ಬ್ರಹ್ಮಣಿಪುರ ಗ್ರಾಮದಲ್ಲಿ ನಿಖಿಲ್ ಪರ ಜೆಡಿಎಸ್,ಬಿಜೆಪಿ ಮತ ಪ್ರಚಾರ
ಚನ್ನಪಟ್ಟಣ: ಚನ್ನಪಟ್ಟಣದ ಉಪ ಚುನಾವಣೆಯಲ್ಲಿ ಎನ್ ಡಿ ಎ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ನಿಖಿಲ್ ಕುಮಾರಸ್ವಾಮಿ ಅವರ ಪರ ಇಂದು ಸಂಜೆ
ಬ್ರಹ್ಮಣಿಪುರ ಗ್ರಾಮದಲ್ಲಿ ಜೆಡಿಎಸ್,ಬಿಜೆಪಿ ಕಾರ್ಯಕರ್ತರು ಭರ್ಜರಿ ಪ್ರಚಾರ ನಡೆಸಿದರು.
ಬ್ರಹ್ಮಣಿಪುರ ಗ್ರಾಮದ ಪ್ರತಿ ಮನೆಗಳಿಗೂ ಭೇಟಿ ನೀಡಿ ನಿಖಿಲ್ ಕುಮಾರಸ್ವಾಮಿ ಅವರ ಪರವಾಗಿ ಮತಯಾಚನೆ ಮಾಡಲಾಯಿತು.

ಈ ಸಂದರ್ಭದಲ್ಲಿ ಪಿರಿಯಾಪಟ್ಟಣದ ಮಾಜಿ ಶಾಸಕ ಮಹದೇವ್, ಮೈಸೂರು ಮಹಾನಗರ ಪಾಲಿಕೆಯ ಮಾಜಿ ಮಹಾಪೌರ ಆರ್. ಲಿಂಗಪ್ಪ, ಲೋಕೇಶ್, ಮೈಸೂರು ನಗರದ ಮಾಜಿ ಮಹಾ ಪ್ರಧಾನ ಕಾರ್ಯದರ್ಶಿ ರಾಜಶೇಖರ್, ನವೀನ್, ವೆಂಕಟೇಶ್ ಹಾಗೂ ಗ್ರಾಮದ ಮುಖಂಡರು, ಜೆಡಿಎಸ್ ಹಾಗೂ ಬಿಜೆಪಿ ಕಾರ್ಯಕರ್ತರು ಒಟ್ಟುಗೂಡಿ ಮತಯಾಚನೆ ಮಾಡಿ ನಿಖಿಲ್ ಕುಮಾರಸ್ವಾಮಿ ಅವರನ್ನು ಆಶೀರ್ವದಿಸಿ ಬಹುಮತದಿಂದ ಗೆಲ್ಲಿಸಬೇಕೆಂದು ಮತದಾರರಲ್ಲಿ ಮನವಿ ಮಾಡಿದರು.
ಬ್ರಹ್ಮಣಿಪುರ ಗ್ರಾಮದಲ್ಲಿ ನಿಖಿಲ್ ಪರ ಜೆಡಿಎಸ್,ಬಿಜೆಪಿ ಮತ ಪ್ರಚಾರ Read More