ಜನರಿಗೆ ಹೋಳಿಗೆ ವಿತರಿಸಿ ಕನಕ ಜಯಂತಿ

ಮೈಸೂರು: ಮೈಸೂರಿನಲ್ಲಿ ಕೆ ಆರ್ ಬ್ಯಾಂಕ್ ಅಧ್ಯಕ್ಷ ಬಸವರಾಜು ಬಸಪ್ಪ ಅವರ ನೇತೃತ್ವದಲ್ಲಿ ಸಾರ್ವ ಜನಿಕರಿಗೆ ಹೋಳಿಗೆ ಹಂಚುವ ಮೂಲಕ ಕನಕ ದಾಸರ ಜಯಂತಿಯನ್ನು ವಿಶೇಷವಾಗಿ ಆಚಾರಿಸಲಾಯಿತು.

ಕುಲ, ಜಾತಿ ,ಮತಗಳ ತಾರತಮ್ಯವನ್ನು ವಿರೋಧಿಸಿ ಸಮಾನತೆ ಸಾರಿದ ಕನಕದಾಸರ ಜಯಂತಿಯನ್ನು ಸಾರ್ವಜನಿಕರೊಂದಿಗೆ ಸೇರಿ ಆಚರಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ಸಂತ,ಕವಿ ಕನಕದಾಸರ ಭಾವಚಿತ್ರಕ್ಕೆ ದೀಪ ಬೆಳಗಿಸಿ ಪುಷ್ಪ ನಮನ ಸಲ್ಲಿಸಿ ಪೂಜೆ ಮಾಡಿ ನಂತರ ಸರ್ವಜನರಿಗೆ ಹೋಳಿಗೆ ವಿತರಲಿಸಲಾಯಿತು.

ಕನಕದಾಸರ ಜೀವನ ಮತ್ತು ಸಾಧನೆ, ಅವರ ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು, ಸಮಾಜದಲ್ಲಿ ಎಲ್ಲರೂ ಸಮಾನರು ಎಂಬುದನ್ನು ಮರೆಯಬಾರದು ಎಂದು ಬಸವರಾಜ್ ಬಸಪ್ಪ ತಿಳಿಸಿದರು.

ಕಾರ್ಯಕ್ರಮದಲ್ಲಿ ಬಸವರಾಜು ಬಸಪ್ಪ ಅವರಿಗೆ ಮಂಜೇಶ್, ವಿದ್ಯಾ ಮತ್ತಿತರರು ಸಾಥ್ ನೀಡಿದರು.

ಜನರಿಗೆ ಹೋಳಿಗೆ ವಿತರಿಸಿ ಕನಕ ಜಯಂತಿ Read More

ಸಿದ್ದರಾಮಯ್ಯ ಅನ್ನಭಾಗ್ಯದ ಬದಲು ಕನ್ನಭಾಗ್ಯ ಕೊಟ್ಟಿದ್ದಾರೆ:ಅಶೋಕ್

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅನ್ನಭಾಗ್ಯ ಎಂದು ಹೇಳಿ ಕನ್ನಭಾಗ್ಯ ಕೊಟ್ಟಿದ್ದಾರೆ, ಅನ್ನವನ್ನು ಕದ್ದು ಲಕ್ಷಾಂತರ ಜನರಿಗೆ ಅನ್ಯಾಯ ಮಾಡಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಟೀಕಾಪ್ರಹಾರ ನಡೆಸಿದರು.

ಬೆಂಗಳೂರಿನ ಜಯನಗರದ ಅರಸು ಕಾಲೋನಿಯಲ್ಲಿ ರೇಷನ್‌ ಕಾರ್ಡ್‌ ರದ್ದುಗೊಂಡ ಕುಟುಂಬದವರನ್ನು ಭೇಟಿ ಮಾಡಿದ ನಂತರ ಮಾತನಾಡಿದ ಅಶೋಕ್,
ಸದನ ಆರಂಭವಾಗುವ ಮುನ್ನ ಜನರಿಗೆ ರೇಷನ್‌ ಕಾರ್ಡ್‌ ವಾಪಸ್‌ ನೀಡಬೇಕು. ಇಲ್ಲದಿದ್ದರೆ ತೀವ್ರ ಹೋರಾಟ ಮಾಡಿ ವಿಧಾನಸೌಧಕ್ಕೆ ಬೀಗ ಹಾಕುತ್ತೇವೆ ಎಂದು ಎಚ್ಚರಿಸಿದರು.

ಅರಸು ಕಾಲೋನಿಯಲ್ಲಿ 45 ವರ್ಷದಿಂದ ರೇಷನ್‌ ಕಾರ್ಡ್‌ ಹೊಂದಿದ್ದ ವೃದ್ಧೆ, ಈಗ ಅರ್ಹತೆ ಕಳೆದುಕೊಂಡಿದ್ದಾರೆ. ಅಂಕಿ ಅಂಶದ ಪ್ರಕಾರ, 250 ಸರ್ಕಾರಿ ನೌಕರರ ಬಳಿ ರೇಷನ್‌ ಕಾರ್ಡ್‌ ಇದ್ದರೂ, 12 ಲಕ್ಷ ಜನರ ಕಾರ್ಡ್‌ ರದ್ದು ಮಾಡಲು ಸರ್ಕಾರ ಮುಂದಾಗಿದೆ. ಏನೂ ಭಯ ಬೇಡವೆಂದು ಸಿಎಂ ಸಿದ್ದರಾಮಯ್ಯ ಹೇಳಿದರೆ, ಆಹಾರ ಸಚಿವರು ಮತ್ತೆ ಅರ್ಜಿ ಹಾಕಿ ಎಂದು ಹೇಳುತ್ತಾರೆ. ಕಾಂಗ್ರೆಸ್‌ ನಾಯಕರು ತಪ್ಪು ಮಾಡಿದ ಮೇಲೆ ಜನರು ಯಾಕೆ ಮರಳಿ ಅರ್ಜಿ ಹಾಕಬೇಕು ಎಂದು ಪ್ರಶ್ನಿಸಿದರು.

ಮರಳಿ ರೇಷನ್‌ ಕಾರ್ಡ್‌ಗೆ ಅರ್ಜಿ ಸಲ್ಲಿಸಿದರೆ ಒಂದು ಕಾರ್ಡ್‌ಗೆ 10-15 ಸಾವಿರ ರೂ. ಲಂಚ ನೀಡಬೇಕಾಗುತ್ತದೆ. ಯಾರೂ ಅರ್ಜಿ ಹಾಕಬಾರದು, ಸರ್ಕಾರವೇ ಮರಳಿ ರೇಷನ್‌ ಕಾರ್ಡ್‌ ಕೊಡಬೇಕು. ದೇವಸ್ಥಾನದ ಮುಂದೆ ಹೂ ಮಾರುವವರು, ಸೊಪ್ಪು ಮಾರುವವರ ರೇಷನ್‌ ಕಾರ್ಡ್‌ ರದ್ದುಪಡಿಸಲಾಗಿದೆ. ಇದರ ವಿರುದ್ಧ ಸದನದಲ್ಲಿ ಹಾಗೂ ಹೊರಗೆ ಪ್ರತಿಭಟಿಸಲಾಗುವುದು ಎಂದು ತಿಳಿಸಿದರು.

ಏಕಾಏಕಿ ರೇಷನ್‌ ಕಾರ್ಡ್‌ ರದ್ದು ಮಾಡಲು ಸರ್ಕಾರಕ್ಕೆ ಅಧಿಕಾರವಿಲ್ಲ. ಸರ್ಕಾರದ ಖಜಾನೆಯಲ್ಲಿ ಹಣ ಖಾಲಿಯಾಗಿದ್ದು, ರಸ್ತೆ ಗುಂಡಿ ಮುಚ್ಚಲು ಕೂಡ ಹಣವಿಲ್ಲ. 20-30 ಸಾವಿರ ಕೋಟಿ ರೂ ಉಳಿಸಿ, ಶಾಸಕರ ಬಂಡಾಯ ಶಮನಕ್ಕೆ ಬಳಸಲಾಗುತ್ತಿದೆ ಎಂದು ಅಶೋಕ್ ದೂರಿದರು.

ಸಚಿವರ ಮನೆ ಆಧುನೀಕರಣಕ್ಕೆ 40-50 ಕೋಟಿ ರೂ., ಸಿಎಂ ಮನೆ ನವೀಕರಣಕ್ಕೆ 2 ಕೋಟಿ ರೂ. ಖರ್ಚು ಮಾಡಲಾಗಿದೆ. ಆದರೆ ಬಡ ಜನರಿಗೆ ಅಕ್ಕಿ ಕೊಡಲು ಸರ್ಕಾರದ ಬಳಿ ಹಣವಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಮಾಜಿ ಸಿಎಂ ಹಾಗೂ ಸಂಸದ ಬಸವರಾಜ ಬೊಮ್ಮಾಯಿ, ಶಾಸಕ ಸಿ.ಕೆ.ರಾಮಮೂರ್ತಿ ಹಾಜರಿದ್ದರು.

ಸಿದ್ದರಾಮಯ್ಯ ಅನ್ನಭಾಗ್ಯದ ಬದಲು ಕನ್ನಭಾಗ್ಯ ಕೊಟ್ಟಿದ್ದಾರೆ:ಅಶೋಕ್ Read More

ಬಸವರಾಜ್ ಬಸಪ್ಪ ಅವರಿಗೆ ಕೆ ಎಂ ಪಿ ಕೆ ಟ್ರಸ್ಟ್ ನಿಂದ ಅಭಿನಂದನೆ

ಮೈಸೂರು: ಇತ್ತೀಚಿಗೆ ನಡೆದ ಕೆಆರ್ ಬ್ಯಾಂಕ್ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಆಯ್ಕೆಯಾದ ಬಸವರಾಜ್ ಬಸಪ್ಪ ಅವರಿಗೆ ಕೆಎಂಪಿಕೆ ಟ್ರಸ್ಟ್ ವತಿಯಿಂದ ಅಭಿನಂದನೆ ಸಲ್ಲಿಸಲಾಯಿತು.

ಚಾಮರಾಜಪುರಂನಲ್ಲಿರುವ ಕೆಎಂಪಿಕೆ ಟ್ರಸ್ಟ್ ಆವರಣದಲ್ಲಿ ಬಸವರಾಜ್ ಬಸಪ್ಪ ಅವರನ್ನು ಅಭಿನಂದಿಸಲಾಯಿತು

ಈ ಸಂದರ್ಭದಲ್ಲಿ ಕೆ ಎಂ ಪಿ ಕೆ ಟ್ರಸ್ಟ್ ಅಧ್ಯಕ್ಷ ವಿಕ್ರಮ ಅಯ್ಯಂಗಾರ್, ಅಜಯ್ ಶಾಸ್ತ್ರಿ, ರಾಜೇಶ್ ಪಳನಿ, ಜಿ ರಾಘವೇಂದ್ರ, ಎಸ್ ಎನ್ ರಾಜೇಶ್, ವಿನಯ್ ಕಣಗಾಲ್, ಶ್ರೀಕಾಂತ್ ಕಶ್ಯಪ್, ದೂರ ರಾಜಣ್ಣ, ಚಕ್ರಪಾಣಿ, ಶ್ರೀಕಾಂತ್ ಕಶ್ಯಪ್, ಮಂಜುನಾಥ್, ಸಚಿನ್ ನಾಯಕ್ ,ಶಿವು, ಸುಹಾಸ್, ರಾಕೇಶ್ ಮತ್ತಿತರರು ಹಾಜರಿದ್ದರು.

ಬಸವರಾಜ್ ಬಸಪ್ಪ ಅವರಿಗೆ ಕೆ ಎಂ ಪಿ ಕೆ ಟ್ರಸ್ಟ್ ನಿಂದ ಅಭಿನಂದನೆ Read More

ಕೆ ಆರ್ ಬ್ಯಾಂಕ್ ಅಧ್ಯಕ್ಷರಾಗಿ ಬಸವರಾಜ್ ಬಸಪ್ಪ,ಉಪಾಧ್ಯಕ್ಷರಾಗಿ ಸರ್ವಮಂಗಳ ಆಯ್ಕೆ

ಮೈಸೂರು: ಮೈಸೂರಿನ ಪ್ರತಿಷ್ಠಿತ ಶ್ರೀ ಕೃಷ್ಣ ರಾಜೇಂದ್ರ ಸಹಕಾರಿ ಬ್ಯಾಂಕ್ ನ ನೂತನ ಅಧ್ಯಕ್ಷರಾಗಿ ಬಸವರಾಜ್ ಬಸಪ್ಪ ಹಾಗೂ ಉಪಾಧ್ಯಕ್ಷರಾಗಿ ಎಚ್ ಎನ್ ಸರ್ವಮಂಗಳ ಆಯ್ಕೆಯಾಗಿದ್ದಾರೆ.

ಶ್ರೀ ಕೃಷ್ಣ ರಾಜೇಂದ್ರ ಸಹಕಾರಿ ಬ್ಯಾಂಕ್ 2024 -2029ನೇ ಸಾಲಿನ
ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಬುಧವಾರ ಅಗ್ರಹಾರದಲ್ಲಿರುವ ಬ್ಯಾಂಕ್ ನ ಕಚೇರಿಯಲ್ಲಿ ಸಂಘದ ರಿಟರ್ನಿಂಗ್ ಅಧಿಕಾರಿ ಬಿ ರಾಜು ಚುನಾವಣೆ ಪ್ರಕ್ರಿಯೆ ನಡೆಸಿದರು.

ಚುನಾವಣೆಯಲ್ಲಿ ಮಾಜಿ ಉಪಾಧ್ಯಕ್ಷರಾದ ಬಸವರಾಜ್ ಬಸಪ್ಪ ಅವರು ಅಧ್ಯಕ್ಷರಾಗಿಯೂ, ಮಾಜಿ ನಿರ್ದೇಶಕರಾದ ಎಚ್ ಎನ್ ಸರ್ವಮಂಗಳ ಅವರು ಉಪಾಧ್ಯಕ್ಷರಾಗಿ ಆಯ್ಕೆಯಾದರು.

ಈ ವೇಳೆ ಬ್ಯಾಂಕ್ ನಿರ್ದೇಶಕ ಹೆಚ್ ವಿ ಭಾಸ್ಕರ್, ನಗರ ಪಾಲಿಕೆ ಮಾಜಿ ಸದಸ್ಯರಾದ ಎಂ ಡಿ ಪಾರ್ಥಸಾರಥಿ (ಪಾತಿ), ಜಿ ಎಂ ಪಂಚಾಕ್ಷರಿ, ಟಿ ವಿ ಗಣೇಶ್ ಮೂರ್ತಿ ತಾಯೂರು, ಕೆಎಂಪಿ ಕೆ ಟ್ರಸ್ಟ್ ಅಧ್ಯಕ್ಷ ವಿಕ್ರಮ ಅಯ್ಯಂಗಾರ್, ಜಿ ರಾಘವೇಂದ್ರ, ಲೋಕೇಶ್ ಕುಮಾರ್,ಶಿವಮೂರ್ತಿ, ಮಲ್ಲೇಶ್, ಮಹಾನ್ ಶ್ರೇಯಸ್, ಮಂಜಪ್ಪ, ತೀರ್ಥ ಕುಮಾರ್, ಮಂಜುನಾಥ್ ಮತ್ತು ಬ್ಯಾಂಕ್ ಸಿಬ್ಬಂದಿ ಹಾಗೂ ಸ್ನೇಹಿತರು ಶುಭ ಕೋರಿದರು.

ಕೆ ಆರ್ ಬ್ಯಾಂಕ್ ಅಧ್ಯಕ್ಷರಾಗಿ ಬಸವರಾಜ್ ಬಸಪ್ಪ,ಉಪಾಧ್ಯಕ್ಷರಾಗಿ ಸರ್ವಮಂಗಳ ಆಯ್ಕೆ Read More