ಹೊತ್ತಿ ಉರಿದ ಬಸ್: 20 ಮಂದಿ ಸಾವು

ಹೈದರಾಬಾದ್‌: ಹೈದರಾಬಾದ್‌ನಿಂದ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ ಗೆ ಬೆಂಕಿ ಬಿದ್ದು‌ 20 ಮಂದಿ ಘೋರವಾಗಿ ಮೃತಪಟ್ಟಿದ್ದಾರೆ.

ಆಂಧ್ರಪ್ರದೇಶದ ಕರ್ನೂಲ್ ಹೆದ್ದಾರಿಯಲ್ಲಿ ಬಸ್ ಬೆಂಕಿಗೆ ಆಹುತಿಯಾಗಿದ್ದು, 20 ಪ್ರಯಾಣಿಕರು ಮೃತಪಟ್ಟಿದ್ದಾರೆ.

ಕರ್ನೂಲು ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 44 ರ ಚಿನ್ನತೇಕೂರು ಗ್ರಾಮದ ಬಳಿ ಈ ದುರಂತ ಸಂಭವಿಸಿದ್ದು, ತುರ್ತು ನಿರ್ಗಮನ ಮತ್ತು ಕಿಟಕಿ ಗಾಜುಗಳನ್ನು ಒಡೆದು 21 ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ.

ಬೈಕ್ ಗೆ ಡಿಕ್ಕಿ ಹೊಡೆದ ಬಸ್ ಕೆಳಗೆ ಬೈಕ್ ಕೆಳಗೆ ಸಿಲುಕಿಕೊಂಡು, ಕೂಡಲೇ ಬೆಂಕಿ ಹತ್ತಿಕೊಂಡಿದೆ.ತಕ್ಷಣ ಇಡೀ ಬಸ್ಸನ್ನು ಬೆಂಕಿಯ ಜ್ವಾಲೆ ಆವರಿಸ ಸುಟ್ಟು ಕರಕಲಾಗಿದೆ.

ಈ ಬೆಂಕಿ ಅವಘಡದಲ್ಲಿ ಬೆಂಗಳೂರಿನಲ್ಲಿ ನೆಲೆಸಿದ್ದ ನೆಲ್ಲೂರು ಜಿಲ್ಲೆಯ ಒಂದೇ ಕುಟುಂಬದ ನಾಲ್ವರು ಸಜೀವ ದಹನವಾಗಿದ್ದಾರೆ.

ಘಟನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೇರಿದಂತೆ ಕೇಂದ್ರ, ರಾಜ್ಯ ಸಚಿವರು ಸಂತಾಪ ವ್ಯಕ್ತಪಡಿಸಿದ್ದಾರೆ.

ಹೊತ್ತಿ ಉರಿದ ಬಸ್: 20 ಮಂದಿ ಸಾವು Read More

ಬಸ್ಸಿನ ಹಿಂಬದಿ ಚಕ್ರಕ್ಕೆ ಸಿಲುಕಿ ಬೈಕ್ ಸವಾರ ಸಾ*ವು

(ವರದಿ: ರಾಮಸಮುದ್ರ ಎಸ್.ವೀರಭದ್ರಸ್ವಾಮಿ)

ಚಾಮರಾಜನಗರ: ಬಸ್ಸಿನ ಹಿಂಬದಿ ಚಕ್ರಕ್ಕೆ ಬೈಕ್ ಸವಾರ ಸಿಲುಕಿ ಸಾವನ್ನಪ್ಪಿರುವ ಘಟನೆ ನಗರದ ಸರ್ಕಾರಿ ಬಸ್ ನಿಲ್ದಾಣ ಬಳಿ ನಡೆದಿದೆ.

ಕಾಡಹಳ್ಳಿಯ ಮಲ್ಲಪ್ಪ ಎಂಬುವವರ ಮಗ ಶಿವ ಮಲ್ಲಪ್ಪ ಮೃತ ದುರ್ದೈವಿ.

ಸರ್ಕಾರಿ ಬಸ್ ನಿಲ್ದಾಣ ಸಮೀಪ ಇರುವ ಮಸೀದಿ ಮುಂಭಾಗ ಬಸ್ ನಿಲ್ದಾಣದಿಂದ ಬರುತ್ತಿದ್ದ ಬಸ್ಸಿಗೆ ಬೈಕ್ ಸವಾರ ಹಿಂಬದಿಯ ಚಕ್ರಕ್ಕೆ ಸಿಲುಕಿ ಸ್ಥಳದಲ್ಲಿ ಸಾವನ್ನಪ್ಪಿದ್ದಾನೆ ಎಂದು ಪ್ರತ್ಯಕ್ಷ ದರ್ಶಿಗಳು ತಿಳಿಸಿದ್ದಾರೆ.

ಮೃತದೇಹವನ್ನ ಸಿಮ್ಸ್ ಆಸ್ಪತ್ರೆಗೆ ಸಾಗಿಸಲಾಗಿದೆ.

ಸ್ಥಳಕ್ಕೆ ಸಂಚಾರಿ ಠಾಣೆ ಪೊಲೀಸರು ಭೇಟಿ ನೀಡಿ ದೂರು ದಾಖಲು ಮಾಡಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

ಬಸ್ಸಿನ ಹಿಂಬದಿ ಚಕ್ರಕ್ಕೆ ಸಿಲುಕಿ ಬೈಕ್ ಸವಾರ ಸಾ*ವು Read More

ಐಷಾರಾಮಿ ಬಸ್ ಉರುಳಿ ಇಬ್ಬರ ದುರ್ಮರಣ

ಬೆಳಗಾವಿ: ಚಾಲಕನ ಅಜಾಗರೂಕತೆಯಿಂದ ಬೆಳಗಾವಿ ಸಮೀಪದ ಹಿರೇಬಾಗೇವಾಡಿ ಘಾಟ್ ನಲ್ಲಿ ಖಾಸಗಿ ಐಷಾರಾಮಿ ‌ಬಸ್ ಉರುಳಿ ಬಿದ್ದು ಇಬ್ಬರು ಮೃತಪಟ್ಟ ಘಟನೆ ನಡೆದಿದೆ.

ಬುಧವಾರ ತಡ ರಾತ್ರಿ ಹುಬ್ಬಳ್ಳಿಯಿಂದ ಪುಣೆಗೆ ಹೊರಟಿದ್ದ ಗೋಗಟೆ ಸಂಸ್ಥೆಗೆ ಸೇರಿದ ಬಸ್ ಘಾಟಿಯಲ್ಲಿ ಉರುಳಿದೆ ಬಸ್ ನಲ್ಲಿ ಒಟ್ಟು 12 ಜನ ಪ್ರಯಾಣಿಕರಿದ್ದರು.
ಅಪಘಾತದಲ್ಲಿ ಒಬ್ಬರು ಮಹಿಳೆ ಹಾಗೂ ಪುರುಷ ಮೃತಪಟ್ಟಿದ್ದಾರೆ.‌

ಸ್ಥಳಕ್ಕೆ ಪೊಲೀಸ್ ಆಯುಕ್ತ ಭೂ಼ಷಣ ಬೊರಸೆ ಭೇಟಿ ನೀಡಿ ಮಾಹಿತಿ ಪಡೆದರು.

ಹಿರೇಬಾಗೇವಾಡಿ ಪೊಲೀಸ್ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು,ಸ್ಥಳೀಯರ ನೆರವಿನಲ್ಲಿ ಗಾಯಾಳುಗಳನ್ನು ಬೆಳಗಾವಿ ಬಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಐಷಾರಾಮಿ ಬಸ್ ಉರುಳಿ ಇಬ್ಬರ ದುರ್ಮರಣ Read More

ಬಸ್ ನಲ್ಲಿ ಬೆಂಕಿ:ಪ್ರಯಾಣಿಕರಿಗೆಡಿಸಿಪಿ ಬಿಂದುಮಣಿ ಸ್ಪಂದನೆ

ಮೈಸೂರು: ಸರ್ಕಾರಿ ಬಸ್ ಇಂಜಿನ್ ನಲ್ಲಿ ಬೆಂಕಿ ಕಾಣಿಸಿಕೊಂಡು ಆತಂಕಕ್ಕೆ ಒಳಗಾಗಿದ್ದ ಚಾಮುಂಡಿದಲ್ಲಿ ಭಕ್ತರ ನೆರವಿಗೆ ಕಾನೂನು ಮತ್ತು ಸುವ್ಯವಸ್ಥೆ ಡಿಸಿಪಿ ಬಿಂದುಮಣಿ ಧಾವಿಸಿ ಕಳಕಳಿ ಮೆರೆದ ಪ್ರಸಂಗ ನಡೆಯಿತು.

ಈ ಪೊಲೀಸ್ ಅಧಿಕಾರಿ ಬಿಂದುಮಣಿಯವರ ಸಮಯಪ್ರಜ್ಞೆಯಿಂದ ಪ್ರಯಾಣಿಕರ ಆತಂಕ ದೂರವಾಗಿ ಅವರ ಸರಳತೆ ಮಾನವೀಯತೆಗೆ ಭಕ್ತರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಇಂದು ನಾಡದೇವತೆ ಚಾಮುಂಡೇಶ್ವರಿ ವರ್ಧಂತಿ.ಎಂದಿನಂತೆ ಚಾಮುಂಡಿ ಬೆಟ್ಟಕ್ಕೆ ತೆರಳಲು ಭಕ್ತರಿಗೆ ಉಚಿತ ಸಾರಿಗೆ ವ್ಯವಸ್ಥೆ ಕಲ್ಪಿಸಲಾಗಿದೆ.

ಉಚಿತ ಸಾರಿಗೆ ಬಸ್ ಹತ್ತಿ ಬೆಟ್ಟಕ್ಕೆ ತೆರಳುತ್ತಿದ್ದ ಬಸ್ ನಲ್ಲಿ ಮಾರ್ಗಮಧ್ಯೆ ಇಂಜಿನ್ ನಲ್ಲಿ ಬೆಂಕಿ ಕಾಣಿಸಿಕೊಂಡು ಪ್ರಯಾಣಿಕರು ಆತಂಕ್ಕೆ ಒಳಗಾದರು.

ತಕ್ಷಣ ಚಾಲಕನ ನಿರ್ದೇಶನದಂತೆ ಪ್ರಯಾಣಿಕರು ಬಸ್ ನಿಂದ ಕೆಳಗೆ ಇಳಿದು ಅಸಹಾಯಕರಾಗಿ ನಿಂತಿದ್ದರು.

ಇದೇ ವೇಳೆ ಕಾನೂನು ಮತ್ತು ಸುವ್ಯವಸ್ಥೆ ಡಿಸಿಪಿ ಬಿಂದುಮಣಿ ಅವರು ತಮ್ಮ ಅಧಿಕೃತ ವಾಹನದಲ್ಲಿ ಚಾಮುಂಡಿಬೆಟ್ಟಕ್ಕೆ ತೆರಳುತ್ತಿದ್ದಾಗ ಆತಂಕದಲ್ಲಿ ಸಿಲುಕಿದ್ದ ಪ್ರಯಾಣಿಕರ ಪರಿಸ್ಥಿತಿ ನೋಡಿ ಅಲ್ಲಿಗೆ ಆಗಮಿಸಿದ್ದಾರೆ.

ತಮ್ಮ ವಾಹನದಿಂದ ಇಳಿದು ಪ್ರಯಾಣಿಕರಿಗೆ ಧೈರ್ಯತುಂಬಿ ಪರ್ಯಾಯ ವ್ಯವಸ್ಥೆ ಕಲ್ಪಿಸಿ ಪ್ರಯಾಣಿಕರಿಗೆ ಬೆಟ್ಟಕ್ಕೆ ತೆರಳಲು ಅನುವು ಮಾಡಿಕೊಟ್ಟಿದ್ದಾರೆ.

ಇಂಜಿನ್ ನಲ್ಲಿ ಬೆಂಕಿ ಕಾಣಿಸಿಕೊಂಡ ಮಾಹಿತಿ ತಿಳಿದು ನಂತರ ಸುಸ್ಥಿತಿಗೆ ತಲುಪಿದ್ದನ್ನ ಖಚಿತಪಡಿಸಿಕೊಂಡು ಪ್ರಯಾಣಿಕರಿಗೆ ತೆರಳಲು ಅನುಕೂಲ ಮಾಡಿಕೊಟ್ಟರು.

ಡಿಸಿಪಿ ಬಿಂದುಮಣಿ ಅವರ ಸರಳತೆ ಹಾಗೂ ಸಮಯಪ್ರಜ್ಞೆ ಮೆಚ್ಚುಗೆಗೆ ಪಾತ್ರವಾಗಿದೆ.

ಬಸ್ ನಲ್ಲಿ ಬೆಂಕಿ:ಪ್ರಯಾಣಿಕರಿಗೆಡಿಸಿಪಿ ಬಿಂದುಮಣಿ ಸ್ಪಂದನೆ Read More

ಕೀನ್ಯಾದಲ್ಲಿ ‌ಕಂದಕಕ್ಕೆ ಉರುಳಿದ ಬಸ್ಆರು ಭಾರತೀಯರ ದು*ರ್ಮರಣ

ಕೀನ್ಯಾ: ಕೀನ್ಯಾದಲ್ಲಿ ಚಾಲಕನ‌ ನಿಯಂತ್ರಣ ತಪ್ಪಿ ಬಸ್ ಕಂದಕಕ್ಕೆ ಉರುಳಿದ ಪರಿಣಾಮ ಆರು ಭಾರತೀಯರು ಸಾವನ್ನಪ್ಪಿದ್ದಾರೆ.

ಕೀನ್ಯಾದಲ್ಲಿ ಪ್ರಯಾಣಿಸುತ್ತಿದ್ದ ಬಸ್ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿ ಬಿದ್ದಿದೆ. ಮೃತರೆಲ್ಲರೂ ಕತಾರ್ ನಲ್ಲಿ ನೆಲೆಸಿದ್ದ ಭಾರತೀಯ ಮೂಲದವರು ಎಂದು ಗುರುತಿಸಲಾಗಿದೆ.

ಐವರು ಕೇರಳದವರೆಂದು ಅಲ್ಲಿನ ಅಧಿಕಾರಿಗಳು ತಿಳಿಸಿದ್ದಾರೆ.

ಕೇರಳದ ಮಾವೆಲಿಕ್ಕರ ಮೂಲದ ಗೀತಾ ಶೋಜಿ ಐಸಾಕ್ (58), ಜಸ್ನಾ ಕುಟ್ಟಿಕ್ಕಟ್ಟುಚಲಿಲ್ (29), ರುಹಿ ಮೆಹ್ರಿ ಮೊಹಮ್ಮದ್ (18 ತಿಂಗಳ), ಒಟ್ಟಪಾಲಂ ಮೂಲದ ರಿಯಾ ಎನ್ (41) ಮತ್ತು ಟೈರಾ ರೊಡ್ರಿಗಸ್ (8) ಮೃತಪಟ್ಟವರೆಂದು ಗುರುತಿಸಲಾಗಿದೆ, ಮತ್ತೊಬ್ಬರ ಗುರುತು ಪತ್ತೆಯಾಗಿಲ್ಲ.

ನ್ಯಾಂಡರುವಾ ಕೌಂಟಿಯ ಓಲ್ ಜೊರೊರೊಕ್-ನಕುರು ರಸ್ತೆಯಲ್ಲಿರುವ ಗಿಚಾಕಾದಲ್ಲಿ ಅಪಘಾತ ಸಂಭವಿಸಿದೆ.

ಅಪಘಾತದಲ್ಲಿ 27 ಮಂದಿ ಗಾಯಗೊಂಡಿದ್ದಾರೆ. ಪ್ರವಾಸಿಗರು ನ್ಯಾಹುರುರುವಿನ ಪನಾರಿ ರೆಸಾರ್ಟ್‌ಗೆ ತೆರಳುತ್ತಿದ್ದಾಗ ಬಸ್ ಕಂದಕಕ್ಕೆ ಬಿದ್ದಿದೆ.

ಕಡಿದಾದ ಇಳಿಜಾರು ಪ್ರದೇಶದಲ್ಲಿ ತಿರುವು ಪಡೆಯಲು ಯತ್ನಿಸಿದಾಗ ಚಾಲಕನ ನಿಯಂತ್ರಣ ತಪ್ಪಿ ಬಸ್ ಕಂದಕಕ್ಕೆ ಉರುಳಿ ಬಿದ್ದಿದೆ. ಬಸ್ ನಲ್ಲಿ 28 ಪ್ರವಾಸಿಗರು, ಮೂವರು ಸ್ಥಳೀಯ ಮಾರ್ಗದರ್ಶಕರು ಇದ್ದರು

ಕೀನ್ಯಾದಲ್ಲಿ ‌ಕಂದಕಕ್ಕೆ ಉರುಳಿದ ಬಸ್ಆರು ಭಾರತೀಯರ ದು*ರ್ಮರಣ Read More

ಶಾಲಾ ಮಕ್ಕಳನ್ನು ಹೊತ್ತ ಬಸ್ ನಲ್ಲಿ ಬೆಂಕಿ:25 ಮಂದಿ ದುರ್ಮರಣ

ಬ್ಯಾಂಕಾಕ್, ಅ1: ಪ್ರವಾಸಕ್ಕೆ ಹೋಗಿದ್ದ ಶಾಲಾ ಮಕ್ಕಳನ್ನು ಹೊತ್ತ ಬಸ್ ಬ್ಯಾಂಕಾಕ್‌ನ ಉತ್ತರಕ್ಕೆ ಪ್ರವಾಸದಿಂದ ಹಿಂತಿರುಗುವಾಗ ಬೆಂಕಿ ಅವಘಡ ಸಂಭವಿಸಿ 25 ಮಂದಿ ಬೆಂಕಿಗೆ ಆಹುತಿಯಾದ ಹೃದಯ ವಿದ್ರಾವಕ ಘಟನೆ ನಡೆದಿದೆ.

ಬ್ಯಾಂಕಾಕ್ ಹೊರಗೆ ಶಾಲಾ ವಿದ್ಯಾರ್ಥಿಗಳನ್ನು ಸಾಗಿಸುತ್ತಿದ್ದ ಬಸ್ ಅಪಘಾತಕ್ಕೀಡಾಗಿ ಬೆಂಕಿ ಹೊತ್ತಿಕೊಂಡಿದೆ. 20 ಮಕ್ಕಳು ಮತ್ತು ಮೂವರು ಶಿಕ್ಷಕರ ಮೃತದೇಹಗಳು ಪತ್ತೆಯಾಗಿವೆ.

ದೇಶದ ಉತ್ತರಕ್ಕೆ ತೆರಳಿದ್ದ ಬಸ್ ಶಾಲಾ ಪ್ರವಾಸದ ನಂತರ ಥಾಯ್ ರಾಜಧಾನಿಗೆ ಹಿಂತಿರುಗುತ್ತಿತ್ತು.

ಬೆಂಕಿ ಹೊತ್ತಿಕೊಂಡ ಕೂಡಲೇ ದಟ್ಟವಾದ ಕಪ್ಪು ಹೊಗೆಯ ಬೃಹತ್ ಮೋಡಗಳು ಆಕಾಶಕ್ಕೆ ಚಿಮ್ಮಿತ್ತೆಂದು ಪ್ರತ್ಯಕ್ಷ ದರ್ಶಿಗಳು ತಿಳಿಸಿದ್ದಾರೆ.

ಮೇಲ್ಸೇತುವೆಯ ಅಡಿಯಲ್ಲಿ ಬಸ್ಸು ಸುಟ್ಟುಹೋದಾಗ ಜ್ವಾಲೆಗಳು ಬಸ್ ಅನ್ನು ಆವರಿಸಿಕೊಂಡಿತ್ತು ಎಂದು ಹೇಳಿದ್ದಾರೆ.

ಶಾಲಾ ಮಕ್ಕಳನ್ನು ಹೊತ್ತ ಬಸ್ ನಲ್ಲಿ ಬೆಂಕಿ:25 ಮಂದಿ ದುರ್ಮರಣ Read More

100 ನೂತನ ಬಿಎಂಟಿಸಿ ಬಸ್ ಲೋಕಾರ್ಪಣೆ ಮಾಡಿದ ಸಿಎಂ

ಬೆಂಗಳೂರು: ಬೆಂಗಳೂರು ನಗರದ ಜನತೆಯ ಅನುಕೂಲಕ್ಕೆ ಮೊದಲ ಹಂತದ 100 ನೂತನ ಬಿಎಂಟಿಸಿ ಬಸ್ ಗಳನ್ನು ಲೋಕಾರ್ಪಣೆ ಮಾಡಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ವಿಧಾನಸೌಧದ ಗ್ರಾಂಡ್ ಸ್ಟೆಪ್ಸ್ ಬಳಿ ಸಾರಿಗೆ ಇಲಾಖೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ 100 ನೂತನ BMTC ಬಸ್ ಗಳನ್ನು ಲೋಕಾರ್ಪಣೆ ಮಾಡಿ ಮಾತನಾಡಿದ ಸಿಎಂ
ಒಟ್ಟು 840 ನೂತನ‌ ಬಸ್ ಗಳು ಬಿಎಂಟಿಸಿ ಸೇರಲಿವೆ ಎಂದು ಹೇಳಿದರು.

ಬೆಂಗಳೂರು ನಗರದಲ್ಲಿ ಜನಸಂಖ್ಯೆ ಹೆಚ್ಚುತ್ತಿದೆ. ಇಲ್ಲಿ ಹೆಚ್ಚುತ್ತಿರುವ ಶ್ರಮಿಕ ವರ್ಗಗಳಿಗೆ ಅನುಕೂಲ ಮಾಡುವ ಉದ್ದೇಶದಿಂದ ನೂತನ‌ಬಸ್ ಗಳನ್ನು ಬಿಎಂಟಿಸಿ ಗೆ ಸೇರ್ಪಡೆಗೊಳಿಸಿದ್ದೇವೆ ಎಂದು ತಿಳಿಸಿದರು.

ಹಿಂದಿನ ಸರ್ಕಾರ ಸ್ಥಗಿತಗೊಳಿಸಿದ್ದ ಇಂದಿರಾ ಕ್ಯಾಂಟೀನ್ ಗಳನ್ನು ಆರಂಭಿಸಲಾಗಿದೆ, ನೂತನವಾಗಿ ಇನ್ನಷ್ಟು ಕ್ಯಾಂಟೀನ್ ಗಳನ್ನು ಆರಂಭಿಸುತ್ತಿದ್ದೇವೆ ಎಂದು ಸಿಎಂ ಹೇಳಿದರು.

ಇದೇ ಶ್ರಮಿಕ ವರ್ಗದ ಅನುಕೂಲಕ್ಕಾಗಿ ಶಕ್ತಿ ಯೋಜನೆ ಸೇರಿದಂತೆ ಐದೂ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿ ಯಶಸ್ವಿಯಾಗಿ ಮುಂದುವರೆಸುತ್ತಿದ್ದೇವೆ. ನಮ್ಮ ಸರ್ಕಾರ ಇರುವವರೆಗೂ ಗ್ಯಾರಂಟಿ ಯೋಜನೆಗಳು ಮುಂದುವರೆಯಲಿವೆ ಎಂದು ಭರವಸೆ ನೀಡಿದರು.

ಬಡವರ ಮತ್ತು ಮಧ್ಯಮ ವರ್ಗದ ವಿರೋಧಿಯಾಗಿರುವ ಬಿಜೆಪಿ ಈ ಗ್ಯಾರಂಟಿ ಯೋಜನೆಗಳ ವಿರುದ್ಧ ಅಪಪ್ರಚಾರ ಮಾಡುತ್ತಿವೆ. ಈ ಅಪಪ್ರಚಾರಕ್ಕೆ ಕಿವಿಗೊಡಬೇಡಿ,ಈ ಗ್ಯಾರಂಟಿಗಳು ಇನ್ನಷ್ಟು ಪರಿಣಾಮಕಾರಿಯಾಗಿ ಜಾರಿ ಆಗಲಿವೆ ಎಂದು ಸಿದ್ದು ಹೇಳಿದರು.

ಗೃಹಲಕ್ಷ್ಮಿ,ಬಡವರಿಗೆ ಅಕ್ಕಿ ಕೊಡುವ ಯೋಜನೆಯಿಂದ ಲಕ್ಷಾಂತರ ಕುಟುಂಬಗಳಿಗೆ ಆರ್ಥಿಕ ಶಕ್ತಿ ಬಂದಿದೆ ಎಂದು ಮುಖ್ಯ ಮಂತ್ರಿ ತಿಳಿಸಿದರು.

ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ವಸತಿ ಸಚಿವ ಜಮೀರ್ ಅಹಮದ್, ಇಂಧನ ಸಚಿನ ಕೆ.ಜೆ.ಜಾರ್ಜ್, ಕೆ ಕೆ ಆರ್ ಡಿಬಿ ಅಧ್ಯಕ್ಷ ಅಜಯ್ ಸಿಂಗ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ನಸೀರ್ ಅಹಮದ್ ಮತ್ತಿತರರು ಉಪಸ್ಥಿತರಿದ್ದರು.

100 ನೂತನ ಬಿಎಂಟಿಸಿ ಬಸ್ ಲೋಕಾರ್ಪಣೆ ಮಾಡಿದ ಸಿಎಂ Read More

ವಿದ್ಯಾರ್ಥಿಗಳ ಮೇಲೆ ಹರಿದ ಬಸ್

ಬೆಳಗಾವಿ: ರಸ್ತೆ ಬದಿ ನಿಂತಿದ್ದ ವಿದ್ಯಾರ್ಥಿಗಳ ಮೇಲೆಯೇ ಬಸ್ ಹರಿದು ಒಬ್ಬ ಬಾಲಕ ಮೃತಪಟ್ಟಿರುವ ಹೃದಯ ವಿದ್ರಾವಕ ಘಟನೆ ಜಿಲ್ಲೆಯ ಅಥಣಿ ತಾಲೂಕಿನ ಗಲಗಲಿಯಲ್ಲಿ ನಡೆದಿದೆ.

ಸುನೀಲ್ (10) ಮೃತ ಬಾಲಕ.

ಆಗತಾನೇ ಟ್ಯೂಷನ್ ಮುಗಿಸಿಕೊಂಡು ಬಂದ ವಿದ್ಯಾರ್ಥಿಗಳು ರಸ್ತೆಬದಿ ನಿಂತಿದ್ದರು. ಈ ವೇಳೆ ಸರ್ಕಾರಿ ಬಸ್ ಮಕ್ಕಳ ಮೇಲೆಯೇ ಹರಿದಿದ್ದು ಈ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದೆ.

ಇದರಿಂದ ಒಬ್ಬ ವಿದ್ಯಾರ್ಥಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಬಸ್ ಚಾಲಕನ ನಿರ್ಲಕ್ಷ್ಯವೇ ಅಪಘಾತಕ್ಕೆ ಕಾರಣ ಎಂದು ಸ್ಥಳೀಯರು ಆರೋಪಿಸಿದ್ದು,ಕೂಡಲೇ‌ ಚಾಲಕನ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.

ವಿದ್ಯಾರ್ಥಿಗಳ ಮೇಲೆ ಹರಿದ ಬಸ್ Read More