ತಕ್ಷಣ ಗೃಹಲಕ್ಷ್ಮೀ ಯೋಜನೆ ಹಣ ಬಿಡುಗಡೆಗೆ ಹೇಮಾ ನಂದೀಶ್ ಆಗ್ರಹ

ಮೈಸೂರು: ರಾಜ್ಯ ಸರಕಾರದ ಗೃಹಲಕ್ಷ್ಮೀ ಯೋಜನೆಯ ಹಣ ಕೂಡಲೇ ಬಿಡುಗಡೆಗೊಳಿಸುವಂತೆ ಮೈಸೂರು ನಗರ ಬಿಜೆಪಿ ಉಪಾಧ್ಯಕ್ಷೆ ಹೇಮಾ ನಂದೀಶ್ ಆಗ್ರಹಿಸಿದ್ದಾರೆ.

ಕರ್ನಾಟಕದಲ್ಲಿ ಗ್ಯಾರಂಟಿ ಯೋಜನೆಗಳ ಆಮಿಷ ನೀಡಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಇದೀಗ ಯೂ ಟರ್ನ್ ಹೊಡೆಯುವ ಲಕ್ಷಣ ತೋರಿಸುತ್ತಿದೆ ಎಂದು ಟೀಕಿಸಿದ್ದಾರೆ.

ನನಗೂ ಫ್ರೀ, ನಿನಗೂ ಫ್ರೀ, ಹೆಣ್ಣು ಮಕ್ಕಳ ಖಾತೆಗೆ ಪ್ರತಿ ತಿಂಗಳು 2000 ರೂ. ಹಣ ಜಮಾವಣೆ, ಅನ್ನಭಾಗ್ಯ, ಯುವನಿಧಿ ಎಂದು ಚುನಾವಣಾ ಪ್ರಚಾರದಲ್ಲಿ ಘಂಟಾಘೋಷವಾಗಿ ಹೇಳುತ್ತಿದ್ದ ಸಿದ್ದರಾಮಯ್ಯ ಅವರು ಈಗ ಯೋಜನೆ ಜಾರಿಗೆ ಹಣದ ಕೊರತೆ ಇದೆ ಎಂದು ಜಾರಿಗೊಳ್ಳುತ್ತಿದ್ದಾರೆ ಎಂಬುದಾಗಿ ಹೇಮಾ ನಂದೀಶ್ ದೂರಿದ್ದಾರೆ.

ಅನ್ನಭಾಗ್ಯದ ನಗದು ಫಲಾನುಭವಿಗಳಿಗೆ ನೀಡದೆ ಐದು ತಿಂಗಳಾಗಿದೆ. ಗೃಹಲಕ್ಷ್ಮೀ ಯೋಜನೆಯ ಮಾಸಿಕ ಹಣ ಫಲಾನುಭವಿಗಳ ಖಾತೆಗೆ ಪಾವತಿಸದೆ ಮೂರು ತಿಂಗಳಾಗಿದೆ. ಸರ್ಕಾರ ಕೂಡಲೇ ಗ್ಯಾರಂಟಿ ಯೋಜನೆಯ ಫಲಾನುಭವಿ ಗಳಿಗೆ ಹಣವನ್ನು ಪಾವತಿಸಬೇಕೆಂದು ಅವರು ಒತ್ತಾಯಿಸಿದ್ದಾರೆ.

ಬಸ್ ಪ್ರಯಾಣ ದರ, ಮೆಟ್ರೊ ರೈಲು ದರ, ವಿದ್ಯುತ್ ದರ ಏರಿಕೆ ಮಾಡಿ ಜನಸಾಮಾನ್ಯರ ಮೇಲೆ ಬರೆ ಎಳೆ ಯುತ್ತಿರುವ ಸರ್ಕಾರ, 5 ರೂಪಾಯಿ ಇದ್ದ ಜನನ, ಮರಣ ದೃಢೀಕರಣ ಪತ್ರದ ದರವನ್ನು ಏಕಾಏಕಿ 50 ರೂಪಾಯಿಗೆ ಏರಿಸುವುದರ ಮೂಲಕ ಜನವಿರೋಧಿ, ಜನರ ಜೇಬು ಲೂಟಿ ಮಾಡಲು ಹೊರಟಿರುವ ಸರ್ಕಾರ ಎಂಬುದು ಸಾಬೀತು ಪಡಿಸಿದೆ ಎಂದು ಪ್ರಕಟಣೆಯಲ್ಲಿ ಹೇಮಾ ನಂದೀಶ್ ವ್ಯಂಗ್ಯ ವಾಡಿದ್ದಾರೆ.

ತಕ್ಷಣ ಗೃಹಲಕ್ಷ್ಮೀ ಯೋಜನೆ ಹಣ ಬಿಡುಗಡೆಗೆ ಹೇಮಾ ನಂದೀಶ್ ಆಗ್ರಹ Read More

ಚುನಾವಣೆಗಾಗಿ ಬಿಜೆಪಿ ವಿವಾದ ಸೃಷ್ಟಿಸುತ್ತಿದೆ- ಸಿದ್ದರಾಮಯ್ಯ

ಬೆಂಗಳೂರು: ಬಿಜೆಪಿಯವರು ರಾಜಕೀಯ ಮಾಡಲು ಹೊರಟಿದ್ದು, ಚುನಾವಣೆಯ ಉದ್ದೇಶದಿಂದ ವಿವಾದವನ್ನು ಸೃಷ್ಟಿಸುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದರು.

ಮಾದ್ಯಮದವರೊಂದಿಗೆ ಮಾತನಾಡಿದ ಸಿಎಂ,ರೈತರ ಜಮೀನು ವಕ್ಫ್ ಆಸ್ತಿ ಎಂದು ನೋಟಿಸ್ ನೀಡಿರುವ ಬಗ್ಗೆ ಸಂಸದ ತೇಜಸ್ವಿ ಸೂರ್ಯ ಸೇರಿದಂತೆ ಬಿಜೆಪಿಯವರು ಧ್ವನಿ ಎತ್ತಿದ್ದಾರೆ, ಸರ್ಕಾರ ರೈತರನ್ನು ಅವರ ಜಮೀನುಗಳಿಂದ ಒಕ್ಕಲೆಬ್ಬಿಸುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಇದರಲ್ಲಿ ಯಾವುದೇ ವಿವಾದ ಇಲ್ಲದಿದ್ದರೂ ಬೇಕೆಂದೇ‌ ವಿವಾದ ಹುಟ್ಟು ಹಾಕುತ್ತಿದ್ದಾರೆ ಬಿಜೆಪಿಯವರು ಎಂದು ಸಿಎಂ ಗರಂ ಆಗಿ ನುಡಿದರು.

ರೈತರಿಗೆ‌ ನೀಡಿರುವ ನೋಟಿಸ್ ಗಳನ್ನು ವಾಪಸ್ಸು ಪಡೆಯಲಾಗುವುದು ಎಂದು ತಿಳಿಸಿದರು.

ಚುನಾವಣೆಗಾಗಿ ಬಿಜೆಪಿ ವಿವಾದ ಸೃಷ್ಟಿಸುತ್ತಿದೆ- ಸಿದ್ದರಾಮಯ್ಯ Read More