ಮೋದಿ,ನಿತೀಶ್‌ ಅಭಿವೃದ್ಧಿಪರ ಆಡಳಿತ;ಎನ್‌ಡಿಎಗೆ ಗೆಲುವಿನ ಹಾರ: ಯದುವೀರ್‌

ಮೈಸೂರು: ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಹಾರ ಮುಖ್ಯಮಂತ್ರಿ ನಿತೀಶ್‌ ಕುಮಾರ್‌ ಅವರ ಅಭಿವೃದ್ಧಿಪರ ಆಡಳಿತಕ್ಕೆ ಬಿಹಾರದ ಜನತೆ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟಕ್ಕೆ ಅಭೂತಪೂರ್ವ ಜಯದ ಹಾರ ತೊಡಿಸಿದ್ದಾರೆ ಎಂದು ಸಂಸದ ಯದುವೀರ ಒಡೆಯರ್ ತಿಳಿಸಿದ್ದಾರೆ.

ಬಿಹಾರ ಚುನಾವಣೆ ಫಲಿತಾಂಶ ಸಂಬಂಧ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಸಂಸದರು, ಬಿಜೆಪಿ ನೇತೃತ್ವದ ಮೈತ್ರಿಕೂಟದ ದಾಖಲೆಯ ಗೆಲುವು ಸ್ಮರಣೀಯ ಎಂದು ಹೇಳಿದ್ದಾರೆ.

ವಿಕಸಿತ ಭಾರತಕ್ಕೆ ಮೋದಿ ಅವರ ದೃಢ ಸಂಕಲ್ಪ ಮತ್ತು ಬಿಹಾರದಲ್ಲಿ ಕೈಗೊಂಡ ಅಭಿವೃದ್ಧಿಪರ ಯೋಜನೆಗಳು ಬಿಜೆಪಿಗೆ ಕೈ ಹಿಡಿದಿವೆ. ಬಿಜೆಪಿ ಪರವಾಗಿ ನಾನು ಬಿಹಾರ ಜನರನ್ನು ಅಭಿನಂದಿಸುತ್ತೇನೆ ಎಂದು ತಿಳಿಸಿದ್ದಾರೆ.

ಕಾಂಗ್ರೆಸ್‌ ಪಕ್ಷವು ಮತಚೋರಿ ಎಂಬ ಸುಳ್ಳಿನ ಕಥೆಯನ್ನು ಹೇಳಿಕೊಂಡು ಕಾಲ ಕಳೆಯುತ್ತಿದೆ.ಆದರೆ ಬಿಜೆಪಿ-ಜೆಡಿಯು ಜನಪರ ಕೆಲಸಗಳನ್ನು ಕೈಗೊಳ್ಳುತ್ತಿದೆ. ಇದೇ ನಮ್ಮ ಮೈತ್ರಿಕೂಟಕ್ಕೂ ಮಹಾ ಘಟಬಂಧನಕ್ಕೆ ಇರುವ ವ್ಯತ್ಯಾಸ ಎಂದು ಯದುವೀರ್‌ ತಿಳಿಸಿದ್ದಾರೆ.

ದೇಶದಲ್ಲಿ ನರೇಂದ್ರ ಮೋದಿ ಪರ ಅಲೆ ಹೇಗಿದೆ ಎಂಬುದು ಇದರಿಂದ ಮತ್ತೊಮ್ಮೆ ಸಾಬೀತಾಗುತ್ತದೆ. ನಮ್ಮ ಬಿಜೆಪಿ ಸರ್ಕಾರದಿಂದ ದೇಶಕ್ಕೆ ಇನ್ನಷ್ಟು ಹೊಸ ಹೊಸ ಕೊಡುಗೆಗಳು ದೊರೆಯಲಿದೆ. ಕರ್ನಾಟಕದಲ್ಲೂ ಮುಂದಿನ ದಿನಗಳಲ್ಲಿ ಕೇಸರಿ ಅಲೆ ಏಳಲಿದೆ ಎಂದು ಯದುವೀರ್‌ ಒಡೆಯರ್‌ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಮೋದಿ,ನಿತೀಶ್‌ ಅಭಿವೃದ್ಧಿಪರ ಆಡಳಿತ;ಎನ್‌ಡಿಎಗೆ ಗೆಲುವಿನ ಹಾರ: ಯದುವೀರ್‌ Read More

ಬಿಹಾರದಲ್ಲಿ ಎನ್‌ಡಿಎ ಮೈತ್ರಿಕೂಟಕ್ಕೆ ಜಯ: ಮೈಸೂರು ಪಾಕ್ ವಿತರಿಸಿದ ಅಪೂರ್ವ ಸ್ನೇಹ ಬಳಗ

ಮೈಸೂರು: ಮೈಸೂರಿನ ಚಾಮುಂಡಿಪುರಂ ನಲ್ಲಿ ಅಪೂರ್ವ ಸ್ನೇಹ ಬಳಗದ ವತಿಯಿಂದ
ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವು ದಾಖಲಿಸಿದ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಮೈಸೂರು ಪಾಕ್ ವಿತರಿಸಿ ಸಂಭ್ರಮಿಸಲಾಯಿತು.

ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಷಾ , ನಿತೀಶ್ ಕುಮಾರ್ ಅವರಿಗೆ ಜೈಕಾರ ಕೂಗಿ ಸಂಭ್ರಮಿಸಿದರು.

ಮೈಸೂರು ನಗರ ಬಿಜೆಪಿ ಪ್ರಧಾನ ಕಾರ್ಯದರ್ಶಿ ಕೇಬಲ್ ಮಹೇಶ್, ಬಿಜೆಪಿ ವೈದ್ಯಕೀಯ ಪ್ರಕೋಷ್ಠ ಸಂಚಾಲಕ ಗಿರೀಶ್, ಅಪೂರ್ವ ಸ್ನೇಹ ಬಳಗದ ಅಧ್ಯಕ್ಷರಾದ ಅಪೂರ್ವ ಸುರೇಶ್, ಮೈಸೂರು ನಗರ ಎಸ್ ಸಿ ಮೋರ್ಚ ಪ್ರಧಾನ ಕಾರ್ಯದರ್ಶಿ ಕಾರ್ತಿಕ್ ಮರಿಯಪ್ಪ, ಉದ್ಯಮಿ ಜಯರಾಮ್, ಆನಂದ್, ಸುಚೇಂದ್ರ, ಜತ್ತಿ ಪ್ರಸಾದ್, ಪುರುಷೋತ್ತಮ್, ಶಿವಲಿಂಗ ಸ್ವಾಮಿ, ಜಗದೀಶ್ ಮತ್ತಿತರರು ಹಾಜರಿದ್ದರು.

ಬಿಹಾರದಲ್ಲಿ ಎನ್‌ಡಿಎ ಮೈತ್ರಿಕೂಟಕ್ಕೆ ಜಯ: ಮೈಸೂರು ಪಾಕ್ ವಿತರಿಸಿದ ಅಪೂರ್ವ ಸ್ನೇಹ ಬಳಗ Read More