ಒಕ್ಕಲಿಗ ಸಮುದಾಯಕ್ಕೆ ಅನ್ಯಾಯವಾದಾಗ ಪ್ರತಿಯೊಬ್ಬರೂ ಧ್ವನಿ ಎತ್ತಬೇಕು: ಅಶೋಕ

ಬೆಂಗಳೂರು: ಒಕ್ಕಲಿಗ ಸಮುದಾಯಕ್ಕೆ ಅನ್ಯಾಯವಾದಾಗ ಪ್ರತಿಯೊಬ್ಬರೂ ಅದರ ವಿರುದ್ಧ ಧ್ವನಿ ಎತ್ತಬೇಕು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಕರೆ ನೀಡಿದರು.

ರಾಜ್ಯ ಒಕ್ಕಲಿಗರ ಜಾಗೃತಿ ಸಂಘದಿಂದ ಕುವೆಂಪು ಕಲಾಕ್ಷೇತ್ರದಲ್ಲಿ ನಡೆದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು,ನಮ್ಮ ಸಮುದಾಯಕ್ಕೆ ಅನ್ಯಾಯವಾದಾಗ ಪ್ರತಿಯೊಬ್ಬರೂ ಧ್ವನಿ ಎತ್ತಬೇಕು,ಆಗ ಮಾತ್ರ ಸಮುದಾಯಕ್ಕೆ ನ್ಯಾಯ ದೊರೆಯುತ್ತದೆ ಎಂದು ಹೇಳಿದರು.

ನಾಡಪ್ರಭು ಕೆಂಪೇಗೌಡರು ಯಾರ ಮೇಲೂ ದಂಡೆತ್ತಿ ಹೋಗಿ ಸಾಮ್ರಾಜ್ಯ ಸ್ಥಾಪಿಸಲಿಲ್ಲ. ಅವರು ಎಲ್ಲರನ್ನೂ ಸಮಾನತೆಯಿಂದ ಕಂಡು ಬೆಂಗಳೂರನ್ನು ಕಟ್ಟಿದ್ದರು. ಮಾಜಿ ಸಿಎಂ ಎಸ್‌.ಎಂ.ಕೃಷ್ಣ, ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರು ರಾಜ್ಯದ ಅಭಿವೃದ್ಧಿಗೆ ಸಾಕಷ್ಟು ಕೆಲಸ ಮಾಡಿದ್ದಾರೆ. ಸಮುದಾಯದಲ್ಲಿ ಇನ್ನಷ್ಟು ಯುವಜನರನ್ನು ಬೆಳೆಸಿದರೆ ಈ ರೀತಿ ಮಹಾನ್‌ ವ್ಯಕ್ತಿಗಳಾಗುತ್ತಾರೆ. ಬೇರೆ ಸಮುದಾಯಕ್ಕೆ ಅನ್ಯಾಯ ಮಾಡದೆ ನಮ್ಮ ಸಮುದಾಯಕ್ಕಾಗಿ ಹೋರಾಟ ಮಾಡಬೇಕು ಎಂದು ಸಲಹೆ ನೀಡಿದರು.

ನಾಡಪ್ರಭು ಕೆಂಪೇಗೌಡರ ಜಯಂತಿಯನ್ನು ಪ್ರತಿ ವರ್ಷ ಆಚರಣೆ ಮಾಡಿದರೆ ಸಾಲುವುದಿಲ್ಲ, ಒಕ್ಕಲಿಗ ಸಮುದಾಯದವರು ಕೃಷಿ ಮಾಡುವವರು. ಇಂತಹ ಸಮುದಾಯದವರ ಹಕ್ಕುಗಳಿಗಾಗಿ ಎಲ್ಲರೂ ಒಗ್ಗೂಡಬೇಕು. ಈ ಹಿಂದೆ ಒಂದು ಬಾರಿ ಹಕ್ಕುಗಳಿಗಾಗಿ ಹೋರಾಡಿದ್ದನ್ನು ನೋಡಿದ್ದೇನೆ. ಮತ್ತೆ ಎಂದೂ ಹೋರಾಟ ಮಾಡಿದ್ದನ್ನು ಕಂಡಿಲ್ಲ ಎಂದು ಅಶೋಕ್ ತಿಳಿಸಿದರು.

ಶ್ರೀ ಬಾಲಗಂಗಾಧನರನಾಥ ಸ್ವಾಮೀಜಿಯವರ ಪ್ರೇರಣೆಯಿಂದಾಗಿ 70 ವರ್ಷದ ಬಳಿಕ ವಿಧಾನಸೌಧ ಮುಂಭಾಗ ಕೆಂಪೇಗೌಡರ ಪ್ರತಿಮೆ ಸ್ಥಾಪಿಸಲು ಸಾಧ್ಯವಾಯಿತು. ಅಂದರೆ ಕೆಂಪೇಗೌಡರಿಗೆ ಆ ಗೌರವ ನೀಡಲು ಅಷ್ಟು ವರ್ಷ ಬೇಕಾಯಿತು. ನಾನು ಕಂದಾಯ ಸಚಿವನಾಗಿದ್ದಾಗ ಒಂದೇ ತಿಂಗಳಲ್ಲಿ ನಿರ್ಣಯ ತೆಗೆದುಕೊಂಡು ಬಸವಣ್ಣ ಹಾಗೂ ಕೆಂಪೇಗೌಡರ ಪ್ರತಿಮೆ ಸ್ಥಾಪಿಸಲಾಯಿತು. ಅದೇ ರೀತಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಬಳಿ ಪ್ರತಿಮೆ ಸ್ಥಾಪಿಸಲಾಯಿತು ಎಂದು ಅಶೋಕ್‌ ಹೇಳಿದರು.

ಒಕ್ಕಲಿಗ ಸಮುದಾಯಕ್ಕೆ ಅನ್ಯಾಯವಾದಾಗ ಪ್ರತಿಯೊಬ್ಬರೂ ಧ್ವನಿ ಎತ್ತಬೇಕು: ಅಶೋಕ Read More

ಕಂಟೈನರ್ ಅಪಹರಿಸಿ 3 ಕೋಟಿ ಮೊಬೈಲ್ ದೋಚಿದ ಭೂಪ!

ಬೆಂಗಳೂರು: ದೆಹಲಿಯಿಂದ ಬೆಂಗಳೂರಿಗೆ ಸಾಗಿಸುತ್ತಿದ್ದ ಸಾವಿರಾರು ಮೊಬೈಲ್ ಗಳನ್ನು ತುಂಬಿದ್ದ ಕಂಟೈನರ್‌ ಒಂದನ್ನ ಅಪಹರಿಸಿ ಮೊಬೈಲ್ ದೋಚಿರುವ ಘಟನೆ ನಡೆದಿದೆ.

ಶಿಯೋಮಿ ಕಂಪನಿಗೆ ಸೇರಿದ 3 ಕೋಟಿ ಮೌಲ್ಯದ ಮೊಬೈಲ್ ಕಳವು ಮಾಡಲಾಗಿದೆ.

ದೆಹಲಿಯಿಂದ ಬೆಂಗಳೂರಿಗೆ ಹೊರಟಿದ್ದ ಕಂಟೈನರ್ ಬೆಂಗಳೂರನ್ನು ತಲುಪೆ ಇರಲಿಲ್ಲ. ಕಳೆದ ನ. 22ರಂದು ಈ ಘಟನೆ ನಡೆದಿದೆ. ಕಂಟೈನರ್ ಸರಿಯಾದ ಸಮಯಕ್ಕೆ ಬೆಂಗಳೂರು ತಲುಪದ ಕಾರಣ ಅನುಮಾನಗೊಂಡ ಕಂಪನಿಯವರು ಗಾಡಿಯ ಜಿಪಿಎಸ್‌ ಪರಿಶೀಲಿಸಿದ್ದಾರೆ.ಆಗ ಚಿಕ್ಕಬಳ್ಳಾಪುರ ತಾಲೂಕಿನ ರೆಡ್ಡಿಗೊಲ್ಲರಹಳ್ಳಿ ಬಳಿ ಕಂಟೈನರ್ ನಿಂತಿರುವುದು ಗೊತ್ತಾಗಿದೆ.

ಹೀಗಾಗಿ ಗಾಡಿಯ ಲೊಕೇಶನ್ ಮಾಹಿತಿಯನ್ನು ಪೆರೇಸಂದ್ರೆ ಠಾಣೆ ಪೊಲೀಸರಿಗೆ ಕಂಪನಿಯವರು ನೀಡಿದ್ದು, ಪೊಲೀಸರು ಸ್ಥಳಕ್ಕೆ ಬಂದು ಪರಿಶೀಲಿಸಿದಾಗ ಖಾಲಿ ಕಂಟೈನ‌ರ್ ಅಲ್ಲಿ ನಿಲ್ಲಿಸಿ ಚಾಲಕ ನಾಪತ್ತೆಯಾಗಿರುವುದು ಗೊತಗತಾಗಿದೆ.

ಕಂಟೈನರ್ ನ ಚಾಲಕ ರಾಹುಲ್ ಕೋಟ್ಯಂತರ ರೂಪಾಯಿಗಳ ಮೊಬೈಲ್ ದೋಚಿ ಪರಾರಿಯಾಗಿದ್ದು,ಆತನ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.

ಕಂಟೈನರ್ ಅಪಹರಿಸಿ 3 ಕೋಟಿ ಮೊಬೈಲ್ ದೋಚಿದ ಭೂಪ! Read More

ಮೈಸೂರು ದಸರಾ: ಸಿಎಂಗೆ ಅಧಿಕೃತ ಆಹ್ವಾನ

ಮೈಸೂರು: ಮೈಸೂರು ದಸರಾ ಮಹೋತ್ಸವಕ್ಕೆ ಆಗಮಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಅಧಿಕೃತ ಆಹ್ವಾನ ನೀಡಲಾಯಿತು.

ಜಿಲ್ಲಾ ಉಸ್ತುವಾರಿ ಸಚಿವ ಡಾ. ಹೆಚ್.ಸಿ.ಮಹದೇವಪ್ಪ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ಮುಖ್ಯ ಮಂತ್ರಿಗಳಿಗೆ ಆಮಂತ್ರಣ ಕೋರಲಾಯಿತು.

ಈ‌ ವೇಳೆ ಕೆ.ಆರ್. ನಗರ ಶಾಸಕ ಡಿ.ರವಿಶಂಕರ್, ಎಚ್‍.ಡಿ ಕೋಟೆ ಶಾಸಕ ಅನಿಲ್ ಕುಮಾರ್, ವಿಧಾನ ಪರಿಷತ್ ಸದಸ್ಯರಾದ ಡಾ ಯತೀಂದ್ರ, ಸಿ.ಎನ್.ಮಂಜೇಗೌಡ, ಡಾ ತಿಮ್ಮಯ್ಯ, ಜಿಲ್ಲಾಧಿಕಾರಿ ಜಿ. ಲಕ್ಷ್ಮೀ ಕಾಂತ ರೆಡ್ಡಿ ಹಾಗೂ ಸ್ವಾಗತ ಸಮಿತಿಯ ಅಧಿಕಾರಿಗಳು ಮತ್ತಿತರರೊಂದಿಗೆ ಮುಖ್ಯಮಂತ್ರಿಯವರ ಗೃಹ ಕಚೇರಿ ಕೃಷ್ಣಾಕ್ಕೆ ತೆರಳಿ ದಸರಾ ಕಾರ್ಯಕ್ರಮಗಳಲ್ಲಿ ಭಾಗಿಯಾಗುವಂತೆ‌ ಸಚಿವ ಮಹದೇವಪ್ಪ ಆಮಂತ್ರಣ ಪತ್ರ ನೀಡಿ ಆಹ್ವಾನಿಸಿದರು.

ಮೈಸೂರು ದಸರಾ: ಸಿಎಂಗೆ ಅಧಿಕೃತ ಆಹ್ವಾನ Read More

ಸಿದ್ದರಾಮಯ್ಯ ರಾಜೀನಾಮೆ ನೀಡಿ ರಾಜ್ಯಕ್ಕೆ ಮಾದರಿಯಾಗಲಿ: ಅಶೋಕ್

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡಲೇ ರಾಜೀನಾಮೆ ನೀಡಿ ರಾಜ್ಯಕ್ಕೆ ಮಾದರಿಯಾಗಲಿ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಹೇಳಿದ್ದಾರೆ.

ತಾವು ಸಜ್ಜನ ಎಂದು ಸಿದ್ದರಸಮಯ್ಯ ಯಾವಾಗಲೂ ಹೇಳಿಕೊಳ್ಳುತ್ತಾರೆ, ಸಜ್ಜನನಾಗುವ ಅವಕಾಶ ಎಂದರೆ ಅದು ರಾಜೀನಾಮೆ ನೀಡುವುದು ಎಂದು ಅಶೋಕ್ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೈಕೋರ್ಟ್‌ ಆದೇಶ ಬಂದಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕಿತ್ತು. ಅಥವಾ ಜನಪ್ರತಿನಿಧಿಗಳ ನ್ಯಾಯಾಲಯ ಆದೇಶ ನೀಡಿದ ಕೂಡಲೇ ರಾಜೀನಾಮೆ ಕೊಡಬೇಕಿತ್ತು,ಆದರೆ ಹಾಗೆ ಮಾಡಲಿಲ್ಲ ಎಂದು ಹೇಳಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ತನಿಖೆಗೆ ಆದೇಶಿಸಿದ ರಾಜ್ಯಪಾಲರ ಕ್ರಮವನ್ನು ಹೈಕೋರ್ಟ್‌ ಎತ್ತಿ ಹಿಡಿದಿರುವುದರ ಜೊತೆಗೆ, ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಕೂಡಾ ಲೋಕಾಯುಕ್ತ ತನಿಖೆಗೆ ಆದೇಶಿಸಿದೆ.

ಬಿಜೆಪಿಯಿಂದ ಸದನದಲ್ಲಿ ಈ ಕುರಿತು ಹೋರಾಟ ಮಾಡಿದಾಗ, ಇದು ಬಿಜೆಪಿ ಪ್ರೇರಿತ, ಇದು ಷಡ್ಯಂತ್ರ ಎಂದು ಸಚಿವರು ಆರೋಪ ಮಾಡಿದ್ದರು. ರಾಜಭವನಕ್ಕೆ ಮುತ್ತಿಗೆ ಹಾಕಿದ ಶಾಸಕರು, ಬಾಂಗ್ಲಾ ಮಾದರಿ ಹೋರಾಟ ಮಾಡುತ್ತೇವೆಂದು ಬೆದರಿಕೆ ಹಾಕಿದ್ದರು. ಈಗ ಇದು ತನಿಖೆಗೆ ಸೂಕ್ತ ಎಂದು ನ್ಯಾಯಾಂಗದಿಂದಲೇ ತಿಳಿದುಬಂದಿದೆ.

ಈಗ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಬೇರೆ ದಾರಿಯಿಲ್ಲ. ಅವರು ಯಾವುದಕ್ಕೆ ಕಾಯುತ್ತಿದ್ದಾರೊ ತಿಳಿಯುತ್ತಿಲ್ಲ. ಬಿಜೆಪಿಯವರು ಪ್ರಕರಣ ದಾಖಲಿಸಿಲ್ಲ. ದೂರು ದಾಖಲಿಸಿದ್ದು ಆರ್‌ಟಿಐ ಕಾರ್ಯಕರ್ತರು ಹಾಗೂ ಹೋರಾಟಗಾರರು. ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆ ಎಂದು ಆಪಾದನೆ ಮಾಡಿದ್ದರು. ಈಗ ನ್ಯಾಯಾಲಯಕ್ಕೆ ಯಾವ ರೀತಿಯ ಆಪಾದನೆ ಮಾಡುತ್ತಾರೆ ಎಂದು ಅಶೋಕ್ ಪ್ರಶ್ನಿಸಿದರು.

ವಾಲ್ಮೀಕಿ ಅಭಿವೃದ್ಧಿ ನಿಗಮ ಮತ್ತು ಮುಡಾ ಹಗರಣವನ್ನು ಸಿಬಿಐ ತನಿಖೆಗೆ ವಹಿಸಲು ಒತ್ತಾಯಿಸಿದ್ದೇವೆ. ಪಕ್ಷದ ಎಲ್ಲ ಮುಖಂಡರು ಸೇರಿ ಗುರುವಾರ ವಿಧಾನಸೌಧದ ಗಾಂಧಿ ಪ್ರತಿಮೆ ಮುಂಭಾಗ ಪ್ರತಿಭಟನೆ ನಡೆಸುತ್ತೇವೆ ಎಂದು ಅಶೋಕ್ ಇದೇ‌ ವೇಳೆ ತಿಳಿಸಿದರು.

ಸಿದ್ದರಾಮಯ್ಯ ರಾಜೀನಾಮೆ ನೀಡಿ ರಾಜ್ಯಕ್ಕೆ ಮಾದರಿಯಾಗಲಿ: ಅಶೋಕ್ Read More

ನಾಗಮಂಗಲ ಕೋಮುಗಲಭೆ ವೇಳೆ ಪಾಕ್ ಪರ ಘೋಷಣೆ:ಅಶೋಕ್ ಕಿಡಿ

ನಾಗಮಂಗಲ:‌ ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದ ಕೋಮು
ಗಲಭೆಯಲ್ಲಿ ಮೂವರು ಕಿಡಿಗೇಡಿಗಳು ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳೆ ಹೇಳಿದ್ದಾರೆ‌ ಎಂಬುದಾಗಿ ಪ್ರತಿಪಕ್ಷ ನಾಯಕ ಆರ್.ಅಶೋಕ್ ಕಿಡಿಕಾರಿದ್ದಾರೆ.

ಇದು ಅಂದಿನ ಘಟನೆಯಲ್ಲಿ ನಿಷೇಧಿತ ಸಂಘಟನೆಗಳ ಕೈವಾಡವಿರುವುದಕ್ಕೆ ಮತ್ತಷ್ಟು ಪುಷ್ಟಿ ನೀಡಿದೆ ಎಂದು ಟ್ವೀಟ್ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ನಡುವೆ ಚಿಕ್ಕಮಗಳೂರಲ್ಲಿ ಬೈಕ್ ನಲ್ಲಿ ಪ್ಯಾಲೆಸ್ತೀನ್ ಧ್ವಜ ಹಿಡಿದಿರುವ ಪುಂಡಾಟ, ದಾವಣಗೆರೆಯ ಗಾಂಧಿನಗರ ಹಾಗೂ ಅಹ್ಮದ್ ನಗರಗಳಲ್ಲಿ ಹಿಂದೂ ಯುವಕರು ಬಾವುಟ ಕಟ್ಟಿದ್ದಕ್ಕೆ ಮತಾಂಧ ಪುಂಡರು ಅವರ ಮೇಲೆ ಹಲ್ಲೆ ಮಾಡಿರುವುದು, ಇದನ್ನೆಲ್ಲಾ ಗಮನಿಸಿದರೆ ಈ ಘಟನೆಗಳು ಗಣೇಶೋತ್ಸವವನ್ನೇ ಟಾರ್ಗೆಟ್ ಮಾಡಿರುವಂತಿದೆ ಎಂದು ಹೇಳಿದ್ದಾರೆ.

ಇಂತಹ ಘಟನೆಗಳು ಅಯೋಧ್ಯ ರಾಮ ಮಂದಿರದ ಉದ್ಘಾಟನೆ ಸಂದರ್ಭದಲ್ಲಿಯೂ ನಡೆದಿತ್ತು. ಹಿಂದೂಗಳ ಹಬ್ಬಗಳು, ಉತ್ಸವಗಳು, ಸಂಭ್ರಮಾಚರಣೆಗಳನ್ನೇ ಗುರಿಯಾಗಿಸಿ ರಾಜ್ಯಾದ್ಯಂತ ನಡೆಸುತ್ತಿರುವ ಇಂತಹ ದುಷ್ಕೃತ್ಯಗಳ ಹಿಂದೆ ಮತೀಯ ಮೂಲಭೂತವಾದಿ ಸಂಘಟನೆಗಳ ದೊಡ್ಡ ಜಾಲವೇ ಇರುವಂತಿದೆ ಎಂದು ಅನುಮಾನ ವ್ಯಕ್ತಪಡಿಸಿದ್ದಾರೆ.

ಅಂತಾರಾಜ್ಯ, ಅಂತರಾಷ್ಟ್ರೀಯ ನಂಟು ಹೊಂದಿರುವ ಇಂತಹ ವ್ಯವಸ್ಥಿತ, ಪ್ರಾಯೋಜಿತ, ಜಾಲವನ್ನ ಬೇಧಿಸುವುದು ಸ್ಥಳೀಯ ಪೊಲೀಸರಿಂದ ಅಸಾಧ್ಯವಾಗಿದ್ದು, ಕೂಡಲೇ ಈ ಪ್ರಕರಣಗಳನ್ನ ಎನ್ಐಎ ತನಿಖೆಗೆ ಒಪ್ಪಿಸಬೇಕು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನ ಅಶೋಕ್ ಒತ್ತಾಯಿಸಿದ್ದಾರೆ.

ನಾಗಮಂಗಲ ಕೋಮುಗಲಭೆ ವೇಳೆ ಪಾಕ್ ಪರ ಘೋಷಣೆ:ಅಶೋಕ್ ಕಿಡಿ Read More

ಪರಪ್ಪನ ಅಗ್ರಹಾರ ಜೈಲಿನ ಮೇಲೆ ಪೊಲೀಸರ ದಿಢೀರ್ ದಾಳಿ

ಬೆಂಗಳೂರು: ದರ್ಶನ್ ಗೆ ರಾಜಾತಿಥ್ಯ ನೀಡಿದ್ದಕ್ಕೆ ಸಂಬಂಧಿಸಿದಂತೆ ಪರಪ್ಪನ ಅಗ್ರಹಾರ ಜೈಲಿನ ಮೇಲೆ ಪೊಲೀಸರು ದಿಢೀರ್ ದಾಳಿ ನಡೆಸಿ ಮೊಬೈಲ್, ಮಾದಕ ವಸ್ತು,ಹಣ ಮತ್ತಿತರ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ.

ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾಜಾತಿಥ್ಯ ಪಡೆದಿದ್ದ ದರ್ಶನ್ ಹಾಗೂ ವಿಲ್ಸನ್‌ಗಾರ್ಡನ್ ನಾಗನ ಫೋಟೋ ವೈರಲ್ ಆದ ಬೆನ್ನಲ್ಲೇ ಪರಪ್ಪನ ಅಗ್ರಹಾರ ಜೈಲಿನ ಮೇಲೆ ಪೊಲೀಸರು ಹದ್ದಿನ ಕಣ್ಣಿದ್ದರು, ಇದೀಗ ದಿಢೀರ್ ದಾಳಿ ನಡೆಸಿದ್ದಾರೆ.

ಪರಪ್ಪನ ಅಗ್ರಹಾರ ಜೈಲಿನ ಮೇಲೆ ಆಗ್ನೇಯ ಪೊಲೀಸರು ದಾಳಿ ನಡೆದಿದ್ದು, ರಾತ್ರಿ ಏಕಾಏಕಿ ಡಿಸಿಪಿ ಸರಾ ಫಾತಿಮಾ ನೇತೃತ್ವದಲ್ಲಿ 50ಕ್ಕೂ ಹೆಚ್ಚು ಪೊಲೀಸರು ದಾಳಿ ನಡೆಸಿದ್ದಾರೆ.

ಕುಖ್ಯಾತ ರೌಡಿ ವಿಲ್ಸನ್‌ಗಾರ್ಡನ್ ನಾಗನ ಬ್ಯಾರಕ್ ಅಕ್ಕಪಕ್ಕದಲ್ಲಿ ಮೊಬೈಲ್‌ಗಳು ಪತ್ತೆಯಾಗಿದ್ದು, ನಾಗನ‌ ಫೋನ್ ಸೇರಿ ಸುಮಾರು 18 ಆಂಡ್ರಾಯ್ಡ್ ಫೋನ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ.

ಅಲ್ಲದೆ ಮಾದಕ ವಸ್ತು ಹಾಗೂ ಹಣವನ್ನು ವಶಕ್ಕೆ ಪಡೆದಿದ್ದಾರೆ.

ಪರಪ್ಪನ ಅಗ್ರಹಾರ ಜೈಲಿನ ಮೇಲೆ ಪೊಲೀಸರ ದಿಢೀರ್ ದಾಳಿ Read More

ಮುನಿರತ್ನ ಎರಡು ದಿನ ಪೊಲೀಸ್ ಕಸ್ಟಡಿಗೆ

ಬೆಂಗಳೂರು: ಗುತ್ತಿಗೆದಾರನಿಗೆ ಜೀವ ಬೆದರಿಕೆ, ಜಾತಿ ನಿಂದನೆ ಆರೋಪದಡಿ ಬಂಧನಕ್ಕೆ ಒಳಗಾಗಿರುವ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಎರಡು ದಿನಗಳ ಕಾಲ ಪೊಲೀಸ್‌ ಕಸ್ಟಡಿಗೆ ಒಪ್ಪಿಸಲಾಗಿದೆ.

82ನೇ ಜನಪ್ರತಿನಿಧಿಗಳ ನ್ಯಾಯಾಲಯ ನ್ಯಾಯಾಧೀಶರು ಮುನಿರತ್ನ ಅವರನ್ನು ಎರಡು ದಿನಗಳ ಕಾಲ ಪೊಲೀಸ್‌ ಕಸ್ಟಡಿಗೆ ಒಪ್ಪಿಸಿ ಆದೇಶಿಸಿದ್ದಾರೆ.

ಆಂಧ್ರಪ್ರದೇಶಕ್ಕೆ ತೆರಳುತ್ತಿದ್ದಾಗ ಕೋಲಾರದ ಮುಳಬಾಗಿಲು ತಾಲೂಕಿನ ನಂಗಲಿ ಬಳಿ ಶನಿವಾರ ಸಂಜೆ ಶಾಸಕರನ್ನು ಬೆಂಗಳೂರು ಪೊಲೀಸರು ಬಂಧಿಸಿ ಬೆಂಗಳೂರಿಗೆ ಕರೆತಂದಿದ್ದರು.

ಅಶೋಕ ನಗರ ಠಾಣೆಗೆ ಕರೆತಂದಿದ್ದ ಇಲ್ಲಿನ ಪೊಲೀಸರು ಬಳಿಕ ಯಲಹಂಕದ ಕೋಗಿಲೆ ಕ್ರಾಸ್ ಬಳಿ ಇರುವ ನ್ಯಾಯಾಧೀಶರ ನಿವಾಸಕ್ಕೆ ಕರೆತಂದರು. ಎಸಿಪಿ ಪ್ರಕಾಶ್ ನೇತೃತ್ವದ ತಂಡ ಶಾಸಕರನ್ನು ನ್ಯಾಯಾಧೀಶರ ಎದುರು ಹಾಜರುಪಡಿಸಿತ್ತು.

ಈ ವೇಳೆ ಪೊಲೀಸರು ಒಂದು ವಾರ ಪೊಲೀಸ್‌ ಕಸ್ಟಡಿಗೆ ನೀಡುವಂತೆ ಮನವಿ ಮಾಡಿದರು. ಆದರೆ ವಿಚಾರಣೆ ನಡೆಸಿದ ಬಳಿಕ, 2 ದಿನಗಳ ಕಾಲ ಪೊಲೀಸ್‌ ಕಸ್ಟಡಿಗೆ ನೀಡಿ ನ್ಯಾಯಾಧೀಶರು ಆದೇಶಿಸಿದರು.

ಮುನಿರತ್ನ ಎರಡು ದಿನ ಪೊಲೀಸ್ ಕಸ್ಟಡಿಗೆ Read More

ವಿಚ್ಚಿದ್ರಕಾರಕ ಶಕ್ತಿಗಳನ್ನು ನಾಶ ಮಾಡಲು ಪ್ರಜಾಪ್ರಭುತ್ವವಾದಿಗಳು ಎದ್ದುನಿಲ್ಲಿ: ಸಿಎಂ

ಬೆಂಗಳೂರು: ಏಕತೆ ನೆಪದಲ್ಲಿ ಸಮಾಜವನ್ನು ಒಡೆಯುವ, ಮನುಷ್ಯರನ್ನು ವಿಭಜಿಸುವ ವಿಚ್ಚಿದ್ರಕಾರಕ ದುಷ್ಟ ಶಕ್ತಿಗಳನ್ನು ನಾಶ ಮಾಡಲು ಪ್ರಜಾಪ್ರಭುತ್ವವಾದಿಗಳು ಎದ್ದುನಿಲ್ಲಿ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಅಂಗವಾಗಿ ಚಾರಿತ್ರಿಕ ಮಾನವ ಸರಪಳಿ ಚಳವಳಿಗೆ ವಿಧಾನಸೌಧದ ಗ್ರಾಂಡ್ ಸ್ಟೆಪ್ಸ್ ನಲ್ಲಿ ಚಾಲನೆ ನೀಡಿ ಸಿಎಂ ಮಾತನಾಡಿದರು.

ನಮ್ಮ ಸಂವಿಧಾನ ಎತ್ತಿ ಹಿಡಿದಿರುವ ಬಹುತ್ವವನ್ನು ನಾವು ಬದುಕಿನಲ್ಲಿ ಆಚರಿಸೋಣ ಆ ಮೂಲಕ ಸಮಾಜ ಒಡೆಯುವ ದುಷ್ಟರ ಷಡ್ಯಂತ್ರ ಸೋಲಿಸೋಣ ಪ್ರಜಾಪ್ರಭುತ್ವ ಗಟ್ಟಿಗೊಳಿಸೋಣ ಎಂದು ಹೇಳಿದರು.

ನಮ್ಮ ಬುದ್ದ, ಬಸವಣ್ಣನ ಕಾಲದಲ್ಲೇ ನಮ್ಮಲ್ಲಿ ಪ್ರಜಾಪ್ರಭುತ್ವ, ಸಂಸದೀಯ ವ್ಯವಸ್ಥೆ ಇತ್ತು. ಅನುಭವ ಮಂಟಪ ಮೊದಲ ಪ್ರಜಾಪ್ರಭುತ್ವದ ಸಾಂಸ್ಥಿಕ ಸಂಕೇತ ಎಂದು ತಿಳಿಸಿದರು‌

1949ರ ನವೆಂಬರ್ 25ನೇ ತಾರೀಕಿನಂದು ಬಾಬಾ ಸಾಹೇಬರು ಮಾಡಿದ ಭಾಷಣವನ್ನು ಪ್ರಸ್ತಾಪಿಸಿದ ಸಿಎಂ, ಆರ್ಥಿಕ-ಸಾಮಾಜಿಕ ಪ್ರಜಾಪ್ರಭುತ್ವ ಎಲ್ಲರಿಗೂ ಸಿಕ್ಕಾಗ ಮಾತ್ರ ರಾಜಕೀಯ ಸ್ವಾತಂತ್ರಕ್ಕೆ ಅರ್ಥ ಬರುತ್ತದೆ. ತಾರಾತಮ್ಯ ಭಾರತದಲ್ಲಿ ಆಚರಣೆಯಲ್ಲಿ ಇರುವವರೆಗೂ ರಾಜಕೀಯ ಸ್ವಾತಂತ್ರ್ಯಕ್ಕೆ ಅರ್ಥ ಇಲ್ಲ ಎಂದು ಸಿಎಂ ಅಭಿಪ್ರಾಯ ಪಟ್ಟರು.

ಸಂವಿಧಾನದ ಪೀಠಿಕೆಯಲ್ಲಿ ಅತ್ಯಂತ ದೊಡ್ಡ ಮೌಲ್ಯಗಳಿವೆ,ಆದ್ದರಿಂದಲೇ ಪ್ರತಿ ಶಾಲಾ ಕಾಲೇಜುಗಳಲ್ಲಿ ಇದನ್ನು ಓದಿಸುವ, ಅರ್ಥೈಸುವ , ಪಾಲಿಸುವ ಪ್ರಯತ್ನ‌ ಮುನ್ನಡೆಸಿದ್ದೇವೆ ಎಂದು ತಿಳಿಸಿದರು.

ನಮ್ಮ ರಾಷ್ಟ್ರಗೀತೆ ಮತ್ತು ನಮ್ಮ‌ ನಾಡಗೀತೆಯಲ್ಲಿರುವ ಭಾರತ ಮತ್ತು ಕರ್ನಾಟಕ ನಮ್ಮದಾಗಬೇಕು ಯಾವುದೇ ತಾರತಮ್ಯ ಇಲ್ಲದ ಶಾಂತಿಯ ತೋಟ ನಮ್ಮದಾಗಬೇಕು ಎಂದು ಮುಖ್ಯ ಮಂತ್ರಿಗಳು ತಿಳಿಸಿದರು.

ಸಮಾಜದಲ್ಲಿರುವ ಅಸಮಾನತೆ ತೊಡೆದು ಹಾಕುವವರೆಗೂ ದೇಶಕ್ಕೆ ಸಿಕ್ಕ ಸ್ವಾತಂತ್ರ್ಯಕ್ಕೆ ಅರ್ಥ ಇರುವುದಿಲ್ಲ. ನಮ್ಮ ಸರ್ಕಾರ ಸಮಾನತೆ ಸಾಧಿಸುವ ದಿಕ್ಕಿನಲ್ಲಿ, ಎಲ್ಲಾ ಜಾತಿ-ಎಲ್ಲಾ ಧರ್ಮದ ಬಡವರಿಗೆ, ಮಧ್ಯಮ ವರ್ಗದವರಿಗೆ ಶಕ್ತಿ ತುಂಬುವ ಕಾರ್ಯಕ್ರಮ ರೂಪಿಸಿ ಜಾರಿ ಮಾಡಿದೆ ಎಂದು ಹೇಳಿದರು.

ಏಕತೆ ಭಜನೆ ಮಾಡುವ ವಿಚ್ಚಿದ್ರಕಾರಕ ದುಷ್ಟ ಶಕ್ತಿಗಳು ಸಾಮಾಜಿಕ ನ್ಯಾಯ, ಸಮಾನತೆಯ ವಿರೋಧಿಗಳು. ಇವರು ಸಮಾಜದ ಶತ್ರುಗಳು ಇವರನ್ನು ಮೆಟ್ಟಿ ನಿಲ್ಲದ ಹೊರತು ಮಹಿಳೆಯರ, ದಲಿತರ, ಹಿಂದುಳಿದವರ ಹಕ್ಕುಗಳು, ಅವಕಾಶಗಳು ಸಿಗಲು ಸಾಧ್ಯವಾಗುವುದಿಲ್ಲ ಎಂದರು.

ಬಿಜೆಪಿ ಮತ್ತು ಇವರ ಜೊತೆಗಿರುವ ವಿಚ್ಚಿದ್ರಕಾರಕ ಶಕ್ತಿಗಳು ಬಡವರ, ಮಧ್ಯಮ ವರ್ಗದ ವಿರೋಧಿಗಳು. ಇವರು ಬಡವರ ಪರವಾದ ಕಾರ್ಯಕ್ರಮಗಳು ಜಾರಿ ಆಗಲು ಬಿಡುವುದಿಲ್ಲ ಆದ್ದರಿಂದ ಇವರನ್ನು ನಾವು ಸೋಲಿಸಬೇಕು ಎಂದು ಸಿದ್ದರಾಮಯ್ಯ ಕರೆ ನೀಡಿದರು.

ಸಾಂಸ್ಕೃತಿಕ ಕಲಾತಂಡಗಳು ಮಾನವ ಸರಪಳಿ ಚಳವಳಗೆ ಮೆರಗು ನೀಡಿದವು

ಶಾಸಕರಾದ ರಿಜ್ವಾನ್ ಅರ್ಷದ್ ಅವರು ಅಧ್ಯಕ್ಷತೆ ವಹಿಸಿದ್ದರು. ಸಭಾಪತಿ ಬಸವರಾಜ ಹೊರಟ್ಟಿ, ಉಪಸಭಾಪತಿ ರುದ್ರಪ್ಪ ಲಮಾಣಿ, ಸಚಿವರುಗಳಾದ ಹೆಚ್.ಸಿ.ಮಹದೇವಪ್ಪ, ಪ್ರಿಯಾಂಕ್ ಖರ್ಗೆ, ಕೆ.ಜೆ.ಜಾರ್ಜ್, ದಿನೇಶ್ ಗುಂಡೂರಾವ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ವಿಧಾನ ಪರಿಷತ್ ಸದಸ್ಯರಾದ ಸಲೀಂ ಅಹಮದ್, ಯು.ಬಿ.ವೆಂಕಟೇಶ್ ಮತ್ತಿತರ ಪ್ರಮುಖರು ಉಪಸ್ಥಿತರಿದ್ದರು.

ವಿಚ್ಚಿದ್ರಕಾರಕ ಶಕ್ತಿಗಳನ್ನು ನಾಶ ಮಾಡಲು ಪ್ರಜಾಪ್ರಭುತ್ವವಾದಿಗಳು ಎದ್ದುನಿಲ್ಲಿ: ಸಿಎಂ Read More

ಮುನಿರತ್ನ ಬಾಯಿಯನ್ನು ಮೊದಲು ಶುದ್ಧ ಮಾಡಿ:ಸಿದ್ದರಾಮಯ್ಯ

ಬೆಂಗಳೂರು: ಗಬ್ಬೆದ್ದು ನಾರುತ್ತಿರುವ ನಿಮ್ಮ ಶಾಸಕ ಮುನಿರತ್ನ ಅವರ ಬಾಯಿಯನ್ನು ಮೊದಲು ಶುದ್ಧ ಮಾಡಿ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ಆಕ್ರೋಶದಿಂದ ಹೇಳಿದ್ದಾರೆ.

ಬಾಯಿ ತೆಗೆದರೆ ಸಂಸ್ಕಾರ, ಸಂಸ್ಕೃತಿಯ ಬಗ್ಗೆ ಭಾಷಣ ಬಿಗಿಯುವ ಬಿಜೆಪಿ ನಾಯಕರೇ, ಮೊದಲು ಗಬ್ಬೆದ್ದು ನಾರುತ್ತಿರುವ ನಿಮ್ಮ ಶಾಸಕ ಮುನಿರತ್ನ ಅವರ ಬಾಯಿಯನ್ನು ಶುದ್ಧ ಮಾಡಿ ನಂತರ ಊರಿಗೆ ಬುದ್ದಿ ಹೇಳಿ ಎಂದು ತಿರುಗೇಟು ನೀಡಿದ್ದಾರೆ.

ಬಿಜೆಪಿಯವರ ಹಿಂದೂ ನಾವೆಲ್ಲ ಒಂದು ಎಂಬ ಘೋಷವಾಕ್ಯ ಬರೀ ಚುನಾವಣಾ ಕಾಲಕ್ಕಷ್ಟೇ ಸೀಮಿತ.ಚುನಾವಣೆ ಮುಗಿದರೆ ಈ ನಾಡಿನ ದಲಿತರು, ಶೋಷಿತರನ್ನು ಅವರು ಹಿಂದೂವಾಗಿ, ತಮ್ಮಲ್ಲಿ ಒಬ್ಬನಾಗಿ ಕಾಣುವುದಿಲ್ಲ, ಈ ಸಮುದಾಯಗಳ ಬಗ್ಗೆ ಬಿಜೆಪಿ ನಾಯಕರ ಮನಸ್ಸಿನಲ್ಲಿ ತುಂಬಿರುವ ದ್ವೇಷ, ಅಸೂಯೆ, ಅಸಹನೆಗೆ ಮುನಿರತ್ನ ಬಾಯಿಂದ ಉದುರಿದ ಅಣಿಮುತ್ತುಗಳು ಸಾಕ್ಷಿ ಎಂದು ಹೇಳಿದ್ದಾರೆ.

ವೈರಲ್‌ ಆಗಿರುವ ಆಡಿಯೋದಲ್ಲಿ ಮುನಿರತ್ನ ಅವರು ದಲಿತ ಮತ್ತು ಒಕ್ಕಲಿಗ ಸಮುದಾಯವನ್ನು ಅತ್ಯಂತ ಅಶ್ಲೀಲವಾಗಿ, ಮನಸೋ ಇಚ್ಛೆ ನಿಂದಿಸಿದ್ದಾರೆ,ಆತನಿಂದ ಹಣಕ್ಕಾಗಿ ಬೇಡಿಕೆಯಿಟ್ಟಿದ್ದಾರೆ, ಕೊನೆಗೆ ಹಣ ನೀಡದಿದ್ದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ. ಇವೆಲ್ಲ ಅತ್ಯಂತ ಗಂಭೀರ ಸ್ವರೂಪದ ಅಪರಾಧಗಳಾಗಿವೆ ಎಂದು ಸಿಎಂ ಹೇಳಿದ್ದಾರೆ.

ಶೇ.40 ಕಮಿಷನ್‌ ಸರ್ಕಾರ ತೊಲಗಿದರೂ ಅದರಿಂದ ಹುಟ್ಟಿರುವ ರಕ್ತಬೀಜಾಸುರರು ಉಳಿದಿದ್ದಾರೆ.ಈಗ ನಾವು ಕೈಗೆತ್ತಿಕೊಂಡಿರುವ ಸ್ವಚ್ಚತಾ ಅಭಿಯಾನದಲ್ಲಿ ಈ ಹೊಲಸನ್ನು ಎಲ್ಲಿ ಇಡಬೇಕು ಅಲ್ಲಿಗೆ ಖಂಡಿತಾ ತಲುಪಿಸುತ್ತೇವೆ ಎಂದಿದ್ದಾರೆ.

ಮಾದ್ಯಮಗಳ ಮುಂದೆ ನಿಂತು ರಾಜ್ಯದ ಕಾನೂನು ಸುವ್ಯವಸ್ಥೆಯ ಬಗ್ಗೆ ಉಪದೇಶ ಕೊಡುವ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೆಂದ್ರ ಮತ್ತು ವಿಪಕ್ಷ ನಾಯಕ ಆರ್ ಆಶೋಕ್ ಅವರಿಗೆ ತಮ್ಮದೇ ಗೂಂಡಾ ಪ್ರವೃತ್ತಿಯ ಶಾಸಕ ಮುನಿರತ್ನ ಎದುರು ನಿಂತು ಮಾತನಾಡುವ ಧೈರ್ಯ ಇದೆಯೆ ಎಂದು ಸಿದ್ದು ಪ್ರಶ್ನಿಸಿದ್ದಾರೆ.

ಈಗ ಬಿಜೆಪಿ ನಾಯಕರಿಗೆ ಉಳಿದಿರುವುದು ಎರಡೇ ದಾರಿ.ಒಂದು ಮುನಿರತ್ನ ಅವರ ಹೇಳಿಕೆಗೆ ಬೆಂಬಲ ಕೊಟ್ಟು ತಾವು ದಲಿತ ವಿರೋಧಿಗಳು ಎಂದು ಒಪ್ಪಿಕೊಳ್ಳುವುದು, ಇಲ್ಲವೇ ನಾಡಿನ ದಲಿತ ಸಮುದಾಯದವರ ಬಳಿ ಬಹಿರಂಗ ಕ್ಷಮೆ ಕೇಳಿ, ಮುನಿರತ್ನ ಅವರನ್ನು ಪಕ್ಷದಿಂದ ಹೊರದಬ್ಬುವುದು ಎಂದು ಮುಖ್ಯ ಮಂತ್ರಿ ಹೇಳಿದ್ದಾರೆ.

ಮುನಿರತ್ನ ಬಾಯಿಯನ್ನು ಮೊದಲು ಶುದ್ಧ ಮಾಡಿ:ಸಿದ್ದರಾಮಯ್ಯ Read More

ಬಿಜೆಪಿ ಶಾಸಕ ಮುನಿರತ್ನ ಬಂಧನ

ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜೀವಬೆದರಿಕೆ, ಜಾತಿ ನಿಂದನೆ, ಅವಾಚ್ಯ ಶಬ್ದಗಳಿಂದ ನಿಂದಿಸಿದ ಆರೋಪದ ಹಿನ್ನೆಲೆಯಲ್ಲಿ ಆರ್.ಆರ್.ನಗರದ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಪೊಲೀಸರು ಬಂಧಿಸಿದ್ದಾರೆ.

ಕೋಲಾರದ ಮುಳಬಾಗಿಲ ನಂಗಳಿ ಗ್ರಾಮದ ಬಳಿ ಮುನಿರತ್ನ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಮುನಿರತ್ನ ವಿರುದ್ಧ 2 ದೂರು ದಾಖಲಾಗಿದೆ. ದೂರು ನೀಡಿದರೂ ಪೊಲೀಸರು ಕ್ರಮ ತೆಗೆದುಕೊಳ್ಳುತ್ತಿಲ್ಲ ಎಂದು ಗುತ್ತಿಗೆದಾರ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ದೂರು ನೀಡಿದ್ದರು.

ಬಿಜೆಪಿ ಶಾಸಕ ಮುನಿರತ್ನ ಬಂಧನ Read More