ಸಾಲುಮರದ ತಿಮ್ಮಕ್ಕ ವಿಧಿವಶ

ಬೆಂಗಳೂರು: ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಪದ್ಮಶ್ರೀ ಪುರಸ್ಕೃತರಾದ ಸಾಲುಮರದ ತಿಮ್ಮಕ್ಕ (114) ವಿಧಿವಶರಾಗಿದ್ದಾರೆ.

ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಅವರನ್ನು ಜಯನಗರ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಿಸದೆ ಶುಕ್ರವಾರ ಮಧ್ಯಾಹ್ನ 12 ವೇಳೆ ನಿಧನ ಹೊಂದಿದ್ದಾರೆ.

ತುಮಕೂರು ಜಿಲ್ಲೆಯ ಗುಬ್ಬಿ ತಾಲ್ಲೂಕಿನಲ್ಲಿ 1911ರ ಜೂನ್ 30ರಂದು ಜನಿಸಿದ್ದ ಸಾಲುಮರದ ತಿಮ್ಮಕ್ಕ, ಹುಲಿಕಲ್​​ ಗ್ರಾಮದ ಚಿಕ್ಕಯ್ಯರನ್ನು ವಿವಾಹವಾಗಿದ್ದರು.

ಆದರೆ ದಂಪತಿಗೆ ಮಕ್ಕಳಿರಲಿಲ್ಲ, ಮಕ್ಕಳಿಲ್ಲದ ದುಃಖವನ್ನು ಮರೆಯಲು ರಸ್ತೆ ಬದಿಯಲ್ಲಿ ಸಸಿಗಳನ್ನು ನೆಟ್ಟು ಅವುಗಳನ್ನೇ ಮಕ್ಕಳಂತೆ ಸಾಕಿ ಬೆಳೆಸಿ ಮರಗಳಾಗಿಸಿದರು,ಸಾಲು ಮರದ ತಿಮ್ಮಕ್ಕ ಎಂದೇ ಪ್ರಸಿದ್ಧರಾದರು.ಕೇಂದ್ರ ಸರ್ಕಾರ 2019ರಲ್ಲಿ ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಿತ್ತು.

ತಿಮ್ಮಕ್ಕ ಅನಕ್ಷರಸ್ಥರು,ಆದರೂ ಪರಿಸರ ಸಂರಕ್ಷಣೆಯಲ್ಲಿ ತಿಮ್ಮಕ್ಕ ಅವರ ಮಹತ್ತರ ಸಾಧನೆ ಮಾಡಿದ್ದಾರೆ.

ಹಾಗಾಗಿ ಹಲವಾರು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಸಂಸ್ಥೆಗಳು ಪ್ರಶಸ್ತಿ ನೀಡಿ ಗೌರವಿಸಿವೆ.

ರಾಜ್ಯೋತ್ಸವ ಪ್ರಶಸ್ತಿ, ಆರ್ಟ್ ಆಫ್ ಲಿವಿಂಗ್ ಸಂಸ್ಥೆಯಿಂದ ವಿಶಾಲಾಕ್ಷಿ ಪ್ರಶಸ್ತಿ, 2010ನೇ ಸಾಲಿನ ಪ್ರತಿಷ್ಠಿತ ನಾಡೋಜ ಪ್ರಶಸ್ತಿ ಸೇರಿ 2019ರಲ್ಲಿ ಪದ್ಮಶ್ರೀ ಪ್ರಶಸ್ತಿ ಪ್ರಶಸ್ತಿಗೂ ತಿಮ್ಮಕ್ಕ ಪಾತ್ರರಾಗಿದ್ದಾರೆ. 2020ರಲ್ಲಿ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯ ತಿಮ್ಮಕ್ಕನವರಿಗೆ ಗೌರವ ಡಾಕ್ಟರೇಟ್ ನೀಡಿ ಗೌರವಿಸಿದೆ.

ಮುಖ್ಯ ಮಂತ್ರಿ ಸಿದ್ದರಾಮಯ್ಯ,ಉಪ ಮುಖ್ಯ ಮಂತ್ರಿ ಡಿ.ಕೆ.ಶಿವಕುಮಾರ್,
ವಿಪಕ್ಷ ನಾಯಕ ಆರ್​. ಅಶೋಕ್​ ಸೇರಿದಂತೆ ರಾಜಕೀಯ ನಾಯಕರು ಸಾಲುಮರದ ತಿಮ್ಮಕ್ಕ ನಿಧನಕ್ಕೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಸಾಲುಮರದ ತಿಮ್ಮಕ್ಕ ವಿಧಿವಶ Read More

ಹಾಲು ಒಕ್ಕೂಟಗಳ ದರ ಏರಿಕೆ ಬೇಡಿಕೆಗೆ ಮಣಿಯದ ಸಿಎಂ:ಸಂಪುಟ‌ ಸಭೆಯಲ್ಲಿ ಚರ್ಚಿಸಿ ನಿರ್ಧಾರ

ಬೆಂಗಳೂರು: ಹಾಲು ಒಕ್ಕೂಟಗಳು ಇರುವುದು ರೈತರಿಗೆ ಅನುಕೂಲ ಮಾಡುವುದಕ್ಕೆ ಮಾತ್ರ, ಲಾಭ ಮಾಡುವುದಕ್ಕಲ್ಲ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ಖಡಕ್ ಆಗಿ ಹೇಳಿದ್ದಾರೆ.

ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಮಹಾಮಂಡಳದ ಅಧ್ಯಕ್ಷರು, ಜಿಲ್ಲಾ ಹಾಲು ಒಕ್ಕೂಟದ ಅಧ್ಯಕ್ಷರು ಹಾಗೂ ವ್ಯವಸ್ಥಾಪಕ ನಿರ್ದೇಶಕರೊಂದಿಗೆ ಕಾವೇರಿಯಲ್ಲಿ ನಡೆಸಿದ ಸಭೆಯ ನಂತರ ಸಿಎಂ ಮಾತನಾಡಿದರು.

ಒಕ್ಕೂಟಗಳ ದರ ಏರಿಕೆ ಬೇಡಿಕೆಗಳನ್ನು ಆಲಿಸಿದರೂ ಮಣಿಯದೆ ಈ ವಿಚಾರವನ್ನು ಸಚಿವ ಸಂಪುಟದಲ್ಲಿ ಚರ್ಚಿಸಿ ನಂತರ ನಿರ್ಧರಿಸಲಾಗುವುದು ಎಂದು ತಿಳಿಸಿದರು.

ಹಾಲಿನ ದರ ಹೆಚ್ಚಳ ಕುರಿತು ಒಕ್ಕೂಟಗಳ ಅಭಿಪ್ರಾಯ ಸಂಗ್ರಹ ಮಾಡಲಾಗಿದೆ, ಹಾಲಿನದರ ಹೆಚ್ಚಳ ಮಾಡಿದರೆ ಮೊತ್ತವನ್ನು ಸಂಪೂರ್ಣವಾಗಿ ರೈತರಿಗೆ ವರ್ಗಾವಣೆಯಾಗಬೇಕು ಎಂಬುವುದು ಸರ್ಕಾರದ ದೃಢ ನಿಲುವು ಮುಖ್ಯಮಂತ್ರಿಗಳು ಸ್ಪಷ್ಟಪಡಿಸಿದರು.

ಹಾಲು ಒಕ್ಕೂಟಗಳು ಖರ್ಚು ವೆಚ್ಚ ಕಡಿಮೆ ಮಾಡಬೇಕು, ಪಾರದರ್ಶಕತೆಯನ್ನು ಪಾಲಿಸಬೇಕು, ಒಕ್ಕೂಟಗಳು ಅಗತ್ಯಕ್ಕಿಂತ ಹೆಚ್ಚು ಜನರನ್ನು ಗುತ್ತಿಗೆ ಆಧಾರದಲ್ಲಿ ನೇಮಕ ಮಾಡಬಾರದು,ಇದರಿಂದಾಗಿಯೇ ವೆಚ್ಚ ಹೆಚ್ಚಾಗುತ್ತಿದೆ. ಅನಗತ್ಯ ಆಡಳಿತಾತ್ಮಕ ವೆಚ್ಚಗಳಿಂದಾಗಿಯೇ ಕೆಲವು ಒಕ್ಕೂಟಗಳು ನಷ್ಟ ಅನುಭವಿಸುವಂತಾಗಿದೆ ಎಂದು ಸಿಎಂ ಕಡಕ್ ಆಗಿ ನುಡಿದರು.

ಹಾಲು ಒಕ್ಕೂಟಗಳ ದರ ಏರಿಕೆ ಬೇಡಿಕೆಗೆ ಮಣಿಯದ ಸಿಎಂ:ಸಂಪುಟ‌ ಸಭೆಯಲ್ಲಿ ಚರ್ಚಿಸಿ ನಿರ್ಧಾರ Read More