ಚನ್ನಪಟ್ಟಣ ಉಪ ಚುನಾವಣೆ:ಸಿ.ಪಿ.ವೈ ಹರಕೆ ಕುರಿ:ಅಶೋಕ್ ವ್ಯಂಗ್ಯ

ಬೆಂಗಳೂರು: ಚನ್ನಪಟ್ಟಣ ಉಪಚುನಾವಣೆಯಲ್ಲಿ ಯೋಗೇಶ್ವರ್‌ ಹರಕೆ ಕುರಿಯಾಗಲಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ವ್ಯಂಗ್ಯವಾಡಿದರು.

ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಅವರು, ಚನ್ನಪಟ್ಟಣ ಉಪಚುನಾವಣೆಗೆ ಬಿಜೆಪಿ, ಜೆಡಿಎಸ್‌ ಒಟ್ಟಾಗಿ ನಿಖಿಲ್‌ ಕುಮಾರಸ್ವಾಮಿ ಅವರನ್ನು ಅಭ್ಯರ್ಥಿಯಾಗಿ ಘೋಷಣೆ ಮಾಡಿದೆ, ಆದರೆ ಕಾಂಗ್ರೆಸ್‌ನಲ್ಲಿ ಕಾರ್ಯಕರ್ತರ ಅಭಿಪ್ರಾಯ ಕೇಳದೆ ಸಿ.ಪಿ.ಯೋಗೇಶ್ವರ್‌ ಅವರನ್ನು ಆರಿಸಲಾಗಿದೆ,ಹಾಗಾಗಿ ಕಾಂಗ್ರೆಸ್‌ ಕಾರ್ಯಕರ್ತರು ರೆಬೆಲ್‌ ಆಗಿದ್ದಾರೆ, ಅದನ್ನು ನಾನು ನೋಡಿಕೊಳ್ಳುತ್ತೇನೆ ಎಂದು ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ಇದರ ಪರಿಣಾಮ ಕಾಂಗ್ರೆಸ್‌ ಕಾರ್ಯಕರ್ತರು ಮೈತ್ರಿ ಅಭ್ಯರ್ಥಿಗೆ ಬೆಂಬಲ ನೀಡಲಿದ್ದಾರೆ ಎಂದು ತಿಳಿಸಿದರು.

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ, ಮುಡಾ ಹಗರಣ, ಎಸ್‌ಸಿ, ಎಸ್‌ಟಿ ಸಮುದಾಯದ ಹಣ ದುರ್ಬಳಕೆಯಿಂದಾಗಿ ಸರ್ಕಾರಕ್ಕೆ ಕೆಟ್ಟ ಹೆಸರು ಬಂದಿದೆ. ಗಣಿ ಹಗರಣದಲ್ಲಿ ಶಾಸಕ ಸತೀಶ್‌ ಸೈಲ್‌ ತಪ್ಪಿತಸ್ಥರು ಎಂಬುದು ಸಾಬೀತಾಗಿ ಶಿಕ್ಷೆ ನೀಡಲಾಗಿದೆ. ಕಾಂಗ್ರೆಸ್‌ ಲೂಟಿಕೋರರ ಪಾರ್ಟಿ ಎಂಬುದು ಸಾಬೀತಾಗಿದೆ ಎಂದು ಟೀಕಿಸಿದರು.

ಗಣಿ ಹಗರಣ ನಡೆದಿದೆ ಎಂದು ಸಿದ್ದರಾಮಯ್ಯನವರು ಪಂಚೆ ಎತ್ತಿ ಕಟ್ಟಿ ಪಾದಯಾತ್ರೆ ಮಾಡಿ ನೃತ್ಯ ಮಾಡಿದ್ದರು. ಬಳಿಕ ಕಾಲು ನೋವಿಗೆ ಮಸಾಜ್‌ ಮಾಡಿಸಿಕೊಂಡಿದ್ದರು. ಈಗ ಅವರದ್ದೇ ಪಕ್ಷದ ಶಾಸಕ ಗಣಿಯಲ್ಲಿ ಲೂಟಿ ಮಾಡಿ ಸಿಕ್ಕಿಹಾಕಿಕೊಂಡಿದ್ದಾರೆ ಎಂದು ಟೀಕಿಸಿದರು.

ನಿಖಿಲ್‌ ಕುಮಾರಸ್ವಾಮಿ ಅವರ ಬಗ್ಗೆ ಜನರಿಗೆ ಅನುಕಂಪವಿದೆ. ಸಿ.ಪಿ.ಯೋಗೇಶ್ವರ್‌ ಅವರಿಗೆ ಟಿಕೆಟ್‌ ನೀಡಲು ನಾವೆಲ್ಲರೂ ಪ್ರಯತ್ನ ಮಾಡಿದ್ದೆವು. ಆದರೂ ಅವರು ಪಕ್ಷ ಬಿಟ್ಟು ಕಾಂಗ್ರೆಸ್‌ ಸೇರಿದ್ದಾರೆ. ಬಿಜೆಪಿಯಲ್ಲಿ ಹಿರಿಯ ನಾಯಕರಾಗಿದ್ದವರು ಈಗ ಕಾಂಗ್ರೆಸ್‌ನಲ್ಲಿ ಮೂರನೇ ಸಾಲಿನಲ್ಲಿ ಕುಳಿತಿದ್ದಾರೆ. ಕಾಂಗ್ರೆಸ್‌ ನಾಯಕರು ಅವರನ್ನು ಹರಕೆ ಕುರಿ ಮಾಡಿ ಮುಗಿಸಲಿದ್ದಾರೆ ಎಂದು ಅಶೋಕ್‌ ಭವಿಷ್ಯ ನುಡಿದರು.

ಚನ್ನಪಟ್ಟಣ ಉಪ ಚುನಾವಣೆ:ಸಿ.ಪಿ.ವೈ ಹರಕೆ ಕುರಿ:ಅಶೋಕ್ ವ್ಯಂಗ್ಯ Read More

ಯೋಗೇಶ್ವರ್ ವಿರುದ್ಧ ಅಶೋಕ್ ಕಿಡಿ

ಬೆಂಗಳೂರು: ಮಾಜಿ ಸಚಿವ ಸಿಪಿ ಯೋಗೇಶ್ವರ್ ಕಾಂಗ್ರೆಸ್ ಸೇರ್ಪಡೆಯಾಗಿರುವುದಕ್ಕೆ ಪ್ರತಿಪಕ್ಷದ ನಾಯಕ ಆರ್ ಅಶೋಕ್ ಕೆಂಡಮಂಡಲರಾಗಿದ್ದಾರೆ.

ಈ ಬಗ್ಗೆ ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅಶೋಕ್, ಯೋಗೇಶ್ವರ್ ಕಾಂಗ್ರೆಸ್‌ಗೆ ಸೇರ್ಪಡೆಗೊಂದು ಬಿಜೆಪಿಗೆ ದ್ರೋಹ ಬಗೆದಿದ್ದಾರೆ ಎಂದು ಕಿಡಿಕಾರಿದರು.

ಎಚ್ ಡಿ ಕುಮಾರಸ್ವಾಮಿ ಅವರು ಜೆಡಿಎಸ್ ಚಿನ್ಹೆಯಡಿ ಸ್ಪರ್ಧಿಸುವಂತೆ ಆಫರ್ ನೀಡಿದರು ಕೂಡ ಯೋಗೇಶ್ವರ್ ತಿರಸ್ಕರಿಸಿ ಕಾಂಗ್ರೆಸ್ಗೆ ಹೋಗಿದ್ದಾರೆ ಅವರಿಗೆ ಕಾಂಗ್ರೆಸ್ ನಲ್ಲಿ ಭ್ರಮ ನಿರಸನ ಆಗುವುದು ಖಂಡಿತ ಎಂದು ಭವಿಷ್ಯ ನುಡಿದರು.

ಕಾಂಗ್ರೆಸ್ ನಿಂದ ಯೋಗೇಶ್ವರ್ ಸ್ಪರ್ಧಿಸಿದರು ಕೂಡ ಚನ್ನಪಟ್ಟಣದ ಜನತೆ ಅವರನ್ನು ಗೆಲ್ಲಿಸುವುದಿಲ್ಲ,ಅವರಿಗೆ‌ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಹೇಳಿದರು.

ಯೋಗೇಶ್ವರ್ ವಿರುದ್ಧ ಅಶೋಕ್ ಕಿಡಿ Read More