ಖರೀದಿ ಮಾಡೋಕೆ ಕಾಂಗ್ರೆಸ್ ಶಾಸಕರು ಕತ್ತೇನಾ,ಕಯದುರೇನಾ:ಸಿ.ಟಿ.ರವಿ ಗರಂ
ಬೆಂಗಳೂರು: ನಿಮ್ಮ ಶಾಸಕರನ್ನು ಖರೀದಿ ಮಾಡೋದಕ್ಕೆ ಅವ್ರೇನು ಕತ್ತೇನಾ, ಕುದುರೇನಾ, ದನನಾ,ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ವಿರುದ್ಧ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ಹರಿ ಹಾಯ್ದಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯನವರು ಬಿಜೆಪಿ ವಿರುದ್ಧ ಸುಳ್ಳು ಆರೋಪ ಮಾಡಿದ್ದಾರೆ ಎಂದು ಕಿಡಿಕಾರಿದರು.
ನಿಮ್ಮ ಪಕ್ಷದ ಶಾಸಕರು ಅಷ್ಟು ದುರ್ಬಲರಾ, ಬದ್ಧತೆ ಇರುವ ಯಾವುದೇ ಶಾಸಕರನ್ನ ಖರೀದಿ ಮಾಡಲು ಸಾಧ್ಯವಿಲ್ಲ. ನಿಮ್ಮ ಆರೋಪ ಆಧಾರ ರಹಿತ ಎಂದು ತಿರುಗೇಟು ನೀಡಿದರು.
ಯಾರು, ಯಾವಾಗ, ಯಾರನ್ನ ಖರೀದಿ ಮಾಡಲು ಪ್ರಯತ್ನ ಪಟ್ಟಿದ್ದಾರೆ ಅದರ ಬಗ್ಗೆ ಆಧಾರ ಇದ್ದರೆ ದೂರು ನೀಡಿ. ಸಾಕ್ಷಿ ಇದ್ದರೆ ಆಧಾರ ಸಹಿತವಾಗಿ ನ್ಯಾಯಾಲಯದಲ್ಲಿ ನಿರೂಪಿಸಿ. ಸಿಎಂ ಸ್ಥಾನದಲ್ಲಿ ಇದ್ದು, ಆ ಸ್ಥಾನದ ಜವಾಬ್ದಾರಿ ಮರೆತು ಕೇವಲ ಆರೋಪ ಮಾಡೋದು ರಾಜಕೀಯ ಪ್ರೇರಿತ. ಬಿಜೆಪಿ ವಿರುದ್ಧ ತಪ್ಪು ಅಭಿಪ್ರಾಯ ಮೂಡಿಸಲು ಯತ್ನ ಎಂದು ಸಿ.ಟಿ.ರವಿ ಆಕ್ರೋಶ ವ್ಯಕ್ತಪಡಿಸಿದರು.
ಖರೀದಿ ಮಾಡೋಕೆ ಕಾಂಗ್ರೆಸ್ ಶಾಸಕರು ಕತ್ತೇನಾ,ಕಯದುರೇನಾ:ಸಿ.ಟಿ.ರವಿ ಗರಂ Read More