ನಿರ್ಮಲಾ ಸೀತಾರಾಮನ್‌, ಕಟೀಲ್‌ ವಿರುದ್ಧ ಎಫ್ಐಆರ್ ಗೆ ಮಧ್ಯಂತರ ತಡೆಯಾಜ್ಞೆ

ಬೆಂಗಳೂರು: ಚುನಾವಣಾ ಬಾಂಡ್‌ ಮೂಲಕ ಸುಲಿಗೆ ಮಾಡಿದ ಆರೋಪ ಪ್ರಕರಣದಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ವಿರುದ್ಧದ ಎಫ್ಐಆರ್ ಗೆ ಹೈಕೋರ್ಟ್ ತಡೆ ನೀಡಿದೆ.

ನಿರ್ಮಲಾ ಸೀತಾರಾಮನ್,ಬಿಜೆಪಿ ನಾಯಕ ನಳಿನ್‌ ಕುಮಾರ್‌ ಕಟೀಲ್‌ ಸೇರಿ ಹಲವರ ವಿರುದ್ಧ ದಾಖಲಾಗಿದ್ದ ಎಫ್‌ಐಆರ್‌ಗೆ ಕರ್ನಾಟಕ ಹೈಕೋರ್ಟ್‌ ಮಧ್ಯಂತರ ತಡೆಯಾಜ್ಞೆ ನೀಡಿದೆ.

ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಆದೇಶದ ಮೇರೆಗೆ ಪೊಲೀಸ್‌ ಠಾಣೆಯಲ್ಲಿ ದಾಖಲಾಗಿದ್ದ ಎಫ್‌ಐಆರ್‌ಗೆ ಹೈಕೋರ್ಟ್‌ ಮಧ್ಯಂತರ ತಡೆ ನೀಡಿ,ಅ.22 ಕ್ಕೆ ಅರ್ಜಿ ವಿಚಾರಣೆ ಮುಂದೂಡಿ ಆದೇಶ ಹೊರಡಿಸಿದೆ.

ನಿರ್ಮಲಾ ಸೀತಾರಾಮನ್‌, ಕಟೀಲ್‌ ವಿರುದ್ಧ ಎಫ್ಐಆರ್ ಗೆ ಮಧ್ಯಂತರ ತಡೆಯಾಜ್ಞೆ Read More

ಸರ್ಕಾರ ಬೀಳಿಸಲು 1,200 ಕೋಟಿ ರೂ: ಐಟಿ, ಇಡಿ ತನಿಖೆಗೆ ಡಿಕೆಶಿ ಒತ್ತಾಯ

ಬೆಂಗಳೂರು: ಸರ್ಕಾರ ಬೀಳಿಸಲು 1,200 ಕೋಟಿ ರೂ ಇಡಲಾಗಿದೆ ಎಂಬ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆ ಬಗ್ಗೆ ಐಟಿ, ಇಡಿ ತನಿಖೆ ಆಗಬೇಕು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಒತ್ತಾಯಿಸಿದ್ದಾರೆ.

ಯತ್ನಾಳ್ ಹೇಳಿಕೆ ಬಗ್ಗೆ ಮಾಧ್ಯಮದೊಂದಿಗೆ ಪ್ರತಿಕ್ರಿಯಿಸಿದ ಡಿಕೆಶಿ, ಈ ಬಗ್ಗೆ ಚರ್ಚಿಸಲು ​ಕಾಂಗ್ರೆಸ್ ಕಾನೂನು ತಂಡದ ಸಭೆ ಕರೆದಿದ್ದೇನೆ. 1,200 ಕೋಟಿ ರೂಪಾಯಿ ರೆಡಿಯಾಗಿದೆ ಎಂದು ಹೇಳಿಕೆ ಕೊಟ್ಟಿದ್ದಾರೆ. ಬಿಜೆಪಿ ಕಡೆಯಿಂದ ಈ ಹಣ ರೆಡಿಯಾಗಿದೆ ಎಂಬ ಮಾಹಿತಿ ಇದೆ ಎಂದು ಹೇಳಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರವನ್ನು ಬೀಳಿಸಲು ಷಡ್ಯಂತ್ರ ರೂಪಿಸಲಾಗಿದೆ, ಅದಕ್ಕಾಗಿ 1,200 ಕೋಟಿ ರೂ. ಹಣ ಮೀಸಲಿಡಲಾಗಿದೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆರೋಪಿಸಿದ್ದಾರೆ.

ಕಾಂಗ್ರೆಸ್ ಹೈಕಮಾಂಡ್ ನಾಯಕರಿಗೆ ಈ ಮಾಹಿತಿಯನ್ನು ತಿಳಿಸಿದ್ದೇನೆ ಇದು ತೆರಿಗೆ ಇಲಾಖೆ ಹಾಗೂ ಜಾರಿ ನಿರ್ದೇಶನಾಲಯ ವ್ಯಾಪ್ತಿಗೆ ಬರುವ ವಿಚಾರ. ದೂರು ನೀಡುವ ಸಂಬಂಧ ಚರ್ಚೆ ಮಾಡುತ್ತೇವೆ ಎಂದರು.

ಈ ವಿಷಯವನ್ನು ಆದಾಯ ತೆರಿಗೆ ಇಲಾಖೆಯಿಂದ ತನಿಖೆ ಮಾಡಬೇಕು. ಈ ಬಗ್ಗೆ ಕಾನೂನು ಏನು ಹೇಳುತ್ತದೆ ಎಂಬುದನ್ನು ತಿಳಿಯಲು ನಾನು ಕೆಪಿಸಿಸಿ ಸಭೆ ಕರೆದಿದ್ದೇನೆ. ಅಲ್ಲದೆ ಗೃಹ ಸಚಿವ ಜಿ ಪರಮೇಶ್ವರ ಅವರನ್ನು ಭೇಟಿ ಮಾಡಿ, ಈ ಕುರಿತು ಕಾನೂನು ಆಯ್ಕೆಗಳ ಬಗ್ಗೆ ಚರ್ಚಿಸಿದ್ದೇನೆ ಎಂದು ಡಿಕೆಶಿ ತಿಳಿಸಿದರು.

ಸರ್ಕಾರ ಬೀಳಿಸುವ ಷಡ್ಯಂತ್ರದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಎರಡೂ ಪಕ್ಷಗಳ ನಾಯಕರು ಇದ್ದಾರೆ. ಬಿಜೆಪಿ ಹೈಕಮಾಂಡ್‌ಗೆ ಆಸಕ್ತಿಯಿಲ್ಲದಿದ್ದರೂ ಬಿಜೆಪಿಯೊಳಗಿನ ಕೆಲವು ವಿಭಾಗಗಳು ಆಪರೇಷನ್ ಕಮಲದ ಬಗ್ಗೆ ಯೋಚಿಸುತ್ತಿವೆ, ಈ ಸಂಚಿನ ಬಗ್ಗೆ ನನಗೆ ಮಾಹಿತಿ ಇದೆ ಎಂದು ಯತ್ನಾಳ್ ಹೇಳಿದ್ದರು.

ಸರ್ಕಾರ ಬೀಳಿಸಲು 1,200 ಕೋಟಿ ರೂ: ಐಟಿ, ಇಡಿ ತನಿಖೆಗೆ ಡಿಕೆಶಿ ಒತ್ತಾಯ Read More

ಸಿದ್ದರಾಮಯ್ಯ ರಾಜೀನಾಮೆ ನೀಡುವವರೆಗೂ ಹೋರಾಟ:ಅಶೋಕ್

ಬೆಂಗಳೂರು: ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡುವವರೆಗೂ ಮತ್ತು ಸಿಬಿಐ ತನಿಖೆಗೆ ವಹಿಸುವವರೆಗೂ ಹೋರಾಟ ನಡೆಯಲಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದರು.

ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಜೆಪಿಯ ಹೋರಾಟದ ಫಲವಾಗಿ ಮುಡಾ ಹಗರಣ ಈ ಹಂತಕ್ಕೆ ಬಂದಿದೆ. ಈ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಹಾಗೂ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.

ಸಚಿವ ಬಿ.ನಾಗೇಂದ್ರ ರಾಜೀನಾಮೆ ಕೊಡಲ್ಲ ಎಂದಿದ್ದರು. ಬಳಿಕ ಕಾನೂನಿನ ಕುಣಿಕೆಯಲ್ಲಿ ಸಿಲುಕಿಕೊಂಡು ರಾಜೀನಾಮೆ ನೀಡಿದರು. ಇದೇ ರೀತಿ ಸಿದ್ದರಾಮಯ್ಯ ಕೂಡ ರಾಜೀನಾಮೆ ನೀಡಬೇಕಾಗುತ್ತದೆ ಎಂದು ಎಚ್ಚರಿಸಿದರು.

ಚುನಾವಣಾ ಬಾಂಡ್‌ ಬಗ್ಗೆ ಕಾಂಗ್ರೆಸ್‌ ದೊಡ್ಡದಾಗಿ ಮಾತಾಡುತ್ತಿದೆ. ಕಾಂಗ್ರೆಸ್‌ ಪಕ್ಷಕ್ಕೆ 1,500 ಕೋಟಿ ರೂ.ಗೂ ಅಧಿಕ‌ ಹಣ ದೇಣಿಗೆ ಬಂದಿದೆ, ಇದು ನ್ಯಾಯಾಲಯದಲ್ಲಿ ವಿಚಾರಣೆಯಾಗಿ ಮುಗಿದುಹೋಗಿದೆ. ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಅವರ ವಿರುದ್ಧ ಮಾತನಾಡಲು ಈ ವಿವಾದ ಮಾಡಲಾಗಿದೆ, ಇದೆಲ್ಲ ಕಾಂಗ್ರೆಸ್‌ ಪ್ರಾಯೋಜಿತ ಎಂದು ಅಶೋಕ್ ಟೀಕಿಸಿದರು

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೂರು ವರ್ಷ ಬಾಳಲಿ. ಖರ್ಗೆಯವರು ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧ ಸವಾಲೆಸೆಯುವುದು ಬೇಡ. ಕರ್ನಾಟಕದಲ್ಲಿ ಒಮ್ಮೆ ಸಿಎಂ ಆಗಬೇಕು ಎಂಬ ಆಸೆಯನ್ನು ಮಲ್ಲಿಕಾರ್ಜುನ ಖರ್ಗೆ ತೀರಿಸಿಕೊಳ್ಳಬಹುದು. ಆದರೆ ಮೋದಿಯವರನ್ನು ಪ್ರಧಾನಿ ಹುದ್ದೆಯಿಂದ ಕೆಳಕ್ಕಿಳಿಸಲು ಸಾಧ್ಯವಿಲ್ಲ ಎಂದು ಹೇಳಿದರು.

ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ವಿರುದ್ಧ ಲೋಕಾಯುಕ್ತ ಎಡಿಜಿಪಿ ಎಂ.ಚಂದ್ರಶೇಖರ್‌ ಹಂದಿ ಎಂದು ನಿಂದಿಸಿದ್ದಾರೆ. ಈ ಅಧಿಕಾರಿಯ ವಿರುದ್ಧ ಕೇಂದ್ರ ಮತ್ತು ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಸಿದ್ದರಾಮಯ್ಯ ರಾಜೀನಾಮೆ ನೀಡುವವರೆಗೂ ಹೋರಾಟ:ಅಶೋಕ್ Read More

ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ಮತ್ತೆ ಮುಂದೂಡಿಕೆ

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಳ್ಳಾರಿ ಜೈಲಿನಲ್ಲಿರುವ ನಟ ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ಮತ್ತೆ ಮುಂದೂಡಿಕೆಯಾಗಿದೆ.

ಅರ್ಜಿ ವಿಚಾರಣೆಯನ್ನು
ಅಕ್ಟೋಬರ್‌ 4 ಕ್ಕೆ ಮುಂದೂಡಿ ನ್ಯಾಯಾಲಯ ಆದೇಶ ನೀಡಿದೆ.

ಕೊಲೆ ಪ್ರಕರಣದ ಆರೋಪಿಗಳಾದ ದರ್ಶನ್‌ ಹಾಗೂ ಪವಿತ್ರಾ ಗೌಡ ಜಾಮೀನು ಅರ್ಜಿ ವಿಚಾರಣೆ ಸೋಮವಾರ 57ನೇ ಸೆಷನ್ ಕೋರ್ಟ್‌ನಲ್ಲಿ ನಡೆಯಿತು.

ಕಳೆದ ಶುಕ್ರವಾರ ಪವಿತ್ರ ಗೌಡ ಪರ ವಕೀಲ ಟಾಮಿ ಸೆಬಾಸ್ಟಿಯನ್ ವಾದ ಮಂಡಿಸಿದ್ದರು. ಇಂದಿಗೆ ಅರ್ಜಿ ವಿಚಾರಣೆಯನ್ನು ಮುಂದೂಡಲಾಗಿತ್ತು.

ಈಗ ದರ್ಶನ್‌ ಜಾಮೀನು ಅರ್ಜಿ ವಿಚಾರಣೆಯನ್ನೂ ಮುಂದೂಡಲಾಗಿದ್ದು ದರ್ಶನ್ ಗೆ ಮತ್ತೆ ನಿರಾಸೆಯಾಗಿದೆ.

ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ಮತ್ತೆ ಮುಂದೂಡಿಕೆ Read More

ಐಜಿಪಿ ಚಂದ್ರಶೇಖರ್ ಕ್ರಿಮಿನಲ್, ಬ್ಲ್ಯಾಕ್ ಮೇಲರ್-ಹೆಚ್ ಡಿ ಕೆ ಕಿಡಿ

ಬೆಂಗಳೂರು: ಐಜಿಪಿ ಚಂದ್ರಶೇಖರ್ ಒಬ್ಬ ಬ್ಲ್ಯಾಕ್ ಮೇಲರ್, ಕ್ರಿಮಿನಲ್ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಕಿಡಿಕಾರಿದರು.

ಆತ ತನ್ನ ಸಹೋದ್ಯೋಗಿಗಳಿಗೆ ಬರೆದಿರುವ ಪತ್ರವನ್ನು ಚೆನ್ನಾಗಿ ತಯಾರು ಮಾಡಿದ್ದಾರೆ. ಆ ಪತ್ರವನ್ನು ಯಾರು, ಎಲ್ಲಿ ತಯಾರು ಮಾಡಿಕೊಟ್ಟರು ಎನ್ನುವುದು ನನಗೆ ಗೊತ್ತಿದೆ. ಉತ್ತರ ಕೊಡಬೇಕಾದ ಜಾಗದಲ್ಲೇ ಸರಿಯಾದ ಸಂದರ್ಭದಲ್ಲಿ ಉತ್ತರ ಕೊಡುತ್ತೇನೆ ಎಂದು ತಿಳಿಸಿದರು.

ಮಾಧ್ಯಮಗಳೊಂದಿಗೆ ಮಾತನಾಡಿದ ಹೆಚತ ಡಿ ಕೆ,ಆತ ಹೇಳಿರುವಂತೆ ನಾನು ಪ್ರಕರಣದಲ್ಲಿ ಆರೋಪಿ ಇರಬಹುದು. ಆದರೆ, ಆತ ಅಧಿಕಾರಿ ಸೋಗಿನಲ್ಲಿರುವ ಕ್ರಿಮಿನಲ್, ಆತನ ವಿರುದ್ಧ ಸರಣಿ ಅಪರಾಧ ಕೃತ್ಯಗಳನ್ನು ಎಸಗಿರುವ ಆರೋಪಗಳಿವೆ ಎಂದು ಆರೋಪಿಸಿದರು.

ನಾನು ಕೇಳಿರುವ ಪ್ರಶ್ನೆಗಳಿಗೆ ಆತ ಉತ್ತರ ನೀಡಿಲ್ಲ, ಬದಲಿಗೆ ಕ್ರಿಮಿನಲ್ ಮನಃಸ್ಥಿತಿಯ ಕೊಳಕು ಭಾಷೆಯನ್ನು ಬಳಸಿ, ಒಬ್ಬ ಕೇಂದ್ರ ಸಚಿವರ ಬಗ್ಗೆ ಕೆಟ್ಟದ್ದಾಗಿ ಪತ್ರದಲ್ಲಿ ಪದ ಬಳಕೆ ಮಾಡಿದ್ದಾರೆ. ಇದಕ್ಕೆ ಏನು ಮಾಡಬೇಕು, ಎಲ್ಲಿ ಉತ್ತರ ಕೊಡಬೇಕು ಎನ್ನುವುದು ನನಗೆ ಗೊತ್ತಿದೆ ಎಂದು ತಿರುಗೇಟು ನೀಡಿದರು‌

ನಾನು ದಾಖಲೆ, ವಿಷಯ ಇಲ್ಲದೆ ಮಾತನಾಡುವುದಿಲ್ಲ. ಅಧಿಕಾರಿ ಬರೆದಿರುವ ಪತ್ರವನ್ನು ಚೆನ್ನಾಗಿ ಸಿದ್ಧ ಮಾಡಿಕೊಟ್ಟಿದ್ದಾರೆ. ನಾನು ಶನಿವಾರ ಬೆಳಗ್ಗೆ ಮಾಧ್ಯಮಗೋಷ್ಠಿ ಮಾಡಿದ ಮೇಲೆ, ಸಂಜೆ ಆ ಅಧಿಕಾರಿ ಎಲ್ಲಿ ಹೋಗಿದ್ದ ಎನ್ನುವುದು ಗೊತ್ತಿದೆ. ಪತ್ರವನ್ನು ಅಲ್ಲಿ ಯಾವ ಕಾನೂನು ಪಂಡಿತರು ರೆಡಿ ಮಾಡಿಕೊಟ್ಟರು, ಅವರೊಂದಿಗೆ ಯಾರಿದ್ದರು ಎನ್ನುವುದೆಲ್ಲಾ ಗೊತ್ತಿದೆ ಎಂದು ಹೇಳಿದರು.

ನಾನು ದಾಖಲೆ ಇಟ್ಕೊಂಡೇ ನಿನ್ನೆ ಮಾತಾಡಿದ್ದೇನೆ. ಈತ ಆಂಧ್ರ ಪ್ರದೇಶ ಮೂಲದವನು, ಹಿಮಾಚಲ ಪ್ರದೇಶ ಕೇಡರ್ ಅಧಿಕಾರಿ 25 ವರ್ಷಗಳಿಂದ ಇಲ್ಲಿದ್ದಾರೆ. ಯಾರು ಯಾರನ್ನು ಹಿಡಿದು ಇಲ್ಲಿಗೆ ಬಂದಿದ್ದಾರೆ, ಆತ ಬಳಕೆ ಮಾಡಿರುವ ಭಾಷೆ ಆತನ ಸಂಸ್ಕೃತಿಯನ್ನು ತೋರಿಸುತ್ತದೆ ಎಂದು ಏಕ ವಚನದಲ್ಲಿ ವಾಗ್ದಾಳಿ ನಡೆಸಿದರು ಕುಮಾರಸ್ವಾಮಿ

ಪತ್ರದಲ್ಲಿ ಸತ್ಯಮೆಯ ಜಯತೆ ಎಂದು ಆತ ಬರೆದಿದ್ದಾರೆ. ನಾನು ಹೋರಾಟ ಮಾಡುತ್ತಿರುವುದು ಕೂಡ ಅದೇ ಉದ್ದೇಶಕ್ಕೆ. ಶನಿವಾರ ಅಷ್ಟು ದಾಖಲೆಗಳ ಸಮೇತ ಈ ವ್ಯಕ್ತಿ ಬಗ್ಗೆ ಹೇಳಿದ್ದು ಕೂಡ ಸತ್ಯಮೇವ ಜಯತೇ ಕಾರಣಕ್ಕಾಗಿಯೇ ಎಂದು ಹೇಳಿದರು.

ಪೊಲೀಸ್ ಠಾಣೆಗೆ ಈ ಅಧಿಕಾರಿ ವಿರುದ್ಧ ನಾನು ದೂರು ಕೊಟ್ಟಿದ್ದೀನಾ? ಅವರ ಕೈಕೆಳಗೆ ಕೆಲಸ ಮಾಡುವ ಇನ್ಸ್ಪೆಕ್ಟರ್ ಗೆ 20 ಕೋಟಿ ಡಿಮ್ಯಾಂಡ್ ಇಟ್ಟು ಸಿಕ್ಕಿಬಿದ್ದಿದ್ದಾನೆ. ಆ ಇನ್ಸ್ಪೆಕ್ಟರ್ ಈ ಅಧಿಕಾರಿ ವಿರುದ್ಧ ದೂರು ನೀಡಿದ್ದಾರೆ ಇದೇನಾ ಸತ್ಯಮೇವ‌ಜಯತೆ ಎಂದು ಕಾರವಾಗಿ ಪ್ರಶ್ನಿಸಿದರು.

ಸಿಎಂ ಸಿದ್ದರಾಮಯ್ಯ ಹಾಗೂ ಅವರ ಪಟಾಲಂಗೆ ನನ್ನ ರಾಜೀನಾಮೆ ಕೇಳುವ ನೈತಿಕತೆ ಇಲ್ಲ. ಸಿದ್ದರಾಮಯ್ಯ ಮೆಚ್ಚಿಸಲು ನಾನು ರಾಜೀನಾಮೆ ಕೊಡಬೇಕಾ, ನಾನು ತಪ್ಪು ಮಾಡಿಲ್ಲ, ತಪ್ಪು ಮಾಡಿಲ್ಲ ಅಂದ್ಮೇಲೆ ರಾಜೀನಾಮೆ ಯಾಕೆ ಕೊಡಲಿ ಎಂದು ಕುಮಾರಸ್ವಾಮಿ ಸಿದ್ದರಾಮಯ್ಯ ಅವರಿಗೆ ತಿರುಗೇಟು ನೀಡಿದರು.

ಐಜಿಪಿ ಚಂದ್ರಶೇಖರ್ ಕ್ರಿಮಿನಲ್, ಬ್ಲ್ಯಾಕ್ ಮೇಲರ್-ಹೆಚ್ ಡಿ ಕೆ ಕಿಡಿ Read More

ತಾಜ್ ವೆಸ್ಟ್ ಎಂಡ್ ಹೋಟೆಲ್ ಗೆ ಬಾಂಬ್ ಬೆದರಿಕೆ

ಬೆಂಗಳೂರು: ಬೆಂಗಳೂರಿನ ಪ್ರತಿಷ್ಠಿತ ತಾಜ್ ವೆಸ್ಟ್ ಎಂಡ್ ಹೋಟೆಲ್ ಗೆ ಬಾಂಬ್ ಬೆದರಿಕೆ ಬಂದಿದ್ದು ಅಲ್ಲಿನ ಸಿಬ್ಬಂದಿ ಮತ್ತು ನಗರದ ಜನತೆ‌ ಆತಂಕ‌ ಕ್ಕೊಳಗಾಗಿದ್ದಾರೆ.

ತಾಜ್ ವೆಸ್ಟ್ ಎಂಡ್ ಹೋಟೆಲ್ ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಹಾಕಲಾಗಿದೆ.

ತಕ್ಷಣ ಹೋಟೆಲ್ ಸಿಬ್ಬಂದಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಮಾಹಿತಿ ದೊರೆತ ಕೂಡಲೇ‌ ಹೈಗ್ರೌಂಡ್ಸ್ ಠಾಣೆ
ಪೊಲೀಸರು ಹಾಗೂ ಬಾಂಬ್ ನಿಷ್ಕ್ರಿಯ ದಳ ಆಗಮಿಸಿ ಪರಿಶೀಲನೆ ನಡೆಸಿದರು.

ತಾಜ್ ವೆಸ್ಟ್ ಎಂಡ್ ಹೋಟೆಲ್ ನಲ್ಲಿ ರಾಜಕಾರಣಿಗಳು, ಕ್ರಿಕೆಟ್ ಆಟಗಾರರು, ಉದ್ಯಮಿಗಳು ವಾಸ್ತವ್ಯ ಹೂಡುತ್ತಾರೆ,ಹಾಗಾಗಿ‌ ಪೊಲೀಸರು ತೀವ್ರ ‌ತಪಾಸಣೆ‌ ನಡೆಸಿ ಎಚ್ಚರಿಕೆ ವಹಿಸಿದ್ದಾರೆ.

ಬೆಂಗಳೂರು ‌ಸೆಂಟ್ರಲ್ ಡಿಸಿಪಿ ಶೇಖರ್ ಹೆಚ್.ಟೆಕ್ಕಣ್ಣವರ್ ಈ ಬಗ್ಗೆ ಮಾತನಾಡಿ,ತಾಜ್ ವೆಸ್ಟ್‌ ಎಂಡ್‌ ಹೋಟೆಲ್ ಬಿಗಿ‌ ಭದ್ರತೆ ಮಾಡಲಾಗಿದೆ.ಸಧ್ಯಕ್ಕೆ ಯಾವುದೇ‌ ಬಾಂಬ್ ಪತ್ತೆಯಾಗಿಲ್ಲ,ಅಪರಿಚಿತರು ಇ.ಮೇಲ್ ಮೂಲಕ‌ ಬಾಂಬ್ ಬೆದರಿಕೆ‌ ಹಾಕಿದ್ದಾರೆ ಎಂದು ‌ಸ್ಪಷ್ಟಪಡಿಸಿದ್ದಾರೆ.

ತಾಜ್ ವೆಸ್ಟ್ ಎಂಡ್ ಹೋಟೆಲ್ ಗೆ ಬಾಂಬ್ ಬೆದರಿಕೆ Read More

ನಿರ್ಮಲಾ ವಿರುದ್ಧ ಎಫ್‌ಐಆರ್‌ ಗೂ ಸಿಎಂ ಮುಡಾ ಹಗರಣಕ್ಕೂ ವ್ಯತ್ಯಾಸವಿದೆ:ಅಶೋಕ್

ಬೆಂಗಳೂರು: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ವಿರುದ್ಧ ಎಫ್‌ಐಆರ್‌ ದಾಖಲಿಸುವಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶಿಸಿರುವುದಕ್ಕೂ ಸಿಎಂ ಸಿದ್ದರಾಮಯ್ಯ ಅವರ ಮುಡಾ ಹಗರಣಕ್ಕೂ ವ್ಯತ್ಯಾಸವಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ವಜನ ಪಕ್ಷಪಾತ ಮಾಡಿದ್ದಾರೆ. ಕೋಟ್ಯಂತರ ರೂಪಾಯಿ ಬೆಲೆಬಾಳುವ ಜಮೀನನ್ನು ಕಬಳಿಸಿದ್ದಾರೆ. ನಿರ್ಮಲಾ ಸೀತಾರಾಮನ್‌ ಅವರು ತಮ್ಮ ಸ್ವಂತಕ್ಕಾಗಿ ಏನೂ ಮಾಡಿಲ್ಲ. ಆ ಹಣ ಪಕ್ಷಕ್ಕೆ ಬಂದಿದೆ. ಕಾಂಗ್ರೆಸ್‌ ಪಕ್ಷಕ್ಕೆ 1,200 ಕೋಟಿ ರೂ.ಗೂ ಅಧಿಕ ಹಣ ಹೋಗಿದೆ,ಆ ಹಣವನ್ನು ಮೊದಲು ವಾಪಸ್‌ ನೀಡಲಿ, ಆ ನಂತರ ಸಚಿವರ ರಾಜೀನಾಮೆ ಕೇಳಲಿ ಎಂದು ‌ತಿರುಗೇಟು ನೀಡಿದರು.

ಎಲ್ಲ ಪಕ್ಷಗಳು ದೇಣಿಗೆ ಸಂಗ್ರಹ ಮಾಡಿವೆ. ಹೀಗೆ ಹಣ ತೆಗೆದುಕೊಂಡವರ ಮೇಲೆ ಎಫ್‌ಐಆರ್‌ ದಾಖಲಿಸುವುದಾದರೆ, ಎಲ್ಲರ ಮೇಲೂ ದಾಖಲಿಸಬೇಕಾಗುತ್ತದೆ. ಸಿಎಂ ಸಿದ್ದರಾಮಯ್ಯ ಅವರೇ ಯಾರಿಂದಲೋ ಹೇಳಿಸಿ ದೂರು ದಾಖಲಿಸಿದ್ದಾರೆ ಎಂಬುದು ಇದರಿಂದ ಸ್ಪಷ್ಟವಾಗುತ್ತದೆ. ಹೀಗೆ ದೂರು ದಾಖಲಿಸಿರುವುದು ರಾಜಕೀಯ ಪ್ರೇರಿತ ಎಂದು ದೂರಿದರು.

ಸಿಎಂ ಸಿದ್ದರಾಮಯ್ಯನವರ ಪ್ರಕರಣ ಕ್ಯಾಬೆನೆಟ್‌ನಲ್ಲಿ ಚರ್ಚೆಯಾಗಿರಲಿಲ್ಲ. ಆದರೆ ಚುನಾವಣಾ ಬಾಂಡ್‌ ಬಗ್ಗೆ ಕ್ಯಾಬಿನೆಟ್‌ನಲ್ಲೇ ಚರ್ಚೆಯಾಗಿ ಸರ್ಕಾರಿ ಆದೇಶ ಹೊರಡಿಸಲಾಗಿದೆ. ಮುಡಾ ಹಗರಣದ ಆರೋಪದಿಂದ ತಪ್ಪಿಸಿಕೊಳ್ಳಲು ಕಾಂಗ್ರೆಸ್‌ ನಾಯಕರು ಹೀಗೆ ಮಾತಾಡುತ್ತಿದ್ದಾರೆ. ಮೊದಲು ಲೋಕಾಯುಕ್ತ ಮುಚ್ಚಿಹಾಕಲು ಪ್ರಯತ್ನ ಮಾಡಿದ್ದರು. ಈಗ ಸಿಬಿಐ ಅಧಿಕಾರ ಕಿತ್ತುಕೊಳ್ಳಲು ಕ್ರಮ ವಹಿಸಿದ್ದಾರೆ. ಕಾಂಗ್ರೆಸ್‌ ಕೇಂದ್ರದಲ್ಲಿ ಅಧಿಕಾರದಲ್ಲಿದ್ದಾಗ ಅನೇಕ ಹಗರಣಗಳನ್ನು ಮಾಡಿ ನುಂಗಿ ನೀರು ಕುಡಿದಿದ್ದರು ಎಂದು ಟೀಕಾಪ್ರಹಾರ ನಡೆಸಿದರು.

ಮುಖ್ಯಮಂತ್ರಿ ಸ್ಥಾನದಲ್ಲಿ ಸಿದ್ದರಾಮಯ್ಯ ಇದ್ದರೆ, ಅವರು ಪೊಲೀಸರ ಮೇಲೆ ಪ್ರಭಾವ ಬೀರುವ ಸಾಧ್ಯತೆ ಇದೆ. ಅದಕ್ಕಾಗಿ ರಾಜೀನಾಮೆ ನೀಡಲು ಆಗ್ರಹಿಸುತ್ತಿದ್ದೇವೆ ಎಂದು ಅಶೋಕ್ ತಿಳಿಸಿದರು.

ನಿರ್ಮಲಾ ವಿರುದ್ಧ ಎಫ್‌ಐಆರ್‌ ಗೂ ಸಿಎಂ ಮುಡಾ ಹಗರಣಕ್ಕೂ ವ್ಯತ್ಯಾಸವಿದೆ:ಅಶೋಕ್ Read More

ಬಿಜೆಪಿ ಶಾಸಕ ಮುನಿರತ್ನ ನಿವಾಸದ ಮೇಲೆ ಎಸ್‌‍ಐಟಿ ದಾಳಿ

ಬೆಂಗಳೂರು: ಅತ್ಯಾಚಾರ, ಜಾತಿ ನಿಂದನೆ ಆರೋಪದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಬಿಜೆಪಿ ಶಾಸಕ ಮುನಿರತ್ನ ಅವರ ನಿವಾಸದ ಮೇಲೆ ಎಸ್‌‍ಐಟಿ ಅಧಿಕಾರಿಗಳು ದಿಢೀರ್‌ ದಾಳಿ ನಡೆಸಿದ್ದಾರೆ.

ವೈಯಾಲಿ ಕಾವಲ್‌ನಲ್ಲಿರುವ ಮುನಿರತ್ನ ಅವರ ನಿವಾಸ ಹಾಗೂ ಕಚೇರಿ ಸೇರಿದಂತೆ 15ಕ್ಕೂ ಹೆಚ್ಚು ಸ್ಥಳಗಳ ಮೇಲೆ ಎಸಿಪಿ ಕವಿತಾ ನೇತೃತ್ವದ ಎಸ್‌‍ಐಟಿ ತಂಡ ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲಿಸಿದೆ.

ಬೆಳ್ಳಂ ಬೆಳಿಗ್ಗೆ ಮುನಿರತ್ನ ಅವರ ನಿವಾಸ, ಕಚೇರಿ ಸೇರಿದಂತೆ ವಿವಿಧೆಡೆ ಎಫ್ಎಸ್ಎಲ್​ ತಂಡದೊಂದಿಗೆ ಎಸ್​ಐಟಿ ಅಧಿಕಾರಿಗಳು ದಾಳಿ ನಡೆಸಿ ಸಾಕ್ಷ್ಯಗಳನ್ನು ಕಲೆ ಹಾಕುತ್ತಿದ್ದಾರೆ.

ಗುತ್ತಿಗೆದಾರ ಚಲುವರಾಜು ಅವರಿಗೆ ಜೀವ ಬೆದರಿಕೆ ಹಾಕಿ, ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಮುನಿರತ್ನ ಅವರನ್ನು ಬಂಧನವಾಗಿತ್ತು.

ಈ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿದ್ದ ಅವರು ನಂತರ ಜಾಮೀನಿನ ಮೇಲೆ ಬಿಡುಗಡೆಯಾದರು.ಆದರೆ ಜೈಲಿಂದ ಹರಬಂದ ನಂತರ ಅತ್ಯಾಚಾರ ಪ್ರಕರಣದಲ್ಲಿ ಮತ್ತೆ ಬಂಧನಕ್ಕೊಳಗಾದರು.

ಗುತ್ತಿಗೆದಾರ ಚಲುವರಾಜು ಎಂಬವರು ಶಾಸಕ ಮುನಿರತ್ನ ನನಗೆ ಕೊಲೆ ಬೆದರಿಕೆ, ಜಾತಿ ನಿಂದನೆ ಮಾಡಿದ್ದಾರೆ ಎಂದು ಆರೋಪಿಸಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದಗೆ ದೂರು ನೀಡಿದ್ದರು.

ಮತ್ತೊಂದು ಪ್ರಕರಣದಲ್ಲಿ ಮಹಿಳೆಯೊಬ್ಬರು ಮುನಿರತ್ನ ತಮ್ಮ ಮೇಲೆ ಅತ್ಯಾಚಾರ ಎಸಗಿ ಬ್ಲ್ಯಾಕ್​ ಮೇಲ್ ಮಾಡಿದ್ದಾರೆ. ಹನಿಟ್ರ್ಯಾಪ್​ ಕೂಡ ಮಾಡಿಸಿದ್ದಾರೆ ಎಂದು ಕಗ್ಗಲಿಪುರ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

ಪ್ರಕರಣದ ಬೆನ್ನು ಬಿದ್ದಿರುವ ಎಸ್‌‍ಐಟಿ ಅಧಿಕಾರಿಗಳು, ಮುನಿರತ್ನ ಅವರ ನಿವಾಸ ಮತ್ತು ಅವರ ಸಂಬಂಧಿಕರು, ಸ್ನೇಹಿತರ ಮನೆಗಳ ಮೇಲೂ ದಾಳಿ ನಡೆಸಿ ದಾಖಲೆಗಳನ್ನು ವಶಪಡಿಸಿಕೊಂಡು ಪರಿಶೀಲಿಸುತ್ತಿದ್ದಾರೆ.

ಬಿಜೆಪಿ ಶಾಸಕ ಮುನಿರತ್ನ ನಿವಾಸದ ಮೇಲೆ ಎಸ್‌‍ಐಟಿ ದಾಳಿ Read More

ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮತ್ತೆ ಮುಂದೂಡಿಕೆ

ಬೆಂಗಳೂರು: ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮತ್ತೆ ಮುಂದೂಡಿಕೆಯಾಗಿದ್ದು,ಅವರಿಗೆ ಬಳ್ಳಾರಿ ಜೈಲೇ ಗತಿಯಾಗಿದೆ.

ಇಂದು ದರ್ಶನ್ ಜಾಮೀನು ಅರ್ಜಿ ವಿಚಾರಣೆ ನಡೆಯಬೇಕಿತ್ತು, ಆದರೆ ಯಾವುದೇ ವಾದ ಮಂಡನೆ ಮಾಡದೆ ಜಾಮೀನು ಅರ್ಜಿ ವಿಚಾರಣೆಯನ್ನು ಸೆಪ್ಟೆಂಬರ್ 30ಕ್ಕೆ ಮುಂದೂಡಲಾಯಿತು.

ದರ್ಶನ್ ಪರ ವಕೀಲರು
ವಾದ ಮಂಡನೆಗೆ ಕಾಲಾವಕಾಶ ಕೇಳಿದ ಕಾರಣ ಪ್ರಕರಣದ ವಿಚಾರಣೆಯನ್ನು ಸೆ. 30ಕ್ಕೆ ಮುಂದೂಡಲಾಗಿದೆ.

ಈ ಹಿಂದೆ, ಜಾಮೀನಿಗೆ ಅರ್ಜಿ ಸಲ್ಲಿಸಿದ್ದ ದರ್ಶನ್ ಪರ ವಕೀಲರು, ಎಸ್​ಪಿಪಿ ಪ್ರಸನ್ನ ಕುಮಾರ್ ಅವರು ಆಕ್ಷೇಪಣೆ ಸಲ್ಲಿಸಲು ತಡ ಮಾಡುತ್ತಿದ್ದಾರೆ ಎಂದು ಆರೋಪ ಮಾಡಿದ್ದರು. ಆದರೆ ಈಗ ಆಕ್ಷೇಪಣೆ ಸಲ್ಲಿಸಿದ ಮೇಲೆ ತಾವೇ ವಿಚಾರಣೆಯನ್ನು ಮುಂದಕ್ಕೆ ಹಾಕಿಸಿಕೊಂಡಿದ್ದಾರೆ.

ಎಸ್​ಪಿಪಿ ಪ್ರಸನ್ನಕುಮಾರ್ ಅವರು ಮಾತನಾಡಿ, ನಾವು ಆಕ್ಷೇಪಣೆ ಸಲ್ಲಿಸಿಲ್ಲವೆಂದು ದರ್ಶನ್ ವಕೀಲರು ತಕರಾರು ತೆಗೆಯುತ್ತಿದ್ದರು, ಈಗ ಆಕ್ಷೇಪಣೆ ಸಲ್ಲಿಸಿದ್ದೇವೆ ವಾದ ಮಂಡನೆಗೆ ಸಿದ್ದ ಇದ್ದೇವೆ ಎಂದು ಹೇಳಿದರು.

ಪ್ರಕರಣ ಸಂಬಂಧ‌ ವಾದ ಮಂಡನೆಗೆ ಖುದ್ದು ಹಿರಿಯ ವಕೀಲ ಸಿ.ವಿ ನಾಗೇಶ್ ಅವರು ಬರಬೇಕಿದೆ ಅವರು ಬಂದಿಲ್ಲ ಹಾಗಾಗಿ ಇನ್ನಷ್ಟು ದಿನದ ಕಾಲಾವಕಾಶ ಕೊಡಬೇಕೆಂದು ಅವರ ಸಹಾಯಕ ವಕೀಲರು ಕೇಳಿದರು.

ಹಾಗಾಗಿ ಸೆ. 30ಕ್ಕೆ ವಿಚಾರಣೆಯನ್ನು ನ್ಯಾಯಾಧೀಶರು ಮುಂದೂಡಿದರು.

ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮತ್ತೆ ಮುಂದೂಡಿಕೆ Read More

ಸಿಎಂ ವಿರುದ್ಧ ಕುಮಾರಸ್ವಾಮಿ ವ್ಯಂಗ್ಯ ಟ್ವೀಟ್

ಬೆಂಗಳೂರು: ಮುಖ್ಯ ಮಂತ್ರಿ ಸಿದದರಾಮಯ್ಯ ಅವರು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡದ ಹಿನ್ನೆಲೆಯಲ್ಲಿ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ವ್ಯಂಗ್ಯ ವಾಗಿ ಟ್ವೀಟ್ ಮಾಡಿದ್ದು ಅದರ ಒಕ್ಕಣೆ ಕೆಳಗಿನಂತಿದೆ ನೀವೆ ಅದನ್ನು ಓದಿನೋಡಿ.

ಶ್ರೀಮಾನ್ ಸಿದ್ದರಾಮಯ್ಯನವರೇ.
ನಿಮ್ಮ ‘ಸಿದ್ವಿಲಾಸ’ಕ್ಕೆ ಉಘೇಉಘೇ ಎನ್ನಲೇಬೇಕು.

ಅಂದು ಹಗರಣಗಳಿಂದ ಪಾರಾಗಲು ಲೋಕಾಯುಕ್ತಕ್ಕೇ ಸಮಾಧಿ ಕಟ್ಟಿ ಎಸಿಬಿ ರಚನೆ ಮಾಡಿಕೊಂಡಿರಿ!

ಇಂದು ಮೂಡಾಗರಣದಿಂದ ಬಚಾವಾಗಲು ನಿಮಗೀಗ ಅದೇ ಲೋಕಾಯುಕ್ತವೇss ಗತಿ!!

Karma Hit back ಎಂದರೇ ಇದೇ ಅಲ್ಲವೇ @siddaramaiah ನವರೇ?
ನಿಮ್ಮ ಗ್ರಹಚಾರಕ್ಕೆ ಎಸಿಬಿಯನ್ನೂ ಹೈಕೋರ್ಟ್ ಬರ್ಖಾಸ್ತು ಮಾಡಿಬಿಟ್ಟಿತು.

ಈಗ ಲೋಕಾಯುಕ್ತವನ್ನೇ ಗುರಾಣಿ ಮಾಡಿಕೊಂಡು ಸಿಬಿಐ ರಾಜ್ಯ ಪ್ರವೇಶಕ್ಕೆ ಸಂಪುಟದಿಂದ ಬಾಗಿಲು ಬಂದ್ ಮಾಡಿಸಿದ್ದೀರಿ.
ಅಲ್ಲಿಗೆ ಆರೋಪಿ ಅಪರಾಧಿಯಾದ ಎಂದೇ ಲೆಕ್ಕ. ‘ ಸಿದ್ದಾಪರಾದ’ ಸಾಬೀತಿಗೆ ಇನ್ನೊಂದೇ ಹೆಜ್ಜೆ ಬಾಕಿ.

ನಾನು ಭಾವಿಸಿದಷ್ಟು ಧೈರ್ಯವಂತರಲ್ಲ ನೀವು..
ನಿಮಗೂ ಭಯವಿದೆsss!!
ಅದೇ ಈ ನೆಲದ ಕಾನೂನಿನ ಶಕ್ತಿ.

ಏನಂತೀರಿ?

ಮೂಡಾಸಿದ್ವಿಲಾಸ

MUDACase

ಸಿಎಂ ವಿರುದ್ಧ ಕುಮಾರಸ್ವಾಮಿ ವ್ಯಂಗ್ಯ ಟ್ವೀಟ್ Read More