ಮದುವೆಗೆ‌ ಹೋಗುತ್ತಿದ್ದ ವೇಳೆಬಸ್ ಡಿಕ್ಕಿ: ಇಬ್ಬರ ದುರ್ಮರಣ

ಬೆಳಗಾವಿ: ಬೈಕ್ ಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ತಂದೆ ಹಾಗೂ ಮಗಳು ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟಿರುವ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನಲ್ಲಿ ನಡೆದಿದೆ.

ಪತಿ, ಪತ್ನಿ ಹಾಗೂ ಮಗಳು ಬೈಕ್ ನಲ್ಲಿ ಸಂಬಂಧಿಕರ ಮದುವೆಗೆ ತೆರಳುತ್ತಿದ್ದರು. ಈ ವೇಳೆ ಅಥಣಿ ಬಳಿ ಹಿಂದಿನಿಂದ ಬಂದ ಕಾರು ಬೈಕ್ ಗೆ ಡಿಕ್ಕಿ ಹೊಡೆದಿದೆ ಇದರಿಂದ ತಂದೆ ಹಾಗೂ ಮಗಳು ಸ್ಥಳದಲ್ಲೇ ಸಾವನ್ನಪ್ಪಿದ್ದು, ತಾಯಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ಮಹಾರಾಷ್ಟ್ರದ ಜತ್ತ ತಾಲೂಕಿನ ಮಂಡಿಗೇರಿ ನಿವಾಸಿಗಳಾದ ರಾಮು ಕರ್ಣಿ (49) ಮಗಳು ಜಾಹ್ನವಿ (11) ಮೃತಪಟ್ಟ ದುರ್ದೈವಿಗಳು.

ಅಪಘಾತದ ಬಳಿಕ ಕಾರು ಚಾಲಕ ಪರಾರಿಯಾಗಿದ್ದಾನೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

ಮದುವೆಗೆ‌ ಹೋಗುತ್ತಿದ್ದ ವೇಳೆಬಸ್ ಡಿಕ್ಕಿ: ಇಬ್ಬರ ದುರ್ಮರಣ Read More

ಮರಾಠಿ ಪುಂಡರು ಕರ್ನಾಟಕ ಬಿಟ್ಟು ತೊಲಗಲಿ: ತೇಜಸ್ವಿ ಆಗ್ರಹ

ಮೈಸೂರು: ಬೆಳಗಾವಿಯಲ್ಲಿ ಮರಾಠಿ ಯುವಕರು ಕೆ.ಎಸ್.ಆರ್.ಟಿ.ಸಿ ಬಸ್ ಕಂಡಕ್ಟರ್ ಮೇಲೆ ಹಲ್ಲೆ ಮಾಡಿರುವ ಘಟನೆಯನ್ನು ಕನ್ನಡ ಚಳವಳಿಗಾರ ತೇಜಸ್ವಿ ನಾಗಲಿಂಗ ಸ್ವಾಮಿ ತೀವ್ರವಾಗಿ ಖಂಡಿಸಿದ್ದಾರೆ.

ಸುಳೇಬಾವಿ-ಬಾಳೆಕುಂದ್ರಿ ಮಾರ್ಗ ಮಧ್ಯೆ ಈ ಘಟನೆ ನಡೆದಿದ್ದು,ಮಹದೇವ್ ಹಲ್ಲೆಗೊಳಗಾಗಿರುವ ಕನ್ನಡಿಗ ಬಸ್ ಕಂಡಕ್ಟರ್.

ಮರಾಠಿಯಲ್ಲಿ ಮಾತನಾಡುವಂತೆ ಒತ್ತಾಯಿಸಿ ಚಲಿಸುತ್ತಿದ್ದ ಬಸ್ ನಿಲ್ಲಿಸಿದ ಮರಾಠಿ ಗೂಂಡಾಗಳು ಕಂಡಕ್ಟರ್ ಮೇಲೆ ಹಲ್ಲೆ ಮಾಡಿರುವುದು ಖಂಡನೀಯ ಎಂದಿದ್ದಾರೆ.

ಬಸ್ ನಲ್ಲಿದ್ದ ಯುವತಿಯೊಬ್ಬರು ಮರಾಠಿಯಲ್ಲಿ ಟಿಕೆಟ್ ಕೇಳಿದ್ದಕ್ಕೆ ಕಂಡಕ್ಟರ್ ತನಗೆ ಮರಾಠಿ ಬರಲ್ಲ, ಕನ್ನಡದಲ್ಲಿ ಮಾತನಾಡಿ ಎಂದಿದ್ದಾರೆ.ಅದರಲ್ಲಿ ತಪ್ಪೇನಿದೆ ಕಂಡಕ್ಟರುಗಳೇನು ಎಲ್ಲಾ ಭಾಷೆಯನ್ನು ಕಲಿತಿರಬೇಕೆಂಬ ರೂಲ್ಸ್ ಇದೆಯೆ ಎಂದು ತೇಜಸ್ವಿ ಪ್ರಶ್ನಿಸಿದ್ದಾರೆ.

ಇಷ್ಟು ಸಣ್ಣ ವಿಷಯಕ್ಕೆ ಬಸ್ ನಲ್ಲಿದ್ದ ಮರಾಠಿ ಯುವಕರ ಗುಂಪು, ಕಂಡಕ್ಟರ್ ನನ್ನು ಹಿಡಿದು ಮರಾಠಿ ಮಾತನಾಡುವಂತೆ ಒತ್ತಾಯಿಸಿದ್ದಾರೆ ಅಲ್ಲದೆ ಬಸ್ ನಿಲ್ಲಿಸುವಂತೆ ಒತ್ತಾಯಿಸಿ, ಬಸ್ ನಿಲ್ಲಿಸಿ ಕಂಡಕ್ಟರ್ ಗೆ ಹಿಗ್ಗಾಮುಗ್ಗಾ ಥಳಿಸಿದ್ದಾರೆ ಇದು ಸರಿಯಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕರ್ನಾಟಕ ದಲ್ಲಿ ಕನ್ನಡಿಗರೆ ಸಾರ್ವಭೌಮ ರಾಗಿದ್ದು ನಾವು ಕೊಟ್ಟ ಭಿಕ್ಷೆ ಯಿಂದ ನೀವು ಕರ್ನಾಟಕ ನೆಲದಲ್ಲಿ ಬದುಕುತ್ತಿದ್ದೀರಿ ಕನ್ನಡ ನಾಡಿನಲ್ಲಿ ಬದುಕಲು ಇಷ್ಟ ಇಲ್ಲದಿದ್ದರೆ ಕರ್ನಾಟಕ ಬಿಟ್ಟು ತೊಲಗಿ ಎಂದು ಮರಾಠಿ ಪುಂಡರಿಗೆ ತೇಜಸ್ವಿ ನಾಗಲಿಂಗ ಸ್ವಾಮಿ ಒತ್ತಾಯಿಸಿದ್ದಾರೆ‌

ಕರ್ನಾಟಕ ಸರ್ಕಾರ ಈ ಘಟನೆ ಯನ್ನು ಗಂಭೀರವಾಗಿ ಪರಿಗಣಿಸಿ ಹಲ್ಲೆ ಮಾಡಿದ ಮರಾಠಿ ಗೂಂಡಾಗಳನ್ನು ಗಡಿಪಾರು ಮಾಡಿ ಗೂಂಡ ಕಾಯಿದೆ ಅಡಿ ಪ್ರಕರಣ ದಾಖಲಿಸ ಬೇಕು ಎಂದು ತೇಜಸ್ವಿ ನಾಗಲಿಂಗ ಸ್ವಾಮಿ ಆಗ್ರಹಿಸಿದ್ದಾರೆ.

ಮರಾಠಿ ಪುಂಡರು ಕರ್ನಾಟಕ ಬಿಟ್ಟು ತೊಲಗಲಿ: ತೇಜಸ್ವಿ ಆಗ್ರಹ Read More

ಬೆಳಗಾವಿಯಲ್ಲಿ ಬಸ್ ಕಂಡಕ್ಟರ್ ಮೇಲೆ ಮರಾಠಿ ಯುವಕರಿಂದ ಹಲ್ಲೆ

ಬೆಳಗಾವಿ: ಬೆಳಗಾವಿಯಲ್ಲಿ ಮರಾಠಿ ಹುಡುಗರು ಕೆ.ಎಸ್.ಆರ್.ಟಿ.ಸಿ ಬಸ್ ಕಂಡಕ್ಟರ್ ಮೇಲೆ ಹಲ್ಲೆ ಮಾಡಿರುವ ಘಟನೆ ನಡೆದಿದ್ದು ಎಲ್ಲೆಡೆ ತೀವ್ರ ಆಕ್ರೋಶ ವ್ಯಕ್ತವಾಗಿದೆ.

ಸುಳೇಬಾವಿ-ಬಾಳೆಕುಂದ್ರಿ ಮಾರ್ಗ ಮಧ್ಯೆ ಈ ಘಟನೆ ನಡೆದಿದ್ದು,ಮಹದೇವ್ ಹಲ್ಲೆಗೊಳಗಾಗಿರುವ ಬಸ್ ಕಂಡಕ್ಟರ್.

ಮರಾಠಿಯಲ್ಲಿ ಮಾತನಾಡುವಂತೆ ಒತ್ತಾಯಿಸಿ ಚಲಿಸುತ್ತಿದ್ದ ಬಸ್ ನಿಲ್ಲಿಸಿ ಕಂಡಕ್ಟರ್ ಗೆ ಪಡ್ಡೆ ಹುಡುಗರು ಹಲ್ಲೆ ನಡೆಸಿದ್ದಾರೆ.

ಬಸ್ ನಲ್ಲಿದ್ದ ಯುವತಿಯೊಬ್ಬರು ಮರಾಠಿಯಲ್ಲಿ ಟಿಕೆಟ್ ಕೇಳಿದ್ದರು. ಕಂಡಕ್ಟರ್ ತನಗೆ ಮರಾಠಿ ಬರಲ್ಲ, ಕನ್ನಡದಲ್ಲಿ ಮಾತನಾಡಿ ಎಂದಿದ್ದಾರೆ. ಅಷ್ಟಕ್ಕೇ ಬಸ್ ನಲ್ಲಿದ್ದ ಮರಾಠಿ ಯುವಕರ ಗುಂಪು, ಕಂಡಕ್ಟರ್ ನನ್ನು ಹಿಡಿದು ಮರಾಠಿ ಮಾತನಾಡುವಂತೆ ಒತ್ತಾಯಿಸಿದ್ದಾರೆ,ಜತೆಗೆ ಬಸ್ ನಿಲ್ಲಿಸುವಂತೆ ಒತ್ತಾಯಿಸಿ, ಬಸ್ ನಿಲ್ಲಿಸಿ ಕಂಡಕ್ಟರ್ ಗೆ ಹಿಗ್ಗಾಮುಗ್ಗಾ ಥಳಿಸಿದ್ದಾರೆ.

ವಿಷಯ ಹರಡುತ್ತಿದ್ದಂತೆ ಎಲ್ಲೆಡೆ ತೀವ್ರ ಆಕ್ರೋಶ ವ್ಯಕ್ತವಾಗಿದೆ ಹಲ್ಲೆ ಮಾಡಿದ ಯುವಕರ ಮೇಲೆ ಕಠಿಣ ಕ್ರಮ ಜರುಗಿಸುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಈ ವೇಳೆ ಮಾಧ್ಯಮ ಗಳೊಂದಿಗೆ ಮಾತನಾಡಿದ ಬಸ್ ನಿರ್ವಾಹಕ ಮಹದೇವ್ ಇಲ್ಲಿ ಡ್ರೈವರ್,ಕಂಡಕ್ಟರ್ ಗಳಿಗೆ ರಕ್ಷಣೆ ಇಲ್ಲದಂತಾಗಿದೆ ,ಸರ್ಕಾರ ರಕ್ಷಣೆ ಕೊಡಬೇಕು ಎಂದು ಮನವಿ ಮಾಡಿದರು.

ಬೆಳಗಾವಿಯಲ್ಲಿ ಬಸ್ ಕಂಡಕ್ಟರ್ ಮೇಲೆ ಮರಾಠಿ ಯುವಕರಿಂದ ಹಲ್ಲೆ Read More

ಭಾರತೀಯರ ನಡುವೆ ಬಿರುಕು ಮೂಡಿಸಿ ದೇಶ ದುರ್ಬಲಗೊಳಿಸುವ ಬಿಜೆಪಿ ಯತ್ನ ಸೋಲಿಸೋಣ:ಸಿಎಂ

ಬೆಳಗಾವಿ: ಸಂವಿಧಾನ ದ್ವೇಷಿಯಾಗಿರುವ ಆರ್ ಎಸ್ ಎಸ್ ಸಿದ್ಧಾಂತವನ್ನು ಬಿಜೆಪಿ ಭಾರತೀಯರ ಮೇಲೆ ಹೇರುತ್ತಿದ್ದು ಇದನ್ನು ಹಿಮ್ಮೆಟ್ಟಿಸೋಣ ಎಂದು ಸಿಎಂ ಸಿದ್ದರಾಮಯ್ಯ ಕರೆ ನೀಡಿದರು.

ಐತಿಹಾಸಿಕ ಜೈ ಬಾಪು-ಜೈ ಭೀಮ್- ಜೈ ಸಂವಿಧಾನ ಅಭಿಯಾನ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ,
ಬಿಜೆಪಿ ಪರಿವಾರ ಭಾರತದಲ್ಲಿ ಬಹಳ ವ್ಯವಸ್ಥಿತವಾಗಿ ಒಡಕು ತರುತ್ತಿದೆ ಎಂದು ದೂರಿದರು.

ಭಾರತೀಯರ ನಡುವೆ ಬಿರುಕು ಮೂಡಿಸುತ್ತಾ ಭಾರತವನ್ನು ದುರ್ಬಲಗೊಳಿಸುತ್ತಿದೆ, ಬಿಜೆಪಿಯ ಈ ಯತ್ನವನ್ನು ನಾವು ಸೋಲಿಸಬೇಕು,ಇದಕ್ಕೆ ಗಾಂಧಿ-ಅಂಬೇಡ್ಕರ್ ನಮಗೆ ಮಾರ್ಗದರ್ಶಕರು ಎಂದು ಹೇಳಿದರು.

ಸಂವಿಧಾನ ಜಾರಿಯಾದಾಗ ಬಿಜೆಪಿ ಪರಿವಾರ ಅಂಬೇಡ್ಕರ್ ಭಾವಚಿತ್ರವನ್ನು, ಸಂವಿಧಾನವನ್ನು ಸುಟ್ಟಿತ್ತು. ಇದನ್ನು ಈ ದೇಶ, ಈ ದೇಶದ ಜನ ಸಮುದಾಯ ಯಾವತ್ತೂ ಕ್ಷಮಿಸುವುದಿಲ್ಲ, ಮರೆಯುವುದೂ ಇಲ್ಲ ಎಂದು ತಿಳಿಸಿದರು.

ನಮಗೆ ಚುನಾವಣೆ ಗೆಲ್ಲುವುದಕ್ಕಿಂತ ನಮ್ಮ ಸಿದ್ಧಾಂತ ಗೆಲ್ಲಬೇಕು, ಅದು ಮಾತ್ರ ನಮ್ಮ ನಿಜವಾದ ಗೆಲುವು ಎಂದು ಸಿದ್ದರಾಮಯ್ಯ ವುಶ್ವಾಸದಿಂದ ನುಡಿದರು.

ಗಾಂಧಿ ಅಂಬೇಡ್ಕರ್ ಅವರ ಆಶಯಗಳು, ಮೌಲ್ಯಗಳ ಈಡೇರಿಕೆಗೆ ನಾವು ಕಾರ್ಯಕ್ರಮಗಳನ್ನು ರೂಪಿಸಿ ಜಾರಿ ಮಾಡಿದ್ದೇವೆ. ಇದಕ್ಕಾಗಿ ಬಜೆಟ್ ನಲ್ಲಿ 52 ಸಾವಿರ ಕೋಟಿಗೂ ಅಧಿಕ ಮೊತ್ತದ ಹಣವನ್ನು ನೇರವಾಗಿ ಜನರ ಖಾತೆಗೆ ಹಾಕಿ ರಾಜ್ಯದ ಜನರನ್ನು ಆರ್ಥಿಕವಾಗಿ ಸಬಲರನ್ನಾಗಿಸಿದ್ದೇವೆ ತಿಳಿಸಿದರು.

ಭಾರತೀಯರ ನಡುವೆ ಬಿರುಕು ಮೂಡಿಸಿ ದೇಶ ದುರ್ಬಲಗೊಳಿಸುವ ಬಿಜೆಪಿ ಯತ್ನ ಸೋಲಿಸೋಣ:ಸಿಎಂ Read More

ಸಮಾಜಘಾತಕ ಶಕ್ತಿಗಳ ವಿರುದ್ಧ ಗಂಭೀರ ಕ್ರಮ: ಸಿಎಂ ಎಚ್ಚರಿಕೆ

ಬೆಳಗಾವಿ: ಸಮಾಜಘಾತಕ ಶಕ್ತಿಗಳ ವಿರುದ್ಧ ಗಂಭೀರ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಕಡಕ್ ಎಚ್ಚರಿಕೆ ನೀಡಿದ್ದಾರೆ.

ಮಹಿಳೆಯರಿಗೆ ರಕ್ಷಣೆ ದೊರಕಬೇಕು,
ಬಲಾತ್ಕಾರದಂತಹ ಹೀನ ಕೃತ್ಯಗಳು ನಡೆಯಬಾರದು,ಸಮಾಜದಲ್ಲಿ ಸಮಾಜಘಾತಕ ಶಕ್ತಿಗಳು ಇಂಥ ಕೆಲಸ ಮಾಡುತ್ತವೆ ಅಂಥವರ ವಿರುದ್ಧ ಗಂಭೀರ ಕ್ರಮ ಜರುಗಿಸಲಾಗುವುದು ಎಂದು ಹೇಳಿದರು.

ಬೆಳಗಾವಿಯಲ್ಲಿ ಮಾಧ್ಯಮದವ ರೊಂದಿಗೆ ಮಾತನಾಡಿದ ಸಿಎಂ,ಇಡೀ ವರ್ಷ ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಅಭಿಯಾನವನ್ನು ಮಾಡುತ್ತಿದ್ದೇವೆ. ಗಾಂಧೀಜಿಯವರ ತತ್ವಾದರ್ಶಗಳನ್ನು ಮತ್ತೆ ಪುನಸ್ಥಾಪಿಸಲು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಗಾಂಧೀಜಿ ಹಾಗು ಅವರ ವಿಚಾರಧಾರೆಗಳು ಇಡೀ ವಿಶ್ವಕ್ಕೆ ಇಂದಿಗೂ ಪ್ರಸ್ತುತ ಎಂದು ತಿಳಿಸಿದರು.

ಗಾಂಧೀಜಿ ಸೌಹಾರ್ದತೆ, ಸಮಾನತೆ ಬರಬೇಕು, ಅಸ್ಪೃಶ್ಯತೆ ಹೋಗಲಾಡಿಸಲು ಮಹಿಳೆಯರಿಗೆ ಸ್ವಾತಂತ್ರ್ಯ ಅವರ ಹಕ್ಕುಗಳ ರಕ್ಷಣೆಯಾಗಬೇಕೆಂದು ಪ್ರತಿಪಾದಿಸಿದ್ದರು.
ಗಾಂಧೀಜಿ, ಬಸವಣ್ಣ, ಕನಕದಾಸರ ವಿಚಾರಗಳು ಸಂವಿಧಾನದಲ್ಲಿ ಅಡಕವಾಗಿವೆ ಎಂದು ಹೇಳಿದರು.

ಗಾಂಧೀಜಿ, ಅಂಬೇಡ್ಕರ್ ಮತ್ತು ಸಂವಿಧಾನವನ್ನು ವಿರೋಧಿಸುವ ಅನಾಹುತಕಾರಿ ರಾಜಕಾರಣ ನಡೆಯುತ್ತಿದೆ. ಅದ್ದರಿಂದ ಇವುಗಳ ರಕ್ಷಣೆ ಮಾಡುವುದು ಕಾಂಗ್ರೆಸ್ ಜವಾಬ್ದಾರಿ. ನಾವು ಸಂವಿಧಾನದ ಪರವಾಗಿದ್ದೇವೆ. ಅವರು ಮನುವಾದದ ಪರವಾಗಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಅನಾರೋಗ್ಯದ ಕಾರಣ ಅಧಿವೇಶನಕ್ಕೆ ಹಾಜರಾಗಲು ಸಾಧ್ಯವಾಗಿಲ್ಲ ಎಂದು ಸ್ಪಷ್ಟಪಡಿಸಿದ ಸಿಎಂ, ಸಮಾವೇಶದಿಂದ ದೂರ ಎಂದು ಮಾಧ್ಯಮಗಳು ವರದಿ ಮಾಡಿವೆ. ಈ ರೀತಿ ತಿರುಚಿ ಸುದ್ದಿ ಹಾಕಿದರೆ ಪತ್ರಿಕಾ ವೃತ್ತಿಯ ಘನತೆ ಉಳಿಯುತ್ತದೆಯೇ ಇದರಿಂದ ಏನು ಸಂದೇಶ ಹೋಗುತ್ತದೆ ಎಂದು ಕಾರವಾಗಿ ಪ್ರಶ್ನಿಸಿದರು.

ಸಮಾಜಘಾತಕ ಶಕ್ತಿಗಳ ವಿರುದ್ಧ ಗಂಭೀರ ಕ್ರಮ: ಸಿಎಂ ಎಚ್ಚರಿಕೆ Read More

ಸಿ.ಟಿ.ರವಿ ಆಕ್ಷೇಪಾರ್ಹ ಪದ ಬಳಕೆ ಖಚಿತ

ಬೆಂಗಳೂರು: ಸದನದಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಆಕ್ಷೇಪಾರ್ಹ ಪದ ಬಳಕೆ ಮಾಡಿರುವುದು ಖಚಿತವಾಗಿದೆ.

ಸಿ.ಟಿ.ರವಿ ವಾಯ್ಸ್ ಸ್ಯಾಂಪಲ್ ಪಡೆಯಲು ಸಿಐಡಿ ಮುಂದಾಗಿತ್ತು. ಆದರೆ, ಅದಕ್ಕೆ ಸಿ.ಟಿ.ರವಿ ನಿರಾಕರಿಸಿದ್ದರು. ಕೊನೆಗೆ ಡಿಪಿಎಆರ್‌ ನಿಂದ ಅಸಲಿ ವೀಡಿಯೋವನ್ನು ಸಿಐಡಿ ವಶಕ್ಕೆ ಪಡೆದಿತ್ತು.

ಬೆಳಗಾವಿ ಅಧಿವೇಶನದ ವೇಳೆ ಮೇಲ್ಮನೆಯಲ್ಲಿ ನಡೆದಿದ್ದ ಘಟನಾವಳಿಗಳ ಕುರಿತು ವೀಡಿಯೋ-ಆಡಿಯೋ ದಾಖಲೆ ನೀಡುವಂತೆ ರಾಜ್ಯ ಆಡಳಿತ ಮತ್ತು ಸಿಬ್ಬಂದಿ ಸುಧಾರಣೆ ಇಲಾಖೆಗೆ (ಡಿಎಪಿಆರ್) ಸಿಐಡಿ ಮನವಿ ಮಾಡಿತ್ತು.

ಸದನದಲ್ಲಿ ನಿಂದನೆ ಕೃತ್ಯ ನಡೆದ ವೇಳೆ ಚಿತ್ರೀಕರಿಸಿದ್ದ 4 ಗಂಟೆ ವೀಡಿಯೋವನ್ನು ಸಿಐಡಿಗೆ ಸಲ್ಲಿಸಲಾಗಿತ್ತು.ಇದೀಗ ಸಿ.ಟಿ.ರವಿ ಅವರು ಆಕ್ಷೆರಪಾರ್ಹ ಪದ ಬಳಕೆ ಮಾಡಿರುವು ನಿಜವೆಂದು ಗೊತ್ತಾಗಿದೆ.

ಸಿ.ಟಿ.ರವಿ ಆಕ್ಷೇಪಾರ್ಹ ಪದ ಬಳಕೆ ಖಚಿತ Read More

ಮನಮೋಹನಸಿಂಗ್ ಬಡ ಜನರ ಹಿತಕ್ಕಾಗಿ ದೇಶದ ಆರ್ಥಿಕತೆ ರೂಪಿಸಿದ ತಜ್ಞರು: ಸಿಎಂ

ಬೆಳಗಾವಿ: ಮನಮೋಹನಸಿಂಗ್ ಅವರು ವಿಶ್ವಶ್ರೇಷ್ಠ ಆರ್ಥಿಕ ತಜ್ಞಾರಾಗಿ, ದೇಶದ ಮಧ್ಯಮ ಮತ್ತು ಬಡ ಜನರ ಹಿತಕ್ಕಾಗಿ ದೇಶದ ಆರ್ಥಿಕತೆಯನ್ನು ರೂಪಿಸಿದ ತಜ್ಞರಾಗಿದ್ದರು ಎಂದು ಸಿಎಂ ಸಿದ್ದರಾಮಯ್ಯ ನುಡಿದರು.

ಬೆಳಗಾವಿಯ ಸಿಪಿಇಡಿ ಮೈದಾನದಲ್ಲಿ ಕೆಪಿಸಿಸಿ ವತಿಯಿಂದ ಆಯೋಜಿಸಲಾಗಿದ್ದ ಮಾಜಿ ಪ್ರಧಾನಿ ದಿ.ಮನಮೋಹನ್ ಸಿಂಗ್ ಅವರ ಸಂತಾಪ ಸಭೆಯಲ್ಲಿ ಸಿಎಂ ಮಾತನಾಡಿದರು.

ಮನಮೋಹನ್ ಸಿಂಗ್ ಅವರು ಅತ್ಯಂತ ಕಡುಬಡತನದ ಕುಟುಂಬದಲ್ಲಿ ಜನಿಸಿ, ದೇಶ ಕಂಡ ವಿಶ್ವಶ್ರೇಷ್ಢ ಆರ್ಥಿಕ ತಜ್ಞರಾಗಿ ಎರಡು ಬಾರಿ ದೇಶದ ಪ್ರಧಾನಿಯಾದರು.

ಇವರಿಗಿಂತ ದೊಡ್ಡ ಆರ್ಥಿಕ ತಜ್ಞರು ಇರಬಹುದು. ಆದರೆ, ಬಹಳ ಮೃದು ಸ್ವಭಾವದ, ಮಿತ ಭಾಷಿಯಾಗಿ ಮಧ್ಯಮ ಮತ್ತು ಬಡ ಜನರ ದೃಷ್ಟಿಯಿಂದ ಈ ಜನರ ಹಿತಕ್ಕಾಗಿ ದೇಶದ ಆರ್ಥಿಕತೆಯನ್ನು ರೂಪಿಸಿದವರು ಎಂದು ಹೇಳಿದರು.

ನಾನು ಹಲವು ಬಾರಿ ಅವರನ್ನು ಭೇಟಿಯಾಗಿದ್ದೆ. ಸಂಯಮದಿಂದ ನಮ್ಮ ಮಾತನ್ನು ಕೇಳಿಸಿಕೊಂಡು ಬಳಿಕ ಪ್ರಾಮಾಣಿಕ ಅಭಿಪ್ರಾಯ ನೀಡುತ್ತಿದ್ದರು ಎಂದು ಸ್ಮರಿಸಿದರು.

ತಾವು ಅಲಂಕರಿಸಿದ ಎಲ್ಲಾ ಹುದ್ದೆಗಳಿಗೂ ನ್ಯಾಯ ಒದಗಿಸಿದರು. ಆರ್‌ ಬಿ ಐ ಗವರ್ನರ್ ಆಗಿ, ಆರ್ಥಿಕ ಸಚಿವರಾಗಿ, ಹತ್ತು ವರ್ಷಗಳ ಕಾಲ ದೇಶದ ಪ್ರಧಾನಿಯಾಗಿ ಎಲ್ಲಾ ಹುದ್ದೆಗಳಿಗೂ ಪ್ರಾಮಾಣಿಕ ನ್ಯಾಯ ಒದಗಿಸಿದರು.

ಸೋನಿಯಾಗಾಂಧಿ ಅವರು ಪ್ರಧಾನಿ ಹುದ್ದೆಯನ್ನು ತ್ಯಾಗ ಮಾಡಿ ಆ ಹುದ್ದೆಗೆ ಮನಮೋಹನ್ ಸಿಂಗ್ ಅವರನ್ನು ಆರಿಸಿದರು, ಹತ್ತು ವರ್ಷಗಳ ಕಾಲ ದೇಶವನ್ನು ಅತ್ಯಂತ ಸದೃಡವಾಗಿ ಮುನ್ನಡೆಸಿದರು.

ಭಾರತ ಆರ್ಥಿಕ ಸಂಕಷ್ಟದಲ್ಲಿದ್ದಾಗ ಉದಾರೀಕರಣ ಜಾರಿ ಮಾಡಿ ದೇಶವನ್ನು ಆರ್ಥಿಕವಾಗಿ ಮೇಲೆತ್ತಿದರು ಎಂದು ಸಿಎಂ ತಿಳಿಸಿದರು.

ಆಹಾರ ಭದ್ರತೆ, ಶಿಕ್ಷಣ ಹಕ್ಕು ಕಾಯ್ದೆ, ಮಾಹಿತಿ ಹಕ್ಕು ಕಾಯ್ದೆ ಸೇರಿದಂತೆ ಹಲವು ಮೂಲಭೂತ ಹಕ್ಕುಗಳನ್ನು ಜಾರಿಗೊಳಿಸಿ ದೇಶದ ಬಡವರು, ಮಧ್ಯಮವರ್ಗದವರನ್ನು ಆರ್ಥಿಕವಾಗಿ ಮೇಲೆತ್ತುವುದರಲ್ಲಿ ಯಶಸ್ವಿಯಾದರು.

ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ ನಾವು ಆರಂಭಿಸಿದಾಗ ನಾವು ಮನಮೋಹನ್ ಸಿಂಗ್ ಅವರನ್ನು ಕರೆಸಿದ್ದೆವು. ಕರ್ನಾಟಕದ ಆರ್ಥಿಕತೆ ಬಗ್ಗೆ ಒಂದು ಕಾರ್ಯಕ್ರಮಕ್ಕೆ ನಾವು ಕರೆಸಿದ್ದೆವು. ಆಗ, ನಮ್ಮ ಅವಧಿಯಲ್ಲಿ ರಾಜ್ಯದ ಆರ್ಥಿಕತೆ ಅತ್ಯಂದ ಸದೃಡವಾಗಿದೆ ಎಂದು ಮೆಚ್ಚುಗೆ ಸೂಚಿಸಿದ್ದರು. ಅವರ ಜ್ಞಾನ ಭಾರತದ ಅನೇಕ ಸಮಸ್ಯೆಗಳಿಗೆ ಪರಹಾರ ಕಂಡುಕೊಳ್ಳಲು ಸಾಧ್ಯವಾಯಿತು ಎಂದು ಸಿಎಂ ತಿಳಿಸಿದರು.

ದೇಶದ ಆರ್ಥಿಕ ಸಮಸ್ಯೆಗಳನ್ನು ನಿಖರವಾಗಿ ಗ್ರಹಿಸಿ, ಪರಿಹರಿಸುತ್ತಿದ್ದ ಅವರು ನಿಗರ್ವಿ ಆಗಿದ್ದರು, ಅತ್ಯಂತ ವಿನಯಶೀಲರಾಗಿದ್ದರು ಎಂದು ಹೇಳಿದರು.

ನಾನು ಬದುಕಿರುವಾಗ ನನ್ನ ಕೆಲಸಗಳಿಗೆ ಹೆಚ್ಚು ಮಾನ್ಯ ಸಿಗದಿದ್ದರೂ ಮುಂದೆ ನಮ್ಮ ಕೆಲಸಗಳಿಗೆ ಹೆಚ್ಚು ಮಹತ್ವ ಸಿಗಲಿದೆ ಎಂದು ಮನಮೋಹನ್ ಸಿಂಗ್ ಅವರು ಬಹಳ‌ ಹಿಂದೆಯೇ ಹೇಳಿದ್ದರು‌ ಎಂದು ಸಿದ್ದರಾಮಯ್ಯ ತಿಳಿಸಿದರು.

ಮನಮೋಹನಸಿಂಗ್ ಬಡ ಜನರ ಹಿತಕ್ಕಾಗಿ ದೇಶದ ಆರ್ಥಿಕತೆ ರೂಪಿಸಿದ ತಜ್ಞರು: ಸಿಎಂ Read More

ಹುತಾತ್ಮ ಯೋಧರ ಕುಟುಂಬಕ್ಕೆ ಸರಕಾರದಿಂದ ನೆರವು: ಸಿದ್ದು ಘೋಷಣೆ

ಬೆಳಗಾವಿ: ಜಮ್ಮು ಕಾಶ್ಮೀರದಲ್ಲಿ ಅಪಘಾತಕ್ಕೆ ಈಡಾಗಿ ಹುತಾತ್ಮರಾದ ಪಾರ್ಥಿವ ಶರೀರಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಂತಿಮ ಗೌರವ ಸಲ್ಲಿಸಿದರು.

ಬೆಳಗಾವಿಯ ಸೇನಾ ಯುದ್ಧ ಸ್ಮಾರಕದಲ್ಲಿ ಸುಬೇದಾರ್ ದಯಾನಂದ ತಿರುಕಣ್ಣನವರ್, ಮಹೇಶ್ ಮಾರಿಗೊಂಡ ಅವರ ಪಾರ್ಥಿವ ಶರೀರಕ್ಕೆ ಪುಷ್ಪ ನಮನ ಸಲ್ಲಿಸಿ ಅಂತಿಮ ಗೌರವ ಸಲ್ಲಿಸಿದರು.

ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ, ಯೋಧರ ಬದುಕು, ಜೀವನ, ವೃತ್ತಿ ಅತ್ಯಂತ ಉನ್ನತವಾದದು. ನಮ್ಮ ರಾಜ್ಯದ ಯೋಧರು ಅಪಘಾತದಲ್ಲಿ ಹುತಾತ್ಮರಾಗಿರುವುದು ಅತ್ಯಂತ ನೋವಿನ ಸಂಗತಿ ಎಂದು ಹೇಳಿದರು.

ನಾಲ್ವರು ಯೋಧರ ಆತ್ಮಕ್ಕೆ ಶಾಂತಿ ಕೋರುತ್ತೇನೆ, ಅವರ ಕುಟುಂಬದವರ ನೋವಿನಲ್ಲಿ ನಾನು ಭಾಗಿಯಾಗುತ್ತೇನೆ ಎಂದು ತಿಳಿಸಿದರು.

ಸರಕಾರದಿಂದ ನಿಯಮಾನುಸಾರ ಹುತಾತ್ಮರ ಕುಟುಂಬಕ್ಕೆ ಸಲ್ಲಬೇಕಾದ ಸಕಲ ನೆರವನ್ನೂ ಒದಗಿಸಲಾಗುವುದು ಎಂದು ಮುಖ್ಯ ಮಂತ್ರಿಗಳು ಭರವಸೆ ನೀಡಿದರು.

ನಾಲ್ಕು ಮಂದಿ ಯೋದರುಗಳಾದ
ದಯಾನಂದ ತಿರುಕಣ್ಣನವರ್ ಬೆಳಗಾವಿ,
ಧನರಾಜ್ ಸುಭಾಷ್ ಚಿಕ್ಕೋಡಿ,
ಮಹೇಶ್ ನಾಗಪ್ಪ ಬಾಗಲಕೋಟೆ,
ಅನೂಪ್ ಪೂಜಾರಿ ಕುಂದಾಪುರ
ಅವರ ಆತ್ಮಕ್ಕೆ ಚಿರಶಾಂತಿ ದೊರಕಲಿ ಎಂದು ಪ್ರಾರ್ಥನೆ ಮಾಡುತ್ತೇನೆ ಎಂದು ಸಿಎಂ ಹೇಳಿದರು.

ಹುತಾತ್ಮ ಯೋಧರ ಕುಟುಂಬಕ್ಕೆ ಸರಕಾರದಿಂದ ನೆರವು: ಸಿದ್ದು ಘೋಷಣೆ Read More

ಸಿ.ಟಿ. ರವಿ ಪದ ಬಳಕೆ ನೋವು ತಂದಿದೆ:ಲಕ್ಷ್ಮೀ ಹೆಬ್ಬಾಳ್ಕರ್

ಬೆಳಗಾವಿ:ಚಿಂತಕರ ಚಾವಡಿ, ಹಿರಿಯರ ಸದನ ಎನ್ನಿಸಿಕೊಂಡ ಸ್ಥಳದಲ್ಲೇ ಸಿ. ಟಿ. ರವಿ ಅವರು ತೀರಾ ಅಸಹ್ಯ ಭಂಗಿಯಲ್ಲಿ ಆಕ್ಷೇಪಾರ್ಹ ಪದ ಬಳಕೆ ಮಾಡಿರುವುದು ನನಗೆ ತೀವ್ರ ನೋವು ತಂದಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ ಭಾವುಕರಾಗಿ ನುಡಿದರು.

ನಗರದ ತಮ್ಮ ಗೃಹ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ನೋವಿನಿಂದಲೇ ಮಾತು ಪ್ರಾರಂಭಿಸಿದ ಸಚಿವೆ, ಡಾ. ಬಿ. ಆರ್. ಅಂಬೇಡ್ಕರ್ ಅವರ ಕುರಿತು ಬಿಜೆಪಿಯ ಕೇಂದ್ರದ ನಾಯಕರು ಆಡಿದ ಮಾತಿಗೆ ಸದನದಲ್ಲಿ ನಾವು ಕಾಂಗ್ರೆಸ್ ಶಾಸಕರು ಆಕ್ಷೇಪಣೆಯ ಪ್ರತಿಭಟನೆ ಸಲ್ಲಿಸಿ ಶಿಸ್ತುಬದ್ಧವಾಗಿ ನಡೆದುಕೊಂಡಿದ್ದೆವು.
ಆದರೆ ಸಿ. ಟಿ. ರವಿ ಅವರು ತೀರಾ ಕಳಪೆ ಮಟ್ಟದ, ನಾಗರಿಕ ಸಮಾಜ ಸಹಿಸಿಕೊಳ್ಳದ, ವೈಯಕ್ತಿಕವಾಗಿ ಇನ್ನೊಬ್ಬರ ಚಾರಿತ್ರ್ಯ ಹರಣ ಮಾಡುವ ಹೇಳಿಕೆ ಸದನದಲ್ಲಿ ನೀಡಿದ್ದು ಸಾಮಾಜಿಕವಾಗಿ ಹಾಗೂ ಕಾನೂನಾತ್ಮಕವಾಗಿ ಅಪರಾಧವಾಗಿದೆ ಎಂದು ಹೇಳಿದರು.

ಕಾಂಗ್ರೆಸ್ ರಾಷ್ಟ್ರೀಯ ವರಿಷ್ಠರಾದ ರಾಹುಲ್ ಗಾಂಧಿ ಅವರ ಬಗ್ಗೆ ಸಿ. ಟಿ. ರವಿ ಅವರು ಡ್ರಗ್ ಅ್ಯಡಿಕ್ಟ್ ಎಂದು ಆಕ್ಷೇಪಾರ್ಹವಾಗಿ ಮಾತನಾಡಿದ್ದಕ್ಕೆ ಪ್ರತಿಯಾಗಿ ನೀವು ರಸ್ತೆ ಅಪಘಾತ ಮಾಡಿದ್ದೀರಿ ನೀವು ಕೊಲೆಗಡುಕರು ಅಲ್ಲವೇ ಎಂದು ನಾನು ತಿರುಗೇಟು ಕೊಟ್ಟಿದ್ದೆ. ರಾಜಕೀಯವನ್ನು ರಾಜಕೀಯವಾಗಿ ಎದುರಿಸಬೇಕಾಗಿದ್ದ ಸಿ. ಟಿ. ರವಿ ಅವರು ಚಾರಿತ್ರ್ಯ ಹರಣ, ವೈಯಕ್ತಿಕ ಗೌರವಕ್ಕೆ ಧಕ್ಕೆ ಹಾಗೂ ಮಹಿಳಾ ಸಮಾಜಕ್ಕೆ ಅವಹೇಳನ ಮಾಡಿದ್ದಾರೆ ಎಂದು ಲಕ್ಷ್ಮೀ ಹೆಬ್ಬಾಳಕರ್ ಆಕ್ಷೇಪಿಸಿದರು.

ಸಿ.ಟಿ. ರವಿ ಪದ ಬಳಕೆ ನೋವು ತಂದಿದೆ:ಲಕ್ಷ್ಮೀ ಹೆಬ್ಬಾಳ್ಕರ್ Read More

ಅಂಬೇಡ್ಕರ್‌ ಭಾವಚಿತ್ರ ಪ್ರದರ್ಶಿಸಿ ಶಾ ವಿರುದ್ಧ ಧಿಕ್ಕಾರ ಕೂಗಿದ ಕಾಂಗ್ರೆಸ್‌ ಸದಸ್ಯರು

ಬೆಳಗಾವಿ,ಸುವರ್ಣಸೌಧ: ಗುರುವಾರ ಕೂಡಾ ವಿಧಾನಸಭೆ ಮತ್ತು ಪರಿಷತ್‌ ಕಲಾಪದಲ್ಲಿ ಕಾಂಗ್ರೆಸ್‌ ಶಾಸಕರು ಅಂಬೇಡ್ಕರ್‌ ಭಾವಚಿತ್ರ ಪ್ರದರ್ಶಿಸಿ ಕೇಂದ್ರ ಗೃಹ ಸಚಿವ ಅಮಿತ್‌ ಶಾ ವಿರುದ್ಧ ಧಿಕ್ಕಾರ ಕೂಗಿದರು.

ವಿಧಾನಸಭೆ ಕಲಾಪ ಆರಂಭವಾಗುತ್ತಿದ್ದಂತೆ ಅಮಿತ್‌ ಶಾ ಹೇಳಿಕೆಗೆ ಖಂಡನೆ ವ್ಯಕ್ತಪಡಿಸಿ ಕಾಂಗ್ರೆಸ್ ಸದಸ್ಯರು ಚರ್ಚೆಗೆ ಆಗ್ರಹಿಸಿ, ನಿರ್ಣಯ ಕೈಗೊಳಲು ಒತ್ತಾಯಿಸಿದರು.

ಸದನದಲ್ಲಿ ಒಟ್ಟಾಗಿ ನಿಂತು ಅಂಬೇಡ್ಕರ್ ಫೊಟೋ ಹಿಡಿದು ಕಾಂಗ್ರೆಸ್ ಸದಸ್ಯರು ಧಿಕ್ಕಾರ ಕೂಗಿದರು. ಈ ಸಂದರ್ಭದಲ್ಲಿ ಬಿಜೆಪಿಯವರು ಕಾಂಗ್ರೆಸ್‌ನಿಂದಲೇ ಅಂಬೇಡ್ಕರ್‌ ಅವರಿಗೆ ಅನ್ಯಾಯವಾಗಿದೆ ಎಂದು ಹೇಳಿ ಪ್ರತಿಭಟಿಸಿದರು.ಈ ವೇಳೆ ಯಾರೊಬ್ಬರ ಮಾತೂ ಕೇಳದಂತೆ ಗದ್ದಲವಾಯಿತು.

ಈ ವೇಳೆ ಕಾಂಗ್ರೆಸ್ ಸದಸ್ಯರು ಸದನದಲ್ಲಿ ಪ್ರದರ್ಶಿಸಿದ ಅಂಬೇಡ್ಕರ್ ಭಾವಚಿತ್ರವನ್ನೇ ತೆಗೆದುಕೊಂಡು ಕಾಂಗ್ರೆಸ್ ವಿರುದ್ಧವೇ ಬಿಜೆಪಿ ಶಾಸಕ ಗುರುರಾಜ್ ಗಂಟಿಹೊಳೆ‌ ಪ್ರದರ್ಶಿಸಿ ವ್ಯಂಗ್ಯವಾಡಿದರು.

ಗದ್ದಲ ಚದರ ಸತತ ಜೋರಾಗುತ್ತಿದ್ದಂತೆ ಸ್ಪೀಕರ್‌ ಯು.ಟಿ.ಖಾದರ್ ಕೆಲಕಾಲ ಕಲಾಪವನ್ನು ಮುಂದೂಡಿದರು.

ಅಂಬೇಡ್ಕರ್‌ ಭಾವಚಿತ್ರ ಪ್ರದರ್ಶಿಸಿ ಶಾ ವಿರುದ್ಧ ಧಿಕ್ಕಾರ ಕೂಗಿದ ಕಾಂಗ್ರೆಸ್‌ ಸದಸ್ಯರು Read More