ಕಲಾವಿದ ಮಹೇಶ ಎಸ್ ತಳವಾರ ಗೆ ಕ ಜಾ ಪ ದಶಮಾನೋತ್ಸವ ಗೌರವ ಪ್ರಶಸ್ತಿ

ಬೆಂಗಳೂರು: ಜೂನ್ 25 ರಂದು ನಡೆಯುವ ಕನ್ನಡ ಜಾನಪದ ಪರಿಷತ್ ಗೋವಿಂದರಾಜ ನಗರ ವಿಧಾನ ಸಭಾ ಕ್ಷೇತ್ರ ಘಟಕ ಪ್ರಥಮ ರಾಜ್ಯ ಕನ್ನಡ ಜಾನಪದ ಸಮ್ಮೇಳನ ಜಾನಪದ ಗೌರವ ಪ್ರಶಸ್ತಿಗೆ ದೊಡ್ಡಾಟ ಕಲಾವಿದ ಮಹೇಶ ಎಸ್ ತಳವಾರ ಅವರನ್ನು ಆಯ್ಕೆ ಮಾಡಲಾಗಿದೆ.

ಈ ಸಮ್ಮೇಳನದಲ್ಲಿ ೬೦ ಗಣ್ಯರಿಗೆ,ಜಾನಪದ ವಿದ್ವಾಂಸರಿಗೆ ಜಿ.ಶಂ.ಪ ರಾಜ್ಯ ಪ್ರಶಸ್ತಿ, ಮಧುರ ಚೆನ್ನ ರಾಜ್ಯ ಪ್ರಶಸ್ತಿ ಮತ್ತು ನಾಡೋಜ ಎಸ್ ಕೆ ಕರೀಂ ಖಾನ್ ರಾಜ್ಯ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ.

ಹಾಗೆಯೇ ೪೫ ಜನ ಕಲಾವಿದರಿಗೆ ದಶಮಾನೋತ್ಸವ ಜಾನಪದ ಗೌರವ ಪ್ರಶಸ್ತಿ ಮತ್ತು ೧೦೧ ಜನ ನಾಡಿನ ಯುವ ಕಲಾವಿದರಿಗೆ ರಾಜ್ಯ ಜಾನಪದ ಯುವ ಸಿರಿ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ.

ಕಾರ್ಯಕ್ರಮದಲ್ಲಿ ಅನೇಕ ಸಾಂಸ್ಕೃತಿಕ ಕಾರ್ಯಕ್ರಮಗಳು,ಜಾನಪದ ಗೋಷ್ಠಿ, ಮಹಿಳಾ ಗೋಷ್ಠಿ,ಬಹಿರಂಗ ಸಭೆ ಮತ್ತು ವಿಚಾರ ಸಂಕಿರಣಗಳು ನಡೆಯಲಿದ್ದು ಗಣ್ಯರು,ಜಾನಪದ ವಿದ್ವಾಂಸರು ಈ ಸಮ್ಮೇಳನಕ್ಕೆ ಸಾಕ್ಷಿಯಾಗಲಿದ್ದಾರೆ.

ಕಲಾವಿದ ಮಹೇಶ ಎಸ್ ತಳವಾರ ಗೆ ಕ ಜಾ ಪ ದಶಮಾನೋತ್ಸವ ಗೌರವ ಪ್ರಶಸ್ತಿ Read More

ಮುಸ್ಲಿಮರಿಗೆ ಶೇ.4 ರಷ್ಟು ಗುತ್ತಿಗೆ ಮೀಸಲು; ಜೆಡಿಎಸ್ ನಿಲುವು ಸ್ಪಷ್ಟಪಡಿಸಿದ ಹೆಚ್.ಡಿ.ಕೆ

ಬೆಂಗಳೂರು:‌ ಮೀಸಲು ಧರ್ಮಾಧಾರಿತ ಅಲ್ಲ. ಅದು ಸಾಮಾಜಿಕ ನ್ಯಾಯದ ತಳಹದಿಯ ಮೇಲೆ ನಿಂತಿದೆ, ನಿಂತಿರಬೇಕು ಎನ್ನುವುದು ಜೆಡಿಎಸ್ ಅಚಲ ನಿಲುವು ಎಂದು ಕೇಂದ್ರ ‌ಸಚಿವ ಹೆಚ್ ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು,ಮುಸ್ಲಿಮರಿಗೆ ಶೇ.4ರಷ್ಟು ಗುತ್ತಿಗೆ ಮೀಸಲು ಕುರಿತು ಜೆಡಿಎಸ್ ನಿಲುವನ್ನು ಸ್ಪಷ್ಟಪಡಿಸಿದ್ದಾರೆ.

ಮುಸ್ಲಿಮರಿಗೆ ಕಾಂಗ್ರೆಸ್ ಸರಕಾರ.ಶೇ.4ರಷ್ಟು ಗುತ್ತಿಗೆ ಮೀಸಲಾತಿ ನೀಡಿರುವುದರ ವಿರುದ್ಧದ ಹೋರಾಟದಲ್ಲಿ ಜೆಡಿಎಸ್ ಮತ್ತು ಬಿಜೆಪಿ ನಡುವೆ ಹೊಂದಾಣಿಕೆ ಇಲ್ಲ, ಗೊಂದಲವಿದೆ ಎನ್ನುವುದು ಸತ್ಯಕ್ಕೆ ದೂರ. ಕೆಲ ಪತ್ರಿಕೆ ಮತ್ತು ಸುದ್ದಿವಾಹಿನಿಗಳಲ್ಲಿ ಬಂದಿರುವ ವರದಿಗಳು ಸತ್ಯಕ್ಕೆ ದೂರ ಎಂದು ತಿಳಿಸಿದ್ದಾರೆ.

ವಿಧಾನಮಂಡಲ ಅಧಿವೇಶನ ಆರಂಭಕ್ಕೆ ಮೊದಲೇ ಬೆಂಗಳೂರಿನಲ್ಲಿ ಎನ್ ಡಿ ಎ ‘ಸಮನ್ವಯ ಸಮಿತಿ’ ಸಭೆ ನಡೆದು ಎಲ್ಲಾ ವಿಚಾರಗಳನ್ನೂ ಸಮಗ್ರವಾಗಿ ಚರ್ಚಿಸಲಾಗಿದೆ. ಸರಕಾರದ ವಿರುದ್ಧ ಹೋರಾಟದ ರೂಪುರೇಷೆ ರೂಪಿಸಲಾಗಿತ್ತು. ಆ ಸಭೆಯಲ್ಲಿ ಸ್ವತಃ ನಾನೂ ಭಾಗವಹಿಸಿದ್ದೆ ಎಂದು ಅವರು ಹೇಳಿದ್ದಾರೆ.

ಕಾಂಗ್ರೆಸ್ ಸರಕಾರವು ಕೇವಲ ಚುನಾವಣಾ ಸ್ವಾರ್ಥಕ್ಕೆ, ವೋಟ್ ಬ್ಯಾಂಕ್ ರಾಜಕೀಯಕ್ಕಾಗಿ ‘ಸಾಮಾಜಿಕ ನ್ಯಾಯದ ಆದರ್ಶ ಪರಿಕಲ್ಪನೆ’ಯಾದ ಮೀಸಲಾತಿ ವ್ಯವಸ್ಥೆಯನ್ನು ಹಾಳು ಮಾಡುತ್ತಿದೆ. ಮೀಸಲಾತಿಯನ್ನೇ ಓಲೈಕೆ ಅಸ್ತ್ರವನ್ನಾಗಿ ಮಾಡಿಕೊಂಡು ರಾಜ್ಯದ ಜನತೆಯ ದಿಕ್ಕು ತಪ್ಪಿಸುತ್ತಿದೆ. ರಾಷ್ಟ್ರದ ಉದ್ದಗಲಕ್ಕೂ ಕಾಂಗ್ರೆಸ್ ಮೀಸಲು ಅರಾಜಕತೆ ಸೃಷ್ಟಿಸುತ್ತಿದೆ ಎಂದು ಅವರು ಆರೋಪ ಮಾಡಿದ್ದಾರೆ.

ಜೆಡಿಎಸ್ – ಬಿಜೆಪಿ ಈಗಾಗಲೇ ಒಟ್ಟಾಗಿ ಅನೇಕ ಜನಪರ ಹೋರಾಟಗಳಲ್ಲಿ ಭಾಗಿಯಾಗಿವೆ, ಮುಂದೆಯೂ ಹೋರಾಡುತ್ತವೆ. ಈ ಬಗ್ಗೆ ರಾಜಿ ಪ್ರಶ್ನೆಯೇ ಇಲ್ಲ. ಶೈಕ್ಷಣಿಕ, ಆರ್ಥಿಕ, ಸಾಮಾಜಿಕವಾಗಿ ದುರ್ಬಲವಾಗಿರುವ ಎಲ್ಲಾ ಸಮುದಾಯಗಳಿಗೆ ಸಮಾನ ಅವಕಾಶಗಳು, ಸೌಲಭ್ಯಗಳು ಸಿಗಬೇಕು. ಆದರೆ, ಒಂದು ನಿರ್ದಿಷ್ಟ ಸಮುದಾಯದ ತುಷ್ಟೀಕರಣ, ಬಹು ಸಮುದಾಯಗಳ ತುಚ್ಚೀಕರಣ ನ್ಯಾಯ ಸಮ್ಮತವಲ್ಲ. ಇದು ಸಂವಿಧಾನಕ್ಕೆ ಎಸಗುವ ಅಪಚಾರ ಎಂದು ಕುಮಾರಸ್ವಾಮಿ ಅವರು ಕಿಡಿಕಾರಿದ್ದಾರೆ.

ಮುಸ್ಲಿಮರಿಗೆ ಶೇ.4 ರಷ್ಟು ಗುತ್ತಿಗೆ ಮೀಸಲು; ಜೆಡಿಎಸ್ ನಿಲುವು ಸ್ಪಷ್ಟಪಡಿಸಿದ ಹೆಚ್.ಡಿ.ಕೆ Read More

ಪುಸ್ತಕ ಓದುವ ಅಭ್ಯಾಸ ಬೆಳೆಸಿಕೊಳ್ಳಿ:ಸಿದ್ದರಾಮಯ್ಯ ಕರೆ

ಬೆಂಗಳೂರು: ಪುಸ್ತಕ ಮತ್ತು ಸಾಹಿತ್ಯದ ಓದು ಮನುಷ್ಯನನ್ನು ಹೆಚ್ಚೆಚ್ಚು ಮಾನವೀಯಗೊಳಿಸುತ್ತದೆ,ಆದ್ದರಿಂದ ಎಲ್ಲರೂ ಓದುವ ಅಭ್ಯಾಸ ಬೆಳೆಸಿಕೊಳ್ಳಬೇಕು ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ಸಣ್ಣ

ವಿಧಾನ ಸೌಧದಲ್ಲಿ ಆಯೋಜಿಸಿದ್ದ ಪುಸ್ತಕ ಮೇಳ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಸಿಎಂ
ಪುಸ್ತಕಗಳನ್ನು ಖರೀದಿಸಿ, ಮನೆ ಮನೆಯಲ್ಲಿ ಗ್ರಂಥಾಲಯ ಮಾಡಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಮಕ್ಕಳು ಮೊಬೈಲ್ ಮತ್ತು ಇಂಟರ್ನೆಟ್ ಚಟದಿಂದ ಹೊರಗೆ ಬಂದು ಪುಸ್ತಕಗಳನ್ನು ಓದುವ ಹವ್ಯಾಸ ಬೆಳೆಸಿಕೊಳ್ಳಬೇಕು,
ಸಮಯ ಸಿಕ್ಕಾಗಲೆಲ್ಲಾ ಓದುವ ಅಭ್ಯಾಸ ಬೆಳೆಸಿಕೊಳ್ಳಬೇಕು ಎಂದು ಎಂದು ಮಕ್ಕಳಿಗೆ ಕಿವಿಮಾತು ಹೇಳಿದರು.

ಇನ್ನು ಮುಂದೆ ಪ್ರತೀ ವರ್ಷ ವಿಧಾನಸೌಧದಲ್ಲಿ ಸಾಹಿತ್ಯ, ಪುಸ್ತಕ ಹಬ್ಬ ಆಯೋಜಿಸಲಾಗುವುದು ಎಂದು ಸಿದ್ದರಾಮಯ್ಯ ಭರವಸೆ ನೀಡಿದರು

ಕಾರ್ಯಕ್ರಮದಲ್ಲಿ ಉಪ ಮುಖ್ಯ ಮಂತ್ರಿ ಡಿ.ಕೆ.ಶಿವಕುಮಾರ್,ವಿಧಾನ ಸಭಾಧ್ಯಕ್ಷ ಯು.ಟಿ.ಖಾದರ್,ವಿಧಾನ ಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ ಹಾಗೂ ಸಚಿವರು,ಶಾಸಕರು ಅಧಿಕಾರಿಗಳು ಪಾಲ್ಗೊಂಡಿದ್ದರು.

ಪುಸ್ತಕ ಓದುವ ಅಭ್ಯಾಸ ಬೆಳೆಸಿಕೊಳ್ಳಿ:ಸಿದ್ದರಾಮಯ್ಯ ಕರೆ Read More

ಬಿಬಿಎಂಪಿ ಚುನಾವಣೆ ಮುಂದೂಡುವುದೇ ಬಿಜೆಪಿ,ಕಾಂಗ್ರೆಸ್ ಶಾಸಕರ ಗುರಿ:ಆಪ್

ಬೆಂಗಳೂರು: ಬೆಂಗಳೂರಿನ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳ ಶಾಸಕರುಗಳು ಯಾವುದೇ ಕಾರಣಕ್ಕೂ ಬಿಬಿಎಂಪಿ ಚುನಾವಣೆಯನ್ನು ನಡೆಸಲು ಬಿಡುವುದಿಲ್ಲ ಎಂದು ಆಮ್ ಆದ್ಮಿ ಪಕ್ಷದ ಬೆಂಗಳೂರು ನಗರ ಅಧ್ಯಕ್ಷ ಡಾ. ಸತೀಶ್ ಕುಮಾರ್ ದೂರಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,ಗ್ರೇಟರ್ ಬೆಂಗಳೂರು ಮಸೂದೆ ಎಂಬ ನೆಪದಲ್ಲಿ ಕಾಂಗ್ರೆಸ್ ಪಕ್ಷದ ಶಾಸಕರು ಒಂದು ಕಡೆಯಾದರೆ ಮತ್ತೊಂದು ಕಡೆ ಈ ಮಸೂದೆಯನ್ನು ವಿರೋಧಿಸಿ ಸರ್ವೋಚ್ಚ ನ್ಯಾಯಾಲಯದ ಸಮಯವನ್ನು ವ್ಯರ್ಥ ಮಾಡಲು ಹೊರಟಿರುವ ಬಿಜೆಪಿ ಶಾಸಕರು ಯಾವುದೇ ಕಾರಣಕ್ಕೂ ಬಿಬಿಎಂಪಿ ಚುನಾವಣೆಯನ್ನು ಸದ್ಯದಲ್ಲಿ ನಡೆಸಲು ಬಿಡುವುದಿಲ್ಲ ಎಂದು ಹೇಳಿದರು.

ಈ ಎರಡೂ ಪಕ್ಷಗಳ ಶಾಸಕರಿಗೆ ಬೆಂಗಳೂರಿನ ಅಭಿವೃದ್ಧಿ ಬೇಕಾಗಿಲ್ಲ ಬೆಂಗಳೂರಿನಿಂದ ಬರುವ ಕಟ್ಟಡ ನಿರ್ಮಾಣ ತೆರಿಗೆ, ಅಕ್ರಮ ಟೆಂಡರ್ ಗಳು, ಬೃಹತ್ ಕಾಮಗಾರಿಗಳ ಮೇಲಿನ ಸಾವಿರಾರು ಕೋಟಿ ರೂಪಾಯಿಗಳ ಭ್ರಷ್ಟಾಚಾರದ ಆಮದನಿಗಳ ಮೇಲೆ ಇವರ ಕಣ್ಣು ನೆಟ್ಟಿದೆ ಎಂದು ಡಾ. ಸತೀಶ್ ಕುಮಾರ್ ಗಂಭೀರ ಆರೋಪ ಮಾಡಿದರು.

ಬಿಜೆಪಿ ಸರ್ಕಾರದಲ್ಲಿ ಕೂಡಲೇ ಚುನಾವಣೆಯನ್ನು ನಡೆಸಿ ಎಂದು ಕಾಂಗ್ರೆಸ್ ಪಕ್ಷದ ಪಾಲಿಕೆ ಸದಸ್ಯರಾದ ಶಿವರಾಜ್ ಹಾಗೂ ಅಬ್ದುಲ್ ವಾಹಿಬ್ ಕೋರ್ಟ್‌ ಮೆಟ್ಟಿಲೇರಿದ್ದರು. ಈಗ ಅಂತಿಮವಾಗಿ ಸರ್ವೋಚ್ಚ ನ್ಯಾಯಾಲಯವು ತೀರ್ಪನ್ನು ನೀಡುತ್ತಿರುವ ಸಂದರ್ಭದಲ್ಲಿ ಬಿಜೆಪಿಯವರು ಮೂರು ದಿನಗಳ ಹಿಂದೆ ಪಕ್ಷದ ವಕೀಲರ ಸಮಿತಿಯನ್ನು ನೇಮಿಸಿ ಸರ್ವೋಚ್ಚ ನ್ಯಾಯಾಲಯದಲ್ಲಿ ವಾದ ಮಾಡುತ್ತಿರುವುದನ್ನು ನೋಡಿದರೆ ಅನವಶ್ಯಕವಾಗಿ ಗೊಂದಲಗಳನ್ನು ಉಂಟು ಮಾಡಿ ಚುನಾವಣೆಯನ್ನು ಮುಂದೂಡುವುದೇ ಇವರ ಮುಖ್ಯ ಉದ್ದೇಶವಾದಂತಿದೆ ಎಂದು ಅನುಮಾನ ವ್ಯಕ್ತಪಡಿಸಿದರು.

ಬೆಂಗಳೂರು ಅನೇಕ ಸಮಸ್ಯೆಗಳ ಆಗರವಾಗಿದ್ದು ನಾಗರೀಕರು ವಾಸ ಮಾಡಲು ಯೋಗ್ಯವಾದ ನಗರವಾಗಿ ಉಳಿದಿಲ್ಲ. ಕಳೆದ ಐದು ವರ್ಷಗಳಿಂದ ಬಿಬಿಎಂಪಿಗೆ ಚುನಾವಣೆ ನಡೆಸದೆ ಎರಡೂ ಪಕ್ಷಗಳು ಸಂವಿಧಾನದ ಆಶಯವನ್ನು ಗಾಳಿಗೆ ತೂರಿ, ವಿಧಾನಸಭೆಯಲ್ಲಿ ನೂತನ ಮಸೂದೆಗಳನ್ನು ಮಂಡನೆ ಮಾಡುವ ಮೂಲಕ, ನ್ಯಾಯಾಲಯಗಳ ಸಮಯವನ್ನು ವ್ಯರ್ಥ ಮಾಡಿ ಎರಡು ಪಕ್ಷಗಳ ಶಾಸಕರು ಕಾಲಹರಣ ಮಾಡುತ್ತಿದ್ದಾರೆ ಎಂದು ದೂರಿದರು.

ಮೂರು ಪಕ್ಷಗಳ ಶಾಸಕರುಗಳ ಪ್ರಮುಖ ನಾಯಕರುಗಳ ಕಪ್ಪು ಹಣದ ಸಾವಿರಾರು ಕೋಟಿ ಬೇನಾಮಿ ಆಸ್ತಿಗಳು ಬೆಂಗಳೂರಿನ ಸುತ್ತಮುತ್ತ ಇರುವ ಕಾರಣ ಗ್ರೇಟರ್ ಬೆಂಗಳೂರು ಕಾಯ್ದೆಯ ಮೂಲಕ ಏಳು ಪಾಲಿಕೆಗಳಾಗಿ ವಿಭಜನೆ ಮಾಡುತ್ತಿದ್ದಾರೆ. ಪಕ್ಷವು ಮುಂದಿನ ದಿವಸಗಳಲ್ಲಿ ಈ ಬಗ್ಗೆ ಹೋರಾಟ ನಡೆಸಲಿದೆ ಎಂದು ಡಾ. ಸತೀಶ್ ಎಚ್ಚರಿಸಿದರು.

ಬಿಬಿಎಂಪಿ ಚುನಾವಣೆ ಮುಂದೂಡುವುದೇ ಬಿಜೆಪಿ,ಕಾಂಗ್ರೆಸ್ ಶಾಸಕರ ಗುರಿ:ಆಪ್ Read More

ಕಾಲಬಂದಂತೆ ಜಾನಪದ ಪರಿವರ್ತನೆ ಗೊಳ್ಳುತ್ತಾ ಹೋಗುತ್ತದೆ:ಡಾ.ಬಾಲಾಜಿ

ಬೆಂಗಳೂರು: ಜಾನಪದ ಸಾಯಲು ಒಪ್ಪುವುದಿಲ್ಲ, ಕಾಲಬಂದಂತೆ ಪರಿವರ್ತನೆಗೊಳ್ಳುತ್ತಾ ಮುಂದುವರಿಯುತ್ತದೆ ಎಂದು ಕನ್ನಡ ಜಾನಪದ ಪರಿಷತ್ ರಾಜ್ಯಾಧ್ಯಕ್ಷ ಹಾಗೂ ಭಾರತ ಸರ್ಕಾರದ ಐಸಿಸಿಆರ್ ಸದಸ್ಯ ಡಾ ಜಾನಪದ ಎಸ್ ಬಾಲಾಜಿ ತಿಳಿಸಿದರು.

ಬೆಂಗಳೂರಿನ ಯಲಹಂಕ ಶೇಷಾದ್ರಿಪುರಂ ಪ್ರಥಮ ದರ್ಜೆ ಕಾಲೇಜು ಸಭಾಂಗಣದಲ್ಲಿ ಭಾರತ ಸರ್ಕಾರದ ರಾಷ್ಟ್ರೀಯ ಸೇವಾ ಯೋಜನೆಯ ಪ್ರಾಂತೀಯ ಕಚೇರಿ ಬೆಂಗಳೂರು ಹಾಗೂ ಮೈ ಭಾರತ್ ಸಹಯೋಗದಲ್ಲಿ ಏರ್ಪಡಿಸಿದ ಮೈ ಭಾರತ್ ದೇಸಿ ಕ್ರಿಯೆಗಳನ್ನು ಡಾ ಎಸ್ ಬಾಲಾಜಿ ಸಸಿಗೆ ನೀರು ಹಾಕುವ ಮೂಲಕ ಉದ್ಘಾಟಿಸಿ ಮಾತನಾಡಿದರು.

ದೇಸಿ ಕ್ರೀಡೆಗಳನ್ನು ಸರ್ಕಾರಗಳು ಪೋಷಿಸಿ ಜಾಗೃತಿ ಮೂಡಿಸುತ್ತಿರುವುದು ಅತ್ಯಂತ ಸಂತಸದ ಸಂಗತಿ, ಈ ನಿಟ್ಟಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಭಾರತ ಸರ್ಕಾರ ಈ ಕಾರ್ಯಕ್ರಮವನ್ನು ಜೀವಂತವಾಗಿ ಉಳಿಸಿರುವುದು ಪ್ರಶಂಸೆಗೆ ಪಾತ್ರ ಎಂದು ತಿಳಿಸಿದರು.

ದೇಶಿ ಕ್ರೀಡೆಗಳಿಂದ ಆರೋಗ್ಯ ಸುಧಾರಿಸುತ್ತದೆ, ಇದರಿಂದ ಮನಸ್ಸಿಗೆ ಶಾಂತಿ ನೆಮ್ಮದಿ ದೊರೆಯುವುದರಿಂದ ಇದನ್ನು ಯುವ ಜನರು ಅನುಕರಣೆ ಮಾಡಬೇಕೆಂದು ಡಾ.ಜಾನಪದ ಎಸ್ ಬಾಲಾಜಿ ಕರೆ ನೀಡಿದರು.

ಭಾರತ ಸರ್ಕಾರದ ಪ್ರಾಂತ್ಯ ನಿರ್ದೇಶಕ ರಾಷ್ಟ್ರೀಯ ಸೇವಾ ಯೋಜನೆ ಕಾರ್ತಿಕೇಯನ್ ಮಾತನಾಡಿ ಅಂತರಾಷ್ಟ್ರೀಯ ಭಾವೈಕ್ಯತೆ ಶಿಬಿರಗಳಿಂದ ನಾವೆಲ್ಲ ಒಂದೇ ಎಂಬ ಭಾವನೆ ಮೂಡುತ್ತದೆ ಏಕತೆಯನ್ನು ಕಾಪಾಡುವ ನಿಟ್ಟಿನಲ್ಲಿ ಇದು ಬಹಳ ಮುಖ್ಯ ಎಂದು ತಿಳಿಸಿದರು.

ರಾಷ್ಟ್ರೀಯ ಸೇವಾ ಯೋಜನೆ ಯುವ ಅಧಿಕಾರಿ ಉಪ್ಪಿನ್ ಮಾತನಾಡಿ ದೇಸಿ ಕ್ರೀಡೆಗಳನ್ನ ಜಾನಪದಕ್ಕಾಗಿ ಕಾರ್ಯ ನಿರ್ವಹಿಸುತ್ತಿರುವ ಡಾ ಎಸ್ ಬಾಲಾಜಿ ಅವರು ಉದ್ಘಾಟಿಸಿರುವುದು ಅರ್ಥಪೂರ್ಣ ಹಾಗೂ ಇವರು ಮಾಡುತ್ತಿರುವ ಕಾರ್ಯಕ್ಕೆ ನೊಬೆಲ್ ಪ್ರಶಸ್ತಿ ಸಹ ನೀಡಬಹುದು ಎಂದು ತಿಳಿಸಿದರು.

ದೇಸೀ ಕ್ರೀಡೆಗಳಾದ ಹಗ್ಗ ಜಗ್ಗಾಟ, ಲಗೋರಿ, ಗಿಲ್ಲಿ ದಾಂಡ್ಲು, ಕುಂಟೆಬಿಲ್ಲೆ ಮುಂತಾದ ಕ್ರೀಡೆಗಳನ್ನು ಏರ್ಪಡಿಸಲಾಗಿತ್ತು.

ರಾಷ್ಟ್ರೀಯ ಸೇವಾ ಯೋಜನೆಯ 11 ರಾಜ್ಯದ ಅಧಿಕಾರಿಗಳು, 250ಕ್ಕೂ ಹೆಚ್ಚು ಸ್ವಯಂಸೇವಕರು, ಶೇಷಾದ್ರಿ ಪುರಂ ಪ್ರಥಮ ದರ್ಜೆ ಕಾಲೇಜಿನ ಎನ್ಎಸ್ಎಸ್ ಅಧಿಕಾರಿ ನವೀನ್ ಮತ್ತಿತರರು ಉಪಸ್ಥಿತರಿದ್ದರು.

ಕಾಲಬಂದಂತೆ ಜಾನಪದ ಪರಿವರ್ತನೆ ಗೊಳ್ಳುತ್ತಾ ಹೋಗುತ್ತದೆ:ಡಾ.ಬಾಲಾಜಿ Read More

ನೆಲಮಂಗಲ ಬಳಿ ಸರಣಿ ಅಪಘಾತ:6 ಮಂದಿ ದುರ್ಮರಣ

ಬೆಂಗಳೂರು: ಎರಡು ಕಾರು, ಎರಡು ಲಾರಿ, ಸ್ಕೂಲ್ ಬಸ್ ನಡುವೆ ನಡೆದ ಸರಣಿ ಅಪಘಾತ ಸಂಭವಿಸಿ, ಒಂದೇ ಕುಟುಂಬದ 6 ಮಂದಿ ಮೃತಪಟ್ಟ ಘಟನೆ ಬೆಂಗಳೂರಿನ ನೆಲಮಂಗಲ‌ ತಾಲೂಕಿನ ಟಿ.ಬೇಗೂರು ಬಳಿ ನಡೆದಿದೆ.

ತುಮಕೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ, ಟಿ.ಬೇಗೂರು ಬಳಿ ಘಟನೆ ನಡೆದಿದೆ. ಕಾರಿನ ಮೇಲೆ ಕಂಟೇನರ್‌ ಬಿದ್ದ ಪರಿಣಾಮ ಕಾರಿನಲ್ಲಿದ್ದ ಒಂದೇ ಮನೆಯ‌ 6 ಮಂದಿ ದುರ್ಮರಣಕ್ಕೀಡಾಗಿದ್ದಾರೆ.

ವಿಜಯಪುರದ ಇಂಜಿನಿಯರ್ ಚಂದ್ರಯಾಗಪ್ಪ, ಗೌರ ಬಾಯಿ, ದೀಕ್ಷಾ, ಧ್ಯಾನ್ ಮೃತಪಟ್ಟವರೆಂದು ಗುರುತಿಸಲಾಗಿದೆ.

ಅಪಘಾತದ ವೇಳೆ ಕಂಟೇನರ್‌ ಕಾರಿನ ಮೇಲೆ ಬಿದ್ದ ಪರಿಣಾಮ, ಕಾರು ಸಂಪೂರ್ಣ ಅಪ್ಪಚ್ಚಿಯಾಗಿದೆ, ಕಾರು ಹೊರತೆಗೆಯಲು ಪೊಲೀಸರು ಹರಸಾಹಸಪಟ್ಟರು.

ಹೆವಿ ಲೋಡ್ ತುಂಬಿದ್ದ ಕಂಟೇನರ್‌ ಮೇಲೆತ್ತಲು ಲಾರಿ ಬೆಲ್ಟ್‌, ಚೈನ್‌ಗಳನ್ನ ತರಿಸಲಾಗಿತ್ತು. ಕೊನೆಗೆ ಹರಸಾಹಸ ಪಟ್ಟು ಮೂರು ಕ್ರೇನ್‌ಗಳ ಸಹಾಯದಿಂದ ಕಂಟೇನರ್‌ ಮೇಲೆತ್ತಿ ಕಾರನ್ನು ಹೊರತೆಗೆಯಲಾಯಿತು.

ಇದರಿಂದ ತುಮಕೂರು ರಸ್ತೆಯಲ್ಲಿ ಸುಮಾರು 10 ಕಿಮೀ ನಷ್ಟು ಟ್ರಾಫಿಕ್‌ ಜಾಮ್‌ ಉಂಟಾಗಿದ್ದು, ವಾಹನ ಸವಾರರು ಪರದಾಡುವಂತಾಯಿತು.

ವೀಕೆಂಡ್‌ ಪ್ರವಾಸಕ್ಕೆ ಹೊರಟಿದ್ದ ಕುಟುಂಬ 6 ತಿಂಗಳ ಹಿಂದೆಯಷ್ಟೇ ಕಾರು ಖರೀದಿಸಿತ್ತೆಂದು ತಿಳಿದುಬಂದಿದೆ.

ನೆಲಮಂಗಲ ಬಳಿ ಸರಣಿ ಅಪಘಾತ:6 ಮಂದಿ ದುರ್ಮರಣ Read More