ಬಿ ಎಸ್ ವೈ ಜನ್ಮದಿನ:ವಿವಿಧ ಸವಲತ್ತುಗಳ ವಿತರಣೆ
ಮೈಸೂರು: ವಿವಿಧ ಸವಲತ್ತುಗಳನ್ನು ವಿತರಣೆ ಮಾಡುವ ಮೂಲಕ
ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಹುಟ್ಟುಹಬ್ಬವನ್ನು ಆಚರಿಸಲಾಯಿತು.
ಮೈಸೂರಿನ ಚಾಮುಂಡಿಪುರಂನ ಆರಾಧ್ಯ ಮಹಾಸಭಾದಲ್ಲಿ ವಾರ್ಡ್ ನಂಬರ್ 55ರ ನಗರ ಪಾಲಿಕೆ ಮಾಜಿ ಸದಸ್ಯ ಮಾ ವಿ ರಾಮಪ್ರಸಾದ್ ನೇತೃತ್ವದಲ್ಲಿ ಬಿಜೆಪಿ ನೇತಾರರು ಮಹಿಳೆಯರಿಗೆ ಉಚಿತವಾಗಿ ಹೋಲಿಗೆ ಯಂತ್ರ, ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್, ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ ಹಾಗೂ ವಿಶೇಷ ಚೇತನ ಮಕ್ಕಳಿಗೆ ಔಷಧಿಗಳನ್ನು ನೀಡುವ ಮೂಲಕ ಬಿಎಸ್ ವೈ ಜನ್ಮ ದಿನ ಆಚರಿಸಲಾಯಿತು.
ಕಾರ್ಯಕ್ರಮ ಉದ್ಘಾಟಿಸಿದ ಕೆ ಆರ್ ಕ್ಷೇತ್ರದ ಶಾಸಕ ಟಿ ಎಸ್ ಶ್ರೀವತ್ಸ ಅವರು
ಮಾಜಿ ಮುಖ್ಯಮಂತ್ರಿಗಳು ಭಾರತೀಯ ಜನತಾ ಪಾರ್ಟಿಯನ್ನು ಪ್ರಾರಂಭದಿಂದಲೂ ಸಂಘಟಿಸಿ ರೈತರ ಪರವಾದ ಹೋರಾಟಗಳನ್ನು ಮಾಡಿ ಕರ್ನಾಟಕ ರಾಜ್ಯದಲ್ಲಿ ಭಾರತೀಯ ಜನತಾ ಪಾರ್ಟಿ ಅಧಿಕಾರಕ್ಕೆ ಬರಲು ಮೂಲ ಕಾರಣಕರ್ತರಾದವರು ಎಂದು ತಿಳಿಸಿದರು.
ಬಿ ಎಸ್ ವೈ ಅವರು ಮುಖ್ಯಮಂತ್ರಿಗಳಾದ ಸಂದರ್ಭದಲ್ಲಿ ಹಲವಾರು ಯೋಜನೆಗಳನ್ನು ಜಾರಿಗೆ ತಂದರು ಭಾಗ್ಯಲಕ್ಷ್ಮಿ ಯೋಜನೆ, ರೈತರಿಗೆ ವಿದ್ಯುತ್ ಉಚಿತವಾಗಿ ನೀಡಿದರು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಕೃಷ್ಣರಾಜ ಕ್ಷೇತ್ರದ ಅಧ್ಯಕ್ಷರಾದ ಗೋಪಾಲ ರಾಜ ಅರಸ್, ನಗರಪಾಲಿಕೆ ಮಾಜಿ ಸದಸ್ಯರಾದ ಮಾವಿ ರಾಮಪ್ರಸಾದ, ಮೈಸೂರು ನಗರ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಮಹೇಶ್, ಉಮಾಶಂಕರ್, ವಿದ್ಯಾ ಅರಸ್, ಪುರುಷೋತ್ತಮ್, ಮಂಜುನಾಥ್, ಸೋಮೇಶ್, ಮಂಜುಳಾ, ವಿಕ್ರಮ ಅಯ್ಯಂಗಾರ್, ಅರವಿಂದ್ ಸೇರಿದಂತೆ 500ಕ್ಕೂ ಹೆಚ್ಚು ಕಾರ್ಯಕರ್ತರು ಅಭಿಮಾನಿಗಳು ಭಾಗವಹಿಸಿದ್ದರು.
ಬಿ ಎಸ್ ವೈ ಜನ್ಮದಿನ:ವಿವಿಧ ಸವಲತ್ತುಗಳ ವಿತರಣೆ Read More