ಬಾಂಗ್ಲಾ ಮಾಜಿ ಪ್ರಧಾನಿ ಶೇಖ್ ಹಸೀನಾಗೆ ಮತ್ತೆ 5 ವರ್ಷ ಜೈಲು ಶಿಕ್ಷೆ

ಢಾಕಾ: ಮರಣದಂಡನೆ ಶಿಕ್ಷೆಗೆ ಒಳಗಾಗಿರುವ ಬಾಂಗ್ಲಾ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರಿಗೆ ಇನ್ನೊಂದು ಪ್ರಕರಣದಲ್ಲಿ 5 ವರ್ಷಗಳ ಜೈಲು ಶಿಕ್ಷೆ ವಿಧಿಸಿ ಢಾಕಾ ನ್ಯಾಯಾಲಯ ಆದೇಶಿಸಿದೆ.

ಇನ್ನೊಂದು ಪ್ರಕರಣದಲ್ಲಿ ಮಾಜಿ ಶೇಖ್ ಹಸೀನಾ ಸಹೋದರಿ ಶೇಖ್ ರೆಹಾನಾಗೆ 7 ವರ್ಷಗಳ ಜೈಲು ಶಿಕ್ಷೆ, ಬ್ರಿಟಿಷ್ ಸಂಸದೆ ತುಲಿಪ್ ಸಿದ್ದಿಕ್ ಅವರಿಗೆ 2 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿದೆ.

ಶೇಖ್ ಹಸೀನಾ ಅವರ ಪುತ್ರ ಸಜೀಬ್ ವಾಜೀದ್ ಜಾಯ್ ಅವರಿಗೆ ನ್ಯಾಯಾಲಯ ಐದು ವರ್ಷಗಳ ಜೈಲು ಶಿಕ್ಷೆ ಮತ್ತು 1,00,000 ಬಾಂಗ್ಲಾದೇಶಿ ಟಕಾ ದಂಡ ವಿಧಿಸಿದೆ.

ಶೇಖ್ ಹಸೀನಾ ಅವರ ಪುತ್ರಿ ಸೈಮಾ ವಾಜೀದ್ ಪುಟುಲ್ ಅವರಿಗೂ ಐದು ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿದೆ.

ಪ್ಲಾಟ್ ವಂಚನೆ ಪ್ರಕರಣದಲ್ಲಿ ಢಾಕಾದ ವಿಶೇಷ ವ್ಯಾಯಾಲಯ ಈ ಶಿಕ್ಷೆ ವಿಧಿಸಿದೆ.

ಬಾಂಗ್ಲಾದೇಶದ ಭ್ರಷ್ಟಾಚಾರ ನಿಗ್ರಹ ಆಯೋಗ (ಎಸಿಸಿ) ಶೇಖ್ ಹಸೀನಾ ಮತ್ತು ಅವರ ಕುಟುಂಬ ಸದಸ್ಯರ ವಿರುದ್ಧ ಕಳೆದ ಜನವರಿಯಲ್ಲಿ ಢಾಕಾದ ಪುರ್ಬಾಚಲ್ ಪ್ರದೇಶದಲ್ಲಿ ಸರ್ಕಾರಿ ಪ್ಲಾಟ್‌ಗಳನ್ನು ಅಕ್ರಮವಾಗಿ ಹಂಚಿಕೆ ಮಾಡಿದ ಆರೋಪದ ಮೇಲೆ ಆರು ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಲಿಸಿತ್ತು.

ಈಗಾಗಲೆ ಬಾಂಗ್ಲಾದೇಶದ ಅಂತಾರಾಷ್ಟ್ರೀಯ ಅಪರಾಧ ನ್ಯಾಯಮಂಡಳಿ ಶೇಖ್ ಹಸೀನಾ ಅವರಿಗೆ ಮರಣದಂಡನೆ ವಿಧಿಸಿದೆ. 2024ರ ಜುಲೈ ದೇಶದಲ್ಲಿ ನಡೆದ ಪ್ರತಿಭಟನೆ ಹತ್ತಿಕ್ಕಲು ಅವರು ಮಾಡಿದ ಪ್ರಯತ್ನಗಳಿಗಾಗಿ ಮಾನವೀಯತೆಯ ವಿರುದ್ಧದ ಅಪರಾಧಗಳಿಗೆ ಅವರು ತಪ್ಪಿತಸ್ಥರೆಂದು ತೀರ್ಪು ನೀಡಲಾಗಿದೆ.

ಭಾರತದಲ್ಲಿ ಆಶ್ರಯ ಪಡೆದಿರುವ ಶೇಖ್​​ ಹಸೀನಾ ಅವರನ್ನು ಹಸ್ತಾಂತರಿಸಲು ಮೊಹಮದ್​ ಯೂನಸ್​ ಅವರ ನೇತೃತ್ವದಲ್ಲಿ ರಚಿತವಾಗಿರುವ ಬಾಂಗ್ಲಾದೇಶ ಮಧ್ಯಂತರ ಸರ್ಕಾರ ಮನವಿ ಮಾಡಿದೆ.

ಬಾಂಗ್ಲಾ ಮಾಜಿ ಪ್ರಧಾನಿ ಶೇಖ್ ಹಸೀನಾಗೆ ಮತ್ತೆ 5 ವರ್ಷ ಜೈಲು ಶಿಕ್ಷೆ Read More

ಶೇಖ್‌ ಹಸೀನಾ ಅವರಿಗೆ ಗಲ್ಲು ಶಿಕ್ಷೆ ವಿಧಿಸಿದ ಕೋರ್ಟ್

ಢಾಕಾ: ಮಾನವ ಹಕ್ಕು ಉಲ್ಲಂಘನೆ ಪ್ರಕರಣದಲ್ಲಿ ಪದಚ್ಯುತ ಪ್ರಧಾನಿ ಶೇಖ್‌ ಹಸೀನಾ ಅವರಿಗೆ ಬಾಂಗ್ಲಾದೇಶದ ಅಂತರರಾಷ್ಟ್ರೀಯ ಅಪರಾಧ ನ್ಯಾಯಮಂಡಳಿ ಗಲ್ಲು ಶಿಕ್ಷಿ ವಿಧಿಸಿದೆ.

ತ್ರಿಸದಸ್ಯ ನ್ಯಾಯಪೀಠವು ಶೇಖ್‌ ಹಸೀನಾ ಅವರ ಮೇಲಿರುವ ಆರೋಪ ಸಾಬೀತಾಗಿದೆ ಎಂದು ಹೇಳಿ ಗಲ್ಲು ಶಿಕ್ಷೆ ವಿಧಿಸಿ ತೀರ್ಪು ಪ್ರಕಟಿಸಿದೆ.

ಶೇಖ್ ಹಸೀನಾ ಮಾನವ ಹಕ್ಕುಗಳ ಅಪರಾಧ ಎಸಗಿದ್ದಾರೆ. 2024ರ ಆಗಸ್ಟ್ 5 ರಂದು ಚಂಖರ್‌ಪುಲ್‌ನಲ್ಲಿ ಆರು ಪ್ರತಿಭಟನಾಕಾರರನ್ನು ಮಾರಕ ಆಯುಧಗಳನ್ನು ಬಳಸಿ ಕೊಲ್ಲಲಾಯಿತು. ಈ ಆದೇಶಗಳನ್ನು ಹೊರಡಿಸಿ ಶೇಖ್ ಹಸೀನಾ ಮೂಲಕ ವಿದ್ಯಾರ್ಥಿಗಳನ್ನು ಹತ್ಯೆ ಮಾಡಿಸಲಾಗಿದೆ, ಇಂತಹ ಕೃತ್ಯಗಳನ್ನು ಎಸಗುವ ಮೂಲಕ ಮಾನವೀಯತೆಯ ವಿರುದ್ಧ ಅಪರಾಧಗಳನ್ನು ಮಾಡಿದ್ದಾರೆ ಎಂದು ಕೋರ್ಟ್‌ ಹೇಳಿದೆ.

ಹಸೀನಾ ಅವರ ಆಪ್ತರಾಗಿದ್ದ ಮಾಜಿ ಗೃಹ ಸಚಿವ ಅಸಾದುಜ್ಜಮಾನ್ ಖಾನ್ ಕಮಲ್ ಮತ್ತು ಮಾಜಿ ಪೊಲೀಸ್ ಇನ್ಸ್‌ಪೆಕ್ಟರ್ ಜನರಲ್ ಚೌಧರಿ ಅಬ್ದುಲ್ಲಾ ಅಲ್-ಮಾಮುನ್ ಅವರನ್ನೂ ಕೋರ್ಟ್‌ ದೋಷಿ ಎಂದು ಹೇಳಿದೆ.

ಹಸೀನಾ ಮತ್ತು ಖಾನ್‌ ವಿಚಾರಣೆಗೆ ಹಾಜರಾಗದ ಕಾರಣ 54 ಸಾಕ್ಷ್ಯಗಳನ್ನು ಪರಿಶೀಲಿಸಿ, ಆರೋಪಿಗಳ ಅನುಪಸ್ಥಿತಿಯಲ್ಲೇ ಅಕ್ಟೋಬರ್‌ 23ರಂದು ವಿಚಾರಣೆ ಪೂರ್ಣಗೊಳಿಸಲಾಗಿತ್ತು. ಆರೋಪಿಗಳಿಗೆ ಮರಣ ದಂಡನೆಯನ್ನೇ ವಿಧಿಸಬೇಕು ಎಂದು ನ್ಯಾಯ ಮಂಡಳಿಯ ವಕೀಲರು ವಾದ ಮಂಡಿಸಿದ್ದರು.

ಸರ್ಕಾರದ ಪತನಕ್ಕೆ ಕಾರಣವಾದ ವಿದ್ಯಾರ್ಥಿಗಳ ಪ್ರತಿಭಟನೆಯನ್ನು ನಿಯಂತ್ರಿಸಲು ಮಾರಣಾಂತಿಕ ದಾಳಿ ನಡೆಸಿದ ಆರೋಪಕ್ಕೆ ಹಸೀನಾ ಒಳಗಾಗಿದ್ದಾರೆ

ಶೇಖ್‌ ಹಸೀನಾ ಅವರಿಗೆ ಗಲ್ಲು ಶಿಕ್ಷೆ ವಿಧಿಸಿದ ಕೋರ್ಟ್ Read More

ಬಾಂಗ್ಲಾದೇಶ ಮುಖ್ಯ ಸಲಹೆಗಾರ ಮೊಹಮ್ಮದ್ ಯೂನುಸ್ ಭೇಟಿಯಾದ ಮೋದಿ

ಬ್ಯಾಂಕಾಕ್,ಏ.4: ಬಾಂಗ್ಲಾದೇಶ ಮಧ್ಯಂತರ ಸರ್ಕಾರದ ಮುಖ್ಯ ಸಲಹೆಗಾರ ಮೊಹಮ್ಮದ್ ಯೂನುಸ್ ಅವರನ್ನು
ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು
ಭೇಟಿ ಮಾಡಿದ್ದಾರೆ.

ಮೊಹಮ್ಮದ್ ಯೂನುಸ್ ಅವರನ್ನು ಬ್ಯಾಂಕಾಕ್ ನಲ್ಲಿ ಭೇಟಿ ಮಾಡಿದ್ದಾರೆ.

ಕಳೆದ ವರ್ಷ ಆಗಸ್ಟ್ ತಿಂಗಳಲ್ಲಿ ಶೇಖ್ ಹಸೀನಾ ಅವರು ಪ್ರಧಾನಿ ಹುದ್ದೆಯಿಂದ ಪದಚ್ಯುತಗೊಂಡ ನಂತರ ಇದು ಮೊದಲ ಭೇಟಿ ಆಗಿದೆ.

ಬಂಗಾಳ ಕೊಲ್ಲಿ ಬಹು-ವಲಯ ಮತ್ತು ತಾಂತ್ರಿಕ ಸಹಕಾರ ಗುಂಪಿನ ನಾಯಕರ ಶೃಂಗಸಭೆಯ ಹೊರಗೆ ಉಭಯ ನಾಯಕರು ಭೇಟಿ ಮಾಡಿದ್ದಾರೆ. ವಿದೇಶಾಂಗ ಸಚಿವ ಎಸ್. ಜೈಶಂಕರ್ ಮತ್ತು ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಕೂಡ ಸಭೆಯಲ್ಲಿ ಉಪಸ್ಥಿತರಿದ್ದರು.

ಮುಂಬರುವ BIMSTEC ಶೃಂಗಸಭೆಯ ಆತಿಥ್ಯವನ್ನು ಬಾಂಗ್ಲಾದೇಶ ವಹಿಸಲಿದೆ. ಕಳೆದ ವರ್ಷ ಆಗಸ್ಟ್ ತಿಂಗಳಲ್ಲಿ ಶೇಖ್ ಹಸೀನಾ ಅವರನ್ನು ಪ್ರಧಾನಿ ಸ್ಥಾನದಿಂದ ಪದಚ್ಯುತಗೊಳಿಸಿದ ನಂತರ ಮೊಹಮ್ಮದ್ ಯೂನುಸ್ ನೇತೃತ್ವದ ಮಧ್ಯಂತರ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ, ಹಿಂದೂಗಳನ್ನು ಗುರಿಯಾಗಿಸಿಕೊಂಡು ನಡೆಯುತ್ತಿರುವ ಹಿಂಸಾಚಾರ ಮತ್ತು ಅಲ್ಲಿ ಕಟ್ಟಾ ಇಸ್ಲಾಮಿಕ್ ಶಕ್ತಿಗಳ ಬಲವರ್ಧನೆ ಬಗ್ಗೆ ಭಾರತದ ಆತಂಕ ನಡುವೆ ಉಭಯ ದೇಶಗಳ ಸಂಬಂಧ ಕುಸಿದಿದೆ.

ಇದೀಗ ಮೊಹಮ್ಮದ್ ಯೂನುಸ್ ಅವರನ್ನು ಪ್ರಧಾನಿ ಭೇಟಿಯಾಗಿದ್ದಾರೆ ಇನ್ನು ಮುಂದೆ ಏನು ಹೇಗೆ ಎಂಬುದನ್ನು ಕಾದು ನೋಡಬೇಕಿದೆ.

ಬಾಂಗ್ಲಾದೇಶ ಮುಖ್ಯ ಸಲಹೆಗಾರ ಮೊಹಮ್ಮದ್ ಯೂನುಸ್ ಭೇಟಿಯಾದ ಮೋದಿ Read More

ಬಾಂಗ್ಲಾ ಹಿಂದೂಗಳ ರಕ್ಷಣೆ ಮಾಡಿ ಮೋದಿಯವರಿಗೆ ರವಿ ಮಂಚೇಗೌಡನ ಕೊಪ್ಪಲು ಆಗ್ರಹ

ಮೈಸೂರು: ನೆರೆಯ ಬಾಂಗ್ಲಾದೇಶದಲ್ಲಿ ಅಲ್ಪ ಸಂಖ್ಯಾತ ಹಿಂದೂಗಳ ಮೇಲೆ ನಡೆದ ದೌರ್ಜನ್ಯ ಖಂಡನಾರ್ಹ ಎಂದು ಇಂದಿರಾಗಾಂಧಿ ಬ್ಲಾಕ್ ಅಧ್ಯಕ್ಷ ರವಿ ಮಂಚೇಗೌಡನ ಕೊಪ್ಪಲು ಹೇಳಿದ್ದಾರೆ.

ಕೂಡಲೆ ಪ್ರಧಾನಿ ಮೋದಿಯವರು ಮಧ್ಯಪ್ರವೇಶಿಸಿ ಬಾಂಗ್ಲಾ ಸರ್ಕಾರ ದೊಂದಿಗೆ
ಮಾತುಕತೆ ನಡೆಸಿ,ಹಿಂದೂಗಳು ಹಾಗೂ ಇತರೆ ಅಲ್ಪ ಸಂಖ್ಯಾತರ ರಕ್ಷಣೆ ಮಾಡಬೇಕೆಂದು ರವಿ ಆಗ್ರಹಿಸಿದ್ದಾರೆ.

1971ರಲ್ಲಿ ನಡೆದ ಯುದ್ಧದಲ್ಲಿ ಅಂದಿನ ಪ್ರಧಾನಿ ಇಂದಿರಾಗಾಂಧಿಯವರ ದಿಟ್ಟ ನಿರ್ಧಾರದಿಂದ ಪಾಕಿಸ್ತಾನದ ವಿರುದ್ಧ ಯುದ್ಧದಲ್ಲಿ ಗೆದ್ದು ಬಾಂಗ್ಲಾದೇಶದ ಸ್ವಾತಂತ್ರ್ಯಕ್ಕೆ ಕಾರಣವಾದರು.

ಅಲ್ಲದೇ, ಬಾಂಗ್ಲಾದೇಶ ಕೂಡಾ ಒಂದು ಜಾತ್ಯತೀತ ರಾಷ್ಟ್ರವಾಗಿ ಉದಯವಾಯಿತು. ಎಲ್ಲಾ ಧರ್ಮಿಯರನ್ನು ರಕ್ಷಣೆ ಮಾಡುವುದು ಅಲ್ಲಿನ ಆಡಳಿತದ ಆದ್ಯ ಕರ್ತವ್ಯ,ಆದರೆ ಅಲ್ಲಿನ ಸರ್ಕಾರ ತನ್ನ ಕರ್ತವ್ಯವನ್ನು ಸರಿಯಾಗಿ ನಿರ್ವಹಿಸುತ್ತಿಲ್ಲ ಎಂದು ಆರೋಪಿಸಿದರು.

ಪ್ರಧಾನಿ ಮೋದಿಯವರು ಕೂಡಲೇ ಮಧ್ಯಪ್ರವೇಶಿಸಿ ನೆರೆ ರಾಷ್ಟ್ರದ ಪ್ರಧಾನಿ ಜೊತೆ ಮಾತುಕತೆ ನಡೆಸಿ, ಹಿಂದಿನ ಭಾರತದ ಸಹಾಯವನ್ನು ನೆನಪಿಸಿ ಕೊಟ್ಟು ಅಲ್ಲಿರುವ ಹಿಂದೂಗಳ ರಕ್ಷಣೆಗೆ ಕ್ರಮ ಕೈಗೊಳ್ಳುವಂತೆ ತಾಕೀತು ಮಾಡಬೇಕು, ಅವಶ್ಯಬಿದ್ದರೆ ಸೈನ್ಯದ ನೆರವನ್ನು ನೀಡಲು ಹಿಂಜರಿಯಬಾರದು ಎಂದು ರವಿ ಮಂಚೇಗೌಡನ ಕೊಪ್ಪಲು
ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಬಾಂಗ್ಲಾ ಹಿಂದೂಗಳ ರಕ್ಷಣೆ ಮಾಡಿ ಮೋದಿಯವರಿಗೆ ರವಿ ಮಂಚೇಗೌಡನ ಕೊಪ್ಪಲು ಆಗ್ರಹ Read More

ಹಿಂದೂಗಳ ಮೇಲಿನ ದೌರ್ಜನ್ಯ ಖಂಡಿಸಿ ಮಂಡ್ಯಾದಲ್ಲಿ ಪ್ರತಿಭಟನೆ

ಮಂಡ್ಯ: ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ನಡೆಯುತ್ತಿರುವ ದೌರ್ಜನ್ಯವನ್ನು ಖಂಡಿಸಿ,ಮಂಡ್ಯ ಜಿಲ್ಲಾಧಿಕಾರಿ ಕಚೇರಿ ಮುಂದೆ ಹಿಂದೂ ಪರ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸಿದವು.

ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ದೌರ್ಜನ್ಯ ಖಂಡಿಸಿ ಮಂಡ್ಯದಲ್ಲಿ ಬಜರಂಗದಳ ಹಾಗೂ ವಿಶ್ವ ಹಿಂದು ಪರಿಷತ್ ಸದಸ್ಯರು ಪ್ರತಿಭಟನೆ ನಡೆಸಿ, ಜೈಶ್ರೀರಾಮ್, ನಾವೆಲ್ಲ ಹಿಂದೂ ನಾವೆಲ್ಲರೂ ಒಂದು ಎಂಬ ಘೋಷಣೆ ಕೂಗಿದರು‌.

ಬಾಂಗ್ಲಾದೇಶದಲ್ಲಿ ನಿರಂತರವಾಗಿ ಹಿಂದೂಗಳ ಮೇಲೆ ದೌರ್ಜನ್ಯ ನಡೆಯುತ್ತಿದೆ. ಇಸ್ಲಾಂ ಧರ್ಮಕ್ಕೆ ಮತಾಂತರ ಮಾಡಲಾಗುತ್ತಿದೆ, ಹೆಣ್ಣು ಮಕ್ಕಳ ಮೇಲೆ ದೌರ್ಜನ್ಯ ಹೆಚ್ಚಾಗಿದೆ, ಅಲ್ಲಿನ ಸರ್ಕಾರ ಹಿಂದೂಗಳಿಗೆ ರಕ್ಷಣೆ ಕೊಡದೆ ನಿರ್ಲಕ್ಷ್ಯ ತೋರಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ದೌರ್ಜನ್ಯ ನಡೆಸಿದ ಮುಸ್ಲಿಂರ ವಿರುದ್ಧ ಕ್ರಮ ತೆಗೆದುಕೊಂಡು, ತಕ್ಷಣವೇ ಹಿಂದೂಗಳಿಗೆ ರಕ್ಷಣೆ ಕೊಡಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಈ ಜಿಹಾದಿ ಮನೋಭಾವ ಉಳ್ಳ ಧರ್ಮಿಯರು ಕೊರೋನಾದಂತಹ ಸಂದರ್ಭದಲ್ಲಿ ಜಾತಿ ಧರ್ಮ ಭೇದ ಭಾವವನ್ನೆಲ್ಲ ಮರೆತು ಆಶ್ರಯವನ್ನು ನೀಡಿದ ಇಸ್ಕಾನ್ ಸೇವೆಯನ್ನು ಮರೆತು ಸ್ವಾಮಿಯನ್ನು ಬಂಧಿಸಿ ಹಿಂದುಗಳ ಮೇಲೆ ದೌರ್ಜನ್ಯ ಮಾಡಿದ್ದಾರೆ ಎಂದು ಕಿಡಿಕಾರಿದರು.

ಅಲ್ಲಿನ ಸರ್ಕಾರ ಹಿಂದುಗಳ ವಿರುದ್ಧವಾಗಿ ನಿಂತಿದೆ ಇದನ್ನೆಲ್ಲಾ ನಾವು ಸಹಿಸಿಕೊಂಡು ಕುಳಿತರೆ ನಮ್ಮ ಸಮಾಜ, ನಮ್ಮ ಧರ್ಮವನ್ನ ಉಳಿಸಲು ಯಾರಿಂದಲೂ ಸಾಧ್ಯವಿಲ್ಲ ಆದಕಾರಣ ನಾವು ಒಗ್ಗಟ್ಟಾಗಿ ನಮ್ಮ ಧರ್ಮವನ್ನ ನಾವು ಸಂರಕ್ಷಿಸಬೇಕು ಎಂದು ಸಂಘಟನೆಗಳು ಕರೆ ನೀಡಿದವು.

ಹಿಂದೂಗಳ ಮೇಲಿನ ದೌರ್ಜನ್ಯ ಖಂಡಿಸಿ ಮಂಡ್ಯಾದಲ್ಲಿ ಪ್ರತಿಭಟನೆ Read More

ಹಿಂದೂಗಳಿಗೆ ಕಿರುಕುಳ:ಬಾಂಗ್ಲಾ ವಿರುದ್ಧ ವಿಶ್ವ ಹಿಂದೂ ಪರಿಷತ್ ಪ್ರತಿಭಟನೆ

ಮೈಸೂರು: ಹಿಂದೂಗಳೂ ಸೇರಿದಂತೆ ಇತರೆ ಅಲ್ಪ‌ ಸಂಖ್ಯಾತರಿಗೆ ಕಿರುಕುಳ‌ ನೀಡುತ್ತಿರುವ ಬಾಂಗ್ಲಾದೇಶದ ವಿರುದ್ಧ ವಿಶ್ವ ಹಿಂದೂ ಪರಿಷತ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.

ಮೈಸೂರಿನ ಸಿದ್ದಾರ್ಥ ನಗರದಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ವಿಶ್ವ ಹಿಂದೂ ಪರಿಷತ್ ಮೈಸೂರು ನಗರ ಜಿಲ್ಲಾ ಘಟಕ ವತಿಯಿಂದ ಬಾಂಗ್ಲಾದೇಶ ವಿರುದ್ಧ ಪ್ರತಿಭಟಿಸಿ ನಂತರ ಜಿಲ್ಲಾಧಿಕಾರಿಗಳ
ಮೂಲಕ ರಾಷ್ಟ್ರಪತಿಗಳಿಗೆ ಬಾಂಗ್ಲಾದೇಶದ ಹಿಂದುಗಳಿಗೆ ರಕ್ಷಣೆ ನೀಡುವಂತೆ ಹೊತ್ತಾಯಿಸಿ ಮನವಿ ಸಲ್ಲಿಸಲಾಯಿತು.

ಈ ವೇಳೆ‌ ಮಾತನಾಡಿದ ವಿಶ್ವ ಹಿಂದೂ ಪರಿಷತ್ ಜಿಲ್ಲಾಧ್ಯಕ್ಷ ಮಹೇಶ್ ಕಾಮತ್,
ಭಾರತದ ಹಿಂದೂಗಳು ಯಾವಾಗಲೂ ಶಾಂತಿ ಪ್ರೀಯರು ಮತ್ತು ಎಲ್ಲಾ ಧರ್ಮದ ಜನರ ಜೊತೆ ಹೊಂದಾಣಿಕೆಯಿಂದ ಬದುಕುವವರು ಎಂದು ಹೇಳಿದರು.

ಹಿಂದುಗಳು ಎಲ್ಲಾ ದರ್ಮೀಯರ ಜೊತೆ ಉತ್ತಮ ಸಾಮರಸ್ಯದ ಜೊತೆ ಶಾಂತಿಪ್ರಿಯರಾಗಿಯೇ ಇರಲು ಬಯಸುತ್ತಾರೆ,ಆದರೆ ಬಾಂಗ್ಲಾದೇಶದಲ್ಲಿ, ಇಸ್ಲಾಮಿಕ್ ಮೂಲಭೂತವಾದಿ ಜಿಹಾದಿ ಅಂಶಗಳಿಂದ ಹಿಂದೂಗಳು ಮತ್ತು ಇತರ ಅಲ್ಪಸಂಖ್ಯಾತರ ಮೇಲೆ ನಿರಂತರ ಕಿರುಕುಳ ನೀಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಹಿಂದೂ ದೇವಾಲಯಗಳು ಮತ್ತು ಪ್ರತಿಮೆಗಳನ್ನು ಅಪವಿತ್ರಗೊಳಿಸುವುದು ಮತ್ತು ಹಿಂದೂ ಆಸ್ತಿಗಳನ್ನ ಗುರಿಯಾಗಿಸಿ ನಾಶಮಾಡುವುದು ಈಗಲೂ ಮುಂದುವರೆದಿದೆ. ಅವರನ್ನು ತಡೆಯಲು ಸರಕಾರ ಯಾವುದೇ ಗಂಭೀರ ಪ್ರಯತ್ನ ಮಾಡುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ವಿಶ್ವ ಸಂಸ್ಥೆ ಮತ್ತು ಭಾರತ ಸರ್ಕಾರ ನಿರೀಕ್ಷೆಯಂತೆ ಯಾವುದೇ ಪರಿಣಾಮಕಾರಿ ಕ್ರಮ ಕೈಗೊಂಡಿಲ್ಲ. ಇದಕ್ಕೆ ವ್ಯತಿರಿಕ್ತವಾಗಿ ಭದ್ರತೆ ಮತ್ತು ಸಂಘಟನೆಗಾಗಿ ಹಿಂದೂ ಸಮಾಜವನ್ನು ಜಾಗೃತಗೊಳಿಸಿದ ನಾಯಕ ಚಿನ್ಮಯ್ ಕೃಷ್ಣ ದಾಸ್ ಪ್ರಭು ಅವರನ್ನು ಬಂಧಿಸಲಾಗಿದೆ ಮತ್ತು ಜಾಮೀನು ಸಹ ನಿರಾಕರಿಸಲಾಗಿದೆ ಎಂದು ಕಿಡಿಕಾರಿದರು.

ಯಾವುದೇ ಜಾತಿ,ಧರ್ಮ ನೋಡದೆ ಎಲ್ಲಾ ಜನರಿಗೆ ಉಚಿತ ಊಟ ಬಡಿಸುವ ಇಸ್ಕಾನ್ ಮೇಲೆ ತೆಗೆದುಕೊಂಡ ಕ್ರಮವನ್ನ ಮೈಸೂರು ವಿಶ್ವ ಹಿಂದೂ ಪರಿಷತ್ ತೀವ್ರವಾಗಿ ಖಂಡಿಸುತ್ತದೆ, ಈ ಕೂಡಲೇ ವಿಶ್ವ ಸಂಸ್ಥೆ ಮದ್ಯ ಪ್ರವೇಶಿಸಿ ಚಿನ್ಮಯ್ ಕೃಷ್ಣ ದಾಸ್ ಪ್ರಭು ಅವರನ್ನು ಬಿಡುಗಡೆ ಮಾಡಲು ಮತ್ತು ಹಿಂದುಗಳು ಹಾಗೂ ದೇವಸ್ಥಾನದ ಭದ್ರತೆಗೆ ಸಹಕರಿಸಬೇಕೆಂದು ಕೆ.ಮಹೇಶ ಕಾಮತ್ ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ವಿಶ್ವಹಿಂದೂ ಪರಿಷತ್ ಉಪಾದ್ಯಕ್ಷರಾದ ಅಂಬಿಕಾ , ಕಾರ್ಯದರ್ಶಿ
ಮದು ಶಂಕರ , ಮಮತಾ ಜೀ, ಬಾಜಪ ರಾಷ್ಟ್ರೀಯ ಸದಸ್ಯರಾದ ಸವಿತಾ ಘಾಟ್ಕೆ,
ಗೋಪಾಲ ಜೀ , ಶಿವಕುಮಾರ, ವಿಜಯೇಂದ್ರ , ರಾದಾಕ್ರಷ್ಣ ಜೀ ಆರ್,ಎಸ್. ಜಯಶ್ರೀ, ಜಿ ಚೇತನ, ಮಂಜುನಾಥ ಮತ್ತು ಹಿಂದು ಪರ ಸಂಘಟಣೆಯ ಸದಸ್ಯರು ಪಾಲ್ಗೊಂಡಿದ್ದರು.

ಹಿಂದೂಗಳಿಗೆ ಕಿರುಕುಳ:ಬಾಂಗ್ಲಾ ವಿರುದ್ಧ ವಿಶ್ವ ಹಿಂದೂ ಪರಿಷತ್ ಪ್ರತಿಭಟನೆ Read More