ರಾಹುಲ್ ಗಾಂಧಿ ಹೇಳಿಕೆಗೆ ಹೇಮಾ ನಂದೀಶ್ ಖಂಡನೆ

ಮೈಸೂರು: ಅಮೆರಿಕ ವಿವಿಯಲ್ಲಿ
ಭಾರತದ ಮೀಸಲಾತಿ ಕುರಿತು ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ನೀಡಿದ ಹೇಳಿಕೆಯನ್ನು ಮೈಸೂರು ನಗರ ಬಿಜೆಪಿ ಉಪಾಧ್ಯಕ್ಷೆ ಹೇಮಾನಂದೀಶ್ ಖಂಡಿಸಿದ್ದಾರೆ.

ಸಮಾನತೆ ಸಂದೇಶ ಸಾರುವ ಮೂಲಕ ದಲಿತರು ಹಾಗೂ ಹಿಂದುಳಿದವರ ಅನುಕೂಲಕ್ಕೆ ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರು ಸಂವಿಧಾನವನ್ನು ದೇಶಕ್ಕೆ ಅರ್ಪಣೆ ಮಾಡಿದ್ದಾರೆ. ಅದನ್ನು ಗೌರವಿಸುವ ಬದಲು ರಾಹುಲ್ ಗಾಂಧಿಯವರು, ಮೀಸಲಾತಿ ತೆಗೆದು ಹಾಕುವ ಬಗ್ಗೆ ಮಾತನಾಡಿರುವುದು ಸರಿಯಲ್ಲ ಎಂದು ತಿಳಿಸಿದ್ದಾರೆ.

ಕೂಡಲೇ ರಾಹುಲ್ ಗಾಂಧಿ ಯವರು ತಮ್ಮ ಹೇಳಿಕೆ ಹಿಂಪಡೆಯುವ ಜತೆಗೆ ದೇಶದ ಜನತೆಯ ಕ್ಷಮೆಯಾಚಿ ಸಬೇಕು. ಇಲ್ಲದೇ ಹೋದಲ್ಲಿ ರಾಹುಲ್ ಗಾಂಧಿಯವರ ವಿರುದ್ದ ದೇಶಾದ್ಯಂತ ಉಗ್ರ ಹೋರಾಟ ನಡೆಸುವುದು ಅನಿವಾರ್ಯ ಎಂದು‌ ಹೇಮಾನಂದೀಶ್ ಎಚ್ಚರಿಸಿದ್ದಾರೆ.

ರಾಹುಲ್ ಗಾಂಧಿ ಹೇಳಿಕೆಗೆ ಹೇಮಾ ನಂದೀಶ್ ಖಂಡನೆ Read More

ಬಿಜೆಪಿ ಸದಸ್ಯತ್ವ ಅಭಿಯಾನಕ್ಕೆ ಯದುವೀರ್ ಚಾಲನೆ

ಮೈಸೂರು: ಬಿಜೆಪಿ ಸದಸ್ಯತ್ವ ಅಭಿಯಾನಕ್ಕೆ ಚಾಲನೆಯನ್ನು ಸಂಸದ ಯದುವೀರ್ ಒಡೆಯರ್ ಚಾಲನೆ ನೀಡಿದರು.

ಚಾಮುಂಡೇಶ್ವರಿ ಕ್ಷೇತ್ರದ ಶ್ರೀರಾಂಪುರ ಮಹಾ ಶಕ್ತಿ ಕೇಂದ್ರದ ಬೂತ್ ನಂಬರ್ 268ರಲ್ಲಿ ಯದುವೀರ್ ಚಾಲನೆ ಕೊಟ್ಟರು.

ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕೇಬಲ್ ಮಹೇಶ್,ಜಿಲ್ಲಾ ಕಾರ್ಯದರ್ಶಿ ಮೋನಿಕಾ. ಎಂ ,ಕ್ಷೇತ್ರದ ಅಧ್ಯಕ್ಷ ಪೈಲ್ವಾನ್ ರವಿ, ಬಿಜೆಪಿ ಮುಖಂಡರಾದ ಹೇಮಂತ್ ಕುಮಾರ್ ಗೌಡ,ನಿಕಟಪೂರ್ವ ಜಿಲ್ಲಾಧ್ಯಕ್ಷರುಗಳಾದ ಮಹೇಂದ್ರ, ಅರುಣ್ ಕುಮಾರ್ ಗೌಡ, ಗೊರೂರು ಶಿವು,ಜಿಲ್ಲಾ ಯುವ ಮೋರ್ಚಾ ಕಾರ್ಯದರ್ಶಿ ಕಿರಣ್ ನಾಯ್ಡು, ಕ್ಷೇತ್ರ ಪ್ರಧಾನ ಕಾರ್ಯದರ್ಶಿ ಶಿವು,ಕ್ಷೇತ್ರ ಕಾರ್ಯದರ್ಶಿಗಳಾದ ಸುರೇಶ್ ಮತ್ತು ಸುನಿಲ್ ಮತ್ತಿತರ ಮುಖಂಡರು ಹಾಜರಿದ್ದರು.

ಬಿಜೆಪಿ ಸದಸ್ಯತ್ವ ಅಭಿಯಾನಕ್ಕೆ ಯದುವೀರ್ ಚಾಲನೆ Read More

ಬೆಂಗಳೂರು ವಿಭಜನೆಗೆ ಬಿಜೆಪಿ-ಜೆಡಿಎಸ್‌ ವಿರೋಧ- ಆರ್‌.ಅಶೋಕ್

ಬೆಂಗಳೂರು: ನಾಡಪ್ರಭು ಕೆಂಪೇಗೌಡರು ನಿರ್ಮಿಸಿದ ಬೆಂಗಳೂರು ವಿಭಜನೆಯಾಗ
ಬಾರದು, ಈ ನಗರ ಕನ್ನಡಿಗರಿಗಾಗಿಯೇ ಇರಬೇಕೆಂಬ ಕಾರಣಕ್ಕೆ ಸರ್ಕಾರದ ಬೆಂಗಳೂರು ವಿಭಜನೆ ತೀರ್ಮಾನವನ್ನು ವಿರೋಧಿಸುತ್ತೇವೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದರು.

ರಾಜ್ಯ ಸರ್ಕಾರದಿಂದ ಗ್ರೇಟರ್‌ ಬೆಂಗಳೂರು ಪ್ರಾಧಿಕಾರ ಸ್ಥಾಪನೆಗೆ ಸಂಬಂಧಿಸಿದಂತೆ ಸಾಧಕ-ಬಾಧಕ ಚರ್ಚಿಸಲು ಆಯೋಜಿಸಿದ್ದ ಪ್ರಾತ್ಯಕ್ಷಿಕೆಯಲ್ಲಿ ಭಾಗವಹಿಸಿದ ನಂತರ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

ನಾಡಪ್ರಭು ಕೆಂಪೇಗೌಡರು ಕಟ್ಟಿದ ಬೆಂಗಳೂರು ಇಬ್ಭಾಗವಾಗದೆ ಹೀಗೆಯೇ ಉಳಿಯಬೇಕು. ಇಲ್ಲಿ ಕನ್ನಡಿಗರೇ ಸಾರ್ವಭೌಮರಾಗಿದ್ದು, ಇದು ಕನ್ನಡಿಗರಿಗಾಗಿಯೇ ಉಳಿಯಬೇಕು. ಇಲ್ಲಿ ಕನ್ನಡದವರೇ ಮೇಯರ್‌ ಆಗಬೇಕು. ಇದಕ್ಕಾಗಿ ಬೆಂಗಳೂರು ವಿಭಜನೆಯನ್ನು ಬಿಜೆಪಿ ಮತ್ತು ಜೆಡಿಎಸ್‌ ವಿರೋಧಿಸುತ್ತವೆ ಎಂದು ತಿಳಿಸಿದರು.

ಬಿಬಿಎಂಪಿ ಅಡಿಯಲ್ಲಿ ಸ್ಲಂ ಬೋರ್ಡ್‌, ಜಲಮಂಡಳಿ, ಬಿಎಂಟಿಸಿ ಬರುವುದಿಲ್ಲ. ಇವೆಲ್ಲವೂ ಒಂದೇ ಕಡೆ ಬಂದು, ಬಿಬಿಎಂಪಿಯೇ ನಿರ್ವಹಣೆ ಮಾಡಿದರೆ ಪ್ರತ್ಯೇಕವಾಗಿ ಐಎಎಸ್‌ ಅಧಿಕಾರಿಗಳನ್ನು ನೇಮಕ ಮಾಡುವುದು ತಪ್ಪುತ್ತದೆ. ಸರ್ಕಾರಕ್ಕೆ ಖರ್ಚು ಕಡಿಮೆಯಾಗುವುದರ ಜೊತೆಗೆ, ಜನರು ಒಂದೇ ಕಡೆ ಸೇವೆಗಳನ್ನು ಪಡೆಯಬಹುದು. ಬೇರೆ ನಗರಗಳಲ್ಲೂ ಇದೇ ರೀತಿಯಿದ್ದು, ಬೆಂಗಳೂರಿಗೂ ಇಂತಹ ವ್ಯವಸ್ಥೆ ತರಬೇಕಿದೆ ಎಂದರು.

ಇಡೀ ದೇಶಕ್ಕೆ ಒಬ್ಬ ಪ್ರಧಾನಿ, ರಾಜ್ಯಕ್ಕೆ ಒಬ್ಬರೇ ಮುಖ್ಯಮಂತ್ರಿ ಇರುವಂತೆ ಬೆಂಗಳೂರು ನಗರಕ್ಕೆ ಒಬ್ಬ ಮೇಯರ್ ಇರಲಿ. ಅವರ ಅಧಿಕಾರಾವಧಿ ಎರಡೂವರೆ ವರ್ಷ ಅಥವಾ ಐದು ವರ್ಷ ನಿಗದಿಪಡಿಸಿದರೂ ಅಡ್ಡಿಯಿಲ್ಲ ಎಂದು ಹೇಳಿದರು.

ಕಾಂಗ್ರೆಸ್ ಸರ್ಕಾರ ತಜ್ಞರು ನೀಡಿರುವ ವರದಿಯ ಶೇಕಡಾ ಇಪ್ಪತ್ತರಿಂದ ಮುವತ್ತರಷ್ಟನ್ನು ಮಾತ್ರ ವಿಧೇಯಕದಲ್ಲಿ ಅಳವಡಿಸಿಕೊಂಡಿದೆ ಎಂಬುದನ್ನು ವಿ.ರವಿಚಂದ್ರ ಅವರು ಸ್ಪಷ್ಟಪಡಿಸಿದ್ದಾರೆ. ಜತೆಗೆ ಯಾರಾದರೂ ಕೊಟ್೯ನಲ್ಲಿ ಪ್ರಶ್ನೆ ಮಾಡಿದರೆ ಬಿದ್ದು ಹೋಗುತ್ತದೆ ಎಂದೂ ತಿಳಿಸಿದ್ದಾರೆ. ಈ ಹಿನ್ನೆಲೆ ಯಲ್ಲಿ ಅದರಲ್ಲಿರುವ ಲೋಪಗಳನ್ನು ಸರ್ಕಾರಕ್ಕೆ ಮನವರಿಕೆ ಮಾಡುವ ಪ್ರಯತ್ನ ಮಾಡಲಾಗುವುದು ಎಂದು ಹೇಳಿದರು.

ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಪ್ರಕ್ರಿಯೆ ನಡೆಯುತ್ತಿದೆ. ಸಿಎಂ ಸಿದ್ದರಾಮಯ್ಯನವರು ಸಂಗೊಳ್ಳಿ ರಾಯಣ್ಣನವರ ಉದಾಹರಣೆ ಮೂಲಕ ಬೆನ್ನಿಗೆ ಚೂರಿ ಹಾಕಲಾಗುತ್ತಿದೆ ಎಂದು ಎರಡು ಸಲ ಹೇಳಿಕೆ ನೀಡಿದ್ದಾರೆ. ಅವರ ಪಕ್ಷದವರೇ ಅವರಿಗೆ ಮೋಸ ಮಾಡುತ್ತಿದ್ದಾರೆ. ಮುಡಾ ಪ್ರಕರಣದಲ್ಲಿ ನಾವ್ಯಾರೂ ಆರ್‌ಟಿಐ ಅರ್ಜಿ ಹಾಕಿಲ್ಲ, ಅವರ ಪಕ್ಷದವರೇ ಎಲ್ಲ ದಾಖಲೆಗಳನ್ನು ಹೊರಗೆ ತಂದಿದ್ದಾರೆ ಅಶೋಕ್ ತಿಳಿಸಿದರು.

ರಾಜ್ಯದಲ್ಲಿ 60 ಲಕ್ಷ ಬಿಪಿಎಲ್‌ ಕಾರ್ಡ್‌ಗಳನ್ನು ರದ್ದುಪಡಿಸಲು ತಯಾರಿ ನಡೆದಿದೆ. ಇದರಿಂದ ಸರ್ಕಾರಕ್ಕೆ ಹಣ ಉಳಿತಾಯವಾಗಲಿದೆ. ಈಗಾಗಲೇ ಬಿಪಿಎಲ್‌ ಕಾರ್ಡುದಾರರಿಗೆ ಅಧಿಕಾರಿಗಳು ಕಿರುಕುಳ ನೀಡಲಾರಂಭಿಸಿದ್ದಾರೆ,ಇದಕ್ಕಾಗಿ ಖಾಸಗಿ ಏಜೆನ್ಸಿ ನೇಮಕ ಮಾಡಿ, ಆ ಮೂಲಕ ಕಾರ್ಡ್‌ ರದ್ದುಪಡಿಸಿ ಗ್ಯಾರಂಟಿಗೆ ಹಣ ಉಳಿಸಲಾಗುತ್ತಿದೆ ಎಂದು ಅಶೋಕ್ ದೂರಿದರು.

ರವಿಚಂದ್ರ ಅವರು ಗ್ರೇಟರ್ ಬೆಂಗಳೂರು ಪ್ರಾಧಿಕಾರ ವಿಧೇಯಕಕ್ಕೆ ಸಂಬಂಧಿಸಿದಂತೆ ತಮ್ಮ ಸಮಿತಿ ನೀಡಿದ್ದ ವರದಿಗೂ ರಾಜ್ಯ ಸರ್ಕಾರ ಮಂಡಿಸಿರುವ ವಿಧೇಯಕಕ್ಕೂ ಸಾಕಷ್ಟು ವೆತ್ಯಾಸವಿದೆ. ಶೇ.20 ರಷ್ಟು ಶಿಫಾರಸು ಗಳನ್ನು ಮಾತ್ರ ಪರಿಗಣಿಸಲಾಗಿದೆ ಎಂದು ಹೇಳಿದರು.

ಬಿಜೆಪಿ, ಜೆಡಿಎಸ್ ನ ಶಾಸಕರು, ಮಾಜಿ ಕಾರ್ಪೊರೇಟರ್ ಗಳು, ಪಕ್ಷದ ಪ್ರಮುಖರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ಬೆಂಗಳೂರು ವಿಭಜನೆಗೆ ಬಿಜೆಪಿ-ಜೆಡಿಎಸ್‌ ವಿರೋಧ- ಆರ್‌.ಅಶೋಕ್ Read More

ದೀಪಾವಳಿಯೊಳಗೆ ಕಾಂಗ್ರೆಸ್‌ ಸರ್ಕಾರ ಉರುಳೋದು‌ ಗ್ಯಾರಂಟಿ-ಸಿ.ಟಿ ರವಿ

ಹುಬ್ಬಳ್ಳಿ: ದೀಪಾವಳಿ ಒಳಗಡೆ ಕಾಂಗ್ರೆಸ್‌ ಸರ್ಕಾರ ಬುದ್ದುಹೋಗೋದು ಗ್ಯಾರಂಟಿ ಎಂದು ವಿಧಾನ ಪರಿಷತ್‌ ಸದಸ್ಯ ಸಿ.ಟಿ ರವಿ ಭವಿಷ್ಯ ನುಡಿದಿದ್ದಾರೆ.

ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರ ಪಾಪದ ಕೊಡ ತುಂಬಿದೆ, ಕಾಂಗ್ರೆಸ್ ಟೈಮ್ ಬಾಂಬ್ ಫಿಕ್ಸ್ ಮಾಡಿದೆ. ಸಿದ್ದರಾಮಯ್ಯ ಜೊತೆಗೆ ಬಂಡೆಯಂತೆ ಜೊತೆಗಿರುತ್ತೇನೆ ಎನ್ನುತ್ತಿರುವವರೇ ಡೇಂಜರ್‌ ಎಂದು ಎಚ್ಚರಿಸಿದ್ದಾರೆ.

ಡಿ.ಕೆ ಶಿವಕುಮಾರ್ ಒಂದು ಬಾಂಬ್, ಪ್ರಿಯಾಂಕ್ ಖರ್ಗೆ, ಎಂಬಿ ಪಾಟೀಲ್ ಯಾವ ಯಾವ ಬಾಂಬ್ ಇಟ್ಟಿದ್ದಾರೊ ಅವರಿಗೇ ಕೇಳಬೇಕು ಎಂದು ಹೇಳಿದರು

ಕಾಂಗ್ರೆಸ್ ಪಕ್ಷದ ಶಾಸಕರು, ಸಚಿವರು ಮತ್ತು ಮುಖಂಡರು ಸಿದ್ದರಾಮಯ್ಯ ರಾಜೀನಾಮೆಗೆ ಸಿದ್ಧತೆ ನಡೆಸಿದ್ದಾರೆ. ರಾಜೀನಾಮೆಗೆ ಸಮಯವನ್ನೂ ನಿಗದಿಪಡಿಸಿದ್ದಾರೆ. ಅದಕ್ಕೆ ಪೂರಕವಾಗಿ ಕೆಲವು ಸಚಿವರು ತಾವು ಸಹ ಮುಖ್ಯಮಂತ್ರಿ ಆಕಾಂಕ್ಷಿ ಎಂದು ಹೇಳಿಕೆ ನೀಡುತ್ತಿದ್ದಾರೆ ಎಂದು ಸಿ.ಟಿ.ರವಿ ಹೇಳಿದರು.

ವಿವಿಧ ಹಗರಣದಗಳು ಕೇಳಿ ಬಂದಿವೆ ಹಾಗಾಗಿ ಹೆಚ್ಚು ದಿನ ಸಿದ್ದರಾಮಯ್ಯ ಮುಖ್ಯ ಮಂತ್ರಿ ಆಗಿ ಉಳಿಯುವುದಿಲ್ಲ ಎಂದು ತಿಳಿಸಿದರು.

ದೀಪಾವಳಿಯೊಳಗೆ ಕಾಂಗ್ರೆಸ್‌ ಸರ್ಕಾರ ಉರುಳೋದು‌ ಗ್ಯಾರಂಟಿ-ಸಿ.ಟಿ ರವಿ Read More

ರಾಮಕೃಷ್ಣನಗರದಲ್ಲಿ ಬಿಜೆಪಿ ಸದಸ್ಯತ್ವ ಅಭಿಯಾನ ಜನರಿಂದ ಉತ್ತಮ ಸ್ಪಂದನೆ

ಮೈಸೂರು: ಬಿಜೆಪಿ ಸದಸ್ಯತ್ವ ಅಭಿಯಾನವನ್ನು ಚಾಮುಂಡೇಶ್ವರಿ ನಗರ ಮಂಡಲದಿಂದ ರಾಮಕೃಷ್ಣ ನಗರದ ಸಾಯಿಬಾಬಾ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಆರಂಭಿಸಲಾಗಿದ್ದು ಉತ್ತಮ ಸ್ಪಂದನೆ‌ ವ್ಯಕ್ತವಾಗಿದೆ.

ಅಭಿಯಾನದ ವೇಳೆ ಮನೆ,ಮನೆಗಳಿಗೆ ತೆರಳಿ ಸಾರ್ವಜನಿಕರನ್ನು ಭೇಟಿಯಾಗಿ ಮಿಸ್ಸ್ಡ್ ಕಾಲ್ ಮೂಲಕ ಬಿಜೆಪಿ ಸದಸ್ಯರಾಗುವ ಬಗೆಯನ್ನು ತಿಳಿಸಿಕೊಡಲಾಯಿತು.

ಲಿಂಕ್ ಹಾಗೂ ಒಟಿಪಿ ಮೂಲಕ ಅರ್ಜಿ ಬರೆಸಿ ನೂರಾರು ಕುಟುಂಬಗಳವರನ್ನು ಸದಸ್ಯರನ್ನು ಮಾಡಲಾಯಿತು.

ಈ ವೇಳೆ ಸಾರ್ವಜನಿಕರೊಬ್ಬರು ಇದರಿಂದ ನಮಗೇನು ಪ್ರಯೋಜನ ಎಂಬ ಪ್ರಶ್ನೆಯನ್ನು ಮಂಡಲದ ಅಧ್ಯಕ್ಷ ರಾಕೇಶ್ ಭಟ್ ಅವರಿಗೆ ಕೇಳಿದರು.

ಅದಕ್ಕೆ,ಚುನಾವಣಾ ಸಮಯದಲ್ಲಿ ಮಾತ್ರ ಜನರ ಮನೆ ಮುಂದೆ ಬರುವ ಬದಲು, ಮೊದಲೇ ಅವರ ಬಳಿ ಬಂದು ಅವರ ಪರಿಚಯದ ಜೊತೆಗೆ ಅಭಿಪ್ರಾಯ ಪಡೆದು ಸ್ಥಳೀಯ ಸಮಸ್ಯೆಗಳು ಹಾಗೂ ಇತರ ವಸ್ತುಸ್ಥಿತಿ ತಿಳಿದುಕೊಳ್ಳುವುದು, ಪಕ್ಷದ ವಿಚಾರಗಳನ್ನು ತಿಳಿಸಿ ಜನರಿಗೆ ಹತ್ತಿರವಾಗಿಸುವುದು ಎಂದು ತಿಳಿಹೇಳಿದರು.

ಇತ್ತೀಚೆಗೆ ಚುನಾವಣಾ ಸಮಯದಲ್ಲಿ ಮತದಾರರಿಗೆ ಉಚಿತಗಳ ಆಮಿಷವೊಡ್ಡಿ ಮತ ಪಡೆಯುವ ಚಾಳಿ ಪ್ರಾರಂಭವಾಗಿದ್ದು, ಅದರಿಂದ ಜನರಿಗೆ ಅಗತ್ಯ ವಸ್ತುಗಳ ದರ ಹೆಚ್ಚಳ, ದುಬಾರಿ ತೆರಿಗೆ, ಸರ್ಕಾರಕ್ಕೆ ಆರ್ಥಿಕ ಹೊರೆ, ಅಭಿವೃದ್ಧಿ ಕುಂಠಿತವಾಗುತ್ತಿರುವ ಬಗ್ಗೆ ಮಾಹಿತಿ ನೀಡಿದರು.

ಈ ವೇಳೆ ಮೈಸೂರು ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು, ಪ್ರಧಾನ ಕಾರ್ಯದರ್ಶಿಗಳಾದ ಆರ್. ಸೋಮಶೇಖರ್, ಈರೇಗೌಡ, ಉಪಾಧ್ಯಕ್ಷರಾದ ಹೆಚ್.ಜಿ.ರಾಜಮಣಿ, ಬಿ.ಸಿ.ಶಶಿಕಾಂತ್, ಶಿವಕುಮಾರ್, ಕಾಂತರಾಜ ಅರಸ್, ಎಸ್.ಸಿ.ಮೋರ್ಚಾ ನಗರ ಉಪಾಧ್ಯಕ್ಷರಾದ ಎನ್.ಪ್ರತಾಪ್, ಮಂಡಲ ಕಾರ್ಯದರ್ಶಿಗಳಾದ ವಿನುತ, ಕಲಾವತಿ, ಮೋರ್ಚಾಗಳ ಪದಾಧಿಕಾರಿಗಳಾದ ಚಂದನ್ ಗೌಡ, ಚಂದ್ರಶೇಖರ ಸ್ವಾಮಿ, ಶುಭಶ್ರೀ, ರಮಾಬಾಯಿ, ನವೀನ, ಮಹಾದೇವ, ರಾಧಾ ಮುತಾಲಿಕ್, ದೇವರಾಜು, ರಾಮಕೃಷ್ಣಪ್ಪ ಹಾಗೂ ಇತರರು ಭಾಗವಹಿಸಿದ್ದರು.

ಸಾಯಿ ಬಾಬಾ ದೇವಸ್ಥಾನದ ಅರ್ಚಕರಾದ ಪ್ರಸನ್ನ ಅವರು ಬಿಜೆಪಿ ಕಾರ್ಯಕರ್ತರು ಹಾಗೂ ಪ್ರಧಾನಿ ನರೇಂದ್ರ ಮೋದಿ ಹೆಸರಿನಲ್ಲಿ ಅರ್ಚನೆ ಮಾಡಿದರು.

ರಾಮಕೃಷ್ಣನಗರದಲ್ಲಿ ಬಿಜೆಪಿ ಸದಸ್ಯತ್ವ ಅಭಿಯಾನ ಜನರಿಂದ ಉತ್ತಮ ಸ್ಪಂದನೆ Read More

ಬಿಜೆಪಿಯಿಂದ ಸಮರ್ಥ ಆಡಳಿತ – ಎಲ್ ನಾಗೇಂದ್ರ

ಮೈಸೂರು: ಭಾರತೀಯ ಜನತಾ ಪಕ್ಷ ವಿಶ್ವದ ಅತಿ ದೊಡ್ಡ ರಾಜಕೀಯ ಪಕ್ಷವಾಗಿ ದೇಶದಲ್ಲಿ ಸದೃಢ ಹಾಗೂ ಸಮರ್ಥ ಆಡಳಿತ ನೀಡುತ್ತಿದೆ ಎಂದು ಬಿಜೆಪಿ ನಗರಾಧ್ಯಕ್ಷ ಎಲ್ ನಾಗೇಂದ್ರ ಹೇಳಿದರು.

ನಗರದ ಬಿಜೆಪಿ ಕಚೇರಿಯಲ್ಲಿ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ಏರ್ಪಡಿಸಿದ್ದ ಅಭಿಯಾನದ ಕಾರ್ಯಗಾರದಲ್ಲಿ ಮಾತನಾಡಿದ ಅವರು
ಬಿಜೆಪಿಯ ರಾಷ್ಟ್ರೀಯ ಸದಸ್ಯತ್ವ ಅಭಿಯಾನ ಮತ್ತೊಂದು ದಾಖಲೆಯಾಗಲಿ ಎಂದು ತಿಳಿಸಿದರು.

ವಿಶ್ವದ ಅತಿ ದೊಡ್ಡ ರಾಜಕೀಯ ಪಕ್ಷವಾಗಿರುವ ಬಿಜೆಪಿಯ ಸದಸ್ಯತ್ವ ಪಡೆಯುವುದೇ ಹೆಮ್ಮೆಯ ಸಂಗತಿ,
ಕಾರ್ಯಕರ್ತರು ಪ್ರತಿ ಬೂತಿನಲ್ಲೂ ಸದಸ್ಯತ್ವ ನೋಂದಣಿ ಅಭಿಯಾನ ನಡೆಸಬೇಕು
ಎಂದು ಸಲಹೆ ನೀಡಿದರು.

ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ರೇಣುಕರಾಜ್, ಪ್ರಧಾನ ಕಾರ್ಯದರ್ಶಿ ಗಳಾದ ಗಿರೀಧರ್, ಬಿ ಎಂ ರಘು, ಉಪಾಧ್ಯಕ್ಷ ರಮೇಶ್, ಮಹಿಳಾ ಮೋರ್ಚಾ ರಾಜ್ಯ ಕಾರ್ಯಕಾರಣಿ ಸದಸ್ಯೆ ಟಿ ಎನ್ ಶಾಂತ, ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಚಂದ್ರಕಲಾ, ಸದಸ್ಯತ್ವ ಅಭಿಯಾನದ ಸಂಚಾಲಕಿ ವಿಧ್ಯಾಅರಸ್, ಕಾರ್ಯದರ್ಶಿ ನಾಗೇಂದ್ರ,
ಸಹಾ ಸಂಚಾಲಕ ಜಾನ್ಸಿ ಹಾಗೂ ಅನಿತ ಮತ್ತು ಮಹಿಳಾ ಮೋರ್ಚಾ ಕ್ಷೇತ್ರಗಳ ಅಧ್ಯಕ್ಷರು, ಪದಾಧಿಕಾರಿಗಳು ಹಾಜರಿದ್ದರು

ಬಿಜೆಪಿಯಿಂದ ಸಮರ್ಥ ಆಡಳಿತ – ಎಲ್ ನಾಗೇಂದ್ರ Read More