ಅಪಘಾತ: ಬೆಸ್ಕಾಂ ಎಮ್ ಡಿ ಮಹಾಂತೇಶ್ ಬೀಳಗಿ ಸೇರಿ ಮೂವರು ನಿಧನ
ಕಲಬುರಗಿ: ಕಲಬುರಗಿ ಯ ಜೇವರ್ಗಿ ಬಳಿ ನಡೆದ ರಸ್ತೆ ಅಪಘಾತದಲ್ಲಿ
ಬೆಸ್ಕಾಂ ಎಮ್ಡಿ ಮಹಾಂತೇಶ್ ಬೀಳಗಿ ಸೇರಿದಂತೆ ಮೂವರು ಮೃತಪಟ್ಟಿದ್ದಾರೆ.
ವಿಜಯಪುರದಿಂದ ಕಲಬುರಗಿಗೆ ಸಂಬಂಧಿಕರ ಮದುವೆ ಕಾರ್ಯಕ್ಕೆ ತೆರಳುತ್ತಿದ್ದಾಗ ಜೇವರ್ಗಿ ತಾಲೂಕಿನ ಗೌನಹಳ್ಳಿ ಬಳಿ ಬೀಳಗಿ ಅವರ ಇನ್ನೋವಾ ಕಾರು ಮರಕ್ಕೆ ಅಪ್ಪಳಿಸಿದೆ.
ಅಪಘಾತದಲ್ಲಿ ಸ್ಥಳದಲ್ಲೇ ಇಬ್ಬರು ಮೃತಪಟ್ಟಿದ್ದಾರೆ. ಗಂಭೀರ ಗಾಯಗೊಂಡಿದ್ದ ಮಹಾಂತೇಶ್ ಬೀಳಗಿ ಅವರನ್ನು ಆಸ್ಪತ್ರೆಗೆ ಕರೆತರುವಷ್ಟರಲ್ಲಿ ಮೃತಪಟ್ಟಿದ್ದರು.
ಆಸ್ಪತ್ರೆಗೆ ಎಸ್ಪಿ ಅಡ್ಡೂರು ಶ್ರೀನಿವಾಸುಲು, ಡಿಎಚ್ಒ ಶರಣಬಸಪ್ಪ ಕ್ಯಾತನಾಳ್ ಸೇರಿ ಹಲವು ಅಧಿಕಾರಿಗಳು ಭೇಟಿ ನೀಡಿದ್ದಾರೆ.
ಕರ್ನಾಟಕ ರಾಜ್ಯ ಖನಿಜ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಮಹಾಂತೇಶ್ ಬೀಳಗಿ ಅವರಿಗೆ 51 ವರ್ಷ. ಅವರು ಹಲವು ಜಿಲ್ಲೆಗಳಲ್ಲಿ ಜಿಲ್ಲಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದಾರೆ.
ಅಪಘಾತ: ಬೆಸ್ಕಾಂ ಎಮ್ ಡಿ ಮಹಾಂತೇಶ್ ಬೀಳಗಿ ಸೇರಿ ಮೂವರು ನಿಧನ Read More