ನಿಖಿಲ್ ಕುಮಾರಸ್ವಾಮಿ ಅಭಿಮಾನಿಗಳ ಬಳಗದ ಕ್ಯಾಲೆಂಡರ್ ಬಿಡುಗಡೆ

ಮೈಸೂರು: ನಿಖಿಲ್ ಕುಮಾರಸ್ವಾಮಿ ಅಭಿಮಾನಿಗಳ ಬಳಗದ ವತಿಯಿಂದ ನೂತನ ವರ್ಷದ ಕ್ಯಾಲೆಂಡರ್ ಹೊರತರಲಾಯಿತು.

ಮೈಸೂರಿನ ರ್‍ಯಾಡಿಸನ್ ಬ್ಲೂ ಹೋಟೆಲಿನಲ್ಲಿ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಅವರು ನೂತನ ವರ್ಷದ ಕ್ಯಾಲೆಂಡರ್ ಬಿಡುಗಡೆ ಮಾಡಿ‌ ನಿಖಿಲ್ ಕುಮಾರಸ್ವಾಮಿ ಅಭಿಮಾನಿಗಳ ಬಳಗಕ್ಕೆ ಶುಭ ಹಾರೈಸಿದರು.

ಈ ವೇಳೆ ಸಂಘದ ಅಧ್ಯಕ್ಷ ಪ್ರದೀಪ್ ಕೃಷ್ಣೇಗೌಡ ನೇತೃತ್ವದಲ್ಲಿ ಕ್ಯಾಲೆಂಡರ್ ಬಿಡುಗಡೆಗೆ ಕುಮಾರ ಸ್ವಾಮಿಯವರನ್ನು ಭೇಟಿ ಮಾಡಲಾಯಿತು.

ಈ ಸಂದರ್ಭದಲ್ಲಿ ಬೆಂಗಳೂರು ಕಾವೇರಿ ನದಿ ರಕ್ಷಣಾ ಸಮಿತಿ ಅಧ್ಯಕ್ಷ ಎಚ್ ಕೆ ರಾಮು, ಬಾಲಕೃಷ್ಣ ಎಂ ವರುಣ ಜೆಡಿಎಸ್ ಅಧ್ಯಕ್ಷರು, ಜೆಡಿಎಸ್ ಮುಖಂಡ ಗಂಗಾಧರ ಗೌಡರು ಹಾಗೂ ಬಳಗದ ಸದಸ್ಯರುಗಳಾದ ಕುಮಾರ್ ಬೀಡನಹಳ್ಳಿ ನಾಗರಾಜು, ಚಂದ್ರಶೇಖರ್, ಧರ್ಮಪಾಲ್ ಗೌಡ, ಸುಬ್ರಮಣ್ಯ, ಮಹೇಶ್ ಮತ್ತಿತರರು ಹಾಜರಿದ್ದರು.

ನಿಖಿಲ್ ಕುಮಾರಸ್ವಾಮಿ ಅಭಿಮಾನಿಗಳ ಬಳಗದ ಕ್ಯಾಲೆಂಡರ್ ಬಿಡುಗಡೆ Read More

ಒಕ್ಕಲಿಗರ ಕ್ಷೇಮಾಭಿವೃದ್ಧಿ ಸಂಘದ ಹೊಸ ವರ್ಷದ ಕ್ಯಾಲೆಂಡರ್ ಬಿಡುಗಡೆ

ಮೈಸೂರು: ಮೈಸೂರಿನ ಕೆ ಎಚ್ ಬಿ ಹೂಟಗಳ್ಳಿ,ಒಕ್ಕಲಿಗರ ಕ್ಷೇಮಾಭಿವೃದ್ಧಿ ಸಂಘದ ಹೊಸ ವರ್ಷದ ಕ್ಯಾಲೆಂಡರ್ ಬಿಡುಗಡೆಗೊಳಿಸಿದೆ.

ಕ್ಯಾಲೆಂಡರ್ ಬಿಡುಗಡೆ ಸಮಾರಂಭವನ್ನು ಹೆಬ್ಬಾಳದಲ್ಲಿರುವ ಆದಿಚುಂಚನಗಿರಿ ಶಾಖಾ ಮಠ, ಲಕ್ಷ್ಮೀಕಾಂತ ದೇವಸ್ಥಾನದಲ್ಲಿ ಹಮ್ಮಿಕೊಳ್ಳಲಾಯಿತು‌.

ಶ್ರೀ ಬಾಲಗಂಗಾಧರನಾಥ ಸ್ವಾಮೀಜಿಯವರ ಆಶೀರ್ವಾದದೊಂದಿಗೆ ಶ್ರೀ ಸೋಮೇಶ್ವರನಾಥ ಸ್ವಾಮೀಜಿಯವರ ಸಾನಿಧ್ಯದಲ್ಲಿ ಕ್ಯಾಲೆಂಡರ್ ಬಿಡುಗಡೆ ಮಾಡಿಸಲಾಯಿತು.

ಈ‌ ವೇಳೆ ಸಂಘದ ಅಧ್ಯಕ್ಷರು ಮತ್ತು ಪದಾಧಿಕಾರಿಗಳು, ಸದಸ್ಯರು ಹಾಜರಿದ್ದರು.

ಒಕ್ಕಲಿಗರ ಕ್ಷೇಮಾಭಿವೃದ್ಧಿ ಸಂಘದ ಹೊಸ ವರ್ಷದ ಕ್ಯಾಲೆಂಡರ್ ಬಿಡುಗಡೆ Read More