ಬಿಇಎಂಎಲ್ ನಲ್ಲಿ ಕನ್ನಡ ರಾಜ್ಯೋತ್ಸವ

ಮೈಸೂರು,ನವೆಂಬರ್. ೧: ಮೈಸೂರು ಜಿಲ್ಲೆಯ ಹೆಮ್ಮೆಯ ಬಿಇಎಂಎಲ್ ಸಂಸ್ಥೆ ವತಿಯಿಂದ 70ನೇ ವರ್ಷದ ಕನ್ನಡ ರಾಜ್ಯೋತ್ಸವವನ್ನು ವಿಶೇಷವಾಗಿ ಆಚರಿಸಲಾಯಿತು.

ರಾಜ್ಯೋತ್ಸವ ಪ್ರಯುಕ್ತ ನಾಡದೇವಿ ಶ್ರೀ ಭುವನೇಶ್ವರಿ ದೇವಿಯ ಸ್ತಬ್ದ ಚಿತ್ರ ಮೆರವಣಿಗೆ ಮಾಡಿ ಪೂಜೆ ಸಲ್ಲಿಸಲಾಯಿತು.

ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ
ಬಿ ಇ ಎಂ ಎಲ್ ಕನ್ನಡ ಸಂಘದ
ಅಧ್ಯಕ್ಷರು,ಪದಾಧಿಕಾರಿಗಳು ಸದಸ್ಯರು ಹಾಗೂ ಸಮಸ್ತ ಕಾರ್ಮಿಕ ಬಾಂಧವರು ಪಾಲ್ಗೊಂಡಿದ್ದರು.

ಬಿಇಎಂಎಲ್ ನಲ್ಲಿ ಕನ್ನಡ ರಾಜ್ಯೋತ್ಸವ Read More

ಬಿಇಎಂಎಲ್ ಮ್ಯಾನೇಜರ್ ಆತ್ಮಹತ್ಯೆ

ಮೈಸೂರು: ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್ (ಬಿಇಎಂಎಲ್) ಅಧಿಕಾರಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರು ಘಟನೆ ಮೈಸೂರಿನಲ್ಲಿ ನಡೆದಿದೆ.

ಮೈಸೂರಿನ ದಟ್ಟಗಳ್ಳಿ ಬಳಿಯ ಕೆಇಬಿ ಸಮುದಾಯ ಭವನದಲ್ಲಿ ಅಧಿಕಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಬಿಇಎಂಎಲ್ ಮ್ಯಾನೇಜರ್ ಮೋಹನ್ (54) ಆತ್ಮಹತ್ಯೆ ಮಾಡಿಕೊಂಡ ಅಧಿಕಾರಿ.

ಮೈಸೂರಿನ ಬೋಗಾದಿ ಬಳಿಯ ಅಪಾರ್ಟ್ ಮೆಂಟ್ ನಲ್ಲಿದ್ದ ಮೋಹನ್ ಪ್ರತಿದಿನದಂತೆ ಭಾನುವಾರ ಬೆಳಿಗ್ಗೆ ಕರ್ತವ್ಯಕ್ಕೆ ಹೋಗಿದ್ದರು.

ಅದೇನಾಯಿತೊ ತಿಳಿಯದು ದಟ್ಟಗಳ್ಳಿ ಬಳಿಯ ಕೆಇಬಿ ಸಮುದಾಯ ಭವನದ ವಾಚ್‌ಮ್ಯಾನ್ ಶೆಡ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕುವೆಂಪುನಗರ ಪೋಲೀಸ್ ಠಾಣೆ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

ಬಿಇಎಂಎಲ್ ಮ್ಯಾನೇಜರ್ ಆತ್ಮಹತ್ಯೆ Read More