ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್

ಬೆಂಗಳೂರು: ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ರೈಡ್ ಮಾಡುವ ಮೂಲಕ ಶಾಕ್‌ ನೀಡಿದೆ.

ಬೀದರ್‌, ಮೈಸೂರು ಸೇರಿದಂತೆ ರಾಜ್ಯದ ಹಲವೆಡೆ ಲೋಕಾಯುಕ್ತ ಅಧಿಕಾರಿಗಳು ಭ್ರಷ್ಟರಿಗೆ ಚಳಿ ಬಿಡಿಸಿದ್ದಾರೆ.

ಬೀದರ್‌ನ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿ ಸುನಿಲ್ ಕುಮಾರ್ ಚಂದ್ರಪ್ರಭಾ ನಿವಾಸದ ಮೇಲೆ ದಾಳಿ ಮಾಡಿದ ಅಧಿಕಾರಿಗಳು,ದಾಖಲೆ ಪರಿಶೀಲಿಸುತ್ತಿದ್ದಾರೆ.

ಬೀದರ್ ನಗರದ ಜೈಲ್ ಕಾಲೋನಿಯ ಎಸ್‌ಬಿಪಿ ನಗರದ ನಿವಾಸದ ಮೇಲೆ ದಾಳಿ ಮಾಡಿದ ಲೋಕಾಯುಕ್ತ ಅಧಿಕಾರಿಗಳು, ದಾಖಲೆಗಳ ತೀವ್ರ ಪರಿಶೀಲನೆ ಮಾಡುತ್ತಿದ್ದಾರೆ.

ಅವರು ಬೀದರ್ ಜಿಲ್ಲೆ ಹುಮ್ನಾಬಾದ್ ತಾಲೂಕಿನ ಹಳ್ಳಿಖೇಡ ಬಿ ಗ್ರಾಮದ ನಿವಾಸಿಯಾಗಿದ್ದು, ಸದ್ಯ ಕಲಬುರ್ಗಿಯಲ್ಲಿ ಕರ್ತವ್ಯ ಮಾಡುತ್ತಿದ್ದಾರೆ. ಹೀಗಾಗಿ, ಕಲಬುರ್ಗಿಯ ಆರೋಗ್ಯ ಇಲಾಖೆಯ ಕಚೇರಿ ಹಾಗೂ ನಿವಾಸದ ಮೇಲೂ ದಾಳಿ ಮಾಡಲಾಗಿದೆ.

ತುಮಕೂರಿನಲ್ಲಿ ಕೆಐಎಡಿಬಿ ಕಚೇರಿ ಮೇಲೆ ದಾಳಿ ಮಾಡಲಾಗಿದ್ದು,ಎಇಇ ರಾಜೇಶ್ ಅವರ ಕಚೇರಿ ಕಡತಗಳ ಪರಿಶೀಲನೆ ನಡೆಸಿದ್ದಾರೆ. ಕಳೆದ ಒಂದು ತಿಂಗಳ ಹಿಂದಷ್ಟೇ ತುಮಕೂರಿನ ಕೆಐಎಡಿಬಿ ಕಚೇರಿಗೆ ರಾಜೇಶ್‌ ಬಂದಿದ್ದರು.

ಕೊಪ್ಪಳದಲ್ಲಿ ಎರಡು ಕಡೆ ದಾಳಿ ಲೋಕಾ ಅಧಿಕಾರಿಳು ದಾಳಿ ಮಾಡಿ ಪರಿಶೀಲನೆ ನಡೆಸಿದ್ದಾರೆ. ಶೇಕು ಚೌಹಾಣ್‌ಗೆ ಸೇರಿದ ಎರಡು ಮನೆ, ಅಭಿಷೇಕ್ ಬಡಾವಣೆ ಹಾಗೂ ಕೀರ್ತಿ ಕಾಲೋನಿಯಲ್ಲಿರುವ ಮನೆಗಳ ಮೇಲೂ ದಾಳಿ ಮಾಡಲಾಗಿದೆ.

ಬಳ್ಳಾರಿಯ ಸ್ವಗ್ರಾಮ ಕಲ್ಲುಕಂಬದ ಮನೆಯಲ್ಲಿ ದಾಖಲೆಗಳ ಪರಿಶೀಲನೆ ನಡೆಸಲಾಗುತ್ತಿದೆ.

ಬೆಂಗಳೂರು ಟೌನ್ ಆ್ಯಂಡ್ ರೂರಲ್ ಪ್ಲಾಬಿಂಗ್ ಆಫೀಸರ್ ಆಗಿರುವ ಮಾರುತಿ ಬಗಲಿ ಮೂಲತಃ ಬಳ್ಳಾರಿಯ ಕಲ್ಲುಕಂಬ ನಿವಾಸಿ. ಬಳ್ಳಾರಿ ಮಾತ್ರವಲ್ಲದೇ ರಾಜ್ಯದ ವಿವಿಧ ಕಡೆ ಮಾರುತಿ ಬಗಲಿ ಅಕ್ರಮ ಆಸ್ತಿ ಮಾಡಿದ್ದಾರೆಂಬ ಆರೋಪವಿದೆ.

ಕೊಪ್ಪಳದ ಡಿಸ್ಟ್ರಿಕ್ಟ್‌ ಇಂಡಸ್ಟ್ರಿಯಲ್‌ ಆ್ಯಂಡ್ ಕಮರ್ಷಿಯಲ್ ಟ್ಯಾಕ್ಸ್ ಉಪ ನಿರ್ದೇಶಕ ಶೆಕು ಚೌಹಾಣ್ ಮನೆ ಹಾಗೂ ಕಚೇರಿ ಮೇಲೆ ದಾಳಿ ಮಾಡಲಾಗಿದೆ‌

ಮೈಸೂರಿನಲ್ಲಿ ಇಬ್ಬರು ಅಧಿಕಾರಿಗಳ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ.

ಮೈಸೂರು ಮಹಾನಗರ ಪಾಲಿಕೆ ಉಪ ವಿಭಾಗಧಿಕಾರಿ ವೆಂಕಟರಾಮ್, ಕೌಶಲ್ಯಾಭಿವೃದ್ದಿ ಇಲಾಖೆ ಜಂಟಿ ನಿರ್ದೇಶಕ ಮಂಜುನಾಥಸ್ವಾಮಿ ಅವರುಗಳ ನಿವಾಸದಲ್ಲಿ ಅಧಿಕಾರಿಗಳು ದಾಖಲೆ ಪರಿಶೀಲಿಸುತ್ತಿದ್ದಾರೆ.

ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ Read More

ಕಾಂಗ್ರೆಸ್ ನಲ್ಲಿ ಕೆಲ ಗುಂಪುಗಳು ಸೈಲೆಂಟಾಗಿ ಕೆಲಸ ಮಾಡುತ್ತಿವೆ:ನಿಖಿಲ್ ಟಾಂಗ್

ಬೀದರ್: ಕಾಂಗ್ರೆಸ್ ನಲ್ಲಿ ಕೆಲವು ಗುಂಪು ನೇರ, ಇನ್ನು ಕೆಲವು ಗುಂಪುಗಳು ಸೈಲೆಂಟಾಗಿ ಕೆಲಸ ಮಾಡುತ್ತಿವೆ ಎಂದು ಜೆಡಿಎಸ್ ನಾಯಕ ನಿಖಿಲ್ ಕುಮಾರಸ್ವಾಮಿ ಟಾಂಗ್ ನೀಡಿದರು.

ಬೇರೆಯವರಂತೆ ಸರ್ಕಾರ ಪತನ ಆಗುತ್ತದೆ ಅಂತ ನಾನು ಹೇಳುವುದಿಲ್ಲ,ಆದರೆ ಕಾಂಗ್ರೆಸ್‌ ಪಕ್ಷದಲ್ಲಿ ಹಲವು ಗುಂಪುಗಳಿವೆ ಎಂದು ಹೇಳಿದರು.

ಬೀದರ್ ನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, 5 ವರ್ಷ ನಾನೇ ಸಿಎಂ ಎಂಬ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯಿಸಿ,ಸಿಎಂ ಖುರ್ಚಿಗಾಗಿ ಕಾಂಗ್ರೆಸ್‌ ನಲ್ಲಿ ಹಲವು ಪ್ರಕ್ರಿಯೆಗಳು ನಡೆಯುತ್ತಿವೆ. ಅದೇನೋ ಕ್ರಾಂತಿ ಆಗುತ್ತೆ ಅಂತ ಹೇಳ್ತಿದ್ದಾರೆ ನೋಡೋಣ ಎಂದು ಮಾರ್ಮಿಕವಾಗಿ ನುಡಿದರು.

ರಾಜ್ಯದಲ್ಲಿ ಅಭಿವೃದ್ಧಿ ಕೆಲಸ ಮಾಡದೆ ಎರಡೂವರೆ ವರ್ಷ ಕಾಲಹರಣ ಮಾಡಿದ್ದಾರೆ. ಅಭಿವೃದ್ಧಿಗೆ ಅನುದಾನ ನೀಡುತ್ತಿಲ್ಲ ಎಂದು ಖುದ್ದು ಅವರ ಪಕ್ಷದ ಹಿರಿಯ ಶಾಸಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎಂದು ಹೇಳಿದರು.

ರಾಜ್ಯಕ್ಕೆ ದೊಡ್ಡ ಗಾತ್ರದ ಬಜೆಟ್ ಕೊಟ್ಟಿದ್ದೀನಿ ಎಂದು ಸಿಎಂ ಬೆನ್ನು ತಟ್ಟುಕೊಳ್ಳುತ್ತಾರೆ ಅದರಲ್ಲಿ ಸಾಲ ಎಷ್ಟಾಗಿದೆ ಎಂಬುದನ್ನ ಜನರಿಗೆ ಹೇಳಲಿ ಎಂದು ನಿಖಿಲ್ ಸವಾಲು ಹಾಕಿದರು.

2028ರ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್-ಬಿಜೆಪಿ ಸೀಟು ಹಂಚಿಕೆ ವಿಚಾರ ಕುರಿತು ಪ್ರತಿಕ್ರಿಯಿಸಿದ ನಿಖಿಲ್ ಕುಮಾರಸ್ವಾಮಿ,ಇದರಲ್ಲಿ ಯಾವುದೇ ಗೊಂದಲ ಇಲ್ಲ, ಸಂಸತ್ ಚುನಾವಣೆಯಲ್ಲಿ ಕೈ ಜೋಡಿಸಿದ್ದೇವೆ. ಅದನ್ನ ರಾಜ್ಯದ ಜನ ನೋಡಿದ್ದಾರೆ, ಅದರಲ್ಲಿ ಮುಚ್ಚು ಮರೆ ಇಲ್ಲ ಎಂದು ಹೇಳಿದರು.

ಪ್ರಧಾನಿ ಮೋದಿ ಜೀ ಅವರ ನಾಯಕತ್ವದಲ್ಲಿ ನಮ್ಮ ದೇಶ ಆರ್ಥಿಕವಾಗಿ ಮೂರನೇ ದೊಡ್ಡ ದೇಶವಾಗಿದೆ. ರಾಜ್ಯದ ಅಭಿವೃದ್ಧಿಯೇ ನಮ್ಮ ಗುರಿಯಾಗಿದ್ದು, ನಮ್ಮಲ್ಲಿ ಯಾವುದೇ ಗೊಂದಲಗಳಿಲ್ಲ ಎಂದು ಪುನರುಚ್ಛರಿಸಿದರು.

ಕಾಂಗ್ರೆಸ್ ನಲ್ಲಿ ಕೆಲ ಗುಂಪುಗಳು ಸೈಲೆಂಟಾಗಿ ಕೆಲಸ ಮಾಡುತ್ತಿವೆ:ನಿಖಿಲ್ ಟಾಂಗ್ Read More

ಕಾಶಿ ಬಳಿ ಅಪಘಾತ:ಬೀದರ್ ನ ಐದು ಮಂದಿ ದುರ್ಮರಣ

ಲಕ್ನೋ: ರಸ್ತೆ ಅಪಘಾತ ಸಂಭವಿಸಿ ಮಹಾ ಕುಂಭಮೇಳಕ್ಕೆ ತೆರಳಿದ್ದ ಬೀದರ್ ಮೂಲದ ಒಂದೇ ಕುಟುಂಬದ 5 ಜನ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಉತ್ತರ ಪ್ರದೇಶದ ಕಾಶಿ ಬಳಿ ನಡೆದಿದೆ.

ಲಾರಿ ಮತ್ತು ಕ್ರೂಸರ್‌ ನಡುವೆ ಇಂದು ಬೆಳಗ್ಗೆ ಮಿರಜಾಪೂರ್ ಜಿಲ್ಲೆಯ ರೂಪಾಪೂರ ಬಳಿ ಅಪಘಾತ ಸಂಭವಿಸಿ 5 ಮಂದಿ ಸ್ಥಳದಲ್ಲೇ ಮೃತಪಟ್ಟರೆ 7 ಮಂದಿ ತೀವ್ರವಾಗಿ ಗಾಯಗೊಂಡಿದ್ದಾರೆ.

ಬೀದರ್ ನಗರದ ಲಾಡಗೇರಿ ಬಡಾವಣೆಯ ನಿವಾಸಿಗಳಾದ ಸುನೀತಾ(35) ಸಂತೋಷ್‌ (43) ನೀಲಮ್ಮ (60) ಅನಿತಾ ಮೃತಪಟ್ಟ ನತದೃಷ್ಟರು.

ಒಂದೇ ಗಾಡಿಯಲ್ಲಿ ಒಟ್ಟು 14 ಜನ ಕುಂಭ ಮೇಳಕ್ಕೆ ತೆರಳಿದ್ದರು. ಪುಣ್ಯ ಸ್ನಾನ ಮಾಡಿದ ಬಳಿಕ ಪ್ರಯಾಗ್‌ರಾಜ್‌ನಿಂದ ಕಾಶಿ ಕಡೆಗೆ ಕ್ರೂಸರ್‌ನಲ್ಲಿ ತೆರಳುತ್ತಿದ್ದರು.

ಇಂದು ಬೆಳಗ್ಗೆ ಕಾಶಿಯಿಂದ 20 ಕಿಲೋ‌ ಮೀಟರ್‌ ದೂರದಲ್ಲಿ ಲಾರಿಗೆ ಹಿಂದಿನಿಂದ ಕ್ರೂಸರ್‌ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ 5 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದರೆ ಉಳಿದವರ ಸ್ಥಿತಿ ಗಂಭೀರವಾಗಿದೆ.

ಕಾಶಿ ಬಳಿ ಅಪಘಾತ:ಬೀದರ್ ನ ಐದು ಮಂದಿ ದುರ್ಮರಣ Read More

ರಾಜ್ಯದ ವಿವಿಧೆಡೆ ಬೆಳ್ಳಂಬೆಳಿಗ್ಗೆ ಲೋಕಾಯುಕ್ತ ಶಾಕ್

ಬೆಂಗಳೂರು: ಆದಾಯಕ್ಕೂ ಮೀರಿ ಅಕ್ರಮ ಆಸ್ತಿ ಗಳಿಕೆ ಆರೋಪದ ಮೇಲೆ ಬೆಂಗಳೂರು ಸೇರಿ ರಾಜ್ಯದ ವಿವಿಧೆಡೆ ಬೆಳ್ಳಂಬೆಳಿಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಭ್ರಷ್ಠರಿಗೆ ಬಿಸಿ ಮುಟ್ಟಿಸಿದ್ದಾರೆ.

ರಾಯಚೂರು, ಚಿಕ್ಕಮಗಳೂರು, ಬೀದರ್, ಬೆಳಗಾವಿ, ಗದಗ, ಬಳ್ಳಾರಿ, ಮತ್ತು ಬೆಂಗಳೂರಿನಲ್ಲಿ ಒಟ್ಟು 8 ಅಧಿಕಾರಿಗಳ ಮನೆಗಳ ಮೇಲೆ ದಾಳಿ ಮಾಡಲಾಗಿದೆ.

ಬೆಂಗಳೂರಿನಲ್ಲಿ ಸಾರಿಗೆ ಇಲಾಖೆ ಜಂಟಿ ನಿರ್ದೇಶಕಿ ಶೋಭಾ, ಚಿಕ್ಕಮಗಳೂರು ಜಿಲ್ಲೆ ಕಡೂರಿನ ಆಡಳಿತ ವೈದ್ಯಾಧಿಕಾರಿ ಡಾ. ಎಸ್.ಎನ್ ಉಮೇಶ್ ನಿವಾಸಗಳ ಮೇಲೆ ಲೋಕಾಯುಕ್ತ ದಾಳಿ ನಡೆದಿದೆ.

ಬೀದರ್ ಜಿಲ್ಲೆಯ ಸಣ್ಣ ನೀರಾವರಿ ಇಲಾಖೆ ಇಂಜಿನಿಯರ್ ರವೀಂದ್ರ, ಬೆಳಗಾವಿ ಜಿಲ್ಲೆಯ ಖಾನಾಪುರದ ತಹಶೀಲ್ದಾರ್ ಪ್ರಕಾಶ್ ಶ್ರೀಧರ್, ತುಮಕೂರಿನ ನಿವೃತ್ತ ಆರ್​ಟಿಒ ಅಧಿಕಾರಿ ಎಸ್.ರಾಜು, ಗದಗ-ಬೆಟಗೇರಿ ನಗರಸಭೆ ಎಇಇ ಆರ್​.ಎಚ್ ಹುಚ್ಚೇಶ್ ಮನೆ ಮೇಲೆ ದಾಳಿ‌‌ ನಡೆದಿದೆ.

ಬಳ್ಳಾರಿ ಜಿಲ್ಲೆಯ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿ ಮನೆ, ರಾಯಚೂರು ಜಿಲ್ಲೆಯ ಬೆಸ್ಕಾಂ ಜೆಇ ಹುಲಿರಾಜ್ ಮನೆ ಮೇಲೂ ದಾಳಿ ಮಾಡಿ ದಾಖಲೆಗಳನ್ನು ‌ಪರಿಶೀಲಿಸಲಾಗುತ್ತಿದೆ.

ಗದಗ ಬೆಟಗೇರಿ ನಗರಸಭೆಯ ಕಾರ್ಯನಿರ್ವಾಹಕ ಇಂಜಿನಿಯರ್ ಹುಚ್ಚೇಶ್ ಬಂಡಿವಡ್ಡರ್​‌ ಅವರ ಮನೆ ಮತ್ತು ನಗರಸಭೆ ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಗದಗ, ಗಜೇಂದ್ರಗಡ, ಬಾಗಲಕೋಟೆ ಸೇರಿದಂತೆ ಒಟ್ಟು ಐದು ಕಡೆ ದಾಳಿ ನಡೆದಿದೆ.

ಲೋಕಾಯುಕ್ತ ಎಸ್​ಪಿ ಹನಮಂತರಾಯ್, ಡಿವೈಎಸ್​ಪಿ ವಿಜಯ್ ಬಿರಾದಾರ್, ಪಿಎಸ್​ಐ ಎಸ್. ಎಸ್ ತೇಲಿ ಸೇರಿದಂತೆ ಲೋಕಾಯುಕ್ತ ಸಿಬ್ಬಂದಿ ದಾಳಿಯಲ್ಲಿ ಭಾಗಿಯಾಗಿದ್ದಾರೆ.

ರಾಜ್ಯದ ವಿವಿಧೆಡೆ ಬೆಳ್ಳಂಬೆಳಿಗ್ಗೆ ಲೋಕಾಯುಕ್ತ ಶಾಕ್ Read More