ಮಂಡಳಿ ರದ್ದಾಗಬೇಕು, ಪಹಣಿಯಲ್ಲಿ ಹೆಸರು ತೆಗೆಸಿಹಾಕಬೇಕು: ಆರ್‌.ಅಶೋಕ್

ಬೆಂಗಳೂರು: ವಕ್ಫ್‌ ಮಂಡಳಿ ರದ್ದಾಗಬೇಕು, ರೈತರ ಜಮೀನಿನ ಪಹಣಿಯಲ್ಲಿ ಬರೆದ ವಕ್ಫ್‌ ಹೆಸರು ತೆಗೆಯಬೇಕು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಒತ್ತಾಯಿಸಿದರು.

ಸ್ವಾತಂತ್ರ್ಯ ಉದ್ಯಾನದಲ್ಲಿ‌ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮಾತನಾಡಿದ ಅವರು, ವಿಶ್ವವಿಖ್ಯಾತ ಎಂಜಿನಿಯರ್‌ ಸರ್‌ ಎಂ.ವಿಶ್ವೇಶ್ವರಯ್ಯನವರು ಓದಿದ ಶಾಲೆಯ ಆವರಣವನ್ನು ವಕ್ಫ್‌ ಮಂಡಳಿ ಕಬಳಿಸಿದೆ. ಕೇಂದ್ರದಲ್ಲಿದ್ದ ಕಾಂಗ್ರೆಸ್‌ ನೇತೃತ್ವದ ಯುಪಿಎ ಸರ್ಕಾರ ವಕ್ಫ್‌ ಮಂಡಳಿಗೆ ನ್ಯಾಯಾಂಗದ ಅಧಿಕಾರ ನೀಡಿದೆ. ಇದನ್ನು ಬಳಸಿಕೊಂಡು ವಕ್ಫ್‌ ಮಂಡಳಿ ರೈತರ ಜಮೀನು ನುಂಗುತ್ತಿದೆ. ಕಾಂಗ್ರೆಸ್‌ ಅಧಿಕಾರ ಪಡೆಯುವ ರಾಜ್ಯಗಳಲ್ಲಿ ಮಿನಿ ಪಾಕಿಸ್ತಾನ ನಿರ್ಮಿಸುತ್ತಿದೆ ಎಂದು ವಾಗ್ದಾಳಿ ನಡೆಸಿದರು.

ಬೌರಿಂಗ್‌ ಆಸ್ಪತ್ರೆಯದ್ದು 2 ಎಕರೆ ಜಮೀನು ಇದ್ದು, ಅದನ್ನು ಕೂಡ ವಕ್ಫ್‌ ಮಂಡಳಿ ಕಬಳಿಕೆ ಮಾಡಿತ್ತು. ನಾನು ಸಚಿವನಾಗಿದ್ದಾಗ ಅದರ ದಾಖಲೆಗಳನ್ನು ತರಿಸಿ ನೋಡಿದರೆ ಯಾವುದೋ ಹಳೆ ದಾಖಲೆಗಳನ್ನು ತಂದರು. ಬಳಿಕ ಹೋರಾಟ ಮಾಡಿ ಆಸ್ತಿ ಉಳಿಸಿದೆ.ಈಗ ರೈತರು ಕಂಗಾಲಾಗಿ ತಮ್ಮ ಆಸ್ತಿಗಳ ದಾಖಲೆ ಪರಿಶೀಲನೆ ಮಾಡುತ್ತಿದ್ದಾರೆ ಎಂದರು.

ಸಿದ್ದರಾಮಯ್ಯ ಮುಖ್ಯಮಂತ್ರಿಯಾದ ಬಳಿಕ ಮುಸ್ಲಿಮರಿಗೆ ಎರಡು ಕೊಂಬು ಬಂದಿದೆ. ಸಿದ್ದರಾಮಯ್ಯ ಎಂದರೆ ಅಹಿಂದ ನಾಯಕ ಅಲ್ಲ. ಅವರು ಮುಸ್ಲಿಮರ ಚಾಂಪಿಯನ್‌ ಆಗಲು ಮುಂದಾಗಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಲವ್‌ ಜಿಹಾದ್‌, ಲ್ಯಾಂಡ್‌ ಜಿಹಾದ್‌ ಬಳಿಕ ರೇಷನ್‌ ಕಾರ್ಡ್‌ ಜಿಹಾದ್‌ ಆರಂಭಿಸಿದ್ದಾರೆ. 45 ವರ್ಷದಿಂದ ರೇಷನ್‌ ಕಾರ್ಡ್‌ ಹೊಂದಿದ್ದ ವೃದ್ಧೆಯೊಬ್ಬರು ಈಗ ಕಾರ್ಡ್‌ ಕಳೆದುಕೊಂಡಿದ್ದಾರೆ ಎಂದು ಹೇಳಿದರು.

ಸಿಎಂ ಸಿದ್ದರಾಮಯ್ಯ ಬಡವರ ಪರ ಎಂದು ಹೇಳಿಕೊಳ್ಳುತ್ತಾರೆ. ಹಾಲು ಹಾಗೂ ಆಲ್ಕೋಹಾಲ್‌ ದರ ಏರಿಕೆ, ಮುದ್ರಾಂಕ ಶುಲ್ಕ ಏರಿಕೆ, ಅನ್ನ ಪಡೆಯುವವರಿಗೆ ಕನ್ನ, ಔಷಧಿಗೆ ಕನ್ನ ಮೊದಲಾದ ಕ್ರಮಗಳ ಮೂಲಕ ಸಿಎಂ ಸಿದ್ದರಾಮಯ್ಯನವರು ಕನ್ನರಾಮಯ್ಯ ಎಂದು ಹೆಸರಾಗಿದ್ದಾರೆ ಎಂದು ಲೇವಡಿ ಮಾಡಿದರು.

ಮಂತ್ರಾಲಯ, ವಿಧಾನಸೌಧ, ವಿಶ್ವೇಶ್ವರಯ್ಯನವರ ಶಾಲೆ, ಬಡವರ ಭೂಮಿ ಉಳಿಯಲು ಸೂಪರ್‌ಮ್ಯಾನ್‌ ಆಗಿ ಪ್ರಧಾನಿ ನರೇಂದ್ರ ಮೋದಿ ಬರಲಿದ್ದಾರೆ. ಅವರು ತರಲಿರುವ ತಿದ್ದುಪಡಿ ಮಸೂದೆಯಿಂದ ಎಲ್ಲವೂ ನಿಯಂತ್ರಣಕ್ಕೆ ಬರಲಿದೆ. ಅಲ್ಲಿತನಕ ಸಿದ್ದರಾಮಯ್ಯನವರು ಸಿಎಂ ಆಗಿಯೇ ಇರುತ್ತಾರೋ ಇಲ್ಲವೋ ಎಂದು ಅಶೋಕ್ ಹೇಳಿದರು.

ಮಂಡಳಿ ರದ್ದಾಗಬೇಕು, ಪಹಣಿಯಲ್ಲಿ ಹೆಸರು ತೆಗೆಸಿಹಾಕಬೇಕು: ಆರ್‌.ಅಶೋಕ್ Read More

ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ

ಮೈಸೂರು: ಮುಖ್ಯ ಮಂತ್ರಿ‌ ಸಿದ್ದರಾಮಯ್ಯ ಅವರ‌ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಕಾರ್ಯಕರ್ತರು ಮೈಸೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು.

ಮೈಸೂರಿನ ಬಿಜೆಪಿ ಕಚೇರಿ ಬಳಿ ನೂರಾರು ಕಾರ್ಯಕರ್ತರು ಪ್ರತಿಭಟನೆ ನಡೆಸಿ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಸರ್ಕಾರದ ‌ವಿರುದ್ಧ ಘೋಷಣೆ ಕೂಗಿದರು.

ಹೈಕೋರ್ಟ್ ಹಾಗೂ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಸಿದ್ದರಾಮಯ್ಯ ವಿರುದ್ದ ತೀರ್ಪು ‌ಬಂದಿದೆ.ಜತೆಗೆ ಲೋಕಾಯುಕ್ತದಲ್ಲಿ ಎಫ್ಐಆರ್ ದಾಖಲಿಸುವಂತೆ ಆದೇಶಿಸಲಾಗಿದೆ.ಆದರೂ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡದೆ ಬಂಡತನ ತೋರುತ್ತಿದ್ದಾರೆ ಎಂದು ಕಾರ್ಯಕರ್ತರು ಕಿಡಿಕಾರಿದರು.

ಈ‌ ವೇಳೆ ಸಿದ್ದರಾಮಯ್ಯ ಅವರ ಚಿತ್ರಗಳನ್ನು ಪ್ರದರ್ಶಿಸಿ ಆಕ್ರೋಶ‌ ವ್ಯಕ್ತಪಡಿಸಿದರು.

ಈ‌ ಸಂದರ್ಭದಲ್ಲಿ ‌ಪೊಲೀಸರು ಹಲವಾರು ಕಾರ್ಯಕರ್ತರನ್ನು ವಶಕ್ಕೆ ಪಡೆದರು.

ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ Read More

ಸಿಎಂ ರಾಜೀನಾಮೆ ನೀಡದಿದ್ದರೆ ಅವರ ಪಕ್ಷದವರೇ ದಂಗೆ‌ ಏಳುತ್ತಾರೆ:ಅಶೋಕ್ ವ್ಯಂಗ್ಯ

ಬೆಂಗಳೂರು: ಸಿಎಂ ಯಾರಾಗಬೇಕೆಂದು ಕಾಂಗ್ರೆಸ್‌ ಪಕ್ಷದೊಳಗೆ ಚರ್ಚೆ ನಡೆಯುತ್ತಿದೆ ಸಿದ್ದರಾಮಯ್ಯ ಈಗ ರಾಜೀನಾಮೆ ನೀಡದಿದ್ದರೆ ಅವರ ಪಕ್ಷದವರೇ ದಂಗೆ‌ ಏಳುತ್ತಾರೆ ಎಂದು ಪ್ರತಿಪಕ್ಷ ನಾಯಕ ಅಶೋಕ್ ವ್ಯಂಗ್ಯವಾಡಿದ್ದಾರೆ.

ವಿಧಾನಸೌಧದ ಗಾಂಧಿ ಪ್ರತಿಮೆ ಮುಂಭಾಗ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಅವರು ಮಾತನಾಡಿದರು.

ಹೈಕೋರ್ಟ್‌ನಿಂದ ತೀರ್ಪು ಬಂದ ನಂತರವೂ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಿಲ್ಲ, ಬಿ.ಎಸ್‌.ಯಡಿಯೂರಪ್ಪನವರ ಮೇಲೆ ಆರೋಪ ಬಂದಾಗ ಇವರೇ ರಾಜೀನಾಮೆಗೆ ಒತ್ತಾಯಿಸಿದ್ದರು. ತನಿಖೆ ಮೇಲೆ ಪ್ರಭಾವ ಬೀರುವ ಸಾಧ್ಯತೆ ಇದೆ ಎಂದೂ ಹೇಳಿದ್ದರು. ಹಾಗೆಯೇ ಈಗ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.

ಕೆ.ಎಸ್‌.ಈಶ್ವರಪ್ಪ ಅವರ ಮೇಲೆ ಆರೋಪ ಬಂದಾಗಲೂ ಇದೇ ರೀತಿ ವಿಧಾನಸಭೆಯಲ್ಲಿ ಪ್ರತಿಭಟಿಸಿದ್ದರು. ಸಚಿವರಾಗಿದ್ದ ಬಿ.ನಾಗೇಂದ್ರ ಮೇಲೆ ಆರೋಪ ಬಂದು ಅವರು ರಾಜೀನಾಮೆ ನೀಡಿದ್ದಾರೆ. ಆದರೆ ಸಿಎಂ ಮಾತ್ರ ರಾಜೀನಾಮೆ ನೀಡುತ್ತಿಲ್ಲ ಎಂದು ವ್ಯಂಗ್ಯ ವಾಡಿದರು.

ವಾಲ್ಮೀಕಿ ನಿಗಮದ ಪರಿಶಿಷ್ಟ ಪಂಗಡದವರ ಹಣ ದುರ್ಬಳಕೆಯಾಗಿದೆ ಎಂದು ಸರ್ಕಾರ ಒಪ್ಪಿಕೊಂಡಿದೆ, ಅಭಿವೃದ್ಧಿಗೆ ಕಾಸಿಲ್ಲ, ಆದರೆ ಲೂಟಿಗೆ ಮಾತ್ರ ಹಣ ದೊರೆಯುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸಂತೋಷ್‌ ಹೆಗ್ಡೆಯವರು ಈ ಹಿಂದೆ ಯಡಿಯೂರಪ್ಪನವರ ರಾಜೀನಾಮೆ ಕೇಳಿದ್ದರು. ಈಗ ಸಿದ್ದರಾಮಯ್ಯನವರ ರಾಜೀನಾಮೆ ಕೇಳಿದ್ದಾರೆ. ಹಿರಿಯ ರಾಜಕಾರಣಿ ಕೆ.ಬಿ.ಕೋಳಿವಾಡ ಕೂಡ ರಾಜೀನಾಮೆ ನೀಡುವುದು ಸೂಕ್ತ ಎಂದಿದ್ದಾರೆ. ಈ ಎಲ್ಲರ ಅಭಿಪ್ರಾಯಕ್ಕೆ ಮನ್ನಣೆ ಕೊಡಿ ಸಿದ್ದರಾಮಯ್ಯನವರೇ ಎಂದು ಅಶೋಕ್ ಆಗ್ರಹಿಸಿದರು.

ಇದು ರಾಜಕೀಯ ಪ್ರೇರಿತವಾಗಿದ್ದರೆ ಕೋರ್ಟ್‌ಗಳು ಏಕೆ ತೀರ್ಪು ನೀಡುತ್ತಿದ್ದವು, ಈ ರೀತಿ ಕಾಂಗ್ರೆಸ್‌ ಆರೋಪ ಮಾಡುವುದು ದೊಂಬರಾಟವಾಗಿದೆ ಎಂದು ವ್ಯಂಗ್ಯ ವಾಡಿದರು.

ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ನಡುವೆ ಮೊದಲಿಂದಲೂ ಸಮಸ್ಯೆ ಇದೆ. ಅನೇಕ ಬಾರಿ ಭಿನ್ನಮತ ಉಂಟಾಗಿದೆ. ಯಾರು ಸಿಎಂ ಆಗಬೇಕೆಂಬ ಚರ್ಚೆ ಕೂಡ ಕಾಂಗ್ರೆಸ್‌ನೊಳಗೆ ನಡೆಯುತ್ತಿದೆ,ಇಂತಹ ಸಮಯದಲ್ಲಿ ಸಿದ್ದರಾಮಯ್ಯ ರಾಜೀನಾಮೆ ನೀಡುವುದೇ ಸೂಕ್ತ ಎಂದು ಹೇಳಿದರು.

ಸಿಎಂ ರಾಜೀನಾಮೆ ನೀಡದಿದ್ದರೆ ಅವರ ಪಕ್ಷದವರೇ ದಂಗೆ‌ ಏಳುತ್ತಾರೆ:ಅಶೋಕ್ ವ್ಯಂಗ್ಯ Read More