚುನಾವಣೆ ಮತ್ತು ರಾಷ್ಟ್ರೀಯ ಅಧ್ಯಕ್ಷರ ಚುನಾವಣೆ ಎಲ್ಲವೂ ಕೂಡ ವ್ಯವಸ್ಥಿತವಾಗಿ ನಡೆಯುತ್ತಿವೆ. ಕೇಂದ್ರದ ವರಿಷ್ಠರು ನಿರ್ಧಾರ ಮಾಡಿದಂತೆ ಎಲ್ಲವೂ ನಡೆಯುತ್ತಿದೆ ಎಂದು ಹೇಳಿದರು.
ಯತ್ನಾಳ್ ಬಣ ರೆಬೆಲ್ ಆಗಿದಿಯಲ್ಲ ಎಂಬ ಪ್ರಶ್ನೆಗೆ, ಪ್ರತಿಕ್ರಿಯಿಸಿ, ಯತ್ನಾಳ್ ಅವರ ನೇತೃತ್ವದ ಬಣ ರಾಜ್ಯಾಧ್ಯಕ್ಷರ ಹುದ್ದೆಗೆ ಸ್ಪರ್ಧಿಸುವ ತಯಾರಿ ನಡೆಸಿದೆ ಎಂದು ಉತ್ತರಿಸಿದರು.
ರಾಜ್ಯದಲ್ಲಿ ಕಳೆದ ಒಂದು ವರ್ಷದಿಂದ ನಮ್ಮ ಎಲ್ಲಾ ಕಾರ್ಯಕರ್ತರು, ಪಕ್ಷದ ಹಿರಿಯರು ಒಟ್ಟಾಗಿ ಭ್ರಷ್ಟ ಹಾಗೂ ದುಷ್ಟ ಕಾಂಗ್ರೆಸ್ ಸರ್ಕಾರದ ವಿರುದ್ಧ ನಿರಂತರವಾಗಿ ಹೋರಾಟ ಮಾಡಿಕೊಂಡು ಬಂದಿದ್ದೇವೆ. ನನ್ನ ಕಳೆದ ಒಂದು ವರ್ಷದ ಅವಧಿಯಲ್ಲಿ, ರಾಜ್ಯಾಧ್ಯಕ್ಷನಾಗಿ ಯಾವ ರೀತಿ ಕೆಲಸ ಮಾಡಿದ್ದೇನೆ ಎಂಬುದು ರಾಜ್ಯದ ಜನತೆಗೂ ಗೊತ್ತಿದೆ, ನಮ್ಮ ಕಾರ್ಯಕರ್ತರಿಗೂ ಗೊತ್ತಿದೆ. ಪಕ್ಷದ ಹಿರಿಯರು, ಶಾಸಕರಿಗೂ ಕೂಡ ಗೊತ್ತಿದೆ. ಎಲ್ಲರ ಸಹಕಾರದಿಂದ ರಾಜ್ಯಾಧ್ಯಕ್ಷನಾಗಿ ಮುಂದುವರಿದು ಪಕ್ಷವನ್ನು ಬಲಪಡಿಸುವ ಕೆಲಸ ಮಾಡುತ್ತೇನೆ ಎಂಬ ಸಂಪೂರ್ಣ ವಿಶ್ವಾಸವಿದೆ ಎಂದು ವಿಜಯೇಂದ್ರ ತಿಳಿಸಿದರು.
ಮೈಸೂರು: ಮೈಸೂರಿಗೆ ಆಗಮಿಸಿದ ಬಿ.ವೈ.ವಿಜಯೇಂದ್ರ ಅವರಿಗೆ ಸಂಸದ ಪ್ರತಾಪ ಸಿಂಹ ಅವರನ್ನು ಪಕ್ಚದಿಂದ ಉಚ್ಚಾಟನೆ ಮಾಡಬೆಕೆಂದು ಬಿಜೆಪಿ ಎಸ್ ಟಿ ಮೋರ್ಚಾ ವತಿಯಿಂದ ಮನವಿ ಸಲ್ಲಿಸಲಾಯಿತು.
ಸುಮಾರು ಮೂವತ್ತು ವರ್ಷಗಳಿಗೂ ಹೆಚ್ಚು ಕಾಲದಿಂದ ನಾವುಗಳು ಹಿಂದೂ ಸಂಘಟನೆ ಸೇರಿದಂತೆ ಭಾರತೀಯ ಜನತಾ ಪಕ್ಷದ ನಿಷ್ಟಾವಂತ ಕಾರ್ಯಕರ್ತರಾಗಿ ಮತ್ತು ಬ್ಲಾಕ್ ಮಟ್ಟ, ಜಿಲ್ಲಾ ಹಾಗೂ ರಾಜ್ಯ ಮಟ್ಟದ ವಿವಿಧ ಜವಾಬ್ದಾರಿಗಳನ್ನು ನಿರ್ವಹಿಸಿದ್ದೇವೆ.ಆದರೆ ಇತ್ತೀಚಿನ ದಿನಗಳಲ್ಲಿ ಮಾಜಿ ಸಂಸದ ಪ್ರತಾಪ್ ಸಿಂಹ ಅವರಿಂದಾಗಿ ಪಕ್ಷಕ್ಕೆ ಉಂಟಾಗುತ್ತಿರುವ ಹಾನಿ ಮತ್ತು ಮುಜುಗರ ನಮಗೆ ತೀವ್ರ ಬೇಸರವನ್ನು ಉಂಟುಮಾಡಿವೆ ಎಂದು ಮನವಿಯಲ್ಲಿ ಮನದಟ್ಟು ಮಾಡಲಾಯಿತು.
ಪ್ರತಾಪ್ ಸಿಂಹ ಅವರು ಪ್ರಜಾಪ್ರಭುತ್ವದ ದೇಗುಲವೆಂದೇ ಕರೆಯಲ್ಪಡುವ ದೇಶದ ಸಂಸತ್ ಭವನದ ಒಳಗೆ ಸ್ಮೋಕ್ ಬಾಂಬ್ ದಾಳಿ ನಡೆಸಿದ ಭಯೋತ್ಪಾದಕರಿಗೆ ಪೂರ್ವಾಪರ ಪರಿಶೀಲಿಸದೆ ಒಳಗೆ ಪ್ರವೇಶಿಸಲು ಪಾಸ್ ನೀಡಿರುವುದು ದೇಶದ ಭದ್ರತಾ ವ್ಯವಸ್ಥೆಯನ್ನೇ ಆಣಕಿಸಿದೆ.
ಅಲ್ಲದೆ ಭಾರತೀಯ ಜನತಾ ಪಕ್ಷದ ಕಾರ್ಯಕರ್ತರು ಹಾಗೂ ಸಮಸ್ತ ಕರ್ನಾಟಕದ ಜನತೆ ತಲೆ ಎತ್ತಿ ನಡೆಯಲು ಸಾಧ್ಯವಾಗದಷ್ಟು ಮುಜುಗರವನ್ನು ಸೃಷ್ಟಿಸಿತ್ತು.
ಸಂಸತ್ತಿನಲ್ಲಿ ಭಯೋತ್ಪಾದಕರಿಗೆ ಸಂಸದ ಪ್ರತಾಪ ಸಿಂಹ ಮೂರ್ನಾಲ್ಕು ಬಾರಿ ಪಾಸ್ ನೀಡಿದ್ದಾರೆಂದರೆ ಆ ಇಬ್ಬರು ಯುವಕರು ಪರಿಚಯಸ್ತರು ಎಂಬುವುದು ಮೇಲ್ನೋಟಕ್ಕೆ ಸಾಬೀತಾಗಿದೆ.
ಸಂಸತ್ ಭವನದ ದಾಳಿಯ ತನಿಖೆ ಮುಗಿಯುವ ವರೆವಿಗೂ ಪ್ರತಾಪ ಸಿಂಹ ಅವರಿಗೆ ಪಕ್ಷದ ಯವುದೇ ಉನ್ನತ ಉದ್ದೆ ನೀಡಬಾರದು,ಒಟ್ಟಾರೆ ಪ್ರತಾಪ ಸಿಂಹ ಅವರನ್ನ ಉಚ್ಚಾಟನೆ ಮಾಡಬೇಕೆಂದು ಕೇಂದ್ರ ಭಾರತೀಯ ಜನತಾ ಪಾರ್ಟಿಗೆ ಶಿಫಾರಸು ಮಾಡಬೇಕೆಂದು ಎಸ್ ಟಿ ಮೊರ್ಚ ರಾಜ್ಯ ಕಾರ್ಯಕಾರಿ ಸದಸ್ಯ ಮೈ.ಕಾ.ಪ್ರೇಮ್ ಕುಮಾರ್ ಮತ್ತು ಚಾಮರಾಜ ಕ್ಷೇತ್ರ ನಿಕಟಪೂರ್ವ ಉಪಾಧ್ಯಕ್ಷ ಕುಮಾರ್ ಗೌಡ ಅವರ ನೇತೃತ್ವದಲ್ಲಿ ವಿಜಯೇಂದ್ರ ಅವರಿಗೆ ಮನವಿ ಪತ್ರ ಸಲ್ಲಿಸಲಾಯಿತು.
ಬೆಳಗಾವಿ: ಚಳಿಗಾಲದ ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆಗಳಿಗೆ ಪರಿಹಾರ ಸಿಗುತ್ತೆ ಎಂಬ ನಂಬಿಕೆ ಇಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅನುಮಾನ ವ್ಯಕ್ತಪಡಿಸಿದ್ದಾರೆ.
ಬೆಳಗಾವಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ಉತ್ತರ ಕರ್ನಾಟಕದ ಸಮಸ್ಯೆಗಳಿಗೆ ಸ್ಪಂದಿಸುತ್ತಿರುವುದು ಕೇವಲ ಬೂಟಾಟಿಕೆ,ಇದರ ಬಗ್ಗೆ ಗಂಭೀರ ಚರ್ಚೆ ಆಗುವುದಿಲ್ಲ ಎಂದು ಹೇಳಿದರು.
ರಾಜ್ಯದಲ್ಲಿ ಸರ್ಕಾರ ನಿಷ್ಕ್ರಿಯವಾಗಿದೆ. ಶಿಶುಗಳ ಮರಣ, ಬಾಣಂತಿಯರ ಸಾವು, ರಾಜ್ಯದಲ್ಲಿ ಬಿರುಗಾಳಿ ಎಬ್ಬಿಸಿರುವ ವಕ್ಫ್ ಆಸ್ತಿ ವಿವಾದದ ಬಗ್ಗೆ ಸದನದಲ್ಲಿ ಚರ್ಚೆ ಮಾಡುತ್ತೇವೆ ಎಂದು ಹೇಳಿದರು.
ಪಂಚಮಸಾಲಿ ಹೋರಾಟಗಾರರ ಅಹವಾಲನ್ನು ಸರ್ಕಾರ ಸ್ವೀಕರಿಬೇಕು ಎಂದು ಅವರು ಇದೇ ವೇಳೆ ವಿಜಯೇಂದ್ರ ಒತ್ತಾಯಿಸಿದರು.
ಗ್ಯಾರಂಟಿಗಳಿಂದ ರಾಜ್ಯದ ಜನ ಆನಂದಲ್ಲಿದ್ದಾರೆ ಎಂಬ ಭ್ರಮೆಯಲ್ಲಿದ್ದಾರೆ, ದುರ್ಘಟನೆಗಳು ನಡೆದಾಗ ಸರ್ಕಾರ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು,ಆದರೆ ಈ ಸರ್ಕಾರ ಹಾಗೂ ಸಚಿವರದ್ದು ಉದ್ಧಟನದ ವರ್ತನೆ ಆಗಿಬಿಟ್ಟಿದೆ ಎಂದು ದೂರಿದರು.
ಮೈಸೂರು: ಮೈಸೂರು ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ವಿವಿಧಡೆ ಗಿಡಗಳನ್ನು ನೆಟ್ಟು ಅದರ ಭಾವಚಿತ್ರವನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರಿಗೆ ನೀಡಿ ಶುಭ ಕೋರಲಾಯಿತು
ವಿಜಯೇಂದ್ರ ಅವರ ಹುಟ್ಟು ಹಬ್ಬವನ್ನು ಅವರ ಸಂಕಲ್ಪದಂತೆಯೆ ಮೈಸೂರು ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ನಗರದ ವಿವಿಧಡೆ ಗಿಡಗಳನ್ನು ನೆಟ್ಟು ಆಚರಿಸಲಾಗಿತ್ತು.
ಅದರ ಭಾವಚಿತ್ರವನ್ನು ವಿಜಯೇಂದ್ರ ಅವರಿಗೆ ನೀಡಿ ಹುಟ್ಟು ಹಬ್ಬದ ಶುಭ ಕೋರಲಾಯಿತು.
ಈ ಸಂದರ್ಭದಲ್ಲಿ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷರಾದ ರೇಣುಕಾ ರಾಜ್, ಕಿರಗಾಸೂರು ಗ್ರಾಮ ಪಂಚಾಯತ್ ಸದಸ್ಯ ಮಹದೇವಸ್ವಾಮಿ, ಶಿವರಾಜ್ ಮತ್ತಿತರರು ಹಾಜರಿದ್ದರು.
ಶ್ರೀರಂಗಪಟ್ಟಣ: ರಾಜ್ಯ ಬಿಜೆಪಿ ರಾಜ್ಯಾಧ್ಯಕ್ಷರಾದ ವಿಜಯೇಂದ್ರ ಅವರ ಜನುಮದಿನವನ್ನು ಶ್ರೀರಂಗಪಟ್ಟಣದಲ್ಲಿ ವಿಶೇಷವಾಗಿ ಸಸಿ ನೆಡುವ ಮೂಲಕ ಆಚರಿಸಲಾಯಿತು.
ಈ ಬಾರು ವಿಜಯೇಂದ್ರ ಅವರ ಅಭಿಲಾಷೆ ಯಂತೆ ಅಭಿಮಾನಿಗಳು ಮತ್ತು ಬಿಜೆಪಿ ಕಾರ್ಯಕರ್ತರು ಪರಿಸರ ಸಂರಕ್ಷಣೆಯನ್ನು ಮಾಡಬೇಕೆಂಬ ಉದ್ದೇಶದಿಂದ ಸಾವಿರಾರು ಸಸಿಗಳನ್ನು ನೆಟ್ಟು ಪೋಷಿಸುವ ಮೂಲಕ ಹುಟ್ಟು ಹಬ್ಬದ ದಿನವನ್ನ ಆಚರಿಸಿದರು.
ಕಾರ್ಯಕ್ರಮದಲ್ಲಿ ನಗರ ಪಾಲಿಕೆ ಮಾಜಿ ಸದಸ್ಯ ಜೆ ಎಸ್ ಜಗದೀಶ್, ಬಿಜೆಪಿ ಮುಖಂಡರುಗಳಾದ ಅರ್ಜುನ್ ಪಾರ್ಥ, ಆಯಿರಳ್ಳಿ ವಿರೂಪಾಕ್ಷ, ಸತ್ಯಾನಂದ, ವಿಟ್ಟು, ಮಧು, ಕೆಂಚ, ಲೋಹಿತ್ ಶರ್ಮಾ, ವಿಜಯ್ ಕುಮಾರ್, ಶ್ರೀನಿವಾಸ್, ಪ್ರಸನ್ನ ಕುಮಾರ್, ಶ್ರೇಯಸ್, ಶಶಾಂಕ್ ಸೇರಿದಂತೆ ಅಭಿಮಾನಿಗಳು ಪಾಲ್ಗೊಂಡಿದ್ದರು.
ಮೈಸೂರು: ಮೈಸೂರಿನ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರು ಹಾಗೂ ಶಾಸಕರಾದ ಬಿ.ವೈ. ವಿಜಯೇಂದ್ರ ರವರ 49ನೇ ಹುಟ್ಟುಹಬ್ಬವನ್ನು ಸೇವಾ ಕಾರ್ಯಗಳ ಮೂಲಕ ಆಚರಣೆ ಮಾಡಲಾಯಿತು.
ಚಾಮುಂಡೇಶ್ವರಿ ಕ್ಷೇತ್ರದ ನಗರ ಮಂಡಲದ ಯುವ ಮೋರ್ಚಾ ವತಿಯಿಂದ ಬೋಗಾದಿಯ ಶ್ರೀದೇವಿ ನರ್ಸಿಂಗ್ ಹೋಮ್ ನಲ್ಲಿನ ಒಳರೋಗಿಗಳಿಗೆ ಹಣ್ಣು-ಹಂಪಲು ವಿತರಣೆ ಮಾಡಲಾಯಿತು.
ಮಹಿಳಾ ಮೋರ್ಚಾ ವತಿಯಿಂದ ರಾಮಕೃಷ್ಣ ನಗರದ ಉದ್ಯಾನವನದಲ್ಲಿ ಸ್ವಚ್ಛತಾ ಕಾರ್ಯ ನಡೆಸಿ ಗಿಡ ನೆಟ್ಟು ನೀರು ಹಾಕಲಾಯಿತು.
ಈ ವೇಳೆ ನಗರ ಪ್ರಧಾನ ಕಾರ್ಯದರ್ಶಿ ಬಿ. ಎಂ. ರಘು, ಚಾಮುಂಡೇಶ್ವರಿ ನಗರ ಮಂಡಲದ ಅಧ್ಯಕ್ಷ ರಾಕೇಶ್ ಭಟ್, ನಗರ ಯುವ ಮೋರ್ಚಾ ಅಧ್ಯಕ್ಷ ರಾಕೇಶ್ ಗೌಡ, ಪ್ರಧಾನ ಕಾರ್ಯದರ್ಶಿ ಲೋಹಿತ್, ಯುವ ಮೋರ್ಚಾ ಪ್ರಭಾರಿ ರುದ್ರಮೂರ್ತಿ, ಮಂಡಲ ಉಪಾಧ್ಯಕ್ಷೆ ಹೆಚ್.ಜಿ.ರಾಜಮಣಿ, ಎಸ್ ಸಿ ಮೋರ್ಚಾ ನಗರ ಉಪಾಧ್ಯಕ್ಷರಾದ ಎನ್. ಪ್ರತಾಪ್, ಯುವ ಮೋರ್ಚಾ ಅಧ್ಯಕ್ಷ ಮಧು ಸೋಮಶೇಖರ್, ಪ್ರಧಾನ ಕಾರ್ಯದರ್ಶಿಗಳಾದ ಚಂದನ್ ಗೌಡ ಮತ್ತು ಸಾಗರ್ ಸಿಂಗ್, ಉಪಾಧ್ಯಕ್ಷರುಗಳಾದ ರಾಘವೇಂದ್ರ ಸಿ, ಸೂರ್ಯಪ್ರಕಾಶ್ ಪಿ, ಮಧು ಸಿ ಎಸ್, ಶಿವು, ಮಹಿಳಾ ಮೋರ್ಚಾ ಅಧ್ಯಕ್ಷರಾದ ಲಕ್ಷ್ಮಿ ಜಯಶಂಕರ್, ಪ್ರದಾನ ಕಾರ್ಯದರ್ಶಿಗಳಾದ ಪುಟ್ಟಮ್ಮಣ್ಣಿ, ಮಂಜುಳಾ, ಉಪಾಧ್ಯಕ್ಷರಾದ ರಮಾಭಾಯಿ, ರಾಧಾ ಮುತಾಲಿಕ್, ಮುಖಂಡರಾದ ಶುಭಶ್ರೀ, ಬಸವಣ್ಣ, ಸ್ವಾಮಿಗೌಡ, ವಿನುತಾ, ತುಳಸಿ, ಗಿರೀಶ್ ಹಾಗೂ ಆಸ್ಪತ್ರೆ ಸಿಬ್ಬಂದಿ ನಾಗರಾಜ್ ಭಾಗವಹಿಸಿದ್ದರು.
ಮೈಸೂರು: ಮುಡಾ ಹಗರಣದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ,ರಾಜ್ಯಾಧ್ಯಕ್ಷರೇ ಭಾಗಿಯಾಗಿದ್ದಾರೆ ಎಂದು ಕರ್ನಾಟಕ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ರಾಜ್ಯಾಧ್ಯಕ್ಷ ಕೆ.ಎಸ್. ಶಿವರಾಮು ಆರೋಪಿಸಿದ್ದು,ದಾಖಲೆ ಬಿಡುಗಡೆ ಮಾಡಿದ್ದಾರೆ.
ಅಕ್ರಮವಾಗಿ ಹೆಚ್ಚುವರಿ ನಿವೇಶನ ಖರೀದಿ ಮಾಡಿ ಪತ್ನಿ ಹೆಸರಿಗೆ ರಿಜಿಸ್ಟರ್ ಮಾಡಿ 7 ಕೋಟಿ ರೂ. ಮೌಲ್ಯದ ಆಸ್ತಿಯನ್ನ ಕೇವಲ 5,36,200 ರೂ ಗಳಿಗೆ ಪಡೆದಿದ್ದಾರೆ ಎಂದು ಮಾಧ್ಯಮ ಗೋಷ್ಠಿಯಲ್ಲಿ ಶಿವರಾಮು ಆರೋಪಿಸಿದರು.
ಬಿಜೆಪಿ ಜಿಲ್ಲಧ್ಯಕ್ಷರಿಂದಲೇ ಮುಡಾಗೆ ಕೋಟ್ಯಾಂತರ ರೂಪಾಯಿ ನಷ್ಟ ಆಗಿದೆ,ಅದು ಯಾವ ನೈತಿಕತೆ ಇಟ್ಟುಕೊಂಡು ಪಾದಯಾತ್ರೆ ಮಾಡುವಿರಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರಗೆ ಶಿವರಾಮು ಪ್ರಶ್ನಿಸಿದರು.
ಈರನಗೆರೆಯಲ್ಲಿ ಸೈಯದ್ ಹಬೀಬ್ ಉರ್ ರೆಹಮನ್, ಸೈಯದ್ ನಸೃತ್, ಬಿಬಿ ಆಯೇಷ ಸೇರಿ 11 ಜನರ ಹೆಸರಿನಲ್ಲಿದ್ದ ಜಂಟಿ ಜಾಗ ಸರ್ವೆ ನಂ 85/2 ರಲ್ಲಿ 1 ಎಕರೆ 3 ಗುಂಟೆ ಜಾಗ ವಶಕ್ಕೆ ಪಡೆದಿತ್ತು. ಇದೇ ಜಾಗಕ್ಕೆ 7-7-2021ರಂದು ಬದಲಿ ನಿವೇಶನಕ್ಕಾಗಿ ಪ್ರಾಧಿಕಾರಕ್ಕೆ ಅರ್ಜಿ ಸಲ್ಲಿಸಲಾಗಿತ್ತು, ಅರ್ಜಿ ಸಲ್ಲಿಸಿದ ಬಳಿಕ 13-7-2021 ರಂದು 50:50 ಅನುಪಾತದಲ್ಲಿ 12057 ಅಡಿ ವಿಸ್ತೀರ್ಣದ ಜಾಗ ಮಂಜೂರಾತಿ ಪಡೆಯಲಾಗಿದೆ ಎಂದು ಶಿವರಾಮು ಹೇಳಿದರು.
೫೦ ವರ್ಷಗಳ ನಂತರ ಮುಡಾಗೆ ಮೂಲ ಮಾಲೀಕರ ಕಡೆಯಿಂದ ಬದಲಿ ನಿವೇಶನಕ್ಕೆ ಅರ್ಜಿ ಹಾಕಲಾಯಿತು, ಅಂದಿನ ಮುಡಾ ಆಯುಕ್ತ ನಟೇಶ್, ಇಂದಿನ ಬಿಜೆಪಿ ಜಿಲ್ಲಾಧ್ಯಕ್ಷ ಎಲ್.ಆರ್. ಮಹದೇವಸ್ವಾಮಿ ಸೇರಿಕೊಂಡು ಅಕ್ರಮ ಮಾಡಿದ್ದಾರೆ ಇವರು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಆಪ್ತ ವಲಯದವರು.ಮಹದೇವಸ್ವಾಮಿಯ ಪತ್ನಿ ಹೆಸರಲ್ಲಿ ಬಿ.ವೈ. ವಿಜಯೇಂದ್ರ ಬೇನಾಮಿ ಆಸ್ತಿ ಮಾಡಿದ್ದಾರೆ ಎಂದು ಗಂಭೀರ ಆರೋಪ ಮಾಡಿದರು.
ಸರಸ್ವತಿಪುರಂನಲ್ಲಿ 50×80 ಹೆಚ್ಚುವರಿ ನಿವೇಶನವನ್ನು ಕಾನೂನು ಬಾಹಿರವಾಗಿ ಮಂಜೂರು ಮಾಡಿಸಿಕೊಂಡ ಬಳಿಕ ಬಿಜೆಪಿ ಜಿಲ್ಲಾಧ್ಯಕ್ಷ ಎಲ್.ಆರ್. ಮಹದೇವಸ್ವಾಮಿ ಪತ್ನಿ ಸೌಮ್ಯ ಎಂ ಸ್ವಾಮಿ ಹೆಸರಲ್ಲಿ ಇದೇ ನಿವೇಶನ ಖರೀದಿ ಮಾಡಿ, ಸರಸ್ವತಿ ಪುರಂನಲ್ಲಿ ಭವ್ಯ ಬಂಗಲೆ ನಿರ್ಮಾಣ ಮಾಡುತ್ತಿದ್ದಾರೆ, ಕೂಡಲೇ ನಿವೇಶನವನ್ನ ತಡೆ ಹಿಡಿಯುವಂತೆ ಶಿವರಾಮು ಆಗ್ರಹಿಸಿದರು.
ಮುಡಾ ಭ್ರಷ್ಟಾಚಾರದ ಪಿತಾಮಹ ಬಿ.ವೈ. ವಿಜಯೇಂದ್ರ. 2021 ರಲ್ಲಿ ವಿಜಯೇಂದ್ರ ಪಟಾಲಮ್ ಭ್ರಷ್ಟಾಚಾರ ಮಾಡಿದ್ದಾರೆ ಎಂದು ಅವರು ದೂರಿದರು.