ಜೆಡಿಎಸ್ ಒಂದು ಭಾಗಕ್ಕೆ ಸೀಮಿತವಲ್ಲ:ನಿಖಿಲ್

ಕಲಬುರಗಿ: ನಮ್ಮ ಜೆಡಿಎಸ್‌ ಪಕ್ಷ ಕೇವಲ ಒಂದು ಭಾಗಕ್ಕೆ ಸೀಮಿತವಲ್ಲ ಎಲ್ಲೆಡೆ ಇರುತ್ತದೆ ಎಂದು ನಿಖಿಲ್ ಕುಮಾರಸ್ವಾಮಿ ತಿಳಿಸಿದರು.

ಜಿಲ್ಲೆಯ ಅವಳಿ ತಾಲೂಕುಗಳಾದ ಸೇಡಂ ಮತ್ತು ಚಿತ್ತಾಪುರದಲ್ಲಿ ಅಕ್ರಮ ಮರಳುಗಾರಿಕೆ ಮಿತಿಮೀರಿದ್ದು 165 ಕೋಟಿಗೊ ಹೆಚ್ಚು ಅವ್ಯವಹಾರ ಭ್ರಷ್ಟಾಚಾರ ಆಗಿದೆ. ಆದರೆ ಜಿಲ್ಲಾಡಳಿತ ಮತ್ತು ಜಿಲ್ಲೆಯ ನಾಯಕರ ಅಕ್ಕ ಪಕ್ಕದಲ್ಲಿರುವ ಹಿಂಬಾಲಕರಿಗೆ ಬೆನ್ನೆಲುಬಾಗಿ ನಿಂತಿದ್ದಾರೆ ಎಂದು ನಿಖಿಲ್ ಕುಮಾರಸ್ವಾಮಿ ಅವರು ಆರೋಪಿಸಿದರು.

ಕಲಬುರಗಿ ವಿಧಾನಸಭಾ ಕ್ಷೇತ್ರದಲ್ಲಿ ಹಮ್ಮಿಕೊಂಡಿದ್ದ ಜನರೊಂದಿಗೆ ಜನತಾದಳ ಜೆಡಿಎಸ್ ಪಕ್ಷದ ಸದಸ್ಯತ್ವ ನೋಂದಣಿ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು.

ಅಕ್ರಮ ಮರಳುಗಾರಿಕೆ ಕಂಡರೂ ಸರ್ಕಾರ ಜಾಣ ಮೌನಕ್ಕೆ ಜಾರಿದೆ. ಕಾಗಿನ ನದಿಯನ್ನು ಸಂಪೂರ್ಣವಾಗಿ ಒಕ್ಕಲೆಬ್ಬಿಸಲಾಗಿದೆ. ಈ ಅಕ್ರಮದಲ್ಲಿ ಸರ್ಕಾರ ನೇರವಾಗಿ ಭಾಗಿಯಾಗಿದೆ. ಈ ಜಿಲ್ಲೆಯ ಶಾಸಕರು ಸಚಿವರ ಮೌನ ಇದನ್ನು ದೃಢಪಡಿಸುತ್ತದೆ ಎಂದು ಅವರು ಆರೋಪಿಸಿದರು.

ಸೇಡಂ ಮತ್ತು ಚಿತ್ತಾಪುರದಲ್ಲಿ ಅಕ್ರಮ ಮರಳುಗಾರಿಕೆಗೆ ಕೂಡಲೇ ರಾಜ್ಯ ಸರ್ಕಾರ ಈ ನಿಟ್ಟಿನಲ್ಲಿ ತನಿಖೆ ಮಾಡಿ ಆಕ್ರಮ ಬಯಲು ಮಾಡಬೇಕು. ಅಕ್ರಮಕ್ಕೆ ಸಾತ್ ನೀಡಿದ ಜನಪ್ರತಿನಿಧಿಗಳು ಸೇರಿದಂತೆ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ನಿಖಿಲ್ ಕುಮಾರಸ್ವಾಮಿ ಅವರು ಒತ್ತಾಯಿಸಿದರು.

ಈ ವೇಳೆಯಲ್ಲಿ ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಸರ್ಕಾರ ಒಟ್ಟಾರೆಯಾಗಿ ಬಿಡುಗಡೆ ಮಾಡಿರುವ 13 ಕೋಟಿ ರೂಪಾಯಿಗಳ ವೆಚ್ಚದ ಕುರಿತು ಕೂಡಲೇ ಶ್ವೇತ ಪತ್ರ ಹೊರಡಿಸಬೇಕೆಂದು ಅವರು ಒತ್ತಾಯಿಸಿದರು.

ಕಲ್ಯಾಣ ಕರ್ನಾಟಕ ಭಾಗದಲ್ಲಿ ಅಗತ್ಯ ಅಭಿರುದ್ದಿ ಕೆಲಸಗಳನ್ನ ಕೈ ಬಿಟ್ಟು ಅನಗತ್ಯ ಮತ್ತು ಅವಶ್ಯಕತೆ ಇಲ್ಲದ ಕಾಮಗಾರಿಗಳನ್ನು ಕೈಗೆತ್ತಿಕೊಂಡು ಹಣವನ್ನು ಪೋಲು ಮಾಡಲಾಗಿದೆ ಎನ್ನುವ ಗಂಭೀರ ಆರೋಪ ಇದೆ ಎಂದು ಅವರು ಹೇಳಿದರು.

ಜೆಡಿಎಸ್ ಬಿಜೆಪಿ ಮೈತ್ರಿ ಕೈ ಬಿಡುವ ಪ್ರಶ್ನೆಯೇ ಇಲ್ಲ

ಜೆಡಿಎಸ್ ಬಿಜೆಪಿ ಮೈತ್ರಿ ವಿಚಾರಕ್ಕೆ ಮಾತನಾಡಿದ ಅವರು, ಮೈತ್ರಿ ಯನ್ನು ಕೈ ಬಿಡುವ ಪ್ರಶ್ನೆಯೇ ಇಲ್ಲ. ಮುಂಬರುವ ಪಂಚಾಯತಿ ಚುನಾವಣೆಗಳಲ್ಲೂ ಕೂಡ ಈ ಒಪ್ಪಂದ ಶಾಸನ ರೂಪದಲ್ಲಿ ಕೆಲಸ ಮಾಡಲಿದೆ. ಈಗಾಗಲೇ ನಾವು ಈ ನಿಟ್ಟಿನಲ್ಲಿ ರಾಜ್ಯ ಪ್ರವಾಸ ಮಾಡುತ್ತಿದ್ದಾನೆ ಎಂದು ತಿಳಿಸಿದರು

ಜೆಡಿಎಸ್ ಪಕ್ಷ ಯಾವುದೇ ಒಂದು ಭಾಗಕ್ಕೆ ಸೀಮಿತವಾದ ಪಕ್ಷವಲ್ಲ . ಇದು ರಾಜ್ಯದ ಏಳೂವರೆ ಕೋಟಿ ಕನ್ನಡಿಗರು ಕಟ್ಟಿದಂತ ಪಕ್ಷ. ಕಲ್ಯಾಣ ಕರ್ನಾಟಕದಲ್ಲಿ ಜೆಡಿಎಸ್ ಪಕ್ಷ ಬಲಿಷ್ಠವಾಗಿದೆ. ಜೆಡಿಎಸ್ ಪಕ್ಷ ಹೋರಾಟದಿಂದ ಬಂದಿದೆ ಅದನ್ನು ನಾನು ಮುಂದುವರಿಸುತ್ತೇನೆ ನಿಮ್ಮ ಸಹಕಾರ ಇರಲಿ ಎಂದು ಮನವಿ ಮಾಡಿದರು.

ಕಲ್ಯಾಣ ಕರ್ನಾಟಕದ ಜೆಡಿಎಸ್ ಪಕ್ಷಕ್ಕೆ ಇತಿಹಾಸವಿದೆ

ಕಲ್ಯಾಣ ಕರ್ನಾಟಕದ ಕಲಬುರಗಿ ಜೆಡಿಎಸ್ ಪಕ್ಷದಿಂದ 6-7 ಶಾಸಕರನ್ನು ರಾಜ್ಯಕ್ಕೆ ನೀಡಿದ ಇತಿಹಾಸವಿದೆ ಮತ್ತೊಮ್ಮೆ ಈ ಇತಿಹಾಸ ಮರುಕಳಿಸಸೋಣ. ಈ ಹಿನ್ನೆಲೆಯಲ್ಲಿ ನಿರಂತರವಾಗಿ ಪಕ್ಷ ಸಂಘಟನೆ ಮಾಡಿ ಮತ್ತೊಮ್ಮೆ ಮುಖ್ಯಮಂತ್ರಿಗಳನ್ನಾಗಿ ಆಯ್ಕೆ ಮಾಡೋಣ.

ರಾಜ್ಯದ 19 ಕ್ಷೇತ್ರಗಳಲ್ಲಿ ನಾನು ಈಗ ಓಡಾಡಲು ಪ್ಲಾನ್ ಮಾಡಿದ್ದು ಈಗಾಗಲೇ ಬೀದರ್ ನಿಂದ ಓಡಾಟವನ್ನು ಆರಂಭಿಸಿದ್ದು, ನಾಳೆ ಯಾದಗಿರಿ ಸೇರಿದಂತೆ ಹಲವಡೆಗಳಲ್ಲಿ ಪಕ್ಷವನ್ನು ಇನ್ನಷ್ಟು ಬಲಪಡಿಸುತೇನೆ ಎಂದು ಅವರು ಹೇಳಿದರು.

ಈ ಸಂದರ್ಭದಲ್ಲಿ ಪಕ್ಷದ ವೆಂಟರಾವ್ ನಾಡಗೌಡ ಅವರು, ಹನಮಂತಪ್ಪ ಆಲ್ಕೋಡ್ , ಶಾಸಕರಾದ ಶರಣಗೌಡ ಕಂದಕೂರ ಅವರು,ದೊಡ್ಡಪ್ಪಗೌಡ ಪಾಟೀಲ್ ನರಬೋಳ್, ಮಹಿಳಾ ಘಟಕದ ರಾಜ್ಯಾಧ್ಯಕ್ಷರಾದ ಶ್ರೀಮತಿ ರಶ್ಮಿ ರಾಮೇಗೌಡ, ಬಾಲರಾಜ್ ಗುತ್ತೇದಾರ್, ಮುಖಂಡರಾದ ಕೃಷ್ಣಾರೆಡ್ಡಿ, ಶ್ರೀಮತಿ ಮಹೇಶ್ವರಿ ವಾಲಿ ಸೇರಿದಂತೆ ಪಕ್ಷದ ಪದಾಧಿಕಾರಿಗಳು, ಮುಖಂಡರು , ಕಾರ್ಯಕರ್ತರು ಉಪಸ್ಥಿತರಿದ್ದರು.

ಜೆಡಿಎಸ್ ಒಂದು ಭಾಗಕ್ಕೆ ಸೀಮಿತವಲ್ಲ:ನಿಖಿಲ್ Read More

ಡಿಸಿಎಂ ಡಿ.ಕೆ ಶಿವಕುಮಾರ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಟೀಕೆ

ಮದ್ದೂರು: ಪೆನ್ನು ಪೇಪರ್ ನಾಯಕರೇ ನಿಮ್ಮದು ಏನೇ ರಾಜಕಾರಣ ಇದ್ದರೂ ಅದು ನಿಮ್ಮ ಚೌಕಟ್ಟಿಗೆ ಮಾತ್ರ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ವಿರುದ್ಧ ಯುವ ಜೆಡಿಎಸ್ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು.

ಮದ್ದೂರು ವಿಧಾನಸಭಾ ಕ್ಷೇತ್ರದ ಶಾಂತಿ ಸಮುದಾಯ ಭವನದಲ್ಲಿ ಹಮ್ಮಿಕೊಂಡಿದ್ದ ಜನರೊಂದಿಗೆ ಜನತಾದಳ ಜೆಡಿಎಸ್ ಪಕ್ಷದ ಸದಸ್ಯತ್ವ ನೋಂದಣಿ ಅಭಿಯಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಜಿಲ್ಲಾ, ತಾಲೂಕು ಪಂಚಾಯಿತಿ ಚುನಾವಣೆವರೆಗೂ ಗೃಹಲಕ್ಷ್ಮಿ ಹಣ ಹಾಕಲ್ಲ, ಯಾವುದಾದರು ಉಪಚುನಾವಣೆ, ಸಂಸತ್ ಚುನಾವಣೆ ಹಾಗೂ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆ ಬರೋವರೆಗೂ ಹಣ ಹಾಕಲ್ಲ ಎಂದು ನಿಖಿಲ್ ವ್ಯಂಗ್ಯ ವಾಡಿ ದರು.

ಸರ್ಕಾರದ ಗ್ಯಾರಂಟಿಗಳನ್ನ ಜನ ಸಾಮಾನ್ಯರಿಗೆ ಸರಿಯಾಗಿ ತಲುಪಿಸುತ್ತಿಲ್ಲ ಪ್ರತಿ ತಿಂಗಳು ಗ್ಯಾರಂಟಿ ಹಣ ಕೊಡುವುದಾಗಿ ಪ್ರಣಾಳಿಕೆಯಲ್ಲಿ ಮಾತು ಕೊಟ್ಟಿದ್ರು ಆದರೆ ಮಾತು ತಪ್ಪಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಮೂರು ಉಪ ಚುನಾವಣೆ ಸಂದರ್ಭದಲ್ಲಿ ಮೂರು ಕ್ಷೇತ್ರಗಳಿಗೆ ಮಾತ್ರ ಒಂದೇ ಸಲ ನಾಲ್ಕು ತಿಂಗಳು ಹಣ ಜಮೆ ಅಯ್ತು.ಮತ್ತೆ ಹಣಕ್ಕೆ ತಾ.ಪಂ ಹಾಗೂ ಜಿ.ಪಂ ಚುನಾವಣೆ ಬರೋವರೆಗೂ ಜನ ಕಾಯಬೇಕು ಎಂದು ಟೀಕಿಸಿದರು.

ರಾಮನಗರದಲ್ಲಿ ಪೆನ್ನು ಪೇಪರ್ ನಾಯಕರು ಜಿಲ್ಲೆಯಲ್ಲಿ ಫಲಾನುಭವಿಗಳ ಸಭೆ ಮಾಡಿ ಅಲ್ಲಿ ಕ್ಷೇತ್ರದ ಹೆಣ್ಣು ಮಕ್ಕಳಿಗೆ ನನ್ನ ತಮ್ಮನಿಗೆ ಮತ ಹಾಕಿಲ್ಲ ಅಂದ್ರೆ ನಮ್ಮ ಎಲ್ಲ ಕಾರ್ಯಕ್ರಮಗಳನ್ನ ನಿಲ್ಲುಸುತ್ತೇವೆ ಎಂದು ಧಮ್ಕಿ ಹಾಕಿದ್ದರು,ಈಗ ಸೋತು ಮನೆಯಲ್ಲಿ ಕೂತಿದ್ದಾರೆ ಎಂದು ಡಿಕೆ ಬ್ರದರ್ಸ್ ವಿರುದ್ಧ ನಿಖಿಲ್ ವಾಗ್ದಾಳಿ ನಡೆಸಿದರು.

ಮಳವಳ್ಳಿ ಮೀಸಲು ವಿಧಾನಸಭಾ ಕ್ಷೇತ್ರ. ಇಲ್ಲಿ ಎಲ್ಲಾ ಸಮುದಾಯದವರು ಇದ್ದಾರೆ. ಪರಿಶಿಷ್ಟ ಜಾತಿ ಪರಿಶಿಷ್ಟ ವರ್ಗದವರು ಹೆಚ್ಚು ಇರುವಂತಹ ಕ್ಷೇತ್ರ. ಮುಂದಿನ ಚುನಾವಣೆಯಲ್ಲಿ ಅನ್ನದಾನಿ ಅವರನ್ನ ಶಾಸಕರಾಗಿ ಮಾಡುವುದಕ್ಕೆ ನಮ್ಮ ಸಹಕಾರ ಇರುತ್ತದೆ ಎಂದು ತಿಳಿಸಿದರು.

ಜೆಡಿಎಸ್ ಪಕ್ಷದ ನಾಯಕರು ಸೋತಿರಬಹುದು ಸತ್ತಿಲ್ಲ. ಅನ್ನದಾನಿಯವರು ಸೋತಿರಬಹುದು ಆದರೆ ಮನೆ ಸೇರಿಕೊಂಡಿಲ್ಲ. ಮುಂದಿನ ಚುನಾವಣೆಯಲ್ಲಿ ತೋರಿಸುತ್ತೇವೆ ನಮ್ಮ ಶಕ್ತಿಯನ್ನ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾವೆಲ್ಲರೂ ತಲೆಬಾಗಲೇಬೇಕು. ಗೆಲುವು ಸೋಲು ಸರ್ವೇ ಸಾಮಾನ್ಯ ಎಂದು ಹೇಳಿದರು.

ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ಡಾ.ಕೆ ಅನ್ನದಾನಿ, ಸುರೇಶ್ ಗೌಡ,ರಾಜ್ಯದ ಹಿಂದುಳಿದ ವರ್ಗಗಳ ಅಧ್ಯಕ್ಷ ಜಯರಾಮಣ್ಣ, ಬಿ. ಆರ್ ರಾಮಚಂದ್ರು, ಜಿಲ್ಲಾಧ್ಯಕ್ಷ ಡಿ. ರಮೇಶ್, ವಿಶ್ವನಾಥ್, ರವಿ ಕಂಸಾಗರ ಸೇರಿದಂತೆ ಅನೇಕ ಮುಖಂಡರು ಉಪಸ್ಥಿತರಿದ್ದರು.

ಡಿಸಿಎಂ ಡಿ.ಕೆ ಶಿವಕುಮಾರ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಟೀಕೆ Read More

ಕ್ಷಯ ರೋಗ ಮುಕ್ತ ಜಿಲ್ಲೆ ಮಾಡಲು ಎಲ್ಲರೂ ಕೈಜೋಡಿಸಿ – ಕೆ ಎಂ ಗಾಯತ್ರಿ

ಮೈಸೂರು: ಮೈಸೂರನ್ನು ಕ್ಷಯ ರೋಗ ಮುಕ್ತ ಜಿಲ್ಲೆಯನ್ನಾಗಿ ಮಾಡಲು ಅಧಿಕಾರಿಗಳು, ಸಿಬ್ಬಂದಿಗಳು ಸಾರ್ವಜನಿಕರು ಸಹಕರಿಸಬೇಕೆಂದು ಜಿಲ್ಲಾ ಪಂಚಾಯತ್ ಸಿಇಒ ಗಾಯತ್ರಿ ತಿಳಿಸಿದರು.

ಜಿಲ್ಲಾ ಪಂಚಾಯತ್ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮೈಸೂರು, ಜಿಲ್ಲಾ ಕ್ಷಯರೋಗ ನಿಯಂತ್ರಣ ಕೇಂದ್ರ ಹಮ್ಮಿಕೊಂಡಿದ್ದ ಆರೋಗ್ಯದ ಬಗ್ಗೆ ಇರಲಿ ಗಮನ ಟಿ ಬಿ ಮುಕ್ತ ಭಾರತ ಅಭಿಯಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಜಿಲ್ಲೆಯನ್ನು ಕ್ಷಯ ರೋಗ ಮುಕ್ತ ಮಾಡಲು 100 ದಿನಗಳ ಕಾಲ ಕ್ಷಯ ರೋಗ ಮುಕ್ತ ಅಭಿಯಾನ ಹಮ್ಮಿಕೊಳ್ಳಲಾಗಿದೆ. ನಿಕ್ಷಯ ಪೋರ್ಟಲ್ ನಲ್ಲಿ ಕ್ಷಯ ರೋಗಿಗಳನ್ನು ಅಡಾಪ್ಟ್ ಮಾಡಿಕೊಳ್ಳಲು ಅವಕಾಶ ಇದೆ. ಈ ರೋಗಿಗಳ ಔಷಧಿಗಳನ್ನು ನೀಡಲು ಕಡಿಮೆ ಮೊತ್ತದ ಹಣವನ್ನು ಒದಗಿಸಬಹುದು ಯಾರು ಬೇಕಾದರೂ ಅಡಾಪ್ಟ್ ಮಾಡಿಕೊಳ್ಳಬಹುದು ಎಂದು ತಿಳಿಸಿದರು.

ಮೂರು ನಾಲ್ಕು ವಾರ ಗಳಿಗೂ ಹೆಚ್ಚು ಕೆಮ್ಮು ಇದ್ದರೆ ಅದು ಕ್ಷಯ ಆಗಿರಬಹುದು ಆದ್ದರಿಂದ ಪರೀಕ್ಷೆ ಮಾಡಿಸಿಕೊಳ್ಳ್ಳಬೇಕು ಎಂದು ಸಲಹೆ ನೀಡಿದರು.

ಸರ್ಕಾರದಿಂದ ಉಚಿತ ಚಿಕಿತ್ಸೆ ನೀಡಲಾಗುವುದು,ಪತ್ತೆ ಹಚ್ಚಿದವರಿಗೆ 500 ರೂಗಳ ಪ್ರೋತ್ಸಾಹ ಧನ ನೀಡಲಾಗುವುದು. ಗ್ರಾಮಿಣ ಪದೇಶದಲ್ಲಿ ಹೆಚ್ಚಿನ ಪರೀಕ್ಷೆ ಆಗಬೇಕು. ಈ ನಿಟ್ಟಿನಲ್ಲಿ ಆರೋಗ್ಯ ಇಲಾಖೆ ಅಧಿಕಾರಿಗಳು ಆಶಾ ಕಾರ್ಯಕರ್ತೆಯರು ಹೆಚ್ಚು ಕಾರ್ಯ ನಿರ್ವಹಿಸಬೇಕು ಎಂದು ಗಾಯಿತ್ರಿ ತಿಳಿಸಿದರು.

ವಿಧಾನ ಪರಿಷತ್ ಸದಸ್ಯರಾದ ಸಿ ಎನ್ ಮಂಜೇಗೌಡ ಅವರು ಮಾತನಾಡಿ, ಕ್ಷಯ ರೋಗ ಅಂಟು ರೋಗ,ಈ ರೋಗಕ್ಕೆ ಚಿಕಿತ್ಸೆ ನೀಡುವ ಆರೋಗ್ಯ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬದಿಗಳಿಗೆ ಧನ್ಯವಾದಗಳು ಎಂದು ತಿಳಿಸಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಪಿ ಸಿ ಕುಮಾರಸ್ವಾಮಿ ಅವರು ಮಾತನಾಡಿ ಇಂದಿನಿಂದ 100 ದಿನಗಳ ಕಾಲ ಟಿ ಬಿ ಮುಕ್ತ ಅಭಿಯಾನ ಹಮ್ಮಿಕೊಳ್ಳಲಾಗಿದೆ, ಮುಂದಿನ 100 ದಿನಗಳ ಕಾಲ ವಿವಿಧ ಇಲಾಖೆಗಳ ಸಮನ್ವಯ ದೊಂದಿಗೆ ಟಿ ಬಿ ಯನ್ನು ಕಡಿಮೆ ಮಾಡಲು ಗ್ರಾಮಗಳಿಗೆ ಭೇಟಿ ನೀಡಿ ಸರ್ವೇ ಮಾಡಿ,ಯಾವ ಗ್ರಾಮಗಳಲ್ಲಿ ಯಾವ ಏರಿಯಾಗಳಲ್ಲಿ ಕ್ಷಯ ರೋಗ ಇದೆ ಎಂಬುದನ್ನು ಪತ್ತೆ ಹಚ್ಚಿ ಚಿಕಿತ್ಸೆ ನೀಡಲಾಗುವುದು ಎಂದು ತಿಳಿಸಿದರು.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವಿಭಾಗೀಯ ಸಹ ನಿರ್ದೇಶಕ ಡಾ. ಕೆ ಹೆಚ್ ಪ್ರಸಾದ್,ಜಿಲ್ಲಾ ಕ್ಷಯ ರೋಗ ನಿರ್ಮೂಲನಾಧಿಕಾರಿ ಡಾ. ಜಯಂತ್ ಎಂ ಎಸ್, ಕಾರ್ಯಕ್ರಮ ಅನುಷ್ಠಾನ ಅಧಿಕಾರಿಗಳಾದ ಡಾ. ಬೃಂದಾ ಮತ್ತಿತರ ಆರೋಗ್ಯ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ ಆಶಾ ಕಾರ್ಯಕರ್ತೆಯರು‌ ಪಾಲ್ಗೊಂಡಿದ್ದರು.

ಕ್ಷಯ ರೋಗ ಮುಕ್ತ ಜಿಲ್ಲೆ ಮಾಡಲು ಎಲ್ಲರೂ ಕೈಜೋಡಿಸಿ – ಕೆ ಎಂ ಗಾಯತ್ರಿ Read More

ಸರಕಾರ ದಿವಾಳಿ;ಉಪ ಚುನಾವಣೆ ನಂತರ ಗೃಹಲಕ್ಷ್ಮಿ ಬಂದ್ -ದೇವೇಗೌಡರು

ಚನ್ನಪಟ್ಟಣ: ರಾಜ್ಯ ಕಾಂಗ್ರೆಸ್ ಸರ್ಕಾರದ ಖಜಾನೆ ದಿವಾಳಿಯಾಗಿದೆ ಮಹಿಳೆಯರ ಬ್ಯಾಂಕ್ ಖಾತೆಗಳಿಗೆ ಗೃಹಲಕ್ಷ್ಮಿ ಹಣವಿಲ್ಲ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಟೀಕಿಸಿದರು.

ಚುನಾವಣೆ ದೃಷ್ಟಿಯಿಂದ ಚನ್ನಪಟ್ಟಣ ಕ್ಷೇತ್ರದ ಮಹಿಳೆಯರ ಬ್ಯಾಂಕ್ ಖಾತೆಗಳಿಗೆ ಮಾತ್ರ ಹಣ ಜಮೆ ಮಾಡಿದ್ದಾರೆ ಎಂದು ಆರೋಪಿಸಿದರು.

ಚನ್ನಪಟ್ಟಣ ವಿಧಾನಸಭೆ ಕ್ಷೇತ್ರದಲ್ಲಿ ನಿಖಿಲ್ ಕುಮಾರಸ್ವಾಮಿ ಅವರ ಪರವಾಗಿ ಪ್ರಚಾರ ನಡೆಸಿದ ಗೌಡರು; ಕಾಂಗ್ರೆಸ್ ಸರಕಾರ ಚುನಾವಣಾ ಅಕ್ರಮಗಳನ್ನು ಎಸಗುತ್ತಿದೆ. ಅದಕ್ಕೆ ಗ್ಯಾರಂಟಿ ಯೋಜನೆಗಳನ್ನು ಕೂಡ ಬಳಕೆ ಮಾಡಿಕೊಳ್ಳುತ್ತಿದೆ ಎಂದು ದೂರಿದರು.

ಈ ಸರಕಾರ ದಿವಾಳಿಯಾಗಿದೆ. ಚುನಾವಣೆ ಮುಗಿದ ಮೇಲೆ‌ ಹಣ ಜಮೆ ಮಾಡುವುದನ್ನು ಮತ್ತೆ ನಿಲ್ಲಿಸುತ್ತಾರೆ ಬೆಂಗಳೂರಿನಲ್ಲಿ ರಸ್ತೆ ಗುಂಡಿ ಮುಚ್ಚೋಕೆ ಕಾಸಿಲ್ಲ, ಜನ ಉಗಿಯುತ್ತಿದ್ದಾರೆ ಎಂದು ಟೀಕಿಸಿದರು.

ನಿಖಿಲ್ ಅವರನ್ನು ವಿಧಾನಸೌಧಕ್ಕೆ ಕಳಿಸಿ. ಆ ಹುಡುಗ ನಿಮ್ಮ ಪರವಾಗಿ ದನಿ ಎತ್ತುತ್ತಾನೆ. ಇದರಲ್ಲಿ ನಿಮಗೆ ಯಾವುದೇ ಸಂಶಯ ಬೇಡ , ನಾನು ಒಬ್ಬ ರೈತನ ಮಗ, ನೀವು ರೈತನ ಮಕ್ಕಳು. ಇಗ್ಗಲೂರು ಅಣೆಕಟ್ಟು ಕಟ್ಟಿಸಿದ್ದು ಈ ದೇವೇಗೌಡ, ಬದುಕಿದ್ದಾನೆ. ಹದಿನೇಳು ಕೆರಗಳಿಗೆ ನೀರು ಹರಿಸಿದ್ದ ವ್ಯಕ್ತಿಯನ್ನು ಭಗೀರಥ ಅಂತಾರೆ. ಈ ಅಣೆಕಟ್ಟು ಕಟ್ಟಿಲ್ಲ ಅಂದರೆ ನೀರು ಹರಿಸೋಕೆ ಸಾಧ್ಯ ಆಗುತ್ತಿತ್ತಾ ಎಂದು ಪ್ರಶ್ನಿಸಿದರು.

ಚನ್ನಪಟ್ಟಣ ಕ್ಷೇತ್ರದಲ್ಲಿ ಕುಮಾರಸ್ವಾಮಿ ಅವರು 1600 ಕೋಟಿಯಷ್ಟು ಅಭಿವೃದ್ಧಿ ಕೆಲಸ ಮಾಡಿದ್ದಾರೆ. ಈಗಿರುವ ಸರ್ಕಾರ ಸಣ್ಣಪುಟ್ಟ ಕೆಲಸ ಮಾಡುತ್ತಿದೆ. ಪ್ರತಿಗ್ರಾಮಕ್ಕೆ ನೀರಾವರಿ ಸೌಲಭ್ಯ ಕೋಡಬೇಕಾದ ಹಿನ್ನೆಲೆಯಲ್ಲಿ ಕುಮಾರಸ್ವಾಮಿ ಅವರು ಇಷ್ಟು ಹಣವನ್ನು ಕ್ಷೇತ್ರಕ್ಕೆ ಕೊಟ್ಟರು. ರಾಷ್ಟ್ರದ ಹಿತದೃಷ್ಟಿಯಿಂದ, ಮೋದಿ ಅವರ ಒತ್ತಾಸೆಯಿಂದ ಕುಮಾರಸ್ವಾಮಿ ಅವರು ದೆಹಲಿಗೆ ಹೋಗಿ ಸಚಿವರಾಗಿದ್ದಾರೆ ಎಂದು ಅವರು ಹೇಳಿದರು.

ಕುಮಾರಸ್ವಾಮಿ ಅವರು ಚನ್ನಪಟ್ಟಣ ಕ್ಷೇತ್ರಕ್ಕೆ ರಾಜೀನಾಮೆ ಕೊಟ್ಟ ಮೇಲೆ ಯಾರು ಅಭ್ಯರ್ಥಿಯಾಗಿ ನಿಲ್ಲಬೇಕು ಎಂದು ಚರ್ಚೆ ನಡೆಯಿತು. ಡಿ.ಕೆ.ಶಿವಕುಮಾರ್ ನಾನೇ ಅಭ್ಯರ್ಥಿ ಎಂದು ಹೇಳಿಕೊಂಡು ಓಡಾಡಿದರು. ಹಾಗಂತ ಎಲ್ಲರನ್ನೂ ನಂಬಿಸಿದರು. ನಾಮಪತ್ರ ಸಲ್ಲಿಸುವ ಒಂದು ದಿನಕ್ಕೆ ಮೊದಲು ಇದ್ದಕ್ಕಿದ್ದ ಹಾಗೆ ತಮ್ಮ ತೀರ್ಮಾನ ಬದಲಾಯಿಸಿ ಮತ್ತೊಬ್ಬ ಸ್ನೇಹಿತರನ್ನು ನಿಲ್ಲಿಸಿದ್ದಾರೆ. ಬಿಜೆಪಿಯಿಂದ ಅಭ್ಯರ್ಥಿಯನ್ನು ಹೈಜಾಕ್ ಮಾಡಿಕೊಂಡು ಹೋಗಿದ್ದಾರೆ ಎಂದು ದೇವೇಗೌಡರು ಟೀಕಿಸಿದರು.

ಸರಕಾರ ದಿವಾಳಿ;ಉಪ ಚುನಾವಣೆ ನಂತರ ಗೃಹಲಕ್ಷ್ಮಿ ಬಂದ್ -ದೇವೇಗೌಡರು Read More

ಕಾಯಕ ಸಿದ್ದಾಂತದ ಅಡಿಯಲ್ಲಿ ಕೇಂದ್ರ ಸರ್ಕಾರದ ಆಡಳಿತ: ಎಂ ಮೋನಿಕಾ

ಮೈಸೂರು: ಮೈಸೂರು ಮಹಾನಗರ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರ ಗ್ರಾಮಾಂತರ ಇಲವಾಲ‌ ಮಹಾಶಕ್ತಿ ಕೇಂದ್ರದ ಬೆಳವಾಡಿ ಗ್ರಾಮದಲ್ಲಿ ಬಿಜೆಪಿ ಮನೆ ಮನೆ ಸದಸ್ಯತ್ವ ಅಭಿಯಾನ ಹಮ್ಮಿಕೊಳ್ಳಲಾಯಿತು.

ಈ ವೇಳೆ ಮಾತನಾಡಿದ ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಮೋನಿಕಾ. ಎಂ ಅವರು,
ಸರ್ವರಿಗೂ ಸಮಪಾಲು, ಸರ್ವರಿಗೂ ಸಮಬಾಳು ಮತ್ತು ಕಾಯಕ ಸಿದ್ದಾಂತದ ಅಡಿಯಲ್ಲಿ ಕೇಂದ್ರ ಸರ್ಕಾರ ಆಡಳಿತ ನಡೆಸುತ್ತಿದೆ ಎಂದು ಹೇಳಿದರು.

ಬಡವರು ಮತ್ತು ಮಧ್ಯಮ ವರ್ಗದವರು ಆರ್ಥಿಕವಾಗಿ ಸಬಲರಾಗಲು ಜನಧನ್, ಉಜ್ವಲ ಮತ್ತು ಪ್ರಧಾನಮಂತ್ರಿ ಆವಾಸ್ ಯೋಜನೆ, ಆಯುಷ್ಮಾನ್ ಭಾರತ್, ಮುದ್ರಾ ಯೋಜನೆಗಳು ಸಹಕಾರಿಯಾಗಿವೆ ಎಂದು ತಿಳಿಸಿದರು.

ದೇಶದಲ್ಲಿ ಯುವ ಸಮುದಾಯದ ಸಂಖ್ಯೆ ಹೆಚ್ಚಿದ್ದು, ಅವರ ಸಾಮರ್ಥ್ಯ ದೇಶದ ಅಭಿವೃದ್ದಿಗೆ ಬಳಕೆಯಾಗಬೇಕು ಎಂದು ಅಭಿಪ್ರಾಯ‌ ಪಟ್ಟರು.

ಕ್ಷೇತ್ರ ಒಬಿಸಿ ಉಪಾಧ್ಯಕ್ಷೆ ಗೀತಾ, ಬೂತ್ ಕಾರ್ಯದರ್ಶಿ ಮಣಿಯಮ್ಮ, ಆಶಾ, ಸುಗುಣ ಮತ್ತಿತರರು ಭಾಗವಹಿಸಿದ್ದರು.

ಕಾಯಕ ಸಿದ್ದಾಂತದ ಅಡಿಯಲ್ಲಿ ಕೇಂದ್ರ ಸರ್ಕಾರದ ಆಡಳಿತ: ಎಂ ಮೋನಿಕಾ Read More