ಬೆಲೆ ಏರಿಕೆ ಖಂಡಿಸಿ ಬಿಜೆಪಿ, ಕಾಂಗ್ರೆಸ್ ವಿರುದ್ಧ ಎಎಪಿ ಕರಪತ್ರ ಅಭಿಯಾನ

ಬೆಂಗಳೂರು: ನಿರಂತರ‌ ಬೆಲೆ‌ ಏರಿಸುತ್ತಿರುವ ಕಾಂಗ್ರೆಸ್ ಮತ್ತು ಬಿಜೆಪಿ ಸರ್ಕಾರಗಳ ವಿರುದ್ಧ ಆಮ್ ಆದ್ಮಿ ಪಕ್ಷದ ವತಿಯಿಂದ
ಕರಪತ್ರ ಅಭಿಯಾನ ಹಮ್ಮಿಕೊಳ್ಳಲಾಯಿತು.

ಬೆಂಗಳೂರಿನ ಕೆಂಗೇರಿ ವಿಧಾನಸಭಾ ಕ್ಷೇತ್ರದಲ್ಲಿ ಇಂದು ಆಪ್ ಕಾರ್ಯಕರ್ತರು ಬೆಲೆ ಏರಿಕೆಗೆ ಕಾರಣವಾಗಿರುವ ಕಾಂಗ್ರೆಸ್, ಬಿಜೆಪಿ ಸರ್ಕಾರಗಳ ವಿರುದ್ಧ
ತುಘಲಕ್ ಮಾದರಿ ದರೋಡೆ ಎಂಬ ಘೋಶ‌ ವಾಕ್ಯ ದಡಿ ಕರಪತ್ರ ಹಂಚುವ ಮೂಲಕ ಅಭಿಯಾನವನ್ನು ನಡೆಸಿದರು.

ಪಕ್ಷದ ಕಾರ್ಯಾಧ್ಯಕ್ಷ ಸೀತಾರಾಮ್ ಗುಂಡಪ್ಪ ಹಾಗೂ ಯಶವಂತಪುರ ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ಶಶಿಧರ್ ಆರಾಧ್ಯ ಅವರ ನೇತೃತ್ವದಲ್ಲಿ ಅಭಿಯಾನ ಹಮ್ಮಿಕೊಳ್ಳಲಾಯಿತು.

ಈ ವೇಳೆ ನೂರಾರು ಮಂದಿ ನಾಗರಿಕರು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಬೆಲೆ ಏರಿಕೆ ನೀತಿ ವಿರುದ್ಧ ಕಿಡಿಕಾರಿದರು.

ಮುಂದಿನ ದಿನಗಳಲ್ಲಿ ನಾಗರೀಕರು ಬೀದಿಗಿಳಿದು ಹೋರಾಟ ಮಾಡುವ ಪರಿಸ್ಥಿತಿ ಬರುತ್ತದೆ ಎಂದು ಸೀತಾರಾಮ್ ಗುಂಡಪ್ಪ ಎಚ್ಚರಿಸಿದರು.

Lಅಭಿಯಾನದಲ್ಲಿ ಪಕ್ಷದ ಬೆಂಗಳೂರು ಪ್ರಧಾನ ಕಾರ್ಯದರ್ಶಿ ಜಗದೀಶ್ ಚಂದ್ರ, ಪ್ರಸನ್ನ ದೇವಗರೆ ,ವಿಶ್ವನಾಥ್ , ಮುನೇಶ್ ಆನೇಕಲ್, ಜೋಶ್ವ ಸರವಣ ಜಯನಗರ, ಉಮೇಶ್ ಯಾದವ, ದೇವರ ಸಂ ದಾಸರಹಳ್ಳಿ, ನಿರಂಜನ್ ಆಗರ, ಗೌರಿ, ಪುಟ್ಟಣ್ಣ , ಯುವ ಘಟಕದ ಅಧ್ಯಕ್ಷರು
ಪ್ರಸನ್ನ ಕೆಂಗೇರಿ ಹಾಗೂ ಸ್ಥಳೀಯ ಕಾರ್ಯಕರ್ತರು ಭಾಗವಹಿಸಿದ್ದರು.

ಬೆಲೆ ಏರಿಕೆ ಖಂಡಿಸಿ ಬಿಜೆಪಿ, ಕಾಂಗ್ರೆಸ್ ವಿರುದ್ಧ ಎಎಪಿ ಕರಪತ್ರ ಅಭಿಯಾನ Read More

ಬಿಜೆಪಿ ಸರ್ಕಾರದ ಹಗರಣಗಳ ತನಿಖೆ: ಸಚಿವಸಂಪುಟ ಉಪ ಸಮಿತಿ ರಚನೆ- ಸಿಎಂ

ಬೆಂಗಳೂರು: ಹಿಂದಿನ ಬಿಜೆಪಿ ಸರ್ಕಾರದಲ್ಲಿ ಸುಮಾರು 21 ಹಗರಣಗಳು ನಡೆದಿದ್ದು, ಎಲ್ಲ ಹಗರಣಗಳ ತನಿಖೆಗೆ ತ್ವರಿತವಾಗಿ ಚಾಲನೆ ನೀಡಲು ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಈ ಬಗ್ಗೆ ತೆಗೆದುಕೊಳ್ಳಬೇಕಾದ ಮುಂದಿನ ಕ್ರಮಗಳ ಬಗ್ಗೆ ಸಲಹೆ ನೀಡಲು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅಧ್ಯಕ್ಷತೆಯಲ್ಲಿ ಸಚಿವ ಸಂಪುಟ ಉಪ ಸಮಿತಿ ರಚಿಸಲಾಗಿದೆ ಎಂದು ತಿಳಿಸಿದರು.

ಅರಣ್ಯಭವನದಲ್ಲಿ ಹುತಾತ್ಮ ದಿನಾಚರಣೆಯಲ್ಲಿ ಪಾಲ್ಗೊಂಡ ನಂತರ ಸಿಎಂ ಮಾಧ್ಯಮದವರೊಂದಿಗೆ ಮಾತನಾಡಿದರು.

ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿನ ಹಗರಣಗಳ ಕುರಿತ ತನಿಖೆಗಳ ಪ್ರಗತಿ ಹಾಗೂ ಸಮನ್ವಯ ಸಂಬಂಧ ಕ್ರಮ ವಹಿಸುವ ನಿಟ್ಟಿನಲ್ಲಿ ರಚಿಸಿರುವ ಸಮಿತಿಯಲ್ಲಿ ಸಚಿವರಾದ ಕೃಷ್ಣಭೈರೇಗೌಡ, ಪ್ರಿಯಾಂಕ್ ಖರ್ಗೆ, ಸಂತೋಷ್ ಲಾಡ್ ಹಾಗೂ ಎಚ್.ಕೆ.ಪಾಟೀಲ್ ರವರು ಸದಸ್ಯರಾಗಿದ್ದಾರೆ ಎಂದು ಹೇಳಿದರು.

ಸಮಿತಿಯು ವರದಿಯನ್ನು ನೀಡಲು ಒಂದರಿಂದ ಎರಡು ತಿಂಗಳ ಅವಧಿಯನ್ನು ನೀಡಲಾಗಿದೆ. ಪಿಎಸ್ ಐ ಹಗರಣ, ಶೇ.40 ಕಮಿಷನ್ ಹಗರಣ, ಕೋವಿಡ್ 19, ಬಿಟ್ ಕಾಯಿನ್ ಹಗರಣಗಳಿಗೆ ಮಾತ್ರ ತನಿಖಾ ಆಯೋಗಗಳನ್ನು ರಚಿಸಲಾಗಿದೆ. ಅದರಲ್ಲಿ ಕೋವಿಡ್ 19 ಬಗ್ಗೆ ತನಿಖಾ ಆಯೋಗ ಪೂರ್ವಭಾವಿ ವರದಿಯನ್ನು ನೀಡಿದ್ದು, ಅಧಿಕಾರಿಗಳ ಪರಿಶೀಲನೆಯ ನಂತರ ಈ ಬಗ್ಗೆ ಸಚಿವ ಸಂಪುಟದಲ್ಲಿ ಸೂಕ್ತ ನಿರ್ಣಯ ತೆಗೆದುಕೊಳ್ಳಲಾಗುವುದು ಎಂದು ಸಿಎಂ ತಿಳಿಸಿದರು.

ಸರ್ಕಾರ ತನಿಖೆಗೆ ಸೂಚಿಸುವ ಮೂಲಕ ದ್ವೇಷದ ರಾಜಕೀಯ ಮಾಡುತ್ತಿದೆ ಎಂದು ಬಿಜೆಪಿ ಆರೋಪಿಸಿದಿಯಲ್ಲ ಎಂಬ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಿದ್ದು, ಬಿಜೆಪಿಯವರು ನನ್ನ ಮೇಲೆ ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ, ನಮ್ಮ ಸರ್ಕಾರ ದ್ವೇಷದ ರಾಜಕಾರಣ ಮಾಡುವುದಿಲ್ಲ, ಆದರೆ ತಪ್ಪು ಮಾಡಿದವರ ಮೇಲೆ ಖಂಡಿತ ಕ್ರಮ ಕೈಗೊಳ್ಳಲಾಗುವುದು ಎಂದು ಕಡಕ್ಕಾಗಿ ಹೇಳಿದರು.

ವಾಲ್ಮೀಕಿ ಹಗರಣಕ್ಕೆ ಸಂಬಂಧಿಸಿದಂತೆ ಎಸ್ ಐ ಟಿ ಹಾಗೂ ಕೇಂದ್ರ ಜಾರಿ ನಿರ್ದೇಶನಾಲಯದ ತನಿಖೆಗಳು ನಡೆದಿರುವ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ,ಈ ಪ್ರಕರಣದ ಬಗ್ಗೆ ಎಸ್ ಐ ಟಿಯವರೂ ತನಿಖೆ ಮಾಡಿ ಚಾರ್ಜ್ ಶೀಟ್ ಸಲ್ಲಿಸಿದ್ದು, ನ್ಯಾಯಾಲಯ ತೀರ್ಮಾನ ಕೈಗೊಳ್ಳಲಿದೆ ಎಂದು ಹೇಳಿದರು.

ಮುಖ್ಯಮಂತ್ರಿ ಸ್ಥಾನ ವಿಚಾರವಾಗಿ ಇತರ ಸಚಿವರು ಹೇಳಿಕೆಗಳನ್ನು ನೀಡುತ್ತಿದ್ದಾರಲ್ಲಾ ಎಂದು ಕೇಳಿದ್ದಕ್ಕೆ ಮುಖ್ಯಮಂತ್ರಿ ಸ್ಥಾನ ಖಾಲಿ ಇಲ್ಲದಿರುವಾಗ ಆ ಪ್ರಶ್ನೆ ಉದ್ಭವಿಸುವುದಿಲ್ಲ, ನಾನೇ ಮುಖ್ಯಮಂತ್ರಿಯಾಗಿ ಮುಂದುವರೆಯುವುದರಲ್ಲಿ ಯಾವುದೇ ಸಂಶಯವಿಲ್ಲ ಎಂದು ಸಿದ್ದರಾಮಯ್ಯ ತಿಳಿಸಿದರು.

ಬಿಜೆಪಿ ಸರ್ಕಾರದ ಹಗರಣಗಳ ತನಿಖೆ: ಸಚಿವಸಂಪುಟ ಉಪ ಸಮಿತಿ ರಚನೆ- ಸಿಎಂ Read More