ರಾಜ್ಯ ಸರ್ಕಾರದ ವಿರುದ್ಧ ಸಿ.ಟಿ.ರವಿ ಕಿಡಿ

ಬೆಳಗಾವಿ: ಆಡಳಿತ ವ್ಯವಸ್ಥೆ ಭ್ರಷ್ಟತೆಯಿಂದ
ಕೂಡಿದರೆ ರಾಜ್ಯದ ಸರ್ವಾಂಗೀಣ ಅಭಿವೃದ್ಧಿ ನಿರೀಕ್ಷಿಸುವುದು ಅಸಾಧ್ಯ ಎಂದು ವಿಧಾನ ಪರಿಷತ್ತಿನ ಬಿಜೆಪಿ ಸದಸ್ಯ ಸಿ.ಟಿ.ರವಿ ರಾಜ್ಯ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.

ಶುಕ್ರವಾರ ಬೆಳಗಾವಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಳಗಾವಿ, ವಿಜಯಪುರ, ರಾಯಚೂರು, ಬೀದರ್, ಕಲಬುರಗಿಯಲ್ಲಿ ಸಾಕಷ್ಟು ಬೆಳೆ ಹಾನಿಯಾಗಿದೆ. ಅತಿವೃಷ್ಟಿಯಿಂದ ತೀವ್ರ ಸಂಕಷ್ಟಕ್ಕೆ‌ ರೈತರು ಸಿಲುಕಿದ್ದಾರೆ ಅವರ ನೆರವಿಗೆ ಬಾರದೆ‌ ಕಾಂಗ್ರೆಸ್ ಸರ್ಕಾರ ನಿರ್ಲಕ್ಷ ತಾಳಿದೆ ಎಂದು ಕಿಡಿಕಾರಿದರು.

ಬೆಳಗಾವಿ ಜಿಲ್ಲೆಯ ಜನಪ್ರತಿನಿಧಿಗಳಿಗೆ ಚುನಾವಣೆ ಪ್ರತಿಷ್ಠೆಯ ಮುಖ್ಯ ವಿಷಯವಾಗಿದೆ. ಜನರ ಸಂಕಷ್ಟ ಕೇಳಿ ಪರಿಹರಿಸುವ ಸಂವೇದನೆ ಆಡಳಿತ ಪಕ್ಷದ ಶಾಸಕ ಸಚಿವರಿಗೆ ಇಲ್ಲ. ಈಗಲಾದರೂ ಜಿಲ್ಲೆಯ ಸಚಿವರು ಸಂವೇದನೆ ತೋರಿಸಿ ರೈತರ ಸಹಾಯಕ್ಕೆ ಬರಬೇಕು ಎಂದು ಸಿ.ಟಿ.ರವಿ ಒತ್ತಾಯಿಸಿದರು.

ರಾಜ್ಯದಲ್ಲಿ ನಾನು ಮುಖ್ಯಮಂತ್ರಿ, ತಾನು ಮುಖ್ಯಮಂತ್ರಿ ಎಂಬ ಯುದ್ಧ ಶುರುವಾಗಿದೆ. ಯಾರು ಮುಖ್ಯಮಂತ್ರಿಯಾಗಿರುತ್ತಾರೊ ಅದು ಮುಖ್ಯವಲ್ಲ. ಜನ ಅಧಿಕಾರ ಕೊಟ್ಟಿದ್ದಾರೆ ಅವರ ಸಂಕಷ್ಟಕ್ಕೆ ಸ್ಪಂದಿಸಿ ಎಂದು ಆಗ್ರಹಿಸಿದರು.

ರಾಜ್ಯ ಸರ್ಕಾರದ ವಿರುದ್ಧ ಸಿ.ಟಿ.ರವಿ ಕಿಡಿ Read More

ಐಷಾರಾಮಿ ಬಸ್ ಉರುಳಿ ಇಬ್ಬರ ದುರ್ಮರಣ

ಬೆಳಗಾವಿ: ಚಾಲಕನ ಅಜಾಗರೂಕತೆಯಿಂದ ಬೆಳಗಾವಿ ಸಮೀಪದ ಹಿರೇಬಾಗೇವಾಡಿ ಘಾಟ್ ನಲ್ಲಿ ಖಾಸಗಿ ಐಷಾರಾಮಿ ‌ಬಸ್ ಉರುಳಿ ಬಿದ್ದು ಇಬ್ಬರು ಮೃತಪಟ್ಟ ಘಟನೆ ನಡೆದಿದೆ.

ಬುಧವಾರ ತಡ ರಾತ್ರಿ ಹುಬ್ಬಳ್ಳಿಯಿಂದ ಪುಣೆಗೆ ಹೊರಟಿದ್ದ ಗೋಗಟೆ ಸಂಸ್ಥೆಗೆ ಸೇರಿದ ಬಸ್ ಘಾಟಿಯಲ್ಲಿ ಉರುಳಿದೆ ಬಸ್ ನಲ್ಲಿ ಒಟ್ಟು 12 ಜನ ಪ್ರಯಾಣಿಕರಿದ್ದರು.
ಅಪಘಾತದಲ್ಲಿ ಒಬ್ಬರು ಮಹಿಳೆ ಹಾಗೂ ಪುರುಷ ಮೃತಪಟ್ಟಿದ್ದಾರೆ.‌

ಸ್ಥಳಕ್ಕೆ ಪೊಲೀಸ್ ಆಯುಕ್ತ ಭೂ಼ಷಣ ಬೊರಸೆ ಭೇಟಿ ನೀಡಿ ಮಾಹಿತಿ ಪಡೆದರು.

ಹಿರೇಬಾಗೇವಾಡಿ ಪೊಲೀಸ್ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು,ಸ್ಥಳೀಯರ ನೆರವಿನಲ್ಲಿ ಗಾಯಾಳುಗಳನ್ನು ಬೆಳಗಾವಿ ಬಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಐಷಾರಾಮಿ ಬಸ್ ಉರುಳಿ ಇಬ್ಬರ ದುರ್ಮರಣ Read More

ಪತ್ನಿ ಎದುರು ಕತ್ತು ಕುಯ್ದುಕೊಂಡು ಪತಿ ಆತ್ಮಹತ್ಯೆ

ಬೆಳಗಾವಿ: ಪತ್ನಿ ಹಾಗೂ ಅಳಿಯನ ಮುಂದೆಯೇ ಕತ್ತು ಕೊಯ್ದುಕೊಂಡು ಪತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಗಾವಿ ತಾಲೂಕಿನ ಹೊನ್ನಿಹಾಳ ಗ್ರಾಮದಲ್ಲಿ ನಡೆದಿದೆ.

ಮಲ್ಲಪ್ಪ ಕಟಬುಗೋಳ(34) ಆತ್ಮಹತ್ಯೆ ಮಾಡಿಕೊಂಡವ.

ನಿನ್ನೆಯಷ್ಟೇ ಮನೆಯಲ್ಲಿದ್ದ ಅಕ್ಕಿ ಮಾರಿ ಸಾರಾಯಿ ಕುಡಿದು ಬಂದು ಮಲ್ಲಪ್ಪ ಗಲಾಟೆ ಮಾಡಿದ್ದ,ಇಡೀ ರಾತ್ರಿ ಹೆಂಡತಿ ರೇಖಾ ಜೊತೆಗೆ ಗಲಾಟೆ ಮಾಡಿದ್ದಲ್ಲದೆ ಹಲ್ಲೆ ಕೂಡಾ ಮಾಡಿದ್ದ.

ರೇಖಾ ಸಹೋದರನನ್ನು ಕರೆಯಿಸಿ ಬುದ್ದಿ ಹೇಳಿದ್ದಳು.ಆಗ ರೇಖಾ ಸಹೋದರ ಮಲ್ಲಿಕಾರ್ಜುನ ಕಟ್ಟಿಗೆಯಿಂದ ಹಲ್ಲೆ ಮಾಡಲು ಯತ್ನಿಸಿದ್ದಾನೆ,
ನೀನು ಸತ್ತರೆ ಅಕ್ಕ ಚೆನ್ನಾಗಿ ಇರುತ್ತಾಳೆ ಎಂದು ಬೈದಿದ್ದಾನೆ.

ಆಗ ಮಲ್ಲಪ್ಪ ಕತ್ತು ಕೊಯ್ದುಕೊಂಡಿದ್ದಾನೆ ತೀವ್ರ ರಕ್ತಸ್ರಾವದಿಂದ ಆತ ಮೃತಪಟ್ಟಿದ್ದಾನೆ.

ಮಲ್ಲಪ್ಪ ಸಾಯುತ್ತಿದ್ದಂತೆ ಸ್ಥಳದಲ್ಲಿದ್ದ ಅಳಿಯ ಮಲ್ಲಿಕಾರ್ಜುನ ಓಡಿಹೋಗಿದ್ದಾನೆ.

ಸ್ಥಳಕ್ಕೆ ಮಾರಿಹಾಳ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆತ್ಮಹತ್ಯೆಗೆ ಪ್ರಚೋದನೆ ಕೇಸ್ ದಾಖಲಿಸಿಕೊಂಡು ಪೊಲೀಸರು ತನಿಖೆ ನಡೆಸಿದ್ದಾರೆ.

ಪತ್ನಿ ಎದುರು ಕತ್ತು ಕುಯ್ದುಕೊಂಡು ಪತಿ ಆತ್ಮಹತ್ಯೆ Read More

ಬೆಳಗಾವಿಯಲ್ಲಿ ಯೋಧನ ತಂದೆಯ ಬರ್ಬರ ಹತ್ಯೆ

ಬೆಳಗಾವಿ: ಹಳೆಯ ದ್ವೇಷದ ಹಿನ್ನೆಲೆಯಲ್ಲಿ ಯೋಧರೊಬ್ಬರ ತಂದೆಯನ್ನು ಭೀಕರವಾಗಿ ಹತ್ಯೆ‌ ಮಾಡಿರುವ ಘಟನೆ ಜಿಲ್ಲೆಯ ‌ಕಾಗವಾಡ ತಾಲೂಕಿನಲ್ಲಿ ನಡೆದಿದೆ.

ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಶೇಡಬಾಳದ ಕಬ್ಬಿನ ಗದ್ದೆಯಲ್ಲಿ ಬರ್ಬರವಾಗಿ ಕೊಲೆ ಮಾಡಲಾಗಿದೆ.

ಶೇಡಬಾಳ ಗ್ರಾಮದ ರಾವಸಾಹೇಬ್ ಪಾಟೀಲ್ ಅವರಿಗೆ ಸೇರಿದ ಕಬ್ಬಿನ ಗದ್ದೆಯಲ್ಲಿ ಕೊಲೆ ನಡೆದಿದ್ದು, ಅದೆ ಗ್ರಾಮದ ಶಶಿಕಾಂತ್ ಕೃಷ್ಣಾ ಹೊನಕಾಂಬಳೆ (55) ಕೊಲೆಯಾದವರು.

ಹಳೆಯ ದ್ವೇಷದ ಹಿನ್ನೆಲೆಯಲ್ಲಿ ಶಶಿಕಾಂತನನ್ನು ಕೊಲೆ ಮಾಡಲಾಗಿದೆ ಎಂದು ಶಶಿಕಾಂತ್ ಅವರ ಪುತ್ರ ರಾಹುಲ್‌ ಶಂಕೆ ವ್ಯಕ್ತಪಡಿಸಿದ್ದಾರೆ.

ಶಶಿಕಾಂತ ಅವರಿಗೆ ಇಬ್ಬರು ಪುತ್ರರು ಇದ್ದು, ಅದರಲ್ಲಿ ಒಬ್ಬರು ಯೋಧನಾಗಿದ್ದಾರೆ.

ತಂದೆಯ ಶವದ ಬಳಿ ಮಕ್ಕಳ ರೋಧನ ಮುಗಿಲು ಮುಟ್ಟಿತ್ತು. ಸ್ಥಳಕ್ಕೆ ಕಾಗವಾಡ ಮತ್ತು ಅಥಣಿ ಪೊಲೀಸರು ಭೇಟಿ ನೀಡಿ ಶ್ವಾನ ದಳದೊಂದಿಗೆ ಪರಿಶೀಲನೆ ನಡೆಸಿದ್ದಾರೆ.

ಬೆಳಗಾವಿಯಲ್ಲಿ ಯೋಧನ ತಂದೆಯ ಬರ್ಬರ ಹತ್ಯೆ Read More

ಬೆಳಗಾವಿಯಲ್ಲಿ ಒಂದೇ ಕುಟುಂಬದ ಮೂವರು ಆತ್ಮಹತ್ಯೆ: ಮತ್ತೊಬ್ಬರು ಸೀರಿಯಸ್

ಬೆಳಗಾವಿ: ಬೆಳಗಾವಿಯ ಜೋಷಿಮಾಳ್ ಎಂಬಲ್ಲಿ ವಿಷ ಸೇವಿಸಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನಿಸಿದ್ದು,ಮೂವರು ಮೃತಪಟ್ಟರೆ ಒಬ್ಬರ ಸ್ಥಿತಿ ಚಿಂತಾಜನಕವಾಗಿದೆ.

ಸಂತೋಷ ಕುರಡೇಕರ್,ಈತನ ತಂಗಿ ಸುವರ್ಣ ಕುರಡೇಕರ್ ಹಾಗೂ ತಾಯಿ ಮಂಗಳಾ ಕುರಡೇಕರ್ ಮೃತಪಟ್ಟಿದ್ದಾರೆ ಮತ್ತೊಬ್ಬ ತಂಗಿ ಸುನಂದಾ ಕುರಡೇಕರ್ ಸ್ಥಿತಿ ‌ಚಿಂತಾಜನಕ‌ವಾಗಿದೆ. ಸುನಂದಾ ಕುರಡೇಕರ್​ರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ರಾಜು ಕುಡತರ್ಕರ್ ಎಂಬಾತನ ಕಿರುಕುಳಕ್ಕೆ ಇಡೀ ಕುಟುಂಬ ಬಲಿಯಾಗಿದೆ,
ಚಿನ್ನ ತೆಗೆದುಕೊಂಡು ಹೋಗಿ ರಾಜು ಕುಡತರ್ಕರ್ ಎಂಬಾತ ಮೋಸ ಮಾಡಿದ್ದಾನೆಂದು ಸಂತೋಷ್ ಡೆತ್ ನೋಟ್ ಬರೆದಿದ್ದಾರೆ.

ಸಂತೋಷ್ ತಾಯಿ ಮತ್ತು ತಂಗಿಯರಿಗೆ ಎರಡು ಗಂಟೆಗಳ ಕಾಲ ಆತ್ಮಹತ್ಯೆ ಮಾಡಿಕೊಳ್ಳೋಣ ಸಾವೇ ತಮಗೆ ಕೊನೆಯ ದಾರಿ ಎಂಬುದಾಗಿ ಮನವರಿಕೆ ಮಾಡಿ ಬಳಿಕ ತಾನು ತಂದಿದ್ದ ವಿಷವನ್ನು ಕುಟುಂಬಸ್ಥರಿಗೆ ನೀಡಿ ತಾನೂ ಕುಡಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಶಹಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಪೊಲೀಸ್ ಆಯುಕ್ತ ಭೂಷಣ್ ಗುಲಾಬ್ ರಾವ್ ಬೊರಸೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಬೆಳಗಾವಿಯಲ್ಲಿ ಒಂದೇ ಕುಟುಂಬದ ಮೂವರು ಆತ್ಮಹತ್ಯೆ: ಮತ್ತೊಬ್ಬರು ಸೀರಿಯಸ್ Read More

ಗುಂಡು ಹಾರಿಸಿ ಬರ್ತಡೆ ಸೆಲೆಬ್ರೇಟ್!ಗ್ರಾಪಂ ಸದಸ್ಯ ಅರೆಸ್ಟ್

ಬೆಳಗಾವಿ: ಗ್ರಾಮ ಪಂಚಾಯಿತಿ ಸದಸ್ಯನೊಬ್ಬ ಸಾರ್ವಜನಿಕವಾಗಿ
ಗಾಳಿಯಲ್ಲಿ ಗುಂಡು ಹಾರಿಸಿ, ಚಾಕು ತೋರಿಸಿ ಹುಟ್ಟುಹಬ್ಬ ಆಚರಣೆ ಮಾಡಿಕೊಂಡು ಈಗ ಕಂಬಿ ಎಣಿಸುವಂತಾಗಿದೆ.

ಬೆಳಗಾವಿ ಜಿಲ್ಲೆ ರಾಯಬಾಗ ತಾಲೂಕು ಕುಡುಚಿ ಪಟ್ಟಣದ ಗ್ರಾಮೀಣ ಗ್ರಾಮ ಪಂಚಾಯತ್ ಸದಸ್ಯ ಈ ರೀತಿ ಗೂಂಡಾ ವರ್ತನೆ ತೋರಿದ್ದು ಅರೆಸ್ಟ್ ಆಗಿದ್ದಾರೆ.

ಆತ ಆಚರಿಸಿಕೊಂಡ ಹುಟ್ಟುಹಬ್ಬದ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಬಾಬಾಜಾನ್ ಖಾಲಿಮುಂಡಾಸೈ ಎಂಬಾತ ನಡುರಸ್ತೆಯಲ್ಲಿ ಗಾಳಿಯಲ್ಲಿ ಗುಂಡು ಹೊಡೆದು, ಕೈಯಲ್ಲಿ ಚಾಕು ಹಿಡಿದು ಗೂಂಡಾ ವರ್ತನೆ ತೋರಿ ಹುಟ್ಟುಹಬ್ಬ ಸಂಭ್ರಮಾಚರಣೆ ಮಾಡಿದ್ದಾನೆ.

ಪೊಲೀಸ್ ಠಾಣೆ ಕೂಗಳತೆ ದೂರದಲ್ಲೇ ಇದ್ದರೂ ಯಾವುದೇ ಭಯವಿಲ್ಲದೇ ಈತ ಹುಚ್ಚಾಟ ಮೆರೆದಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ವೈರಲ್ ಆದ ನಂತರ ಎಚ್ಚೆತ್ತ ಸ್ಥಳೀಯ ಪೊಲೀಸರು ಬಾಬುಜಾನ್ ನನ್ನು ಬಂಧಿಸಿದ್ದಾರೆ,ಕುಡುಚಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಗುಂಡು ಹಾರಿಸಿ ಬರ್ತಡೆ ಸೆಲೆಬ್ರೇಟ್!ಗ್ರಾಪಂ ಸದಸ್ಯ ಅರೆಸ್ಟ್ Read More

ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಲೋಕಾ ದಾಳಿ

ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ಭ್ರಷ್ಟರಿಗೆ ಬೆಳ್ಳಂಬೆಳಿಗ್ಗೆ ಚಳಿ ಬಿಡಿಸಿದ್ದಾರೆ.

ಬೆಂಗಳೂರು, ಚಿಕ್ಕಮಗಳೂರು,ಶಿವಮೊಗ್ಗ,
ಬೆಳಗಾವಿ ಜಿಲ್ಲೆಗಳಲ್ಲಿ ಲೋಕಾಯುಕ್ತರು ದಾಳಿ ನಡೆಸಿ ಮಹತ್ವದ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ,ದಾಳಿ ವೇಳೆ ಸಿಕ್ಕ ಹಣ,ಚಿನ್ನಾಭರಣವನ್ನು ವಶಕ್ಕೆ ಪಡೆದಿದ್ದಾರೆ.‌

ಚಿಕ್ಕಮಗಳೂರು ನಗರಸಭೆ ನಗರಸಭೆ ಲೆಕ್ಕಾಧಿಕಾರಿ ಲತಾಮಣಿ ನಿವಾಸದ ಮೇಲೆ ದಾಳಿ ನಡೆಸಿದ್ದು ದಾಖಲೆಗಳನ್ನು ಪರಿಶೀಲಿಸಲಾಗುತ್ತಿದೆ.

ಚಿಕ್ಕಮಗಳೂರು ನಗರದ ಜಯನಗರದಲ್ಲಿ ಲತಾಮಣಿ ಮನೆ ಇದ್ದು ಅವರ ಪತಿ ಚಂದ್ರಶೇಖರ್ ನಿರ್ಮಿತಿ ಕೇಂದ್ರದ ಇಂಜಿನಿಯರ್ ಆಗಿದ್ದಾರೆ.
ಎರಡು ತಂಡಗಳು ದಾಖಲೆ ಪರಿಶೀಲನೆ ಮಾಡುವ ಕಾರ್ಯದಲ್ಲಿ ತೊಡಗಿದೆ.

ಬಿಬಿಎಂಪಿ ಎಕ್ಸಿಕ್ಯೂಟಿವ್ ಇಂಜಿನಿಯರ್ ಪ್ರಕಾಶ್ ಮನೆ ಮೇಲೆ ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸಲಾಗುತ್ತಿದೆ. ಒಟ್ಟು ಐದು ಕಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಗೋವಿಂದರಾಜನಗರ ವಿಭಾಗದ ಎಕ್ಸಿಕ್ಯೂಟಿವ್ ಇಂಜಿನಿಯರ್ ಪ್ರಕಾಶ್ ಅವರ ನಾಗರಬಾವಿ, ಗೋವಿಂದರಾಜನಗರ, ಯಲಹಂಕದಲ್ಲಿ ದಾಳಿ ನಡೆಸಲಾಗಿದೆ

ಬೆಳಗಾವಿಯಲ್ಲಿ ಇಂಜಿನಿಯರ ಮನೆ ಮೇಲೆ ಲೋಕಾಯುಕ್ತರು ದಾಳಿ ಮಾಡಿದ್ದಾರೆ.

ಕರ್ನಾಟಕ ನೀರಾವರಿ ನಿಗಮದ ಮುಖ್ಯ ಇಂಜಿನಿಯರ್ ಮನೆ ಮೇಲೆ ಲೋಕಾ ದಾಳಿಯಾಗಿದ್ದು,ವಜ್ರಾಭರಣ, ಚಿನ್ನಾಭರಣ, ಬೆಳ್ಳಿ ವಸ್ತುಗಳು ಮತ್ತು ಒಂದೂವರೆ ಲಕ್ಷ ನಗದು ಸಿಕ್ಕಿದೆ.

ಕೆಎ‌ನ್‌ಎನ್ಎಲ್ ಧಾರವಾಡ ವಿಭಾಗದ
ಮುಖ್ಯ ಇಂಜಿನಿಯರ್ ಅಶೋಕ ವಾಸನದ್ ಅವರ ಬೆಳಗಾವಿಯ ರಾಮತೀರ್ಥ‌ ನಗರದಲ್ಲಿರುವ ಮನೆ ಹಾಗೂ ಧಾರವಾಡ ಕಚೇರಿ ಮೇಲೆ‌ ಏಕಕಾಲಕ್ಕೆ ದಾಳಿ ಮಾಡಿ ದಾಖಲೆಗಳನ್ನು ಅಧಿಕಾರಿಗಳು ಪರಿಶೀಲಿಸುತ್ತಿದ್ದಾರೆ.

ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಲೋಕಾ ದಾಳಿ Read More

ಆರೋಗ್ಯಕರ ಜೀವನಕ್ಕೆ ಯೋಗ ಸಹಕಾರಿ: ಜಗದೀಶ್ ಶೆಟ್ಟರ್

ಬೆಳಗಾವಿ: ಯೋಗ ಅಭ್ಯಾಸ ಸಾವಿರಾರು ವರ್ಷಗಳಿಂದ ಪಾಲಿಸುತ್ತಿರುವ ಆರೋಗ್ಯ ಸುಧಾರಣಾ ಕ್ರಮವಾಗಿದೆ ಎಂದು ಸಂಸದ
ಜಗದೀಶ್ ಶೆಟ್ಟರ್ ತಿಳಿಸಿದರು.

ಯೋಗದಿಂದ ಶಾರೀರಿಕ, ಮಾನಸಿಕ ಸ್ಥಿರತೆ ಕಾಯ್ದುಕೊಳ್ಳಬಹುದು. ಜೀವನ ಶೈಲಿಯಲ್ಲಿ ಯೋಗವನ್ನು ಅಳವಡಿಸಿಕೊಳ್ಳುವ ಮೂಲಕ ಆರೋಗ್ಯಕರ ಜೀವನ ರೂಪಿಸಿಕೊಳ್ಳಬಹುದು ಎಂದು ಹೇಳಿದರು.

ಬೆಳಗಾವಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ, ಜಿಲ್ಲಾ ಆಯುಷ್ ಇಲಾಖೆ ಹಾಗೂ ಇತರೆ ಇಲಾಖೆಯ ಸಹಯೋಗದಲ್ಲಿ ಸುವರ್ಣ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆದ 11 ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಶಟ್ಟರ್ ಮಾತನಾಡಿದರು.

ಈ ಬಾರಿ ಒಂದು ಭೂಮಿ ಒಂದು ಆರೋಗ್ಯಕ್ಕಾಗಿ ಯೋಗ ಘೋಷವಾಕ್ಯದೊಂದಿಗೆ ಪ್ರತಿಯೊಬ್ಬರಿಗೂ ಆರೋಗ್ಯ ಬಹು ಮುಖ್ಯ ಎಂಬ ಸಂದೇಶ ಸಾರುವ ನಿಟ್ಟಿನಲ್ಲಿ ಯೋಗ ದಿನಾಚರಣೆಯನ್ನು ಆಚರಿಸಲಾಗುತ್ತಿದೆ ಎಂದು ಹೇಳಿದರು.

ವಿಶ್ವದಾದ್ಯಂತ ಯೋಗ ದಿನಾಚರಣೆ ಆಚರಿಸಲಾಗುತ್ತಿದೆ. 2014 ರಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಯೋಗ ದಿನಾಚರಣೆ ಜಾರಿಗೆ ತಂದರು. ಜಗತ್ತಿನ ಎಲ್ಲ ರಾಷ್ಟ್ರದಲ್ಲೂ ಯೋಗ ದಿನಾಚರಣೆಯಲ್ಲಿ ಜನರು ಪಾಲ್ಗೊಳ್ಳುತ್ತಿದ್ದಾರೆ. ಆರೋಗ್ಯದಲ್ಲಿ ಉತ್ತಮ ಬದಲಾವಣೆ ತರುವ ನಿಟ್ಟಿನಲ್ಲಿ ಇಡೀ ಜಗತ್ತಿಗೆ ಯೋಗದ ಮಹತ್ವ ತಿಳಿಸಲಾಗಿದೆ ಎಂದು ತಿಳಿಸಿದರು.

ಯೋಗ ಋಷಿಮುನಿಗಳ ಕಾಲದ ಇತಿಹಾಸ ಹೊಂದಿದೆ. ಇದು ವೈದಿಕ ಕಾಲದಿಂದಲೂ ಬೆಳೆದುಬಂದಿದೆ, ಋಗ್ವೇದ ಮತ್ತು ಉಪನಿಷತ್ತುಗಳಲ್ಲಿ ಯೋಗಾಭ್ಯಾಸ ಉಲ್ಲೇಖಿಸಲಾಗಿದೆ. ಪ್ರತಿಯೊಬ್ಬರು ದಿನನಿತ್ಯ ಯೋಗಾಭ್ಯಾಸ ಮೂಲಕ ಉತ್ತಮ ಆರೋಗ್ಯ ಕಾಪಾಡಿಕೊಳ್ಳಬೇಕು ಎಂದು ಜಗದೀಶ್ ಶೆಟ್ಟರ ಸಲಹೆ ನೀಡಿದರು.

ಕೆ.ಎಲ್.ಇ ಪ್ರಭಾಕರ ಕೋರೆ ಆಸ್ಪತ್ರೆಯ ಯೋಗ ತರಬೇತಿದಾರರಾದ ಆರತಿ ಸಂಕೇಶ್ವರಿ ಅವರು ಯೋಗ ವಿವಿಧ ಆಸನಗಳ ಕುರಿತು ತರಬೇತಿ ನೀಡಿದರು.

ನಗರ ಪೊಲೀಸ್ ಆಯುಕ್ತ ಭೂಷಣ್ ಗುಲಾಬರಾವ ಬೊರಸೆ, ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕ ರವಿ ಬಂಗಾರಪ್ಪನವರ, ಪ್ರವಾಸೋದ್ಯಮ ಇಲಾಖೆ ಜಂಟಿ ನಿರ್ದೇಶಕರಾದ ಸೌಮ್ಯ ಬಾಪಟ, ಏರ್ಫೋರ್ಸ್ ಲೆಪ್ಟಿನೆಂಟ್ ಕರ್ನಲ್ ನಿಖಿತಾ ಸಿಂಗ್, ಲೋಕೋಪಯೋಗಿ ಇಲಾಖೆ ಕಾರ್ಯನಿರ್ವಾಹಕ ಅಭಿಯಂತರ ಎಸ್.ಎಸ್ ಸೊಬರದ,
ಜಿಲ್ಲಾ ಆಯುಷ್ ಅಧಿಕಾರಿ ಡಾ. ಶ್ರೀಕಾಂತ ಸುಣಧೋಳಿ, ವಿವಿಧ ಶಾಲಾ, ಕಾಲೇಜು ವಿದ್ಯಾರ್ಥಿಗಳು ಯೋಗಾ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ಆರೋಗ್ಯಕರ ಜೀವನಕ್ಕೆ ಯೋಗ ಸಹಕಾರಿ: ಜಗದೀಶ್ ಶೆಟ್ಟರ್ Read More

ಎಲ್ಲಾ ಪೌರ ಕಾರ್ಮಿಕರ ಸೇವೆ ಕಾಯಂಗೊಳಿಸುವ ಕಾರ್ಯ ನಡೆಯುತ್ತಿದೆ: ಸಿಎಂ

ಬೆಳಗಾವಿ: ಎಲ್ಲಾ ಪೌರ ಕಾರ್ಮಿಕರ ಸೇವೆಯನ್ನು ಕಾಯಂಗೊಳಿಸುವ ಕಾರ್ಯ ನಡೆಯುತ್ತಿದೆ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಸ್ಮಾರ್ಟ್ ಸಿಟಿ ಅನುದಾನದ ಅಡಿಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಬೆಳಗಾವಿಯ ಟಿಳಕವಾಡಿಯಲ್ಲಿ ಆಧುನಿಕ‌ ಸೌಲಭ್ಯಗಳುಳ್ಳ ಬಹುಮಹಡಿ ಕಲಾ ಮಂದಿರವನ್ನು ಲೋಕಾರ್ಪಣೆಗೊಳಿಸಿದ ವೇಳೆ ಸಿಎಂ ಮಾತನಾಡಿದರು.

ಈಗಾಗಲೇ ಗುತ್ತಿಗೆ ನೌಕರರನ್ನು ಕನಿಷ್ಠ ವೇತನ ಅಡಿಯಲ್ಲಿ ತರಲಾಗಿದೆ. ಇದನ್ನು ಮಾಡಿದ್ದು ನಮ್ಮ ಸರ್ಕಾರವೇ, ಈಗ ಕಾಯಂ ಮಾಡುವುದೂ ಕೂಡ ನಮ್ಮ ಸರ್ಕಾರವೇ ಎಂದು ಭರವಸೆ ನೀಡಿದರು.

ಬೆಳಗಾವಿಯಲ್ಲಿ ಸ್ಮಾರ್ಟ್ ಸಿಟಿ ಯೋಜನೆ ಅಡಿಯಲ್ಲಿ 150 ಕಾರ್ಯಕ್ರಮಗಳನ್ನು ಕೈಗೆತ್ತಿಕೊಂಡು ಇದರಲ್ಲಿ 102 ಪೂರ್ಣಗೊಂಡಿವೆ. ಉಳಿದವು ಸದ್ಯದಲ್ಲೇ ಪೂರ್ಣಗೊಳ್ಳಲಿವೆ ಎಂದು ಹೇಳಿದರು.

ಸ್ಮಾರ್ಟ್ ಸಿಟಿ ಯೋಜನೆಯಲ್ಲಿ 6928 ಕೋಟಿ ಮೊತ್ತದ ಕೆಲಸಗಳು ನಡೆಯುತ್ತಿವೆ ಎಂದು ಸಿಎಂ ತಿಳಿಸಿದರು ‌

ಬೆಳಗಾವಿಯ ಸಮಗ್ರ ಅಭಿವೃದ್ಧಿಗೆ ನಮ್ಮ ಸರ್ಕಾರ ಯೋಜನೆ, ಕಾರ್ಯಕ್ರಮಗಳನ್ನು ರೂಪಿಸಿ ಜಾರಿಗೆ ತರುತ್ತಿದೆ ಎಂದು ಸಿದ್ದರಾಮಯ್ಯ ಹೇಳಿದರು.

ಎಲ್ಲಾ ಪೌರ ಕಾರ್ಮಿಕರ ಸೇವೆ ಕಾಯಂಗೊಳಿಸುವ ಕಾರ್ಯ ನಡೆಯುತ್ತಿದೆ: ಸಿಎಂ Read More

ಧರ್ಮ, ಜಾತಿ ಒಡೆಯುವುದರಲ್ಲಿ ಸಿಎಂ ಸಿದ್ದರಾಮಯ್ಯ ನಂ.1-ಅಶೋಕ್

ಬೆಳಗಾವಿ: ಸಿಎಂ ಸಿದ್ದರಾಮಯ್ಯ ಮುಸ್ಲಿಮರ ಓಲೈಕೆಗಾಗಿ ಕರ್ನಾಟಕವನ್ನು ಮಿನಿ ಪಾಕಿಸ್ತಾನವಾಗಿಸಲು ಮುಂದಾಗಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಟೀಕಿಸಿದ್ದಾರೆ.

ಬೆಳಗಾವಿಯಲ್ಲಿ ನಡೆದ ಬಿಜೆಪಿ ಜನಾಕ್ರೋಶ ಸಭೆಯಲ್ಲಿ ಮಾತನಾಡಿದ ಅವರು, ಇದು ಬಿಜೆಪಿಯ ಆಕ್ರೋಶದ ಯಾತ್ರೆಯಲ್ಲ, ಜನರ ಆಕ್ರೋಶದ ಯಾತ್ರೆ. ಬೆಲೆ ಏರಿಕೆಯಿಂದಾಗಿ ಜನರಿಗೆ ತೊಂದರೆಯಾಗಿರುವುದರಿಂದ ಅವರಿಗಾಗಿ ಬಿಜೆಪಿ ಹೋರಾಟ ಮಾಡುತ್ತಿದೆ ಎಂದು ಹೇಳಿದರು.

ಮುಸಲ್ಮಾನರು ನಂ.1 ಎಂದು ಆಗಲು ವಿದೇಶಿ ಕೈವಾಡ ಇದೆಯೇ ಎಂಬ ಅನುಮಾನ ಬಂದಿದೆ. ಮುಸ್ಲಿಮರ ಓಲೈಕೆಗಾಗಿ ಎಲ್ಲ ಜಾತಿಗಳನ್ನು ಒಡೆದುಹಾಕಿದ್ದಾರೆ. ಈ ಮೂಲಕ ಮಿನಿ ಪಾಕಿಸ್ತಾನ ಸೃಷ್ಟಿಸುತ್ತಿದ್ದಾರೆ. ಭಾರತವನ್ನು ಪಾಕಿಸ್ತಾನ ಮಾಡುತ್ತೇವೆಂದು ಕೆಲವು ಭಯೋತ್ಪಾದಕರು ಪತ್ರದಲ್ಲಿ ಬರೆದು ಹಂಚಿದ್ದಾರೆ ಎಂದು ದೂರಿದರು.

ಸಿಎಂ ಸಿದ್ದರಾಮಯ್ಯನವರ ಕುರ್ಚಿಗೆ ನವೆಂಬರ್‌ನಲ್ಲಿ ಬಾಂಬ್‌ ಫಿಕ್ಸ್‌ ಆಗಿದೆ. ಅವರು ನಿರ್ಗಮಿಸುವುದರಿಂದಲೇ ಈ ರೀತಿ ಮಾಡುತ್ತಿದ್ದಾರೆ. ರಾಜ್ಯದ ಬಡವರ ಮೇಲೆ ತೆರಿಗೆಯ ದಾಳಿ ಮಾಡುತ್ತಿದ್ದಾರೆ. ಕರ್ನಾಟಕ ಹಾಗೂ ತೆಲಂಗಾಣ ಕೇಂದ್ರ ಕಾಂಗ್ರೆಸ್‌ನ ಎಟಿಎಂ ಆಗಿದೆ. ಇದು ಕುರ್ಚಿಗಾಗಿ ನಡೆಯುತ್ತಿರುವ ರಾಜಕೀಯ ಎಂದು ಟೀಕಿಸಿದರು.

ರಾಜ್ಯದಲ್ಲಿ ಗೃಹ ಸಚಿವರೇ ಇಲ್ಲ. ಎಷ್ಟೇ ಅಪರಾಧ ನಡೆದರೂ ಇದು ಸಾಮಾನ್ಯ ಎಂದು ಡಾ.ಜಿ.ಪರಮೇಶ್ವರ್‌ ಹೇಳುತ್ತಾರೆ. ಮುಂದಿನ ಸಲ ಅಧಿಕಾರಕ್ಕೆ ಬರುವುದಿಲ್ಲ ಎಂದು ಕಾಂಗ್ರೆಸ್‌ ನಾಯಕರಿಗೆ ಗೊತ್ತಾಗಿದೆ. ಹಾಲು, ಆಲ್ಕೋಹಾಲ್‌ ಹಾಗೂ ಡೆತ್‌ ಸರ್ಟಿಫಿಕೇಟ್‌ಗೂ ದರ ಏರಿಸಿದ್ದಾರೆ. ಕಸಕ್ಕೂ ತೆರಿಗೆ ಹಾಕಿದ್ದಾರೆ. ಬಿಬಿಎಂಪಿ ಅಧಿಕಾರಿಗಳು ಕಸದ ಪ್ರಮಾಣ ಲೆಕ್ಕ ಹಾಕಿ ತೆರಿಗೆ ಹಾಕುತ್ತಾರೆ. ವಾಹನ ಪಾರ್ಕಿಂಗ್‌ ಮಾಡಿದರೂ ತೆರಿಗೆ ವಿಧಿಸುತ್ತಾರೆ ಎಂದು ಅಶೋಕ್ ಆರೋಪಿಸಿದರು.

ಸ್ವಾತಂತ್ರ್ಯ ಹೋರಾಟಗಾರರು ರೂಪಿಸಿದ್ದ ಪತ್ರಿಕಾ ಸಂಸ್ಥೆಗೆ 50 ಲಕ್ಷ ರೂ. ಬಂಡವಾಳ ಹೂಡಿ, ಇಡೀ 7,500 ಕೋಟಿ ರೂ. ಹಣವನ್ನು ಕಾಂಗ್ರೆಸ್‌ನ ಸೋನಿಯಾ ಗಾಂಧಿ ಹಾಗೂ ರಾಹುಲ್‌ ಗಾಂಧಿ ಲೂಟಿ ಮಾಡಿದ್ದಾರೆ. ಇದು ಕೋರ್ಟ್‌ ಆದೇಶದ ಪ್ರಕಾರ ನಡೆದಿರುವ ತನಿಖೆ. ಆದರೆ ಕಾಂಗ್ರೆಸ್‌ ನಾಯಕರು ಇದರ ವಿರುದ್ಧ ಬಾಯಿ ಬಡಿದುಕೊಳ್ಳುತ್ತಿದ್ದಾರೆ. ಇಂತಹ ಭ್ರಷ್ಟಾಚಾರ ಮಾಡಿರುವ ಕಾಂಗ್ರೆಸ್‌ ಯಾವ ನೈತಿಕೆಯ ಮೇಲೆ ಬಿಜೆಪಿಯ ಮೇಲೆ ಆರೋಪ ಮಾಡುತ್ತಿದೆ ಎಂದು ಪ್ರಶ್ನೆ ಮಾಡಿದರು.

ಸಿದ್ದರಾಮಯ್ಯನವರಿಗೆ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರು ಎಲ್ಲ ಅಧಿಕಾರ ನೀಡಿದ್ದರು. ಅಧಿಕಾರ ಸಿಗದೇ ಹೋದಾಗ ಜೆಡಿಎಸ್‌‌ ಬಿಟ್ಟು ಕಾಂಗ್ರೆಸ್‌ಗೆ ಬಂದರು. ಈಗ ಡಿ.ಕೆ.ಶಿವಕುಮಾರ್‌ ಅಧಿಕಾರ ಕಿತ್ತುಕೊಳ್ಳಲು ಮುಂದಾಗಿದ್ದಾರೆ. ಆದ್ದರಿಂದ ಸಿಎಂ ಸಿದ್ದರಾಮಯ್ಯ ಜಾತಿ ಗಣತಿ ವರದಿ ಬಿಡುಗಡೆ ಮಾಡಲು ಮುಂದಾಗಿದ್ದಾರೆ ಎಂದು ಅಶೋಕ್ ಟೀಕಾಪ್ರಹಾರ ನಡೆಸಿದರು.

ಧರ್ಮ, ಜಾತಿ ಒಡೆಯುವುದರಲ್ಲಿ ಸಿಎಂ ಸಿದ್ದರಾಮಯ್ಯ ನಂ.1-ಅಶೋಕ್ Read More