ಅಡಿಕೆ ಕಾಯಿ ಎಂದು ನಾಡಬಾಂಬ್‌ ಚಚ್ಚಿದ ಮಹಿಳೆ!

ಮೈಸೂರು: ನಾಡ ಬಾಂಬ್ ಸ್ಪೋಟಗೊಂಡು ಮಹಿಳೆಯ ಮುಖಕಕ್ಕೆ ಸಿಡಿದು ಗಂಭೀರವಾಗಿ ಗಾಯಗೊಂಡ ಘಟನೆ ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ
ಲ್ಲಿ ನಡೆದಿದೆ.

ಹುಳಲಾಲು ಗ್ರಾಮದಲ್ಲಿ ಈ ಘಟನೆ ನಡೆದಿದ್ದು,ಕಮಲಮ್ಮ (55) ಗಂಭೀರ ಗಾಯಗೊಂಡಿದ್ದಾರೆ.

ಈಕೆಗೆ ಅಡಿಕೆ ತಿನ್ನುವ ಚಟವಿದ್ದು ನಾಡ ಬಾಂಬ್ ಅನ್ನು ಅರಿಯದೆ ಅಡಿಕೆಕಾಯಿ‌ ಎಂದು ತಿಳಿದು ಚೆಚ್ಚಿದ್ದಾಳೆ,ದಿಢೀರನೆ‌ ಬಾಂಬ್ ಸ್ಫೋಟಗೊಂಡಿದೆ.ಇದರಿಂದಾಗಿ ಕಮಲಮ್ಮನ ಮುಖ‌ಕ್ಕೆ ಗಂಭೀರ ಗಾಯವಾಗಿದೆ.

ಮನೆಯ ಮುಂಭಾಗದಲ್ಲಿರುವ ತೋಟದಲ್ಲಿ ಅಡಿಕೆಕಾಯಿ ಬಿದ್ದಿರಬಹುದು ಎಂದು ಆರಿಸಲು ಹೋಗಿದ್ದ ಮಹಿಳೆ ಅಡಿಕೆಕಾಯಿ ಎಂದು ತಿಳಿದು ನಾಡ ಬಾಂಬ್ ಚಚ್ಚಿದ್ದಾರೆ.

ಕಾಡು ಹಂದಿಗಳ ಹಾವಳಿ ತಪ್ಪಿಸಲು ರೈತರು ನಾಡ ಬಾಂಬ್ ಇಟ್ಟಿದ್ದರಂತೆ, ಅದನ್ನು ಅಡಿಕೆಕಾಯಿ ಎಂದು ಕಮಲಮ್ಮ ತಿಳಿದು
ಸುತ್ತಿಗೆಯಿಂದ ಚಚ್ಚಿದಾಗ ಅದು ಸಿಡಿದು ಮುಖ, ಕೈಕಾಲು ಹೊಟ್ಟೆ ಭಾಗಕ್ಕೆ ಗಂಭೀರ ಗಾಯಗಳಾಗಿದೆ.ಸಧ್ಯ ಆಕೆ ಮೈಸೂರಿನ ಕೆ.ಆರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ.

ಅಡಿಕೆ ಕಾಯಿ ಎಂದು ನಾಡಬಾಂಬ್‌ ಚಚ್ಚಿದ ಮಹಿಳೆ! Read More

ಪಾಕಿಸ್ತಾನದಲ್ಲಿ ಪ್ರಬಲ ಬಾಂಬ್‌ ಸ್ಪೋಟ7 ಮಂದಿ ಸಾವು

ಪೇಶಾವರ: ಪಾಕಿಸ್ತಾನದ ಪ್ರಕ್ಷುಬ್ಧ ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿ ನಡೆದ ಬಾಂಬ್ ಸ್ಫೋಟಗೊಂಡ ಪರಿಣಾಮ ಏಳಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದು,ಹಲವಾರು ಮಂದಿ ಗಾಯಗೊಂಡಿದ್ದಾರೆ.

ದಕ್ಷಿಣ ವಜೀರಿಸ್ತಾನ್ ಜಿಲ್ಲೆಯ ಪ್ರಧಾನ ಕಚೇರಿ ವಾನಾದಲ್ಲಿರುವ ಸ್ಥಳೀಯ ಶಾಂತಿ ಸಮಿತಿ ಕಚೇರಿಯಲ್ಲಿ ಬಾಂಬ್ ಸ್ಫೋಟ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸ್ಫೋಟದ ನಂತರ 16 ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು ಅವರಲ್ಲಿ ಏಳು ಮಂದಿ ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ

ಇಲ್ಲಿಯವರೆಗೆ, ಯಾವುದೇ ಉಗ್ರ ಸಂಘಟನೆ ಸ್ಫೋಟದ ಜವಾಬ್ದಾರಿಯನ್ನು ಹೊತ್ತುಕೊಂಡಿಲ್ಲ.

ಸ್ಫೋಟದ ತೀವ್ರತೆಗೆ ಶಾಂತಿ ಸಮಿತಿಯ ಕಚೇರಿಯ ಕಟ್ಟಡ ಸಂಪೂರ್ಣ ಧ್ವಂಸಗೊಂಡಿದೆ ಮತ್ತು ಹಲವಾರು ಜನ ಕಟ್ಟಡದ ಅವಶೇಷಗಳ ಅಡಿಯಲ್ಲಿ ಸಿಲುಕಿಕೊಂಡಿದ್ದು ಸಾವು,ನೋವಿನ ಸಂಖ್ಯೆ ಹೆಚ್ಚಾಗಬಹುದು ಎಂದು ಪೊಲೀಸರು ತಿಳಿಸಿದ್ದಾರೆ.

ಮಾಹಿತಿ ಪಡೆದ ನಂತರ ರಕ್ಷಣಾ ತಂಡಗಳು ಮತ್ತು ಸ್ಥಳೀಯ ಪೊಲೀಸರು ಸ್ಥಳಕ್ಕೆ ದಾವಿಸಿ ಗಾಯಾಳುಗಳನ್ನು ಅವಶೇಷಗಳಿಂದ ಹೊರತೆಗೆಯುವ ಕಾರ್ಯದಲ್ಲಿ ತೊಡಗಿದರು

ಪಾಕಿಸ್ತಾನದಲ್ಲಿ ಪ್ರಬಲ ಬಾಂಬ್‌ ಸ್ಪೋಟ7 ಮಂದಿ ಸಾವು Read More

ಪಾಕಿಸ್ತಾನದಲ್ಲಿ ಪ್ರಬಲ ಬಾಂಬ್ ಸ್ಫೋಟ:ಹಲವರಿಗೆ ಗಂಭೀರ ಗಾಯ

ಪಾಕಿಸ್ತಾನ: ಪಾಕಿಸ್ತಾನದಲ್ಲಿ ರೈಲು ಹೈಜಾಕ್ ಬೆನ್ನಲ್ಲೇ ಶುಭ ಶುಕ್ರವಾರ ಮಸೀದಿಯಲ್ಲಿ ಪ್ರಬಲ ಬಾಂಬ್ ಸ್ಫೋಟವಾಗಿದೆ.

ರಮ್ಜಾನ್ ನ ಶುಭ ಶುಕ್ರವಾರದಂದೇ ಮಸೀದಿಯಲ್ಲಿ ಪ್ರಬಲ ಬಾಂಬ್ ಸ್ಫೋಟಗೊಳಿಸಲಾಗಿದೆ.

ವಾಯುವ್ಯ ಪಾಕಿಸ್ತಾನದ ಪೆಶಾವರದ ಮಸೀದಿಯಲ್ಲಿ ಶುಕ್ರವಾರ ಸ್ಫೋಟ ಸಂಭವಿಸಿದೆ. ಇದರಲ್ಲಿ ಇಸ್ಲಾಮಿಕ್ ಪಕ್ಷದ ನಾಯಕ ಮತ್ತು ಮಕ್ಕಳು ಸೇರಿದಂತೆ ಇತರ ಹಲವರು ಗಾಯಗೊಂಡಿದ್ದಾರೆ.

ಪಾಕಿಸ್ತಾನದಲ್ಲಿ ಪ್ರಬಲ ಬಾಂಬ್ ಸ್ಫೋಟ:ಹಲವರಿಗೆ ಗಂಭೀರ ಗಾಯ Read More

ಪಾಕಿಸ್ತಾನದಲ್ಲಿ ಐಇಡಿ ಬಾಂಬ್ ಸ್ಫೋಟ:11 ಕಾರ್ಮಿಕರ ದುರ್ಮರಣ

ಬಲೂಚಿಸ್ತಾನ: ಪಾಕಿಸ್ತಾನದ ಬಲೂಚಿಸ್ತಾನ ಪ್ರಾಂತ್ಯದಲ್ಲಿ ಗಣಿ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಟ್ರಕ್​ ಬಾಂಬ್​ ಸ್ಫೋಟದಿಂದ‌ ಛಿದ್ರಗೊಂಡು 11 ಕಾರ್ಮಿಕರು ದಾರುಣವಾಗಿ ಮೃತಪಟ್ಟಿದ್ದಾರೆ.

ರಸ್ತೆ ಬದಿಯಲ್ಲಿ ಇಟ್ಟಿದ್ದ ಬಾಂಬ್​ ಸ್ಫೋಟಿಸಿ 11 ಕಾರ್ಮಿಕರು ಸಾವನ್ನಪ್ಪಿದ್ದು, 6 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

ಕಲ್ಲಿದ್ದಲು ಗಣಿ ಕಾರ್ಮಿಕರನ್ನು ಟ್ರಕ್​​ನಲ್ಲಿ ಕರೆದೊಯ್ಯುತ್ತಿದ್ದಾಗ ಬಾಂಬ್​ ಸ್ಫೋಟಗೊಂಡಿದೆ. ಐಇಡಿ ಬಾಂಬ್​​ ಅನ್ನು ರಸ್ತೆ ಬದಿಯಲ್ಲಿ ಅಡಗಿಸಿಟ್ಟಿದ್ದರಿಂದ ಅದು ಸ್ಪೋಟಗೊಂಡು ಈ ದುರಂತ ಸಂಭವಿಸಿದೆ ಎಂದು ಹರ್ನಾಯಿ ಜಿಲ್ಲಾ ಆಯುಕ್ತ ಹಜರತ್​ ವಾಲಿ ಕಾಕರ್​ ತಿಳಿಸಿದ್ದಾರೆ.

ಘಟನೆಯಲ್ಲಿ 9 ಮಂದಿ ಸ್ಥಳದಲ್ಲಿ ಸಾವನ್ನಪ್ಪಿದ್ದು,ಮತ್ತಿಬ್ಬರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ, ಗಾಯಗೊಂಡವರನ್ನು ಮಂದಿ ಕಾರ್ಮಿಕರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ, ಸ್ಥಳಕ್ಕೆ ಅಧಿಕಾರಿಗಳು ಆಗಮಿಸಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ಹೇಳಿದ್ದಾರೆ.

ಘಟನೆ ಕುರಿತು ಪ್ರತಿಕ್ರಿಯಿಸಿರುವ ಬಲೂಚಿಸ್ತಾನ್​ ಸರ್ಕಾರದ ವಕ್ತಾರ ಶಹೀದ್​, ಇದೊಂದು ದುರಂತ ಘಟನೆ, ಈ ಕುರಿತು ತನಿಖೆ ಆರಂಭಿಸಲಾಗಿದೆ ಎಂದಿದ್ದಾರೆ.

ಬಲೋಚಿಸ್ಥಾನದ ಹರ್ನಾಯಿಯಲ್ಲಿ ಇದೇ ರೀತಿಯ ಬಾಂಬ್​​ ಸ್ಫೋಟದ ಪ್ರಕರಣಗಳು ಇತ್ತೀಚಿಗೆ ವರದಿಯಾಗಿದ್ದವು.

ಪಾಕಿಸ್ತಾನದಲ್ಲಿ ಐಇಡಿ ಬಾಂಬ್ ಸ್ಫೋಟ:11 ಕಾರ್ಮಿಕರ ದುರ್ಮರಣ Read More

ಪಾಕಿಸ್ತಾನದ ಕ್ವೆಟ್ಟಾ ರೈಲು ನಿಲ್ದಾಣದಲ್ಲಿ ಬಾಂಬ್ ಸ್ಫೋಟ:24 ಮಂದಿ ಸಾವು

ಇಸ್ಲಾಮಾಬಾದ್: ಪಾಕಿಸ್ತಾನದ ಕ್ವೆಟ್ಟಾ ರೈಲು ನಿಲ್ದಾಣದಲ್ಲಿ ಬಾಂಬ್ ಸ್ಫೋಟಗೊಂಡು,24 ಮಂದಿ ಸಾವನ್ನಪ್ಪಿದ್ದಾರೆ.

ಶನಿವಾರ‌ ನೈಋತ್ಯ ಪಾಕಿಸ್ತಾನದ ಕ್ವೆಟ್ಟಾ ರೈಲು ನಿಲ್ದಾಣದ ಬುಕ್ಕಿಂಗ್ ಕೌಂಟರ್ ಬಳಿ ಎರಡು ಬಾಂಬ್ ಸ್ಫೋಟಗೊಂಡಿದೆ.

ಈ ಬಗ್ಗೆ ಪೊಲೀಸ್ ಕಾರ್ಯಾಚರಣೆಯ ಹಿರಿಯ ಅಧೀಕ್ಷಕ ಮುಹಮ್ಮದ್ ಬಲೋಚ್ ಮಾತನಾಡಿ, ಪೇಶಾವರಕ್ಕೆ ಹೋಗುವ ಎಕ್ಸ್‌ಪ್ರೆಸ್‌ ರೈಲು ನಿಲ್ದಾಣದಿಂದ ಹೊರಡಲು ಸಿದ್ಧವಾಗಿತ್ತು. ಜೊತೆಗೆ ಪ್ಯಾಸೆಂಜರ್ ರೈಲಿಗಾಗಿ ಹಲವು ಜನ ಕಾಯುತ್ತಿದ್ದರು,ಹಾಹಾಗಿ ನಿಲ್ದಾಣ ಭಾರೀ ಜನಸಂದಣಿಯಿಂದ ಕೂಡಿತ್ತು, ಈ ವೇಳೆ ಒಂದರ ಹಿಂದೆ ಒಂದರಂತೆ ಎರಡು ಬಾಂಬ್ ಸ್ಫೋಟಗೊಂಡಿವೆ ಎಂದು ಮಾಹಿತಿ ನೀಡಿದ್ದಾರೆ.

ಮೊದಲ ಬಾಂಬ್ ಸ್ಫೋಟಗೊಂಡಾಗ 4 ಜನ ಹಾಗೂ ಎರಡನೇ ಬಾಂಬ್ ಸ್ಫೋಟಗೊಂಡಾಗ 15 ರಿಂದ 26 ಜನರು ಸಾವನ್ನಪ್ಪಿರಬಹುದು ಎಂದು ಊಹಿಸಲಾಗಿದೆ ಸ್ಫೋಟದಲ್ಲಿ 30ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ ಎಂದು ತಿಳಿಸಿದ್ದಾರೆ.

ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ, ಸ್ಥಳಕ್ಕೆ ಬಾಂಬ್ ನಿಷ್ಕ್ರಿಯ ದಳ ಧಾವಿಸಿ ರಕ್ಷಣಾ ಕಾರ್ಯಾಚರಣೆ ಮುಂದುವರೆಸಿದೆ.

ಪಾಕಿಸ್ತಾನದ ಕ್ವೆಟ್ಟಾ ರೈಲು ನಿಲ್ದಾಣದಲ್ಲಿ ಬಾಂಬ್ ಸ್ಫೋಟ:24 ಮಂದಿ ಸಾವು Read More