ಹಾಸನ ಜಿಲ್ಲಾಧಿಕಾರಿ ಕಚೇರಿಗೆ ಬಾಂಬ್ ಬೆದರಿಕೆ ಕರೆ

(ವರದಿ:ಸಿಬಿಎಸ್‌)

ಹಾಸನ: ರಾಜ್ಯದ ನಾನಾ ಕಡೆಗಳಲ್ಲಿ ಇಂದು ಬಾಂಬ್ ಬೆದರಿಕೆ ಸಂದೇಶ ರವಾನೆಯಾಗಿದ್ದು, ಇದರ ಬಿಸಿ ಹಾಸನ ಜಿಲ್ಲೆಯ ಜಿಲ್ಲಾಧಿಕಾರಿ ಕಚೇರಿಗೂ ತಟ್ಟಿತು.

ಜಿಲ್ಲಾಧಿಕಾರಿ ಕಚೇರಿಗೆ ಬಾಂಬ್ ಬೆದರಿಕೆ ಮೇಲ್ ಬಂದ ಕೂಡಲೇ ಕೆಲಕಾಲ ಆತಂಕದ ವಾತಾವರಣ‌ ನಿರ್ಮಾಣವಾಗಿತ್ತು.

ವಿಷಯ ತಿಳಿದ ಕೂಡಲೇ ಪೊಲೀಸರು‌ ಸ್ಥಳಕ್ಜೆ ಧಾವಿಸಿ ದರು.

ಬೆದರಿಕೆ ಮೇಲ್‌ನ ಸಾರಾಂಶದ ಪ್ರಿಂಟೌಟ್ ತೆಗೆದು ಎಫ್‌ಐಆರ್ ದಾಖಲಿಸಲು ಜಿಲ್ಲಾಧಿಕಾರಿ ಲತಾಕುಮಾರಿ ಸೂಚನೆ ಹೊರಡಿಸಿದ್ದರು.

ಡಿಸಿ ಆದೇಶದಂತೆ ಹಾಸನ ಡಿವೈಎಸ್‌ಪಿ ಗಂಗಾಧರಪ್ಪ ನೇತೃತ್ವದಲ್ಲಿ ಶ್ವಾನದಳ, ಬಾಂಬ್ ನಿಷ್ಕ್ರಿಯ ದಳದವರು ಪರಿಶೀಲನೆ ನಡೆಸಿದ್ದಾರೆ.

ಪೊಲೀಸರ ಪರಿಶೀಲನೆ ನಡುವೆಯೂ ಜಿಲ್ಲಾಧಿಕಾರಿಗಳು ಸಭೆ ಮುಂದುವರೆಸಿದ್ದಾರೆ.

ಹಾಸನ ಜಿಲ್ಲಾಧಿಕಾರಿ ಕಚೇರಿಗೆ ಬಾಂಬ್ ಬೆದರಿಕೆ ಕರೆ Read More

ಇಂಡಿಗೊ ವಿಮಾನಕ್ಕೆ ಬಾಂಬ್ ಬೆದರಿಕೆ:ತುರ್ತು ಭೂ ಸ್ಪರ್ಷ!

ಮುಂಬೈ: ಬಾಂಬ್ ಬೆದರಿಕೆ ಬಂದ ಕಾರಣ ಹೈದರಾಬಾದ್ ನಿಂದ ಕುವೈತ್ ಗೆ ತೆರಳುತ್ತಿದ್ದ ಇಂಡಿಗೋ ವಿಮಾನ ಮುಂಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಷ ಮಾಡಬೇಕಾಯಿತು.

ವಿಮಾನವನ್ನು ಮುಂಬೈ ನಿಲ್ದಾಣದಲ್ಲಿ ಸುರಕ್ಷಿತವಾಗಿ ಕೆಳಕ್ಕಿಳಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಹೈದರಾಬಾದ್ ನಲ್ಲಿ ವಿಮಾನ ಲ್ಯಾಂಡಿಂಗ್ ಆದಾಗ ರಿಮೋಟ್ ಕಂಟ್ರೋಲ್ ನಿಯಂತ್ರಿತ ಸ್ಫೋಟಕ ಸಾಧನಗಳನ್ನು ಬಳಸಿ ದಾಳಿ ನಡೆಸಲು ಯೋಜಿಸಲಾಗಿದೆ ಎಂದು ಅನಾಮದೇಯ ಶಕ್ತಿಗಳು ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬೆದರಿಕೆಯ ಇಮೇಲ್ ಕಳುಹಿಸಿದ್ದವು.

ಇ-ಮೇಲ್ ಬಂದ ಬಳಿಕ ಕುವೈತ್ ಗೆ ತೆರಳುತ್ತಿದ್ದ ವಿಮಾನವನ್ನು ಮುಂಬೈ ಕಡೆಗೆ ತಿರುಗಿಸಲು ಅಧಿಕಾರಿಗಳು ನಿರ್ಧರಿಸಿದರು. ಅಲ್ಲಿ ವಿಮಾನ ಸುರಕ್ಷಿತವಾಗಿ ಲ್ಯಾಂಡ್ ಆಯಿತು,ಆದರೆ ಭದ್ರತಾ ಪರಿಶೀಲನೆ ವೇಳೆ ಯಾವುದೇ ಅನುಮಾನಾಸ್ಪದ ವಸ್ತುಗಳು ಕಂಡುಬಂದಿಲ್ಲ ತನಿಖೆ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇಂಡಿಗೊ ವಿಮಾನಕ್ಕೆ ಬಾಂಬ್ ಬೆದರಿಕೆ:ತುರ್ತು ಭೂ ಸ್ಪರ್ಷ! Read More

ಕೇಂದ್ರ ಸಚಿವ ನಿತಿನ್ ಗಡ್ಕರಿ ನಿವಾಸಕ್ಕೆಬಾಂಬ್ ಬೆದರಿಕೆ ಕರೆ

ನಾಗ್ಪುರ: ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರ ನಾಗ್ಪುರದ ನಿವಾಸಕ್ಕೆ ವ್ಯಕ್ತಿಯೊಬ್ಬ ಬಾಂಬ್ ಬೆದರಿಕೆ ಕರೆ ಮಾಡಿದ್ದು ಕೆಲಕಾಲ ಆತಂಕ ವುಂಟಾಯಿತು.

ಆ ವ್ಯಕ್ತಿ ಬೆಳಿಗ್ಗೆ ನಗರ ಪೊಲೀಸ್ ನಿಯಂತ್ರಣ ಕೊಠಡಿಗೆ ತುರ್ತು ಸಂಖ್ಯೆ 112ಕ್ಕೆ ಕರೆ ಮಾಡಿ ಬೆದರಿಕೆಯೊಡ್ಡಿದ್ದ‌ ಇದರಿಂದ ಅಧಿಕಾರಿಗಳೇ ಶಾಕ್ ಗೆ ಒಳಗಾದರು.

ತನಿಖೆ ಸಮಯದಲ್ಲಿ, ಕರೆ ಮಾಡಲಾದ ಮೊಬೈಲ್ ಸಂಖ್ಯೆಯನ್ನು ಪತ್ತೆಹಚ್ಚಿದ್ದು, ನಾಗ್ಪುರ ನಗರದ ಸಕ್ಕರ್ದಾರ ಪ್ರದೇಶದ ವಿಮಾ ದವಾಖಾನಾ ಬಳಿಯ ತುಳಸಿ ಬಾಗ್ ರಸ್ತೆಯ ನಿವಾಸಿ ಉಮೇಶ್ ವಿಷ್ಣು ರಾವುತ್ ಎಂಬಾತ ಕರೆ ಮಾಡಿದ್ದಾನೆಂದು ಗೊತ್ತಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮೊಬೈಲ್ ಲೊಕೇಶನ್ ಮತ್ತು ತಾಂತ್ರಿಕ ನೆರವಿನಿಂದ ಪೊಲೀಸರು ವಿಮಾ ದವಾಖಾನಾದ ಆವರಣದಿಂದ ರಾವುತ್ ನನ್ನು ವಶಕ್ಕೆ ಪಡೆದು ಪ್ರಕರಣ ದಾಳಲಿಸಿ,ವಿಚಾರಣೆಗೆ ಒಳಪಡಿಸಿದ್ದಾರೆ.

ಕೇಂದ್ರ ಸಚಿವ ನಿತಿನ್ ಗಡ್ಕರಿ ನಿವಾಸಕ್ಕೆಬಾಂಬ್ ಬೆದರಿಕೆ ಕರೆ Read More

ಚಾಮರಾಜನಗರ ಜಿಲ್ಲಾ ಆಡಳಿತ ಭವನಕ್ಕೆ ಬಾಂಬ್ ಬೆದರಿಕೆ ಕರೆ

(ವರದಿ:ಸಿದ್ದರಾಜು,ಕೊಳ್ಳೇಗಾಲ)

ಚಾಮರಾಜನಗರ: ಬೆಳ್ಳಂಬೆಳಿಗ್ಗೆ
ಚಾಮರಾಜನಗರ ಜಿಲ್ಲಾ ಆಡಳಿತ ಭವನಕ್ಕೆ ಬಾಂಬ್ ಬೆದರಿಕೆ ಕರೆ ಬಂದಿದ್ದು,ಸಿಬ್ಬಂದಿ ಹಾಗೂ ನಗರದ ಜನ ಆತಂಕಕ್ಕೆ ಒಳಗಾದರು.

ಈ ಬಗ್ಗೆ ಚಾಮರಾಜನಗರ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರು ಮಾಧ್ಯಮಗಳೊಂದಿಗೆ ಮಾತನಾಡಿದ್ದು,ನಮ್ಮ ಜಿಲ್ಲಾಡಳಿತ ಭವನದ ಕಚೇರಿಯ ಅಧಿಕೃತ ಇ ಮೇಲ್ ಐಡಿಗೆ ಬೆಳಿಗ್ಗೆ ಮೇಲ್ ಬಂದಿದೆ ಬಾಂಬ್ ಇಟ್ಟಿರುವುದಾಗಿ ತಿಳಿಸಲಾಗಿದೆ ಎಂದು ಹೇಳಿದರು.

ಪಹಲ್ಗಾಮ್ ದುಶ್ಕೃತ್ಯದ ಹಿನ್ನೆಲೆಯಲ್ಲಿ ಇಡೀ ದೇಶದಲ್ಲಿ ಟೆನ್ಷನ್ ಇರುವಾಗ ಈ ರೀತಿಯ ಬಾಂಬ್ ಬೆದರಿಕೆ ಕರೆ ಬಂದಿರುವುದರಿಂದ ಇದನ್ನು ನಾವು ಗಂಭೀರವಾಗಿ ಪರಿಗಣಿಸಿದ್ದೇವೆ ಎಂದು ತಿಳಿಸಿದರು.

ಚಾಮರಾಜನಗರದ ಜಿಲ್ಲಾಡಳಿತ ಭವನದಲ್ಲಿ ಬಾಂಬ್ ಇಟ್ಟಿದ್ದೇವೆ ಅದು 3 ಗಂಟೆಗೆ ಸಿಡಿಯಲಿದೆ ಎಚ್ಚರ ಎಂದು ತಿಳಿಸಲಾಗಿದೆ.ಹಾಗಾಗಿ ತಕ್ಷಣ ಸೆನ್ ಪೊಲೀಸ್ ಠಾಣೆಗೆ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಹಾಗೂ ಡಿಐಜಿ ಅವರಿಗೆ ಮಾಹಿತಿ ನೀಡಿದ್ದೇವೆ ಅವರು ಈಗಾಗಲೇ ಕಾರ್ಯಪ್ರವೃತ್ತರಾಗಿದ್ದಾರೆ ಬಾಂಬ್ ತಪಾಸಣೆ ನಡೆಸಲಾಗಿದೆ ಎಂದು ಶಿಲ್ಪಾ ನಾಗ್ ತಿಳಿಸಿದರು.

ಜನತೆ ಆತಂಕಕ್ಕೆ ಒಳಗಾಗಬಾರದು ಎಂದು ಮನವಿ ಮಾಡಿದರು.

ಚಾಮರಾಜನಗರ ಜಿಲ್ಲಾ ಆಡಳಿತ ಭವನಕ್ಕೆ ಬಾಂಬ್ ಬೆದರಿಕೆ ಕರೆ Read More