ಉಪ ಸಮಿತಿ ವರದಿ ಬಂದಿಲ್ಲ;ವಿವಿಗಳನ್ನ ಮುಚ್ಚುವ ಬಗ್ಗೆ ತೀರ್ಮಾನ ಆಗಿಲ್ಲ-ಸಿಎಂ
ಬೆಂಗಳೂರು: ವಿಶ್ವ ವಿದ್ಯಾಲಯಗಳನ್ನು ಮುಚ್ಚುವ ಬಗ್ಗೆ ತೀರ್ಮಾನ ಆಗಿಲ್ಲ ಕ್ಯಾಬಿನೆಟ್ ಉಪ ಸಮಿತಿ ವರದಿಯೇ ಇನ್ನೂ ಬಂದಿಲ್ಲ, ವರದಿ ಬರುವ ಮೊದಲೇ ಬಿಜೆಪಿಗೆ ಆತಂಕ ಏಕೆ ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದರು.
ಸಿಎಂ,ಉಪ ಮುಖ್ಯಮಂತ್ರಿ ಅವರ ಅಧ್ಯಕ್ಷತೆಯಲ್ಲಿ ಈ ಸಂಗತಿಯ ಕೂಲಂಕುಷ ಪರಿಶೀಲನೆಗೆ ಉಪ ಸಮಿತಿ ರಚಿಸಲಾಗಿದೆ, ವರದಿ ಬರುತ್ತಿದ್ದಂತೆ ಅದನ್ನು ಕ್ಯಾಬಿನೆಟ್ ಮುಂದೆ ಇಟ್ಟು ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಹೇಳಿದರು.
ವರದಿ ಬರುವ ಮೊದಲೇ ವಿವಿಗಳನ್ನು ಮುಚ್ಚುತ್ತೇವೆ ಎನ್ನುವುದು ಸರಿಯಲ್ಲ. ಇಂಥಾ ತೀರ್ಮಾನ ನಮ್ಮಿಂದ ಆಗಿಲ್ಲ ಎಂದು ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.
ಉಪ ಸಮಿತಿ ವರದಿ ಬಂದಿಲ್ಲ;ವಿವಿಗಳನ್ನ ಮುಚ್ಚುವ ಬಗ್ಗೆ ತೀರ್ಮಾನ ಆಗಿಲ್ಲ-ಸಿಎಂ Read More